ಕೇಂದ್ರ ನೀಡದಿದ್ದರೂ ರಾಜ್ಯ ಸರ್ಕಾರವೇ 10 ಕೆ.ಜಿ ಅನ್ನಭಾಗ್ಯ ಅಕ್ಕಿ ನೀಡಲಿದೆಯಂತೆ

ಕೇಂದ್ರ ಸರಕಾರ ನೀಡದಿದ್ದರೂ ನಾವು 10 ಕೆ.ಜಿ ಅಕ್ಕಿ ನೀಡುತ್ತೇವೆ. ಅನ್ನ ಭಾಗ್ಯ ಯೋಜನೆ ಜಾರಿ ಆಗಲಿದೆ. ಇದು ಒಕ್ಕೂಟ ವ್ಯವಸ್ಥೆ. ದೇಶದಲ್ಲಿ ಈಗಾಗಲೇ ಇರುವ ವ್ಯವಸ್ಥೆ ಹಾಗೂ ಪ್ರಕ್ರಿಯೆ ಮೂಲಕ ಅಕ್ಕಿ ಖರೀದಿಗೆ ಮನವಿ ಮಾಡಿದ್ದೆವು. ದಾಸ್ತಾನು ಇದ್ದರೂ ಅಕ್ಕಿ ನೀಡಲು ನಿರಾಕರಿಸಿದ್ದಾರೆ. ಕೇಂದ್ರದ ಈ ಧೋರಣೆ ಪ್ರತಿಭಟಿಸಿ, ಜನರಿಗೆ ಅರಿವು… pic.twitter.com/wiNfobBM5i — Karnataka Congress (@INCKarnataka) June 16, 2023

ಕರಾವಳಿಯಲ್ಲಿ ಕೋಮುಧ್ವೇಷಕ್ಕೆ ಬಲಿಯಾದವರ ಕುಟುಂಬದವರಿಗೆ ತಲಾ 25 ಲಕ್ಷ ರೂ ಪರಿಹಾರ

ಬೆಂಗಳೂರು: ಮಂಗಳೂರು ಸಹಿತ ಕರಾವಳಿಯಲ್ಲಿ ಕೋಮುಧ್ವೇಷಕ್ಕೆ ಬಲಿಯಾದವರ ಕುಟುಂಬದವರಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದೆ. ನಾಲ್ವರು ಮೃತರ ಕುಟುಂಬದವರಿಗೆ ತಲಾ 25 ಲಕ್ಷ ರೂ. ಪರಿಹಾರವನ್ನು ರಾಜ್ಯ ಸರ್ಕಾರ ಶುಕ್ರವಾರ ಘೋಷಣೆ ಮಾಡಿದೆ. ಮಸೂದ್, ಫಾಜಿಲ್, ಜಲೀಲ್ ಹಾಗೂ ದೀಪಕ್ ರಾವ್ ಕುಟುಂಬಕ್ಕೆ ಪರಿಹಾರ ಪ್ರಕಟಿಸಿದ್ದು ಈ ಸಂಬಂಧ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.