ಬಿಜೆಪಿಯ ‘ಜನಸೇವಕ ಸಮಾವೇಶ’ದ ಸಮಾರೋಪಕ್ಕೆ ಅಮಿತ್ ಶಾ

ಬೆಂಗಳೂರು: ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲಿ ಬಿಜೆಪಿಯಿಂದ ಜನವರಿ 11ರಿಂದ 13ರವರೆಗೆ ಜನಸೇವಕ ಸಮಾವೇಶ ನಡೆಯಲಿದೆ. ಬೆಂಗಳೂರಿನಲ್ಲಿ ಸಮಾರೋಪ ಸಮಾರಂಭ ಜನವರಿ 16 ಅಥವಾ 17ರಂದು ನಡೆಯಲಿದ್ದು ಈ ಸಮಾವೇಶದ್ಲಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸುವ ನಿರೀಕ್ಷೆ ಇದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಮತ್ತು ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿಯ ವಿಶೇಷ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, ಜನವರಿ 11ರಂದು ಮೈಸೂರು, ಚಾಮರಾಜನಗರ, 12ರಂದು ಹಾಸನ ಮತ್ತು ಮಂಡ್ಯ, 13ರಂದು ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಮಾವೇಶ ನಡೆಸಲಿದೆ ಎಂದು ವಿವರಿಸಿದರು. 11ರಂದು ಚಿಕ್ಕಮಗಳೂರು ಮತ್ತು ಉಡುಪಿ, 12ರಂದು ಮಡಿಕೇರಿ ಮತ್ತು ಮಂಗಳೂರು, 13ರಂದು ಶಿವಮೊಗ್ಗ ಮತ್ತು ಉತ್ತರ ಕನ್ನಡ…

ಅಲುಗಾಡುತ್ತಿರುವ ‘ಬಿಎಸ್‌ವೈ’ ಕುರ್ಚಿ; ಶೀಘ್ರ ಚುನಾವಣೆ ನಡೆದರೆ ‘ಕೈ’ ಮೇಲುಗೈ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುರ್ಚಿ ಅಲುಗಾಡುತ್ತಿದ್ದು, ಅವರು ಸಿಎಂ ಆಗಿ ಹೆಚ್ಚು ಸಮಯ ಉಳಿಯುವುದಿಲ್ಲ ಎಂದು ವಿಧಾಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ಲೇಷಣೆ ಮಾಡಿದ್ದಾರೆ. ತಕ್ಷಣ ವಿಧಾನಸಭಾ ಚುನಾವಣೆ ನಡೆದರೆ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದು ಅವರು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ಸರ್ಕಾರ ಹಾಗೂ ಆಡಳಿತಾರೋದ ಪಕ್ಷದ ನಾಯಕರ ಹೇಳಿಕೆಗಳಲ ಬಗ್ಗೆ ತಮ್ಮದೇ ದಾಟಿಯಲ್ಲಿ ವಿಶ್ಲೇಷಣೆ ಮಾಡಿದರು. ತಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಯಡಿಯೂರಪ್ಪ ಅವರು ಹಗಲುಕನಸು ಕಾಣುತ್ತಿದ್ದಾರೆ. ಆದರೆ ಅವರ ಕುರ್ಚಿ ಅಲುಗಾಡುತ್ತಿದೆ ಟೀಕಿಸಿದರು. ಬಿಜೆಪಿ ನಾಯಕರ ನಡೆ ಬಗ್ಗೆ ಟೀಕೆ ಮಾಡಿದ ಸಿದ್ದರಾಮಯ್ಯ, ವಿಧಾನಸಭೆಯನ್ನು ವಿಸರ್ಜಿಸಿ, ಚುನಾವಣೆಯನ್ನು ಎದುರಿಸಿ ಎಂದು ಬಿಜೆಪಿ ನಾಯಕರಿಗೆ ಸವಾಲು ಹಾಕಿದರಲ್ಲದೆ, ಒಂದು ವೇಳೆ ನಾಳೆಯೇ ವಿಧಾನಸಭೆ ಚುನಾವಣೆ ನಡೆದರೆ ಕಾಂಗ್ರೆಸ್ ಗೆಲುವು ಸಾಧಿಸಿ, ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು. ಯುಡಿಯೂರಪ್ಪ…

