ದೊಡ್ಡಬಳ್ಳಾಪುರದಲ್ಲಿ ಅರಳಿದ ಕಮಲ. ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಧೀರಜ್ ಜಯಭೇರಿ.

ಬೆಂಗಳೂರು: ದೊಡ್ಡಬಳ್ಳಾಪುರ ವಿಧಾನಸಭೆ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಸಾರ್ವತ್ರಿಕ ಚುನಾವಣೆಯೊಂದರಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಕಾಂಗ್ರೆಸ್, ಜೆಡಿಎಸ್ ಭದ್ರಕೋಟೆಯಂತಿದ್ದ ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ ಕಮಲ ಅರಳಿ ನಿಂತಿದೆ. 31 ವರ್ಷದ ಯುವಕ ಧೀರಜ್ ಮುನಿರಾಜು ಹಾಲಿ ಶಾಸಕ ಕಾಂಗ್ರೆಸ್ ನ ಟಿ.ವೆಂಕಟರಮಣಯ್ಯ ವಿರುದ್ಧ ದಾಖಲೆಯ ೩೧,೩೭೫ ಮತಗಳ ಅಂತರದಿಂದ ವಿಜಯ ಪತಾಕೆ ಹಾರಿಸಿದ್ದಾರೆ. ಈ ಮೂಲಕ ರಾಜ್ಯದಲ್ಲೇ ಅತ್ಯಂತ ಕಿರಿಯ ವ್ಯಕ್ತಿ ಶಾಸಕರಾಗಿ ಆಯ್ಕೆಯಾಗಿದ್ದರೆ. ತ್ರಿಕೋನ ಸ್ಪರ್ಧೆಯೊಂದಿಗೆ ಜಿದ್ದಾಜಿದ್ದಿನಿಂದ ಕೂಡಿದ್ದ ಕ್ಷೇತ್ರದಲ್ಲಿ ಮತದಾನ ಮುಕ್ತವಾದರೂ ಗೆಲುವು ಮಾಲೆ ಯಾರಿಗೆ ಎಂಬುದನ್ನು ಅಂದಾಜಿಸಲು ಸಾಧ್ಯವಾಗಿರಲಿಲ್ಲ. ಕಾಂಗ್ರೆಸ್ ನಾಯಕರು ನಮ್ಮದೆ ಹ್ಯಾಟ್ರಿಕ್ ಗೆಲುವು ಎಂದು ಬೀಗುತ್ತಿದ್ದರು. ಜೆಡಿಎಸ್ ನವರು ಮತದಾರ ಪ್ರಭು ಈ ಬಾರಿ ನಮ್ಮ ಕೈಹಿಡಿಯಲಿದ್ದಾನೆ ಎಂದು ಅಬ್ಬರಿಸಿದ್ದರು. ಬಿಜೆಪಿಯವರು ಅಭಿವೃದ್ಧಿಗಾಗಿ, ಭ್ರಷ್ಟಾಚಾರ ಮುಕ್ತ, ಅಕ್ರಮ ಮದ್ಯ ಮಾರಾಟಕ್ಕೆ ಇತಿಶ್ರೀ ಹಾಡಲು ಒಮ್ಮೆ ಅವಕಾಶ ನೀಡಿ ಎಂದು ಮತಯಾಚನೆ ಮಾಡಿದ್ದರು.…

