ಹೈಕಮಾಂಡ್ ವಿರುದ್ದ ಲಕ್ಷ್ಮಣ್ ಸವದಿ ಆಕ್ರೋಶ; ಬಿಜೆಪಿ ತೊರೆಯುವ ಘೋಷಣೆ

ಬೆಳಗಾವಿ: ರಾಜ್ಯ ಬಿಜೆಪಿಯಲ್ಲಿ ಬಂಡಾಯದ ಬಿರುಗಾಳಿ ಎದ್ದಿದೆ. ಟಿಕೆಟ್ ಸಿಗದಿರುವುದರಿಂದ ಬೇಸತ್ತಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರು ಬಿಜೆಪಿ ತೊರೆಯುವುದಾಗಿ ಹೇಳಿದ್ದಾರೆ. ತಮಗೆ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡದಿರುವ ಬಗ್ಗೆ ಅಸಮಾಧಾನಗೊಂಡಿರುವ ಲಕ್ಷ್ಮಣ್ ಸವದಿ, ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬಿಜೆಪಿ ನಾಯಕರ ವಿರುದ್ದ ಆಕ್ರೋಶ ಹೊರಹಾಕಿದರು. ನನಗೆ ಟಿಕೆಟ್ ನೀಡುವುದಾಗಿ ಪಕ್ಷದ ಮುಖಂಡರು ಭರವಸೆ ನೀಡಿದ್ದರು. ಆದರೆ ಟಿಕೆಟ್ ನೀಡದೆ ಹೈಕಮಾಂಡ್ ದ್ರೋಹ ಮಾಡಿದೆ ಎಂದು ಲಕ್ಷ್ಮಣ್ ಸವದಿ ದೂರಿದರು. ಬಿಜೆಪಿಗೆ ಗುಡ್ ಬೈ ಹೇಳುವುದಾಗಿ ಸುಳಿವು ನೀಡಿದ ಅವರು, ಈ ಬಗ್ಗೆ ಬೆಂಬಲಿಗರ ಜೊತೆ ಚರ್ಚಿಸಿ ಮುಂದಿನ ನಡೆ ಬಗ್ಗೆ ತೀರ್ಮಾನಿಸುವುದಾಗಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಸಿಟ್ಟು ಹೊರಹಾಕಿದ ಅವರು ಮುಂದಿನ ದಿನದಲ್ಲಿ ಎಲ್ಲವನ್ನೂ ಬಿಚ್ಚಿಡುತ್ತೇನೆ ಎಂದರು.

ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ; ನೂರಾರು ಮಂದಿ ಕಾಂಗ್ರೆಸ್‌ನತ್ತ ವಲಸೆ?

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ, ಅವರ ಪಕ್ಷದಲ್ಲಿ ಬಿರುಗಾಳಿ ಆರಂಭವಾಗಿದೆ. ಪರಿಣಾಮ ಸಾವಿರಾರು ಬಿಜೆಪಿ ನಾಯಕರು, ಕಾರ್ಯಕರ್ತರು ಆ ಪಕ್ಷ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ನಾಯಕ ಪದ್ಮರಾಜ್ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಮೊದಲಿಗೆ ರಾಜಾಜಿನಗರ ಕ್ಷೇತ್ರದಿಂದ ಪಕ್ಷ ಸೇರ್ಪಡೆ ಕಾರ್ಯಕ್ರಮ ಆರಂಭಿಸುತ್ತಿದ್ದೇವೆ ಎಂದರು. 2014ರ ಲೋಕಸಭಾ ಚುನಾವಣೆ ಸಮಯದಲ್ಲಿ ಮೋದಿ ಅವರು ಮತದಾನ ಮಾಡುವ ಮುನ್ನ ಅಡುಗೆ ಅನಿಲ ಸಿಲಿಂಡರ್ ಗೆ ನಮಸ್ಕರಿಸಿ ಮತ ಹಾಕಿ ಎಂಬ ಸಂದೇಶ ನೀಡಿದ್ದರು. ಈ ಬಾರಿಯ ಚುನಾವಣೆಯಲ್ಲೂ ಅವರ ಮಾತಿನಂತೆ ನಾವು ನಮ್ಮ ಪಕ್ಷದ ಚುನಾವಣೆ ಪ್ರಚಾರ ಆರಂಭಿಸುವ ಮುನ್ನ ಅಡುಗೆ ಅನಿಲ ಸಿಲಿಂಡರ್ ಗೆ ನಮಿಸಲು ತೀರ್ಮಾನಿಸಿದ್ದೇವೆ. ಇದೇ ಪದ್ಧತಿಯನ್ನು ಬ್ಲಾಕ್ ಹಾಗೂ ಬೂತ್ ಮಟ್ಟದ ನಾಯಕರೂ ಪಾಲಿಸಬೇಕು ಎಂದು…

Uncategorized

ಕರಾವಳಿ ಜಿಲ್ಲೆಗಳಲ್ಲೂ ಹೊಸ ಮುಖಗಳಿಗೆ ಬಿಜೆಪಿ ಟಿಕೆಟ್.. ಇಲ್ಲಿದೆ ಅಭ್ಯರ್ಥಿಗಳ ಪಟ್ಟಿ..

ದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಗೆ ಅಖಾಡ ಸಜ್ಜಾಗಿದ್ದು ಬಿಜೆಪಿ ಕೂಡಾ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಲವು ಹಾಲಿ ಶಾಸಕರಿಗೆ ಕೊಕ್, 52 ಕಡೆ ಹೊಸಬರಿಗೆ ಟಿಕೆಟ್.‌. ಮೊದಲ ಪಟ್ಟಿಯಲ್ಲಿ 189 ಹೆಸರುಗಳ ಘೋಷಣೆಯೇ ಈ ಬೆಳವಣಿಗೆಯ ಹೈಲೈಟ್. ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಹಲವು ಕ್ಷೇತ್ರಗಳಿಗೂ ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದೆ. ಪಟ್ಟಿ ಹೀಗಿದೆ: ಕಾರ್ಕಳ – ಸುನಿಲ್ ಕುಮಾರ್  ಕುಂದಾಪುರ – ಕೊಡ್ಗಿ  ಕಾಪು – ಗುರುಮೆ ಸುರೇಶ್ ಶೆಟ್ಟಿ ಉಡುಪಿ- ಯಶ್‌ಪಾಲ್ ಸುವರ್ಣ ಮಂಗಳೂರು ಉತ್ತರ –  ಭರತ್ ಶೆಟ್ಟಿ ಮಂಗಳೂರು – ಸತೀಶ್ ಕುಂಪಲ ಮಂಗಳೂರು ದಕ್ಷಿಣ – ವೇದವ್ಯಾಸ್ ಕಾಮತ್ ಬಂಟ್ವಾಳ – ರಾಜೇಶ್ ನಾಯ್ಕ್ ಮೂಡಬಿದ್ರಿ – ಉಮಾನಾಥ್ ಕೋಟ್ಯಾನ್ ಬೆಳ್ತಂಗಡಿ – ಹರೀಶ್ ಪೂಂಜ ಪುತ್ತೂರು – ಆಶಾ ತಿಮ್ಮಪ್ಪ ಸುಳ್ಯ – ಭಾಗೀರಥಿ

ಸಿದ್ದರಾಮಯ್ಯ, ಡಿಕೆಶಿಗೆ ಬಿಜೆಪಿ ಟಕ್ಕರ್.. ದಿಗ್ಗಜರಿಗೆ ಟಿಕೆಟ್ ಘೋಷಿಸಿದ ಕಮಲ ಹೈಕಮಾಂಡ್..

ದೆಹಲಿ: ರಾಜ್ಯ ವಿಧಾನಸಭಾ ಚುನಾವಣೆಗೆ ಅಖಾಡ ಸಜ್ಜಾಗಿದ್ದು ಬಿಜೆಪಿ ಕೂಡಾ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಹು ನಿರೀಕ್ಷಿತ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಲವು ಹಾಲಿ ಶಾಸಕರಿಗೆ ಕೊಕ್ ನೀಡಿ, 52 ಕಡೆ ಹೊಸಬರಿಗೆ ಟಿಕೆಟ್ ಘೋಷಿಸಲಾಗಿದೆ.‌. ಮೊದಲ ಪಟ್ಟಿಯಲ್ಲಿ 189 ಹೆಸರುಗಳ ಘೋಷಣೆಯೇ ಈ ಬೆಳವಣಿಗೆಯ ಹೈಲೈಟ್.  ಅದರಲ್ಲೂ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ರೇಸ್‌ನಲ್ಲಿರುವ ಅಭ್ಯರ್ಥಿಗಳೆಂದೇ ಹೇಳಲಾಗುತ್ತಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ವಿರುದ್ದ ಬಿಜೆಪಿ ದಿಗ್ಗಜ ನಾಯಕರನ್ನೇ ಕಣಕ್ಕಿಳಿಸಲು ನಿರ್ಧರಿಸಿದೆ. ಸಿದ್ದರಾಮಯ್ಯ ಸ್ಪರ್ಧಿಸಲಿರುವ ವರುಣಾ ಕ್ಷೇತ್ರದಲ್ಲಿ ಬಿಜೆಪಿಯಿಂದ ವಿ.ಸೋಮಣ್ಣ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ಪ್ರಕಟಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸ್ಪರ್ಧಿಸುವ ಕನಕಪುರದಲ್ಲಿ ಆರ್.ಅಶೋಕ್ ಅವರಿಗೆ ಬಿಜೆಪಿ ಪಕ್ಷವು ಟಿಕೆಟ್ ಘೋಷಿಸಿದೆ.

ಬಿಜೆಪಿಯಲ್ಲಿ ಅಚ್ಚರಿಯ ಬೆಳವಣಿಗೆ; ಚುನಾವಣಾ ರಾಜಕೀಯಕ್ಕೆ ಈಶ್ವರಪ್ಪ ಗುಡ್ ಬೈ

ಶಿವಮೊಗ್ಗ: ರಾಜ್ಯ ಬಿಜೆಪಿ ಅಚ್ಚರಿಯ ಬೆಳವಣಿಗೆಗೆ ಸಾಕ್ಷಿಯಾಗಿದೆ. ದಿಢೀರ್ ವಿದ್ಯಮಾನವೊಂದರಲ್ಲಿ ಮಾಜಿ ಸಚಿವ, ಬಿಜೆಪಿ ಪಕ್ಷದ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಅವರು ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ತಮ್ಮ ಚುನಾವಣಾ ರಾಜಕೀಯ ನಿವೃತ್ತಿ ಕುರಿತಂತೆ ಬರೆದ ಪತ್ರದಲ್ಲಿ ಕೆ.ಎಸ್.ಈಶ್ವರಪ್ಪ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ. ‘ಸ್ವ-ಇಚ್ಚೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗಲು ಬಯಸುತ್ತಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೂ ಪರಿಗಣಿಸಬಾರದಾಗಿ ವಿನಂತಿಸುತ್ತೇನೆ’ ಎಂದು ಈಶ್ವರಪ್ಪ ಅವರು ಜೆ.ಪಿ.ನಡ್ಡಾ ಅವರಿಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಕರ್ನಾಟಕದ ಹೆಮ್ಮೆಯ ‘ನಂದಿನಿ’ ಸಂಸ್ಥೆ ಮುಳುಗಿಸಲು ಬಿಜೆಪಿ ಪ್ರಯತ್ನ?

ಬೆಂಗಳೂರು: ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಮುಳುಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಸಂಸದ ಡಿ.ಕೆ. ಸುರೇಶ್ ಆರೋಪಿಸಿದ್ದಾರೆ. ‘ಕನ್ನಡಿಗರು ಕಟ್ಟಿ ಬೆಳೆಸಿದ ಪ್ರತಿಷ್ಠಿತ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಕೆನರಾ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್ ಗಳನ್ನು ಮುಳುಗಿರುವ ಬಿಜೆಪಿ ಈಗ ಕನ್ನಡಿಗರ ಹೆಮ್ಮೆಯ ನಂದಿನಿ ಸಂಸ್ಥೆಯನ್ನು ಮುಳುಗಿಸಲು ಚುನಾವಣೆ ಸಮಯದಲ್ಲಿ ಬಿಲ ತೋಡುತ್ತಿದ್ದಾರೆ’ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿದ ಡಿ.ಕೆ. ಸುರೇಶ್, ‘ನಾವೆಲ್ಲರೂ ಚುನಾವಣೆ ಸಮಯದಲ್ಲಿದ್ದೇವೆ. ಜನರ ದೃಷ್ಟಿ ರಾಜಕಾರಣದತ್ತ ಇರುತ್ತದೆ. ಈ ಸಂದರ್ಭದಲ್ಲಿ ರಾಜ್ಯದೊಳಗೆ ಬೇರೆ ಬೇರೆ ರೂಪದಲ್ಲಿ ಮುಸುಳಲು ಪ್ರಯತ್ನವಾಗುತ್ತಿದೆ. ಇವರ ಪಾಲಿಗೆ ಕನ್ನಡಿಗರು ಎಂದರೆ ಇಷ್ಟೋಂದು ಕೀಳು ಮನೋಭಾವನೆಯೇ? ಕನ್ನಡಿಗರು, ಕನ್ನಡದ ರೈತರು ತಮ್ಮದೇ ಆದ ಗೌರವ ಸಂಪಾದಿಸಿದ್ದಾರೆ. ಸ್ವಾತಂತ್ರ್ಯ ಬಂದ ನಂತರ ಅತಿ ಹೆಚ್ಚು ಖಾಸಗಿ ಕ್ಷೇತ್ರ ಹೊಂದಿದ್ದ ರಾಜ್ಯ ಕರ್ನಾಟಕ. ನಂತರದ…

