ಭ್ರಷ್ಟರ ವಿರುದ್ದ ಭ್ರಹ್ಮಾಸ್ತ್ರ; ಹಲವೆಡೆ ಲೋಕಾಯುಕ್ತ ದಾಳಿ

ದೊಡ್ಡಬಳ್ಳಾಪುರ: ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ಅಧಿಕಾರಿಗಳ ನಿವಾಸಗಳ ಮೇಲೆ ಬುಧವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಪೊಲೀಸರು ದಾಳಿ‌ ಕೈಗೊಂಡು, ಕಡತಗಳ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ಕೊಡಿಗೇಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿರುವ ರಂಗಸ್ವಾಮಿ‌ ಹಾಗೂ ಅವರ ಅಳಿಯನಾದ ರಾಜಾಜಿನಗರದಲ್ಲಿ‌ ಕಂದಾಯ‌ ನಿರೀಕ್ಷರಾಗಿರುವ ಶ್ರೀನಿವಾಸ್ ಅವರ ನಿವಾಸಗಳ ಮೇಲೆ‌ ಲೋಕಾಯುಕ್ತ‌ ಪೊಲೀಸರು ದಾಳಿ‌ ನಡೆಸಿದ್ದಾರೆ. ದೊಡ್ಡಬಳ್ಳಾಪುರದ ಟಿ.ಬಿ.ನಾರಾಯಣಪ್ಪ ಬಡಾವಣೆಯಲ್ಲಿರುವ ರಂಗಸ್ವಾಮಿ ಅವರ ನಿವಾಸ, ವಾಣಿಜ್ಯ ಸಂಕೀರ್ಣ, ಪಾಲನ‌ಜೋಗಹಳ್ಳಿಯ‌ ನಿವಾಸಗಳ ಮೇಲೂ ಲೋಕಾಯುಕ್ತಕ್ಕೆ ಅಧಿಕಾರಿಗಳು ದಾಳಿ‌ ನಡೆಸಿ ಕಡತಗಳ ಪರಿಶಿಲನೆ‌ ನಡೆಸಿದರು. ಸ್ವಂತ ಊರಾದ ತೂಬಗೆರೆ ಹೋಬಳಿಯ ಸೋತೇನಹಳ್ಳಿ ಗ್ರಾಮದ ನಿವಾಸ, ರಾಜಾನುಕುಂಟೆಯ ಕಾಕೋಳು ರಸ್ತೆಯಲ್ಲಿರುವ 7 ಕೋಟಿ ಬೆಲೆ ಬಾಳುವ ನಿವಾಸ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ಗುಂಜೂರು ಬಳಿಯ ಜಮೀನು ಸೇರಿದಂತೆ ಹಲವೆಡೆ ಲೋಕಾಯುಕ್ತ ಪೊಲೀಸರು ದಾಳಿ‌ ಕೈಗೊಂಡಿದ್ದಾರೆ. ಸುಮಾರು‌ 20 ಅಧಿಕಾರಿಗಳ…

