ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲೂ 140 ರಿಂದ 150 ಸ್ಥಾನಗಳನ್ನು ಗೆಲ್ಲುವ ಫ್ಯೂರಿ ನಮ್ಮದಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಕಲ್ಪ ಮಾಡಿದ್ದಾರೆ. ರಾಜ್ಯದಲ್ಲಿ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಗೆದ್ದಿದೆ. ಮುಂದಿನ ಚುನಾವಣೆಗಳಲ್ಲೂ ನಾವು ಅಭೂತಪೂರ್ವ ಗೆಲುವು ಸಾಧಿಸಬೇಕು. ವಿಧಾನಸಭಾ ಚುನಾವಣೆಯಲ್ಲೂ 140 ರಿಂದ 150 ಸ್ಥಾನಗಳನ್ನು ಗೆಲ್ಲುವ ಪ್ರತಿಜ್ಞೆ ನಮ್ಮದಾಗಲಿ ಎಂದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಮಾತನಾಡಿ, ಗ್ರಾಮ ಪಂಚಾಯತ್‍ಗಳಲ್ಲಿ 45 ಸಾವಿರ ಜನ ಬಿಜೆಪಿ ಬೆಂಬಲಿತರು ಆಯ್ಕೆಯಾಗಿದ್ದಾರೆ. ಕನಕಪುರದಲ್ಲೂ ಬಿಜೆಪಿ ಗೆದ್ದಿದೆ. ಬಾದಾಮಿಯಲ್ಲೂ ಉತ್ತಮ ಸಾಧನೆ ಮಾಡಿದೆ. ಹಾಸನ ಮತ್ತು ಮಂಡ್ಯದಲ್ಲೂ ಕೇಸರಿ ಧ್ವಜ ಹಾರಾಡುತ್ತಿದೆ. ಮುಂದಿನ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ 150 ಸ್ಥಾನಗಳನ್ನು ಬಿಜೆಪಿ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ, ಸಚಿವರಾದ ಆರ್.ಅಶೋಕ್, ಸುರೇಶ್‍ಕುಮಾರ್, ಗೋಪಾಲಯ್ಯ, ಎಸ್.ಟಿ.ಸೋಮಶೇಖರ್,…
Month: January 2021
ಬಿಜೆಪಿ ಗೆಲುವಿನ ಓಟ ನಿರಂತರ; ಅರುಣ್ ಸಿಂಗ್
ಬೆಂಗಳೂರು: ಕರ್ನಾಟಕದಲ್ಲಿ ಗ್ರಾಮ ಪಂಚಾಯತ್‍ಗಳಲ್ಲಿ ಬಿಜೆಪಿ ಸಾಧಿಸಿದ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಡಳಿತವೇ ಕಾರಣ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ರಾಜ್ಯದಲ್ಲಿ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯತ್‍ಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಗೆಲುವಿನ ಪ್ರಮಾಣ ಕುಸಿದಿದೆ. ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಇದಕ್ಕಾಗಿ ಪಕ್ಷದ ವತಿಯಿಂದ ಮುಖ್ಯಮಂತ್ರಿಗಳು, ರಾಜ್ಯಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರನ್ನು ಅಭಿನಂದಿಸುವುದಾಗಿ ತಿಳಿಸಿದರು. ಭಾರತೀಯ ಜನತಾ ಪಕ್ಷವು ಜನರ ಸೇವೆಗೆ ಬದ್ಧವಾದ ಪಕ್ಷ. ಇತರ ಪಕ್ಷಗಳಂತಲ್ಲ. “ಸಬ್ ಕಾ ಸಾಥ್ ಸಬ್ ಕಾ ವಿಕಾಸ್” ಧ್ಯೇಯವಾಕ್ಯದೊಂದಿಗೆ ಅದು ಕಾರ್ಯ ನಿರ್ವಹಿಸುತ್ತದೆ. ಬಿಜೆಪಿ ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳಲ್ಲೂ ತನ್ನ ಗೆಲುವಿನ ಓಟವನ್ನು ಮುಂದುವರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಂಪುಟದಿಂದ ನಿರ್ಗಮಿಸಿದ ನಾಗೇಶ್’ಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸಾರಥ್ಯ
ಬೆಂಗಳೂರು: ಸಂಪುಟದಿಂದ ನಿರ್ಗಮಿಸಿರುವ ಅಬಕಾರಿ ಸಚಿವ ನಾಗೇಶ್ ಅವರಿಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸಾರಥ್ಯ ಸಿಕ್ಕಿದೆ. ಸಿ.ಎಂ.ಯಡಿಯೂರಪ್ಪರವರು ರಾಜೀನಾಮೆ ಕೇಳಿದ ಸಂದರ್ಭದಲ್ಲಿ ಸಂಪುಟ ದರ್ಜೆ ಸ್ಥಾನಮಾನದ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ನೀಡುವ ಭರವಸೆ ನೀಡಿದ್ದರು. ಇದೆ ಸಂದರ್ಭದಲ್ಲಿ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡುವಂತೆ ನಾಗೇಶ್ ಅವರುಮನವಿ ಮಾಡಿದ್ದಾರೆನ್ನಲಾಗಿದೆ. ಅದರಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಾಜಿ ಸಚಿವ ಹೆಚ್.ನಾಗೇಶ್ ಅವರನ್ನು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಿಸಿದ್ದಾರೆ. ಈ ವರೆಗೂ ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ಮುನಿಕೃಷ್ಣ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅವರನ್ನು ಎಂಸಿ&ಎ ನಿಗಾಮಾಕ್ಕೆ ನೇಮಕ ಮಾಡಲಾಗಿದೆ.
