ಹೊಸದಿಲ್ಲಿ: ತೆಲಂಗಾಣದಲ್ಲಿ ಜಯಭೇರಿ ಭಾರಿಸಿರುವ ಕಾಂಗ್ರೆಸ್ ಪಕ್ಷ ಸರ್ಕಾರ ರಚನೆಗೆ ಕಸರತ್ತು ನಡೆಸಿದೆ. ಇದೇ ವೇಳೆ ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ರೇವಂತ್ ರೆಡ್ಡಿ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದೆ. ಹೊಸದಿಲ್ಲಿಯಲ್ಲಿ ನಡೆದ ಎಐಸಿಸಿ ನಾಯಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಎಐಸಿಸಿ ನಾಯಕರ ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷರಾಗಿರುವ ರೇವಂತ್ ರೆಡ್ಡಿ ಅವರನ್ನು ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು. ಇದೇ ವೇಳೆ, ಡಿಸೆಂಬರ್ 7 ರಂದು ನೂತನ ಸಿಎಂ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
Year: 2023
ಶಾಲಾಮಕ್ಕಳ ಬಿಸಿಯೂಟ ಯೋಜನೆಗೆ ಶಿಕ್ಷಕರೇ ಹೊಣೆ; ವಿವಾದಿತ ಸುತ್ತೋಲೆ ವಾಪಸಾತಿಗೆ ರಮೇಶ್ ಬಾಬು ಆಗ್ರಹ
ಬೆಂಗಳೂರು: ಶಾಲಾಮಕ್ಕಳ ಬಿಸಿಯೂಟ ಯೋಜನೆಗೆ ಮುಖ್ಯ ಶಿಕ್ಷಕರನ್ನು ಹೊಣೆಗಾರರನ್ನಾಗಿಸುವ ರಾಜ್ಯ ಸರ್ಕಾರದ ಸುತ್ತೋಲೆಗೆ ವ್ಯಾಪಕ ಆಕ್ಷೇಪ ವ್ಯಕ್ತವಾಗಿದೆ. ಶಿಕ್ಷಕರಿಗೆ ಬೋಧಕೇತರ ಚಟುವಟಿಕೆಗಳ ಹೊಣೆ ನೀಡಿದರೆ ಶಿಕ್ಷಣದ ಗುಣಮಟ್ಟ ಕುಸಿತವಾಗುತ್ತದೆ ಎಂದು ಪ್ರತಿಪಾದಿಸಿರುವ ಮಾಜಿ ಶಾಸಕ ರಮೇಶ್ ಬಾಬು, ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ನು ವಾಪಸ್ ಪಡೆಯಬೇಕೆಂದು ಸಲಹೆ ಮುಂದಿಟ್ಟಿದ್ದಾರೆ. ಈ ಸಂಬಂಧ ಕೆಪಿಸಿಸಿ ವಕ್ತಾರರೂ ಆಗಿರುವ ರಮೇಶ್ ಬಾಬು ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ಗಮನಸೆಳೆದಿದೆ. ಶಿಕ್ಷಣ ಇಲಾಖೆಯು ಪ್ರತೀ ಬಾರಿ ವಿವಿಧ ಸುತ್ತೋಲೆಗಳನ್ನು ಹೊರಡಿಸುವ ವೈಖರಿ ಬಗ್ಗೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಸಿಯೂಟ ಯೋಜನೆಯ ವೈಫಲ್ಯಗಳಿಗೆ ಶಿಕ್ಷಕರನ್ನು ಹೊಣೆ ಮಾಡುವುದು ಸರಿಯಲ್ಲ..! ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಡಿಯಲ್ಲಿ ಶಾಲಾ ಹಂತದಲ್ಲಿ ಮದ್ಯಾಹ್ನ ಉಪಹಾರ ಯೋಜನೆ (ಬಿಸಿಯೂಟ ಯೋಜನೆ) ಜಾರಿಯಲ್ಲಿದ್ದು, ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಕ್ಕೆ ಅನುಗುಣವಾಗಿ ರಾಜ್ಯದ ಶಾಲೆಗಳಲ್ಲಿ ಈ ಯೋಜನೆಯನ್ನು…
