ಬೆಂಗಳೂರು: ದೇಶದ ಹಲವು ರಾಜ್ಯಗಳಲ್ಲಿ ಕೊರೋನಾ ವೈರಾಣು ಎರಡನೇ ಅಲೆಯ ಆತಂಕ ಹೆಚ್ಚುತ್ತಲೇ ಇವೆ. ಕರ್ನಾಟಕದಲ್ಲೂ ಕೊರೋನಾ ಅಬ್ಬರ ಮತ್ತೆ ಹೆಚ್ಚುತ್ತಿದ್ದು, ಮಂಗಳವಾರ 1,135 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಸೋಮವಾರ ಸಂಜೆಯಿಂದ ಮಂಗಳವಾರ ಸಂಜೆವರೆಗೆ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಆರು ಮಂದಿ ಮೃತಪಟ್ಟಿದ್ದು, ಕೊರೋನಾ ಕಾರಣದಿಂದ ಮೃತಪಾಟ್ಟವರ ಸಾವಿನ ಸಂಖ್ಯೆ 12,403ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಸೋಕಿನ ಪ್ರಮಾಣ ಹೆಚ್ಚುತ್ತಲಿದ್ದು ಮಂಗಳವಾರ ಸುಮಾರು 710 ಮಂದಿಯಲ್ಲಿ ಪಾಸಿಟಿವ್ ವರದಿ ಬಂದಿದೆ. ಅಷ್ಟೇ ಅಲ್ಲ ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಸೋಂಕಿಗೆ ಐವರು ಬಲಿಯಾಗಿದ್ದಾರೆ. ಇಂದಿನ 16/03/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/CLJWHE1JXT @PMOIndia @narendramodi @CMofKarnataka @BSYBJP @MoHFW_INDIA @drharshvardhan @mla_sudhakar @Comm_dhfwka @MDNHM_Kar @CovidIndiaSeva @KarnatakaVarthe @PIBBengaluru pic.twitter.com/zr4W6yA4wU — K'taka Health…
Year: 2021
ಲಾಕ್‌ಡೌನ್ ವಿರಾಮದ ನಂತರ ಬಾಲಿವುಡ್‌ನಲ್ಲಿ ‘ತೂಫಾನ್’ ಪ್ರತಿಧ್ವನಿ
ಲಾಕ್‌ಡೌನ್ ವಿರಾಮದ ನಂತರ ಇದೀಗ ಬಾಲಿವುಡ್ ಕೂಡಾ ಚೇತರಿಸಿಕೊಳ್ಳುತ್ತಿದೆ. ಅದೇ ಹೊತ್ತಿಗೆ ‘ತೂಫಾನ್’ ಸದ್ದು ಪ್ರತಿಧ್ವನಿಸುತ್ತಿದೆ. ನಟ ಫರ್ಹಾನ್ ಅಖ್ತರ್ ಮತ್ತು ಪರೇಶ್ ರಾವಲ್ ಅಭಿನಯದ ‘ತೂಫಾನ್’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ರಾಕೇಶ್ ಓಂಪ್ರಕಾಶ್ ಮೆಹ್ರಾ ನಿರ್ದೇಶನದ ಈ ಸಿನಿಮಾ ಟೀಸರ್‌ಗೆ ಸೋಷಿಯಲ್ ಮೀಡಿಯಾಗಳಲ್ಲಿ ಸಕತ್ ಲೈಕ್ಸ್ ಗಿಟ್ಟಿಸಿಕೊಳ್ಳುತ್ತಿದೆ.
