ಬೆಂಗಳೂರು: ಬಿಜೆಪಿ ನಾಯಕರು ಸಿಡಿ ವಿಚಾರ ಮುಂದಿಟ್ಟು ವಾಗ್ವಾದದಲ್ಲಿ ತೊಡಗಿದ್ದಾರೆ, ಈ ಸಂಗತಿ ಮುಂದಿಟ್ಟು ಲಾಭ ಗಳಿಸಲು ಕೈ ನಾಯಕರು ಮುಂದಾಗಿದ್ದಾರೆ. ಈ ಸಿಡಿ ವಿಚಾರ ಕುರಿತಂತೆ ತನಿಖೆಗೆ ಒತ್ತಾಯಿಸುವ ಮೂಲಕ ರಾಜ್ಯ ರಾಜಕಾರಣದ ವಿದ್ಯಮಾನಗಳಿಗೆ ರೋಚಕತೆ ಬಂದಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿಯ ಹಿರಿಯ ನಾಯಕ. ಸಿ.ಡಿ. ಕುರಿತಾಗಿ ಅವರೇ ಆರೋಪ ಮಾಡಿದ್ದಾರೆ. ಭ್ರಷ್ಟಾಚಾರ ಆರೋಪ ಹಾಗೂ ಆಕ್ಷೇಪಾರ್ಹ ವೀಡಿಯೊಗಳು ಇವೆ ಎನ್ನುತ್ತಿದ್ದಾರೆ. ಹಾಗಾಗಿ ಈ ಬಗ್ಗೆ ತನಿಖೆ ನಡೆಸಬೇಕೆಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯತ್ನಾಳ್ ಅವರು ಸಿ.ಡಿ.ಯಲ್ಲಿ ನೋಡಲಾಗದ ದೃಶ್ಯಗಳಿವೆ. ನೋಡಲಾಗದು ಎಂದಿದ್ದಾರೆ. ಹೀಗಾಗಿ ಸಿ.ಡಿ.ಯಲ್ಲಿ ಏನಿದೆ ಎಂಬುದೂ ಜನರಿಗೆ ಗೊತ್ತಾಗಬೇಕಿದೆ ಎಂದರು. ಯಡಿಯೂರಪ್ಪ ಅವರಿಗೆ ಏಕೆ ಮತ್ತು ಹೇಗೆ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂಬ ಸತ್ಯಾಂಶವೂ ಹೊರಬರಬೇಕಲ್ಲವೇ? ಎಂದು…
Month: January 2021
ಬಿಜೆಪಿ ನಾಯಕರ ಸಿಡಿ ವಿಚಾರ; ಅಮಿತ್ ಶಾ ಸಿಡಿಮಿಡಿ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿನ ಸಿಡಿ ಮುಂದಿಟ್ಟು ನಡೆಯುತ್ತಿರುವ ವಾಗ್ಬಾಣಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಿಡಿಮಿಡಿಗೊಂಡಿದ್ದಾರೆ. ಬಿಜೆಪಿಯಲ್ಲಿನ ಸಚಿವಾಕಾಂಕ್ಷಿಗಳು ಸಾರ್ವಜನಿಕವಾಗಿ ಟೀಕೆ ಮಾಡುವುದನ್ನು ನಿಲ್ಲಿಸಬೇಕು ಎಂದು ತಾಕೀತು ಮಾಡಿದ್ದಾರೆ. ಶನಿಬಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಕ್ಯಾಬಿನೆಟ್ ವಿಸ್ತರಣೆ ನಂತರದ ಬೆಳವಣಿಗೆ ಬಗ್ಗೆ ಚರ್ಚೆ ನಡೆಯಿತು. ಪ್ರಮುಖವಾಗಿ ಸಿಡಿ ಬಾಂಬ್ ಬಗ್ಗೆಯೂ ಪ್ರಸ್ತಾಪವಾಯಿತೆನ್ನಲಾಗಿದೆ. ಈ ಕುರಿತಂತೆ ಅಭಿಪ್ರಾಯ ವ್ಯಕ್ತಪಡಿಸಿದ ಅಮಿತ್ ಶಾ, ಇಲ್ಲಿ ವ್ಯಕ್ತಿಗಿಂತ ಪಕ್ಷ ಮೊದಲು ಎಂದು ಪಕ್ಷದ ನಾಯಕರಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆನ್ನಲಾಗಿದೆ. ಯಾವೊಬ್ಬ ನಾಯಕರ ಹೆಸರನ್ನು ಪ್ರಸ್ತಾಪ ಮಾಡದಿದ್ದರೂ ಕೂಡ, ಸಚಿವ ಹುದ್ದೆ ವಂಚಿತರು ಮಾಧ್ಯಮಗಳ ವೈಯಕ್ತಿಕವಾಗಿ ಟೀಕೆ ಮಾಡುತ್ತಿರುವುದಕ್ಕೆ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಪಕ್ಷದ ಸಂಘಟನೆ ವಿಷಯ ಮತ್ತು ಮುಂಬರುವ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಯಕರು ಚರ್ಚೆ ನಡೆದಿದೆ.
