ಮಂಗಳೂರು: ಕರಾವಳಿಯಲ್ಲಿ ಕಿಲ್ಲರ್ ಬಸ್‌ಗಳ ವಿರುದ್ದ ಸಾರ್ವಜನಿಕರು ರೊಚ್ಚಿಗೆದ್ದಿದ್ದಾರೆ. ಗುರುವಾರ ಬಸ್ ಡಿಕ್ಕಿಯಾಗಿ ಪೊಳಲಿ ಸಮೀಪದ ಯುವಕ ಸಾವನ್ನಪ್ಪಿದ ನಂತರ ಇದೀಗ ಸಾರ್ವಜನಿಕರ ಆಕ್ರೋಶ ಪ್ರತಿಭಟನೆಯ ಸ್ವರೂಪ ಪಡೆದುಕೊಂಡಿದೆ. ಗುರುಪುರ ಜಂಕ್ಷನ್ ಬಳಿ ಗುರುವಾರ ಬಸ್ ಢಿಕ್ಕಿಯಾಗಿ ಬೈಕ್ ಸವಾರ ಪೊಳಲಿ ಸಮೀಪದ ಕರಿಯಂಗಳ ನಿವಾಸಿ ಸಂತೋಷ್ ಕುಮಾರ್ ಮೃತಪಟ್ಟಿದ್ದಾರೆ. ಈ ಅಪಘಾತದಿಂದ ಸಿಟ್ಟಿಗೆದ್ದ ಜನರು ಇಂದು ವಿವಿಧ ಸಂಘಟನೆಗಳ ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಡೆಸಿದರು. ಗುರುಪುರ-ಕೈಕಂಬ ಬಳಿ ಜಮಾಯಿಸಿದ ಸಾವಿರಾರು ಮಂದಿ ಪ್ರತಿಭಟನಾಕಾರರು ಖಾಸಗಿ ಬಸ್‌ಗಳ ನಿರ್ಲಕ್ಷ್ಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಕೈಕಂಬ ಜಂಕ್ಷನ್ ನಲ್ಲಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಲಾಯಿತು. ಮಳೆಯ ನಡುವೆಯೂ ನೂರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರಿಂದ ಕೆಲಹೊತ್ತು ವಾಹನ ಸಂಚಾರ ಏರುಪೇರಾಯಿತು. ಸಾರ್ವಜನಿಕರ ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಬಜಪೆ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರತಿಭಟನಾಕಾರರ ಮನವೊಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು…
Month: June 2023
ಗೃಹಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಸಂಬಂಧವಿಲ್ಲ; ಸರ್ಕಾರದ ಸ್ಪಷ್ಟನೆ
ಬೆಂಗಳೂರು: ಗೃಹಜ್ಯೋತಿ ಯೋಜನೆಯ ಹೊರೆಯನ್ನು ಯಾರ ಮೇಲೂ ಹಾಕುತ್ತಿಲ್ಲ. ಇದೊಂದು ತಪ್ಪು ಅಭಿಪ್ರಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಗಾರಿಕೋದ್ಯಮಿಗಳಿಗೆ ಮನವರಿಕೆ ಮಾಡಿಸಿದ್ದಾರೆ. ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷ ಬಿ.ವಿ.ಗೋಪಾಲ ರೆಡ್ಡಿ ಅವರ ನೇತೃತ್ವದ ನಿಯೋಗವು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಸಂದರ್ಭದಲ್ಲಿ ಹಿಂದಿನ ಸರ್ಕಾರದ ಅವಧಿಯಲ್ಲಿ ಆಗಿದ್ದನ್ನು ಮನವರಿಕೆ ಮಾಡಿಸಿದರು. ನಮ್ಮ ಸರ್ಕಾರ ವಿದ್ಯುತ್ ಶುಲ್ಕವನ್ನು ಏರಿಸುವ ನಿರ್ಧಾರ ಮಾಡಿಲ್ಲ. ಕೆ.