ಮಂಗಳೂರು: ಬಂದರು ನಗರಿ ಮಂಗಳೂರಿನ ಪೊಲೀಸರು ಜನಹಿತ ಕ್ರಮದಿಂದಾಗಿ ಇದೀಗ ರಾಜ್ಯದ ಗಮನಸೆಳೆದಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಕ್ರಿಯಾಶೀಲ ಕ್ರಮಕ್ಕೆ ಹೆಸರಾಗಿರುವ ಐಪಿಎಸ್ ಅಧಿಕಾರಿ ಕುಲದೀಪ್ ಕುಮಾರ್ ಜೈನ್, ಇದೀಗ ಮಂಗಳೂರು ನಗರದಲ್ಲಿ ಕೈಗೊಂಡಿರುವ ತಾಲೀಮು ಮಾದರಿ ಎನಿಸಿದೆ. ಸಮಾಜಕ್ಕೆ ಕಂಟಕದ ಪರಿಸ್ಥಿತಿಗೆ ಕಾರಣವಾಗಬಲ್ಲ ಮಾದಕ ವ್ಯಸನ ಜಾಲಕ್ಕೆ ಅಂಕುಶ ಹಾಕಲು ಪ್ರಯತ್ನ ನಡೆದಿರುವಾಗಲೇ, ಮತ್ತೊಂದೆಡೆ ಯುವಜನರಲ್ಲಿ ಜಾಗೃತಿ ಮೂಡಿಸುವ ಪ್ರಕ್ರಿಯೆಗೂ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಮುನ್ನುಡಿ ಬರೆದಿದ್ದಾರೆ. ನಾಲ್ಕು ತಿಂಗಳ ಅವಧಿಯಲ್ಲಿ ಕಮಿಷನರೆಟ್ ವ್ಯಾಪ್ತಿಯ ವಿವಿಧೆಡೆ ಡ್ರಗ್ಸ್ ಸೇವನೆ ಪ್ರಕರಣಗಳಲ್ಲಿ ಪಾಸಿಟಿವ್ ಬಂದವರಿಗೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ತಾವೇ ಖುದ್ದಾಗಿ ಕೌನ್ಸೆಲಿಂಗ್ ನಡೆಸಿದ ಕುಲದೀಪ್ ಕುಮಾರ್ ಅವರು ಕುತೂಹಲದ ಕೇಂದ್ರಬಿಂದುವಾದರು. ಕೆಲ ಸಮಯದ ಹಿಂದೆ ರಾಜಧಾನಿ ಬೆಂಗಳೂರಿನ ಸಂಚಾರ ಉಪ ಪೊಲೀಸ್ ಆಯುಕ್ತರಾಗಿದ್ದಾಗ ಕುಲದೀಪ್ ಕುಮಾರ್ ಜೈನ ಅವರು, ತಮ್ಮ ಕಾರ್ಯವ್ಯಾಪ್ತಿಯಲ್ಲಿ…
Month: June 2023
KSRTC ಬಸ್‌ಗೆ ಲಾರಿ ಡಿಕ್ಕಿ; ಮಹಿಳೆಯ ಬಲಗೈ ತುಂಡು..
ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯದ ‘ಶಕ್ತಿ’ ಯೋಜನೆ ಜನಪ್ರಿಯವಾಗುತ್ತಿರುವಂತೆಯೇ, ಕೆಲವೊಂದು ಕಹಿ ಸನ್ನಿವೇಶಗಳು ವ್ಯವಸ್ಥೆಗೆ ಸವಾಲೆಂಬಂತಾಗಿದೆ. ಈ ನಡುವೆ, ಮಂಡ್ಯ ಸಮೀಪ ನಡೆದಿರುವ ಅವಘಡ ಕುರಿತಂತೆ ಅಂತೆ-ಕಂತೆಗಳು ಹುಟ್ಟಿಕೊಂಡಿವೆ. ಮಂಡ್ಯ ಜಿಲ್ಲೆಯ ಹುಲ್ಲೇನಹಳ್ಳಿ ಬಳಿ ಬಸ್‌ನಲ್ಲಿ ಕಿಟಕಿ ಮೂಲಕ ಹತ್ತೋವಾಗ ಅವಘಡ ಸಂಭವಿಸಿ ಮಹಿಳೆಯೊಬ್ಬರು ಕೈ ಕಳೆದುಕೊಂಡಿದ್ದಾರೆ ಎಂಬಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳು ಹರಿದಾಡುತ್ತಿವೆ. ಗಾಯಾಳು ಮಹಿಳೆಯ ಪರದಾಟದ ವೀಡಿಯೋ ಮನಕಲುವಂತಿದೆ. ಈ ನಡುವೆ, ಈ ಘಟನೆ ಬಗ್ಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸ್ಪಷ್ಟನೆ ನೀಡಿದೆ. ಬಸ್‌ನಲ್ಲಿ ಕಿಟಕಿ ಮೂಲಕ ಹತ್ತುತ್ತಿದ್ದ ಮಹಿಳೆಗೆ ಗಾಯವಾಗಿದೆ ಎಂಬುದು ಸುಳ್ಳು ಸುದ್ದಿ ಎಂದಿರುವ KSRTC ಇದು ಅಪಘಾತದಿಂದಾದ ಘಟನೆ ಎಂದು ಸ್ಪಷ್ಟಪಡಿಸಿದೆ. ಏನಿದು ಘಟನೆ..? ಜೂನ್ 18ರಂದು ಕೆಎಸ್ಸಾರ್ಟಿಸಿ ಚಾಮರಾಜನಗರ ವಿಭಾಗದ ಬಸ್ಸು ನಂಜನಗೂಡಿನಿಂದ ಟಿ.ನರಸೀಪುರಕ್ಕೆ ಕಾರ್ಯಚರಣೆ ಮಾಡುತ್ತಿರುವಾಗ, ಮಧ್ಯಾಹ್ನ1.45ರ ಸುಮಾರಿಗೆ…
ಲೋಕಸಭಾ ಚುನಾವಣೆ ಹೊತ್ತಿಗೆ ರಾಜ್ಯ ಬಿಜೆಪಿ ಮತ್ತಷ್ಟು ಹೀನಾಯ ಸ್ಥಿತಿಗೆ; ಶೆಟ್ಟರ್
ಹುಬ್ಬಳ್ಳಿ: ಬಿಜೆಪಿಯವರ ಹಣೆ ಬರಹಕ್ಕೆ ಎಂದಿಗೂ ವಿಧಾನಸಭೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗಿಲ್ಲ. ಅವರ ಸ್ಥಿತಿಯನ್ನು ನೋಡಿದರೆ ಅವರು ಯಾವ ಸ್ಥಿತಿಯಲ್ಲಿದ್ದಾರೆ ಎಂಬುದು ಗೋಚರಿಸುತ್ತದೆ ಎಂದು ಕಾಂಗ್ರೆಸ್ ನಾಯಕ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬಿಜೆಪಿ ನಾಯಕರ ನಡೆ ಬಗ್ಗೆ ಶೆಟ್ಟರ್ ಆಕ್ರೋಶ ಹೊರಹಾಕಿದರು. ಬಿಜೆಪಿಯ ಆಂತರಿಕ ಸಮಸ್ಯೆಗಳನ್ನು ಗಮನಿಸಿದರೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಆ ಪಕ್ಷ ಇನ್ನಷ್ಟು ದಯನೀಯ ಸ್ಥಿತಿಗೆ ತಲುಪಲಿದೆ ಎಂದು