ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಸಂಕ್ರಾಂತಿ ಆಚರಣೆಗೆ ತಯಾರಿಗೆ ಮುನ್ನ ಇದೀಗ ಸಂಪುಟ ವಿಸ್ತರಣೆಯ ಸಡಗರ ಮನೆಮಾಡಿದೆ. ಸವಾಲುಗಳನ್ನು ಮೆಟ್ಟಿ ನಿಲ್ಲುವ ಛಲಗಾರ ಬಿಎಸ್’ವೈ ಅವರು ಸಂಕ್ರಾಂತಿಗೆ ಮುನ್ನವೇ ಸಂಪುಟ ವಿಸ್ತರಣೆ ಮಾಡಲಿದ್ದು ಸಚಿವಾಕಾಂಕ್ಷಿಗಳಿಂದ ಲಾಬಿಯೂ ಬಿರುಸುಗೊಂಡಿದೆ. ಆದರೆ ಯಾರೆಲ್ಲಾ ಸಂಪುಟ ಸೇರಲಿದ್ದಾರೆ ಎಂಬುದೇ ಈಗಿರುವ ಕುತೂಹಲ. ಎಂ.ಟಿ.ಬಿ.ನಾಗರಾಜ್, ಶಂಕರ್, ಅರವಿಂದ ಲಿಂಬಾವಳಿ, ಸಿ.ಪಿ.ಯೋಗೀಶ್ವರ್, ಪ್ರೀತಮ್ ಗೌಡ, ಯತ್ನಾಳ್, ಉಮೇಶ್ ಕತ್ತಿ, ಹಾಲಪ್ಪ ಆಚಾರ್, ಮುರುಗೇಶ್ ನಿರಾಣಿ, ರೇಣುಕಾಚಾರ್ಯ, ಸುನಿಲ್ ಕುಮಾರ್ ಹೆಸರುಗಳು ಮುಂಚೂಣಿಯಲ್ಲಿವೆ. ದತ್ತಾತ್ರೇಯ ಪಟೇಲ್ ರೇವೂರ, ಅಂಗಾರ, ರಾಮದಾಸ್, ರೂಪಾಲಿ ನಾಯಕ್, ಎಂ.ಪಿ.ಕುಮಾರಸ್ವಾಮಿ ಮೊದಲಾದವರ ಹೆಸರೂ ಕೇಳಿಬರುತ್ತಿವೆ. ಭಾನುವಾರ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅಮಿತ್ ಶಾ, ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಸಧ್ಯವೇ ಲೋಕಸಭಾ ಉಪಚುನಾವಣೆ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಲ್ಲೂ ಉಪಸಮರ ನಡೆಯಲಿರುವುದರಿಂದ ಸಂಪುಟ ವಿಸ್ತರಣೆ ಮಾಡಿ ಅತೃಪ್ತರನ್ನು ಸಂತುಷ್ಟಗೊಳಿಸುವ…
Month: January 2021
ಸಂಕ್ರಾಂತಿ ಮುನ್ನಾ ದಿನವೇ ಸಂಪುಟ ವಿಸ್ತರಣೆ?
