ಸಿಎಂ ತಾವರಲ್ಲೇ ಮತ್ತೊಂದು ಸಮರ ತಂತ್ರಕ್ಕೆ ಬಿಜೆಪಿ ತಯಾರಿ

ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಹುಪಾಲು ಬೆಂಬಲಿಗರ ಗೆಲುವಿನ ಸಂಭ್ರಮದ್ಲಲಿರುವ ಬಿಜೆಪಿ ಮತ್ತೊಂದು ಮುಂದಿನ ಸಮರ ತಂತ್ರಕ್ಕೆ ಸಿದ್ಧತೆ ನಡೆಸುತ್ತಿದೆ. ಈ ಸಂಬಂಧ ಸಿಎಂ ತವರಲ್ಲಿ ಪಕ್ಷದ ವಿಶೇಷ ಕಾರ್ಯಕಾರಿಣಿ ನಡೆಯಲಿದೆ. ಭಾರತೀಯ ಜನತಾ ಪಕ್ಷದ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯು ಜನವರಿ 3ರಂದು ಶಿವಮೊಗ್ಗದ ಪೆಸಿಟ್ ಕಾಲೇಜಿನ ಆವರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ನಡೆಯಲಿದೆ. ಜನವರಿ 2ರಂದು ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್‌ಕುಮಾರ್ ಸುರಾಣಾ ತಿಳಿಸಿದ್ದಾರೆ. ರಾಜ್ಯ ಪ್ರಭಾರಿಗಳೂ ಆದ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಾಲ್ಗೊಳ್ಳಲಿದ್ದಾರೆ. ಪಕ್ಷದ ರಾಜ್ಯ ಪದಾಧಿಕಾರಿಗಳು, ಪ್ರಕೋಷ್ಠಗಳ ಸಂಚಾಲಕರು, ಜಿಲ್ಲಾಧ್ಯಕ್ಷರು, ವಿಭಾಗ ಪ್ರಭಾರಿಗಳು ಸೇರಿದಂತೆ ಸುಮಾರು 180…

ಸ್ಮಾರ್ಟ್ ಸಿಟಿ ಕಾಮಗಾರಿ ಅವಾಂತರಕ್ಕೆ ಸಿಎಂ ಬ್ರೇಕ್?

ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ಚಾಲನೆ ನೀಡಿರುವ ಸ್ಮಾರ್ಟ್ ಸಿಟಿ ಯೋಜನೆಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೊಸ ವರ್ಷದ ಮೊದಲನೆಯ ದಿನದಂದು ಬೆಂಗಳೂರು ಹೊರವಲಯದಲ್ಲಿ ಆಯೋಜಿಸಲಾಗಿದ್ದ ಉನ್ನತಾಧಿಕಾರಿಗಳ ಸಭೆಯಲ್ಲಿ ಮಾತಾನಾಡಿದ ಅವರು ವಿದ್ಯುತ್ ಸರಬರಾಜು ಕಂಪನಿಗಳು, ನಗರ ಸಭೆ ಹಾಗೂ ಪಾಲಿಕೆಗಳು, ಸಂಚಾರಿ ಪೊಲೀಸರು ಸಮನ್ವಯ ಸಾಧಿಸಿ ಸ್ಮಾರ್ಟ್ ಸಿಟಿ ಯೋಜನೆಯನ್ನು ಪರಿಣಾಮಕಾರಿಯಾಗಿ ಸಾಕಾರಗೊಳಿಸಲು ತುರ್ತು ಕ್ರಮವಹಿಸಬೇಕು ಎಂದು ಹೇಳಿದರು. ಮುಂದಿನ ಆಯವ್ಯಯದಲ್ಲಿ ಅಭಿವೃದ್ಧಿ ಚಟುವಟಿಕೆಗಳಿಗೆ ಒತ್ತು ನೀಡಲು ಯೋಜಿಸಿರುವ ಹಿನ್ನಲೆಯಲ್ಲಿ ಇಲಾಖವಾರು ರೂಪಿಸಬಹುದಾದ ಜನಪರ ಯೋಜನೆಗಳ ನೀಲನಕ್ಷೆಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚನೆ ನೀಡಿದ ಅವರು 2022 ರ ಒಳಗೆ ರಾಜ್ಯದ ರಾಜಧಾನಿ ಬೆಂಗಳೂರು ಮಾತ್ರವಲ್ಲದೆ ಇಡೀ ಕರ್ನಾಟಕ ರಾಜ್ಯವನ್ನು ಅಭಿವೃದ್ಧಿಯ ನಕ್ಷೆಯಲ್ಲಿ ಹಾಗೂ ಸಮೃದ್ಧಿಯ ಕಕ್ಷೆಯಲ್ಲಿ ಕೊಂಡುಯ್ಯೊಲು ಅಧಿಕಾರಿಗಳು ಮುಂದಾಗಬೇಕು ಎಂದರು. ಕರ್ನಾಟಕ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿ ರೂಪಿಸಲು ಸರ್ಕಾರಕ್ಕೆ ಬೆನ್ನೆಲುಬಾಗಿ…

‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’; ಪೋಷಕರಿಗೆ ಸಚಿವರಿಂದ ಧೈರ್ಯ

ಬೆಂಗಳೂರು: ಕೊರೋನಾ ಹಾವಳಿ ಸಂದರ್ಭದಲ್ಲೇ ಶಾಲೆಗಳ ಆರಂಭ ಬಗ್ಗೆ ಸಾರ್ವಜನಿಕವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದ್ದರೆ, ಇನ್ನೊಂದೆಡೆ ಮಕ್ಕಳ ಪೋಷಕರಿಗೆ ಧೈರ್ಯ ತುಂಬುವ ಪ್ರಯತ್ನ ಸಚಿವರ ಕಡೆಯಿಂದ ಸಾಗಿದೆ. SSLC ಪರೀಕ್ಷೆ ಸಂದರ್ಭದಲ್ಲೂ ಇದೇ ರೀತಿ ಆತಂಕ ಇದ್ದದ್ದು ಸಹಜ. ಆದರೆ ಅತ್ಯಂತ ಯಶಸ್ವಿಯಾಗಿ ಪರೀಕ್ಷೆ ನಡೆಸುವ ಮೂಲಕ ಸರ್ಕಾರ ತನ್ನ ಬದ್ಧತೆ ನಿರೂಪಿಸಿತ್ತು. ಈಗಲೂ ಸಹ ಮಕ್ಕಳ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಸಕಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’ ಎಂಬುದೇ ಸರ್ಕಾರದ ಧ್ಯೇಯ ಎಂದು ಹೇಳಿದ್ದಾರೆ. ಪೋಷಕರಲ್ಲಿ, ಅದರಲ್ಲೂ ವಿಶೇಷವಾಗಿ ಗ್ರಾಮೀಣ ಭಾಗದ ಪೋಷಕರಲ್ಲಿ ನನ್ನ ಮನವಿ. ಮಕ್ಕಳನ್ನು ಯಾವುದೇ ಆತಂಕವಿಲ್ಲದೆ ಶಾಲೆಗೆ ಕಳುಹಿಸಿ. ಮಕ್ಕಳ ಆಗಮನಕ್ಕೆ ಅವರ ಶಾಲೆ ಕಾಯುತ್ತಿದೆ, ಶಿಕ್ಷಕರು ಮಕ್ಕಳನ್ನು ಸ್ವಾಗತಿಸಲು ಎದುರು ನೋಡುತ್ತಿದ್ದಾರೆ.…

ಪಾದರಾಯನಪುರ; ರಸ್ತೆ ನಾಮಕರಣ ಪ್ರಕ್ರಿಯೆ ಸ್ಥಗಿತ

ಬೆಂಗಳೂರು: ಪಾದರಾಯನಪುರ ವಾರ್ಡ್’ನ ಪ್ರಮುಖ ರಸ್ತೆಗಳಿಗೆ ಮುಸ್ಲಿಂ ಗಣ್ಯರ ಹೆಸರಿಡುವ ಪ್ರಸ್ತಾಪಕ್ಕೆ ಸಂಸದರ ಅಸ್ಕೇಪಾ ವ್ಯಕ್ತವಾಗುತ್ತಿದ್ದಂತೆಯೇ ಬಿಬಿಎಂಪಿ ಕೂಡಾ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ಪಾದರಾಯಣಪುರ 9ನೇ ರಸ್ತೆ ಮತ್ತು 2 ವೃತ್ತಗಳಿಗೆ ಸಮಾಜ ಸೇವಕರ ಹೆಸರಿಡಲು ಸಲ್ಲಿಸಿರುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದ್ದು, ಈ ಹಿನ್ನೆಲೆಯಲ್ಲಿ ನಾಮಕರಣ ಪ್ರಕ್ರಿಯೆ ರದ್ದುಗೊಳಿಸುವಂತೆ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಅವರು ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಗೆ ಪ್ರಸ್ತಾಪವನೆ ಸಲ್ಲಿಸಿದ್ದಾರೆ. ಸೆಪ್ಟೆಂಬರ್ 8 ರಂದು ನಡೆದ ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಪಾದರಾಯನಪುರ ವಾರ್ಡ್’ನ 9 ರಸ್ತೆ ಹಾಗೂ ಎರಡು ವೃತ್ತಗಳಿಗೆ ಸಮಾಜ ಸೇವಕರ ಹೆಸರುಗಳ ನಾಮಕರಣಕ್ಕೆ ನಿರ್ಣಯ ಅಂಗೀಕರಿಸಲಾಗಿತ್ತು. ಈ ನಿರ್ಧಾರಕ್ಕೆ ಸಂಸದರಾದ ಅನಂತ ಕುಮಾರ್ ಹೆಗಡೆ, ಪಿಸಿ ಮೋಹನ್, ತೇಜಸ್ವಿ ಸೂರ್ಯ ಹಾಗೂ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ನಾಮಕರಣ ಪ್ರಕ್ರಿಯೆ ರದ್ದುಗೊಳಿಸುವಂತೆ ಬಿಬಿಎಂಪಿ ಆಯುಕ್ತರು ಸರ್ಕಾರಕ್ಕೆ…

