ಚಾಮರಾಜನಗರ ಜಿಲ್ಲೆಯಲ್ಲಿ ಬಂಡವಾಳ ಆಕರ್ಷಣೆಗೆ ತಮಿಳುನಾಡು, ಕೇರಳದಲ್ಲಿ ರೋಡ್‌ ಶೋ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚಿನ ಅವಕಾಶಗಳಿವೆ. ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹಾಗೂ ಬಂಡವಾಳ ಹೂಡಿಕೆಗೆ ಹಲವಾರು ಪ್ರಸ್ತಾವನೆಗಳು ಬಂದಿವೆ. ಈ ಹಿನ್ನಲೆಯಲ್ಲಿ ಜಿಲ್ಲೆಗೆ ಇನ್ನೂ ಹೆಚ್ಚಿನ ಬಂಡವಾಳ ಆಕರ್ಷಣೆಗೆ ಹಾಗೂ ಇಲ್ಲಿರುವ ಅವಕಾಶಗಳ ಬಗ್ಗೆ ಪ್ರಚಾರ ಮಾಡುವ ಉದ್ದೇಶದಿಂದ ತಮಿಳುನಾಡಿನ ಕೊಯಮತ್ತೂರು, ತಿರಪೂರ್ ಹಾಗೂ ಕೇರಳ ರಾಜ್ಯಗಳಲ್ಲಿ ರೋಡ್‌ ಶೋ ಆಯೋಜಿಸುವುದಾಗಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ತಿಳಿಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಬದನಗುಪ್ಪೆ – ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶಕ್ಕೆ ಗುರುವಾರ ಭೇಟಿ ನೀಡಿದ ಸಚಿವ ಜಗದೀಶ ಶೆಟ್ಟರ್, ಚಾಮರಾಜನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೈಗಾರಿಕಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಕೈಗಾರಿಕೋದ್ಯಮಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಚಾಮರಾಜನಗರ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ವಿಫುಲ ಅವಕಾಶಗಳು ಇವೆ. ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಸಮೀಪವಾಗಿರುವ ಈ ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು…

ಜನಸ್ನೇಹಿಯಾಗಿ ಸ್ಮಾರ್ಟ್ ಸಿಟಿ ಕಾಮಗಾರಿ; ಅಧಿಕಾರಿಗಳಿಗೆ ಬಸವರಾಜ್ ಸಲಹೆ

ಬೆಂಗಳೂರು: ನಗರಗಳ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವ ಉದ್ದೇಶದಿಂದ ಅಖಾಡಕ್ಕಿಳಿದಿರುವ ನಗರಾಭಿವೃದ್ಧಿ ಸಚಿವರಾದ ಬಿ.ಎ.ಬಸವರಾಜ ಬೆಳಗಾವಿಯಲ್ಲಿ ಸಂಚಲನ ಮೂಡಿಸಿದ್ದಾರೆ. ಬೆಳಗಾವಿ ನಗರದಲ್ಲಿ ಮಹಾನಗರ ಪಾಲಿಕೆ, ಬೆಳಗಾವಿ ಸ್ಮಾರ್ಟ್ ಸಿಟಿ ಲಿಮಿಟೆಡ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ನಡೆದಿರುವ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು. ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಯಿಂದಾಗಿ ಹಲವೆಡೆ ಸಾರ್ವಜನಿಕರಿಂದ ದೂರುಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಜನಸ್ನೇಹಿಯಾಗಿ ಕಾಮಗಾರಿ ನಡೆಸುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವರಲಕ್ಷ್ಮಿ ಗುಂಡೂರಾವ್ ಅವರಿಗೆ ಡಿಕೆಶಿ ಶ್ರದ್ದಾಂಜಲಿ

ಬೆಂಗಳೂರು: ಮಾತೃ ವಿಯೋಗಕ್ಕೆ ಒಳಗಾಗಿರುವ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರ ಡಾಲರ್ಸ್ ಕಾಲೋನಿ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುರುವಾರ ರಾತ್ರಿ ತೆರಳಿ, ವರಲಕ್ಷ್ಮಿ ಗುಂಡೂರಾವ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ದಿನೇಶ್ ಗುಂಡೂರಾವ್ ಹಾಗೂ ಅವರ ಪತ್ನಿ ಟಬು ಅವರಿಗೆ ಸಾಂತ್ವನ ಹೇಳಿದರು.