ಯಾರಿಗೆ ಯಾವ ಖಾತೆ; ನೂತನ ಸಚಿವರಲ್ಲೂ ಕುತೂಹಲ
ಬೆಂಗಳೂರು: ಯಡಿಯೂರಪ್ಪ ಸಂಪುಟಕ್ಕೆ 7 ಮಂದಿ ಸೇರ್ಪಡೆಯಾಗಿದ್ದು ಇದೀಗ ರಾರಿಗೆ ಯಾವ ಖಾತೆ ಎಂಬ ಲೆಕ್ಕಾಚಾರ ಸಾಗಿದೆ. ಆದರೆ ತಕ್ಷಣಕ್ಕೆ ಈ ನೂತನ ಸಚಿವರಿಗೆ ಖಾತೆಗಳನ್ನು ಯಡಿಯೂರಪ್ಪ ಅವರು ಹಂಚಿಕೆ ಮಾಡಿಲ್ಲ. ಈ ನಡುವೆ ನೂತನ ಸಚಿವರಿಗೆ ವಿಧಾನಸೌಧದಲ್ಲಿ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ ಸಚಿವರಿಗೆ ಹಂಚಿಕೆ ಮಾಡಲಾದ ಕೊಠಡಿಗಳ ಸಂಖ್ಯೆ ಹೀಗಿದೆ: ಎಸ್ ಅಂಗಾರ: ವಿಧಾನಸೌಧ – ಕೊಠಡಿ ಸಂಖ್ಯೆ 252, 253ಎ ಅರವಿಂದ್ ಲಿಂಬಾವಳಿ: ವಿಧಾನಸೌಧ – ಕೊಠಡಿ ಸಂಖ್ಯೆ 344,344ಎ ಸಿ.ಪಿ. ಯೋಗೇಶ್ವರ್: ವಿಧಾನಸೌಧ – ಕೊಠಡಿ ಸಂಖ್ಯೆ 336, 336ಎ ಮುರುಗೇಶ್ ನಿರಾಣಿ: ವಿಧಾನಸೌಧ – ಕೊಠಡಿ ಸಂಖ್ಯೆ 307, 307ಎ ಆರ್ ಶಂಕರ್: ವಿಧಾನಸೌಧ – ಕೊಠಡಿ ಸಂಖ್ಯೆ 305, 305ಎ ಎಂಟಿಬಿ ನಾಗರಾಜ್: ವಿಧಾನಸೌಧ – ಕೊಠಡಿ ಸಂಖ್ಯೆ 330, 330ಎ ಇನ್ನೊಂದೆಡೆ ಖಾತೆಗಳನ್ನು ಪಡೆಯಲೂ ನೂತನ ಸಚಿವರು ಲಾಭಿ…
ಬಿಎಸ್’ವೈ ಸಂಪುಟಕ್ಕೆ ಹೊಸಬರ ಸೇರ್ಪಡೆ. 7 ಸಚಿವರ ಪ್ರಮಾಣವಚನ
ಬೆಂಗಳೂರು: ಬಿಜೆಪಿ ಹೈಕಮಾಂಡ್ ಮನವೊಲಿಸಿ, ಅತೃಪ್ತರ ಮನತಣಿಸಿ ಕೊನೆಗೂ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತಮ್ಮ ಸಂಪುಟವನ್ನು ವಿಸ್ತರಣೆ ಮಾಡಿದ್ದಾರೆ. ರಾಜಭವನದಲ್ಲಿ ಏಳು ಮಂದಿ ನೂತನ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ 3:50ಕ್ಕೆ ನೂತನ ಸಚಿವರ ಪದಗ್ರಹಣ ಕಾರ್ಯಕ್ರಮ ಗಮನಸೆಳೆಯಿತು. ಸಿಎಂ ಯಡಿಯೂರಪ್ಪ ಉಪಸ್ಥಿತಿಯಲ್ಲಿ ನೂತನ ಸಚಿವರಿಗೆ ರಾಜ್ಯಪಾಲರು ಪ್ರಮಾಣವಚನ ಬೋಧಿಸಿದರು. ಉಮೇಶ್ ಕತ್ತಿ, ಮುರುಗೇಶ್ ರುದ್ರಪ್ಪ ನಿರಾಣಿ, ಅರವಿಂದ್ ಲಿಂಬಾವಳಿ, ಎಂಟಿಬಿ ನಾಗರಾಜ್, ಆರ್.ಶಂಕರ್, ಸಿಪಿ ಯೋಗೇಶ್ವರ್. ಎಸ್. ಅಂಗಾರ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ನಾಯಕರು ಹಾಗೂ ಸಚಿವರನೇಕರು ಈ ಸಮಾರಂಭದಲ್ಲಿ ಭಾಗವಹಿಸಿದ್ದರು.
ರಸ್ತೆ ಅಪಘಾತ; ಕೇಂದ್ರ ಸಚಿವ ಶ್ರೀಪಾದ ನಾಯಕ್ ಪತ್ನಿ ನಿಧನಕ್ಕೆ ಸಚಿವರ ಶೋಕ.
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಳಿ ನಡೆದ ರಸ್ತೆ ಅಪಘಾತದಲ್ಲಿ ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಅವರ ಪತ್ನಿ ವಿಜಯಾ ನಾಯಕ್ ಅವರ ಮೃತಪಟ್ಟಿದ್ದು, ಅವರ ನಿಧಾನಕ್ಕೆ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರು ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ವಿಜಯಾ ನಾಯಕ್ ಅವರ ಸಾವು ಅತ್ಯಂತ ದುರದೃಷ್ಟಕರ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಶೋಕವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ ನೀಡಲೆಂದು ಸಚಿವರು ಪ್ರಾರ್ಥಿಸಿದ್ದಾರೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಅವರು ಶೀಘ್ರ ಗುಣಮುಖರಾಗಲಿ ಎಂದು ರಮೇಶ್ ಜಾರಕಿಹೊಳಿ ಪ್ರಾರ್ಥಿಸಿದ್ದಾರೆ.
ಸದ್ಯದಲ್ಲೇ ತೆರೆಯ ಮೇಲೆ ‘ಮೈಸೂರ್ ಸ್ಯಾಂಡಲ್’
‘ಮೈಸೂರ್ ಸ್ಯಾಂಡಲ್’ ಹೆಸರಲ್ಲಿ ನಿರ್ಮಾಣವಾಗುತ್ತಿರುವ ಕನ್ನಡ ಸಿನಿಮಾ ತೀವ್ರ ಕುತೂಹಲ ಸೃಷ್ಟಿಸಿದೆ. ವಿಶಾಲ್ ಕುಮಾರ್ ಮತ್ತು ಮಹಿಮಾ ಅಭಿನಯದ ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೊ ಸಕತ್ ವೈರಲ್ ಆಗುತ್ತಿದೆ.
ಕೊರೋನಾ ಆಯಿತು.. ‘ರೂಪಾಂತರಿ’ ಬಂತು.. ಇದೀಗ ಮತ್ತೊಂದು ಹೊಸ ವೈರಸ್..
