‘ಗ್ಯಾರೆಂಟಿ’ ಜಾರಿಯ ಘೋಷಣೆ; ಡಿಕೆಶಿ ಹೇಳಿದ್ದು ಹೀಗೆ

ನುಡಿದಂತೆ ನಡೆಯಬೇಕಾದದ್ದು ನಮ್ಮ ಧರ್ಮ. 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ಮಾತು ಕೊಟ್ಟಿದ್ದೆವು. ಅದರಂತೆ 5 ಗ್ಯಾರಂಟಿಗಳಾದ ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನ ಭಾಗ್ಯ, ಶಕ್ತಿ, ಯುವನಿಧಿಗಳ ಜಾರಿಗೆ ಈಗಾಗಲೇ ದಿನಾಂಕ, ಸಮಯವನ್ನು ನಿಗದಿ ಮಾಡಲಾಗಿದೆ. ಜನರಿಗೆ ಕೊಟ್ಟ ಮಾತಿನಂತೆ ನಾವು ನಡೆದುಕೊಂಡಿದ್ದೇವೆ.– @DKShivakumar pic.twitter.com/jL138vuJ15 — Karnataka Congress (@INCKarnataka) June 2, 2023

ರಾಜ್ಯದ ಆರ್ಥಿಕ ಸ್ಥಿತಿಗತಿಯ ಶ್ವೇತಪತ್ರ ಹೊರಡಿಸಿ: ಸಿ.ಟಿ.ರವಿ ಒತ್ತಾಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಆರ್ಥಿಕ ಸ್ಥಿತಿಗತಿಗೆ ಸಂಬಂಧಿಸಿ ಶ್ವೇತಪತ್ರ ಹೊರಡಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆಗ್ರಹಿಸಿದ್ದಾರೆ. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ 5 ಗ್ಯಾರಂಟಿಗಳನ್ನು ಈಡೇರಿಸುವ ಸಂಪುಟದ ನಿರ್ಣಯದ ಜೊತೆಗೆ ಯಾವಾಗದಿಂದ ಅದು ಜಾರಿ ಆಗಲಿದೆ ಎಂದು ತಿಳಿಸಿದ್ದಾರೆ. ನಾನು ಇದನ್ನು ಸ್ವಾಗತಿಸುತ್ತೇನೆ ಎಂದು ತಿಳಿಸಿದರು. ಪ್ರಣಾಳಿಕೆಯಲ್ಲಿ ಮುದ್ರಿಸಿರುವಂತೆ ಪ್ರತಿ ವ್ಯಕ್ತಿಗೆ ತಿಂಗಳಿಗೆ 10 ಕೆಜಿ ಅಕ್ಕಿ ಉಚಿತ ಎಂದಿದ್ದೀರಿ. ಅದು ಪ್ರತಿ ಕುಟುಂಬಕ್ಕೆ ಅಲ್ಲ; ನಾವು ಕೊಟ್ಟ ಮಾತಿನಂತೆ ನಡೆಯುವವರು ಎಂದಿದ್ದೀರಿ. ಈಗ ನೀವು ಕುಟುಂಬಕ್ಕೆ 10 ಕೆಜಿ ಅನ್ನುತ್ತೀರಲ್ಲವೇ? ಎಂದು ಪ್ರಶ್ನಿಸಿದರಲ್ಲದೆ, ಜಮೀರ್ ಅಹ್ಮದ್ ಅವರು ಮನೆಮನೆ ಭೇಟಿ ವೇಳೆ ಮನೆಯಲ್ಲಿ 7 ಜನರಿದ್ದರೆ 70 ಕೆಜಿ ಅಕ್ಕಿ ಎಂದಿದ್ದ ವಿಡಿಯೋ ನೋಡಿದ್ದೇನೆ. ಈಗ ನೀವು ಪ್ರತಿ ಕುಟುಂಬಕ್ಕೆ…

‘ಗ್ಯಾರೆಂಟಿ’ ಜಾರಿ ನಿರ್ಧಾರ ಚಾರಿತ್ರಿಕ; ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ ಎಂದ ಎಂ.ಬಿ.ಪಾಟೀಲ್‌