ಇ. ಆರ್.ಸಿಯು ಬೆಲೆ ಹೆಚ್ಚಳದ ನಿರ್ಧಾರವನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಕೈಗೊಂಡಿತ್ತು ಎಂದು ವಿವರಿಸಿದರು. ನಿಯೋಗ ಮಾಡಿರುವ ಮನವಿಯ ಕುರಿತು ಆರ್ಥಿಕ, ಇಂಧನ ಇಲಾಖೆ , ಕಾಸಿಯಾ, ಎಫ್.ಕೆ.ಸಿ.ಸಿ ಐ ಅವರೊಂದಿಗೆ ಪ್ರತ್ಯೇಕ ಸಭೆ ಕರೆದು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. ಕೆ.ಇ.ಆರ್.ಸಿ ತನ್ನ ಸುಂಕದ ಆದೇಶದಲ್ಲಿ ಉದ್ಯಮ ವಲಯಕ್ಕೆ ವಿದ್ಯುತ್ ದರವನ್ನು ಹೆಚ್ಚಿಸಿದ್ದು,…
ಬಾಕಿ ಹಣ ಬಿಡುಗಡೆಗೆ ಕೆಂಪಣ್ಣ ಒತ್ತಾಯ
ಬೆಂಗಳೂರು : ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್ ಹಾವಳಿಯಿಂದ ಗುತ್ತಿಗೆದಾರರಿಗೆ ಸಮಸ್ಯೆ ಆಗಿದೆ. ಬಿಜೆಪಿ ಹಳಿ ತಪ್ಪಿಸಿರುವ ಆರ್ಥಿಕತೆಯನ್ನು ಸರಿಯಾಗಿಸಲು ಸ್ವಲ್ಪ ಸಮಯಾವಕಾಶ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಗುತ್ತಿಗೆಗಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಅವರ ನೇತೃತ್ವದ ನಿಯೋಗವು ಇಂದು ತಮ್ಮನ್ನು ಭೇಟಿ ಮಾಡಿ ಬಾಕಿ ಇರುವ ಬಿಲ್ಲುಗಳ ಪಾವತಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ ಸಂದರ್ಭದಲ್ಲಿ ಅವರು, ರಾಜ್ಯದಲ್ಲಿ ಕಮಿಷನ್ ಹಾವಳಿಗೆ ಕಡಿವಾಣ ಹಾಕಿ, ಸ್ಥಳೀಯ ಗುತ್ತಿಗೆದಾರರ ಹಿತಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಬಜೆಟ್ ಮಂಡನೆಯಾಗಬೇಕಿದೆ. ಬಜೆಟ್ ಅಧಿವೇಶನದ ನಂತರ ಬಿಬಿಎಂಪಿ ಹಾಗೂ ಆರ್ಥಿಕ ಇಲಾಖೆ ಕಾರ್ಯದರ್ಶಿಗಳ ಸಭೆ ಕರೆದು ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು. ಬಾಕಿ ಹಣ ಬಿಡುಗಡೆಗೆ ಕೆಂಪಣ್ಣ ಒತ್ತಾಯ ಬಿಬಿಎಂಪಿಯಲ್ಲಿ 2000 ಕೋಟಿ ರೂ.ಗಳು ಹಾಗೂ ನಗರೋತ್ಥಾನ ಯೋಜನೆಯಡಿ…
ಗಾಂಜಾ ವಿರುದ್ದ ಖಾಕಿ ಸಮರ; ದೊಡ್ಡಬಳ್ಳಾಪುರದಲ್ಲಿ ಫೆಡ್ಲರ್ ಸೆರೆ