ವಿಶ್ಲೇಷಿಸಿದರು. ಬಿಜೆಪಿಯವರು ತಮ್ಮ ವಿರುದ್ಧ ಸಣ್ಣ ಮಟ್ಟದ ಟೀಕೆಗೆ ಮುಂದಾಗಿರುವುದಕ್ಕೆ ಅಸನಾಧಾನ ಹೊರಹಾಕಿದ ಅವರು, ನಾನು ಅಷ್ಟು ಸಣ್ಣ ಮಟ್ಟಕ್ಕೆ ಇಳಿದು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ ಈಗಾಗಲೇ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಬಿಜೆಪಿಯವರು ಮುಂದಿನ ದಿನಗಳಲ್ಲಿ ಇನ್ನೇನು ಆಗಲಿದ್ದಾರೆ ನೋಡುತ್ತಾ ಇರಿ ಎಂದರು. ಕಾಂಗ್ರೆಸ್ ಪಕ್ಷವು ಚುನಾವಣೆಗೆ ಮುನ್ನ ಘೋಷಣೆ ಮಾಡಿರುವ ಐದು ಗ್ಯಾರಂಟಿಗಳನ್ನು…
ಕರೆಂಟ್ ಬಿಲ್ ವಿಚಾರ.. ಸರ್ಕಾರಕ್ಕೆ ಶಾಕ್ ಕೊಟ್ಟ ಕೋರ್ಟ್..
ದಾವಣಗೆರೆ: ಕರೆಂಟ್ ಬಿಲ್ ಕಟ್ಟಿಲ್ಲವೆಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಕ್ಕೆ ಬೆಸ್ಕಾಂ ಗೆ 25 ಸಾವಿರ ದಂಡ ವಿಧಿಸಿದ ಗ್ರಾಹಕರ ಪರಿಹಾರ ಆಯೋಗ.! ದಾವಣಗೆರೆ ಕರೆಂಟ್ ಬಿಲ್ ಕಟ್ಟಿಲ್ಲವೆಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಬೆಸ್ಕಾಂಗೆ 25 ಸಾವಿರ ದಂಡವನ್ನು ಗ್ರಾಹಕರ ಪರಿಹಾರ ಆಯೋಗ ವಿಧಿಸಿದೆ. ಬೆಸ್ಕಾಂ ಅಧಿಕಾರಿಗಳು ಕಾನೂನು ಬಾಹಿರವಾಗಿ ನಗರದ ಪವನ್ ಉಲ್ಲಾಸ್ ರೇವಣ್‍ಕರ್ ಮನೆಯ ವಿದ್ಯುತ್ ಸರಬರಾಜನ್ನು ತಡೆಹಿಡಿದಿದ್ದು, ಈ ಕೂರಿತು ಪವನ್ ಜಿಲ್ಲಾ ಗ್ರಾಹಕರ ಪರಿಹಾರ ಆಯೋಗಕ್ಕೆ ದೂರಿನ ಸಲ್ಲಿಸಿದ್ದರು, ದೂರ ಮೇರೆಗೆ ವಿಚಾರಣೆ ನಡೆಸಿ, ವಾದ ಪ್ರತಿವಾದವನ್ನು ಆಲಿಸಿದ ಆಯೋಗ, ಬೆಸ್ಕಾಂ ಕಂಪನಿ ಮೇಲೆ ರೂ.25000 ದಂಡ ವಿಧಿಸಿದೆ. ಮೂರು ತಿಂಗಳಿಂದ ಬಿಲ್ ಪಾವತಿಸಿರುವುದಿಲ್ಲ ಎಂದು ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಆದರೆ ಗ್ರಾಹಕರು ಬೆಸ್ಕಾಂ ತನ್ನ ಸೇವೆಯನ್ನು ನೀಡುವಾಗ ಕೆಇಆರ್ ಸಿ ಕೋಡ್ 2004 ರ ನಿಯಮ-9 ರ ಅಡಿಯಲ್ಲಿನ ಪ್ರಕ್ರಿಯೆಗಳನ್ನು ಪಾಲಿಸದೇ…
‘Bhola Shankar’ ಹವಾ ಜೋರು
ದೇವಾಲಯಗಳಿಗೆ ಎಲ್ಲರಿಗೂ ಮುಕ್ತ ಪ್ರವೇಶಾವಕಾಶ; ‘ಮಸೀದಿಗೂ ಅನ್ವಯವಾಗುತ್ತಾ?’ ಎಂದು ಸರ್ಕಾರಕ್ಕೆ ಪ್ರಶ್ನೆಗಳ ಸರಮಾಲೆ
