ಬೆಂಗಳೂರು: ಕರ್ನಾಟಕವೂ ಸೇರಿದಂತೆ ಅನೇಕ ರಾಜ್ಯಗಳಲ್ಲಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ನಾಯಕರು ಅನೇಕರು ಬಿಜೆಪಿ ಜತೆ ಕೈ ಜೋಡಿಸಿರುವುದು ಎಲ್ಲರಿಗೂ ಗೊತ್ತಿರುವ ಸತ್ಯ ಅಲ್ಲವೇ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ಆಗುವ ಸಾಧ್ಯತೆ ಇದೆಯೇ? ಹಾಗೂ ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ವಿರುದ್ಧ ಸಮಾನಮನಸ್ಕ ಪಕ್ಷಗಳು ಒಂದಾದರೆ, ಆ ಒಕ್ಕೂಟದ ನೇತೃತ್ವ ವಹಿಸುವಿರಾ ಎಂದು ಕೇಳಲಾದ ಪ್ರಶ್ನೆಗೆ ಉತ್ತರಿಸಿದರು. ಬಿಜೆಪಿ ವಿರುದ್ಧ ಒಕ್ಕೂಟ ರಚನೆಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪ್ರಯತ್ನ ನಡೆಸುತ್ತಿರುವ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, ಈ ದೇಶದಲ್ಲಿ ಬಿಜೆಪಿ ಜತೆ ಸೇರಿ ರಾಜಕೀಯ ಮಾಡದೆ ಇರುವ ಯವುದರೂ ಪಕ್ಷವನ್ನು ತೋರಿಸಿ ಎಂದು ಮರು ಪ್ರಶ್ನೆ ಹಾಕಿದರು,…
Month: June 2023
ಮೈಸೂರು, ಗೌರೀಬಿದನೂರು, ಕೋಲಾರಕ್ಕೆ ಉಪನಗರ ರೈಲು ಯೋಜನೆ ವಿಸ್ತರಣೆ: ಎಂ.ಬಿ.ಪಾಟೀಲ್
ಬೆಂಗಳೂರು: ಕೇವಲ ಬೆಂಗಳೂರು ನೆರೆಹೊರೆಯ ಪ್ರದೇಶಗಳನ್ನು ಮಾತ್ರ ಗಮನದಲ್ಲಿಟ್ಟುಕೊಂಡು ರೂಪಿಸಿರುವ ಉಪನಗರ ರೈಲು ಯೋಜನೆಯನ್ನು ಸುತ್ತಲಿನ ದೂರದ ನಗರಗಳಿಗೂ ವಿಸ್ತರಿಸಬೇಕು. ಈ ನಿಟ್ಟಿನಲ್ಲಿ ಯೋಜನೆಯನ್ನು ಪರಿಷ್ಕರಿಸಿ, ಹೊಸದಾಗಿ ಪ್ರಸ್ತಾವನೆ ಸಲ್ಲಿಸಬೇಕು. ಹೀಗಾದರೆ ಮಾತ್ರ ಬೆಂಗಳೂರಿನ ಸಂಚಾರ ದಟ್ಟಣೆಯ ಸಮಸ್ಯೆಗೆ ಪರಿಹಾರ ಸಿಗುತ್ತದೆ ಎಂದು ಬೃಹತ್ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ಸೂಚಿಸಿದ್ದಾರೆ. ಮೂಲಸೌಕರ್ಯ ಇಲಾಖೆಯ ಅಧಿಕಾರಿಗಳ ಜತೆ ಖನಿಜ ಭವನದಲ್ಲಿ ನಡೆಸಿದ ಸುದೀರ್ಘ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು, ಈ ಮಹತ್ತ್ವದ ನಿರ್ದೇಶನ ನೀಡಿದ್ದಾರೆ. ಈಗ 148 ಕಿ.