ಬೆಂಗಳೂರು: ಎಸ್‌ಎಸ್‌ಎಲ್‌ಸಿಯಿಂದ ಮೊದಲುಗೊಂಡು ಉನ್ನತ ಶಿಕ್ಷಣದ ಕೊನೆ ಹಂತದವರೆಗೂ ವಿದ್ಯಾರ್ಥಿಗಳ ಎಲ್ಲ ಸಮಗ್ರ ಶೈಕ್ಷಣಿಕ ದಾಖಲೆಗಳನ್ನು ಡಿಜಿ ಲಾಕರ್‌ನಲ್ಲಿ ಭದ್ರವಾಗಿರಿಸುವ ಮಹತ್ವದ ಕಾರ್ಯಕ್ರಮ ಜಾರಿಗೆ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮುಂದಾಗಿದ್ದಾರೆ. ಮುಂದಿನ ದಿನಗಳಲ್ಲಿ ಯಾರೂ ದಾಖಲೆಗಳು ಕಳೆದುಹೋಗುತ್ತವೆ ಎಂದು ಭಯಪಡಬೇಕಿಲ್ಲ ಹಾಗೂ ತಮ್ಮ ದಾಖಲೆಗಳು ನಕಲಿಯಾಗುತ್ತವೆ ಎಂಬ ಆತಂಕವೂ ಇರುವುದಿಲ್ಲ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ʼಶೈಕ್ಷಣಿಕ ಡಿಜಿ ಲಾಕರ್ʼ ವ್ಯವಸ್ಥೆ ರಾಜ್ಯದಲ್ಲಿ ಜಾರಿಗೆ ಬರುತ್ತದೆ. ಈ ವ್ಯವಸ್ಥೆಯಿಂದ ವಿದ್ಯಾರ್ಥಿಗಳ ದಾಖಲೆಗಳು ಸುರಕ್ಷಿತವಾಗಿರುತ್ತವೆ ಹಾಗೂ ಉದ್ಯೋಗದಾತರಿಗೂ ಇವು ಸಿಗಲಿವೆ. ಇನ್ನು ಮುಂದೆ ಕಾಗದ ರೂಪದ ಯಾವುದೇ ಶೈಕ್ಷಣಿಕ ದಾಖಲೆಗಳಿಗೆ ಅವಕಾಶ ಇರುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಹೇಳಿದ್ದಾರೆ. ಏನಿದು ಶೈಕ್ಷಣಿಕ ಡಿಜಿ ಲಾಕರ್? ಇದು ವಿದ್ಯಾರ್ಥಿಗಳ ಎಲ್ಲ ಶೈಕ್ಷಣಿಕ ದಾಖಲೆಗಳನ್ನು ಸುರಕ್ಷಿತವಾಗಿ ಸಂಗ್ರಹ ಮಾಡುವ ವ್ಯವಸ್ಥೆ. ಇದಕ್ಕೆ ರಾಷ್ಟ್ರೀಯ ಶೈಕ್ಷಣಿಕ ದಾಖಲೆಗಳ ಸಂಗ್ರಹಗಾರ…
Month: January 2021
ಕನ್ನಡ ಪುಸ್ತಕ ಪ್ರಾಧಿಕಾರದ ವಾರ್ಷಿಕ ಪ್ರಶಸ್ತಿ ಪ್ರದಾನ
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ 2019ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಡಾ. ನರಹಳ್ಳಿ ಬಾಲಸುಬ್ರಹ್ಮಣ್ಯ ಪ್ರಶಸ್ತಿ ಪ್ರದಾನ ಮಾಡಿದರು. ಕನ್ನಡ ಪುಸ್ತಕ ಪ್ರಾಧಿಕಾರದ ಡಾ. ಎಂ.ಎನ್. ನಂದೀಶ್ ಹಂಚೆ ಹಾಗು ಕನ್ನಡ ಸಂಸ್ಕೃತಿ ಇಲಾಖೆ ನಿರ್ದೇಶಕ ಎಸ್. ರಂಗಪ್ಪ ಭಾಗವಹಿಸಿದ್ದರು. ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಮತ್ತು ಸಹಾಯಕ ನಿರ್ದೇಶಕಿ ಸೌಭಾಗ್ಯ ಉಪಸ್ಥಿತರಿದ್ದರು. ಡಾ. ಹೆಚ್.ಕೆ. ಲಕ್ಷ್ಮಿನಾರಾಯಣ ಅಡಿಗ, ಡಾ. ಬಸವರಾಜ ಕಲ್ಗುಡಿ, ಡಾ. ಎಂ.ಎಂ. ಪಡಶೆಟ್ಟಿ, ಕೆ. ರಾಜಕುಮಾರ್, ಸಪ್ನ ಬುಕ್ಹೌಸ್ ಮಾಲಿಕರಾದ ನಿತಿನ್ ಷಾ, ಪ್ರೊ. ಕೃಷ್ಣಮೂರ್ತಿ ಬಿಳಿಗೆರೆ, ಎ. ಗಣೇಶ್, ಸುಶೀಲಾ ಸೋಮಶೇಖರ್, ಕಿರಣ್ ಮಾಡಾಳು, ಪುಂಡಲೀಕ ಕಲ್ಲಿಗನೂರು, ಕಲ್ಲೂರು ನಾಗೇಶ್ ಪ್ರಶಸ್ತಿ ಸ್ವೀಕರಿಸಿದರು.
