ಮಾಜಿ ಸಚಿವ ಎಂ.ಸಿ. ಮಲ್ಲಪ್ಪ ಚೆನ್ನವೀರಪ್ಪ ಮನಗೂಳಿ ವಿಧಿವಶ

ಬೆಂಗಳೂರು: ಮಾಜಿ ಸಚಿವ ಎಂ.ಸಿ. ಮಲ್ಲಪ್ಪ ಚೆನ್ನವೀರಪ್ಪ ಮನಗೂಳಿ ವಿಧಿವಶರಾಗಿದ್ದಾರೆ. ಸಿಂಧಗಿ ಶಾಸಕರಾಗಿರುವ ಮಲ್ಲಪ್ಪ ಚೆನ್ನವೀರಪ್ಪ ಮನಗೂಳಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಜ. 9ರಂದು ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಎಂ.ಸಿ. ಮನಗೂಳಿ ಗುರುವಾರ ನಸುಕಿನ ಜಾವ 1ಗಂಟೆಗೆ ಕೊನೆಯುಸಿರೆಳೆದಿದ್ದಾರೆ.. ವಿಜಯಪುರದ ಸಿಂಧಗಿ ಕ್ಷೇತ್ರದಿಂದ ಜೆಡಿಎಸ್ ಶಾಸಕರಾಗಿದ್ದ ಅವರು ಪತ್ನಿ, ನಾಲ್ವರು ಗಂಡು ಮಕ್ಕಳು, ಒಬ್ಬ ಹೆಣ್ಣುಮಗಳು ಮತ್ತು ಮೊಮ್ಮಕ್ಕಳನ್ನ ಅಗಲಿದ್ದಾರೆ. ಜೆಎಚ್ ಪಟೇಲ್ ನೇತೃತ್ವದ ಜನತಾ ದಳ ಸರ್ಕಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದರು. ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದಲ್ಲೂ ಅವರು ತೋಟಗಾರಿಕಾ ಸಚಿವರಾಗಿದ್ದರು.  

Uncategorized

ವಿಧಾನಮಂಡಲ ಅಧಿವೇಶನ; 11 ವಿಧೇಯಕಗಳು ಮಂಡನೆ ಸಾಧ್ಯತೆ

ಬೆಂಗಳೂರು: ವಿಧಾನಮಂಡಲದ ಉಭಯ ಸದನಗಳ ಜಂಟಿ ಅಧಿವೇಶನ ತೀವ್ರ ಕುತೂಹಲ ಕೆರಳಿಸಿದೆ. ಒಂದೆಡೆ ಸಭಾಪತಿಗಳ ಆಯ್ಕೆ, ಹಾಗೂ ಹಲವು ವಿದೇಯಕಗಳ ಮಂಡನೆ ವಿಚಾರದಲ್ಲಿ ಆಡಳಿತ ಪ್ರತಿಪಕ್ಷಗಳ ನಡೆ ಹೇಗಿರುತ್ತೆ ಎಂಬ ಕುತೂಹಲ ಉಂಟಾಗಿದೆ. ಖಾತೆ ಹಂಚಿಕೆ ಗೊಂದಲ, ನಾಯಕತ್ವ ಬದಲಾವಣೆಯ ವದಂತಿ ಇತ್ಯಾದಿ ಆಂತರಿಕ ಬೆಳವಣಿಗೆಗಳ ನಡುವೆಯೇ ಈ ಅಧಿವೇಶನ ನಡೆಯುತ್ತಿದ್ದು ಪ್ರಮುಖವಾಗಿ, ಯಡಿಯೂರಪ್ಪ ವಿರುದ್ದದ ಡಿನೋಟಿಫಿಕೇಷನ್ ಪ್ರಕರಣ ಕೂಡಾ ಪ್ರತಿಧ್ವನಿಸುವ ಸಾಧ್ಯತೆಗಳಿವೆ. ಬೆಳಿಗ್ಗೆ 11 ಗಂಟೆಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಳಿಕ ಶಾಸಕ ಮುಂಗೋಳಿ, ವಿಧಾನಷರಿಷತ್’ನ ಉಪಸಭಾಪತಿ ಧರ್ಮೇಗೌಡ ಹಾಗೂ ಮಾಜಿ ಶಾಸಕರು ಮತ್ತು ಗಣ್ಯರಿಗೆ ಸಂತಾಪ ಸೂಚನೆ ನಿರ್ಣಯ ಕೈಗೊಳ್ಳಲಾಗುತ್ತದೆ. ನಂತರ ಸದನವನ್ನು ಶುಕ್ರವಾರಕ್ಕೆ ಮುಂದೂಡಲಾಗುತ್ತದೆ. ಈ ಬಾರಿ ಅಧಿವೇಶನವದಲ್ಲಿ 11 ವಿಧೇಯಕಗಳು ಮಂಡನೆಯಾಗಲಿದೆ. ಗೋಹತ್ಯೆ ನಿಷೇಧ ಕಾಯ್ದೆ ಸುಗ್ರೀವಾಜ್ಞೆ ಹೊರಡಿಸಲಾಗಿದ್ದು, ಈ ವಿಧೇಯಕವು ಸಹ ಮಂಡನೆಯಾಗುವ…