ಬೆಂಗಳೂರು: ಕಾಂಗ್ರೆಸ್‌ ಪಕ್ಷವು ಅಧಿಕಾರಕ್ಕೆ ಬಂದರೆ ರಾಜ್ಯದ ಜನರಿಗೆ ಐದು ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಹೇಳಿದ್ದೆವು. ಈಗ ಆ ಮಾತನ್ನು ಉಳಿಸಿಕೊಂಡಿದ್ದೇವೆ. ಇದು ಕಾಂಗ್ರೆಸ್‌ ಪಕ್ಷದ ಜನಪರ ಬದ್ಧತೆಗೆ ದೊಡ್ಡ ನಿದರ್ಶನವಾಗಿದೆ. ಈ ಬಗ್ಗೆ ಅಪಪ್ರಚಾರದಲ್ಲಿ ನಿರತವಾಗಿದ್ದ ಬಿಜೆಪಿ ಇನ್ನಾದರೂ ಮೌನದಿಂದ ಇರುವುದನ್ನು ಕಲಿಯಬೇಕು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್‌ ಹೇಳಿದ್ದಾರೆ. ರಾಜ್ಯ ಸರಕಾರವು ತೆಗೆದುಕೊಂಡಿರುವ ಐತಿಹಾಸಿಕ ನಿರ್ಧಾರದ ಬಳಿಕ ಮಾತನಾಡಿದ ಅವರು, “ಸರಕಾರವು ಅಸ್ತಿತ್ವಕ್ಕೆ ಬಂದ ಕೇವಲ ಎರಡು ವಾರಗಳಲ್ಲಿ ನಮ್ಮ ಇಚ್ಛಾಶಕ್ತಿಯನ್ನು ತೋರಿಸಿದ್ದೇವೆ. ಈ ಐದೂ ಗ್ಯಾರಂಟಿಗಳ ಅನುಷ್ಠಾನದ ಮೂಲಕ ರಾಜ್ಯದ ಜನತೆಯ ಸಬಲೀಕರಣ ದೊಡ್ಡ ಮಟ್ಟದಲ್ಲಿ ಸಾಧ್ಯವಾಗಲಿದೆ” ಎಂದಿದ್ದಾರೆ. “ಕೊಟ್ಟ ಮಾತನ್ನು ಪಾಲಿಸುವುದು ಕಾಂಗ್ರೆಸ್ಸಿಗೆ ಧರ್ಮವಿದ್ದಂತೆ. ಚುನಾವಣೆಗೆ ಮುಂಚೆ ಏನನ್ನು ಹೇಳಿದ್ದೆವೋ ಅದನ್ನೀಗ ಮಾಡಿ ತೋರಿಸಿದ್ದೇವೆ. ಇವೆಲ್ಲವೂ ಈಗ ನಿಗದಿಪಡಿಸಿರುವ ದಿನಾಂಕದಿಂದ ಪೂರ್ಣಪ್ರಮಾಣದಲ್ಲಿ ಮತ್ತು ಸಮರ್ಪಕವಾಗಿ…

ಭೀಕರ ರೈಲು ಅವಘಡ; 200ಕ್ಕೂ ಹೆಚ್ಚು ಪ್ರಯಾಣಿಕರ ಸಾವು

ಒಡಿಶಾ: ಪ್ಯಾಸೆಂಜರ್ ರೈಲು ಮತ್ತು ಗೂಡ್ಸ್ ರೈಲು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಟ 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕೋರಮಂಡಲ್ ಎಕ್ಸ್‌ಪ್ರೆಸ್ ಹಳಿತಪ್ಪಿ ಈ ಘೋರ ಅಪಘಾತ ಸಂಭವಿಸಿದೆ. ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ನಿಲ್ದಾಣದ ಬಳಿ ಸಂಜೆ 7:20ರ ಸುಮಾರಿಗೆ ಕೋರಮಂಡಲ್​ ಎಕ್ಸ್​ಪ್ರೆಸ್​ ರೈಲು ಅಪಘಾತಕ್ಕೀಡಾಗಿದೆ ಎಂದು ಹೇಳಲಾಗುತ್ತಿದೆ. #WATCH | Morning visuals from the spot where the horrific train accident took place in Odisha's Balasore district, killing 207 people and injuring 900 pic.twitter.com/yhTAENTNzJ — ANI (@ANI) June 3, 2023 ಅಪಘಾತದಲ್ಲಿ 900ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. https://twitter.com/drapr007/status/1664670635325530113?t=BFm0YBfwGKdBtuifO9BvKg&s=19