ಬೆಂಗಳೂರು: ಒಂದೆಡೆ ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಬದಲಾವಣೆ ಸಾಧ್ಯತೆಗಳ ಬಗ್ಗೆ ರಾಜ್ಯ ರಾಜಕಾರಣದ ಒಂದು ಗುಂಪು ಕಾದು ಕುಳಿತಿದ್ದರೆ, ಇನ್ನೊಂದೆಡೆ ಸಂಪುಟ ವಿಸ್ತರಣೆಗೆ ಕಸರತ್ತು ಸಾಗಿದೆ. ಭಾನುವಾರ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅಮಿತ್ ಶಾ, ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ರಾಜಕೀಯ ಲೆಕ್ಕಾಚಾರದ ಸಮೀಕರಣ ಸೂತ್ರವನ್ನು ಯಡಿಯೂರಪ್ಪ ಮುಂದಿಟ್ಟಿದ್ದಾರೆ. ಸಧ್ಯವೇ ಲೋಕಸಭಾ ಉಪಚುನಾವಣೆ ನಡೆಯಲಿದೆ. ಜೊತೆಗೆ ಎರಡು ವಿಧಾನಸಭಾ ಕ್ಷೇತ್ರಗಳಲ್ಲೂ ಉಪಸಮರ ನಡೆಯಲಿದೆ. ಹಾಗಾಗಿ ಸಂಪುಟ ವಿಸ್ತರಣೆ ಮಾಡಿ ಅತೃಪ್ತರನ್ನು ಸಂತುಷ್ಟಗೊಳಿಸುವ ಅನಿವಾರ್ಯತೆಯನ್ನು ಬಿಎಸ್’ವೈ ಅವರು ಹೈಕಮಾಂಡ್ ಮುಂದೆ ಇತ್ತರೆನ್ನಲಾಗಿದೆ. ಈ ಸಂಗತಿಗಳ ಬಗ್ಗೆ ಮುಂದೆ ನೋಡೋಣ ಎಂದು ಹೇಳಿ ಯಡಿಯೂರಪ್ಪ ಅವರನ್ನು ಕಳುಹಿಸಿಕೊಟ್ಟ ವರಿಷ್ಠರು, ಸಿಎಂ ಬೆಂಗಳೂರು ವಿಮಾನ ನಿಲ್ದಾಣ ತಲುಪುತ್ತಿದ್ದಂತೆಯೇ ಕೆರೆ ಮಾಡಿ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆನ್ನಲಾಗಿದೆ. ಈ ಕುರಿತಂತೆ ವಿಮಾನ ನಿಲ್ದಾಣದಲ್ಲೇ ಸುದ್ದಿಗಾರರೊಂದಿಗೆ…
ಜನರ ಸಮಸ್ಯೆಗಳತ್ತ ಚಿತ್ತ; ಡಿಕೆಶಿ ಸಂಘಟನಾ ಮಂತ್ರ
ಹುಬ್ಬಳ್ಳಿ: ಪ್ರತಿ ಕ್ಷೇತ್ರದಲ್ಲಿ ಜನರ ಸಮಸ್ಯೆಗಳು, ಅವರ ಅಭಿಪ್ರಾಯ ಏನು ಎಂಬುದು ತಿಳಿದು, ನಂತರ ಅದಕ್ಕನುಗುಣವಾಗಿ ಹೋರಾಟ ಹಾಗೂ ಪಕ್ಷ ಸಂಘಟನೆ ಕೆಲಸ ಮಾಡುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿರುವ ಸಮಸ್ಯೆಗಳೇನು? ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ ಏನೇನು ಸಮಸ್ಯೆಗಳಿವೆ? ಜನರ ಧ್ವನಿ ಹಾಗೂ ಅಭಿಪ್ರಾಯ ಏನು ಎಂಬುದನ್ನು ತಿಳಿಯಲು ಬ್ಲಾಕ್, ಜಿಲ್ಲಾ ಮಟ್ಟದ ಅಧ್ಯಕ್ಷರು ಹಾಗೂ ವಿವಿಧ ಘಟಕಗಳ ಅಧ್ಯಕ್ಷರುಗಳನ್ನು ಕರೆದು ಚರ್ಚೆ ಮಾಡುತ್ತಿದ್ದೇವೆ. ಅವರ ಅಭಿಪ್ರಾಯಗಳನ್ನು ಆಲಿಸಿದ ನಂತರ, ಪ್ರತಿ ಕ್ಷೇತ್ರದಲ್ಲೂ ಪ್ರತ್ಯೇಕ ಹೋರಾಟ ನಡೆಸುತ್ತೇವೆ. ಈ ವರ್ಷವನ್ನು ಹೋರಾಟದ ವರ್ಷ, ಸಂಘಟನೆ ವರ್ಷ ಎಂದು ಘೋಷಿಸಿದ್ದೇವೆ ಎಂದರು. ಪ್ರತಿ ಕ್ಷೇತ್ರದಲ್ಲಿಯೂ ಅನೇಕ ಸಮಸ್ಯೆಗಳಿವೆ. ಜತೆಗೆ ಕೊರೋನಾ ಸಂದರ್ಭದಲ್ಲಿ ಆಡಳಿತ ವೈಫಲ್ಯದಿಂದ ಜನ ಸಾಕಷ್ಟು ನೊಂದಿದ್ದಾರೆ.…
ಬಿಎಸ್’ವೈ ಭವಿಷ್ಯ; ಸಿಎಂ ಬದಲಾವಣೆ ಸನ್ನಿಹಿತವೆ?