ಬೆಂಗಳೂರು: ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಇನ್ನು ಮುಂದೆ ಎಲ್ಲರಿಗೂ ಮುಕ್ತ ಪ್ರವೇಶಾವಕಾಶ ಇರಲಿದೆ. ಈ ಸಂಬಂಧ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಔರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಆಡಳಿತ ಪಕ್ಷ ಕಾಂಗ್ರೆಸ್, ಮುಜರಾಯಿ ಇಲಾಖಾ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಇನ್ಮುಂದೆ ಜಾತಿ ಹಾಗೂ ಲಿಂಗಭೇಧವಿಲ್ಲದೆ ಸರ್ವರಿಗೂ ಮುಕ್ತ ಪ್ರವೇಶ ಎಂಬ ಫಲಕವನ್ನು ಕಡ್ಡಾಯಗೊಳಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆಂದು ಹೇಳಿದೆ. . ಯಾವುದೇ ದೇವಸ್ಥಾನಗಳಲ್ಲಿ ದಲಿತರು, ಸ್ತ್ರೀಯರು ಎಂಬ ತಾರತಮ್ಯ ಮಾಡದಂತೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು. ಧಾರ್ಮಿಕ ಸ್ವತಂತ್ರದ ವಾತಾವರಣ ನಿರ್ಮಿಸುವುದೇ ನಿಜವಾದ ಧರ್ಮರಕ್ಷಣೆ ಎಂದು ಕಾಂಗ್ರೆಸ್ ಸರ್ಕಾರ ನಂಬಿದೆ ಎಂದು ಹೇಳಿಕೊಂಡಿದೆ. . ಇದಕ್ಕೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಸೀದಿಗಳಿಗೆ ಈ ನಿಯಮ ಅನ್ವಯ ಇಲ್ವಾ? ಎಂಬ ಪ್ರಶ್ನೆಯನ್ನು ಕೆಲವರು ಸರ್ಕಾರದ ಮುಂದಿಟ್ಟಿದ್ದಾರೆ. ‘ನಾವು ಇದನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇವೆ. ಇದು…
KSRTCಗೆ ಬಲ ತುಂಬಿದ ‘ಶಕ್ತಿ’ ಯೋಜನೆ: ಮತ್ತಷ್ಟು ಬಸ್ಸುಗಳ ಸೇರ್ಪಡೆಗೆ ಸರ್ಕಾರದ ಕ್ರಮ
ಬೆಂಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣ ಭಾಗ್ಯ ಕರುಣಿಸಿರುವ ಶಕ್ತಿ ಯೋಜನೆಯಿಂದಾಗಿ ರಾಜ್ಯದ ಹೆಮ್ಮೆಯ ಸರ್ಕಾರಿ ಸಾರಿಗೆ ಸಂಸ್ಥೆ KSRTCಗೆ ಬಲ ಹೆಚ್ಚಿದೆ. ನಿಗಮದ ಬಸ್ಸುಗಳಲ್ಲಿ ಪ್ರತಿದಿನ ಸರಾಸರಿ 84.15 ಲಕ್ಷದಷ್ಟಿದ್ದ ಪ್ರಯಾಣಿಕರ ಸಂಖ್ಯೆ ಪ್ರಸಕ್ತ ‘ಶಕ್ತಿ’ ಯೋಜನೆ ಜಾರಿ ನಂತರ, ಪ್ರತಿ ದಿನ ಸರಾಸರಿ 1 ಕೋಟಿ 5 ಲಕ್ಷಕ್ಕೆ ಹೆಚ್ಚಿದೆ. ಇದು ಸಾರಿಗೆ ನಿಗಮದ ಯಶೋಗಾಥೆಗೂ ಕಾರಣವಾಗಲಿದೆ. ಇದೇ ಸಂದರ್ಭದಲ್ಲಿ ಸಾರಿಗೆ ಸಂಸ್ಥೆಗೆ ಹೆಚ್ಚುವರಿ ಬಸ್ಸುಗಳ ಸೇರ್ಪಡೆಗೆ ಸರ್ಕಾರ ಕ್ರಮ ಕೈಗೊಳ್ಲಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಈ ಸಂಬಂಧ ಬೆಂಗಳೂರಿನ ಕೆಎಸ್ಸಾರ್ಟಿಸಿ ಕೇಂದ್ರ ಕಚೇರಿಯಲ್ಲಿ ಶನಿವಾರ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು, ಏಕ ಸದಸ್ಯ ಸಮಿತಿ ಅಧ್ಯಕ್ಷ ಎಂ.ಆರ್ ಶ್ರೀನಿವಾಸಮೂರ್ತಿ ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಅನ್ಬು ಕುಮಾರ್ ಉಪಸ್ಥಿತಿಯಲ್ಲಿ ನಡೆಸಿದ ಸಭೆ ಕುತೂಹಲದ ಕೇಂದ್ರಬಿಂದುವಾಯಿತು.…
ಸೋಮಣ್ಣ ಅವರು BJP ರಾಜ್ಯಾಧ್ಯಕ್ಷ ಆಗ್ತಾರ? ಚರ್ಚೆಗೆ ಪೀಠಿಕೆ ಹಾಕಿದ್ರಾ ಕಟೀಲ್..?
ಬಳ್ಳಾರಿ: ವಿಧಾನಸಭಾ ಚುನಾವಣೆಯಲ್ಲಿನ ಬಿಜೆಪಿ ಸೋಲಿನ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಪ್ರಕಟಿಸಿರುವ ನಳೀನ್ ಕುಮಾರ್ ಕಟೀಲ್, ಹಿರಿಯ ನಾಯಕರಾಗಿರು ಮಾಜಿ ಸಚಿವ ವಿ.ಸೋಮಣ್ಣ ಅವರಿ, ಪಕ್ಷದ ರಾಜ್ಯಾಧ್ಯಕ್ಷ ಕೇಳುವುದು ತಪ್ಪಲ್ಲ ಎಂದಿದ್ದಾರೆ. ಈ ಮೂಲಕ ಸೋಮಣ್ಣ ಅವರು ಮುಂದಿನ ರಾಜ್ಯಾಧ್ಯಕ್ಷರಾಗುವರೇ ಎಂಬ ಚರ್ಚೆಗೆ ನಳಿನ್ ಕುಮಾರ್ ಪೀಠಿಕೆ ಹಾಕಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಕಳೆದ ಒಂಭತ್ತು ವರ್ಷ ಭ್ರಷ್ಟಾಚಾರ ರಹಿತ ಸರ್ಕಾರ ನೀಡಿದ್ದೇವೆ. ಭಯೋತ್ಪಾದನಾ ಚಟುವಟಿಕೆ ಶೇ 80 ಕಡಿಮೆ ಆಗಿದೆ. ನಕ್ಸಲ್ ಹಾಗೂ ಆತಂಕವಾದ ನಿರ್ಮೂಲನೆಯಾಗಿದೆ ಎಂದು ಮೋದಿ ಸರ್ಕಾರದ ಕ್ರಮಗಳ ಬಗ್ಗೆ ಸಮರ್ಥಿಸಿಕೊಂಡರು. ಕೇಂದ್ರ ಸರ್ಕಾರದ ನಿರಂತರವಾಗಿ 5 ಕೆಜಿ ಅಕ್ಕಿ ಕೊಡುತ್ತೆ. ದೇಶದ ಎಲ್ಲಾ ರಾಜ್ಯಗಳಿಗೆ ಅಕ್ಕಿ ಕೊಡುತ್ತೆ. ಬರ ಮತ್ತು ನೆರೆ ಬಂದಾಗ ವಿತರಿಸಲು ಕೇಂದ್ರ ಅಕ್ಕಿ ಸಂಗ್ರಹ ಮಾಡುತ್ತೆ ಎಂದ ಅವರು, ರಾಜ್ಯದಲ್ಲಿ ಅನಿರೀಕ್ಷಿತ…
ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ರಾಜೀನಾಮೆ ಕೊಟ್ಟಿಲ್ಲ ಎಂದು ಬಿಜೆಪಿ ಸ್ಪಷ್ಟನೆ
ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ತಿಳಿಸಿದೆ. ಈ ಕುರಿತಂತೆ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಬಿಜೆಪಿ ಮಾಧ್ಯಮ ಸಂಚಾಲಕರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಬಗ್ಗೆ ಪ್ರತಿಕ್ರಿಯಿಸಿದ ಸಂದರ್ಭದಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಪಕ್ಷದ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದರು ಸ್ಪಷ್ಟಪಡಿಸಿದ್ದಾರೆ. ಪಕ್ಷದ ನೂತನ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆಯೇ ಹೊರತು, ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ಹೇಳಿಲ್ಲ. ಹೇಳಿಕೆಯನ್ನು ತಪ್ಪಾಗಿ…
ಸೋಲಿನ ಪ್ರತಿಧ್ವನಿ; ರಾಜ್ಯಾಧ್ಯಕ್ಷ ನಳಿನ್ ರಾಜೀನಾಮೆ ಸುದ್ದಿಯ ಸಂಚಲನ
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಜೀನಾಮೆ ನೀಡಲು ಮುಂದಾದಂತಿದೆ. ಬಳ್ಳಾರಿ ಪ್ರವಾಸದಲ್ಲಿರುವ ಅವರು ತಮ್ಮ ನಿರ್ಧಾರವನ್ನು ಬಹಿರಂಗಪಡಿಸಿದ್ದಾರೆ. ಬಳ್ಳಾರಿಯಲ್ಲಿ ಬಿಜೆಪಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಮಾತನಾಡಿದ ನಳಿನ್ ಕುಮಾರ್ ಕಟೀಲ್, ತಮ್ಮ ಅವಧಿ ಮುಕ್ತಾಯವಾಗಿದೆ. ಹೊಸದಾಗಿ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ ಎಂದರು. ವಿಧಾನಸಭಾ ಚುನಾವಣೆಯ ಸೋಲಿನ ಜವಾಬ್ದಾರಿಯನ್ನು ತಾನು ಹೊತ್ತಿದ್ದೇನೆ. ಈ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಜೊತೆ, ಮೌಖಿಕವಾಗಿಯೂ ತಿಳಿಸಿದ್ದೇನೆ ಎಂದರು.. ಇದೇ ವೇಳೆ, ವಿಧಾನಸಭಾ ಚುನಾವಣೆಯಲ್ಲಿನ ಬಿಜೆಪಿ ಸೋಲಿನ ಹಿನ್ನೆಲೆಯಲ್ಲಿ ಪ್ರಮುಖರು ಜವಾಬ್ಧಾರಿಯಿಂದ ದೂರ ಉಳಿಯುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಹಾಗಾಗಿ ಪ್ರತಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಯಾಗಿರುವ ಬಸವರಾಜ್ ಬೊಮ್ಮಾಯಿ ಅವರಿಗೂ ಆ ಸ್ಥಾನ ಸಿಗುವುದು ಅಸಂಭವ ಎಂದು ಹೇಳಲಾಗುತ್ತಿದೆ.