ಅಪೂರ್ವ ಸಹೋದರಿಯರು..; ಸಾವಲ್ಲೂ ಒಂದಾದ ವೃದ್ಧ ಅಕ್ಕ-ತಂಗಿ

ಬೆಂಗಳೂರು: ದೊಡ್ಡಬಳ್ಳಾಪುರ ತಾಲ್ಲೂಕಿನ ಬಚ್ಚಹಳ್ಳಿ ಗ್ರಾಮದ ಪುಟ್ಟಮ್ಮ ಮತ್ತು ನರಸಮ್ಮ ಎಂಬ ವೃದ್ಧ ಸಹೋದರಿಯರಿಬ್ಬರು ಒಂದೇ ದಿನದ ಅಂತರದಲ್ಲಿ ನಿಧನ ಹೊಂದಿದ್ದಾರೆ. ಗ್ರಾಮದ ಪುಟ್ಟಮ್ಮ (97) ಅವರು ವಯೋಸಹಜ ಅನಾರೋಗ್ಯದಿಂದ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬಂದಿದ್ದ ತಂಗಿ ನರಸಮ್ಮ(93) ಬುಧವಾರ ಮಧ್ಯಾಹ್ನ 2 ಗಂಟೆ ವೇಳೆ ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಕುಸಿದು ಬಿದ್ದಿದ್ದಾರೆ. ಮನೆಗೆ ಕರೆತರುವಷ್ಟರಲ್ಲಿ ಅವರು ಮೃತ ಪಟ್ಟಿದ್ದಾರೆ. ಬುಧವಾರ ಸಂಜೆ ಇಬ್ಬರ ಅಂತ್ಯಸಂಸ್ಕಾರವನ್ನೂ ಒಟ್ಟಿಗೆ ಮಾಡಲಾಗಿದೆ. ತುಮಕೂರಿನ ವಾಮಚೇನಹಳ್ಳಿ ಪುಟ್ಟಮ್ಮ ಹಾಗೂ ನರಸಮ್ಮನವರ ತವರು ಮನೆ. ಅಕ್ಕ-ತಂಗಿಯರನ್ನು ತಾಲ್ಲೂಕಿನ ಬಚ್ಚಹಳ್ಳಿಯ ಗ್ರಾಮದ ಹನುಮಪ್ಪ ಹಾಗೂ ಕರೇಗೌಡ ಎಂಬ ಸೋದರರಿಗೆ ವಿವಾಹ ಮಾಡಲಾಗಿತ್ತು. ಪುಟ್ಟಮ್ಮ ಅವರು ಮಗಳು, ಇಬ್ಬರು ಮೊಮ್ಮಕ್ಕಳನ್ನು ಅಗಲಿದ್ದಾರೆ. ನರಸಮ್ಮ ಮೂವರು  ಗಂಡು ಮಕ್ಕಳನ್ನು, ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಒಂದು ಕೈಯಲ್ಲಿ ಉಚಿತ ಕೊಡುಗೆಗಳನ್ನು ನೀಡಿ ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುವ ರೀತಿ?

ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ತನ್ನ 5 ಗ್ಯಾರಂಟಿಗಳನ್ನು ಪೂರೈಸಲು ಬಿಬಿಎಂಪಿ ಆಸ್ತಿ ತೆರಿಗೆಯನ್ನು ಹೆಚ್ಚಿಸಲು ಕೈಗೊಂಡಿರುವ ನಿರ್ಧಾರ ನಿಜಕ್ಕೂ ನಾಚಿಕೆಗೇಡಿತನದ ಪರಮಾವಧಿ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ aವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ‌ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಎಲ್ಲಿಯೂ ಶೂನ್ಯ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಲೇ ಇಲ್ಲ. ಪಾರದರ್ಶಕತೆ ಮತ್ತು ಪ್ರಾಮಾಣಿಕತೆಯನ್ನು ಸಾಧಿಸಿ ರಾಜಸ್ವ ಸಂಗ್ರಹ ಹೆಚ್ಚಿಸಿ, ಸಂಪನ್ಮೂಲ ಕ್ರೂಡೀಕರಣ ಗೊಳಿಸುವ ತಾಕತ್ತು ಕಾಂಗ್ರೆಸ್ ಸರ್ಕಾರಕ್ಕೆ ಇದೆಯೇ ಎಂದು ಪ್ರಶ್ನೆ ಮುಂದಿಟ್ಟರು. ಚುನಾವಣಾ ಅಕ್ರಮಗಳಿಗಾಗಿ ಈಗಾಗಲೇ ಸಾವಿರಾರು ಕೋಟಿ ರೂಪಾಯಿಗಳನ್ನು ವ್ಯಯ ಮಾಡಿರುವ ಕಾಂಗ್ರೆಸ್ ಪಕ್ಷ ಒಂದು ಕಡೆಯಾದರೆ ಈ ಇಂದಿನ ಬಿಜೆಪಿ ಸರ್ಕಾರ 3,00,000 ಕೋಟಿಗೂ ಹೆಚ್ಚು ಸಾಲವನ್ನು ಮಾಡಿ ರಾಜ್ಯದ ಬೊಕ್ಕಸವನ್ನು ಬರ್ಬಾದ್ ಮಾಡಿದೆ. ಕಾಂಗ್ರೆಸ್ ಸರ್ಕಾರವು…

ಜನರಲ್ಲಿ ಭೀತಿ ಮೂಡಿಸಿದ್ದ ಚಿರತೆ ಬೋನಿಗೆ

ಬೆಂಗಳೂರು: ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯಲ್ಲಿ ಕೆಲವು ದಿನಗಳಿಂದ ಜನರಲ್ಲಿ ಭೀತಿ ಮೂಡಿಸಿದ್ದ ಚಿರತೆಯೊಂದು ಬೋನಿಗೆ ಬಿದ್ದಿದೆ. ತೂಬಗೆರೆ ಹೋಬಳಿಯ ಹಿರೇಮುದ್ದೇನಹಳ್ಳಿ, ಕಲ್ಲುಕೋಟೆ ಅರಣ್ಯ ಪ್ರದೇಶಗಳಲ್ಲಿ ತಿರುಗಾಡುತ್ತಿದ್ದ ಚಿರತೆ ಮೇಲಿನ ಜೂಗಾನಹಳ್ಳಿ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಜಾನುವಾರುಗಳ ಮೇಲೆ ದಾಳಿ‌ ಮಾಡಿ ಎರಡು ಹಸುಗಳನ್ನು ಕೊಂದಿದ್ದ ಚಿರತೆ ಕಳೆದ ರಾತ್ರಿ ಬೋನಿಗೆ ಬಿದ್ದಿದೆ. ಗ್ರಾಮಗಳಲ್ಲಿ ಹಾಡಹಗಲೇ ಚಿರತೆ ದಾಳಿಯಿಂದ ಜನ ಭಯಭೀತರಾಗಿದ್ದರು. ಚಿರತೆಯನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಯ ಮೇಲೆ ಒತ್ತಡ ಹೇರಿದ್ದರು. ಅರಣ್ಯ ಇಲಾಖೆ ಸಿಬ್ಬಂದಿ ಹಿರೇಮುದ್ದೇನಹಳ್ಳಿಯಲ್ಲಿ ಬೋನಿನ ಒಳಗೆ ನಾಯಿ ಕಟ್ಟಿ ಇರಿಸಿದ್ದರು. ಬುಧವಾರ ರಾತ್ರಿ ನಾಯಿ ತಿನ್ನಲು ಬಂದು ಚಿರತೆ ಬೋನಿಗೆ ಬಿದ್ದಿದ್ದು ಗ್ರಾಮಸ್ಥರು ನಿರಾಳರಾಗಿದ್ದಾರೆ.