ಕಾಂಗ್ರೆಸ್ ಜಯಭೇರಿ.. ಖರ್ಗೆ, ಸಿದ್ದು, ಡಿಕೆಶಿಗೆ ಶಾಸಕ ಮಂಜುನಾಥ್ ಭಂಡಾರಿ ಅಭಿನಂದನೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಭಾರಿಸುವ ಮೂಲಕ ಹೊಸ ಯುಗ ಆರಂಭವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಪ್ರತಿಕ್ರಿಯಿಸಿದ್ದಾರೆ. ತಾವೂ ಗೆದ್ದು, ಪಕ್ಷದ ನಾಯಕರನ್ನೂ ಗೆಲ್ಲಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಸಫಲರಾಗಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಅಭಿನಂಧಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಜನಮತ ಬಂದಿರುವ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಮಂಜುನಾಥ್ ಭಂಡಾರಿ, ಈ ಹಿಂದೆ ಬಿಜೆಪಿಯು ಹಿಂಬಾಗಿಲಿನ ರಾಜಕಾರಣ ಮಾಡಿತ್ತು. ಹಿಂದೆ ಚುನಾವಣೆಯಲ್ಲಿ ಗೆದ್ದ ಶಾಸಕರನ್ನು ಆಪರೇಷನ್ ಕಮಲ ಮೂಲಕ ಹೈಜಾಕ್ ಮಾಡಿ ವಾಮಮಾರ್ಗದ ಮೂಲಕ ಬಿಜೆಪಿ ಅಧಿಕಾರಕ್ಕೆ ಬಂದಿತ್ತು. ಆ ಪಕ್ಷಕ್ಕೆ ರಾಜ್ಯದ ಜನರು ಈ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಿದ್ದಾರೆ ಎಂದು ವಿಶ್ಲೇಷಿಸಿದರು. ಈ ಬಾರಿ ಸರಳ ಬಹುಮತಕ್ಕಿಂತ ಬಹಳಷ್ಟು ಹೆಚ್ಚು ಸ್ಥಾನಗಳನ್ನು ಕಾಂಗ್ರೆಸ್ ಗೆಲ್ಲಿಸುವ ಮೂಲಕ ಜನತೆ ಈ…

ಚಾಮರಾಜನಗರ ಹಾಗೂ ವರುಣಾ ಕ್ಷೇತ್ರಗಳಲ್ಲಿ ಸೋಮಣ್ಣ ಪರಾಜಯ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಹುತೇಕ ನಾಯಕರ ಲೆಕ್ಕಾಚಾರಗಳು ಉಲ್ಟಾ ಆಗಿದೆ. ಚಾಮರಾಜನಗರ ಹಾಗೂ ವರುಣಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಲೆಕ್ಕಾಚಾರದಲ್ಲಿದ್ದ ಬಿಜೆಪಿ ನಾಯಕ ಸಚಿವ ವಿ. ಸೋಮಣ್ಣ ಮತಎಣಿಕೆ ಆರಂಭವಾದ ಕ್ಷಣದಿಂದಲೇ ಹಿನ್ನಡೆ ಅನುಭವಿಸುತ್ತಲೇ ಬಂದರು. ಚಾಮರಾಜನಗರ ಕ್ಷೇತ್ರದಲ್ಲಿ ಸೋಮಣ್ಣ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಅವರು ಭಾರೀ 10,000 ಸಾಧಿಸಿದರೆ ಕ್ಕೂ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿದರು. ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ದವೂ ಹಿನ್ನಡೆ ಅನುಭವಿಸಿದರು. ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದೇ ಗುರುತಿಸಿಕೊಂಡಿದ್ದ ಸಿದ್ದರಾಮಯ್ಯ ಅವರನ್ನು ಸೋಲಿಸುವ ಪಣತೊಟ್ಟಿದ್ದ ಸೋಮಣ್ಣ ಅವರು ಈ ಕ್ಷೇತ್ರದಲ್ಲೂ ಜಯಗಳಿಸಿಲ್ಲ.