ಟ್ರಂಪ್ ವಿರುದ್ಧ ಸಿಡಿದೆದ್ದಿತೇ ಟ್ವಿಟರ್, ಫೇಸ್’ಬುಕ್?

ವಾಷಿಂಗ್ಟನ್: ಅಮೆರಿಕ ರಾಜಧಾನಿ ವಾಷಿಂಗ್ಟನ್ ನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಎಲೆಕ್ಟೋರಲ್ ಕಾಲೇಜ್ ಮತಗಳನ್ನು ಎಣಿಸುವ ಮತ್ತು ಪ್ರಮಾಣೀಕರಿಸುವ ಪ್ರಕ್ರಿಯೆ ಸಾಗುತ್ತಿರುವ ನಡುವೆೇ ಭದ್ರತೆಯನ್ನು ಉಲ್ಲಂಘಿಸಿ ಕ್ಯಾಪಿಟಲ್ ಕಟ್ಟಡಕ್ಕೆ ಮುತ್ತಿಗೆ ಹಾಕಿದ ನೂರಾರು ಟ್ರಂಪ್ ಬೆಂಬಲಿಗರು ಪೊಲೀಸರ ವಿರುದ್ಧ ಘರ್ಷಣೆಗಿಳಿದು ಹಿಂಸಾಚಾರದಲ್ಲಿ ಭಾಗಿಯಾಗಿದ್ದರು. ಟ್ರಂಪ್ ಬೆಂಬಲಿಗರ ಈ ದಾಂಧಲೆ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ನೀಡಿದ ಪ್ರಚೋಧನಾತ್ಮಕ ಭಾಷಣದ ಹಿನ್ನಲೆಯಲ್ಲಿ ಟ್ರಂಪ್ ಅವರ ಸಾಮಾಜಿಕ ಜಾಲತಾಣ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ. ಟ್ರಂಪ್ ಅವರ, ಫೇಸ್ ಬುಕ್, ಟ್ವಿಟರ್, ಇನ್ ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಖಾತೆಯನ್ನು ತಾತ್ಕಾಲಿಕ ಅಮಾನತಿನಲ್ಲಿಡಲಾಗಿದೆ. ಟ್ವಿಟರ್‌ನಲ್ಲಿ ಸುಳ್ಳು ಆರೋಪಗಳನ್ನು ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಟ್ರಂಪ್ ಖಾತೆಯನ್ನು ಅಮಾನತಿನಲ್ಲಿಡಲಾಗಿದೆ ಎಂದು ಟ್ವಿಟರ್ ಎಚ್ಚರಿಸಿದೆ. ಟ್ರಂಪ್ ಪೋಸ್ಟ್ ಮಾಡಿರುವ ವಿಡಿಯೊವನ್ನು ಫೇಸ್‌ಬುಕ್, ಇನ್ ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ ಸಹ ತೆಗೆದು ಹಾಕಿದೆ…