ಸರ್ಕಾರ ವಿಸರ್ಜನೆಗೆ ಸಿದ್ದ ಸಲಹೆ; ಕೈ ನಾಯಕರಿಗೆ ಬಿಜೆಪಿ ಮುಖಂಡರ ಗುದ್ದು

ಬೆಂಗಳೂರು: ರಾಜ್ಯ ಸರಕಾರವನ್ನು ವಿಸರ್ಜಿಸಬೇಕು ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸಲಹೆ ಬಗ್ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರನ್ನು ಬಿಜೆಪಿ ನಾಯಕರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಭಾರತೀಯ ಜನತಾ ಪಕ್ಷದ ರಾಜ್ಯ ಎಸ್.ಸಿ.ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಸ್ತುತ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯರವರು ಸ್ವತಃ ರಾಜಕೀಯ ನಿವೃತ್ತಿ ಪಡೆಯುವುದು ಸೂಕ್ತ ಎಂದು ತಿರುಗೇಟು ನೀಡಿದರು. ಕಾಂಗ್ರೆಸ್ ನಾಯಕರಾದ ಕೆ.ಎಚ್.ಮುನಿಯಪ್ಪ, ಮಲ್ಲಿಕಾರ್ಜುನ ಖರ್ಗೆ, ಮಹಾದೇವಪ್ಪ ಅವರ ಸೋಲಿಗೆ ಸಿದ್ದರಾಮಯ್ಯ ಅವರೇ ಕಾರಣ ಎಂದು ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ದಾವಣಗೆರೆಯಲ್ಲಿ ಮೋರ್ಚಾದ ಕಾರ್ಯಕಾರಿಣಿ ದಾವಣಗೆರೆಯಲ್ಲಿ ಈ ತಿಂಗಳ 6ರಂದು ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ ಎಂದು ಅವರು ತಿಳಿಸಿದರು.ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಲಾಲ್ ಸಿಂಗ್ ಆರ್ಯ ಅವರು ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆ ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ.…

ಕೇಂದ್ರದಿಂದ ಎಸ್‌ಸಿ ಮಕ್ಕಳಿಗೆ ಸ್ಕಾಲರ್‌ಶಿಪ್ ವರದಾನ

ಬೆಂಗಳೂರು: ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್‌ಗೆ 59,048 ಕೋಟಿ ರೂಪಾಯಿ ನೀಡಲು ಕೇಂದ್ರ ಸರಕಾರ ಮುಂದಾಗಿದ್ದು ಇದು ಬಡ ವಿದ್ಯಾರ್ಥಿಗಳಿಗೆ ವರದಾನದಂತೆ ಕಾರ್ಯ ನಿರ್ವಹಿಸಲಿದೆ ಎಂದು ಭಾರತೀಯ ಜನತಾ ಪಕ್ಷದ ರಾಜ್ಯ ಎಸ್.ಸಿ.ಮೋರ್ಚಾ ಅಧ್ಯಕ್ಷರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ.. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರದ ಈ ಕ್ರಮವು ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ಬಡ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ಸೂಚಿಸಿದರು. ಅನುದಾನವು ಪ್ರತಿವರ್ಷ ಶೇ 5ರಷ್ಟು ಹೆಚ್ಚಳವಾಗಲಿದೆ. ಮುಂದಿನ ಐದು ವರ್ಷಗಳಲ್ಲಿ ನಾಲ್ಕು ಕೋಟಿಗೂ ಅಧಿಕ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಇದರಿಂದ ಪ್ರಯೋಜನವಾಗಲಿದ್ದು, ಸಾಮಾಜಿಕ ಸಮಾನತೆಯ ಕನಸು ನನಸಾಗಲು ಮಹೋನ್ನತ ಕೊಡುಗೆ ನೀಡಲಿದೆ. 2020-21ರಲ್ಲಿ ಕರ್ನಾಟಕಕ್ಕೆ 179.3 ಕೋಟಿ, ಬಳಿಕ ಪ್ರತಿವರ್ಷ ಶೇ 5ರಷ್ಟು…

ಬಿಎಸ್‌ವೈ ಬದಲಾವಣೆ ಇಲ್ಲ ಎಂದ ಬಿಜೆಪಿ ಹೈಕಮಾಂಡ್

ಬೆಂಗಳೂರು: ನಿತ್ಯವೂ ಒಂದಿಲ್ಲೊಂದು ವಿದ್ಯಮಾನಕ್ಕೆ ಸಾಕ್ಷಿಯಾಗುತ್ತಿರುವ ರಾಜ್ಯ ಭಾರತೀಯ ಜನತಾ ಪಕ್ಷದಲ್ಲಿ ಸಿಎಂ ಬದಲಾವಣೆಯ ಮಾತುಗಳನ್ನೂ ತಳ್ಳಿಹಾಕುವಂತಿಲ್ಲ. ಆದರೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ನೀಡಿದ ವಿಶೇಷ ಸಂದರ್ಶನದಲ್ಲಿ ಗೊತ್ತಾದ ಸಂಗತಿಗಳು ಅಚ್ಚರಿ ಹಾಗೂ ಕುತೂಹಲಕಾರಿ ಬೆಳವಣಿಗೆಗಳತ್ತ ಬೆಳಕುಚೆಲ್ಲಿದೆ. ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾಗ್ತಾರ ಎಂಬ ಪ್ರಶ್ನೆಗೆ ತಮ್ಮದೇ ಶೈಲಿಯಲ್ಲಿ ಉತ್ತರಿಸಿರುವ ರಾಜ್ಯ ಬಿಜೆಪಿ ಯಲುಸ್ತುವಾರಿ ನಾಯಕ ಅರುಣ್ ಸಿಂಗ್, ಅದೇನಿದ್ದರೂ ವದಂತಿಗಳು. ಯಡಿಯೂರಪ್ಪ ಅವರ ರಾಜೀನಾಮೆಗೆ ಹೈಕಮಾಂಡ್ ಯಾವುದೇ ಡೆಡ್‌ಲೈನ್ ನೀಡಿಲ್ಲ. ಅವರು ಈ ವರೆಗೂ ಮುಖ್ಯಮಂತ್ರಿಯಾಗಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಶಹಬ್ಬಾಸ್‌ಗಿರಿಯ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಯಡಿಯೂರಪ್ಪ ಪ್ರಬಲ ನಾಯಕರಾಗಿದ್ದಾರೆ. ಹಾಗಾಗಿ ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಅರುಣ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ವಿಚಾರದಲ್ಲಿ ಗೊಂದಲದ ಹೇಳಿಕೆಗಳನ್ನು ನೀಡುತ್ತಿರುವ ಶಾಸಕ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳುವ ಚಿಂತನೆಯಿದೆ ಎಂದೂ…

ಅಲ್ಲಿ ‘ಧಗ ಧಗ’ ಡೈಲಾಗ್.. ಇಲ್ಲಿ ‘ಧಗ ಧಗ’ ಸಾಂಗ್..

ಕೆಜಿಎಫ್ ಚಿತ್ರದಲ್ಲಿ ‘ಧಗ ಧಗ’ ಡೈಲಾಗ್ ಭಾರೀ ಫೇಮಸ್ ಆಗಿತ್ತು. ಇದೀಗ ಅದೇ ಡೈಲಾಗ್ ಸಾಂಗ್ ಆಗಿ ಬಿಡುಗಡೆಯಾಗಿದೆ. ರಾಕಿ ಬಾಯ್ ಯಶ್ ಅವರನ್ನು ಹೊಗಳುವ ‘ಧಗ ಧಗ’ ವೀಡಿಯೋ ಸ್ಯಾಂಗ್ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ತಾಗಿ ಸದ್ದು ಮಾಡುತ್ತಿದೆ.

ಶೀಘ್ರದಲ್ಲೇ ಬರಲಿದೆ ‘ದೃಶ್ಯಂ 2’; ಟೀಸರ್ ರಂಜನೆ

ಈ ಹಿಂದೆ ಬಾಕ್ಸ್ ಆಫೀಸ್ ಚಿಂದಿ ಮಾಡಿರುವ ‘ದೃಶ್ಯಂ 2.. ಇದೀಗ ಎರಡನೇ ಭಾಗವೂ ತೆರೆಗೆ ಬರಲು ಸಜ್ಜಾಗುತ್ತಿದೆ. ಮಲಯಾಳಂ ನ ಖ್ಯಾತ ನಟ ಮೋಹನ್ ಲಾಲ್ ಅಭಿನಯದ ‘ದೃಶ್ಯಂ 2’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ಶೀಘ್ರವೇ ಬಿಡುಗಡೆಯಾಗಲಿದೆಯಂತೆ.