ಬೆಂಗಳೂರು: ಬಿಜೆಪಿ ಹೈಕಮಾಂಡ್’ನಿಂದ ಸಿಎಂ ಯಡಿಯೂರಪ್ಪ ಅವರಿಗೆ ಬುಲಾವ್.. ಬಿಜೆಪಿಯಲ್ಲಿನ ಈ ದಿಢೀರ್ ವಿದ್ಯಮಾನ ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳುವಂತೆ ಮಾಡಿದೆ. ರಾಜ್ಯ ಸರ್ಕಾರದ ಸಂಪುಟ ಸಚಿವರ ಬೇಗುದಿ, ರಾಜ್ಯ ಬಿಜೆಪಿ ನಾಯಕರ ನಡುವಿನ ಶೀತಲ ಸಮರದ ನಡುವೆ ನಾಯಕತ್ವ ಬದಲಾವಣೆ ಸಾಧ್ಯತೆಯ ಮಾತುಗಳು ಕೆಲವು ದಿನಗಳಿಂದ ಹೆಚ್ಚಾಗಿ ಚರ್ಚೆಗೆ ಬರುತ್ತಿವೆ. ಅದರಲ್ಲೂ ಡಿನೋಟಿಫಿಕೇಷನ್ ಅಕ್ರಮ ಕುರಿತಂತೆ ಹೈಕೋರ್ಟ್ ನೀಡಿರುವ ಆದೇಶಗಳು ಬಿಜೆಪಿ ಹೈಕಮಾಂಡ್’ಗೆ ಸಹಾಯವಾಗಿಯೇ ಮುಜುಗರವನ್ನುಂಟು ಮಾಡಿದೆ ಎನ್ನಲಾಗುತ್ತಿದೆ. ಈ ಸಂದರ್ಭದಲ್ಲೇ ಸಿಎಂ ಯಡಿಯೂರಪ್ಪ ಅವರನ್ನು ಪಕ್ಷದ ರಾಷ್ಟ್ರೀಯ ವರಿಷ್ಠರು ದೆಹಲಿಗೆ ಕರೆಸಿಕೊಂಡು ರಾಜ್ಯ ರಾಜಕೀಯ ವಿದ್ಯಮಾನಗಳಿಗೆ ರೋಚಕತೆ ತುಂಬಿದ್ದಾರೆ. ಸಿಎಂ ಬದಲಾವಣೆ ಸನ್ನಿಹಿತವೆ? ಬಿಜೆಪಿ ಪಾಳಯದಲ್ಲಿ ಯಾವಾಗ ಏನು ಬೇಕಾದರೂ ನಡೆಯಬಹುದು ಎಂಬ ಮಾತಿದೆ. ಅದರಲ್ಲೂ ರಾಜ್ಯ ರಾಜಕೀಯದ ಸ್ಥಿತಿ ಗಮನಿಸಿದರೆ ಸದ್ಯವೇ ಕುತೂಹಲಕಾರಿ ಬೆಳವಣಿಗೆ ಸನ್ನಿಹಿತ ಎಂಬ ವಿಶ್ಲೇಷಣೆ ಸಾಗಿದೆ. ಅಧಿಕಾರ…
ಕೊಪ್ಪಳ ಟಾಯ್ಸ್ ಕ್ಲಸ್ಟರ್; ಯಾರಿಂದಲೋ ತಯಾರು ಇನ್ಯಾರದ್ದೋ ಹೆಸರು?