ಭಾರತೀಯತೆಯನ್ನು ಶ್ರೇಷ್ಠ ಎನ್ನಲು ಯಾವತ್ತಾದರೂ ಸಿದ್ಧರಿದ್ದಾರ?; ಸಿ.ಟಿ.ರವಿ

ಬೆಂಗಳೂರು: ಮೆಕಾಲೆ, ಕಾರ್ಲ್ ಮಾಕ್ರ್ಸ್ ಗರಡಿಯವರಿಗೆ ಭಾರತದ ಹಿರಿಮೆ ಗರಿಮೆಯನ್ನು ಕಲಿಸುವುದು ಅಪಥ್ಯವಾಗಿ ಕಾಣುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೆಕಾಲೆಗೆ ಭಾರತ ತಲೆಯೆತ್ತಿ ನಿಲ್ಲಬೇಕೆಂದು ಯಾವತ್ತಾದರೂ ಅನಿಸಿತ್ತೇ? ಭಾರತವು ಸದಾ ಗುಲಾಮಗಿರಿಯಲ್ಲಿ ಇರಬೇಕೆಂಬ ಚಿಂತನೆ ಮೆಕಾಲೆಯದಾಗಿತ್ತು. ಅದಕ್ಕಾಗಿ ಇಲ್ಲಿ ದಾಸ್ಯವನ್ನು ಒಪ್ಪಿಕೊಳ್ಳುವ ಜನರನ್ನು ತಯಾರಿಸುವ ಯೋಚನೆ ಮೆಕಾಲೆಯದಾಗಿತ್ತು ಎಂದು ವಿಶ್ಲೇಷಿಸಿದರು. ಕುಟುಂಬ, ಸಮಾಜ, ರಾಜ್ಯದ ವ್ಯವಸ್ಥೆ ಇರಬಾರದೆಂಬ ಚಿಂತನೆ ಕಾರ್ಲ್ ಮಾಕ್ರ್ಸ್‍ನದಾಗಿತ್ತು. ಕಾರ್ಲ್ ಮಾಕ್ರ್ಸ್ ಚಿಂತನೆ ಮತ್ತು ಮೆಕಾಲೆ ಚಿಂತನೆಯಲ್ಲಿ ಗರಡಿಯಲ್ಲಿ ತಯಾರಾದ ಜನರು ಭಾರತೀಯತೆಯನ್ನು ಶ್ರೇಷ್ಠ ಎನ್ನಲು ಯಾವತ್ತಾದರೂ ಸಿದ್ಧರಿದ್ದಾರಾ ಎಂದು ಅವರು ಪ್ರಶ್ನಿಸಿದರು. ನಮ್ಮ ದೇಶವನ್ನು ಲೂಟಿ ಹೊಡೆದ ಮತ್ತು ದಾಳಿ ಮಾಡಿದ ಅಲೆಕ್ಸಾಂಡರ್ ಗ್ರೇಟ್ ಎಂದು ಕಲಿಸಲಾಗುತ್ತಿದೆ. ನಮ್ಮ ಸಂಸ್ಕøತಿ…

‘ಗ್ಯಾರಂಟಿ ವಿಚಾರ’; BJPಯಿಂದ ‘ವಚನಭ್ರಷ್ಟ ಪೋಸ್ಟರ್’ ರಿಲೀಸ್ ಎಚ್ಚರಿಕೆ

ಬೆಂಗಳೂರು: ಕಾಂಗ್ರೆಸ್ ಪಕ್ಷದವರು ಗ್ಯಾರಂಟಿ ವಿಚಾರದಲ್ಲಿ ನುಡಿದಂತೆ ನಡೆಯದೆ ಇದ್ದರೆ ನಾವು ನಿಮಗೆ ವಚನಭ್ರಷ್ಟ ಪಟ್ಟ ಕಟ್ಟುತ್ತೇವೆ. ವಚನಭ್ರಷ್ಟ ಪೋಸ್ಟರ್ ರಿಲೀಸ್ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಎಚ್ಚರಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಸರಕಾರದ ಕ್ಯಾಬಿನೆಟ್ ನಾಳೆ ನಡೆಯಲಿದೆ. ಈಗಾಗಲೇ ಸರಕಾರ ರಚನೆ ಆಗುವ ಮೊದಲು, ಅಧಿಕಾರಕ್ಕೆ ಬರುವ ಮೊದಲು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರು ಕರ್ನಾಟಕದ ಜನತೆಗೆ ಏನು ಮಾತು ಕೊಟ್ಟಿದ್ದಾರೋ, ವಚನ ನೀಡಿದ್ದಾರೋ ಆ ಪ್ರಕಾರ ನಡೆಯಬೇಕೆಂದು ಬಿಜೆಪಿ ಆಗ್ರಹಿಸುತ್ತದೆ ಎಂದು ಅವರು ತಿಳಿಸಿದರು. ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಎಂದಿದ್ದರು. ಈಗ ಏನೇನೋ ಕಂಡಿಷನ್ ಹಾಕುತ್ತಿದ್ದಾರೆ. ಅಂದರೆ ಅದು ವಚನಭ್ರಷ್ಟತೆ. ಎಲ್ಲ ನಿರುದ್ಯೋಗಿ ಪದವೀಧರರಿಗೆ 3 ಸಾವಿರ, ಎಲ್ಲ ನಿರುದ್ಯೋಗಿ…