ಕೊರೋನಾ ತಲ್ಲಣ; ಮುನ್ನೆಚ್ಚರಿಕೆ ವಹಿಸದಿದ್ದರೆ ಲಾಕ್‌ಡೌನ್ ಅನಿವಾರ್ಯವಾದೀತು
ಬೆಂಗಳೂರು: ಮಾಸ್ಕ್, ಸಾಮಾಜಿಕ ಅಂತರ ಕಾಪಾಡಿಕೊಳ್ಳದಿದ್ದರೆ ಕಠಿಣ ಕ್ರಮ ಅನಿವಾರ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ನಾಗರಿಕರಿಗೆ ಸ್ಪಷ್ಟವಾದ ಸಂದೇಶ ಕೊಟ್ಟಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತ ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಕೇರಳದಲ್ಲಿ ಕೂಡ ಏರಿಕೆಯಾಗುತ್ತಿದೆ ಅಂತ ಎಚ್ಚರಿಕೆ ನೀಡಿದರು. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಇಲ್ಲದಿದ್ದರೆ ಕಠಿಣ ಕ್ರಮಕ್ಕೆ ಮುಂದಾಗಬೇಕಾಗುತ್ತೆ ಅಂತ ಸಿಎಂ ಹೇಳಿದ್ದಾರೆ ಎಂದು ಸಚಿವರು ತಿಳಿಸಿದರು. ದೊಡ್ಡ ದೊಡ್ಡ ಜಾಹೀರಾತು ಕೊಟ್ಟು ಜಾಗೃತಿ ಮೂಡಿಸುತ್ತೇವೆ. ಲಸಿಕೆ ವಿತರಣೆಯನ್ನು ಇನ್ನಷ್ಟು ಹೆಚ್ಚಿಸಲಾಗುವುದು. ಇದುವರೆಗೂ 15 ಲಕ್ಷ ಜನರಿಗೆ ನೀಡಿದ್ದೇವೆ. ಪ್ರತಿ ದಿನ ಪ್ರಾಥಮಿಕ ಸರ್ಕಾರಿ ಆಸ್ಪತ್ರೆಗಳಲ್ಲಿ 100 ಜನರಿಗೆ ಟೆಸ್ಟ್ ಮಾಡಲೇ ಬೇಕು. ಜನರಲ್ ಆಸ್ಪತ್ರೆಗಳಲ್ಲಿ 500 ಜನರಿಗೆ ಲಸಿಕೆ ಟಾರ್ಗೆಟ್ ನೀಡಿದ್ದೇವೆ. ಪ್ರತಿ ಸೋಂಕಿತ…
ರಾಜ್ಯದಲ್ಲಿ ಭರ್ಜರಿ ಸರ್ಜರಿಗೆ ನಡೆದಿದೆಯೇ ತಯಾರಿ..? ಬಿಜೆಪಿ ಹೈಮಾಂಡ್ ನಡೆ ಬಗ್ಗೆ ಹೆಚ್ಚಿದ ಕುತೂಹಲ
ದೆಹಲಿ: ಉತ್ತರ ಭಾರತದ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಮುಖ್ಯಮಂತ್ರಿ ಬದಲಾವಣೆ ಮೂಲಕ ಕಮಲ ಪಾಳಯದಲ್ಲಿ ಸಂಚಲನ ಮೂಡಿಸಿರುವ ಹೈಕಮಾಂಡ್ ಇದೀಗ ಕರ್ನಾಟಕದಲ್ಲೂ ನಾಯಕರಿಗಾಗಿ ಹುಡುಕಾಟ ಆರಂಭಿಸಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪರಿಪೂರ್ಣ ಬಹುಮತ ಗಳಿಸುವಷ್ಟು ಮಟ್ಟಕ್ಕೆ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಂತಹಾ ನಾಯಕರು ಯಾರಿದ್ದಾರೆ ಎಂಬ ಬಗ್ಗೆ ರಾಷ್ಟ್ರೀಯ ವರಿಷ್ಠರು ಅಳೆದು ತೂಗುತ್ತಿದ್ದಾರೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಲಿಂಗಾಯತ ಸಮುದಾಯ, ಒಕ್ಕಲಿಗರು, ಕುರುಬರು ಹಾಗೂ ಪರಿಶಿಷ್ಠ ಸಮುದಾಯಗಳ ಪ್ರಭಾವ ಬೇಕಿರುವುದರಿಂದ ಎಲ್ಲಾ ವರ್ಗಗಳನ್ನು ಸಮಾಧಾನಪಡಿಸುವ ಅನಿವಾರ್ಯತೆ ಬಿಜೆಪಿಗಿದೆ. ಹಾಗಾಗಿ ಹಲವರ ಹೆಸರುಗಳು ಹೈಕಮಾಂಡ್‌ನ ಪಟ್ಟಿಯಲ್ಲಿದೆ. ಲಕ್ಷ್ಮಣ್ ಸವದಿ, ಜಗದೀಶ ಶೆಟ್ಟರ್, ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಗ್ಗೆ ಹೈಕಮಾಂಡ್‌ಗೆ ಸಾಕಷ್ಟು ಒಲವು ಇದೆಯಾದರೂ, ಅಧಿಕಾರದ ವಿಚಾರ ಗಮನಿಸಿದಾಗ ಈ ವರೆಗೂ ಮುಖ್ಯಮಂತ್ತಿ, ಉಪಮುಖ್ಯಮಂತ್ರಿಯಂತಹಾ ಉನ್ನತ ಹುದ್ದೆಗಳನ್ನು ಲಿಂಗಾಯತ ನಾಯಕರೇ ಆಲಂಕರಿಸಿದ್ದಾರೆ. ಹಾಗಾಗಿ ಈ ಬಾರಿ ಬಿಎಸ್‌ವೈ ಉತ್ತರಾಧಿಕಾರಿಯಾಗಿ ಒಕ್ಕಲಿಗ ಅಥವಾ…