ಬೆಂಗಳೂರು: ಯಾರಿಂದಲೋ ತಯಾರು ಇನ್ಯಾರದ್ದೋ ಹೆಸರು ಎಂಬ ಅಪವಾದಕ್ಕೆ ಗುರಿಯಾಯಿತೇ ದೇಶದ ಮೊದಲ ಟಾಯ್ಸ್ ಕ್ಲಸ್ಟರ್? ಚೀನಾ ಹಿಡಿತದಲ್ಲಿರುವ ಜಾಗತಿಕ ಉತ್ಪಾದನೆ ಮಾರುಕಟ್ಟೆಯಲ್ಲಿ ಭಾರತವೂ ಪಾಲು ಪಡೆಯಬೇಕೆಂಬ ಉದ್ದೇಶದಿಂದ ತಾವು ಸಿಎಂ ಆಗಿದ್ದಾಗ ‘Compete With China’ ರೂಪಿಸಲಾಗಿತ್ತು. ಇದಕ್ಕಾಗಿ ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್ ರಚಿಸಿ, ₹500 ಕೋಟಿ ಹಣ ನೀಡಲಾಗಿತ್ತು. ಸಿಎಂ ಯಡಿಯೂರಪ್ಪ ಅವರು ಆ ಕ್ಲಸ್ಟರ್‌ಗೆ ಇದೀಗ ಮರು ಚಾಲನೆ ನೀಡಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಚೀನಾ ಹಿಡಿತದಲ್ಲಿರುವ ಜಾಗತಿಕ ಉತ್ಪಾದನೆ ಮಾರುಕಟ್ಟೆಯಲ್ಲಿ ಭಾರತವೂ ಪಾಲು ಪಡೆಯಬೇಕೆಂಬ ಉದ್ದೇಶದಿಂದ ನಾನು ಸಿಎಂ ಆಗಿದ್ದಾಗ ‘Compete With China’ ರೂಪಿಸಲಾಗಿತ್ತು. ಇದಕ್ಕಾಗಿ ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್ ರಚಿಸಿ, ₹500 ಕೋಟಿ ಹಣ ನೀಡಲಾಗಿತ್ತು. ಸಿಎಂ ಯಡಿಯೂರಪ್ಪ ಅವರು ಆ ಕ್ಲಸ್ಟರ್‌ಗೆ ಇಂದು ಮರು ಚಾಲನೆ ನೀಡುತ್ತಿದ್ದಾರೆ!1/4 — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)…
ಭಾರತದ ಮೊಟ್ಟ ಮೊದಲ ಆಟಿಕೆ ಉತ್ಪಾದನಾ ಕ್ಲಸ್ಟರ್ ನಿರ್ಮಾಣಕ್ಕೆ ಅಡಿಗಲ್ಲು
ಕೊಪ್ಪಳ: ಆಟಿಕೆಗಳ ಕ್ಲಸ್ಟರ್ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಶನಿವಾರ ಭೂಮಿ ಪೂಜೆ ನೆರವೇರಿಸಿದರು. ಕೈಗಾರಿಕಾ ಸಚಿವ ಜಗದೀಶ್ ಎಸ್. ಶೆಟ್ಟರ್, ಕೃಷಿ ಸಚಿವ ಬಿ.ಸಿ. ಪಾಟೀಲ್, ಅರಣ್ಯ ಸಚಿವ ಆನಂದ್ ಸಿಂಗ್, ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ. ಪಾಟೀಲ, ಏಕಸ್ ಕಂಪೆನಿಯ ಚೇರ್ಮನ್ ಅರವಿಂದ ಮೆಳ್ಳಿಗೆರಿ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು. ಕಸ್ ಟಾಯ್ ಕ್ಲಸ್ಟರ್ ಕರ್ನಾಟಕ ಸರ್ಕಾರದ ‘ನಿರ್ದಿಷ್ಟ ಉತ್ಪನ್ನ ಕೈಗಾರಿ ಕಾ ಕ್ಲಸ್ಟರ್ ಅಭಿವೃದ್ಧಿ ಯೋಜನೆಯ ಒಂದು ಪ್ರಮುಖ ಭಾಗವಾಗಿದ್ದು, ಆಟಿಕೆ ಕ್ಲಸ್ಟರ್ ಸ್ಥಾಪನೆ ಮಾಡುವ ಮೂ ಲಕ ನಾವು 1 ಲಕ್ಷ ಜನರಿಗೆ ಉದ್ಯೋಗ ಕಲ್ಪಿಸುತ್ತಿದ್ದೇವೆ. ಇದಕ್ಕೆ 5 ಸಾವಿರ ಕೋಟಿ ರೂಪಾಯಿಗಳ ಬಂಡವಾಳ ವನ್ನು ಆಕರ್ಷಣೆ ಮಾಡುವ ಉದ್ದೇಶ ಹೊಂದಿದ್ದೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇದೇ ಸಂದರ್ಭದಲ್ಲಿ ತಿಳಿಸಿದರು. ಕೊಪ್ಪಳ ಜಿಲ್ಲೆಯಲ್ಲಿ ಭಾರತದ ಮೊಟ್ಟ ಮೊದಲ ಆಟಿಕೆ…
ಉಡುಪಿ ವ್ಯಾಪ್ತಿಯಲ್ಲಿ ಭೂ ಪರಿವರ್ತನೆ ಸಮಸ್ಯೆ; ಶಾಸಕ ರಘುಪತಿ ಭಟ್ ಸಿಎಂ ಭೇಟಿ