ಬೆಂಗಳೂರು (ಗ್ರಾ): ದೊಡ್ಡಬಳ್ಳಾಪುರ ನಗರದ ನಾಗದೇನಹಳ್ಳಿಯ ಗೀತಂ ಕಾಲೇಜ್ ಸಮೀಪದಲ್ಲಿ ಗಾಂಜಾ ಸೋಪ್ಪು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಅಂತರರಾಜ್ಯ ಗಾಂಜಾಫೆಡ್ಲರ್ ಒಬ್ಬನನ್ನು ಗ್ರಾಮಾಂತರ ಠಾಣೆಯ ಇನ್‌ಸ್ಪೆಕ್ಟರ್ ಮುನಿಕೃಷ್ಣ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹಿಂದೂಪುರ ತಾಲೂಕಿನ ಮಾನೆಪಲ್ಲಿ ಗ್ರಾಮದ ಶಿವಪ್ಪ (25 ವರ್ಷ) ಎನ್ನಲಾಗಿದ್ದು, ಈತನಿಂದ 07 ಲಕ್ಷ ರೂ ಮೌಲ್ಯದ 09ಕೆಜಿ 580 ಗ್ರಾಂ ತೂಕದ ಗಾಂಜಾ ಸೋಪ್ಪು, ದ್ವಿಚಕ್ರ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಖಚಿತ ಮಾಹಿತಿ ಆಧಾರದಲ್ಲಿ, ಬೆಂಗಳೂರು ಗ್ರಾಮಾಂತರ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಅಪರ ಪೊಲೀಸ್ ಅಧೀಕ್ಷಕ ಪುರುಷೋತ್ತಮ್, ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್‍ಪಿ ನಾಗರಾಜು ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಮುನಿಕೃಷ್ಣ, ಸಬ್ ಇನ್ಸ್ಪೆಕ್ಟರ್ ಪಂಕಜಾ, ಸಿಬ್ಬಂದಿಗಳಾದ ದತ್ತಾತ್ರೇಯ, ಅರ್ಜುನ್ ಲಮಾಣಿ, ವೆಂಕಟೇಶ್ ಕುಮಾರ್, ಗಂಗಯ್ಯ, ಹನುಮಂತರಾಜು, ಸಚಿನ ಉಪ್ಪಾರ ಕಾರ್ಯಾಚರಣೆ ನಡೆಸಿದ್ದಾರೆ. ಗಾಂಜಾ ಮಾದಕ ವಸ್ತುವನ್ನು ಜನರಿಗೆ ಮಾರಾಟ ಮಾಡಿ ಸಮಾಜದಲ್ಲಿ…
ಸರ್ಕಾರಿ ವೈದ್ಯರ ಶಿಸ್ತು ಬಗ್ಗೆ ನಿಗಾ.. ಆಯೋಗದ ಶಿಫಾರಸು..
ಬೆಂಗಳೂರು: ವೈದ್ಯಕೀಯ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆಗೆ ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ನೇತೃತ್ವದ ಆಡಳಿತ ಸುಧಾರಣ ಆಯೋಗ-2 ಸಲಹೆ ಮಾಡಿದೆ. ಸರ್ಕಾರ ವೈದ್ಯರು ಖಾಸಗಿಯಾಗಿ ಕಾರ್ಯನಿರ್ವಹಿಸುವುದಕ್ಕೆ ಅಂಕುಶ ಹಾಕಬೇಕ, ಸರ್ಕಾರಿ ಆಸ್ಪತ್ರೆಗಳಲ್ಲಿ ಸುಸೂತ್ರ ನಿರ್ವಹಣೆಗಾಗಿ ವ್ಯವಸ್ಥಾಪಕರನ್ನು ನೇಮಿಸಬೇಕೆಂದೂ ಆಯೋಗ ಶಿಫಾರಸು ಮಾಡಿದೆ. ಈ ವರದಿ ಸರ್ಕಾರಕ್ಕೆ ಗುರುವಾರ ಸಲ್ಲಿಕೆಯಾಗಿದೆ. ವರದಿಯಲ್ಲಿನ ಪ್ರಮುಖ ಅಂಶಗಳು ಹೀಗಿವೆ: ಆರೋಗ್ಯ ಇಲಾಖೆಯಲ್ಲಿ ನರ್ಸರಿಂಗ್ ನಿರ್ದೇಶನಾಲಯ ಸ್ಥಾಪಿಸಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಸಂಜೆ ಒಪಿಡಿಗಳನ್ನು ಪ್ರಾರಂಭಿಸಬೇಕು. ಒಳರೋಗಿಗಳ ಮತ್ತು ಹೆರಿಗೆಗಳ ಸಂಖ್ಯೆಯನ್ನು ಆಧರಿಸಿ ತಾಲೂಕು ಆಸ್ಪತ್ರೆಗಳಿಗೆ ಹೆಚ್ಚುವರಿಯಾಗಿ 50 ಹೊಸ ಸಾಮಾನ್ಯ ಹಾಸಿಗೆಗಳನ್ನು ಮಂಜೂರು ಮಾಡಬೇಕು. ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸ್ತ್ರೀರೋಗ ತಜ್ಞರು, ಮಕ್ಕಳ ವೈದ್ಯರು, ಅರಿವಳಿಕೆ ತಜ್ಞರು, ದಂತ ಶಸ್ತ್ರಚಿಕಿತ್ಸಕರು ವಾರಕ್ಕೊಮ್ಮೆ ಗಂಟೆಯ ಆಧಾರದಲ್ಲಿ ಸೇವೆ ನೀಡುವಂತಾಗಬೇಕು. ಮೂಳೆಚಿಕಿತ್ಸಕ, ಮನೋವೈದ್ಯರು, ಫಿಸಿಯೋಥೆರಪಿಸ್ಟ್ ತಿಂಗಳಿಗೊಮ್ಮೆ ಗಂಟೆಯ ಆಧಾರದಲ್ಲಿ ತಜ್ಞರ ಸೇವೆಗಳನ್ನು ಪಡೆಯಲು…
ಕೈಗಾರಿಕೋದ್ಯಮಿಗಳ ಪ್ರತಿಭಟನೆ, ವಿದ್ಯುತ್ ನೀತಿ ಹಳಿ ತಪ್ಪಿರುವುದಕ್ಕೆ ಸಾಕ್ಷಿ?
ಬೆಂಗಳೂರು: ರಾಜ್ಯ ಸರ್ಕಾರದ ವಿದ್ಯುತ್ ನೀತಿ ಖಂಡಿಸಿ ಮೊದಲ ಬಾರಿಗೆ ಕೈಗಾರಿಕೋದ್ಯಮಿಗಳು ಮುಷ್ಕರ ನಡೆಸಿರುವುದು ರಾಜ್ಯದ ವಿದ್ಯುಶ್ಚಕ್ತಿ ಹಳಿ ತಪ್ಪಿರುವುದಕ್ಕೆ ಇದೇ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕ ಕೈಗಾರಿಕೆಯಲ್ಲಿ ಅತ್ಯಂತ ಮುಂದುವರೆದ ರಾಜ್ಯವಾಗಿದೆ. ಇಲ್ಲಿ ಸಣ್ಣ ಉದ್ಯಮಗಳಿಂದ ಹಿಡಿದು ಬೃಹತ್ ಕೈಗಾರಿಕೆಗಳು ಕಾರ್ಯ ನಿರ್ವಹಿಸುತ್ತಿವೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿದ್ಯುತ್ ನೀತಿ ಗ್ರಾಹಕರು ಹಾಗೂ ಕೈಗಾರಿಕೋದ್ಯಮಿಗಳಿಗೆ ಮಾರಕವಾಗಿರುವುದು ದುರ್ದೈವ ಮತ್ತು ಖಂಡನೀಯ ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಸಾಮಾನ್ಯ ಜನರಿಂದ ಹಿಡಿದು ಕೈಗಾರಿಕೆಗಳಿಗೂ ವಿದ್ಯುತ್ ಕ್ಷಾಮ ತಲೆದೋರುವ ಸಾಧ್ಯತೆ ಇದೆ. ಸರ್ಕಾರ ಕೂಡಲೆ ಎಚ್ಚೆತ್ತುಕೊಂಡು ಬೇಕಾಗಿರುವ ಹಣಕಾಸನ್ನು ಬಿಡುಗಡೆ ಮಾಡಬೇಕು ಹಾಗೂ ವಿದ್ಯುತ್ ಬಳಕೆದಾರರ ಮೇಲಿನ ಹೊರೆ ಕಡಿಮೆ ಮಾಡಬೇಕು. ಪೂರ್ವ ತಯಾರಿ ಇಲ್ಲದೆ ಗ್ಯಾರೆಂಟಿ ಜಾರಿ ಮಾಡಿದರೆ ಅದರ ಎಲ್ಲ ಭಾರವೂ ಜನ…
ಕಾಂಗ್ರೆಸ್ ಸರ್ಕಾರದ್ದು ಗೃಹಜ್ಯೋತಿಯೋ, ಸುಡುಜ್ಯೋತಿಯೋ?; ವಿದ್ಯುತ್ ದರ ಏರಿಕೆ ಬಗ್ಗೆ ಆಕ್ರೋಶ