ಶಿವಣ್ಣ ಪತ್ನಿ ಗೀತಾ ಶೀಘ್ರವೇ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು: ದಿವಂಗತ ಮಾಜಿ ಸಿಎಂ ಬಂಗಾರಪ್ಪ ಪುತ್ರ, ಜೆಡಿಎಸ್ ನಾಯಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ಇದೀಗ ನಟ, ಸೆಂಚೂರಿ ಸ್ಟಾರ್ ಶಿವರಾಜ್ ಕುಮಾರ್ ಪತ್ನಿ ಗೀತಾ ಕೂಡಾ ಕೈ ಹಿಡಿಯಲು ಮುಂದಾಗಿದ್ದಾರೆ. ಈ ಸಂಬಂಧ ನಟ ಶಿವರಾಜ್ ಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಿನ ಇಂದಿನ ಭೇಟಿಗೆ ಭಾರೀ ಮಹತ್ವ ಬಂದಿದೆ. ಈ ಕುರಿತಂತೆ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಗೀತಾ ಶಿವರಾಜ್ ಕುಮಾರ್ ಅವರು ಕಾಂಗ್ರೆಸ್ ಸೇರುವ ಬಗ್ಗೆ ಕಾದು ನೋಡಿ ಎಂದು ಹೇಳಿ ಕುತೂಹಲವನ್ನು ಕೆರಳುವಂತೆ ಮಾಡಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಸೋಮವಾರ ನಟ ಶಿವರಾಜ್ ಕುಮಾರ್ ಅವರ ಜತೆ ಸಮಾಲೋಚನೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಶಿವರಾಜ್ ಕುಮಾರ್ ಅವರು ನಮ್ಮ ಆತ್ಮೀಯರು. ಅವರ ಕುಟುಂಬ ಇಡೀ ದೇಶ ಹಾಗೂ ರಾಜ್ಯದ ಆಸ್ತಿ. ಆ…
ಸೀತೆ’ಯಾಗಿ ಆಲಿಯಾ ಭಟ್: RRR ಫಸ್ಟ್ ಲುಕ್ ಆಕರ್ಷಣೆ
ಹೈದರಾಬಾದ್: ಬಾಹುಬಲಿ ಖ್ಯಾತಿಯ ಎಸ್.ಎಸ್.ರಾಜಮೌಳಿ ನಿರ್ದೇಶನದ ‘RRR’ ಚಿತ್ರ ತೆಲುಗು ನೆಲದಲ್ಲಿ ಭಾರೀ ಸದ್ದು ಮಾಡುತ್ತಿದೆ. ಬಹುಭಾಷೆಗಳಲ್ಲಿ ತೆರೆಗೆ ಬರಲು ಸಜ್ಜಾಗುತ್ತಿರುವ RRR ಟೀಂ ಈ ಚಿತ್ರದ ನಾಯಕಿ ಆಲಿಯಾ ಭಟ್‌ಗೆ ಅಚ್ಚರಿಯ ಗಿಫ್ಟ್ ನೀಡಿದೆ. ಆಲಿಯಾ ಹುಟ್ಟುಹಬ್ಬ ಸಂದರ್ಭದಲ್ಲಿ ಈ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡಿದೆ. #Sita ❤️💚 #RRRMovie #HappyBirthdayAliaBhatt pic.twitter.com/bOspk071gz — RRR Movie (@RRRMovie) March 15, 2021 ಈ ಸಿನಿಮಾದಲ್ಲಿ ಆಲಿಯಾ ಭಟ್ ಅವರು ಸೀತಾ ಹೆಸರಿನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮೂಲಕ ಆಲಿಯಾ ತೆಲುಗು ಚಿತ್ರರಂಗಕ್ಕೂ ಪದಾರ್ಪಣೆ ಮಾಡಿರುವ ಆಲಿಯಾ, ರಾಮ್ ಚರಣ್ ಜೊತೆ ನಟಿಸುತ್ತಿದ್ದಾರೆ.