ಬೆಂಗಳೂರು: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪ್ರಮುಖವಾಗಿ ಕೃಷಿ ವಲಯದಲ್ಲಿ ಭೂ ಪರಿವರ್ತನೆ ಸಮಸ್ಯೆ, ಏಕ ನಿವೇಶನ ಮಾಡಲು ರಸ್ತೆ ದಾನ ಪತ್ರದ ಬಗ್ಗೆ ಭೂಪರಿವರ್ತನೆ ಸಮಸ್ಯೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಇತರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಶಾಸಕ ಕೆ. ರಘುಪತಿ ಭಟ್ ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದೆ. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಸದಸ್ಯರುಗಳು ಈ ವೇಳೆ ಉಪಸ್ಥಿತರಿದ್ದರು. ಮುಖ್ಯಮಂತ್ರಿಯವರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯ ತಾಂತ್ರಿಕ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅತಿ ಶೀಘ್ರದಲ್ಲಿ ಬಗೆಹರಿಸುವ ಭರವಸೆಯನ್ನು ನೀಡಿದರು. ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಕೆ. ರಾಘವೇಂದ್ರ ಕಿಣಿ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಕಪ್ಪೆಟ್ಟು ಪ್ರವೀಣ್ ಕುಮಾರ್ ಶೆಟ್ಟಿ , ದಿನಕರ ಪೂಜಾರಿ ಕುಂಜಿಬೆಟ್ಟು ಉಪಸ್ಥಿತರಿದ್ದರು.
ಮತ್ತೊಮ್ಮೆ ರಾಜ್ಯದಲ್ಲಿ ಅಮಿತ್ ಶಾ ಶಕ್ತಿಪ್ರದರ್ಶನ; ಬೆಳಗಾವಿಯಲ್ಲಿ ಜ.17ರಂದು ಬಿಜೆಪಿ ಬೃಹತ್ ಸಮಾವೇಶ
ಬೆಂಗಳೂರು: ಬೆಳಗಾವಿಯಲ್ಲಿ ಜನವರಿ 17ರಂದು ಬಿಜೆಪಿ ಬೃಹತ್ ಸಾರ್ವಜನಿಕ ಸಭೆs ನಡೆಯಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ. ಒಂದು ಲಕ್ಷಕ್ಕೂ ಹೆಚ್ಚು ಜನರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಸಚಿವರು, ಜನಪ್ರತಿನಿಧಿಗಳು ಭಾಗವಹಿಸುವರು ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಮತ್ತು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಗೋಪಾಲಯ್ಯ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಜನವರಿ 11ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಗೋಪೂಜೆ ಮತ್ತು ಗ್ರಾಮ ಪಂಚಾಯತ್ ಸದಸ್ಯರಿಗೆ ಅಭಿನಂದನೆ ಸಲ್ಲಿಸುವ ಮೂಲಕ ಜನಸೇವಕ ಸಮಾವೇಶದ ಉದ್ಘಾಟನೆ ನಡೆಯಲಿದೆ. ತಾಲ್ಲೂಕು ಪಂಚಾಯತ್, ಜಿಲ್ಲಾ ಪಂಚಾಯತ್‌ಗಳಲ್ಲೂ ಬಿಜೆಪಿ ಅಧಿಕಾರ ಪಡೆಯುವ ದೃಷ್ಟಿಯಿಂದ ಮಹತ್ವದ ಹೆಜ್ಜೆ ಇದಾಗಿದೆ ಎಂದು ವಿವರ ನೀಡಿದರು. ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ,…
ಮಣ್ಣು ಪರೀಕ್ಷಾ ಸಂಚಾರಿ ವಾಹನಗಳಿಗೆ ಸಿಎಂ ಹಸಿರು ನಿಶಾನೆ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊಪ್ಪಳದಲ್ಲಿ ಶನಿವಾರ ಮಣ್ಣು ಪರೀಕ್ಷಾ ಸಂಚಾರಿ ವಾಹನಗಳಿಗೆ ಹಸಿರು ನಿಶಾನೆ ತೋರಿಸಿದರು. ಕೈಗಾರಿಕಾ ಸಚಿವ ಜಗದೀಶ್ ಎಸ್. ಶೆಟ್ಟರ, ಕೃಷಿ ಸಚಿವ ಬಿ.ಸಿ. ಪಾಟೀಲ್ ಮೊದಲಾದವರು ಹಾಜರಿದ್ದರು.