‘ಪ್ರಣಯರಾಜ’ ಟೀಸರ್; ಪಂಚಿಂಗ್ ಡೈಲಾಗ್

‘ಪ್ರಣಯರಾಜ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಭುವನ್ ಅಭಿನಯದ ಈ ಸಿನಿಮಾ ಪಂಚಿಂಗ್ ಡೈಲಾಗ್’ಗಳಿಂದ ಗಮನಸೆಳೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ಲೈಕ್ ಗಿಟ್ಟಿಸಿಕೊಳ್ಳುತ್ತಿದೆ.

ಸೀಮಂತ್ ಕುಮಾರ್’ಗೆ ಎಸಿಬಿ ಸಾರಥ್ಯ; ಮಂಗಳೂರು ಕಮಿಷನರ್ ಆಗಿ ಶಶಿಕುಮಾರ್

ಬೆಂಗಳೂರು: ಹೊಸ ವರ್ಷದ ಸಂಭ್ರಮದ ನಡುವೆಯೇ ಸೀಮಂತ್ ಕುಮಾರ್ ಸಿಂಗ್ ಸಹಿತ ಹಲವು ಮಂದಿ ಹಿರಿಯ ಅಧಿಕಾರಿಗಳು ನೂತನ ವರ್ಷಾರಂಭದಲ್ಲಿ ಭಡ್ತಿ ಹೊಂದಿದ್ದಾರೆ. ಹೆಚ್ಚುವರಿ ಪೊಲೀಸ್ ನಿರ್ದೇಶಕರಾಗಿ ಮುಂಬಡ್ತಿಯಾಗಿರುವ ಸೀಮಂತ್ ಕುಮಾರ್ ಸಿಂಗ್ ಅವರಿಗೆ ಭ್ರಷ್ಟಾಚಾರ ನಿಗ್ರಹ ದಳದ ಸಾರಥ್ಯವನ್ನು ಸರ್ಕಾರ ವಹಿಸಿದೆ. ಈ ವರೆಗೂ ಕೇಂದ್ರ ವಲಯ ಪೊಲೀಸ್ ಮಹಾ ನಿರೀಕ್ಷಕರಾಗಿದ್ದ ಸೀಮಂತ್ ಕುಮಾರ್ ಸಿಂಗ್ ವರು, ಬೆಂಗಳೂರು ಹೊರವಲಯದಲ್ಲಿರುವ ಟೊಯೋಟಾ ಕಾರ್ಮಿಕ ಬಿಕ್ಕಟ್ಟು, ವಿಸ್ಟ್ರಾನ್ ಸಂಸ್ಥೆಯ ವಿವಾದ, ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣಗಳ ಕಗ್ಗಂಟು ಸಂದರ್ಭಗಳಲ್ಲಿ ಕೈಗೊಂಡ ನಿಷ್ಟುರ ಕ್ರಮಗಳಿಂದಾಗಿ ದೇಶದ ಗಮನ ಸೆಳೆದಿದ್ದಾರೆ. ಇದೀಗ ಅವರು ಎಡಿಜಿಪಿಯಾಗಿ ಮುಂಬಡ್ತಿಯಾಗುತ್ತಿದ್ದಂತೆಯೇ ಎಸಿಬಿಯ ಮುಖ್ಯಸ್ಥ ಹುದ್ದೆ ಸಿಕ್ಕಿದೆ. ಇದೇ ವೇಳೆ ಹಿರಿಯ ಐಪಿಎಸ್ ಅಧಿಕಾರಿ ಏನ್.ಶಶಿ ಕುಮಾರ್ ಅವರಿಗೂ ಸರ್ಕಾರ ಪ್ರಮೋಷನ್ ಗಿಫ್ಟ್ ನೀಡಿದೆ. ಉಪ ಪೊಲೀಸ್ ಮಹಾ ನಿರೀಕ್ಷಕ ಹುದ್ದೆಗೆ ಭಡ್ತಿ ಪಡೆದಿರುವ ಶಶಿಕುಮಾರ್…