ಫೆಬ್ರವರಿ 1ರಂದು ಕೇಂದ್ರ ಬಜೆಟ್; ಎಲ್ಲರ ಚಿತ್ತ ಮೋದಿಯತ್ತ
ದೆಹಲಿ : ಕೊರೋನಾ ಆತಂಕದ ನಡುವೆಯೇ ಕೇಂದ್ರ ಸರ್ಕಾರ ಫೆಬ್ರವರಿ ಒಂದರಂದು ಬಜೆಟ್ ಮಂಡಿಸಲಿದೆ. ಈ ತಿಂಗಳ 29 ರಿಂದ ಫೆಬ್ರವರಿ 15 ರವರೆಗೆ ಸಂಸತ್ತು ಬಜೆಟ್ ಅಧಿವೇಶನದ ಮೊದಲ ಭಾಗವನ್ನು ನಡೆಸಲಾಗುವುದು ಎಂದು ಸಂಸದೀಯ ಮೂಲಗಳು ತಿಳಿಸಿವೆ. ಈ ಅಧಿವೇಶನದಲ್ಲಿ, ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡನೆಯಾಗಲಿದೆ. ಕಳೆದ ಮುಂಗಾರು ಅಧಿವೇಶನದಲ್ಲಿ ವಿವಾದಾತ್ಮಕ ಕೃಷಿ ಮಸೂದೆಗಳನ್ನು ಅಂಗೀಕರಿಸಲಾಗಿತ್ತು. ಆ ವೇಳೆ ಮಂತ್ರಿಗಳು ಸೇರಿದಂತೆ ಕೆಲವು ಸಂಸದರು ಕೋವಿಡ್ ಪಾಸಿಟಿವ್ ಆದ ಹಿನ್ನಲೆಯಲ್ಲಿ ಅಧಿವೇಶನವನ್ನು ಅರ್ಧಕ್ಕೆ ಮೊಟಕುಗೊಳಿಸಲಾಗಿತ್ತು. ಇದೀಗ ಈ ಬಜೆಟ್ ಅಧಿವೇಶನದಲ್ಲಿ ರೈತರ ಪ್ರತಿಭಟನೆ ಹಾಗೂ ಕೋರಿದ್ ಲಸಿಕೆ ಸಹಿತ ಹಲವು ವಿಚಾರಗಳನ್ನು ಮುಂದಿಟ್ಟು ಮೋದಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸಿದ್ಧತೆ ನಡೆಸಿವೆ.