ಆನ್ ಲೈನ್ ಮೂಲಕ ಖಾಸಗಿ ಶಿಕ್ಷಣ ಸಂಸ್ಥೆಗಳ ನವೀಕರಣ ಶೀಘ್ರ

ಖಾಸಗಿ ಶಿಕ್ಷಣ ಸಂಸ್ಥೆಗಳ ವಾರ್ಷಿಕ ನವೀಕರಣ ಪ್ರಕ್ರಿಯೆ ಮುಂದಿನ ಶೈಕ್ಷಣಿಕ ಸಾಲಿನಿಂದ ಆನ್ ಲೈನ್ ಮೂಲಕವೇ ನಿರ್ವಹಿಸಲಾಗುವುದೆಂದು ಸಚಿವ ಸುರೇಶ್ ಕುಮಾರ್‌ ಹೇಳಿದ್ದಾರೆ. ರುಪ್ಸಾ ಸಂಘಟನೆಯ ಪ್ರತಿನಿಧಿಗಳೊಂದಿಗೆ ಸಭೆ‌ ನಡೆಸಿ‌ದ ಸಂದರ್ಭದಲ್ಲಿ ಸಚಿವ‌ ಸುರೇಶ್‌ ಕುಮಾರ್ ಖಾಸಗಿ ಶಾಲೆಗಳು ಶಿಕ್ಷಣ ವ್ಯವಸ್ಥೆಯ ಪ್ರಮುಖ ಭಾಗವಾಗಿರುವ ಹಿನ್ನೆಲೆಯಲ್ಲಿ, ಯಾವುದೇ ಕಾರಣಕ್ಕೂ ಅವು ಅನಗತ್ಯ ಶೋಷಣೆಗೊಳಗಾಗಬಾರದು. ಆಡಳಿತ ವ್ಯವಸ್ಥೆ ಪಾರದರ್ಶಕವಾಗಿರಬೇಕಾದಲ್ಲಿ ಈ ರೀತಿಯ ಕ್ರಮಗಳು ಮುಖ್ಯವಾಗುತ್ತವೆ. ಕೂಡಲೇ ಈ ಬಗ್ಗೆ ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ‌ ನೀಡಿದರು. ಸರ್ವೋಚ್ಚ ನ್ಯಾಯಾಲಯದ ಆದೇಶ ಹಾಗೂ ಮಾರ್ಗದರ್ಶನದಂತೆ ನವೀಕರಣ ಪ್ರಕ್ರಿಯೆಯಲ್ಲಿ‌ ಸುರಕ್ಷತಾ ಕ್ರಮಗಳು ಕಡ್ಡಾಯವಾಗಿದ್ದು ಅವುಗಳನ್ನು ಪಾಲಿಸಬೇಕಾದ್ದು ಆಡಳಿತ ಸಂಸ್ಥೆಗಳ ಜವಾಬ್ದಾರಿಯಾಗಿದೆ. ನ್ಯಾಯಾಲಯದ ಆದೇಶದಂತೆ ನಡೆಯಬೇಕಾದ ಹಿನ್ನೆಲೆಯಲ್ಲಿ ಈಗಾಗಲೇ ಮೂರು ತಿಂಗಳ ಕಾಲಾವಕಾಶ ನೀಡಿ ನವೀಕರಿಸಲು ಅನುಮತಿಸಲಾಗಿದೆ. ಸುರಕ್ಷತಾ‌ ಕ್ರಮಗಳನ್ನು ಅನುಸರಿಸದ ಶಾಲೆಗಳ ವಿರುದ್ಧ ನಿಯಮಗಳ ಅನುಸಾರ‌ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯವಾಗುತ್ತದೆ.  ಆದಾಗ್ಯೂ…

ನೂತನ ಅನುಭವ ಮಂಟಪವು ಆದರ್ಶ ಸಂಸತ್ತಿನ ಮಾದರಿ; ಕಾಮಗಾರಿಗೆ ಮುನ್ನುಡಿ

ಬೀದರ್ : ಸಾವಿರಾರು ಬಸವ ಅನುಯಾಯಿಗಳ ಸಮ್ಮುಖದಲ್ಲಿ ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜನವರಿ 6ರಂದು ಹಳೆಯ ಅನುಭವ ಮಂಟಪದ ಹತ್ತಿರದ ಆವರಣದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಯಡಿಯೂರಪ್ಪ, ಇದು ಪೂರ್ವಜನ್ಮದ ಪುಣ್ಯ ಕಾರ್ಯ ಎಂದು ತಿಳಿಸಿದರು. ಅನುಭವ ಮಂಟಪ ನಿರ್ಮಾಣಕ್ಕೆ ಈಗಾಗಲೇ 100 ಕೋಟಿ ರೂ ಬಿಡುಗಡೆ ಮಾಡಿದ್ದು, ಇನ್ನು 100 ಕೋಟಿ ರೂಗಳನ್ನು ವಾರದೊಳಗೆ ಬಿಡುಗಡೆ ಮಾಡಿ, ಟೆಂಡರ್ ಪ್ರಕ್ರಿಯೆ ಪೂರ್ಣವಾದ ಕೂಡಲೇ ಕಟ್ಟಡ ನಿರ್ಮಾಣ ಕಾರ್ಯವನ್ನು ಶೀಘ್ರ ಆರಂಭಿಸಲಾಗುವುದು ಎಂದು ತಿಳಿಸಿದರು. ಕರ್ನಾಟಕ ಇತಿಹಾಸದಲ್ಲಿ ಇಂದು ಸುವರ್ಣ ಅಕ್ಷರಗಳಲ್ಲಿ ಬರೆದಿಡುವಂತಹ ದಿನವಾಗಿದೆ ಎಂದ ಅವರು, ಸಾಧನೆ ಮಾತನಾಡಬೇಕು. ಮಾತಾಡುವುದು ಸಾಧನೆಯಾಗಬಾರದು ಎನ್ನುವುದು ತಮ್ಮ ಮನೋಭಾವವಾಗಿದೆ. ಮಾತು ಕೊಟ್ಟಂತೆ ನಡೆದುಕೊಂಡಿದ್ದೇವೆ. ಅಂತೆಯೇ ಎರಡು ವರ್ಷದೊಳಗೆ ಅನುಭವ ಮಂಟಪ ನಿರ್ಮಿಸಿ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಮೃತ ಹಸ್ತದಿಂದ ಲೋಕಾರ್ಪಣೆಗೊಳಿಸಲಾಗುವುದು…