ಪೊಲೀಸ್ ಪಾಳಯದಲ್ಲೂ ಹೊಸ ವರ್ಷದ ಹರ್ಷ; ಹಲವರಿಗೆ ಬಡ್ತಿಯ ಗಿಫ್ಟ್

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲೂ ಹೊಸ ವರ್ಷದ ಸಂಭ್ರಮ. ಸೀಮಂತ್ ಕುಮಾರ್ ಸಿಂಗ್ ಸಹಿತ ಹಲವು ಮಂದಿ ಹಿರಿಯ ಅಧಿಕಾರಿಗಳು ನೂತನ ವರ್ಷಾರಂಭದಲ್ಲಿ ಭಡ್ತಿ ಹೊಂದಿದ್ದಾರೆ. ಮಹತ್ವದ ಆದೇಶದಲ್ಲಿ ಎಡಿಜಿಪಿ ಡಾ.ಪಿ.ರವೀಂದ್ರ ಅವರು ಪೊಲೀಸ್ ಮಹಾನಿರ್ದೆಶಕರಾಗಿ ಭಡ್ತಿ ಹೊಂದಿದರೆ, ಹೆಚ್ಚುವರಿ ಪೊಲೀಸ್ ನಿರ್ದೇಶಕರಾಗಿ ಮುಂಬಡ್ತಿಯಾಗಿದ್ದು, ಭ್ರಷ್ಟಾಚಾರ ನಿಗ್ರಹ ದಳದ ಸಾರಥ್ಯವನ್ನು ಸರ್ಕಾರ ಅವರಿಗೆ ವಹಿಸಿದೆ. ಈ ವರೆಗೂ ಕೇಂದ್ರ ವಲಯ ಪೊಲೀಸ್ ಮಹಾ ನಿರೀಕ್ಷಕರಾಗಿದ್ದ ಸೀಮಂತ್ ಕುಮಾರ್ ಸಿಂಗ್ಅವರು, ಬೆಂಗಳೂರು ಹೊರವಲಯದಲ್ಲಿರುವ ಟೊಯೋಟಾ ಕಾರ್ಮಿಕ ಬಿಕ್ಕಟ್ಟು, ವಿಸ್ಟ್ರಾನ್ ಸಂಸ್ಥೆಯ ವಿವಾದ, ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣಗಳ ಕಗ್ಗಂಟು ಸಂದರ್ಭಗಳಲ್ಲಿ ಕೈಗೊಂಡ ನಿಷ್ಟುರ ಕ್ರಮಗಳಿಂದಾಗಿ ದೇಶದ ಗಮನ ಸೆಳೆದಿದ್ದಾರೆ. ಇದೀಗ ಅವರು ಎಡಿಜಿಪಿಯಾಗಿ ಮುಂಬಡ್ತಿಯಾಗುತ್ತಿದ್ದಂತೆಯೇ ಎಸಿಬಿಯ ಮುಖ್ಯಸ್ಥ ಹುದ್ದೆ ಸಿಕ್ಕಿದೆ. ಇದೇ ವೇಳೆ ಪವಾರ್ ಪ್ರವೀಣ್ ಮಧುಕರ್, ಎನ್ ಸತೀಶ್ ಕುಮಾರ್ ಸಹಿತ ಇನ್ನೂ ಕೆಲವು ಐಪಿಎಸ್ ಅಧಿಕಾರಿಗಳು…