ಗೋಹತ್ಯೆ ನಿಷೇಧ; ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ
ಬೆಂಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ಬಿದ್ದಿದೆ. ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020’ನ್ನು ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯಲಾಗಿತ್ತು. ಆದರೆ ವಿಧಾನ ಪರಿಷತ್ನಲ್ಲಿ ಅಂಗೀಕರಿಸಲು ಸಾಧ್ಯವಾಗಿಲ್ಲ. ಹಾಗಾಗಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮಾಡಿ ಈ ವಿದೇಯಕ ಜಾರಿಗೆ ಪ್ರಯತ್ನ ಮಾಡಿದೆ. ಇದೀಗ ರಾಜ್ಯ ಸರ್ಕಾರದ ವಿದೇಯಕಕ್ಕೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಮಂಗಳವಾರ ಸಹಿ ಹಾಕಿದ್ದು, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದಿರುವ ಬಗ್ಗೆ ಸಂತಸ ಹಂಚಿಕೊಂಡಿರುವ ಬಿಜೆಪಿ ನಾಯಕರು, ರಾಜ್ಯದಲ್ಲಿ ಜಾನುವಾರು ಸಾಗಾಣಿಕೆ, ಹತ್ಯೆಗೆ ನಿರ್ಬಂಧ ಹೇರಲಾಗಿದೆ. ಜೊತೆಗೆ, ಹತ್ಯೆಗಾಗಿ ಜಾನುವಾರು ಮಾರಾಟ, ಖರೀದಿ ಮೇಲೆ ಸಹ ನಿರ್ಬಂಧ ವಿಧಿಸಲಾಗಿದೆ. ಒಂದು ವೇಳೆ, ಹತ್ಯೆಗಾಗಿ ಮಾರಾಟ ಮಾಡಿದರೆ ಆ ಜಾನುವಾರುಗಳನ್ನು ಜಪ್ತಿ ಮಾಡಲಾಗುವುದು. ನಿಯಮ ಉಲ್ಲಂಘಿಸಿದರೆ ಮೂರು ವರ್ಷದಿಂದ ಏಳು…
ರಾಜ್ಯದಲ್ಲಿ ಕೊರೋನಾ ಲಸಿಕೆ ವಿತರಣೆಗೆ 9,807 ವ್ಯಾಕ್ಸಿನೇಟರ್ ಸಿಬ್ಬಂದಿ ಸಜ್ಜು
ಬೆಂಗಳೂರು: ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಪ್ರಕ್ರಿಯೆ ಶೀಘ್ರವೇ ಆರಂಭವಾಗಲಿದ್ದು, ರಾಜ್ಯ ಸರ್ಕಾರ ಸುವ್ಯವಸ್ಥಿತ ಲಸಿಕೆ ವಿತರಣೆಗೆ ಸಿದ್ಧತೆ ನಡೆಸಿದೆ. ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಿದ್ದು, 2,73,211 ಸರ್ಕಾರಿ ಹಾಗೂ 3,57,313 ಖಾಸಗಿ ಸೇರಿ ಒಟ್ಟು 6,30,524 ಅರೋಗ್ಯ ಕಾರ್ಯಕರ್ತರನ್ನು ಗುರುತಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ರಾಜ್ಯಕ್ಕೆ ಅವಶ್ಯಕತೆ ಇರುವ ಹೆಚ್ಚಿನ ಮೂಲಭೂತ ಸೌಕರ್ಯವನ್ನು ಕೇಂದ್ರ ಸರ್ಕಾರ ಪೂರೈಸುತ್ತಿದ್ದು, ಈವರೆಗೂ 64 ಬೃಹತ್ ಐಸ್ ಲೈನ್ಡ್ ರೆಫ್ರಿಜರೇಟರ್ (ILR), 24 ಲಕ್ಷ ಸಿರಿಂಜುಗಳು ರಾಜ್ಯಕ್ಕೆ ಬಂದಿದ್ದು ಜಿಲ್ಲೆಗಳಿಗೆ ರವಾನಿಸಲಾಗಿದೆ. ಇನ್ನುಳಿದ 31 ಲಕ್ಷ ಸಿರಿಂಜುಗಳು ಸೇರಿದಂತೆ ಹೆಚ್ಚುವರಿ ಉಪಕರಣಗಳು ಶೀಘ್ರದಲ್ಲೇ ತಲುಪಿಲಿವೆ ಎಂದು ಅವರು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ಲಸಿಕೆ ನೀಡಲು ತರಬೇತಿ ಪಡೆದ 9,807 ಅನುಭವಿ ವ್ಯಾಕ್ಸಿನೇಟರ್ ಸಿಬ್ಬಂದಿಗಳನ್ನು ಮತ್ತು ರಾಜ್ಯಾದ್ಯಂತ 28,427 ಲಸಿಕಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಇನ್ನೂ…
ಶಿಕ್ಷಕರಿಗೆ ಸೋಂಕು.. ವಿದ್ಯಾರ್ಥಿಗಳು ಸೇಫ್.. ಪೋಷಕರಿಗೆ ರಿಲೀಫ್..
