ಬೆಂಗಳೂರು: ಉನ್ನತ ಶಿಕ್ಷಣ ಖಾತೆಯನ್ನು ಹೊಂದಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೊಸ ವರ್ಷಕ್ಕೆ ಮುನ್ನಾ ದಿನವಾದ ಗುರುವಾರ ತಮ್ಮ ಮುಂದೆ ಇದ್ದ ಎಲ್ಲ ಕಡತಗಳನ್ನು ವಿಲೇವಾರಿ ಮಾಡಿದ್ದಾರೆ. ಈ ಮೂಲಕ ಅವರು 2020 ವರ್ಷವನ್ನು ಮುಕ್ತಾಯಗೊಳಿಸಿ ಒಂದು ಅರ್ಥಪೂರ್ಣ ಸಾಂಪ್ರದಾಯಕ್ಕೆ ನಾಂದಿ ಹಾಡಿದರಲ್ಲದೆ, ರಾತ್ರಿ ಒಂಭತ್ತು ಗಂಟೆವರೆಗೂ ಗೃಹ ಕಚೇರಿಯಲ್ಲೇ ಕೂತು ಬಾಕಿ ಇದ್ದ ಸುಮಾರು 40 ಕಡತಗಳನ್ನು ವಿಲೇವಾರಿ ಮಾಡುವುದರ ಮೂಲಕ ಹೊಸ ವರ್ಷವನ್ನು ಸ್ವಾಗತಿಸಿದರು 2021 ವರ್ಷವನ್ನು ಇ-ಆಫೀಸ್ ವ್ಯವಸ್ಥೆಯ ಮೂಲಕ ನೂತನ ಆರಂಭಕ್ಕೆ ಎದುರು ನೋಡುತ್ತಿದ್ದೇನೆ. ಜನಪರ ಕಾರ್ಯಗಳ ಅನುಷ್ಠಾನಕ್ಕೆ ಈ ರೀತಿಯಲ್ಲಿ ಕ್ಷಿಪ್ರ ಮತ್ತು ಪಾರದರ್ಶಕವಾಗಿ ಕೆಲಸ ಮಾಡಲು ಸದಾ ಬದ್ಧನಾಗಿದ್ದೇನೆ. ಇವತ್ತಿನವರೆಗೆ ಇದ್ದ ಎಲ್ಲ ಕಡತ ವಿಲೇವಾರಿ ಮಾಡಿದ್ದು, ನನ್ನ ವ್ಯಾಪ್ತಿಯ ಯಾವುದೇ ಇಲಾಖೆಯಲ್ಲಿ ಯಾವ ಕಡತವೂ ಬಾಕಿ ಬಿದ್ದಿಲ್ಲ. ಇದರಿಂದ ನನ್ನ ಕರ್ತವ್ಯದ ಬಗ್ಗೆ ಸಂಪೂರ್ಣತೆಯ ಭಾವ ಬಂದಿದೆ…
Month: January 2021
ಮಕ್ಕಳ ಸುರಕ್ಷತೆ ನಮ್ಮದು, ಶಾಲೆಗೆ ಧೈರ್ಯವಾಗಿ ಕಳಿಸಿ: ಸುರೇಶ್ ಕುಮಾರ್ ಮನವಿ
ಬೆಂಗಳೂರು: ಶಾಲೆಯಲ್ಲಿ ಮಕ್ಕಳ ಸುರಕ್ಷತೆಯ ಜವಾಬ್ದಾರಿ ನಮ್ಮದು, ಎಲ್ಲ ಪೋಷಕರು ಮಕ್ಕಳನ್ನು ಆಶೀರ್ವದಿಸಿ ಧೈರ್ಯವಾಗಿ ಶಾಲೆಗೆ ಕಳಿಸಿ, ಅವರ ಶೈಕ್ಷಣಿಕ ಭವಿಷ್ಯ ಉಜ್ವಲವಾಗಲಿ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ರಾಜ್ಯದ ಪೋಷಕರಲ್ಲಿ ಮನವಿ ಮಾಡಿದ್ದಾರೆ. ಜ. 1ರ ಶುಕ್ರವಾರದಿಂದ ಪ್ರಸ್ತುತ ಶೈಕ್ಷಣಿಕ ವರ್ಷದ 10 ಮತ್ತು 12ನೇ ತರಗತಿಗಳು ಸುರಕ್ಷಿತ ವಾತಾವರಣದಲ್ಲಿ ಆರಂಭವಾಗುತ್ತಿರುವ ಹಿನ್ನಲೆಯಲ್ಲಿ ಮುನ್ನಾ ದಿನವಾದ ಗುರುವಾರ ರಾಜ್ಯದ ಮಕ್ಕಳ ಪೋಷಕರಿಗೆ ಮನವಿ ಮಾಡಿಕೊಂಡಿರುವ ಅವರು, ಶಾಲೆಗಳಲ್ಲಿ ನಿಮ್ಮ ಮಕ್ಕಳನ್ನು ನಮ್ಮ ಮಕ್ಕಳಂತೆಯೇ ನೋಡಿಕೊಳ್ಳುತ್ತೇವೆ. ಶಾಲೆ ಮಕ್ಕಳ ಇನ್ನೊಂದು ಮನೆಯಾಗಿರಲಿದ್ದು, ಶಾಲಾ ವಿದ್ಯಾಲಯ ಸುರಕ್ಷಿತಾಲಯವಾಗಿರಲಿದೆ ಎಂದು ಭರವಸೆ ನೀಡುವೆ ಎಂದು ಅಭಯ ನೀಡಿದ್ದಾರೆ. ‘ಕೊರೋನಾ ಓಡಿಸೋಣ.. ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ…’ ಎಂಬ ಧ್ಯೇಯದೊಂದಿಗೆ ಆರಂಭವಾಗಲಿರುವ ಈ ಶೈಕ್ಷಣಿಕ ವರ್ಷ ಮಕ್ಕಳ ಬಾಳಿಗೆ ಒಂದು ಹೊಸ ಪರ್ವಕಾಲವಾಗಿ ಹೊರಹೊಮ್ಮಲಿದೆ. ಶಾಲೆಗಳಲ್ಲಿ ಮಕ್ಕಳ…
ಗ್ರಾಮ ಪಂಚಾಯಿತಿ ಫಲಿತಾಂಶ ಸಮಾಧಾನ ತಂದಿದೆ; ಡಿಕೆಶಿ
ಬೆಂಗಳೂರು: ‘ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಇನ್ನು ಪೂರ್ಣ ಪ್ರಮಾಣದಲ್ಲಿ ಬರಬೇಕಿದೆ. ಈವರೆಗಿನ ಫಲಿತಾಂಶದಲ್ಲಿ ಪಕ್ಷ ಬೆಂಬಲಿಸಿದ ಅಭ್ಯರ್ಥಿಗಳ ಸಾಧನೆ ಸಮಾಧಾನ ತಂದಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣಾ ಆಯೋಗ ಈ ಫಲಿತಾಂಶವನ್ನು ಯಾವುದೇ ಪಕ್ಷ ತಮ್ಮ ಗೆಲುವು ಎಂದು ಬಿಂಬಿಸಿಕೊಳ್ಳುವಂತಿಲ್ಲ ಎಂದು ವ್ಯಾಖ್ಯಾನ ನೀಡಿದೆ. ಮುಂದೆ ಜಿಲ್ಲಾ ಕಾಂಗ್ರೆಸ್ ಕಡೆಯಿಂದ ವರದಿ ತರಿಸಿಕೊಳ್ಳುತ್ತೇನೆ ಎಂದರು. ನನ್ನ ಕ್ಷೇತ್ರದಲ್ಲೇ ಬಿಜೆಪಿ ಗೆದ್ದಿದೆ ಎಂದು ಹೇಳುತ್ತಿದ್ದೀರಿ. ಅಲ್ಲೇ ಹೋಗಿ ಯಾವ ಪಕ್ಷ ಬಂದಿದೆ ಎಂದು ನೋಡೋಣ ಬನ್ನಿ. ನಾವು ಅವಿರೋಧವಾಗಿ ಆಯ್ಕೆ ಮಾಡುವ ಶಕ್ತಿ ಇದ್ದರೂ ಸ್ಪರ್ಧೆ ಇರಲಿ ಎಂದು ಸುಮ್ಮನೆ ಇದ್ದೇವೆ. ಬಿಜೆಪಿಯಲ್ಲಿ ಯಾವ ಆಂತರಿಕ ಸಮಸ್ಯೆ ಇದೆಯೋ ಗೊತ್ತಿಲ್ಲ ಹೀಗಾಗಿ ಅವರು ಈ ರೀತಿ ಗೆದ್ದಿದ್ದೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಗ್ರಾಮ ಪಂಚಾಯಿತಿ ರಚನೆಯಾಗಲಿ ಯಾರು ಗೆದ್ದಿದ್ದಾರೆ…
