ಭ್ರಷ್ಟರಿಂದ HSRP ಕಬ್ಜ? ಸಣ್ಣ ವ್ಯಾಪಾರಿಗಳ ಮೇಲೆ ತೂಗುಗತ್ತಿ

ಬೆಂಗಳೂರು: ವಾಹನಗಳಿಗೆ ಅತೀ ಸುರಕ್ಷಾ ನೋಂದಣಿ ಫಲಕ ಅಳವಡಿಸುವ ಮಹತ್ವಾಕಾಂಕ್ಷಿ ಯೋಜನೆ ಹಳಿತಪ್ಪಿದೆ. ಈ ವರೆಗೂ ಒಂದಿಲ್ಲೊಂದು ಹಗರಣಗಳಿಗೆ ಸಾಕ್ಷಿಯಾಗುತ್ತಿರುವ ಸಾಕ್ಷಿಯಾಗಿರುವ ರಾಜ್ಯ ಸರ್ಕಾರ ಇದೀಗ ಮತ್ತೊಂದು ಬಹುಕೋಟಿ ಅಕ್ರಮದ ಹಾದಿಯಲ್ಲಿದೆ. ಅತೀ ಸುರಕ್ಷಾ ನೋಂದಣಿ ಫಲಕ (HSRP) ಯೋಜನೆಯು ಜಾರಿಗೆ ಮುನ್ನವೇ ಅವ್ಯವಹಾರಕ್ಕೆ ನಾಂದಿ ಹಾಡಿರುವ ಬಗ್ಗೆ ದೂರು ಸಲ್ಲಿಕೆಯಾಗಿದ್ದು, ಭ್ರಷ್ಟಾಚಾರ ವಿರುದ್ಧ ಸಮರ ಸಾರಿ ಅಧಿಕಾರಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಸವಾಲೆಂಬಂತಿದೆ. ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಸಂಶೋಧನಾ ವ್ವಿದ್ಯಾರ್ಥಿಗಳ ಒಕ್ಕೂಟ ನೀಡಿರುವ ಈ ದೂರು ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸಂಚಲನ ಸೃಷ್ಟಿಸಿದೆ. ಏನಿದು ಕರ್ಮಕಾಂಡ? ವಾಹನ ಕಳ್ಳತನ ತಡೆಯುವುದು, ಕದ್ದ ವಾಹನಗಳನ್ನು ಬಳಸಿ ಕೃತ್ಯಗಳನ್ನು ನಡೆಸುವುದನ್ನು ತಡೆಯಲು ಹಾಗೂ ಕಾನೂನು ಉಲ್ಲಂಘನೆಯಂತಹಾ ಪ್ರಕರಣಗಳನ್ನು ಬೇಧಿಸಲು ಅನುಕೂಲವಾಗುವಂತೆ ಆಧುನಿಕ ವ್ಯವಸ್ಥೆಯಾಗಿ ವಾಹನಗಳಿಗೆ ಅತೀ ಸುರಕ್ಷಾ ನೋಂದಣಿ ಫಲಕ (HSRP) ಅಳವಡಿಸುವ ಕಾರ್ಯಕ್ಕೆ ಕೇಂದ್ರ ಸರ್ಕಾರ…