ವಿಜಯಪುರ ಕಾರ್ಖಾನೆ ದುರಂತ; ಮೃತ ಕಾರ್ಮಿಕರ ಕುಟುಂಬದವರಿಗೆ 7 ಲಕ್ಷ ರೂಪಾಯಿ ಪರಿಹಾರ
ಬೆಂಗಳೂರು: ವಿಜಯಪುರ ಕಾರ್ಖಾನೆ ದುರಂತ; ಮೃತ ಕಾರ್ಮಿಕರ ಕುಟುಂಬದವರಿಗೆ 7 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್ ಪ್ರಕಟಿಸಿದ್ದಾರೆ. ಮೃತಪಟ್ಟ ಕಾರ್ಮಿಕರ ಕುಟುಂಬದವರಿಗೆ ಕಾರ್ಖಾನೆ ಮಾಲೀಕರಿಂದ 5 ಲಕ್ಷ ಹಾಗೂ ಸರ್ಕಾರದಿಂದ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದವರು ತಿಳಿಸಿದ್ದಾರೆ. ವಿಜಯಪುರ ನಗರದ ಹೊರವಲಯದ ಅಲಿಯಾಬಾದ ಕೈಗಾರಿಕೆ ಪ್ರದೇಶದಲ್ಲಿ ರಾಜಗುರು ಮೆಕ್ಕೆಜೋಳ ಸಂಸ್ಕರಣೆ ಘಟಕದಲ್ಲಿ ಸಂಭವಿಸಿದ ಅವಘಡದಲ್ಲಿ 7 ಕಾರ್ಮಿಕರು ಮೃತಪಟ್ಟಿದ್ದು, ಅವರ ಕುಟುಂಬದವರಿಗೆ ನನ್ನ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ನೋವು ಹಂಚಿಕೊಂಡಿರುವ ಎಂ.ಬಿ.ಪಾಟೀಲ್, ಶೀಘ್ರ ರಕ್ಷಣಾ ಕಾರ್ಯ ಕೈಗೊಂಡರೂ ಸಹ ಬೃಹತ್ ರಾಶಿಯಡಿ ಸಿಲುಕಿದ್ದ ಪರಿಣಾಮ ಅವರನ್ನು ಬದುಕಿಸಲಾಗಲಿಲ್ಲ ಎಂದು ವಿಷಾದಿಸಿದ್ದಾರೆ. ಮೃತರೆಲ್ಲರೂ ಬಿಹಾರ ರಾಜ್ಯದವರಾಗಿದ್ದು, ಅವರ ಕುಟುಂಬದವರೊಡನೆ ಈಗಾಗಲೆ ಸಂಪರ್ಕದಲ್ಲಿದ್ದು ಮೃತದೇಹಗಳನ್ನು ವಿಮಾನದ ಮೂಲಕ ಪಾಟ್ನಾಗೆ ಸಾಗಿಸಿ ಅಲ್ಲಿಂದ ಅವರ ಮನೆಗಳಿಗೆ ತಲುಪಿಸಲಾಗುವುದು ಎಂದ ಸಚಿವರು,…
ವಿಜಯಪುರ ಮೂಟೆ ದುರಂತ; ಮೃತರ ಸಂಖ್ಯೆ 7ಕ್ಕೆ ಏರಿಕೆ
ವಿಜಯಪುರ: ಗೊಮ್ಮಟ ನಗರಿ ಸಮೀಪದ ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಸೋಮವಾರ ಘೋರ ಅವಘಡ ಸಂಭವಿಸಿದೆ. ಸೋಮವಾರ ಸಂಜೆ ಅಲಿಯಾಬಾದ್ ಕೈಗಾರಿಕಾ ಪ್ರದೇಶದಲ್ಲಿರುವ ರಾಜಗುರು ಆಹಾರ ಸಂಸ್ಕರಣಾ ಘಟಕದಲ್ಲಿ ಆಹಾರ ಧಾನ್ಯಗಳ ಮೂಟೆಗಳು ಕುಸಿದು, ಕಾರ್ಯನಿರ್ವಹಿಸುತ್ತಿದ್ದ ಅನೇಕ ಕಾರ್ಮಿಕರು ಮೂಟೆಗಳ ಅಡಿಯಲ್ಲಿ ಸಿಲುಕಿದ್ದರು. ಈ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 7ಕ್ಕೆ ಏರಿದೆ. ಸಂಜೆ ಕೆಲಸ ಸಾಗಿರುವಾಗಲೇ ಅವಘಡ ಸಂಭವಿಸಿದೆ. ಆ ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಯಿತಾದರೂ ಐವರು ಕಾರ್ಮಿಕರು ಅದಾಗಲೇ ಅಸುನೀಗಿದ್ದರು. ಅನೇಕರು ಮೂಟೆಗಳಡಿಯಲ್ಲಿ ಸಿಲುಕಿದ್ದು ಅವರನ್ನು ರಕ್ಷಿಸಲು ರಾತ್ರಿಯಿಡೀ ಕಾರ್ಯಾಚರಣೆ ನಡೆದಿದೆ. ಪುಣೆಯಿಂದ NDRF ತಂಡವನ್ನು ಕರೆಸಲಾಗಿದೆ. ಇಂದು ಕೂಡಾ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ ರಕ್ಷಣಾ ತಂಡ ಮತ್ತಷ್ಟು ಮಂದಿಯ ಮೃತದೇಹಗಳನ್ನು ಹೊರತೆಗೆದಿದೆ. ಮೃತರನ್ನು ಬಿಹಾರ ಮೂಲದ ರಾಮ ಬಾಲಕ್ (52), ಲುಖೋ ಜಾಧವ (45), ರಾಜೇಶ್ ಮುಖಿಯಾ (25), ರಾಮಬ್ರೀಜ್ ಮುಖಿಯಿ (29), ಶಂಭು ಮುಖಿಯಾ…
ವಿಜಯೇಂದ್ರ ಪತ್ನಿಯ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು: ಭ್ರಷ್ಟರ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿರುವ ಲೋಕಾಯುಕ್ತ ಇಂದು ಬೆಳ್ಳಂಬೆಳಿಗ್ಗೆ ಮತ್ತೆ ಕಾರ್ಯಾಚರಣೆಯ ಅಖಾಡಕ್ಕೆ ಧುಮುಕಿದೆ. ಬೆಂಗಳೂರು, ಮೈಸೂರು,ಬೀದರ್, ಬಳ್ಳಾರಿ ಸೇರಿದಂತೆ ರಾಜ್ಯದ ಹಲವೆಡೆ ಮಂಗಳವಾರ ಲೋಕಾಯುಕ್ತ ದಾಳಿ ಕೈಗೊಂಡಿದೆ. ರಾಜ್ಯದ 63 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಸಿಬ್ಬಂದಿ ಸುಮಾರು 13 ಅಧಿಕಾರಿಗಳ ಮನೆಗಳ ಮೇಲೆ ದಾಳಿ ದಾಳಿ ನಡೆಸಿದ್ದಾರೆ. ಇದೇ ವೇಳೆ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪತ್ನಿಯ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿಯಾಗಿದೆ.ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ಡಾ ಪ್ರಭಲಿಂಗ ಮಾನಕರ್ ಅವರ ಮನೆಗೆ ಲಗ್ಗೆ ಹಾಕಿರುವ ತನಿಖಾ ತಂಡ ದಾಖಲೆಗಳನ್ನು ಪರಿಶೀಲಿಸಿದೆ. ಯಾದಗಿರಿ ಡಿಎಚ್ ಓ ಆಗಿರುವ ಡಾ ಪ್ರಭುಲಿಂಗ್ ಮಾನಕರ್ ಅವರ ವಿರುದ್ದವೂ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ತಂಡ ಈ ಕಾರ್ಯಾಚರಣೆ ನಡೆಸಿದೆ ಎನ್ನಲಾಗಿದೆ.