ದೇವೇಗೌಡ ಕುಟುಂಬದ ವಿರುದ್ಧ ತೊಡೆತಟ್ಟಿದ್ದ ಪ್ರೀತಂಗೌಡ ಸೋಲು

ಹಾಸನ: ರಾಜಕೀಯ ಜಂಗೀ ಕುಸ್ತಿಯ ಅಖಾಡ ಎನಿಸಿರುವ ಹಾಸನದಲ್ಲಿ ಬಿಜೆಪಿ ಸೋಲುಂಡಿದೆ. ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಶಾಸಕ ಪ್ರೀತಮ್ ಗೌಡ ಅವರನ್ನು ಜೆಡಿಎಸ್ ಸೋಲಿಸುವಲ್ಲಿ ಯಶಸ್ವಿಯಾಗಿದೆ. ಜೆಡಿಎಸ್ ಹುರಿಯಾಳು ಸ್ವರೂಪ್ ಜಯಭೇರಿ ಭಾರಿಸಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ತೀವ್ರ ಮುಖಬಂಗವಾಗಿದೆ ಎಂಬ ವಿಶ್ಲೇಷಣೆ ಕೇಳಿ ಬಂದಿದೆ. ಬಿಜೆಪಿ ಸರ್ಕಾರದಲ್ಲಿದ್ದ ಸಚಿವರನೇಕರು ಈ ಚುನಾವಣಾ ಮತ ಎಣಿಕೆ ಪ್ರಕ್ರಿಯೆಯುದ್ದಕ್ಕೂ ಹಿನ್ನಡೆ ಅನುಭವಿಸಿದ್ದರು. ಇದೇ ವೇಳೆ ಹಾಸನದಲ್ಲೂ ಬಿಜೆಪಿಗೆ ಜನರು ಬಿಗ್ ಶಾಕ್ ಕೊಟ್ಟಿದ್ದಾರೆ. ಈ ವರೆಗೂ ಬಿಜೆಪಿ ಶಾಸಕರಾಗಿದ್ದ ಪ್ರೀತಮ್ ಗೌಡ ಅವರು ತನ್ನನ್ನು ದೇವೇಗೌಡ ಕುಟುಂಬದ ವಿರುದ್ಧ ತೊಡೆತಟ್ಟಿದ್ದರು. ಆದರೆ ದೇವೇಗೌಡರ ತವರು ಜಿಲ್ಲೆಯಿಂದ ಮರು ಆಯ್ಕೆಯಾಗುವ ಪ್ರೀತಮ್ ಗೌಡರ ಕನಸು ನುಚ್ಚು ನೂರಾಗಿದೆ.

‘ಮಂಗಳೂರು’ (ಉಳ್ಳಾಲ) ಕ್ಷೇತ್ರದಲ್ಲಿ ಕಾಂಗ್ರೆಸ್’ನ ಯು.ಟಿ.ಖಾದರ್ ಜಯಭೇರಿ.

ಮಂಗಳೂರು: ಕರಾವಳಿಯ ಬಿಜೆಪಿ ಭದ್ರಕೋಟೆಯ ನಡುವೆ ಕಾಂಗ್ರೆಸ್ ಅಧಿಪತ್ಯದ ಏಕೈಕ ‘ಮಂಗಳೂರು’ ಇದೀಗ ಮತ್ತೆ ಕೈ ವಶವಾಗಿದೆ. ಕಮಲ-ಕೈ ಕಾಳಗದಿಂದಾಗಿ ಎಲ್ಲರ ಕುತೂಹಲದ ಕೇಂದ್ರ ಬಿಂದುವಾಗಿದ್ದ ಈ ಖೇತ್ರದ ಜಿದ್ದಾಜಿದ್ದಿನ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷವು ಕ್ಷೇತ್ರವನ್ನು ಈ ಬಾರಿ ಉಳಿಸಿಕೊಳ್ಳುವುದು ಖಚಿತವೇ ಎಂಬ ಲೆಕ್ಕಾಚಾರ ಸಾಗಿತ್ತು. ಅಂತಿಮವಾಗಿ ಕಾಂಗ್ರೆಸ್ ಅಭ್ಯರ್ಥಿ ಯು,ಟಿ.ಖಾದರ್ ಜಯಭೇರಿ ಭಾರಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ ವಿರುದ್ಧ ಯು.ಟಿ. ಖಾದರ್‌ ಗೆ 18,000 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಮಂಗಳೂರು ವಿಧಾನಸಭಾ ಕ್ಷೇತ್ರವಾಗಿದ್ದರೂ ಇದು ಈಗಿನ್ನೂ ‘ಉಳ್ಳಾಲ’ ಎಂದೇ ಗುರುತಾಗಿದೆ. ಕಾಂಗ್ರೆಸ್ ಹುರಿಯಾಳು ಯು.ಟಿ.ಖಾದರ್ ಅವರು ಪುನರಾಯ್ಕೆ ಬಯಸಿ ಅಖಾಡಕ್ಕಿಳಿದಿದ್ದರೆ, ಬಿಜೆಪಿಯಿಂದ ಸತೀಶ್ ಕುಂಪಲ ಅವರು ಪ್ರಬಲ ಪೈಪೋಟಿ ಒಡ್ಡಿದ್ದರು. ಈ ಕ್ಷೇತ್ರವು ಮುಸ್ಲಿಂ ಮತದಾರರ ಪ್ರಾಬಲ್ಯದ ಕ್ಷೇತ್ರವಾಗಿದ್ದರೂ SDPI ಒಡ್ಡಿರುವ ಪ್ರಬಲ ಸವಾಲು ಕಾಂಗ್ರೆಸ್ ಪಕ್ಷಕ್ಕೆ ತಲೆನೋವು ತಂದಿತ್ತು. ಬಹುಪಾಲು ಮುಸ್ಲಿಂ…

ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿದ್ದ ಸಚಿವ ಡಾ. ಸುಧಾಕರ್’ಗೆ ಸೋಲು

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಈ ಬಾರಿ ಅಚ್ಚರಿಯ ಫಲಿತಾಂಶವನ್ನು ಪಡೆದುಕೊಂಡಿದೆ. ಅದರಲ್ಲೂ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿದ್ದ ಸಚಿವ ಡಾ. ಸುಧಾಕರ್ ಅವರು ಹೀನಾಯವಾಗಿ ಸೋಲುಂಡಿದ್ದಾರೆ . ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ಅವರ ಪ್ರಬಲ ಪೈಪೋಟಿಯಿಂದಾಗಿ ಸಚಿವ ಸುಧಾಕರ್ ಅವರು ಹಿನ್ನಡೆ ಅನುಭವಿಸುವಂತಾಯಿತು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ತಿಸಿ ಗೆಲುವು ಸಾಧಿಸಿದ್ದ ಸುಧಾಕರ್ ಅವರು ಬದಲಾದ ಪರಿಸ್ಥಿತಿಯಲ್ಲಿ ಬಿಜೆಪಿ ಸೇರಿ ಮತ್ತೆ ಕಣಕ್ಕಿಳಿದು ಜಯಗಳಿಸಿದ್ದರು. ಆದರೆ ಅವರ ಬಗ್ಗೆ ಬಿಜೆಪಿ ಕಾರ್ಯಕರ್ತರೇ ಆಕ್ಷೇಪ ವ್ಯಕ್ತಪಡಿಸುತ್ತಿದ್ದರು. ಅವರ ಸ್ವ ಕ್ಷೇತ್ರದಲ್ಲೂ ಕಾರ್ಯಕರ್ತರು ಅಸಮಾಧಾನ ಹೊರಹಾಕುತ್ತಿದ್ದರು. ಇದೀಗ ಸ್ವಪಕ್ಷೀಯರ ಸಿಟ್ಟು ಈ ಬಾರಿಯ ಚುನಾವಣೆಯಲ್ಲಿ ಪ್ರತಿಧ್ವನಿಸಿದೆ.

