Day: June 11, 2023
ಕರಾವಳಿಯಲ್ಲಿ ‘ಕೋಮು ಗಲಭೆಯ ಗುಮ್ಮ’? ಶಾಸಕ ಕಾಮತ್ ನಡೆಗೆ ಪದ್ಮರಾಜ್ ತರಾಟೆ
ಮಂಗಳೂರು: ರಾಜ್ಯದಲ್ಲಿ ಮತ್ತೆ ಕೋಮು ಸಂಘರ್ಷ ವಾತಾವರಣ ಸೃಷ್ಟಿಯಾಗುವ ಭೀತಿ ಇದೆ ಎಂದು ಮಂಗಳೂರು ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಜನತೆಯಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್. ಪದ್ಮರಾಜ್ ದೂರಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿಕೊಂಡ ಸಮಯದಿಂದ ಅಭಿವೃದ್ಧಿ ವಿಷಯ ಬಗ್ಗೆ ಯಾವುದೇ ಚಕಾರ ಎತ್ತದೆ, ಸುಖಾಸಮ್ಮನ್ನೆ ಆರೋಪ ಮಾಡುತ್ತಿದ್ದಾರೆ. ಇನ್ನೇನು ಮಳೆಗಾಲ ಆರಂಭವಾಗಲಿದ್ದು, ಅವರದ್ದೇ ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಮಾಡಿದ ಎಡವಟ್ಟಿನಿಂದ ನಗರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಈ ಈ ಬಗ್ಗೆ ಮೊದಲು ಗಮನಹರಿಸಲಿ ಎಂದು ಪದ್ಮರಾಜ್ ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯಾದ್ಯಂತ ಜನತೆ ಕೋಮುಸಾಮರಸ್ಯದಿಂದ ಬದುಕುತ್ತಿದ್ದಾರೆ. ಕಾಂಗ್ರೆಸ್‌ಗೂ ಸಂಸ್ಕೃತಿ, ಸಂಸ್ಕಾರದ ಬಗ್ಗೆ ಅರಿವು ಇದೆ. ಬಿಜೆಪಿವರು ಭಾವನಾತ್ಮಕವಾಗಿ ಜನತೆಯನ್ನು ಮರುಳು ಮಾಡುವುದನ್ನು ಕೈಬಿಡಲಿ ಎಂದಿರುವ ಪದ್ಮರಾಜ್, ಭಾವನಾತ್ಮಕ ಮಾತುಗಳ…
ಸಿನಿಲೋಕದಲ್ಲಿ ‘HanuMan’ ಎಂಬ ಹೊಸ ಪ್ರಯೋಗ
https://youtu.be/H9V3KdUyyIA
ಹಳಿ ತಪ್ಪಿದ ‘ಗ್ಯಾರೆಂಟಿ’; ಖಾಸಗಿ ಬಸ್ಸುಗಳ ಪ್ರಾಬಲ್ಯದ ನಾಡಲ್ಲಿ ‘ಶಕ್ತಿ’ ಮರೀಚಿಕೆ..!