ದೆಹಲಿ: ಚೀನಾದಲ್ಲಿ ಹುಟ್ಟಿ ಜಗತ್ತಿನಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾದ ರೂಪಾಂತರಿ ಇದೀಗ ಹಲವು ಭೀತಿಯ ಅಲೆಯನ್ನೇ ಸೃಷ್ಟಿಸಿದೆ. ಇದರ ಜೊತೆಯಲ್ಲೇ ಉದಯ ರವಿ ನಾಡು ಜಪಾನಿನನಲ್ಲಿ ಮತ್ತೊಂದು ಹೊಸ ಪ್ರಬೇಧದ ವೈರಾಣು ಸೋಂಕು ಪತ್ತೆಯಾಗಿದೆ. ಬ್ರಿಟನ್ ನಲ್ಲಿ ಭಾರಿ ಸದ್ದು ಮಾಡುತ್ತಿರುವ ರೂಪಾಂತರಿ ಕೊರೋನಾ ವೈರಸ್ ನ ಮತ್ತೊಂದು ರೂಪ ಇದಾಗಿದೆ ಎನ್ನಲಾಗುತ್ತಿದೆ. ಬ್ರೆಜಿಲ್ ನಿಂದ ಜಪಾನ್ ಗೆ ತೆರಳಿದ್ದ ಹಲವರಲ್ಲಿ ಈ ಪರಿವರ್ತಿತ ಹೊಸ ಮಾದರಿಯ ವೈರಸ್ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಟೋಕಿಯೋ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬ್ರೆಜಿಲ್ ನಿಂದ ಬಂದಿದ್ದ 40 ವರ್ಷದ ವ್ಯಕ್ತಿಯಲ್ಲಿ ರೂಪಾಂತರಿ ಕೊರೋನಾ ವೈರಸ್ ಪತ್ತೆಯಾಗಿದ್ದು, ಇದು ಬ್ರಿಟನ್ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ರೂಪಾಂತರಿ ವೈರಸ್ ಗಿಂತಲೂ ಭಿನ್ನವಾಗಿದೆ ಎಂದು ಜಪಾನ್ ಸರ್ಕಾರ ಹೇಳಿದೆ.
ಹೊನ್ನಾಳಿಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ; ಪಂಚಾಯತ್ ಸಮರ ವಿಜೇತರಿಗೆ ಸನ್ಮಾನ
ದಾವಣಗೆರೆ: ಇತ್ತೀಚೆಗೆ ನಡೆದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಗೆದ್ದ ಭಾರತೀಯ ಜನತಾ ಪಕ್ಷ ಬೆಂಬಲಿಗರು ಗೆದ್ದ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ ನಡೆಯಿತು. ಬೃಹತ್ ಸಮಾವೇಶದಲ್ಲಿ ಪಂಚಾಯತ್ ನೂತನ ಸದಸ್ಯರನ್ನು ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸಿದವರನ್ನು ಅಭಿನಂದಿಸಲಾಯಿತು. ಭಾರತೀಯ ಜನತಾ ಪಕ್ಷದ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಸಹಿತ ಅನೇಕ ನಾಯಕರು ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
ರಾಜ್ಯದಲ್ಲಿ ಕೊರೊನಾ ಲಸಿಕೆ ಸಂಗ್ರಹಕ್ಕೆ ಸಿದ್ಧತೆ ಪೂರ್ಣ: ವ್ಯವಸ್ಥೆ ಪರಿಶೀಲಿಸಿದ ಸಚಿವ ಸುಧಾಕರ್
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ ಸಂಗ್ರಹಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದು, ವಿತರಣೆಗೂ ಸಿದ್ಧತೆ ಪೂರ್ಣಗೊಂಡಿದೆ. ಮೊದಲ ಹಂತದಲ್ಲಿ ರಾಜ್ಯಕ್ಕೆ 13.90 ಲಕ್ಷ ಡೋಸ್ ಲಸಿಕೆ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಲಸಿಕೆ ಸಂಗ್ರಹ ವ್ಯವಸ್ಥೆಯನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಸಂಜೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಸಂವಾದ ನಡೆಸಲಿದ್ದಾರೆ. ಈಗಾಗಲೇ ಪ್ರಧಾನಿಗಳು ಜನವರಿ 16 ರಿಂದ ಕೊರೊನಾ ಲಸಿಕೆ ನೀಡುವ ಬಗ್ಗೆ ತಿಳಿಸಿದ್ದಾರೆ. ಆರೋಗ್ಯ ಕ್ಷೇತ್ರದ ಸಿಬ್ಬಂದಿಗೆ 3 ಕೋಟಿ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ಹೇಳಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ಸಂಗ್ರಹ ವ್ಯವಸ್ಥೆಯನ್ನು ಪರಿಶೀಲಿಸಲಾಗಿದೆ ಎಂದರು. ರಾಜ್ಯದಲ್ಲಿ ಪ್ರಮುಖವಾಗಿ ಬೆಂಗಳೂರು ಹಾಗೂ ಬೆಳಗಾವಿಯಲ್ಲಿ 2 ಲಸಿಕೆ ಸಂಗ್ರಹ ವ್ಯವಸ್ಥೆಗಳಿವೆ. ಇದಲ್ಲದೆ, ಚಿತ್ರದುರ್ಗ, ಕಲಬುರಗಿ, ದಕ್ಷಿಣ ಕನ್ನಡ, ಮೈಸೂರು ಮತ್ತು ಬಾಗಲಕೋಟೆಯಲ್ಲಿ 5…