ಬೆಂಗಳೂರು: ವಿದ್ಯುತ್ ಮೇಲೆ ವಿಧಿಸಿರುವ ಶೇ.9ರಷ್ಟು ತೆರಿಗೆಯಲ್ಲಿ ಶೇ.3ರಿಂದ 4ರಷ್ಟು ಕಡಿತ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ. ಅಪರಿಮಿತವಾಗಿ ಹೆಚ್ಚಳವಾಗಿರುವ ವಿದ್ಯುತ್ ದರದ ಬಗ್ಗೆ ಬಿಕ್ಕಟ್ಟಿಗೆ ಸಿಲುಕಿರುವ IT & ESDM ವಲಯಗಳ ಸಣ್ಣ ಪ್ರಮಾಣದ ಕೈಗಾರಿಕಾ ಘಟಕಗಳ ಮುಖ್ಯಸ್ಥರ ಜತೆ ಮಾತುಕತೆ ನಡೆಸಿ ಅವರ ಅಹವಾಲು ಸ್ವೀಕರಿಸಿದ ನಂತರ ಮಾಜಿ ಮುಖ್ಯಮಂತ್ರಿಗಳು ಮಾಧ್ಯಮಗಳ ಜತೆ ಮಾತನಾಡಿದರು. ದುಬಾರಿ ವಿದ್ಯುತ್ ದರದಿಂದ ಸಾರ್ವಜನಿಕರ ಜತೆಗೆ ಕೈಗಾರಿಕಾ ವಲಯವೂ ತೀವ್ರ ಸಂಕಷ್ಟಕ್ಕೆ ಸಿಕುಕಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಗ್ಯಾರಂಟಿಗಳ ಹೆಸರಿನಲ್ಲಿ ಜನರ ತುಟಿಗೆ ತುಪ್ಪ ಸವರುತ್ತಿರುವ ರಾಜ್ಯ ಸರ್ಕಾರ ವಿದ್ಯುತ್ ಮೇಲಿನ ತೆರಿಗೆಯಲ್ಲಿ ಕೊಂಚ ಕಡಿತ ಮಾಡಲಿ ಎಂದರು. ಗೃಹಜ್ಯೋತಿ ಎಂದು ಹೇಳುತ್ತಾ ಎಲ್ಲರ ಮನೆಗಳಲ್ಲಿ ಜ್ಯೋತಿ ಬೆಳಗಿಸುವ ನಾಟಕ ಆಡುತ್ತಿರುವ ಕಾಂಗ್ರೆಸ್ ಸರಕಾರ, ಜನರ…
ದ್ವೇಷದ ರಾಜಕಾರಣ ಬೇಡ; ಅಮಿತ್ ಷಾ ಅವರಿಗೆ ಸಿದ್ದರಾಮಯ್ಯ ಮನವಿ
ಬೆಂಗಳೂರು: ಅನ್ನಭಾಗ್ಯ ಅಕ್ಕಿ ವಿತರಣೆ ವಿಚಾರದಲ್ಲಿ ರಾಜ್ಯ ಸರ್ಕಾರ ಕಠಿಣ ಹಾದಿಯಲ್ಲಿ ಸಾಗುವಂತಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಕಾಂಗ್ರೆಸ್ ಆರೋಪಿಸುತ್ತಿದ್ದಾರೆ, ಪ್ರತಿಪಕ್ಷ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕಿಳಿದಿದೆ. ಈ ನಡುವೆ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಬೇಡಿಕೆ ಬಗ್ಗೆ ಗಮನಸೆಳೆದಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಸಂದರ್ಭದಲ್ಲಿ ಎಫ್.ಸಿ.ಐ ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ ವಿಚಾರವನ್ನು ಗಮನಕ್ಕೆ ತರಲಾಗಿದೆ ಎಂದಿದ್ದಾರೆ. ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ತಿಳಿಸಿದ್ದೇನೆ. ಅವರು ಸಂಬಂಧಪಟ್ಟ ಮಂತ್ರಿಗಳಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ನಿನ್ನೆ ಕೇಂದ್ರ ಗೃಹ…
ಉಚಿತ ಪ್ರಯಾಣದ ವೇಳೆ ಮಹಿಳೆಯರ ಅನುಚಿತ ವರ್ತನೆ; KSRTC ಸಿಬ್ಬಂದಿ ಮೇಲೆ ಹಲ್ಲೆ ಮಾಡಿದರೆ ಏನಾಗುತ್ತೆ ಎಂಬುದಕ್ಕೆ ಈ ಪ್ರಕರಣ ಸಾಕ್ಷಿ
