‘ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡುತ್ತೇವೆ’; ನೂತನ ಸಿಎಂ ವಾಗ್ದಾನ

ಬೆಂಗಳೂರು: ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡುತ್ತೇವೆ’ ಎಂದು ನೂತನ ಸಿಎಂ  ಸಿದ್ದರಾಮಯ್ಯ ವಾಗ್ದಾನ ಮಾಡಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಭಾರೀ ಜನಸ್ತೋಮದ ನಡುವೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ,  ಜನ ಬದಲಾವಣೆ ಬಯಸಿದ್ದು, ನಾವು ಜನರಿಗೆ ಕೊಟ್ಟಿರುವ ಭರವಸೆ, ಗ್ಯಾರಂಟಿ ಯೋಜನೆಗಳನ್ನು  ಜಾರಿಗೆ ತರುತ್ತೇವೆ ಎಂದರು. ಇದು ಕನ್ನಡನಾಡಿನ ಜನತೆಗೆ ನೂತನ ಸರ್ಕಾರದ ಕೊಡುಗೆಯಾಗಿದೆ. ನಮ್ಮ ಪ್ರಮಾಳಿಕೆಯಲ್ಲಿ ಕೊಟ್ಟಿರುವ ಎಲ್ಲಾ ಕಾರ್ಯಕ್ರಮಗಳನ್ನು ಮುಂದಿನ ಐದು ವರ್ಷಗಳಲ್ಲಿ ಈಡೇರಿಸುತ್ತೇವೆ ಎಂದರು.‌

‘ರಾಜ್ಯದಲ್ಲಿ ಭ್ರಷ್ಟಾಚಾರಮುಕ್ತ ಸರ್ಕಾರ ನೀಡುತ್ತೇವೆ’; ರಾಹುಲ್ ಗಾಂಧಿ ಭರವಸೆ

ಬೆಂಗಳೂರು: ಕಳೆದ ಐದು ವರ್ಷಗಳಲ್ಲಿ ಎದುರಾದ ಸಮಸ್ಯೆಗಳನ್ನು ನಾವು ಕಂಡಿದ್ದೇವೆ. ಕಾಂಗ್ರೆಸ್ ಪಕ್ಷಕ್ಕೆ ಯಾಕೆ ಇಷ್ಟು ದೊಡ್ಡ ಗೆಲುವು ಸಿಕ್ಕಿದೆ ಎಂದರೆ ಅದಕ್ಕೆ ಕಾರಣ ಕಾಂಗ್ರೆಸ್ ಪಕ್ಷ ಬಡವರು, ರೈತರು, ಕಾರ್ಮಿಕರು, ಶೋಷಿತರು, ದಲಿತರ ಬೆನ್ನಿಗೆ ನಿಂತಿರುವುದು ಕಾರಣ ಎಂದು ಎಐಸಿಸಿ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ನೂತನ ಸಿಎಂ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡ ಅವರು ಕಾಂಗ್ರೆಸ್ ಪಕ್ಷದ ಗೆಲುವಿಗೆ ಕಾರಣರಾದ ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸಿದರು. ನಮ್ಮ ಬಳಿ ಸತ್ಯ ಹಾಗೂ ಬಡ ಜನರಿದ್ದರು. ಬಿಜೆಪಿ ಬಳಿ ಹಣ, ಅಧಿಕಾರ, ಪೊಲೀಸ್ ಅಧಿಕಾರಿಗಳು ಎಲ್ಲವೂ ಇತ್ತು. ಅವರ ಈ ಎಲ್ಲಾ ಶಕ್ತಿಗಳನ್ನು ಕರ್ನಾಟಕದ ಜನ ಮಣಿಸಿದ್ದಾರೆ. ಜನ ಅವರ ಭ್ರಷ್ಟಾಚಾರ, ದ್ವೇಷವನ್ನು ಮಣಿಸಿದ್ದೀರಾ. ಈ ಚುನಾವಣೆಯಲ್ಲಿ ರಾಜ್ಯದ ಜನ ದ್ವೇಷವನ್ನು ಒಡೆದೋಡಿಸಿ ಪ್ರೀತಿ ಸಾಮರಸ್ಯಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ದ್ವೇಷದ ಮಾರುಕಟ್ಟೆಯಲ್ಲಿ ಕರ್ನಾಟಕದ ಜನ…

