ಬೆಂಗಳೂರು: ಮಂಗಳೂರು ಸಹಿತ ಕರಾವಳಿಯಲ್ಲಿ ಕೋಮುಧ್ವೇಷಕ್ಕೆ ಬಲಿಯಾದವರ ಕುಟುಂಬದವರಿಗೆ ರಾಜ್ಯ ಸರ್ಕಾರ ಪರಿಹಾರ ಘೋಷಿಸಿದೆ. ನಾಲ್ವರು ಮೃತರ ಕುಟುಂಬದವರಿಗೆ ತಲಾ 25 ಲಕ್ಷ ರೂ. ಪರಿಹಾರವನ್ನು ರಾಜ್ಯ ಸರ್ಕಾರ ಶುಕ್ರವಾರ ಘೋಷಣೆ ಮಾಡಿದೆ. ಮಸೂದ್, ಫಾಜಿಲ್, ಜಲೀಲ್ ಹಾಗೂ ದೀಪಕ್ ರಾವ್ ಕುಟುಂಬಕ್ಕೆ ಪರಿಹಾರ ಪ್ರಕಟಿಸಿದ್ದು ಈ ಸಂಬಂಧ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
Month: June 2023
‘MAAMANNAN’; ಸಿನಿ ಲೋಕದಲ್ಲಿ ತಾಲೀಮು
‘ಫೇಸ್‌ಬುಕ್’ ಬುಡಕ್ಕೆ ಬೆಂಕಿ ಇಟ್ಟ ಕನ್ನಡಿಗ; ದೈತ್ಯನನ್ನು ಬ್ಯಾನ್ ಮಾಡಲು ಸಾಧ್ಯವೇ?
ಬೆಂಗಳೂರು: ಜಗ್ಗತ್ತಿನ ದೈತ್ಯ ಸೋಷಿಯಲ್ ಮೀಡಿಯಾ ‘ಫೇಸ್ ಬುಕ್’ ಇದೀಗ ಸಂಕಷ್ಟದ ಸುಳಿಯಲ್ಲಿದೆ. ಅಸಹಾಯಕ ಕುಟುಂಬಕ್ಕೆ ನೆರವಾಗುವ ಸಂಬಂಧ ಕನ್ನಡಿಗ ಚಾಣಾಕ್ಯ ವಕೀಲ ಪಿಪಿ ಹೆಗ್ಡೆ ಅವರು ಫೇಸ್ ಬುಕ್ ವಿರುದ್ಧ ಸಾರಿರುವ ಸಮರ ಇದೀಗ ಇಡೀ ಜಗತ್ತಿನಲ್ಲೇ ಭಾರೀ ಚರ್ಚೆಗೆ ಕಾರಣವಾಗಿದೆ. ನಕಲಿ ಖಾತೆ ಅವಾಂತರ ಕುರಿತ ಪ್ರಕರಣವೊಂದರಲ್ಲಿ ಕರ್ನಾಟಕ ಹೈಕೋರ್ಟ್ ‘ಫೇಸ್‌ಬುಕ್’ ಸಂಸ್ಥೆಯನ್ನು ತರಾಟೆಗೆ ತೆಗೆದುಕೊಂಡಿದ್ದು ಭಾರತದಲ್ಲಿ ಬ್ಯಾನ್ ಮಾಡುವ ಬಗ್ಗೆ ಎಚ್ಚರಿಕೆ ನೀಡಿದೆ. ನಿಷೇಧ ಸಾಧ್ಯವೇ..? ಪ್ರಕರಣಗಳಲ್ಲಿ ಬ್ಯಾನ್ ಬಗ್ಗೆ ಚರ್ಚೆಗಳು ಬರುವುದು ಸಹಜ. ಆದರೆ ನಕಲಿ ಖಾತೆ ಅಥವಾ ಮಾನಹಾನಿ ಪೋಸ್ಟ್’ಗಳ ವಿಚಾರದಲ್ಲಿ ಸೋಷಿಯಲ್ ಮೀಡಿಯಾ ಕಂಪನಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ಇದೆಯೇ ಎಂಬ ಜಿಜ್ಞಾಸೆ ಕಾಡುದೆ. ಈ ಕುರಿತಂತೆ ಸಾಮಾಜಿಕ ವಲಯದಲ್ಲಿ ಭಾರೀ ಚರ್ಚೆಗಳೂ ಸಾಗಿವೆ. ಯಾವುದೇ ಪ್ರಕರಣಗಳಿರಲಿ ನೇರವಾಗಿ ಭಾಗಿಯಾದರೇ ಮಾತ್ರಕ್ಕೆ ಆರೋಪಿ ಎಂದು ಪರಿಗಣಿಸಬೇಕೆಂದಿಲ್ಲ.…
ದ್ವೇಷ ರಾಜಕಾರಣ ವಿರುದ್ದ ಜೂ.20 ರಂದು ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು: “ಕರ್ನಾಟಕ ರಾಜ್ಯದ ಪ್ರತಿಷ್ಠಿತ ಯೋಜನೆ ಅನ್ನಭಾಗ್ಯ ಜಾರಿಗೆ ಅಗತ್ಯ ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ಹಾಗೂ ಭಾರತೀಯ ಆಹಾರ ಪ್ರಾಧಿಕಾರ ಅವಕಾಶ ನಿರಾಕರಿಸಿರುವುದು ಬಿಜೆಪಿಯ ದ್ವೇಷ ರಾಜಕಾರಣ ಹಾಗೂ ಬಡವರ ವಿರೋಧಿ ನೀತಿಗೆ ಸಾಕ್ಷಿ. ಇದರ ವಿರುದ್ಧ ಕರ್ನಾಟಕ ಕಾಂಗ್ರೆಸ್ ಇದೇ 20 ರಂದು ಮಂಗಳವಾರ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮಾಡಿ ಜನರಲ್ಲಿ ಅರಿವು ಮೂಡಿಸಲಿದೆ” ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಸರ್ಕಾರವು ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ. ಅಕ್ಕಿ ನೀಡಲು ಬದ್ಧವಾಗಿದೆ’ ಎಂದು ಸ್ಪಷ್ಟಪಡಿಸಿದರು. “ಕಾಂಗ್ರೆಸ್ ಐದು ಗ್ಯಾರಂಟಿ ಘೋಷಿಸಿತ್ತು. ಇದರ ಜಾರಿ ಬಗ್ಗೆ ವಿರೋಧ ಪಕ್ಷದ ಸ್ನೇಹಿತರು ಅನೇಕ ಟೀಕೆ ಮಾಡುತ್ತಾ ಬಂದಿದ್ದಾರೆ. ಸರ್ಕಾರ ಬಂದ ಮೊದಲ ದಿನವೇ ಮೊದಲ ಆದೇಶ ಹೊರಡಿಸಿ ನಮ್ಮ…
ಆಡಳಿತಕ್ಕೆ ಮೇಜರ್ ಸರ್ಜರಿ; 10 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ಆಡಳಿತ ವರ್ಗಕ್ಕೆ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ ಮತ್ತೆ 10 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ದಕ್ಷಿಣಕನ್ನಡ, ಮೈಸೂರು, ಚಿಕ್ಕಬಳ್ಳಾಪುರ, ತುಮಕೂರು, ಬಾಗಲಕೋಟೆ ಸಹಿತ ವಿವಿಧ ಜಿಲ್ಲೆಗಳ ಜಿಲ್ಲಾ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಐಎಎಸ್ ಅಧಿಕಾರಿಗಳ ವರ್ಗಾವಣೆ ಪಟ್ಟಿ ಇಲ್ಲಿದೆ. ಪಲ್ಲವಿ ಆಕುರಾತಿ-ಹೆಚ್ಚುವರಿ ಯೋಜನಾ ನಿರ್ದೇಶಕಿ, ಸಕಾಲ ಮಿಷನ್ ಡಾ. ವೆಂಕಟೇಶ್ ಎಂ.ವಿ.- ಆಯುಕ್ತ, ಪಶುಸಂಗೋಪನಾ ಇಲಾಖೆ ರವೀಂದ್ರ ಪಿ.ಎನ್.- ಡಿಸಿ ಚಿಕ್ಕಬಳ್ಳಾಪುರ ಶ್ರೀನಿವಾಸ್ ಕೆ.-ಡಿಸಿ ತುಮಕೂರು ಜಾನಕಿ ಕೆ.ಎಂ.-ಡಿಸಿ ಬಾಗಲಕೋಟೆ ಮುಲ್ಲೈ ಮುಹಿಲನ್ – ಡಿಸಿ ದಕ್ಷಿಣ ಕನ್ನಡ ಯೋಗೇಶ್ ಎ.ಎಂ.- ಆಯುಕ್ತ, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಡಾ. ಕುಮಾರ, ಡಿಸಿ ಮಂಡ್ಯ ಪ್ರಭು ಜಿ.-ಆಯುಕ್ತ, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ನವೀನ್ ಕುಮಾರ್ ರಾಜು, ಇಡಿ ವಸತಿ ಶಿಕ್ಷಣ ಸೊಸೈಟಿ
ಮತ್ತೆ ಪಂಚಮಸಾಲಿ ಮೀಸಲಾತಿ ಫೈಟ್.. ಸಿದ್ದು ಸರ್ಕಾರಕ್ಕೆ ಸವಾಲಾಗ್ತಾರ ‘ಜಗದ್ಗುರು’!
ಬೆಂಗಳೂರು: ಲಿಂಗಾಯತ ಪಂಚಮಸಾಲಿ ಮಲೆಗೌಡ ದೀಕ್ಷಾ ಲಿಂಗಾಯತ ಗೌಡ ಹಾಗೂ ಲಿಂಗಾಯತ ಎಲ್ಲಾ ಉಪಸಮಾಜಗಳಿಗೆ ಮೀಸಲಾತಿ ನ್ಯಾಯಕ್ಕಾಗಿ ಮಾತುಕತೆ ಮಾಡುವಂತೆ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಕಾನೂನು ತಜ್ಞರ ಸಮಾಲೋಚನೆ ಸಭೆ ನಡೆಸಿದ ಶ್ರೀಗಳು ಸಮಾಜಕ್ಕೆ ಮೀಸಲಾತಿ ಸಿಗಬೇಕಾಗಿರುವ ವಿಚಾರಗಳ ಬಗ್ಗೆ ಚಿಂತನ-ಮಂಥನ ನಡೆಸಿದರು. ಈ ಸಭೆಯಲ್ಲಿ ನಡೆದ ಚರ್ಚೆ ಹಾಗೂ ತೀರ್ಮಾನ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟ ಒಂದು ಹಂತಕ್ಕೆ ತಲುಪಿದೆ. ಮುಂದಿನ ಹೋರಾಟ ಸಂಬಂಧ ಲೀಗಲ್ ಸೆಲ್ ಹಾಗೂ ಕಾನೂನು ತಜ್ಞರ ಜೊತೆಗೆ ಸಭೆ ನಡೆಸಿದ್ದೇವೆ ಎಂದರು. ಪಂಚಮಸಾಲಿ ಮೀಸಲಾತಿ ವಿಚಾರ ಹೈಕೋರ್ಟ್‌ನಲ್ಲಿ ಹಾಗೂ ಸುಪ್ರೀಂಕೋರ್ಟ್‌ನಲ್ಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಮಾಜಿಕ ನ್ಯಾಯದ ಪರ ಇದ್ದವರು. ಹಾಗಾಗಿ ನಮ್ಮ ಸಮುದಾಯದ ಬೇಡಿಕೆ…
ಎಕ್ಸ್,ಪ್ರೆಸ್ ವೇ ಟೋಲ್ ದರ ಹೆಚ್ಚಳ; ಹೆದ್ದಾರಿಯಲ್ಲಿ ಹಗಲು ದರೋಡೆ ಎಂದು ಆಕ್ರೋಶ
ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯ ಟೋಲ್ ದರವನ್ನು ಯಾರಿಗೂ ಗೊತ್ತಿಲ್ಲದಂತೆ ಶೇ.22ರಷ್ಟು ಏರಿಸಿರುವುದು ಅನ್ಯಾಯದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರ, ಟೋಲ್ ದರ ಏರಿಕೆ ಖಂಡನೀಯ. ಕೇಂದ್ರದ ಬಿಜೆಪಿ ಮತ್ತು ರಾಜ್ಯದ ಕಾಂಗ್ರೆಸ್ ಸರ್ಕಾರಗಳೆರಡೂ ಸೇರಿ ಜನರ ಮೇಲೆ ಮತ್ತಷ್ಟು ಭಾರ ಹೊರೆಸಿವೆ ಎಂದು ಆರೋಪಿಸಿದ್ದಾರೆ ಹಾಗೂ *ಹೆದ್ದಾರಿಯಲ್ಲಿ ಹಗಲು ದರೋಡೆ* ಎಂದು ಹ್ಯಾಷ್ ಟ್ಯಾಗ್ ಮಾಡಿದ್ದಾರೆ. ಏಕಾಏಕಿ ಈ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ 30ರಿಂದ 200 ರೂ.