ರಾಷ್ಟ್ರೀಯ ತಂಬಾಕು ನಿಯಂತ್ರಣ ತಂತ್ರ; ‘ರಾಹಿಣಿ’ಯಲ್ಲಿ ವಿಶಿಷ್ಠ ಜಾಗೃತಿ ಕಾರ್ಯಕ್ರಮ

ಮಾದಕ ವ್ಯಸನಗಳ ಮೂಲಕ ಯುವಜನರು ದಾರಿತಪ್ಪುತ್ತಿರುವುದು ಕಳವಳಕಾರಿ ಸಂಗತಿ. ಅದರಲ್ಲೂ ಡ್ರಗ್ಸ್, ಗಾಂಜಾದಂತಹಾ ಅಪಾಯಕಾರಿ ಮಾದಕವಸ್ತುಗಳ ಸೇವನೆ ಆರೋಗ್ಯಕ್ಕೂ ಅಪಾಯಕಾರಿ ಎಂಬುದು ಸಾರ್ವತ್ರಿಕ ಸತ್ಯ. ಹೃದಯ, ಶ್ವಾಸಕೋಶ, ಗಂಟಲು ಇತ್ಯಾದಿ ಕ್ಯಾನ್ಸರ್ ರೀತಿಯ ಮಾರಣಾಂತಿಕ ಕಾಯಿಲೆಗಳಿಗೂ ತಂಬಾಕು ಕಾರಣವಾಗುತ್ತದೆ ಎಂಬುದು ವೈದ್ಯ ವಿಜ್ಞಾನ ಕ್ಷೇತ್ರದ ತಜ್ಞರು ಆಗಾಗ್ಗೆ ಎಚ್ಚರಿಕೆ ನೀಡುತ್ತಲೇ ಇದ್ದಾರೆ. ಈ ಎಚ್ಚರಿಕೆಯ ಘಂಟೆಯನ್ನು ಬೆಂಗಳೂರು ಹೊರವಲಯದ ದೊಡ್ಡಬಳ್ಳಾಪುರದ ರಾಹಿಣಿ ಪ್ಯಾರಾಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತೊಮ್ಮೆ ಭಾರಿಸಿ ನಾಡಿನ ಗಮನಸೆಳೆದರು‌. ದೊಡ್ಡಬಳ್ಳಾಪುರ ಬಳಿ, ತಾಲೂಕು ಆರೋಗ್ಯಾಧಿಕಾರಿಗಳ ಕಾರ್ಯಾಲಯ ಮತ್ತು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ವಿಶ್ವ ತಂಬಾಕು ರಹಿತ ದಿನ – 2023″ ಅನ್ನು ವಿಶಿಷ್ಠವಾಗಿ ಆಚರಿಸಲಾಯಿತು. ರಾಹಿಣಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ. ಆರೋಗ್ಯಧಿಕಾರಿಗಳು, ವೈದ್ಯಕೀಯ ಶಿಕ್ಷಣದ ಪ್ರಾದ್ಯಾಪಕರು, ವಿದ್ಯಾರ್ಥಿ ಸಮೂಹ ಭಾಗಿಯಾಗಿದ್ದರಿಂದ ಅಭಿಯಾನವೂ ಅರ್ಥಪೂರ್ಣವೆನಿಸಿತು. ಆರೋಗ್ಯಾಧಿಕಾರಿ ಡಾ. ಪರಮೇಶ್ವರ್ ಅವರು ಈ…

‘ಗ್ಯಾರೆಂಟಿ’ ಜೊತೆ ಮೇಕೆದಾಟು, ಮಹದಾಯಿ ಯೋಜನೆ ಅನುಷ್ಠಾನಕ್ಕೆ ತಯಾರಿ

ಬೆಂಗಳೂರು: ‘ಗ್ಯಾರೆಂಟಿ’ ಭರವಸೆಗಳ ಜಾರಿಯ ಜೊತೆಯಲ್ಲೇ ಮೇಕೆದಾಟು, ಮಹದಾಯಿ ಯೋಜನೆ ಅನುಷ್ಠಾನಕ್ಕೆ ತಯಾರಿ ನಡೆದಿದೆ. ಈ ಸಂಬಂಧ ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಲಹೆ ನೀಡಿದ್ದಾರೆ. ಅಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಿರುವ ಅವರು, ಕೇಂದ್ರದಿಂದ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಅನುಮತಿ ತರುವುದೇ ನಾನು ನಿಮಗೆ ನೀಡುತ್ತಿರುವ ಗುರಿ ಎಂದರು. ಮೇಕೆದಾಟು, ಮಹದಾಯಿ ಯೋಜನೆಗಳನ್ನು ಆದ್ಯತೆ ಮೇರೆಗೆ ಅನುಷ್ಠಾನಕ್ಕೆ ತರಬೇಕು. ಅದಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಬೇಕು. ಜಲವಿವಾದ ಪರಿಹಾರ, ಬಾಕಿ ಯೋಜನೆಗಳ ಪೂರ್ಣ, ನೀರಾವರಿ ಯೋಜನೆಗಳಿಗೆ ಸಂಪನ್ಮೂಲ ಕ್ರೋಡೀಕರಣ, ಕೇಂದ್ರದಿಂದ ಅನುದಾನ ತರುವುದು, ಉದ್ಯೋಗ ಸೃಷ್ಟಿಗೆ ಒತ್ತು ಕೊಡಬೇಕು ಎಂದವರು ಅಧಿಕಾರಿಗಳಿಗೆ ತಿಳಿಸಿದರು. ನೀರಾವರಿ ಯೋಜನೆಗಳಿಗೆ 5 ವರ್ಷದಲ್ಲಿ 2 ಲಕ್ಷ ಕೋಟಿ ರೂಪಾಯಿ ವಿನಿಯೋಗಿಸುತ್ತೇವೆ ಎಂದು ಮಾತು ಕೊಟ್ಟಿದ್ದೇವೆ. ಸರಕಾರ, ಸಂಸ್ಥೆಗಳು, ಕೇಂದ್ರದ ಅನುದಾನದ ಮೂಲಕ ಸಂಪನ್ಮೂಲ ಒಟ್ಟುಗೂಡಿಸಬೇಕು…