ಪಕ್ಷಾಂತರ ಪರ್ವ: ಬಿಜೆಪಿ ಸೇರಿದ ಜೆಡಿಎಸ್, ಆಪ್ ಮುಖಂಡರು

ಬೆಂಗಳೂರು: ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್‍ನ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಣ್ಣ, ಎಎಪಿಯ ಚಿಕ್ಕಬಳ್ಳಾಪುರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನರಸಿಂಹ ರೆಡ್ಡಿ, ಮುಖಂಡರಾದ ಅಶೋಕ್ ಹಾಗೂ ಹಲವು ಬೆಂಬಲಿಗರು ವಿವಿಧ ಪಕ್ಷಗಳನ್ನು ತೊರೆದು ಬಿಜೆಪಿ ಸೇರ್ಪಡೆಗೊಂಡರು. ಬಿಜೆಪಿ ಸೇರಿದ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಈ ಬಾರಿಯ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರ ಸೇರಿದಂತೆ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ನಿಶ್ಚಿತವಾಗಿ ಬಿಜೆಪಿ ಅಭ್ಯರ್ಥಿಗಳಿಗೆ ವಿಜಯಮಾಲೆ ತೊಡಿಸುವ ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದ ಸಚಿವ ಡಾ. ಸುಧಾಕರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಮತ್ತಿತರ ಮುಖಂಡರು ಪಕ್ಷಕ್ಕೆ ಸೇರ್ಪಡೆಯಾದ ಮುಖಂಡರು ಮತ್ತು ಕಾರ್ಯಕರ್ತರನ್ನು ಸ್ವಾಗತಿಸಿ ಶುಭ ಕೋರಿದರು. ಚುನಾವಣೆ ಘೋಷಣೆಯಾದ ನಂತರವೂ ಬಿಜೆಪಿ ಸೇರುವವರ ಸಂಖ್ಯೆ ವೃದ್ಧಿಸುತ್ತಲೇ ಇದ್ದು, ಜನರ ನಡುವೆ ವಿಶ್ವಾಸಾರ್ಹ ಪಕ್ಷವಾಗಿ ಗುರುತಿಸಿಕೊಂಡಿರುವ ಬಿಜೆಪಿಯು ಈ ಬಾರಿಯ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ಹಳೇ…

ತೆರೆದ ಜೀಪ್‌ನಲ್ಲಿ ಸಫಾರಿ.. ಅಪರೂಪದ ಫೊಟೋ ಹಂಚಿಕೊಂಡ ಮೋದಿ..

ಮೈಸೂರು: ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ‌ ನರೇಂದ್ರ ಮೋದಿ ಬಂಡೀಪುರ ಅಭಯಾರಣ್ಯದಲ್ಲಿ ಬೆಳಿಗ್ಗೆ ತೆರೆದ ಜೀಪ್‌ನಲ್ಲಿ ಸಫಾರಿ ಕೈಗೊಂಡರು. ಈ ವೇಳೆ ನರೇಂದ್ರ ಮೋದಿಯವರು ವಿವಿಧ ವನ್ಯಜೀವಿಗಳನ್ನು ಕಂಡು‌ ಪುಳಕಿತರಾದರು. Spent the morning at the scenic Bandipur Tiger Reserve and got a glimpse of India’s wildlife, natural beauty and diversity. pic.twitter.com/X5B8KmiW9w — Narendra Modi (@narendramodi) April 9, 2023 ತಾವು ಸೆರೆಹಿಡಿದ ಫೊಟೋಗಳನ್ನು ಮೋದಿಯವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. Some more glimpses from the Bandipur Tiger Reserve. pic.twitter.com/uL7Aujsx9t — Narendra Modi (@narendramodi) April 9, 2023  

ಆನೆಗಳಿಗೆ ಕಬ್ಬು-ಬೆಲ್ಲ ತಿನ್ನಿಸಿದ ಮೋದಿ.‌. ವೀಡಿಯೋ ವೈರಲ್

ಮೈಸೂರು: ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ‌ ನರೇಂದ್ರ ಮೋದಿ ಬಂಡೀಪುರದಲ್ಲಿ ಸಫಾರಿ ಕೈಗೊಂಡು ಗಮನಸೆಳೆದಿದ್ದಾರೆ. ಇದೇ ವೇಳೆ ಅವರು ಆನೆಗಳಿಗೆ ಕಬ್ಬು-ಬೆಲ್ಲ ತಿಣಿಸಿದ ವೀಡಿಯೋ ವೈರಲ್ ಆಗಿದೆ. Prime Minister @narendramodi ji visits Theppakadu Elephant camp in #MudumalaiTigerReserve pic.twitter.com/F0ooWubBcn — Pratap Simha (Modi Ka Parivar) (@mepratap) April 9, 2023