ವರೆಗೆ ಟೋಲ್ ದರ ಹೆಚ್ಚಳ ಮಾಡಿರುವುದು ಸರಿಯಲ್ಲ, ಸಮರ್ಥನಿಯವೂ ಅಲ್ಲ. ಇಷ್ಟು ದೊಡ್ಡ ಪ್ರಮಾಣದಲ್ಲಿ ಟೋಲ್ ದರ ಹೆಚ್ಚಿಸಿರುವುದು ಹೆದ್ದಾರಿಯಲ್ಲಿ ಹಗಲು ದರೋಡೆಯಷ್ಟೇ ಎಂದು ವಾಗ್ದಾಳಿ ನಡೆಸಿದ್ದಾರೆ. ಎಕ್ಸ್ ಪ್ರೆಸ್ ಹೆದ್ದಾರಿಗೆ ಭೂಮಿ ಕೊಟ್ಟಿದ್ದು ಕರ್ನಾಟಕ ಸರ್ಕಾರ.…
ಮಣಿಪುರ ಹಿಂಸಾಚರ; ಸಂಘರ್ಷದಲ್ಲಿ 9 ಮಂದಿ ಸಾವು
ಗುವಾಹಟಿ; ಇಂಫಾಲ ಸಮೀಪದ ಆಗಿಜಂಗ್ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆಸಿದೆ. ಪೊಲೀಸರ ನಿಯಂತ್ರಣ ಮೀರಿ ಈ ಸಂಘರ್ಷ ನಡೆದಿದ್ದು ಗಿಂಡಿನ ದಾಳಿ ಭಾರೀ ಸಾವು ನೋವಿಗೆ ಕಾರಣವಾಗಿದೆ. ಬಂಡೂಕೋರರ ಗುಂಪು ದಾಳಿ ನಡೆಸಿದ ವೇಳೆ ಈ ಹಿಂಸಾಚಾರ ಭುಗಿಲೆದ್ದಿದೆ ಎನ್ಬಲಾಗಿದೆ. ಸುದೀರ್ಘ ಕಾರ್ಯಾಚರಣೆ ನಂತರ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತೆಗೆದುಕೊಂಡಿದ್ದಾರೆ. ಈ ನಡುವೆ, ಮಣಿಪುರದ ಸಚಿವೆ ನಿವಾಸಕ್ಕೆ ದುಷ್ಕರ್ಮಿಗಳ ಗುಂಪು ಬೆಂಕಿ ಹಚ್ಚಿದ ಘಟನೆಯೂ ನಡದಿದೆ.. ಇಂಫಾಲ್ ಪಶ್ಚಿಮ ಜಿಲ್ಲೆಯ ಲಂಫೇಲ್ ಪ್ರದೇಶದಲ್ಲಿರುವ ಕೈಗಾರಿಕಾ ಸಚಿವ ನೆಮ್ಚಾ ಕಿಪ್ಗೆನ್ ಅವರ ಬಂಗಲೆ ಮೇಲೆ ಈ ದಾಳಿ ನಡೆದಿದೆ. ಈ ಕಟ್ಟಡದಲ್ಲಿ ಯಾರು ಇಲ್ಲದೇ ಇರುವುದರಿಂದ ಭಾರೀ ಅನಾಹುತ ತಪ್ಪಿದೆ. ಮೈಟಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಘರ್ಷಣೆ ಸಂದರ್ಭದಲ್ಲಿ ಸರ್ಕಾರದ ವಿರುದ್ದದ ಆಕ್ರೋಶವನ್ನು ಕಿಡಿಗೇಡುಗಳು ಈ ರೀತಿ ವ್ಯಕ್ತಪಡಿಸಿದ್ದಾರೆ.