ಕೆಎಸ್ಸಾರ್ಟಿಸಿ ಅವಾಂತರ; ರಸ್ತೆಯಲ್ಲೇ ಪಾಠ ಹೇಳಿ ಚಾಲಕರ ಚಳಿ ಬಿಡಿಸಿದ ಶಿಕ್ಷಣ ಸಚಿವ
ತುಮಕೂರು: ಸಾರಿಗೆ ಬಸ್’ಗಳ ಅವಾಂತರಕ್ಕೆ ಬ್ರೇಕ್ ಬೀಳುತ್ತಿಲ್ಲ. ಸರ್ಕಾರಿ ಅಧೀನದ ಸಂಸ್ಥೆ ಎಂಬ ಮನಸ್ಥಿತಿಯಲ್ಲಿ ಕೆಲ ಸಿಬ್ಬಂದಿ ತಮ್ಮ ಸೇವೆಯ ಮಹತ್ವವನ್ನೇ ಮರೆತು ತಮಗೆ ಬೇಕಾದಂತೆ ವರ್ತಿಸುವ ಆರೋಪಗಳು ಕೇಳಿರುತ್ತಿವೆ. ಇಂತಹಾ ಘಟನೆಯನ್ನು ಕಣ್ಣಾರೆ ಕಂಡ ಶಿಕ್ಷಣ ಸಚಿವ ಸುರೇಶ ಕುಮಾರ್ ಅವರು ಕೆಎಸ್ಸಾರ್ಟಿಸಿ ಬಸ್ ಚಾಲಕನ ಚಳಿ ಬಿಡಿಸಿದ ಪ್ರಸಂಗ ಕಲ್ಪತರು ನಾಡು ತುಮಕೂರು ಬಳಿ ನಡೆದಿದೆ. ಶಾಲಾ ವಿದ್ಯಾರ್ಥಿಗಳು ಬಸ್ ನಿಲ್ಲಿಸಲೆಂದು ಕೋರಿದಾಗ ಕೆಎಸ್ಸಾರ್ಟಿಸಿ ಚಾಲಕರ ಬಸ್ ನಿಲ್ಲಿಸುತ್ತಿರಲಿಲ್ಲ. ಇದೇ ಸಂದರ್ಭದಲ್ಲಿ ಅದೇ ಮಾರ್ಗವಾಗಿ ಬೆಂಗಳೂರಿನಿಂದ ಮಧುಗಿರಿ ಕಡೆ ತೆರಳುತ್ತಿದ್ದ ಶಿಕ್ಷಣ ಸಚಿವರು ಶಾಲಾ ಮಕ್ಕಳ ಪರಿಸ್ಥಿತಿಯನ್ನು ಕಣ್ಣಾರೆ ಕಂಡರು. ಸಾರಿಗೆ ಬಸ್ ಚಾಲಕರ ವರ್ತನೆ ಬಗ್ಗೆ ಸಿಡಿಮಿಡಿಗೊಂಡ ಸಚಿವರು, ಬಸ್ ತಡೆದು ಚಾಲಕನನ್ನು ತರಾಟೆಗೆ ತೆಗೆದುಕೊಂಡರು. ಈ ರೀತಿಯ ವರ್ತನೆ ಪುನರಾವರ್ತನೆಯಾಗಬಾರದು ಎಂದು ಎಚ್ಚರಿಕೆ ನೀಡಿದ ಸಚಿವರು, ವಿದ್ಯಾರ್ಥಿಗಳ ಪ್ರಯಾಣಕ್ಕೆ ಅನುಕೂಲವಾಗುವಂತೆ…