ಕಳಪೆ ಕಾಮಗಾರಿ ಬಗ್ಗೆ ಹುಷಾರ್; ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಸಚಿವರ ಎಚ್ಚರಿಕೆ

ಬೆಂಗಳೂರು: ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ಅವರು ತುಮಕೂರಿನಲ್ಲಿ ಸ್ಮಾರ್ಟ್ ಸಿಟಿ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲಿಸಿದರು. ಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌, ತುಮಕೂರು ಮಹಾನಗರ ಪಾಲಿಕೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ತುಮಕೂರು ನಗರದಲ್ಲಿ ನಡೆದಿರುವ ಕಾಮಗಾರಿಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಕಾಮಗಾರಿಗಳು ತ್ವರಿತ ಗತಿಯಲ್ಲಿ ಸಾಗಬೇಕು, ಗುಣಮಟ್ಟದಲ್ಲಿ ಯಾವುದೇ ಕಾರಣಕ್ಕೂ ಕಳಪೆ ಆಗಬಾರದು ಎಂದು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಅವರು ತಾಕೀತು ಮಾಡಿದರು.

ಗೋಮಾಂಸ ರಫ್ತು ನಿಷೇಧಿಸಿ; ಸರ್ಕಾರಕ್ಕೆ ಕಾಂಗ್ರೆಸ್ ಸಲಹೆ

ಮನ್ಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತಂದಿರುವ ಪ್ರಕ್ರಿಯೆ ಬಗ್ಗೆ ಕಾಂಗ್ರೆಸ್ ನಾಯಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮನ್ಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ‘ಗೋಹತ್ಯೆ ನಿಷೇಧ ಕಾನೂನು ದೇಶದಲ್ಲಿ ಈಗಾಗಲೇ ಜಾರಿಯಲ್ಲಿತ್ತು. ಅದನ್ನು ಬದಲಿಸುವ ಅಗತ್ಯ ಇರಲಿಲ್ಲ. ರಾಜಕಾರಣಕ್ಕಾಗಿ ಇದನ್ನು ಹೊಸದಾಗಿ ತರುತ್ತಿದ್ದಾರೆ ಎಂದು ದೂರಿದರು. ನಾವೆಲ್ಲ ಗೋಮಾತೆಗೆ ಗೌರವ ನೀಡುತ್ತೇವೆ. ಅದು ನಮ್ಮ ಸಂಸ್ಕೃತಿ. ಆದರೆ ಆಡಳಿತ ಪಕ್ಷದವರು ರಾಜಕಾರಣಕ್ಕಾಗಿ ಇದನ್ನು ಬಳಸಿಕೊಳ್ಳುತ್ತಿದ್ದಾರೆ ಎದು ಡಿಕೆಶಿ ಆರೋಪಿಸಿದರು. ಗೋ ಸಂರಕ್ಷಣೆ ಮಾಡುವುದಾದರೆ, ಮೊದಲು ಗೋಮಾಂಸ ರಫ್ತು ನಿಷೇಧಿಸಿ. ರೈತರಿಗೆ ಪ್ರತಿ ಹಸು ಸಾಕಲು 25 ಸಾವಿರದಿಂದ 50 ಸಾವಿರ ರುಪಾಯಿ ಪ್ರೋತ್ಸಾಹ ಧನ ನೀಡಲಿ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅವರು, ಇದು ಒಂದು ವರ್ಗದ ವಿಚಾರವಲ್ಲ. ರೈತರು ಎಲ್ಲ ಸಮುದಾಯದವರು. ಎಲ್ಲ ವರ್ಗದವರೂ ಹಸು ಸಾಕುತ್ತಾರೆ. ಹೀಗಾಗಿ ಎಲ್ಲರಿಗೂ ಸರ್ಕಾರ ಪರಿಹಾರ…