ಲೋಕಸಭಾ ಸಮರಕ್ಕೆ ಬಿಜೆಪಿ ರಣವ್ಯೂಹ; ದೇಶಾದ್ಯಂತ 10 ಲಕ್ಷ ಬೂತ್‌ಗಳ ಕಾರ್ಯಕರ್ತರೊಂದಿಗೆ ಪ್ರಧಾನಿ ಮಾತು
ದೆಹಲಿ: ಲೋಕಸಭಾ ಚುನಾವಣೆಗೆ ತಯಾರಿಯಲ್ಲಿ ತೊಡಗಿರುವ ಬಿಜೆಪಿ, ತನ್ನ ಕಾರ್ಯಕರ್ತರನ್ನು ಸನ್ನದ್ದಗೊಳಿಸುತ್ತಿದೆ. ಇದಕ್ಕೆ ಪ್ರಧಾನಿ ಮೋದಿಯವರೇ ಮುನ್ನುಡಿ ಬರೆಯಲಿದ್ದಾರೆ. ನರೇಂದ್ರ ಮೋದಿ ಅವರು ಜೂನ್ 27ರಂದು ಭೋಪಾಲ್‌ಗೆ ಭೇಟಿ ನೀಡಲಿದ್ದು ಅಂದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ. ಅಂದೇ ವರ್ಚುವಲ್ ಕಾರ್ಯಕ್ರಮ ಆಯೋಜಿಸಿದ್ದು, ದೇಶಾದ್ಯಂತ 10 ಲಕ್ಷ ಬೂತ್‌ಗಳ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ಸಂಬಂಧ ತಯಾರಿ ನಡೆದಿದೆ. ಆ ಕಾರ್ಯಕ್ರಮದಲ್ಲಿ ಮಧ್ಯಪ್ರದೇಶದ ಸುಮಾರು 64,100 ಬೂತ್‌ಗಳ 38 ಲಕ್ಷ ಕಾರ್ಯಕರ್ತರು ನೇರವಾಗಿ ಭಾಗವಹಿಸುವ ಸಾಧ್ಯತೆಗಳಿವೆ.
ಸಿಇಟಿ ಫಲಿತಾಂಶ ಪ್ರಕಟ; ಈ ಬಾರಿಯೂ ಬಾಲಕಿಯರೇ ಮೇಲುಗೈ
ಬೆಂಗಳೂರು : ವೃತ್ತಿಪರ ಕೋರ್ಸ್ ಗಳಿಗಾಗಿ ನಡೆಸಲಾದ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಎಂಜಿನಿಯರಿಂಗ್ ಸೇರಿದಂತೆ ವಿವಿಧ ಕೋರ್ಸ್ ಗಳಿಗಾಗಿ ಪ್ರವೇಶ ಬಯಸಿ ಸಿಇಟಿ ಬರೆದಿರುವ ವಿದ್ಯಾರ್ಥಿಗಳ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.ಉನ್ನತ ಶಿಕ್ಷಣ ಸಚಿವ ಸುಧಾಕರ್ ಅವರು ಬುಧವಾರ ಬೆಂಗಳೂರಿನಲ್ಲಿ ಸಿಇಟಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಫಲಿತಾಂಶದಲ್ಲಿ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಫಲಿತಾಂಶವು ಕೆಇಎ ವೆಬ್ ಸೈಟ್ http://kea.kar.nic.in ನಲ್ಲಿ ಲಭ್ಯವಿದೆ. ಇಂಜಿನಿಯರಿಂಗ್ ವಿಭಾಗದಲ್ಲಿನ ರಾಂಕ್ ಹೀಗಿದೆ: ವಿಘ್ನೇಶ್ – ಪ್ರಥಮ, ಅರ್ಜುನ್ ಕೃಷ್ಣಸ್ವಾಮಿ- ದ್ವಿತೀಯ ಸಮೃದ್ಧ್ ಶೆಟ್ಟಿ – 3ನೇ ಸ್ಥಾನ, ಎಸ್. ಸುಮೇಧ್ – 4ನೇ ಸ್ಥಾನ, ಮಾಧವ ಸೂರ್ಯ – 5ನೇ ಸ್ಥಾನ