ಸಿದ್ದರಾಮಯ್ಯ ಅವರಿಗೆ ಒಂದೆಡೆ ಫಲಿತಾಂಶದ ಖುಷಿ.. ಮತ್ತೊಂದೆಡೆ ಸಾವಿನ ಸುದ್ದಿಯ ಆಘಾತ

ಮೈಸೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಒಂದೆಡೆ ಈ ಚುನಾವಣೆಯ ದಿಗ್ವಿಜಯದ ಖುಷಿ. ಮತ್ತೊಂದೆಡೆ ತಮ್ಮ ಪರಿವಾರ ಸದಸ್ಯರೊಬ್ಬರ ಸಾವಿನ ಸುದ್ದಿ ತಂದ ನೋವು. ಸಿದ್ದರಾಮಯ್ಯ ಅವರ ಸಹೋದರಿ ಶಿವಮ್ಮ‌ ಅವರ ಪತಿ ರಾಮೇಗೌಡ ಶನಿವಾರ‌ ನಿಧನ‌ರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 69 ವರ್ಷ ವಯಸ್ಸಿನ ಅವರನ್ನು ಬೆಳಿಗ್ಗೆಮೈಸೂರಿನ ಜೆಎಸ್ ಎಸ್ ಆಸ್ಪತ್ರೆ ಗೆ ದಾಖಲಿಸಲಾಗಿತ್ತು. ಬೆಳಿಗ್ಗೆ 8.30ರ ಸುಮಾರಿಗೆ ಕೊನೆಯುಸಿರೆಳೆದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಹೆಚ್ಡಿಕೆ ಪುತ್ರ ನಿಖಿಲ್’ಗೆ ಈ ಬಾರಿಯೂ ಒಲಿಯದ ಜಯ

ರಾಮನಗರ: ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಅವರ ಕನಸು ಮತ್ತೆ ಭಗ್ನವಾಗಿದೆ. ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ನಿಖಿಲ್ ಕುಮಾರಸ್ವಾಮಿ ಅವರು ಹೀನಾಯವಾಗಿ ಸೋಲುಂಡಿದ್ದಾರೆ. ಪ್ರತಿಸ್ಪರ್ದಿ ಕಾಂಗ್ರೆಸ್ ಹುರಿಯಾಳು ಇಕ್ಬಾಲ್ ಹುಸೇನ್ ವಿರುದ್ಧ ನಿಖಿಲ್ ಭಾರೀ ಮತಗಳ ಅಂತರದಿಂದ ಸೋಲು ಅನುಭವಿಸಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿ ಅವರು ಈ ಬಾರಿಯಾದರೂ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಯನ್ನು ಶಾಸಕನನ್ನಾಗಿ ಮಾಡಬೇಕೆಂಬ ಪ್ರಯತ್ನದಲ್ಲಿದ್ದರು. ಆದರೆ ಈ ಪ್ರಯತ್ನ ಫಲ ಕಾಣಲಿಲ್ಲ. ಕಳೆದ ಲೋಕಸಭೆಯಲ್ಲಿ ಸ್ಪರ್ಧಿಸಿದ್ದ ನಿಖಿಲ್ ಅವರಿಗೆ ವಿಜಯಲಕ್ಷ್ಮಿ ಒಲಿದಿರಲಿಲ್ಲ, ಇದೀಗ ಈಬಾರಿಯ ವಿಧಾನಸಭಾ ಚುನಾವಣೆಯಲ್ಲೂ ನಿಖಿಲ್ ಅವರು ಸೋಲುಂಡಿದ್ದಾರೆ.

ಹಿಂದೂತ್ವದ ಪ್ರಯೋಗ ಶಾಲೆ ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಜಯಭೇರಿ

ಪುತ್ತೂರಿನ ಜಿದ್ದಾಜಿದ್ದಿ ಹೋರಾಟದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರಿಗೆ ಜಯ. ಪಕ್ಷೇತರ ಅರುಣ್ ಕುಮಾರ್ ಪುತ್ತಿಲ ಅವರಿಗೆ ಸೋಲು. ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರಿಗೆ ಮೂರನೇ ಸ್ಥಾನ ಮಂಗಳೂರು: ಹಿಂದೂತ್ವದ ಪ್ರಯೋಗ ಶಾಲೆ ಎಂದೇ ಗುರುತಾಗಿರುವ ದಕ್ಷಿಣಕನ್ನಡ ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಜಯಭೇರಿ ಭಾರಿಸಿದ್ದಾರೆ. ಬಿಜೆಪಿ ರಾಜ್ಯಅಧ್ಯಕ್ಷ ನಳಿನ್ ಕುಮಾರ್ ಅವರ ತವರಿನಲ್ಲೇ ಕಮಲಾ ಪಕ್ಷ ಹೀನಾಯವಾಗಿ ಸೋತಿರುವುದು ಈ ಚುನಾವಣೆಯ ಅಚ್ಚರಿ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಆಶಾ ತಿಮ್ಮಪ್ಪ, ಕಾಂಗ್ರೆಸ್ ಪಕ್ಷದ ಅಶೋಕ್ ಕುಮಾರ್ ರೈ ಕಣದಲ್ಲಿದ್ದರು. ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿದ್ದ ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಪಕ್ಷೇತರರಾಗಿ ಕಣಕ್ಕಿಳಿದಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಪಕ್ಷೇತರರ ನಡುವೆ ಸ್ಪರ್ಧೆ ನಡೆಯುತ್ತಿದೆ ಎಂದೇ ಬಿಜೆಪಿ ನಾಯಕರು ಹೇಳಿಕೊಳ್ಳುತ್ತಿದ್ದರು. ಇದೆಲ್ಲದರ ನಡುವೆ…

‘ಕೈ ಕಾರ್ಯಕರ್ತರ ಒಗ್ಗಟ್ಟಿನ ಪರಿಶ್ರಮದಿಂದ ಪಕ್ಷಕ್ಕೆ ಯಶಸ್ಸು ಸಿಕ್ಕೆದೆ’: ಡಿಕೆಶಿ

ಬೆಂಗಳೂರು: ನಮ್ಮ ನಾಯಕರು ಹಾಗೂ ಕಾರ್ಯಕರ್ತರ ಒಗ್ಗಟ್ಟಿನ ಪರಿಶ್ರಮದಿಂದ ಪಕ್ಷಕ್ಕೆ ಈ ಯಶಸ್ಸು ಸಿಕ್ಕಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೇಳಿದ್ದಾರೆ‌ ಚುನಾವಣಾ ಫಲಿತಾಂಶ ಕುರಿತು ಭಾವುಕ ಪ್ರತಿಕ್ರಿಯೆ‌ನೀಡಿದ ಅವರು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊಟ್ಟ ಮಾತಿನಂತೆ ನಾನು ಪಕ್ಷವನ್ನು ಗೆಲುವಿನ ದಡ ಸೇರಿಸಿದ್ದೇನೆ. ನನ್ನ ಮೇಲೆ ಬಿಜೆಪಿ ಷಡ್ಯಂತ್ರ ರೂಪಿಸಿ ಬಿಜೆಪಿ ಸೇರಬೇಕು ಅಥವಾ ಜೈಲಿಗೆ ಹೋಗಬೇಕು ಎಂಬ ಆಯ್ಕೆ ಇಟ್ಟಾಗ ನಾನು ಜೈಲಿಗೆ ಹೋಗುವುದನ್ನು ಆರಿಸಿಕೊಂಡೆ. ಆಗ ಸೋನಿಯಾ ಗಾಂಧಿ ಅವರು ತಿಹಾರ್ ಜೈಲಿಗೆ ಬಂದು ನನ್ನನ್ನು ಭೇಟಿ ಮಾಡಿದ್ದರು. ಅವರು ನನ್ನ ಮೇಲೆ ಅಷ್ಟು ನಂಬಿಕೆ ಇಟ್ಟಿದ್ದರು ಎಂದರು. ಇದು ಒಬ್ಬನಿಂದ ಬಂದಿರುವ ಯಶಸ್ಸಲ್ಲ. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಸೇರಿದಂತೆ ಕಾಂಗ್ರೆಸ್ ಶಾಸಕರುಗಳು, ಎಐಸಿಸಿ ಪದಾಧಿಕಾರಿಗಳು, ಉಸ್ತುವಾರಿಗಳು, ರಾಜ್ಯದ ನಾಯಕರುಗಳು, ಪಕ್ಷದ…