‘ಚಿಕ್ಕ ಸಂಸಾರ ಚೊಕ್ಕ ಸಂಸಾರ’; ರಾಜ್ಯದಲ್ಲಿ 10 ಮಂತ್ರಿಗಳ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ;

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಬೆಂಗಳೂರಿನಲ್ಲಿಂದು ಸಿದ್ದರಾಮಯ್ಯ ಅವರ ನೇತೃತ್ವದ ಸಂಪುಟ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು. ಈ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು ಇದೀಗ ಯಾರಿಗೆ ಯಾವ ಖಾತೆ ಎಂಬ ಕುತೂಹಲ ಉಂಟಾಗಿದೆ. #WATCH | Opposition leaders display their show of unity at the swearing-in ceremony of the newly-elected Karnataka government, in Bengaluru. pic.twitter.com/H1pNMeoeEC — ANI (@ANI) May 20, 2023 ಪ್ರಮಾಣವಚನ ಸ್ವೀಕರಿಸಿದ 8 ಸಚಿವರು: ಎಂ. ಬಿ. ಪಾಟೀಲ್ (ಲಿಂಗಾಯತ) ಡಾ. ಜಿ. ಪರಮೇಶ್ವರ್ (ದಲಿತ-ಬಲ) ಪ್ರಿಯಾಂಕ ಖರ್ಗೆ (ದಲಿತ-ಬಲ) ಕೆ.ಎಚ್. ಮುನಿಯಪ್ಪ (ದಲಿತ-ಎಡ) ಸತೀಶ್ ಜಾರಕಿಹೊಳಿ (ಪ.ಪಂ.-ವಾಲ್ಮಿಕಿ) ಕೆ. ಜೆ. ಜಾರ್ಜ್ (ಕ್ರಿಶ್ಚಿಯನ್) ರಾಮಲಿಂಗಾ ರೆಡ್ಡಿ (ರೆಡ್ಡಿ ಸಮುದಾಯ) ಜಮೀರ್ ಅಹ್ಮದ್ ಖಾನ್ (ಮುಸ್ಲಿಂ) ಡಾ. ಜಿ.…

Uncategorized

ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು ಪ್ರಮಾಣವಚನ ಸ್ವೀಕರಿಸಿದರು. ಅವರ ಸಂಪುಟ ಸಹೋದ್ಯೋಗಿಗಳೂ ಪ್ರಮಾಣವಚನ ಸ್ವೀಕರಿಸಿದ್ದು 10 ಸದಸ್ಯರ ಸಂಪುಟ ಅಸ್ತಿತ್ವಕ್ಕೆ ಬಂದಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಹಾಗೂ 8 ಮಂದಿ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನಸ್ವೀಕರಿಸಿದರೆ, ಡಿ.ಕೆ.ಶಿವಕುಮಾರ್ ಅವರು ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ನಟ ಕಮಲ್ ಹಾಸನ್ ಸಹಿತ ಹಲವಾರು ಗಣ್ಯರು ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗಿಯಾಗಿದ್ದರು. ಶಿವರಾಜ್ ಕುಮಾರ್, ದುನಿಯಾ ವಿಜಯ್, ನಟಿ ರಮ್ಯಾ, ಉಮಾಶ್ರೀ, ಸೇರಿದಂತೆ ಸಿನಿಮಾ ತಾರೆಯರ ಭಾಗವಹಿಸುವಿಕೆ ಕೂಡಾ ಗಮನಸೆಳೆಯಿತು. #WATCH | Karnataka swearing-in ceremony | Karnataka CM-designate Siddaramaiah…

‘ಗೃಹಲಕ್ಷ್ಮಿ’ಗೆ ಅಡ್ಡಿಪಡಿಸಲು 2,000 ರೂ ನೋಟ್ ಬ್ಯಾನ್..? RBI ನಿರ್ಧಾರಕ್ಕೆ ಕಾಂಗ್ರೆಸ್ ಗೇಲಿ

ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ 2,000 ರೂಪಾಯಿ ನೋಟು ಚಲಾವಣೆಯನ್ನು ಹಿಂಪಡೆಯುವ ನಿರ್ಧಾರ ಪ್ರಕಟಿಸಿರುವ ಕ್ರಮಕ್ಕೆ ಪ್ರತಿಪಕ್ಷ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರವು ಆತುರರದ ಕ್ರಮ ಕೈಗೊಂಡಿದೆ ಎಂದು ಕಾಂಗ್ರೆಸ್ ನಾಯಕರು ದೂರಿದ್ದಾರೆ. ಇತ್ತ ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರು ಈ ನೋಟ್ ರದ್ದತಿ ಕ್ರಮದ ಬಗ್ಗೆ ತಮ್ಮದೇ ಶೈಲಿಯಲ್ಲಿ ವ್ಯಂಗ್ಯವಾಡಿದ್ದಾರೆ. ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಜಯಭೇರಿ ಭಾರಿಸಿರುವ ಕಾಂಗ್ರೆಸ್ ಇದೀಗ ಗೃಹಲಕ್ಷ್ಮಿ ಯೋಜನೆ ಜಾರಿಗೆ ತಯಾರಿ ಸಿದ್ದತೆ ನಡೆಸಿದೆ. ಅದೇ ಸಂದರ್ಭದಲ್ಲಿ ನೋಟ್ ಚಲಾವಣೆಗೆ ಬ್ರೇಕ್ ಹಾಕುವ ನಿರ್ಧಾರ ಪ್ರಕಟಿಸಿರುವ ಬಗ್ಗೆ ರಮೇಶ್ ಬಾಬು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಮೇಶ್ ಬಾಬು, ‘ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಯಾರು ತಲೆ ಕೆಡಿಸಿದರೋ ಗೊತ್ತಿಲ್ಲ! 2000 ರೂ ನೋಟು ಬ್ಯಾನ್ ಮಾಡಿದರೆ KPCC ಗೃಹಲಕ್ಷ್ಮಿ ಯೋಜನೆ ತಡೆಯಬಹುದೆಂದು ಬ್ಯಾನ್…

‘ವೈದ್ಯ ಲೋಕದ ಬೆಳಕು’ ಡಾ.ಭುಜಂಗ ಶೆಟ್ಟಿ ವಿಧಿವಶ

ಬೆಂಗಳೂರು: ಖ್ಯಾತ ನೇತ್ರ ತಜ್ಞ ಡಾ.ಭುಜಂಗ ಶೆಟ್ಟಿ ವಿಧಿವಶರಾಗಿದ್ದಾರೆ. ಶುಕ್ರವಾರ ಸಂಜೆ ಅವರು ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ. ಬೆಂಗಳೂರಿನ ನಾರಾಯಣ ನೇತ್ರಾಲಯದ ಮುಖ್ಯಸ್ಥರಾಗಿರುವ ಅವರಿಗೆ ಸಂಜೆ 7.30ರ ಸುಮಾರಿಗೆ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡಿತು. ಕೂಡಲೇ ಅವರನ್ನು ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿದಿದ್ದಾರೆ. ದೇಶದ ಪ್ರಮುಖ ನೇತ್ರ ತಜ್ಞರಾಗಿದ್ದ ಡಾ.ಭುಜಂಗ ಶೆಟ್ಟಿ ಅವರು ತಮ್ಮ ವೈದ್ಯ ವೃತ್ತಿಯ ಜೊತೆ ನೇತ್ರದಾನ ವಿಚಾರದಲ್ಲೂ ಅಭಿಯಾನ ಮೂಲಕ ದೇಶದ ಗಮನಸೆಳೆದಿದ್ದರು. ಡಾ.ರಾಜ್, ಪುನೀತ್ ರಾಜ್ ಕುಮಾರ್ ಸಹಿತ ಹಲವರ ನೇತ್ರದಾನ ಮಾಡಿಸಿ ಡಾ.ಭುಜಂಗ ಶೆಟ್ಟಿಯವರು ಗಮನಸೆಳೆದಿದ್ದಾರೆ. ಡಾ. ಭುಜಂಗ ಶೆಟ್ಟಿಯವರ ನಿಧನಕ್ಕೆ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರನೇಕರು ದುಃಖ ವ್ಯಕ್ತಪಡಿಸಿದ್ದಾರೆ. Sad to know that noted opthalmologist Dr Bhujanga Shetty, chairman Narayana Nethralaya has passed…