ಬಿಜೆಪಿ ಆಡಳಿತಾವಧಿಯ ಎಲ್ಲಾ ಹಗರಣಗಳ ಮರು ತನಿಖೆಗೆ ಸಿದ್ದು ಸರ್ಕಾರ ನಿರ್ಧಾರ

ಬೆಂಗಳೂರು: ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ಸಮರ ಸಾರಿದ್ದ ಕಾಂಗ್ರೆಸ್ ಪಕ್ಷ ಚುನಾವಣಾ ಅಸ್ತ್ರವನ್ನಾಗಿಸಿ ಅಧಿಕಾರಕ್ಕೆ ಬಂದಿದೆ. ನೂತನ ಸರ್ಕಾರ ರಚನೆಯಾಗುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಅವರು ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಎಲ್ಲಾ ಹಗರಣಗಳ ಮರು ತನಿಖೆ ನಡೆಸಲು ಮುಂದಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಸಚಿವ ಎಂ.ಬಿ.ಪಾಟೀಲ್, ಬಿಜೆಪಿ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಕೇಳಿ ಬಂದಿದ್ದ ಎಲ್ಲಾ ಹಗರಣಗಳನ್ನು ಮರು ತನಿಖೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್, ಬಿಜೆಪಿ ಸರ್ಕಾರದಲ್ಲಿ ಕೇಳಿಬಂದಿದ್ದ ಪಿಎಸ್ಐ ಹಗರಣ, ಗುತ್ತಿಗೆದಾರರ ಮೇಲೆ ಲಂಚದ ಒತ್ತಡ ಮುಂತಾದ ಹಲವಾರು ಆರೋಪಗಳ ಬಗ್ಗೆ ಮರುತನಿಖೆಗೆ ನಡೆಸಲಾಗುವುದು ಎಂದು ಹೇಳಿದರು. ಶನಿವಾರ ನಡೆದ ಸಂಪುಟ ಸಭೆಯಲ್ಲಿ ಹಳೆಯ ಪ್ರಕರಣಗಳ ತನಿಖೆ ಕುರಿತಂತೆ ವಿಷಯ ಪ್ರಸ್ತಾಪವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತಂತೆ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಅದರಂತೆ ಬಿಜೆಪಿ ಸರ್ಕಾರದ ಎಲ್ಲಾ…