ಬೆಂಗಳೂರು: ಮಹಿಳೆಯರಿಗೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ಯೋಜನೆ ಜಾರಿಯಾದ ನಂತರ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ಇದೇ ವೇಳೆ, ಅಹಿತಕರ ಘಟನೆಗಳೂ ಆಗಾಗ್ಗೆ ವರದಿಯಾಗುತ್ತಿವೆ. ಈ ನಡುವೆ ಬಸ್ ನಿಲ್ಲುವ ವಿಚಾರದಲ್ಲಿ ಕೆಲವು ಕಿಡಿಗೇಡಿಗಳು ಸಾರಿಗೆ ಬಸ್‌ನ ಚಾಲಕ ಹಾಗೂ ನಿರ್ವಾಹಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಕೋಲಾಹಲಕ್ಕೆ ಕಾರಣವಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ರಾಯದುರ್ಗ – ಬೆಂಗಳೂರು ಅಂತರರಾಜ್ಯ ಮಾರ್ಗದ ಬಸ್‌ನಲ್ಲಿ ಕೆಲವು ಮಹಿಳೆಯರು ನಿರ್ವಾಹಕರೊಂದಿಗೆ ಕಿರಿಕ್ ಮಾಡಿದ್ದಾರೆ. ಮಹಿಳಾ ಪ್ರಯಾಣಿಕರು “ಶಕ್ತಿ” ಯೋಜನೆಯಡಿಯಲ್ಲಿ ಈ ಬಸ್‌ನಲ್ಲೂ ಪ್ರಯಾಣಿಸಲು ಅವಕಾಶವಿದೆ. ಇದನ್ನೇ ನೆಪವಾಗಿಟ್ಟು ಬಸ್ ಹತ್ತಿರುವ ಕೆಲವು ಮಹಿಳೆಯರು ಗಲಾಟೆ ಮಾಡಿದ್ದು, ಅವರ ಬೆಂಬಲಕ್ಕೆ ನಿಂತ ಯುವಕರೂ ಬಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಏನಿದು ಘಟನೆ? ದಿನಾಂಕ 20/06/2023 ರಂದು ಬೆಳಿಗ್ಗೆ…
ಅಕ್ಕಿ ಜಟಾಪಟಿ; ಅಮಿತ್ ಷಾ ಅವರಿಗೆ ಸಿದ್ದರಾಮಯ್ಯ ಮನವಿ
ಬೆಂಗಳೂರು: ಅನ್ನಭಾಗ್ಯ ಅಕ್ಕಿ ವಿತರಣೆ ವಿಚಾರದಲ್ಲಿ ರಾಜ್ಯ ಸರ್ಕಾರ ಕಠಿಣ ಹಾದಿಯಲ್ಲಿ ಸಾಗುವಂತಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಕಾಂಗ್ರೆಸ್ ಆರೋಪಿಸುತ್ತಿದ್ದಾರೆ, ಪ್ರತಿಪಕ್ಷ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕಿಳಿದಿದೆ. ಈ ನಡುವೆ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಬೇಡಿಕೆ ಬಗ್ಗೆ ಗಮನಸೆಳೆದಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಸಂದರ್ಭದಲ್ಲಿ ಎಫ್.ಸಿ.ಐ ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ ವಿಚಾರವನ್ನು ಗಮನಕ್ಕೆ ತರಲಾಗಿದೆ ಎಂದಿದ್ದಾರೆ. ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ತಿಳಿಸಿದ್ದೇನೆ. ಅವರು ಸಂಬಂಧಪಟ್ಟ ಮಂತ್ರಿಗಳಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ನಿನ್ನೆ ಕೇಂದ್ರ ಗೃಹ…