ಗಡಿ ವಿಚಾರ; ಮಹಾರಾಷ್ಟ್ರ ಸಿಎಂಗೆ ಹೆಚ್ಡಿಕೆ ಪಾಠ

ಬೆಂಗಳೂರು: ಬೆಳಗಾವಿ ಗಡಿ ವಿಚಾರ ಕುರಿತಂತೆ ಮಹಾರಾಷ್ಟ್ರ ಸರ್ಕಾರವನ್ನು ಜೆಡಿಎಸ್ ನಾಯಕ, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡಿದ್ದಾರೆ. ಗಡಿ ವಿಚಾರ ಕುರಿತಂತೆ ಚರಿತ್ರೆಯನ್ನು ಓದಿ ಎಂದು ಅವರು ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆಗೆ ಹೆಚ್ಡಿಕೆ ಪಾಠ ಹೇಳಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಮಹಾರಾಷ್ಟ್ರದ ಹಠದಿಂದಲೇ ರಚನೆಯಾದ ಮಹಾಜನ ಸಮಿತಿ ವರದಿಯಲ್ಲಿ ಬೆಳಗಾವಿ ಕರ್ನಾಟಕದ್ದೇ ಎಂದು ಸ್ಪಷ್ಟವಾಗಿ ಹೇಳಿದೆ. ಇದನ್ನು ಒಪ್ಪದ ಮಹಾರಾಷ್ಟ್ರ ನ್ಯಾಯಾಲಯದ ಮೆಟ್ಟಿಲೇರಿದೆ. ನ್ಯಾಯಾಲಯದಲ್ಲಿರುವ ಪ್ರಕರಣವೊಂದರ ಬಗ್ಗೆ ಇಲ್ಲ ಸಲ್ಲದ್ದನ್ನು ಮಾತಾಡುತ್ತಿರುವ ಉದ್ಧವ ಠಾಕ್ರೆ, ವಿಚಾರಣೆಯ ದಿಕ್ಕನ್ನೇ ತಪ್ಪಿಸುವ ಹುನ್ನಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಮಹಾರಾಷ್ಟ್ರದ ಹಠದಿಂದಲೇ ರಚನೆಯಾದ ಮಹಾಜನ ಸಮಿತಿ ವರದಿಯಲ್ಲಿ ಬೆಳಗಾವಿ ಕರ್ನಾಟಕದ್ದೇ ಎಂದು ಸ್ಪಷ್ಟವಾಗಿ ಹೇಳಿದೆ. ಇದನ್ನು ಒಪ್ಪದ ಮಹಾರಾಷ್ಟ್ರ ನ್ಯಾಯಾಲಯದ ಮೆಟ್ಟಿಲೇರಿದೆ. ನ್ಯಾಯಾಲಯದಲ್ಲಿರುವ ಪ್ರಕರಣವೊಂದರ ಬಗ್ಗೆ ಇಲ್ಲ ಸಲ್ಲದ್ದನ್ನು ಮಾತಾಡುತ್ತಿರುವ ಉದ್ಧವ ಠಾಕ್ರೆ, ವಿಚಾರಣೆಯ ದಿಕ್ಕನ್ನೇ…