ಮೀ. ಉದ್ದದ ಉಪನಗರ ರೈಲು ಯೋಜನೆಯ ಮೊದಲನೇ ಹಂತದ ಕಾಮಗಾರಿ ನಡೆಯುತ್ತಿದ್ದು, ಉದ್ದೇಶಿತ ಒಟ್ಟಾರೆ ಯೋಜನೆಗೆ 15,767 ಕೋಟಿ ರೂಪಾಯಿ ವೆಚ್ಚವಾಗುತ್ತಿದೆ. ಆದರೆ ಇದರ ಸದ್ಯದ ಸ್ವರೂಪದಿಂದ ಹೆಚ್ಚಿನ ಪ್ರಯೋಜನವಿಲ್ಲ. ಇದನ್ನು ರಾಮನಗರದಿಂದ ಮೈಸೂರು, ದೊಡ್ಡಬಳ್ಳಾಪುರದಿಂದ ಗೌರಿಬಿದನೂರು-ಹಿಂದೂಪುರ, ಚಿಕ್ಕಬಳ್ಳಾಪುರದಿಂದ ಕೋಲಾರಕ್ಕೆ ವಿಸ್ತರಿಸಬೇಕು. ಈ…
ವಿರೋಧಿಗಳ ದಮನಕ್ಕೆ ಅಧಿಕಾರ ಬಳಸಿದರೆ ಬೆಲೆ ತೆರಬೇಕಾಗುತ್ತೆ; ಬೊಮ್ಮಾಯಿ
ಬೆಂಗಳೂರು:ಆರಂಭದಲ್ಲಿಯೇ ಅಧಿಕಾರದ ಮದದಿಂದ ಜನ ಕೊಟ್ಟ ಅಧಿಕಾರ ವಿರೋಧಿಗಳ ದಮನಕ್ಕಾಗಿ ಇದೆ ಎಂದು ತಾವು ಭಾವಿಸಿದ್ದರೆ ಖಂಡಿತವಾಗಿಯೂ ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಟ್ವೀಟ್ ಗೆ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಅವರು, ಕೇಂದ್ರದಲ್ಲಿ ಇಷ್ಟು ದಿನ ಅಪರಾಧಗಳನ್ನು ಮಾಡಿ ರಾಜಕೀಯ ರಕ್ಷಣೆಯನ್ನು ಯುಪಿಎ ಕಾಲದಲ್ಲಿ ಪಡೆಯುತ್ತಿದ್ದರು. ಈಗ ಕೇಂದ್ರ ಸರ್ಕಾರ ಅಪರಾಧ ಮಾಡಿದವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಂಡಿದೆ. ಇವೆಲ್ಲವೂ ಕೂಡ ನ್ಯಾಯಾಂಗದ ಪರಿಶೀಲನೆಯಲ್ಲಿ ನಡೆಯುತ್ತಿದೆ. ಇಲ್ಲಿ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ಹದಿನೈದುಬ ದಿನ ಕಳೆದಿಲ್ಲ ಬರಿ ಮಾತನಾಡಿದರೆ ಜೈಲಿಗೆ ಹಾಕುತ್ತೇವೆ ಎಂದು ಮಂತ್ರಿಗಳ ಬಾಯಲ್ಲಿ ಬರುತ್ತಿರುವುದು. ವಿರೋಧಿಗಳನ್ನು ನಿಮ್ಮ ಅಧಿಕಾರ ಬಲದಿಂದ ದಮನ ಮಾಡುವ ತಂತ್ರ 1975 ರ ಎಮರ್ಜನ್ಸಿಯನ್ನು ನೆನಪಿಸುತ್ತದೆ ಎಂದು ತಿರುಗೇಟು ನೀಡಿದ್ದಾರೆ.
ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ; ಮಾರ್ಗಸೂಚಿ ಪ್ರಕಟ
ಬೆಂಗಳೂರು: ರಾಜ್ಯ ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ ಜಾರಿ ಸಂಬಂಧ ಆದೇಶ ಹೊರಡಿಸಲಾಗಿದೆ. ಕಾಂಗ್ರೆಸ್ ಪಕ್ಷದ ಚುನಾವಣಾ ಪೂರ್ವ ಭರವಸೆಗಳಾದ ಐದು ‘ಗ್ಯಾರೆಂಟಿ’ ಪೈಕಿ ‘ಶಕ್ತಿ ಯೋಜನೆ’ ಕೂಡಾ ಒಂದು. ಈ ಗ್ಯಾರೆಂಟಿ ಅನುಷ್ಠಾನ ಸಂಬಂಧ ಸೋಮವಾರ ಮಾರ್ಗಸೂಚಿ ಪ್ರಕಟಿಸಲಾಗಿದೆ. ಸೂಚಿಸಲಾಗಿದೆ. ‘ಸ್ಮಾರ್ಟ್ ಕಾರ್ಡ್’ ಸೌಲಭ್ಯ: ಉಚಿತ ಪ್ರಯಾಣಕ್ಕೆ ಮಹಿಳೆಯರು ‘ಶಕ್ತಿ ಸ್ಮಾರ್ಟ್ ಕಾರ್ಡ್’ಗಳನ್ನು ಪಡೆಯಬೇಕಿದೆ. ಈ ಶಕ್ತಿ ಸ್ಮಾರ್ಟ್ ಕಾರ್ಡ್‌ಗಳನ್ನು ‘ಸೇವಾ ಸಿಂಧು’ ಮೂಲಕ ಅರ್ಜಿ ಹಾಕಿ ಪಡೆಯಬೇಕು. ಈ ಕಾರ್ಡ್‌ಗಳನ್ನು ಮುಂದಿನ ಮೂರು ತಿಂಗಳು ಕಾಲ ಅವಕಾಶವಿದೆ ಎಂದು ಸರ್ಕಾರ ತಿಳಿಸಿದೆ. ‘ಶಕ್ತಿ ಸ್ಮಾರ್ಟ್ ಕಾರ್ಡ್’ ಪಡೆಯುವವರೆಗೆ ಸರ್ಕಾರಗಳು ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸ ಹೊಂದಿರುವ ಗುರುತಿನ ಚೀಟಿಗಳನ್ನು ಪರಿಗಣಿಸಲಾಗುತ್ತದೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ‘ಶಕ್ತಿ’ ನಿಯಮಗಳು ಹೀಗಿವೆ: ‘ಶಕ್ತಿ ಸ್ಮಾರ್ಟ್ ಕಾರ್ಡ್’ ಇದ್ದರೂ ಈ…
ರೈಲು ದುರಂತ; ಹೆಣಗಳ ರಾಶಿ ಕಂಡು ಜನರ ಆಕ್ರಂದನ
https://twitter.com/JoeLenin8/status/1664830423170424833?t=PYmglNcj7uAeBHVVmNAfhQ&s=19
ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಸಿದ್ದ; ಈ ಜಿಲ್ಲೆಗಳಿಗೆ ಇವರೇ ಮಂತ್ರಿ ಸಾಧ್ಯತೆ..!
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಇದೀಗ ಪರಿಪೂರ್ಣ ಆಡಳಿತಕ್ಕೆ ಮುನ್ನುಡಿ ಬರೆದಿದೆ. ಖಾತೆ ಕ್ಯಾತೆಗಳನ್ನೂ ಬಗೆಹರಿಸಿ ಸಚಿವರಿಗೆ ಇಲಾಖೆಗಳ ನಿರ್ವಹಣೆಯನ್ನು ವಹಿಸಿಕೊಟ್ಟಿರುವ ಸಿಎಂ ಸಿದ್ದರಾಮಯ್ಯ ಅವರು ಇದೀಗ ಜಿಲ್ಲಾ ಉಸ್ತುವಾರಿ ಹಂಚಿಕೆ ಬಗ್ಗೆಯೂ ಗಮನಹರಿಸಿದ್ದಾರೆ. ಈಗಾಗಲೇ ಪಟ್ಟಿ ಸಿದ್ದಪಡಿಸಿರುವ ಸಿಎಂ ಅವರು, ಅಲ್ಪ ಸ್ವಲ್ಪ ಮಾರ್ಪಾಡುಗಳನ್ನು ಮಾಡಿ ಪ್ರಕಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಿಎಂ ಸಿದ್ದಪಡಿಸಿರುವ ನೂತನ ಜಿಲ್ಲಾ ಉಸ್ತುವಾರಿ ಸಚಿವರ ತಾತ್ಕಾಲಿಕ ಪಟ್ಟಿ ಹೀಗಿದೆ. ಬೆಂಗಳೂರು ನಗರ: ಕೆಜೆ ಜಾರ್ಜ್ ಬೆಂಗಳೂರು ಗ್ರಾಮಾಂತರ: ರಾಮಲಿಂಗಾ ರೆಡ್ಡಿ ಕೋಲಾರ : ಕೆ ಎಚ್ ಮುನಿಯಪ್ಪ ಚಿಕ್ಕಬಳ್ಳಾಪುರ: ಡಾ ಎಮ್ ಸಿ ಸುಧಾಕರ್ ರಾಮನಗರ: ಡಿ ಕೆ ಶಿವಕುಮಾರ್ ಮಂಡ್ಯ: ಚೆಲುವರಾಯ ಸ್ವಾಮಿ ಮೈಸೂರು: ಡಾ.ಎಚ್ ಸಿ ಮಹದೇವಪ್ಪ ಚಾಮರಾಜನಗರ: ದಿನೇಶ್ ಗುಂಡೂರಾವ್ ಕೊಡಗು: ವೆಂಕಟೇಶ್ ದಕ್ಷಿಣಕನ್ನಡ: ಕೃಷ್ಣ ಬೈರೇಗೌಡ ಉಡುಪಿ: ಡಾ ಜಿ ಪರಮೇಶ್ವರ್…
ಒಡಿಶಾ ರೈಲು ದುರಂತ; ಹೆಚ್ಚುತ್ತಲೇ ಇರುವ ಸಾವಿನ ಸಂಖ್ಯೆ.. ನಿಜವಾಗಿಯೂ ಆಗಿದ್ದೇನು ಗೊತ್ತೇ?
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏರುತ್ತಲೇ ಇದೆ. ಶುಕ್ರವಾರ ಸಂಜೆ 50 ಮಂದಿಯಷ್ಟೇ ಸಾವನ್ನಪ್ಪಿದ್ದ ಬಗ್ಗೆ ಮಾಹಿತಿ ಇತ್ತು. ಶನಿವಾರ ಬೆಳಿಗ್ಗೆ ಈ ಸಂಖ್ಯೆ 200 ದಾಟಿತ್ತು. ಶನಿವಾರ ಬೆಳಿಗ್ಗೆ 10 ಗಂಟೆಯ ಹೊತ್ತಿಗೆ ಈ ಸಂಖ್ಯೆ 280 ಕ್ರಮಿಸಿದೆ. ಈ ನಡುವೆ 900ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆ ಪಾಲಾಗಿದ್ದು ಹಲವರ ಸ್ಥಿತಿ ಚಿಂತಾಜನಕವಾಗಿದೆ. ಹಲವರು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಆಗಿದ್ದಾದರೂ ಏನು? ಒಡಿಶಾದ ಬಾಲಸೋರ್ನ ಬಹನಾಗಾ ರೈಲು ನಿಲ್ದಾಣ ಬಳಿ ಮೂರು ಪ್ರತ್ಯೇಕ ರೈಲು ಮಾರ್ಗಗಳಿವೆ, ಶುಕ್ರವಾರ ಸಂಜೆ ಕೋಲ್ಕತಾದ ಶಾಲಿಮಾರ್ ನಿಲ್ದಾಣದಿಂದ ಚೆನ್ನೈಗೆ ಹೋಗುತ್ತಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ ಹಳಿ ತಪ್ಪಿ ಪಕ್ಕದ ಹಳಿಯಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದೆ. ಕೋರಮಂಡಲ್ ಎಕ್ಸ್‌ಪ್ರೆಸ್‌ನ 12 ಬೋಗಿಗಳು ಹಳಿ ತಪ್ಪಿ…
ಡಿ-ಕ್ರಾಸ್ ಬಳಿ ಟ್ರಕ್ ಹಾಗೂ ಲಾರಿ ನಡುವೆ ಅಪಘಾತ
ಬೆಂಗಳೂರು: ದೊಡ್ಡಬಳ್ಳಾಪುರ ನಗರದ ಡಿಕ್ರಾಸ್ ಬಳಿ ಟ್ರಕ್ ಹಾಗೂ ಲಾರಿ ನಡುವೆ ಅಪಘಾತ ನಡೆದಿದೆ. ಟ್ರಕ್‌ಗೆ ಗೂಡ್ಸ್ ಲಾರಿಯೊಂದು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಲಾರಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಶನಿವಾರ ಬೆಳಗ್ಗೆ 3 ಗಂಟೆ ಸುಮಾರಿಗೆ ಈ ಅಪಘಾತ ನಡೆದಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ. ಹಂಪ್ ಬಳಿ ಟ್ರಕ್ ನಿಧಾನವಾಗಿ ಚಾಲನೆ ಮಾಡುವ ವೇಳೆ ಹಿಂಬದಿಯಿಂದ ಜೋರಾಗಿ ಬಂದ ಲಾರಿ ಡಿಕ್ಕಿ ಹೊಡದಿದೆ ಎನ್ನಲಾಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಯ ಸಂಭವಿಸಿಲ್ಲ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಘಟನೆ ಸಂಭವಿಸಿ ಹಲವು ಗಂಟೆಗಳಾದರೂ ಅಪಘಾತಕ್ಕೀಡಾದ ಲಾರಿಯನ್ನ ತೆರವುಗೊಳಿಸದ ಪರಿಣಾನ ಆ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ
ಸೋಮೇಶ್ವರ ಬೀಚ್ ಹಲ್ಲೆ ಪ್ರಕರಣ; ಐವರ ಸೆರೆ, ನೈತಿಕ ಪೊಲೀಸ್‌ಗಿರಿ ಆರೋಪದ ಬಗ್ಗೆ ತನಿಖೆ
ಮಂಗಳೂರು; ಮಂಗಳೂರಿನ ಸೋಮೇಶ್ವರ ಬೀಚ್ ಬಳಿ ನಡೆದ ಹಲ್ಲೆ ಪ್ರಕರಣ ಕುರಿತಂತೆ ಪೊಲೀಸರು ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿದ್ಯಾರ್ಥಿನಿಯರ ಜೊತೆ ಅನುಮಾನಾಸ್ಪದ ರೀತಿ ಓಡಾಡುತ್ತಿದ್ದರೆಂಬ ಕಾರಣಕ್ಜಾಗಿ ಸ್ಥಳೀಯರು ಕೇರಳ ಮೂಲದ ಮೂವರು ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆನ್ನಲಾಗಿದೆ. ಈ ನಟನೆಯನ್ನು ನೈತಿಕ ಪೊಲೀಸ್‌ಗಿರಿ ಎಂಬ ಕೆಲವರು ಆರೋಪಿಸಿದ್ದಾರೆ. ಈ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಪೊಲೀಸರು, ಉಳ್ಳಾಲ ಸುತ್ತಮುತ್ತಲ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಗ್ಯಾರೆಂಟಿ’ ಜಾರಿ ಬಗ್ಗೆ ತಾಯಿ ಚಾಮುಂಡೇಶ್ವರಿ ಮುಂದೆ ಪ್ರಮಾಣ ಮಾಡಿದ್ದ ಡಿಕೆಶಿ
ಗ್ಯಾರಂಟಿ ಕಾರ್ಡ್‌ಗಳನ್ನು ತಾಯಿ ಚಾಮುಂಡೇಶ್ವರಿಯ ಮುಂದೆ ಇಟ್ಟು ಪ್ರಮಾಣ ಮಾಡಿದ್ದೆವು ಅದರಂತೆ ನಡೆದುಕೊಂಡಿದ್ದೇವೆ! 5 ಗ್ಯಾರಂಟಿಗಳಾದ ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನ ಭಾಗ್ಯ, ಶಕ್ತಿ, ಯುವನಿಧಿಗಳನ್ನು ಜಾರಿ ಮಾಡಿ ಅವುಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ಸಿದ್ದತೆ ಮಾಡಿಕೊಳ್ಳುತ್ತಿದೆ. ಬೆಲೆ ಏರಿಕೆ… pic.twitter.com/xa48No4jE8 — Karnataka Congress (@INCKarnataka) June 2, 2023