ಗ್ಯಾರಂಟಿ ಯೋಜನೆ ಜಾರಿ ಬಗ್ಗೆ ಅನುಮಾನ ಬೇಡ: ಖರ್ಗೆ

ಬೆಂಗಳೂರು: ನಮ್ಮ ಮೊದಲ ಸಚಿವ ಸಂಪುಟದಲ್ಲಿ ನಮ್ಮ ಗ್ಯಾರಂಟಿ ಯೋಜನೆ ಜಾರಿ ಬಗ್ಗೆ ವಾಗ್ದಾನ ನೀಡಿದ್ದು, ಅದನ್ನು ಮಾಡಲಿದ್ದೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದ್ದಾರೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ನಮ್ಮ ಮೊದಲ ಸಚಿವ ಸಂಪುಟದಲ್ಲಿ ನಮ್ಮ ಗ್ಯಾರಂಟಿ ಯೋಜನೆ ಜಾರಿ ಬಗ್ಗೆ ವಾಗ್ದಾನ ನೀಡಿದ್ದು, ಅದನ್ನು ಮಾಡಲಿದ್ದೇವೆ. ಇದರ ಜತೆಗೆ ನಾವು ನೀಡಿರುವ ಇತರೆ ಭರವಸೆಗಳನ್ನು ಜಾರಿ ಮಾಡುತ್ತೇವೆ. ಕಳೆದ ಬಾರಿಯ ಸರ್ಕಾರ ಇದ್ದಾಗಲೂ ನಾವು ಹೇಳಿದ್ದನ್ನು ಮಾಡಿ ತೋರಿಸಿದ್ದೇವೆ. ನಾವು ಬಿಜೆಪಿಯವರ ರೀತಿ ಹೇಳುವುದೊಂದು ಮಾಡುವುದು ಮತ್ತೊಂದು ರೀತಿ ಆಡಳಿತ ಮಾಡುವುದಿಲ್ಲ. ನಾವು ಹೇಳಿದ್ದನ್ನು ಮಾಡಿ ತೋರಿಸುತ್ತೇವೆ ಎಂದರು. ಪ್ರಧಾನಿ ಮೋದಿ ಅವರು ಈಗ ಮತ್ತೊಂದು ಆದೇಶ ಹೊರಡಿಸಿದ್ದಾರೆ. ಅವರು ಜಪಾನ್ ಗೆ ತೆರಳಿದಾಗಲೆಲ್ಲಾ ನೋಟು ರದ್ದು ತೀರ್ಮಾನ ಪ್ರಕಟಿಸುತ್ತಾರೆ. ಕಳೆದ ಬಾರಿ ಜಪಾನ್ ಗೆ…

ಕಾರ್‌ಸ್ಟ್ರೀಟ್ ವೆಂಕಟರಮಣ ದೇವಳಕ್ಕೆ ಗೋಕರ್ಣ ಮಠಾಧೀಶರ ಭೇಟಿ; ವೈಭವದ ಸ್ವಾಗತ

ಮಂಗಳೂರು : ಬಂದರು ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಮಠದ ಮಠಾಧೀಶರಾದ ಶ್ರೀಮದ್ ವಿದ್ಯಾಧೀಶ ಶ್ರೀಪಾದ ವಡೆರ್ ಸ್ವಾಮೀಜಿಯವರು ಭೇಟಿ ನೀಡಿದ ಸನ್ನಿವೇಶ ಜಾತ್ರೆಯ ವೈಭವಕ್ಕೆ ಸಾಕ್ಷಿಯಾಯಿತು. ಶ್ರೀ ಕ್ಷೇತ್ರಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ಶ್ರೀಗಳು ಶನಿವಾರ ಸಾಯಂಕಾಲ 6 ಗಂಟೆ ಸುಮಾರಿಗೆ ಆಗಮಿಸಿದರು. ಸಮಸ್ತ ಮಂಗಳೂರಿನ ಜಿಯಸ್‌ಬಿ ಸಮಾಜ ಭಾಂದವರ ಪರವಾಗಿ ಶ್ರೀ ಗಳವರಿಗೆ ಸಕಲ ಬಿರುದಾವಳಿ ಹಾಗೂ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಶ್ರೀಗಳ ಆಗಮನ ಬಳಿಕ ಶ್ರೀ ದೇವಳದ ವಸಂತ ಮಂಟಪದಲ್ಲಿ ಹತ್ತು ಸಮಸ್ತರ ಪರವಾಗಿ ದೇವಳದ ಮೊಕ್ತೇಸರರಿಂದ ಶ್ರೀಗಳವರ ಪಾದ ಪೂಜೆ ನೆರವೇರಿಸಲಾಯಿತು. ಬಳಿಕ ಶ್ರೀಗಳವರಿಂದ ಆಶೀರ್ವಚನ – ಪ್ರವಚನ ಕೈಂಕರ್ಯ ನೆರವೇರಿತು. ಶ್ರೀ ವೀರ ವೆಂಕಟೇಶ ದೇವರ ರಾತ್ರಿ ಪೂಜೆ ಶ್ರೀ ದೇವರಿಗೆ ಶ್ರೀಗಳವರ ಕರಕಮಲಗಳಿಂದ ಮಹಾ ಮಂಗಳಾರತಿ ನೆರವೇರಿತು ಎಂದು…