ಕಾನೂನಿನ ವ್ಯಾಪ್ತಿಯಲ್ಲಿ ಗಣಿಗಾರಿಕೆ ಸಕ್ರಮ; ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು: ಸಣ್ಣ ಗಣಿಗಾರಿಕೆ ನಡೆಸುವವರು ಎದುರಿಸುತ್ತಿರುವ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿ ಪರಿಹಾರ ಕಂಡುಕೊಳ್ಳವ ನಿಟ್ಟಿನಲ್ಲಿ ಇದೇ ಮೊದಲ ಬಾರಿಗೆ ಆದಾಲತ್ ನಡೆಸಲು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ತೀರ್ಮಾನಿಸಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ತಿಳಿಸಿದ್ದಾರೆ. ವಿಕಾಸಸೌದದಲ್ಲಿ ಸುದ್ದಿಗೋಷ್ಡಿ ನಡೆಸಿದ ಅವರು, ರಾಜ್ಯದ ಐದು ಕಂದಾಯ ವಿಭಾಗಗಳಾದ , ಮೈಸೂರು, ಬೆಳಗಾವಿ, ಕಲಬುರಗಿ ಹಾಗೂ ಹುಬ್ಬಳ್ಳಿ – ಧಾರವಾಡದಲ್ಲಿ ಆದಾಲತ್ ನಡೆಸಲಾಗುವುದೆಂದು ನಿರಾಣಿ ಅವರು ತಿಳಿಸಿದರು. ಸಣ್ಣ ಗಣಿಗಾರಿಕೆ ಮಾಡುವವರಿಗೆ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಾಗಿತ್ತು. ಕೈಗಾರಿಕಾ ಸಚಿವನಾಗಿದ್ದಾಗ ಕೈಗಾರಿಕಾ ಅದಾಲತ್ ಮಾಡಿದ ಮಾದರಿಯಲ್ಲಿ ಅದಾಲತ್ ಮಾಡಲು ತೀರ್ಮಾನಿಸಲಾಗಿದೆ.ಇಲಾಖಾವಾರ ಸಮಸ್ಯೆಗಳಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು. ಆದಾಲತ್ ನಡೆಸುವುದರಿಂದ ಶೇ 75 ರಷ್ಟು ಸಮಸ್ಯೆಗಳು ಸ್ಥಳೀಯವಾಗಿ ಇತ್ಯರ್ಥವಾಗುತ್ತವೆ. ಗಣಿಕಾರಿಕೆಗೆ ಅನುಮತಿ ಪಡೆಯಲು ಬೆಂಗಳೂರು ವರೆಗೂ ಬರುವ ಅವಶ್ಯಕತೆ ಇಲ್ಲ.…

ಬೇಡ ಜಂಗಮ ಸಮುದಾಯದವರಿಗೆ ಜಾತಿ ಸಿಂಧುತ್ವ ಪ್ರಮಾಣ ಪತ್ರ; ಶೀಗಳ ಮನವಿ

ಬೆಂಗಳೂರು: ನಿಡುಮಾಮಿಡಿ ಮಠದ ಶ್ರೀ ವೀರಭದ್ರ ಚನ್ನಮಲ್ಲ ಸ್ವಾಮೀಜಿ ನೇತೃತ್ವದ ಸ್ವಾಮೀಜಿಗಳ ನಿಯೋಗವು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿತು. ಬೇಡ ಜಂಗಮ ಸಮುದಾಯದವರಿಗೆ ಜಾತಿ ಸಿಂಧುತ್ವ ಪ್ರಮಾಣ ಪತ್ರಗಳನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲು ಮನವಿ ಪತ್ರವನ್ನು ಸ್ವಾಮೀಜಿಗಳ ನಿಯೋಗವು ಸಲ್ಲಿಸಿತು.

ಹಿಂದಿ ಸಮರ್ಥನೆ ಇಲ್ಲ; ಕ್ಷಮೆಯಾಚಿಸಿದ ದೊಡ್ಡರಂಗೇಗೌಡ

ಬೆಂಗಳೂರು: ಹಿಂದಿ ಭಾಷೆಯ ಸಮರ್ಥನೆ ಮೂಲಕ ಕನ್ನಡ ಹೋರಾಟಗಾರರ ಆಕ್ರೋಶಕ್ಕೆ ಗುರಿಯಾಗಿದ್ದ ಸಾಹಿತಿ ದೊಡ್ಡರಂಗೇಗೌಡ, ಈಗ ತಮ್ಮ ಹೇಳಿಕೆಗೆ ಕ್ಷಮೆಯಾಚಿಸಿದ್ದಾರೆ. ಕನ್ನಡಿಗರ ಮೇಲೆ ಹಿಂದಿ ಹಾಗೂ ಇಂಗ್ಲಿಷ್ ಭಾಷೆ ಹೇರಿಕೆಯ ರೀತಿ ನೀತಿಗಳನ್ನು ಸಹಿಸುವುದಿಲ್ಲ. ಹಾಗಾಗಿ ತಮ್ಮ ಮಾತು ನೋಯಿಸಿದ್ದರೆ ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ. ನಾನು ನನ್ನ ಅಂತರಾಳದಿಂದ ಕನ್ನಡವನ್ನು ಆರಾಧಿಸುತ್ತೇನೆ. ಕನ್ನಡವನ್ನೇ ನನ್ನ ತಲೆಯ ಮೇಲೆ ಹೊತ್ತು ಮೆರೆಸುತ್ತೇನೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