ಭ್ರಷ್ಟರ ವಿರುದ್ಧ ಬ್ರಹ್ಮಾಸ್ತ್ರ; ರಾಜ್ಯದ 63 ಕಡೆ ಲೋಕಾಯುಕ್ತ ದಾಳಿ
ಬೆಂಗಳೂರು: ಭ್ರಷ್ಟರ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿರುವ ಲೋಕಾಯುಕ್ತ ಇಂದು ಬೆಳ್ಳಂಬೆಳಿಗ್ಗೆ ಮತ್ತೆ ಕಾರ್ಯಾಚರಣೆಯ ಅಖಾಡಕ್ಕೆ ಧುಮುಕಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಂಗಳವಾರ ಲೋಕಾಯುಕ್ತ ದಾಳಿ ಕೈಗೊಂಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ 63 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 200ಕ್ಕೂ ಹೆಚ್ಚು ಸಿಬ್ಬಂದಿ ಸುಮಾರು 13 ಅಧಿಕಾರಿಗಳ ಮನೆಗಳ ಮೇಲೆ ದಾಳಿ ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಮೂರು ಕಡೆ ದಾಳಿ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಎಸ್.ಕೃಷ್ಣಮೂರ್ತಿ ಮನೆ ಹಾಗೂ ಕುಂಬಳಗೂಡು-ಕಣಿಮಿಣಿಕೆ ಬಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧಿಕಾರಿ ಮನೆ ಮೇಲೂ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು, ಬೆಸ್ಕಾಂ ಜಾಗೃತ ದಳ ಅಧಿಕಾರಿ T.N.ಸುಧಾಕರ್ ರೆಡ್ಡಿ ಮನೆ ಮೇಲೆ ದಾಳಿ ಕೈಗೊಂಡು ಮಾಡಿದ್ದು, ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮೇಲೆ ದಾಳಿ…
ಕರ್ನಾಟಕದ ಮೇಲೂ ‘ಮಿಂಚಾಂಗ್’ ಪರಿಣಾಮ; ಭಾರೀ ಮಳೆ ಸಾಧ್ಯತೆ, ಮೈ ಕೊರೆವ ಚಳಿ
ಬೆಂಗಳೂರು: ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಮಿಂಚಾಂಗ್ ಚಂಡ ಮಾರುತದ ರೌದ್ರ ರೂಪ ಭೀತಿಯನ್ನು ಸೃಷ್ಟಿಸಿದೆ. ಇದೇ ವೇಳೆ, ಕರ್ನಾಟಕದ ಮೇಲೂ ಈ ಮಿಂಚಾಂಗ್ ಚಂಡ ಮಾರುತ ಪರಿಣಾಮ ಬೀರಲಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಮಿಚಾಂಗ್ ಚಂಡ ಮಾರುತದ ಪರಿಣಾಮ ಕರ್ನಾಟಕದ ಬಹುಭಾಗ ಮೋಡವನ್ನು ಆವರಿಸಿಕೊಂಡಿದೆ. ಇದರ ಪರಿಣಾಮವಾಗಿ ಭಾರೀ ಮಳೆಯಾಗಲಿದೆ. ಜೊತೆಗೆ ಚಳಿಯ ವಾತಾವರಣ ಸೃಷ್ಟಿಯಾಗಿದೆ. ಇದನ್ನೂ ವೀಕ್ಷಿಸಿ.. ಚೆನ್ನೈಗೆ ಮಿಚಾಂಗ್ ಹೊಡೆತ; ಪ್ರವಾಹದಲ್ಲಿ ಕೊಚ್ಚಿಹೋಗುತ್ತಿರುವ ಕಾರುಗಳು
ಚೆನ್ನೈಗೆ ಮಿಚಾಂಗ್ ಹೊಡೆತ; ಪ್ರವಾಹದಲ್ಲಿ ಕೊಚ್ಚಿಹೋಗುತ್ತಿರುವ ಕಾರುಗಳು
Apartment in Pallikaranai, Chennai Effect of #CycloneMichuang 😕😕 Stay safe chennai!!#ChennaiRain pic.twitter.com/txiJtrq1BQ — vittoba.balaji (@balavittoba) December 4, 2023