ಸರ್ಕಾರದಿಂದ ಕನ್ನಡ ಭಾಷೆಗೆ ಅಪಮಾನ; ಹೆಚ್ಡಿಕೆ ಆರೋಪ
ಬೆಂಗಳೂರು: ಶಿವಮೊಗ್ಗದ ಭದ್ರಾವತಿಯಲ್ಲಿ ಶನಿವಾರ RAF ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಂದರ್ಭದಲ್ಲಿ ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಬೊಟ್ಟು ಮಾಡಿದ್ದಾರೆ. ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಹೆಚ್ಡಿಕೆ, ವೈವಿಧ್ಯಮಯ ಭಾರತ ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದ್ದು, ಆಯಾ ರಾಜ್ಯ ಭಾಷೆ ಗೌರವಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಗೃಹ ಸಚಿವರೆ ತ್ರಿಭಾಷಾ ಸೂತ್ರವನ್ನು ಧಿಕ್ಕರಿಸಿರುವುದು ಕನ್ನಡಕ್ಕೆ, ಕನ್ನಡಿಗರಿಗೆ ಮಾಡಿದ ಅಗೌರವ. ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ನಾಡು-ನುಡಿಯ ಘನತೆಯನ್ನು ಮರೆತದ್ದು ಅತ್ಯಂತ ಖಂಡನೀಯ ಎಂದಿದ್ದಾರೆ. ವೈವಿಧ್ಯಮಯ ಭಾರತ ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದ್ದು,ಆಯಾ ರಾಜ್ಯ ಭಾಷೆ ಗೌರವಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಗೃಹ ಸಚಿವರೆ ತ್ರಿಭಾಷಾ ಸೂತ್ರವನ್ನು ಧಿಕ್ಕರಿಸಿರುವುದು ಕನ್ನಡಕ್ಕೆ,ಕನ್ನಡಿಗರಿಗೆ ಮಾಡಿದ ಅಗೌರವ.ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು,ಉಪಮುಖ್ಯಮಂತ್ರಿಗಳು ನಾಡು-ನುಡಿಯ ಘನತೆಯನ್ನು ಮರೆತದ್ದು ಅತ್ಯಂತ ಖಂಡನೀಯ.2/5…
ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ ಪಡೆಯಲು ನಿಗದಿಪಡಿಸಿದವರಲ್ಲಿ ಶೇ.62 ರಷ್ಟು ಮಂದಿ ಲಸಿಕೆ ಪಡೆದಿದ್ದಾರೆ. ಮೊದಲ ದಿನ 21,658 ಮಂದಿಗೆ ಲಸಿಕೆ ನೀಡಬೇಕೆಂದು ನಿಗದಿಯಾಗಿತ್ತು. ಈ ಪೈಕಿ 13,408 ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ. ಯಾರಿಗೂ ಗಂಭೀರ ಸಮಸ್ಯೆ, ಅಡ್ಡ ಪರಿಣಾಮ ಕಂಡುಬಂದಿಲ್ಲ. ಚುಚ್ಚುಮದ್ದು ನೀಡಿದಾಗ ಕೆಲವರಿಗೆ ಊತ ಬಂದಿರಬಹುದು. ಆದರೆ ಅದು ಕೇವಲ ಅರ್ಧಗಂಟೆಯಲ್ಲಿ ಕಡಿಮೆಯಾಗಿ ಮನೆಗೆ ತೆರಳಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರೊಂದಿಗೆ ವೀಡಿಯೋ ಸಂವಾದ ನಡೆದ ಬಳಿಕ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಈ ಕುರಿತು ಸುದ್ದಿಗಾರರಿಗೆ ಮಾಹಿತಿ ಹಂಚಿಕೊಂಡರು. . ಸೋಮವಾರದಿಂದ ಮತ್ತೆ ಹೆಚ್ಚು ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ಭಾನುವಾರ ಹೆಚ್ಚಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತದೆ. ನಾನು ನಾನಾ ಭಾಗಗಳಲ್ಲಿ ಸಂಚರಿಸಿ ಲಸಿಕೆ ಪಡೆಯುವಂತೆ ಉತ್ತೇಜಿಸಲಿದ್ದೇನೆ ಎಂದರು. ಕೊಡಗು ಜಿಲ್ಲೆಯಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿ ಅಂದರೆ 84%…
ಕೇಂದ್ರ ಗೃಹ ಸಚಿವರಿಂದ ಕ್ಷಿಪ್ರ ಕಾರ್ಯ ಪಡೆ ಘಟಕ ಶಂಕುಸ್ಥಾಪನೆ.