ಶಾನ್ವಿ ಶ್ರೀವಾಸ್ತವರ ‘ಕಸ್ತೂರಿ ಮಹಲ್‍’.. ಸಕತ್ ಮೆಚ್ಚುಗೆ

ನೂತನ ವರ್ಷಾರಂಭದ ಕ್ಷಣದಲ್ಲಿ ‘ಕಸ್ತೂರಿ ಮಹಲ್‍’ ಟೀಸರ್ ಅನಾವರಣವಾಗಿರುವುದು ಎಲ್ಲರಿಗೂ ಗೊತ್ತು. ಖ್ಯಾತ ನಿರ್ದೇಶಕ ದಿನೇಶ್ ಬಾಬು ನಿರ್ದೇಶನದ 50ನೇ ಚಿತ್ರ ಇದಾಗಿದ್ದು, ಶಾನ್ವಿ ಶ್ರೀವಾಸ್ತವ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಟೀಸರ್ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ಮೆಚ್ಚುಗೆ ಗಳಿಸುತ್ತಿದೆ.

ಭಾರತದಲ್ಲಿ ‘ರೂಪಾಂತರಿ’ ಸೋಂಕಿತರ ಸಂಖ್ಯೆ 29ಕ್ಕೆ ಏರಿಕೆ

ದೆಹಲಿ: ಬ್ರಿಟನ್ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಕೋಲಾಹಲ ಸೃಷ್ಟಿಸಿರುವ ಕೊರೋನಾ ರೂಪಾಂತರಿ ಭಾರತದಲ್ಲೂ ತಲ್ಲಣ ಸೃಷ್ಟಿಸಿದೆ. ಈರೋಪಾಂತರಿ ಸೋಂಕಿತರ ಸಂಖ್ಯೆ ಭಾರತದಲ್ಲೂ 29ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಶುಕ್ರವಾರ ಮತ್ತೆ 4 ಹೊಸ ರೂಪಾಂತರಿ ಕೋವಿಡ್ ಸೋಂಕು ಪ್ರಕರಣಗಳು ದಾಖಲಾಗಿದೆ. ದೆಹಲಿಯ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ (ಎನ್‌ಸಿಡಿಸಿ) ಲ್ಲಿ 8 ಜನರ ಮಾದರಿಗಳಲ್ಲಿ ರೂಪಾಂತರಿತ ಬ್ರಿಟನ್ ಸೋಂಕು ಪತ್ತೆಯಾಗಿದೆ. ಇತ್ತ ಬೆಂಗಳೂರಿನ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ ಅನುಕ್ರಮವಾಗಿದೆ ಆಸ್ಪತ್ರೆ (ನಿಮ್ಹಾನ್ಸ್)ಯ್ಲಲೂ 10 ಮಾದರಿಗಳಲ್ಲಿ ಬ್ರಿಟನ್ ದೃಢವಾಗಿದೆ.

ಕೃಷಿ ಕಾಯ್ದೆ ವಿವಾದ; ಸಂಧಾನ ವಿಫಲವಾದರೆ ಮಾಲ್, ಬಂಕ್ ಬಂದ್; ರೈತರ ಎಚ್ಚರಿಕೆ

ದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಇದೀಗ ಕೇಂದ್ರ ಸರ್ಕಾರಕ್ಕೆ ಮತ್ತೊಂದು ಖಡಕ್ ಸಂದೇಶ ರವಾನಿಸಿದ್ದಾರೆ. ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟ ಹಿನ್ನೆಲೆಯಲ್ಲಿ ಜನವರಿ 4ರ ಸಂಧಾನ ಮಾತುಕತೆ ವಿಫಲವಾದರೆ ಹರ್ಯಾಣದಲ್ಲಿ ಮಾಲ್, ಪೆಟ್ರೋಲ್ ಬಂಕ್’ಗಳನ್ನು ಬಂದ್ ಮಾಡಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ. ಈ ವರೆಗೆ ನಡೆದ ಸಭೆಗಳಲ್ಲಿ ನಮ್ಮ ಬೇಡಿಕೆಯ ಶೇ.5ರಷ್ಟು ವಿಷಯಗಳ ಬಗ್ಗೆ ಮಾತ್ರ ಚರ್ಚಿಸಲಾಗಿದೆ. ಹಾಗಾಗಿ ಜನವರಿ ೪ ರಂದು ಸರ್ಕಾರ ತಮ್ಮ ಪರವಾಗಿ ನಿರ್ಧಾರ ತೆಗೆದುಕೊಳ್ಳದಿದ್ದರೆ ದೃಢವಾದ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ರೈತ ಮುಖಂಡ ವಿಕಾಸ್ ಹೇಳಿದ್ದಾರೆ.