ಅಡ್ವೊಕೇಟ್ ಜನರಲ್ ಆಗಿ ನ್ಯಾ.ವಿಶ್ವನಾಥ್ ಶೆಟ್ಟಿ ಪುತ್ರ ಶಶಿಕಿರಣ್ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದ ನೂತನ  ಅಡ್ವೊಕೇಟ್‌ ಜನರಲ್ ಆಗಿ ಹಿರಿಯ ವಕೀಲ ಹಾಗೂ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ಅಡ್ವೊಕೇಟ್ ಜನರಲ್ ಅಗಿದ್ದ ಪ್ರಭುಲಿಂಗ ನಾವಡಗಿ ಅವರ ರಾಜೀನಾಮೆಯಿಂದ ಈ ಹುದ್ದೆ ತೆರವಾಗಿತ್ತು. ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಎಜಿ ಆಯ್ಕೆ ಅಧಿಕಾರವನ್ನು ಸಿಎಂಗೆ ನೀಡಲಾಗಿತ್ತು. ಸಿಎಂ ಸಿದ್ದರಾಮಯ್ಯ ಅವರ ನಿರ್ದೇಶನದಂತೆ ಹಿರಿಯ ವಕೀಲ ಶಶಿಕಿರಣ್ ಶೆಟ್ಟಿ ಅವರನ್ನು ರಾಜ್ಯ ಸರ್ಕಾರದ ಅಡ್ವೊಕೇಟ್ ಜನರಲ್ ಆಗಿ ನೇಮಕ ಮಾಡಲಾಗಿದೆ. ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿ ಅವರ ಪುತ್ರರೂ ಆಗಿರುವ ಶಶಿಕಿರಣ್ ಶೆಟ್ಟಿ ಹೈಕೋರ್ಟ್‌ನ ಹಿರಿಯ ವಕೀಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

‘ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡುತ್ತೇವೆ’; ನೂತನ ಸಿಎಂ ವಾಗ್ದಾನ

ಬೆಂಗಳೂರು: ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡುತ್ತೇವೆ’ ಎಂದು ನೂತನ ಸಿಎಂ  ಸಿದ್ದರಾಮಯ್ಯ ವಾಗ್ದಾನ ಮಾಡಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಭಾರೀ ಜನಸ್ತೋಮದ ನಡುವೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ,  ಜನ ಬದಲಾವಣೆ ಬಯಸಿದ್ದು, ನಾವು ಜನರಿಗೆ ಕೊಟ್ಟಿರುವ ಭರವಸೆ, ಗ್ಯಾರಂಟಿ ಯೋಜನೆಗಳನ್ನು  ಜಾರಿಗೆ ತರುತ್ತೇವೆ ಎಂದರು. ಇದು ಕನ್ನಡನಾಡಿನ ಜನತೆಗೆ ನೂತನ ಸರ್ಕಾರದ ಕೊಡುಗೆಯಾಗಿದೆ. ನಮ್ಮ ಪ್ರಮಾಳಿಕೆಯಲ್ಲಿ ಕೊಟ್ಟಿರುವ ಎಲ್ಲಾ ಕಾರ್ಯಕ್ರಮಗಳನ್ನು ಮುಂದಿನ ಐದು ವರ್ಷಗಳಲ್ಲಿ ಈಡೇರಿಸುತ್ತೇವೆ ಎಂದರು.‌