ಹಿವಮೊಗ್ಗ: ಭದ್ರಾವತಿ ಡಿಎಆರ್ ಮೈದಾನದಲ್ಲಿ ಕ್ಷಿಪ್ರ ಕಾರ್ಯ ಪಡೆ (ಆರ್‍ಎಎಫ್) 97 ಬೆಟಾಲಿಯನ್ ಸ್ಥಾಪನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶಂಕುಸ್ಥಾಪನೆ ನೆರವೇರಿಸಿದರು. ಭದ್ರಾವತಿಯಲ್ಲಿ ಆರ್. ಎ. ಎಫ್ ಬೆಟಾಲಿಯನ್ ಸ್ತಾಪನೆಯಿಂದ ಇಡೀ ದಕ್ಷಿಣ ಭಾರತದ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಾಯಕವಾಗಲಿದೆ. ಇಲ್ಲಿ 350 ಕೋಟಿ ರೂ. ವೆಚ್ಚದಲ್ಲಿ ಘಟಕ ನಿರ್ಮಾಣವಾಗಲಿದ್ದು, ರಾಜ್ಯ ಸರಕಾರ 50ಎಕ್ರೆ ಜಮೀನು ನೀಡಿದೆ. ಇಲ್ಲಿ ಸುಸಜ್ಜಿತವಾದ ವಸತಿಗೃಹಗಳು, ಆಸ್ಪತ್ರೆ, ಕೇಂದ್ರೀಯ ವಿದ್ಯಾಲಯ, ಎಲ್ಲಾ ಸೌಲಭ್ಯಗಳನ್ನು ಹೊಂದಿರುವ ಕ್ರೀಡಾಂಗಣ ನಿರ್ಮಾಣವಾಗಲಿದೆ. ಇದರ ಪ್ರಯೋಜನ ಸ್ಥಳೀಯರಿಗೂ ದೊರೆಯುವಂತೆ ಮಾಡಲಾಗುವುದು. ಸ್ಥಳೀಯರು ಇಲ್ಲಿನ ಎಲ್ಲಾ ಸೌಲಭ್ಯಗಳ ಸಂಪೂರ್ಣ ಲಾಭ ಪಡೆದುಕೊಳ್ಳಬೇಕು ಎಂದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾತನಾಡಿ, ಇದೊಂದು ಐತಿಹಾಸಿಕ ದಿನ. ಜಿಲ್ಲಾ ಸಶಸ್ತ್ರ ಮೀಸಲು ಪಡೆಗೆ ಸೇರಿದ 97ಎಕ್ರೆ ಪ್ರದೇಶದಲ್ಲಿ ಆರ್‍ಎಎಫ್ ಘಟಕಕ್ಕೆ ರಾಜ್ಯ ಸರ್ಕಾರ 50ಎಕ್ರೆ ಪ್ರದೇಶ ನೀಡಿದೆ. ಸಾರಿಗೆ…
ಕೊರೋನಾ ಲಸಿಕೆ; ಸರ್ಕಾರಿ ಮಾಹಿತಿ ಮಾತ್ರ ನಂಬಿ
ಬೆಂಗಳೂರು: ಕೊರೋನಾ ಲಸಿಕೆಯಿಂದ ಅಡ್ಡಪರಿಣಾಮ ಉಂಟಾದರೆ, ಸ್ಥಳದಲ್ಲೇ ತುರ್ತು ಚಿಕಿತ್ಸೆ ವ್ಯವಸ್ಥೆ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡಿ ಜನಸಾಮಾನ್ಯರನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ. ಸರ್ಕಾರದ ಸಾಮಾಜಿಕ ಜಾಲತಾಣಗಳಿಂದ ಬಿಡುಗಡೆ ಮಾಡುವ ಮಾಹಿತಿ ಮಾತ್ರ ಅಧಿಕೃತ ಹಾಗೂ ಸತ್ಯ ಎಂದು ಆರೋಗ್ಯ ಸಚಿವ ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿ, ಪೊಲೀಸರು, ಪೌರಕಾರ್ಮಿಕರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಲಸಿಕೆ ಸಂಪೂರ್ಣ ಸುರಕ್ಷಿತ ಎಂದರು. ಮೊದಲ ಡೋಸ್ ಪಡೆದ 28 ದಿನಗಳ ನಂತರ 2ನೇ ಡೋಸ್ ನೀಡಲಾಗುತ್ತದೆ. ಜನರು ಯಾವುದೇ ಆತಂಕವಿಲ್ಲದೆ ವಿಶ್ವಾಸದಿಂದ ಲಸಿಕೆ ಪಡೆಯಿರಿ ಎಂದು ಸಚಿವರು ಸಾರ್ವಜನಿಕರಿಗೆ ಸಲಹೆ ಮಾಡಿದ್ದಾರೆ. ರಾಜ್ಯದಲ್ಲಿ 10 ವಾಕ್-ಇನ್ ಕೂಲರ್, 4 ವಾಕ್-ಇನ್ ಫ್ರೀಜರ್, 3,210 ಐಎಲ್ ಆರ್, 3,312 ಕೋಲ್ಡ್ ಬಾಕ್ಸ್, 46,591 ಲಸಿಕೆ ಕ್ಯಾರಿಯರ್, 2,25,749 ಐಸ್ ಪ್ಯಾಕ್ ಇದೆ…
ಹುಬ್ಬಳಿ–ಧಾರವಾಡ ಎಲಿವೇಟೆಡ್ ಕಾರಿಡಾರ್; ಗಡ್ಕರಿ ಶಂಕುಸ್ಥಾಪನೆ
ಬೆಂಗಳೂರು: ಕೇಂದ್ರ ಭೂಸಾರಿಗೆ ಮಂತ್ರಾಲಯದ ಮತ್ತು ಕರ್ನಾಟಕ ಲೋಕೋಪಯೋಗಿ ಇಲಾಖೆ (ರಾಷ್ಟ್ರೀಯ ಹೆದ್ದಾರಿ) ವತಿಯಿಂದ ಆಯೋಜಿಸಿರುವ ” ಹುಬ್ಬಳಿ – ಧಾರವಾಡ ಎಲಿವೇಟೆಡ್ ಕಾರಿಡಾರ್”ನ ಶಂಕುಸ್ಥಾಪನೆ ಕಾರ್ಯವನ್ನು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ನರವೇರಿಸಿದರು ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗೃಹ ಕಛೇರಿ ಕೃಷ್ಣಾದಿಂದ ಆನ್ ಲೈನ್ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ರಾಜ್ಯದ 243 ಕಡೆ ಕೊರೊನಾ ಲಸಿಕೆ ವಿತರಣೆ: 8,14,500 ಡೋಸ್ ಲಭ್ಯ
ಬೆಂಗಳೂರು: ರಾಜ್ಯದ 243 ಕಡೆಗಳಲ್ಲಿ ಶನಿವಾರ (ಜನವರಿ 16) ಕೊರೊನಾ ಲಸಿಕೆ ನೀಡುತ್ತಿದ್ದು, ಬೆಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಸೇರಿದಂತೆ 10 ಕಡೆಗಳಲ್ಲಿ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಕೊರೊನಾ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿಯವರು ಲಸಿಕೆ ವಿತರಣೆಗೆ ಚಾಲನೆ ನೀಡಲಿದ್ದಾರೆ ಎಂದರು. ಬೆಂಗಳೂರು ಒಂದರಲ್ಲೇ 10 ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುವುದು. ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲೂ ನೀಡಲಾಗುವುದು. ಕೋವಿಶೀಲ್ಡ್ ಲಸಿಕೆಯನ್ನು ರಾಜ್ಯದ 237 ಕೇಂದ್ರ ಹಾಗೂ ಕೋವ್ಯಾಕ್ಸಿನ್ ಲಸಿಕೆಯನ್ನು ಬಳ್ಳಾರಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ ಕೇಂದ್ರಗಳಲ್ಲಿ ನೀಡಲಾಗುವುದು ಎಂದು ಮಾಹಿತಿ ನೀಡಿದರು. 7,17,439 ಆರೋಗ್ಯ ಸಿಬ್ಬಂದಿಗೆ ಲಸಿಕೆ…
ಏರೋ ಇಂಡಿಯಾ ಅಪೆಕ್ಸ್ ಸಮಿತಿ ಸಭೆ; ರಾಜನಾಥ್ ಸಿಂಗ್’ಗೆ ಸ್ವಾಗತ
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಏರೋ ಇಂಡಿಯಾ 2021 ಗೆ ಸಂಬಂಧಿಸಿದಂತೆ ಅಪೆಕ್ಸ್ ಸಮಿತಿ ಸಭೆ ನಡೆಸಲು ಬೆಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಸ್ವಾಗತಿಸಿದರು.
ಬೆಳಗಾವಿಯಲ್ಲಿ ಐಟಿ ಪಾರ್ಕ್; ಯೋಜನೆ ಕಾರ್ಯಗತವಾದರೆ 60 ಲಕ್ಷ ಉದ್ಯೋಗ ಸೃಷ್ಟಿ
ಬೆಂಗಳೂರು: ಬೆಳಗಾವಿಯಲ್ಲಿ ಐಟಿ ಪಾರ್ಕ್ ಸ್ಥಾಪಿಸುವ ಹಿನ್ನೆಲೆಯಲ್ಲಿ ರಕ್ಷಣಾ ಇಲಾಖೆ ವಶದಲ್ಲಿರುವ ರಾಜ್ಯದ 10,639 ಎಕರೆ ಭೂಮಿಯ ಪೈಕಿ 750 ಎಕರೆ ಭೂಮಿಯನ್ನು ರಾಜ್ಯ ಸರಕಾರಕ್ಕೆ ಬಿಟ್ಟುಕೊಡುವಂತೆ ಐಟಿ-ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಶುಕ್ರವಾರ ಸಂಜೆ ರಕ್ಷಣಾ ಸಚಿವರನ್ನು ಭೇಟಿಯಾಗಿ ಮನವಿ ಪತ್ರ ನೀಡಿದ ಡಿಸಿಎಂ, ರಾಜನಾಥ್ ಸಿಂಗ್ ಅವರು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ತಿಳಿಸಿದರು. ಈ ಹಿಂದೆಯೇ ಹತ್ತು ಸಾವಿರ ಎಕರೆಯಷ್ಟು ಭೂಮಿಯನ್ನು ರಕ್ಷಣಾ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಪ್ರತೀ ಹತ್ತು ವರ್ಷಕ್ಕೊಮ್ಮೆ ಗುತ್ತಿಗೆ ನವೀಕರಣ ಮಾಡಲಾಗುತ್ತಿದೆ. ಇಷ್ಟು ಪ್ರಮಾಣದ ಭೂಮಿಯನ್ನು ರಕ್ಷಣಾ ಇಲಾಖೆ ಬಳಸುತ್ತಿಲ್ಲ. ಹೀಗಾಗಿ ಈ ಜಾಗದ 750 ಎಕರೆ ಪ್ರದೇಶದಲ್ಲಿ ಮಾಹಿತಿ ತಂತ್ರಜ್ಞಾನ ಪಾರ್ಕ್ ಸ್ಥಾಪನೆ ಮಾಡುವ ಬಗ್ಗೆ ಪ್ರಸ್ತಾವನೆ ಬಂದಿದೆ. ಈ…