ಶಿವಮೊಗ್ಗ ಕಲ್ಲು ಕ್ವಾರಿ ಘಟನೆ ದುರಂತ: ಕಂದಾಯ ಇಲಾಖೆ ಆಯುಕ್ತರಿಂದ ತನಿಖೆ
ಬೆಂಗಳೂರು-ಶಿವಮೊಗ್ಗದ ಹುಣಸೋಡಿನ ಕಲ್ಲು ಕ್ವಾರಿ ಬಳಿ ಸಂಭವಿಸಿದ ಘಟನೆಯನ್ನು ಕಂದಾಯ ಇಲಾಖೆಯ ಆಯುಕ್ತರಿಂದ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳಲಿದ್ದೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ವಿಧಾನಪರಿಷತನಲ್ಲಿ ಪ್ರಕಟಿಸಿದರು. ನಿಯಮ 68ರಡಿ ನಡೆದ ಚರ್ಚೆಗೆ ಉತ್ತರ ನೀಡಿದ ಅವರು, ಈ ಸಂಬಂಧ ಸ್ಟೋನ್ ಕ್ರಷರ್ ಮಾಲೀಕ ಡಿ.ವಿ.ಸುಧಾಕರ್ ಮತ್ತು ಜಮೀನು ಮಾಲೀಕ ಕುಲಕರ್ಣಿ ವಿರುದ್ದ ಪ್ರಕರಣ ದಾಖಲಿಸಲಾಗಿದ್ದು, ಕ್ರಷರ್ ಘಟಕದ ಲೈಸೆನ್ಸ್ ರದ್ದುಪಡಿಸಲಾಗಿದೆ ಎಂದು ಹೇಳಿದರು. ಘಟನೆಗೆ ಕಾರಣವಾದ 65 ಸಾವಿರ ಡಿಟೋನೇಟರ್ಸ್,1275 ಕೆಜಿ ಜಿಲೆಟಿನ್, 17500 ಮೀಟರ್ ಸೇಫ್ಟಿ ಫ್ಯೂಸ್ ವಶಪಡಿಸಿಕೊಳ್ಳಲಾಗಿದೆ. ಹೊಸದಾಗಿ ಕ್ರಷರ್ ಘಟಕಗಳಿಗೆ ಲೈಸೆನ್ಸ್ ಮಂಜೂರು ಮತ್ತು ನವೀಕರಣ ಮಾಡದಂತೆ ತೀರ್ಮಾನಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. ಘಟನೆ ನಡೆದ ಪ್ರದೇಶದಲ್ಲಿ ಮಂಜೂರಾಗಿರುವ ಜಮೀನುಗಳ ಗ್ರಾಂಟ್‍ಗಳನ್ನು ರದ್ದುಪಡಿಸಲಾಗಿದ್ದು, ಸೋಟದಲ್ಲಿ ಮೃತಪಟ್ಟ 6…
‘ಎಂಬಿಎ’ ಪ್ರಯತ್ನದಲ್ಲಿ ಪುನೀತ್ ಮತ್ತು ಕಾವ್ಯ
ಕನ್ನಡ ಸಿನಿಮಾ ರಂಗ ಚೇತರಿಸಿಕೊಂಡಿದ್ದು ಒಂದೊಂದೇ ಚಿತ್ರಗಳು ಸದ್ದು ಮಾಡುತ್ತಿದೆ. ಇದೀಗ ‘ಎಂಬಿಎ’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ಗಳಿಸುತ್ತಿದೆ. ಈ ಚಿತ್ರವದಲ್ಲಿ ಪುನೀತ್ ಗೌಡ ಮತ್ತು ಕಾವ್ಯ ಗೌಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಬೆಂಗಳೂರು: ಸಮಾಜದಲ್ಲಿನ ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಮಾನವ ಹಕ್ಕುಗಳ ಸರಿಯಾದ ಸದುಪಯೋಗ ಮತ್ತು ರಕ್ಷಣೆ ಈ ಸಂಸ್ಥೆ ಮುಂದಾಗಿರುವುದು ಸಂತೋಷದ ವಿಷಯ ಎಂದು ಮಾಜಿ ಶಾಸಕ ಎಸ್ ಮುನಿರಾಜು ಹೇಳಿದ್ದಾರೆ. ಪೀಣ್ಯ ದಾಸರಹಳ್ಳಿ ಸಮೀಪ, ಕೆರೆ ಗುಡ್ಡದಹಳ್ಳಿಯಲ್ಲಿ ಜನ್ಮಭೂಮಿ ನಾಗರಾಜು ನೇತೃತ್ವದಲ್ಲಿ ಮಾನವ ಹಕ್ಕುಗಳ ರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನ ಸೇವಾ ಸಮಿತಿಯ ಉದ್ಘಾಟನೆ ನೆರವೇರಿತು. ಸಮಿತಿ ಉದ್ಘಾಟಿಸಿ ಮಾತನಾಡಿದ ಎಸ್ ಮುನಿರಾಜು, ಸರ್ಕಾರದ ಸೌಲಭ್ಯಗಳನ್ನು ಪಡೆಯಲು ನಿಶಕ್ತರಾದ ಜನರಿಗೆ ಈ ಸಂಸ್ಥೆ ದಾರಿದೀಪವಾಗಲಿ , ಮುಂದೆಯೂ ಕೂಡ ಈ ಸಂಸ್ಥೆ ನಿಂತ ನೀರಾಗದೆ ನಿರಂತರ ಚಟುವಟಿಕೆಯಿಂದ ಜನರ ರಕ್ಷಣೆಯ ಗುರಿ ಹೊಂದಲಿ ಎಂದರು. ಉಪ ಪೊಲೀಸ್ ಆಯುಕ್ತ ಶಿವರಾಜು ಮಾತನಾಡಿ ಮಾನವನ ಹಕ್ಕು ಹಗರಣವಾಗುತ್ತಿರುವ ಈ ಕಾಲಘಟ್ಟದಲ್ಲಿ ಅದನ್ನು ಕೇಳಲು ಶಕ್ತಿ ಇರುವುದಿಲ್ಲ ಅಂತಹ ಜನರ ಬಾಳಿಗೆ ನಿಂತ ಈ ಸಂಸ್ಥೆ ನಮ್ಮೆಲ್ಲರ ಸಹಾಯ ಸಲಹೆ…
ಸರ್ಕಾರದ ವಿರುದ್ಧ ಸಮರ; ಇದೀಗ ವಾಹನ ಚಾಲಕರ ಸರದಿ.
ಬೆಂಗಳೂರು: ಚಾಲಕರ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಅರೆಬೆತ್ತಲೆ ಮೆರವಣಿಗೆ ಕೈಗೊಂಡಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಾವಿರಾರು ಚಾಲಕರೊಂದಿಗೆ ಉಪವಾಸ ಸತ್ಯಾಗ್ರಹ ನಡೆಸಿ ಶಕ್ತಿ ಪ್ರದರ್ಶನ ಏರ್ಪಡಿಸಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ.1ರಿಂದ ಚಾಲಕರ ಒಕ್ಕೂಟದ ವತಿಯಿಂದ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಚಾಲಕರ ನಿಗಮ ಮಂಡಳಿ, ಪೆಟ್ರೋಲ್ ಮತ್ತು ಡಿಸೆಲ್ ದರ ಇಳಿಕೆ ತುರ್ತಾಗಿ ಮಾಡಬೇಕು, ಸಾರಥಿ ಸೂರು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು, ಕಾಲಕರ ದಿನಾಚರಣೆ ಸರ್ಕಾರದ ವತಿಯಿಂದ ಆಚರಣೆ ಮಾಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಂಡಿದ್ದಾರೆ. ಸುಮಾರು 110 ಸಂಘಟನೆಗಳ ಮುಖ್ಯಸ್ಥರು ಬೆಂಬಲ ಸೂಚಿಸಿವೆ