ಮಿಚಾಂಗ್ ಚಂಡಮಾರುತ; ಆಂಧ್ರಪ್ರದೇಶದಲ್ಲೂ ಅಯೋಮಯ
ಹೈದರಾಬಾದ್ : ಮಿಚಾಂಗ್ ಚಂಡಮಾರುತದ ರೌದ್ರಾವತಾರದಿಂದಾಗಿ ತಮಿಳುನಾಡು ಮತ್ತು ಆಂಧ್ರಪ್ರದೇಶ ಕರಾವಳಿಯಲ್ಲಿ ಅವಾಂತರ ಸೃಷ್ಟಿಸಿದೆ. ಸೋಮವಾರದಿಂದ ಬಿರುಗಾಳಿ ಮಳೆ ಜೋರಾಗಿದ್ದು ಈ ಎರಡೂ ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಆಂಧ್ರಪ್ರದೇಶದ ಹಲವು ಜಿಲ್ಲೆಗಳು ಮಿಚಾಂಗ್ ಚಂಡಮಾರುತದ ಹೊಡೆತಕ್ಕೆ ಸಿಲುಕಿ ತತ್ತರಗೊಂಡಿದೆ. ಸರಣಿ ಅವಘಡಗಳು ಪರಿಸ್ಥಿಯ ಭೀಕರತೆಯನ್ನು ಅನಾವರಣ ಮಾಡಿದೆ. ಆಂಧ್ರದಲ್ಲಿ ಕಳೆದ 80 ವರ್ಷಗಳಲ್ಲಿ ಅಪೂರ್ವ ಎಂಬಂತೆ ಭಾರೀ ಬಿರುಗಾಳಿ ಸಹಿತ ಮಳೆಯಾಗಿದ್ದು ನಿರಂತರ ವರ್ಷಧಾರೆಯಿಂದಾಗಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ತಿರುಮಲದಲ್ಲಿ ಮಳೆ ಕಾರಣ ಭಕ್ತರು ಪರದಾಡುವಂತಾಗಿದೆ. ಭೀಕರ ಪರಿಸ್ಥಿತಿ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ರಜೆ ಘೋಷಿಸಲಾಗಿದೆ.
ಮಿಚಾಂಗ್ ಚಂಡಮಾರುತದ ಹೊಡೆತ; ತಮಿಳುನಾಡು ತತ್ತರ
ಚೆನ್ನೈ: ಮಿಚಾಂಗ್ ಚಂಡಮಾರುತದ ರೌದ್ರಾವತಾರದಿಂದಾಗಿ ತಮಿಳುನಾಡು ಮತ್ತು ಆಂಧ್ರಪ್ರದೇಶ ಕರಾವಳಿಯಲ್ಲಿ ಅವಾಂತರ ಸೃಷ್ಟಿಸಿದೆ. ಸೋಮವಾರದಿಂದ ಬಿರುಗಾಳಿ ಮಳೆ ಜೋರಾಗಿದ್ದು ಈ ಎರಡೂ ರಾಜ್ಯಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ತಮಿಳುನಾಡಿನ ಹಲವು ಜಿಲ್ಲೆಗಳು ಮಿಚಾಂಗ್ ಚಂಡಮಾರುತದ ಹೊಡೆತಕ್ಕೆ ಸಿಲುಕಿ ನಲುಗಿಹೋಗಿದೆ. ಸರಣಿ ಅವಘಡಗಳು ಐರನ್ನು ಬಲಿತೆಗೆದುಕೊಂಡಿವೆ. ಚೆನ್ನೈನಲ್ಲಿ ಐವರು ಸಾವನ್ನಪ್ಪಿದ್ದು ಭೀಕರ ಪರಿಸ್ಥಿತಿ ಹಿನ್ನೆಲೆಯಲ್ಲಿ ತಮಿಳುನಾಡಿನ ಶಾಲಾ-ಕಾಲೇಜುಗಳಿಗೆ ರಜೆ ರಜೆ ಘೋಷಿಸಲಾಗಿದೆ. ಕೋರ್ಟ್-ಕಚೇರಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಚೆನ್ನೈ ನಗರದ ಬಹುತೇಕ ಪ್ರದೇಶಗಳು ನೀರಿನಿಂದ ಆವೃತವಾಗಿದ್ದು ಪ್ರಮುಖ ರಸ್ತೆಗಳಲ್ಲಿ ನೀರು ತುಂಬಿವೆ. ಅನೇಕ ವಾಹನಗಳು ನೀರಿನಲ್ಲಿ ಮುಳುಗಿವೆ. ಸಾರಿಗೆ ವಾಹನಗಳು ನೀರಿನಲ್ಲೇ ಕೆಟ್ಟು ನಿಂತಿದ್ದು ಜನರು ಪರದಾಡುವಂತಾಗಿದೆ. Scary 😨 Be Safe 🙏#ChennaiFloods #ChennaiRains2023#ChennaiRain #Chennai #ChennaiFloods2023 https://t.co/4WQiZsp2PW — Lakhvinder Singh Ramgarhia (@vinder_ds) December 5, 2023 ಈ ನಡುವೆ ಹಲವು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ.…