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದೇ ‘ಗ್ಯಾರೆಂಟಿ’ಯಿಂದ ಎಂಬುದು ಸ್ಪಟಿಕ ಸತ್ಯ. ಇದೀಗ ಸರ್ಕಾರ ಉಳಿದರೂ, ವರ್ಚಸ್ಸು ಉಳಿಸಿಕೊಂಡರೂ ಅದು ‘ಗ್ಯಾರೆಂಟಿ’ಯಿಂದಲೇ. ಆದರೆ ಈ ಭರವಸೆಗಳ ವಿಚಾರದಲ್ಲಿ ಅಪಸ್ವರಗಳು, ಅಪವಾದಗಳು ಮಾರ್ದನಿಸುತ್ತಿರುವುದು ಕುತೂಹಲಕಾರಿ ಬೆಳವಣಿಗೆ. ಚುನಾವಣೆಗಳಿಗೆ ಮುನ್ನ ಪ್ರದೇಶ ಕಾಂಗ್ರೆಸ್ ಪಕ್ಷ ಐದು ಪ್ರಮುಖ ‘ಗ್ಯಾರೆಂಟಿ’ ಭರವಸೆಗಳನ್ನು ನೀಡಿತ್ತು. ಈ ಪೈಕಿ ನಾರಿಯರ ಉಚಿತ ಪ್ರಯಾಣದ ‘ಶಕ್ತಿ’ ಯೋಜನೆ ಅನಾವರಣವಾಗಿದೆ. ಆದರೆ, ಮುನ್ನುಡಿ ಬರೆದಾಗಲೇ ಭಾರೀ ಪ್ರಚಾರ ಗಿಟ್ಟಿಸಿಕೊಂಡಿರುವ ಈ ‘ಶಕ್ತಿ’ ಕೊಡುಗೆ ಕರಾವಳಿ ಮಲೆನಾಡಿನ ಮಂದಿಗೆ ಮರೀಚಿಕೆಯಾಗಿದೆ. KARNATAKA SHAKTI GUARANTEE LAUNCH:#CongressGuarantee: 📌CM Siddaramaiah, DK, CS Vandita Sharma, & others leaves to MAJESTIC'S KSRTC BUS STATION TO LAUNCH #CongressShaktiToWomen Henceforth, for the Next 5-Years across state all women of KA will travel…
ರಾಜ್ಯದ ಸ್ತ್ರೀಯರಿಗೆ ಇನ್ನು ಬಸ್ ಪ್ರಯಾಣ ಉಚಿತ ; ಶಕ್ತಿ ಯೋಜನೆಗೆ ಸಿಎಂ ಮುನ್ನುಡಿ
ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ‘ಗ್ಯಾರೆಂಟಿ’ ಭರವಸೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಗೆ ಚಾಲನೆ ಸಿಕ್ಕಿದೆ. ರಾಜ್ಯದ ಮಹಿಳೆಯರಿಗೆ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಅವಕಾಶ ನೀಡುವ ಈ ‘ಶಕ್ತಿ’ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರು ಭಾನುವಾರ ಚಾಲನೆ ನೀಡಿದರು. ಶಕ್ತಿ ಸೌಧ ವಿಧಾನಸೌಧ ಮುಂಭಾಗ ಶಕ್ತಿ ಯೋಜನೆಯ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿತ್ತು. ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಉಪಸ್ಥಿತಿಯಲ್ಲಿ ‘ಶಕ್ತಿ’ ಯೋಜನೆಯ ಸ್ಮಾರ್ಟ್ ಕಾರ್ಡ್ ಬಿಡುಗಡೆ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಜನೆಗೆ ಚಾಲನೆ ನೀಡಿದರು. ಐವರು ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ‘ಸ್ಮಾರ್ಟ್ ಕಾರ್ಡ್’ ವಿತರಿಸಿ ಈ ಉಚಿತ ಪ್ರಯಾಣದ ಯೋಜನೆ ಜಾರಿಗೆ ಮುನ್ನುಡಿ ಬರೆದರು. ಇದೇ ಸಂದರ್ಭದಲ್ಲಿ ಶಕ್ತಿ ಯೋಜನೆಯ ಲೋಗೋ ಮತ್ತು ಸ್ಮಾರ್ಟ್ ಕಾರ್ಡ್ ಮಾದರಿಯನ್ನು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರು ಅನಾವರಣಗೊಳಿಸಿದರು. ಕುಟುಂಬದ ಜವಾಬ್ದಾರಿಯನ್ನು ತನ್ನ ಹೆಗಲ…

ಜಗದೀಶ್ ಶೆಟ್ಟರ್‌ಗೆ ಪರಿಷತ್ ಸ್ಥಾನ; ಕಾಂಗ್ರೆಸ್ ಚಿಂತನೆ
ದೆಹಲಿ: ಕರ್ನಾಟಕ ವಿಧಾನಮಂಡಲದಲ್ಲಿ ಮೇಲ್ಮನೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಬಿಜೆಪಿ ತೊತಲರೆದು ಕಾಂಗ್ರೆಸ್ ಸೇರಿರುವ ಜಗದೀಶ್ ಶೆಟ್ಟರ್ ಅವರನ್ನು ವಿಧಾನ ಪರಿಷತ್‌ಗೆ ಕಳುಹಿಸುವ ಬಗ್ಗೆ ಕೈ ಪಾಳಯದಲ್ಲಿ ಚಿಂತನೆ ನಡೆದಿದೆ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಾಬುರಾವ್ ಚಿಂಚನಸೂರು, ಲಕ್ಷ್ಮಣ ಸವದಿ ಹಾಗೂ ಆರ್ ಶಂಕರ್ ರಾಜೀನಾಮೆಯಿಂದಾಗಿ ವಿಧಾನಪರಿಷತ್‌ನ ಮೂರು ಸ್ಥಾನಗಳು ತೆರವಾಗಿತ್ತು. ವಿಧಾನಸಭೆಯಿಂದ ಪರಿಷತ್‌ಗೆ ಆಯ್ಕೆಯಾಗುವ ಈ ಈ ಸ್ಥಾನಗಳಿಗೆ ಜೂ.30ರಂದು ಉಪಚುನಾವಣೆ ಘೋಷಣೆಯಾಗಿದೆ. ಮುಂಬರುವ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಲಿಂಗಾಯತ ಸಮುದಾಯಕ್ಕೆ ಪ್ರಾತಿನಿದ್ಯ ನೀಡುವ ಪ್ರಯತ್ನ ಕಾಂಗ್ರೆಸ್ ನಾಯಕರದ್ದು. ಈ ನಿಟ್ಟಿನಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಪರಿಷತ್ ಸದಸ್ಯರನ್ನಾಗಿಸುವ ಬಗ್ಗೆ ಹೈಕಮಾಂಡ್ ಚಿಂತನೆ ನಡೆಸಿದೆದೆ ಎನ್ನಲಾಗಿದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಹುಬ್ಬಳ್ಳಿ-ಧಾರವಾಡ ಕೇಂದ್ರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲನುಭವಿಸಿದ್ದರು.
‘ಪಥ’; ಹದಿಹರೆಯದ ಮಂದಿಗೆ ದಿಕ್ಸೂಚಿ.. ಹೀಗೊಂದು ಸಾಕ್ಷ್ಯಚಿತ್ರ
ವಿಧಾನಸಭಾ ಚುನಾವಣೆಯಲ್ಲಿ ಒಳಒಪ್ಪಂದದ ನಡೆದಿದೆಯೇ?
ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಡ್ಜಸ್ಟ್ ಮೆಂಟ್ ರಾಜಕೀಯದ ಬಗ್ಗೆ ಸ್ವತಃ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರೇ ಮಾತನಾಡಿದ್ದಾರೆ! ಈ ಸರಕಾರ ಆ ಬಗ್ಗೆ ತನಿಖೆ ಮಾಡಿಸುತ್ತಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಸರಕಾರವನ್ನು ಪ್ರಶ್ನೆ ಮಾಡಿದ್ದಾರೆ. ಪಕ್ಷದ ಕಚೇರಿ ಮಾಧ್ಯಮಗಳ ಜತೆ ಮಾತನಾಡುವ ವೇಳೆ ಈ ಪ್ರಶ್ನೆ ಎತ್ತಿದ ಮಾಜಿ ಮುಖ್ಯಮಂತ್ರಿ ಅವರು; ಹಿಂದಿನ ಸರಕಾರದ ಎಲ್ಲ ನಿರ್ಧಾರಗಳನ್ನು ಈಗಿನ ಸರಕಾರ ತನಿಖೆ ನಡೆಸುವುದಾಗಿ ಹೇಳುತ್ತಿದೆ. ಹಾಗಾದರೆ, ಚುನಾವಣಾ ಒಳಒಪ್ಪಂದದ ಬಗ್ಗೆಯೂ ತನಿಖೆ ಮಾಡಿಸಬೇಕಲ್ಲವೇ ಎಂದರು. ಸಿಟಿ ರವಿ ಒಂದು ಹೇಳಿಕೆ ಗಮನಿಸಿದ್ದೇನೆ. ಕಾಂಗ್ರೆಸ್ ಮತ್ತು ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ. ನಾನು ಕಾಂಗ್ರೆಸ್ ನಾಯಕರನ್ನು ಕೇಳುತ್ತೇನೆ ಯಾವ ಜತೆ ಒಪ್ಪಂದ ಮಾಡಿಕೊಂಡಿದ್ದಿರಿ, ನಮ್ಮನ್ನು ಬಿಜೆಪಿ ಬೀ ಟೀಮ್ ಎಂದು ಹೇಳುತ್ತಿದ್ದವರು ನೀವು. ಹಿಂದೆಯೇ…