ಕೆಂಪುಕೋಟೆ ಗಲಭೆ; ದೆಹಲಿ ಪೊಲೀಸರಿಂದ ಸಾಲು ಸಾಲು ಎಫ್’ಐಆರ್

ದೆಹಲಿ: ಕೆಂಪು ಕೋಟೆಗೆ ಲಗ್ಗೆ ಹಾಕಿದ ಪ್ರಕರಣ ಹಾಗೂ ರೈತರ ಟ್ರ್ಯಾಕ್ಟರ್ ಪರೇಡ್ ಸಂದರ್ಭದಲ್ಲಿನ ಹಿಂಸಾಚಾರ ಸಂಬಂಧಿಸಿದಂತೆ ದೆಹಲಿ ಪೊಲೀಸರು 15ಕ್ಕೂ ಹೆಚ್ಚು ಎಫ್ ಐಆರ್ ಗಳನ್ನು ದಾಖಲಿಸಿಕೊಡಿದ್ದಾರೆ. ದೆಹಲಿ ಪೂರ್ವ ಜಿಲ್ಲೆಯಲ್ಲಿ ಮೂರು, ದ್ವಾರಕದಲ್ಲಿ ಮೂರು ಹಾಗೂ ಶಹದಾರ ಜಿಲ್ಲೆಯಲ್ಲಿ ಒಂದು ಎಫ್ ಐಆರ್, ಹೀಗೆ ಹಲವಡೆ ಎಫ್ ಐಆರ್ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾರ್ವಜನಿಕರ ದೂರುಗಳನ್ನಾಧರಿಸಿ ಈ ಪ್ರಕರಣಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಣರಾಜ್ಯ ದಿಂಡದಂದು ಸಾವಿರಾರು ರೈತರು ಬ್ಯಾರಿಕೇಡ್ ಮುರಿದು, ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ವಾಹನಗಳನ್ನೂ ಹಾನಿಗೊಳಿಸಿ ದಾಂದಲೆ ನಡೆಸಿದ್ದಾರೆ. ಐತಿಹಾಸಿಕ ಕೆಂಪುಕೋಟೆಯಲ್ಲಿ ಧರ್ಮವೊಂದರ ಧ್ವಜವನ್ನು ಹಾರಿಸಿದ್ದಾರೆ. ಈ ಹಿಂಸಾಚಾರದಲ್ಲಿ 86 ಸಿಬ್ಬಂದಿ ಗಾಯಗೊಂಡಿದ್ದಾರೆ. ಅಷ್ಟೇ ಅಲ್ಲ ಐಟಿಒ ಬಳಿ ಟ್ರ್ಯಾಕ್ಟರ್ ಮಗುಚಿ ಬಿದ್ದ ಪರಿಣಾಮ ಒಬ್ಬ ಸಾವನ್ನಪ್ಪಿದ್ದಾನೆ. ಈ ಎಲ್ಲಾ ಘಟನೆಗಳ ಹಿನ್ನೆಲೆಯಲ್ಲಿ…

ಕೆಂಪುಕೋಟೆ ದಾಂಧಲೆ ನಂತರ ರೈತರ ಹೋರಾಟದಿಂದ ‘ಕೈ’ ಯು-ಟರ್ನ್?