ಬೆಂಗಳೂರು: ಕೋವಿಡ್ ಆತಂಕದ ನಡುವೆಯೇ ರಾಜ್ಯದಲ್ಲಿ ಹತ್ತನೇ ಹಾಗೂ ಪಿಯುಸಿ ತರಗತಿಗಳು ಆರಂಭವಾಗಿದ್ದು ಕೆಲವೆಡೆ ಶಿಕ್ಷಕರಿಗೆ ಹಾಗೂ ಶಾಲಾ ಸಿಬ್ಬಂದಿಗೆ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಆದರೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಆತಂಕ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಬಾಗಲಕೋಟೆ ಜಿಲ್ಲೆಯ ಐವರು ಶಿಕ್ಷಕರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಅವರು ಶಾಲಾರಂಭಕ್ಕೂ ಮುನ್ನವೇ ಕೊರೋನಾ ಪರೀಕ್ಷೆಯ ಫಲಿತಾಂಶ ಬಂದಿದ್ದರಿಂದ ಆ ಶಿಕ್ಷಕರು ಕ್ವಾರಂಟೈನ್‍ನಲ್ಲಿದ್ದು, ಮಕ್ಕಳ ಸಂಪರ್ಕಕ್ಕೆ ಬಂದಿಲ್ಲವಾದ್ದರಿಂದ ಶಾಲೆಗಳು ಸಮರ್ಪಕವಾಗಿ ನಡೆಯುತ್ತಿವೆ ಎಂದು ಶಿಕ್ಷಣ ಸಚಿವ ಸುರೇಶ ಕುಮಾರ್ ತಿಳಿಸಿದ್ದಾರೆ. ಬಿಜಾಪುರ ಜಿಲ್ಲೆಯ ಪ್ರಾಥಮಿಕ ಶಾಲೆಯ ಒಬ್ಬ ಶಿಕ್ಷಕರು ಕೊರೋನಾ ಸೋಂಕಿಗೊಳಗಾಗಿದ್ದು ಅವರು ಗೃಹಪತ್ಯೇಕತೆಯಲ್ಲಿದ್ದಾರೆ. ಹುಕ್ಕೇರಿ ಶೈಕ್ಷಣಿಕ ಜಿಲ್ಲೆಯಲ್ಲಿ ನಾಲ್ವರು ಶಿಕ್ಷಕರು ಹೋಂ ಕ್ವಾರಂಟೈನ್‍ನಲಿದ್ದಾರೆ. ಕೊಪ್ಪಳ ಜಿಲ್ಲೆಯ ವಡಗನಹಳ್ಳಿ ಪ್ರಾಥಮಿಕ ಶಾಲೆಯ ಶಿಕ್ಷಕರಿಗೆ ಒಬ್ಬ ಶಿಕ್ಷಕರಿಗೆ ಕೊರೋನಾ ಪಾಸೀಟಿವ್ ಬಂದಿದ್ದು, ಶಾಲೆಯನ್ನು ಸ್ಯಾನಿಟೈಸೇಷನ್ ಮಾಡಿಸಲಾಗಿದೆ ಎಂದವರು ಮಾಹಿತಿ ಹಂಚಿಕೊಂಡಿದ್ದಾರೆ.…
ಶಾಲಾ-ಕಾಲೇಜುಗಳಲ್ಲಿ ಉತ್ತಮ ಹಾಜರಾತಿ; ಸುರೇಶ್ ಕುಮಾರ್
ಬೆಂಗಳೂರು: ಕೋವಿಡ್ ರಾಜಾ ನಂತರ ಇದೀಗ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಳವಾಗಿದೆ. ಕೊರೋನಾ ಸೋಂಕಿನ ಆತಂಕದ ನಡುವೆಯೇ ಹತ್ತನೇ ತರಗತಿ ಹಾಗೂ ಪಿಯಿಸಿ ಕ್ಲಾಸ್’ಗಳು ಆರಂಭವಾಗಿದ್ದು, ಸರ್ಕಾರದ ಈ ಕ್ರಮದ ಬಗ್ಗೆ ವ್ಯಾಪಕ ಟೀಕೆಗಳು ವ್ಯಕ್ತವಾಗಿತ್ತು. ಇದೀಗ ಶಿಕ್ಷಣ ಸಚಿವ ಸುರೇಶ ಕುಮಾರ್ ಅವರಿಗೆ ಶಹಬ್ಬಾಸ್’ಗಿರಿ ವ್ಯಕ್ತವಾಗುತ್ತಿದೆ. ಕಳೆದ ವರ್ಷದ ಎಸ್ಸೆಸೆಲ್ಸಿ, ಪಿಯುಸಿ ಪರೀಕ್ಷೆಯನ್ನೂ ಯಶಸ್ವಿಯಾಗಿ ನಡೆಸುವ ಮೂಲಕ ದೇಶದ ಗಮನಸೆಳೆದಿರುವ ಸಚಿವ ಸುರೇಶ ಕುಮಾರ್ ಬಗ್ಗೆ ಈ ಬಾರಿ ಶಾಲಾರಂಭ ವಿಚಾರದಲ್ಲೂ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ. ರಾಜ್ಯದಲ್ಲಿರುವ 5492 ಪದವಿ ಪೂರ್ವ ಕಾಲೇಜುಗಳಲ್ಲಿ ದಾಖಲಾಗಿರುವ 4,24,250 ವಿದ್ಯಾರ್ಥಿಗಳ ಪೈಕಿ ಮಂಗಳವಾರ 2,42,886 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. (ಶೇ.57.25 ಹಾಜರಿ) ಅಂತೆಯೇ 16,850 ಪ್ರೌಢಶಾಲೆಗಳಲ್ಲಿ 10ನೇ ತರಗತಿಗೆ ದಾಖಲಾಗಿರುವ 9,29,130 ವಿದ್ಯಾರ್ಥಿಗಳ ಪೈಕಿ 4,77,051 ವಿದ್ಯಾರ್ಥಿಗಳು ಹಾಜರಾಗಿದ್ದಾರೆ (ಶೇ.51.34 ಹಾಜರಾತಿ). 6 ರಿಂದ 9ನೇ ತರಗತಿಗಳಿಗೆ ನಡೆಯುತ್ತಿರುವ ಪರಿಷ್ಕೃತ…
ಕೊಚ್ಚಿ-ಮಂಗಳೂರು ಗ್ಯಾಸ್ ಪೈಪ್‌ಲೈನ್; ರಾಜ್ಯಕ್ಕೂ ವರದಾನ
ಬೆಂಗಳೂರು: ಕೊಚ್ಚಿ – ಮಂಗಳೂರು ನಡುವಿನ ನೈಸರ್ಗಿಕ ಅನಿಲ ಪೈಪ್‌ಲೈನನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದ್ದಾರೆ. ಸುಮಾರು 3,000 ಕೋಟಿ ವೆಚ್ಚದಲ್ಲಿ ನಿರ್ಮಿಸಿದ 450 ಕಿಮೀ ಉದ್ದದ ಪೈಪ್‌ಲೈನ್ ಲೋಕಾರ್ಪಣೆಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು, ಕೇರಳದ ಕಣ್ಣೂರು, ಕಾಸರಗೋಡು ಸೇರಿದಂತೆ ಹಲವು ಜಿಲ್ಲೆಗಳ ಅಭಿವೃದ್ಧಿಗೆ ಮುನ್ನುಡಿ ಬರೆದಂತಾಗಿದೆ. ಈ ಯೋಜನೆಯ ನಿರ್ಮಾಣ ಹಂತದಲ್ಲಿ 12 ಲಕ್ಷ ಮಾನವ ದಿನಗಳ ಉದ್ಯೋಗ ಸೃಷ್ಟಿಯಾಗಿದೆ. ಭವಿಷ್ಯದಲ್ಲಿ ಭಾರಿ ಪ್ರಮಾಣದಲ್ಲಿ ನೇರ ಮತ್ತು ಪರೋಕ್ಷ ಉದ್ಯೋಗಾವಕಾಶಗಳೂ ಸೃಷ್ಟಿಯಾಗಲಿವೆ. ಇದರಿಂದ ಕರಾವಳಿ ಜಿಲ್ಲೆಗಳು ಮತ್ತು ಕೇರಳದ ಹಲವು ಜಿಲ್ಲೆಗಳ ತ್ವರಿತ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಭಾರತೀಯ ಜನತಾ ಪಕ್ಷ ಹೇಳಿದೆ. ಇದು ಸುರಕ್ಷತೆಯ ದೃಷ್ಟಿಯಿಂದ ಅತ್ಯಂತ ಮಹತ್ವಪೂರ್ಣ ನಿರ್ಣಯವಾಗಿದ್ದು, ಹೆದ್ದಾರಿಗಳಲ್ಲಿ ವಾಹನ ದಟ್ಟಣೆ ಮತ್ತು ಅಪಘಾತವನ್ನು ನಿಯಂತ್ರಿಸುವಲ್ಲಿ ಸಹಕಾರಿಯಾಗಲಿದೆ. ಅಡುಗೆ ಮನೆಗಳು ಮತ್ತು ಕೈಗಾರಿಕಾ ಕ್ಷೇತ್ರಕ್ಕೆ ಸ್ವಚ್ಛ ಇಂಧನ…