ಆರೋಗ್ಯ ವಿವಿಗೆ ಅಂಟಿಕೊಂಡ ಅಕ್ರಮಗಳ ವೈರಸ್? ಹಗರಣ ಬಗ್ಗೆ ತನಿಖೆ ಆಗುತ್ತಾ? ಸಿದ್ದು ಸರ್ಕಾರಕ್ಕೆ ವಿದ್ಯಾರ್ಥಿಗಳ ಗುದ್ದು!

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ (RGUHS) ಇದೀಗ ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ಈ ವಿಶ್ವವಿದ್ಯಾಲಯದಲ್ಲಿ ಕುಲಸಚಿವರಾಗಿರುವ ಪ್ರೊ.ಡಾ.ರಾಮಕೃಷ್ಣ ರೆಡ್ಡಿ ಅವರ ವಿರುದ್ಧ ಭ್ರಷ್ಟಾಚಾರ ಹಾಗೂ ಅಧಿಕಾರ ದುರುಪಯೋಗದ ಆರೋಪ ಕೇಳಿಬಂದಿದೆ. ಈ ಬಗ್ಗೆ ದೂರುಗಳು ದಾಖಲಾಗಿದ್ದರೂ ಹಿಂದಿನ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದು ಅಚ್ಚರಿ ಹಾಗೂ ಕುತೂಹಲಕ್ಕೆ ಕಾರಣವಾಗಿದೆ. ರಾಮಕೃಷ್ಣ ರೆಡ್ಡಿ ಅವರು ನಡೆಸಿರುವ ಅಕ್ರಮದ ಬಗ್ಗೆ ಸ್ವತಃ ಸರ್ಕಾರದ ಒಂದು ಇಲಾಖೆಯೇ ವರದಿ ನೀಡಿದ್ದರೂ ಅತ್ಯಂತ ಪ್ರಭಾವಿ ಸ್ಥಾನದಲ್ಲಿರುವ ಈ ಅಧಿಕಾರಿ ವಿರುದ್ಧ ಕ್ರಮ ಕೈಗೊಂಡಿಲ್ಲ. ತಮ್ಮ ಪುತ್ರನನ್ನು ಪ್ರವೇಶ ಪರೀಕ್ಷೆ ಇಲ್ಲದೆಯೇ ವೈದ್ಯಕೀಯ ಶಿಕ್ಷಣಕ್ಕೆ ಸೇರ್ಪಡೆ ಮಾಡಿರುವ ಹಾಗೂ ಪರೀಕ್ಷೆಯಲ್ಲಿ ಅಕ್ರಮವಾಗಿ ತೇರ್ಗಡೆ ಮಾಡಿಸಿರುವ ಆರೋಪಗಳಿದ್ದರೂ ಈ ಅಧಿಕಾರಿಯ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗಿಲ್ಲ. ಅಷ್ಟೇ ಅಲ್ಲ, ಲೋಕಾಯುಕ್ತದಲ್ಲಿ ದೂರು ದಾಖಲಾಗಿದ್ದರೂ ಯಾವುದೇ ತನಿಖೆ ಆರಂಭವಾಗದಿರುವುದು ವ್ಯವಸ್ಥೆಗೆ…