ತುಮಕೂರು ಕೈಗಾರಿಕಾ ನೋಡ್; ಕರ್ನಾಟಕದಲ್ಲಿ ಆರ್ಥಿಕತೆ ಉತ್ತೇಜನದ ನಿರೀಕ್ಷೆ

ಬೆಂಗಳೂರು: ಕರ್ನಾಟಕವನ್ನು ವಿಶ್ವದರ್ಜೆಯ ಔದ್ಯಮಿಕ ಜಾಲವಾಗಿ ಅಭಿವೃದ್ಧಿ ಪಡಿಸಲು ಚೆನೈ – ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನ ಭಾಗವಾಗಿ ತುಮಕೂರಿನಲ್ಲಿ ಕೈಗಾರಿಕಾ ನೋಡ್‌ ನಿರ್ಮಾಣಕ್ಕೆ ಕೇಂದ್ರ ಸರ್ಕಾರ 1,701.81 ಕೋಟಿ ರೂ. ಮೀಸಲಿರಿಸಿದ್ದು, ಇದರಿಂದ ಅಂದಾಜು 88,500 ಜನರಿಗೆ ಉದ್ಯೋಗ ಸೃಷ್ಟಿಯಾಗಲಿದೆ. ಈ ಯೋಜನೆಗೆ ಶೀಘ್ರವಾಗಿ ಅನುಮೋದನೆ ನೀಡಿದ ಕೇಂದ್ರ ಸರಕಾರದ ನಿರ್ಧಾರವನ್ನು ಸ್ವಾಗತಿಸಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌, ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಪುಟ ಸಹದ್ಯೋಗಿಗಳಿಗೆ ರಾಜ್ಯ ಸರಕಾರದ ವತಿಯಿಂದ ಅಭಿನಂದನೆ ಸಲ್ಲಿಸಿದ್ದಾರೆ. ತುಮಕೂರಿನಲ್ಲಿ ಕೈಗಾರಿಕಾ ನೋಡ್‌ ನಿರ್ಮಿಸಬೇಕೆಂಬ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ (ಡಿಪಿಐಐಟಿ)ಯ ಪ್ರಸ್ತಾವನೆಯನ್ನು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಆರ್ಥಿಕ ವ್ಯವಹಾರಗಳ ಸಂಪುಟ ಸಭೆ ಅಂಗೀಕರಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವಿಷಯಗಳ ಸಚಿವ ಸಂಪುಟ ಸಮಿತಿಯ ಈ…

ರಾಜ್ಯದಲ್ಲಿ ಸಿಇಟಿ ಕೌನ್ಸೆಲಿಂಗ್; ಜ.15ರವರೆಗೆ ಕಾಲಾವಕಾಶಕ್ಕೆ ಎಐಸಿಟಿಇ ಅನುಮತಿ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಎಂಜಿನಿಯರಿಂಗ್ ಕೋರ್ಸ್ ಗಳ ಖಾಲಿ ಇರುವ ಸೀಟುಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಜನವರಿ ಜ.15ರವರೆಗೆ ಕಾಲಾವಕಾಶ ವಿಸ್ತರಿಸಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿ (ಎಐಸಿಟಿಇ) ಅನುಮತಿ ಈ ಹಿನ್ನೆಲೆಯಲ್ಲಿ, ಮತ್ತೊಂದು ಸುತ್ತಿನ ಕೌನ್ಸೆಲಿಂಗ್ ನಡೆಸಲಾಗುವುದು. ಕೌನ್ಸೆಲಿಂಗ್ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಶೀಘ್ರವೇ ಪ್ರಕಟಿಸಲಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಪತ್ರಿಕಾ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಇದರಿಂದ ಈಗಾಗಲೇ ಎಂಜಿನಿಯರಿಂಗ್ ಸೀಟು ಪಡೆದಿರುವವರಿಗೆ ಕೋರ್ಸ್ ಇಷ್ಟವಿಲ್ಲದಿದ್ದರೆ ಸೀಟುಗಳನ್ನು ವಾಪಸ್ಸು ಮಾಡಲು ಕೊನೆಯ ಬಾರಿಗೆ ಅವಕಾಶ ನೀಡಲಾಗುತ್ತದೆ. ಆದರೆ ಮುಂದೆ ನಡೆಯಲಿರುವ ಮಾಪ್-ಅಪ್ ಸುತ್ತಿನಲ್ಲಿ ಸೀಟು ಪಡೆದವರಿಗೆ ಅದನ್ನು ಹಿಂದಿರುಗಿಸಲು ಖಂಡಿತಾ ಅವಕಾಶ ಇರುವುದಿಲ್ಲ. ಅವರು ನಿಗದಿತ ಶುಲ್ಕ ಪಾವತಿಸಿ ಪ್ರವೇಶ ಪಡೆಯಲೇಬೇಕಾಗುತ್ತದೆ. ಇಲ್ಲದಿದ್ದರೆ ನಿಗದಿತ ಶುಲ್ಕದ ಐದು ಪಟ್ಟು ಮೊತ್ತವನ್ನು ದಂಡವಾಗಿ ಪಾವತಿಸಬೇಕಾಗುತ್ತದೆ ಎಂದು ಅಶ್ವಥ್ಥ ನಾರಾಯಣ ಅವರು…