ದೆಹಲಿ : ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯಿಂದ ಕಾಂಗ್ರೆಸ್ ಯು ಟರ್ನ್ ಹೊಡೆದಂತಿದೆ. ಗಣರಾಜ್ಯದಿನದಂದು ರೈತರ ಹೋರಾಟ ಸಂದರ್ಭದಲ್ಲಿ ನಡೆದ ಘಟನೆ ಕಾನೂನಿಗೆ ವಿರುದ್ಧವಾಗಿದೆ ಎಂಬ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಕೈ ನಾಯಕರೂ ಈ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸಂಸದ ಶಶಿ ತರೂರ್ ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿ, ನಾನು ಮೊದಲಿನಿಂದಲೂ ರೈತರ ಪ್ರತಿಭಟನೆಯನ್ನು ಬೆಂಬಲಿಸುತ್ತಿದ್ದೆ. ಆದರೇ, ಇಂದು ಅವರು ಕಾನೂನು ಬಾಹೀರವಾಗಿ ನಡೆದುಕೊಂಡದ್ದನ್ನು ಕ್ಷಮಿಸುವುದಕ್ಕೆ ಸಾದ್ಯವಿಲ್ಲ ಎಂದಿದ್ದಾರೆ. ಈ ಮೂಲಕ ಅವರು ರೈತರ ಹೋರಾಟದಿಂದ ಹಿಂದಕ್ಕೆ ಸರಿಯುವ ಪರೋಕ್ಷ ಸುಳಿವು ನೀಡಿದ್ದಾರೆ. Most unfortunate. I have supported the farmers’ protests from the start but I cannot condone lawlessness. And on #RepublicDay no flag but the sacred tiranga should fly…

ತೆರೆಯಲ್ಲಿ ಸಾಧ್ಯವೇ ‘ಗಾಡ್ಜಿಲ್ಲಾ ವರ್ಸಸ್ ಕಾಂಗ್’; ಹೆಚ್ಚಿದ ಕುತೂಹಲ

ಆ್ಯಡಂ ವಿಂಗಾರ್ಡ್ ನಿರ್ದೇಶನದ ‘ಗಾಡ್ಜಿಲ್ಲಾ ವರ್ಸಸ್ ಕಾಂಗ್’ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ‘ಗಾಡ್ಜಿಲ್ಲಾ ವರ್ಸಸ್ ಕಾಂಗ್’ ಟ್ರೈಲರ್ ಬಿಡುಗಡೆಯಾಗಿದ್ದು, ಇದು ಈಗ ಭಾರೀ ಸದ್ದು ಆಗುತ್ತಿದೆ. ಜಗತ್ತಿನಾದ್ಯಂತ ‘ಗಾಡ್ಜಿಲ್ಲಾ ವರ್ಸಸ್ ಕಾಂಗ್’ ಭಾರೀ ಕುತೂಹಲ ಸೃಷ್ಟಿಸಿದ್ದು, ಇದರ ಟ್ರೈಲರ್’ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ಲೈಕ್ ಸಿಗುತ್ತಿದೆ.

ಅಕ್ರಮ ಗಣಿಗಾರಿಕೆಯನ್ನು ಸಕ್ರಮಗೊಳಿಸಲು ಸರ್ಕಾರ ಚಿಂತನೆ; ನಿರಾಣಿ

ಯಾದಗಿರಿ: ಕಾನೂನಿನ ವ್ಯಾಪ್ತಿಗೆ ಒಳಪಟ್ಟು ಹೊಸ ನಿಯಮಗಳ ಅಡಿಯಲ್ಲೇ ಅಕ್ರಮ ಗಣಿಗಾರಿಕೆಯನ್ನು ಸಕ್ರಮಗೊಳಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಹೇಳಿದ್ದಾರೆ. ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಇದೇ 27 ಮತ್ತು 28ರಂದು ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ. ಅಕ್ರಮ ಗಣಿಗಾರಿಕೆಯನ್ನು ಕಾನೂನಿನ ವ್ಯಾಪ್ತಿಯಲ್ಲಿ ಸಕ್ರಮಗೊಳಿಸಲು ಹೊಸ ನಿಯಮಗಳನ್ನು ಜಾರಿ ಮಾಡುವ ಚಿಂತನೆ ಇದೆ ಎಂದು ತಿಳಿಸಿದರು. ಹಾಲಿ ಇರುವ ಕಾಯ್ದೆಗೆಗೂ ತಿದ್ದುಪಡಿ ಮಾಡಿ ರಾಜ್ಯದಲ್ಲಿ ಹೊಸದಾಗಿ ಗಣಿ ಕಾಯ್ದೆ ಜಾರಿ ಮಾಡಲಾಗುವುದು ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು. ಕರ್ನಾಟಕದಲ್ಲಿ ಮಾತ್ರ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿಲ್ಲ. ದೇಶಾದ್ಯಂತ ಇದು ನಡೆಯುತ್ತಲೇ ಇದೆ.ಇದನ್ನು ಯಾವ ರೀತಿ ತಡೆಗಟ್ಟಬೇಕು ಎಂಬುದರ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಸರ್ಕಾರ ಸೂಕ್ತವಾದ ನಿರ್ಧಾರವನ್ನು…