ಮಾಜಿ ಸಿಎಂ ಅಪ್ರಬುದ್ಧ, ಅತಿರೇಕದ ವರ್ತನೆ; ಕ್ಯಾಪ್ಟನ್ ಕಾರ್ಣಿಕ್ ಟೀಕೆ
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಬಾದಾಮಿಯಲ್ಲಿ ಸಮಸ್ಯೆ ಹೇಳಲು ಬಂದ ಗ್ರಾಮ ಪಂಚಾಯತ್ ಸದಸ್ಯರೊಬ್ಬರನ್ನು ಅವಮಾನಿಸಿ ವೇದಿಕೆಯಿಂದ ಕೆಳಗಿಳಿಸಿರುವುದು ಪಂಚಾಯತ್ ರಾಜ್ ವ್ಯವಸ್ಥೆಗೆ ಮಾಡಿದ ಮಾಡಿದ ಅವಮಾನ ಎಂದು ಬಿಜೆಪಿ ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು ಟೀಕಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಕ್ಯಾಪ್ಟನ್ ಕಾರ್ಣಿಕ್, ಪಂಚಾಯತ್‌ರಾಜ್ ವ್ಯವಸ್ಥೆಯ ಕುರಿತಾಗಿ ಸಿದ್ದರಾಮಯ್ಯರಿಗೆ ಇರುವ ತಿರಸ್ಕಾರದ ಪ್ರತಿಬಿಂಬ ಇದಾಗಿದೆ ಎಂದು ಬೊಟ್ಟು ಮಾಡಿದ್ದಾರೆ. ‘ಯಾರೂ ಹಳ್ಳಿ ಕಡೆಗೆ ಬಂದಿಲ್ಲ; ಆಶ್ರಯ ಮನೆಗಳು ಹಾಳಾಗಿ ಹೋಗಿವೆ. ಸಿದ್ದರಾಮಯ್ಯ ಬಂದು ಹೋದ್ರೂ ಕಾಮಗಾರಿ ಸರಿಯಾಗಿಲ್ಲ’ ಎಂದು ತಿಳಿಸುತ್ತಿದ್ದ ಬಾದಾಮಿಯ ನೂತನ ಗ್ರಾಮ ಪಂಚಾಯತ್ ಸದಸ್ಯ ಸಂಗಣ್ಣ ಜಾಬಣ್ಣನವರನ್ನು ಸಿದ್ದರಾಮಯ್ಯ ಅವರು ದೂಡಿದ್ದಾರೆ ಎಂಬ ಮಾಧ್ಯಮ ವರದಿಗಳು ಮತ್ತು ಸಾಮಾಜಿಕ ಜಾಲತಾಣದ ಪ್ರಕಟಣೆ ಬಗ್ಗೆ ಗಮನ ಸೆಳೆದಿರುವ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಇದು…
ಸೈಫ್ ಅಲಿ ಖಾನ್, ಡಿಂಪಲ್ ಜತೆಗಿನ ‘ತಾಂಡವ್’ ಹೇಗಿದೆ ಗೊತ್ತಾ?
ಕೊರೋನಾ ಸಂಕಷ್ಟದ ನಡುವೆ ತಯಾರಾಗಿರುವ ಸಿನಿಮಾಗಳು ಇದೀಗ ಬಿಡುಗಡೆಯ ಹಂತಕ್ಕೆ ಬಂದಿವೆ. ಸೈಫ್ ಅಲಿ ಖಾನ್ ಮತ್ತು ಡಿಂಪಲ್ ಕಪಾಡಿಯಾ ನಟನೆಯ ‘ತಾಂಡವ್’ ಚಿತ್ರ ಕೂಡಾ ತೆರೆಗೆ ಬರಲು ಸಿದ್ಧವಾಗಿದೆ. ಈ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲೂ ಈ ಟ್ರೈಲರ್ ಸಕತ್ ರಂಜನೆ ಒದಗಿಸುತ್ತೀಯೆ.