ದಕ್ಷಿಣ ಕನ್ನಡ ಕಾಂಗ್ರೆಸ್’ಗೂ ಪುಣ್ಯಭೂಮಿ; ದೇಶಕ್ಕೆ ಸಂಸ್ಕೃತಿ ಕೊಟ್ಟ ಪವಿತ್ರ ಭೂಮಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಈ ದೇಶಕ್ಕೆ ಸಂಸ್ಕೃತಿ ಕೊಟ್ಟ ಪವಿತ್ರ ಭೂಮಿ. ಪಕ್ಷವನ್ನು ಮಾಸ್ ಬೇಸ್ ನಿಂದ ಕೇಡರ್ ಬೇಸ್ ಪಕ್ಷವಾಗಿ ಪರಿವರ್ತಿಸುವ ಕಾಯಕಲ್ಪವನ್ನು ಇಲ್ಲಿಂದ ಆರಂಭಿಸುತ್ತಿದ್ದೇವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಬಂಟ್ವಾಳದಲ್ಲಿ ಮೈಸೂರು ವಿಭಾಗದ ವಿವಿಧ ಜಿಲ್ಲೆಗಳ ಮುಖಂಡರ ಜತೆ ಸಮಾಲೋಚನೆ ಹಾಗೂ ಸಂಕಲ್ಪ ಸಭೆಯಲ್ಲಿ ಭಾಗವಹಿಸುವ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆ ದೇಶಕ್ಕೆ ವಿದ್ಯಾದಾನ, ಆರ್ಥಿಕ ಶಕ್ತಿ ಕೊಟ್ಟ ಭೂಮಿ. ಈ ಭೂಮಿಯನ್ನು ಈಗ ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ. ಈ ಭೂಮಿಯಲ್ಲಿ ಮತದಾರರು ಯಾರಿಗೆ ಬೆಂಬಲ ನೀಡುತ್ತಾರೋ ಅವರ ಸರ್ಕಾರ ಬಂದಿರೋದನ್ನು ನಾವು ಇತಿಹಾಸದಲ್ಲಿ ನೋಡಿದ್ದೇವೆ. ಈ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನವಾಗುತ್ತಿದೆ ಎಂದರು. ಇಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿದ್ದರೂ ನಾನೊಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಇಲ್ಲಿಗೆ ಬಂದಿದ್ದೇನೆ. ಕಾರ್ಯಕರ್ತರ ಧ್ವನಿ ಅಧ್ಯಕ್ಷರ ಧ್ವನಿಯಾಗಬೇಕು.…

ಕೊಣಾಜೆ ಗಣಿ ಪ್ರದೇಶಕ್ಕೆ ಸಚಿವರ ಭೇಟಿ, ಪರಿಶೀಲನೆ

ಮಂಗಳೂರು ತಾಲ್ಲೂಕಿನ ಮುಡಿಪು- ಕೊಣಾಜೆಯಲ್ಲಿ ನಡೆಯುತ್ತಿರುವ ಗಣಿಗಾರಿಕೆ ಪ್ರದೇಶಗಳಿಗೆ ಗಣಿ ಮತ್ತು ಭೂವಿಜ್ಞಾನ ಸಚಿವರಾದ ಸಿ.ಸಿ.ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್ , ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕ ನಿರಂಜನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು