ರಾಗಿ ಮಣ್ಣಿ, ರಾಗಿಯಿಂದ ತಯಾರಿಸಿದ ಜನಪ್ರಿಯ ಭಕ್ಷ್ಯವಾಗಿದೆ, ಇದನ್ನು ಫಿಂಗರ್ ಮಿಲ್ಲೆಟ್ ಎಂದೂ ಕರೆಯುತ್ತಾರೆ. ಇದು ದಕ್ಷಿಣ ಭಾರತದಲ್ಲಿ ಸಾಮಾನ್ಯವಾಗಿ ಸೇವಿಸುವ ಪೌಷ್ಟಿಕ ಮತ್ತು ಆರೋಗ್ಯಕರ ಆಹಾರವಾಗಿದೆ. ನನ್ನ ಪ್ರೀತಿಯ ಅಮ್ಮಂದಿರೇ, ಇದು ನಿಮಗಾಗಿ ನಾನು ನನ್ನ ಅಂಬೆಗಾಲಿಡುವ ಮಗುವಿಗೆ ನೀಡಿದ ಆರೋಗ್ಯಕರ ಗಂಜಿ ಪುಡಿ ಮತ್ತು ಪಾಕವಿಧಾನವಾಗಿದೆ. ರಾಗಿ ಮಣ್ಣಿ ಪುಡಿ ಮಾಡಲು ಯಾವ ಪದಾರ್ಥಗಳನ್ನು ಸೇರಿಸಲಾಗುತ್ತದೆ ಮತ್ತು ನಾನು ಗಂಜಿ ಹೇಗೆ ಮಾಡಿದ್ದೇನೆ ಎಂದು ನೋಡೋಣ. Detailed Recipe in TrendyAngel Kitchen Website: https://trendyangel.in/recipes/raagi-porriadge/ Other porridge recipe: Oats Almond Powder & Porridge | Best Meal Option for Toddlers : https://youtu.be/8qmkztFBvjw TrendyAngel Kitchen | Vegetarian Food | Healthy, Traditional, Modern, Regional & More. Like TrendyAngel Kitchen on Facebook: https://www.facebook.com/trendyangelkitchen Follow…
Month: July 2023
ವರ್ಗಾವಣೆ ದಂಧೆಯಲ್ಲಿ ಸರಕಾರ ಮುಳುಗೇಳುತ್ತಿದೆ; ಕುಮಾರಸ್ವಾಮಿ ಆರೋಪ
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಹೊಸದಾಗಿ ವೈಎಸ್ ಟಿ (YST) ತೆರಿಗೆ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ವೈಎಸ್ ಟಿ ಎಂದರೆ ಏನು? ಸ್ವಲ್ಪ ಬಿಡಿಸಿ ಹೇಳಿ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮಧ್ಯರಾತ್ರಿವರೆಗೂ ತಮ್ಮ ಮನೆಗಳಲ್ಲಿ ಅಧಿಕಾರಿಗಳ ಸಭೆ ಮಾಡುವ ಘನಂದಾರಿ ವ್ಯಕ್ತಿಗಳನ್ನು ಕೇಳಿ? ಈಗಾಗಲೇ ವರ್ಗಾವಣೆ ದಂಧೆಗಾಗಿ ಯಾರನ್ನೆಲ್ಲ ಫೀಲ್ಡಿಗೆ ಇಳಿಸಿ ಗುಪ್ತ ಸಭೆಗಳನ್ನು ಮಾಡುತ್ತಿದ್ದಾರೋ ಅವರನ್ನೇ ಕೇಳಿ? ನೀವೂ ಪತ್ತೆ ಹಚ್ಚಿ ಎಂದರು. ವರ್ಗಾವಣೆ ದಂಧೆ ಬಗ್ಗೆ ತಮ್ಮ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟಿರುವ ಹೇಳಿಕೆ ಬಗ್ಗೆ ಕಿಡಿಕಿಡಿಯಾದ ಮಾಜಿ ಮುಖ್ಯಮಂತ್ರಿಗಳು, ನಾನು ಸಿದ್ದರಾಮಯ್ಯ ಅವರನ್ನು ಕೇಳಲು ಬಯಸುತ್ತೇನೆ. ನಾನು ನಿಮ್ಮ ಪಕ್ಷದ ಜತೆ…
ನಿವೃತ್ತಿ ಆಗುತ್ತೇನೆ ಎಂದವರು ಮುಖ್ಯಮಂತ್ರಿ ಆಗಿದ್ದಾರೆ; ಸಿದ್ದರಾಮಯ್ಯ ಬಗ್ಗೆ ಅಶ್ವತ್ಥನಾರಾಯಣ ವ್ಯಂಗ್ಯ
ಬೆಂಗಳೂರು: ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ತಮ್ಮ ಆಶ್ವಾಸನೆ ಈಡೇರಿಸದೆ ಮಾತಿಗೆ ತಪ್ಪಿದೆ. ಇದರ ವಿರುದ್ಧ ‘ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ’ ಹೋರಾಟಕ್ಕೆ ಬಿಜೆಪಿ ಮುಂದಾಗಿದೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಅನುಷ್ಠಾನದ ವಿಚಾರದಲ್ಲಿ ಭಂಡತನ ತೋರುತ್ತಿದೆ. ಕಂಡಿಷನ್ ಇಲ್ಲದೆ ಗ್ಯಾರಂಟಿಗಳನ್ನು ಜಾರಿ ಮಾಡಲು ಆಗ್ರಹಿಸಿ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸಲಿದ್ದೇವೆ ಎಂದು ಹೇಳಿದರು. ಶೇ 50ಕ್ಕಿಂತ ಹೆಚ್ಚು ವಿದ್ಯುತ್ ದರ ಏರಿಸಿದ್ದಾರೆ. ಇದರಿಂದ ಬೆಲೆ ಏರಿಕೆ ಆಗುತ್ತಿದೆ ಎಂದರಲ್ಲದೆ, ಬೆಲೆ ಏರಿಕೆಯನ್ನು ಇಳಿಸಲು ಆಗ್ರಹಿಸಿದರು. ಈ ಸರಕಾರ ಬೆಲೆ ಏರಿಕೆ, ಭ್ರಷ್ಟಾಚಾರಕ್ಕೆ ಸಾಕ್ಷಿಯಾಗುತ್ತಿದೆ ಎಂದು ಆರೋಪಿಸಿದರು. ಕೈಗಾರಿಕೆಗಳು, ಜನಸಾಮಾನ್ಯರು ವಿದ್ಯುತ್ ದರ ಏರಿಕೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು…
‘ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ’: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ
ಬೆಂಗಳೂರು: ಗ್ಯಾರಂಟಿಗಳನ್ನು ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ತಮ್ಮ ಆಶ್ವಾಸನೆ ಈಡೇರಿಸದೆ ಮಾತಿಗೆ ತಪ್ಪಿದೆ. ಇದರ ವಿರುದ್ಧ ‘ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ’ ಹೋರಾಟಕ್ಕೆ ಬಿಜೆಪಿ ಮುಂದಾಗಿದೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಅನುಷ್ಠಾನದ ವಿಚಾರದಲ್ಲಿ ಭಂಡತನ ತೋರುತ್ತಿದೆ. ಕಂಡಿಷನ್ ಇಲ್ಲದೆ ಗ್ಯಾರಂಟಿಗಳನ್ನು ಜಾರಿ ಮಾಡಲು ಆಗ್ರಹಿಸಿ ಸದನದ ಒಳಗೆ ಮತ್ತು ಹೊರಗೆ ಹೋರಾಟ ನಡೆಸಲಿದ್ದೇವೆ ಎಂದು ಹೇಳಿದರು. ಶೇ 50ಕ್ಕಿಂತ ಹೆಚ್ಚು ವಿದ್ಯುತ್ ದರ ಏರಿಸಿದ್ದಾರೆ. ಇದರಿಂದ ಬೆಲೆ ಏರಿಕೆ ಆಗುತ್ತಿದೆ ಎಂದರಲ್ಲದೆ, ಬೆಲೆ ಏರಿಕೆಯನ್ನು ಇಳಿಸಲು ಆಗ್ರಹಿಸಿದರು. ಈ ಸರಕಾರ ಬೆಲೆ ಏರಿಕೆ, ಭ್ರಷ್ಟಾಚಾರಕ್ಕೆ ಸಾಕ್ಷಿಯಾಗುತ್ತಿದೆ ಎಂದು ಆರೋಪಿಸಿದರು. ಕೈಗಾರಿಕೆಗಳು, ಜನಸಾಮಾನ್ಯರು ವಿದ್ಯುತ್ ದರ ಏರಿಕೆಯಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು…
ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಖಾಲಿ ಹುದ್ದೆ; ಮೊದಲನೇ ಹಂತದಲ್ಲಿ 3-4 ಸಾವಿರ ಪೇದೆಗಳ ನೇಮಕ
ಮೈಸೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.5 ಲಕ್ಷ ಹುದ್ದೆಗಳ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿರುವಂತೆ ಖಾಲಿಯಿರುವ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದರು. ಪೊಲೀಸ್ ಇಲಾಖೆಯಲ್ಲಿ 15 ಸಾವಿರ ಹುದ್ದೆಗಳು ಖಾಲಿ ಇದ್ದು, ಮೊದಲನೇ ಹಂತದಲ್ಲಿ 3-4 ಸಾವಿರ ಪೇದೆಗಳ ನೇಮಕ ಮಾಡಲಾಗುವುದು. 400 ಸಬ್ ಇನ್ಸ್ಪೆಕ್ಟರ್ ಹುದ್ದೆಗನ್ನು ಭರ್ತಿ ಮಾಡಲಾಗುವುದೆಂದು ತಿಳಿಸಿದರು.
ರಾಜ್ಯದಲ್ಲಿ ಮುಂಗಾರು ಚುರುಕು; ಕರಾವಳಿ ಮಲೆನಾಡಿನಲ್ಲಿ ಅಲರ್ಟ್
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗುತ್ತಿದ್ದು ಮುಂದಿನ ನಾಲ್ಕೈದು ದಿನ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಕರ್ನಾಟಕದ 4 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 6 ರಂದು ಕರಾವಳಿ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೊಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ಧಾರವಾಡ, ಹಾವೇರಿ, ಬಳ್ಳಾರಿ, ಬೆಳಗಾವಿ ಜಿಲ್ಲೆಗಳಲ್ಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ HSRP ಅಕ್ರಮಕ್ಕೆ ಅವಕಾಶ ಇಲ್ಲ; ಕೇಂದ್ರ ಮಾರ್ಗಸೂಚಿ ಮೀರಲ್ಲ; ರಾಮಲಿಂಗ ರೆಡ್ಡಿ ನಿರ್ಧಾರಕ್ಕೆ ಸ್ವಾಗತ
ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಅತೀ ಸುರಕ್ಷಾ ನೋಂದಣಿ ಫಲಕ (HSRP) ಅಳವಡಿಸುವ ಯೋಜನೆ ಜಾರಿಗೆ ವಿಚಾರದಲ್ಲಿ ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಆರಂಭಿಸಿರುವ ಹೋರಾಟಕ್ಕಷ್ಟೇ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿವೆ. ಇದೇ ವೇಳೆ, ಹಿಂದಿನ ಸರ್ಕಾರದ ಅವಧಿಯಲ್ಲಿ ತಪ್ಪುಗಳು ಆಗಿದ್ದರೆ ಸರಿಪಡಿಸುವುದಾಗಿ ಭರವಸೆ ನೀಡಿರುವ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರನ್ನು ರಾಜ್ಯದ ಭ್ರಷ್ಟಾಚಾರ ವಿರೋಧಿ ಹೋರಾಟ ಸಮಿತಿ ಹಾಗೂ ಸಮತಾ ಸೈನಿಕ ದಳ ವಿದ್ಯಾರ್ಥಿ ಒಕ್ಕೂಟ ಅಭಿನಂಧಿಸಿದೆ. ಅಪರಾಧ ಕೃತ್ಯಗಳನ್ನು ತಡೆಯಲು ಹಾಗೂ, ಕಾನೂನು ಉಲ್ಲಂಘನೆಯಂತಹಾ ಪ್ರಕರಣಗಳನ್ನು ಬೇಧಿಸಲು ಅನುಕೂಲವಾಗುವಂತೆ HSRP ಅಳವಡಿಕೆ ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, ಇದಕ್ಕಾಗಿ ವಿಶಿಷ್ಟ ನಂಬರ್ ಪ್ಲೇಟ್’ಗಳನ್ನು ತಯಾರಿಸುವ ಸುಮಾರು 20 ಕಂಪನಿಗಳಿಗೆ ಕೇಂದ್ರ ಹೆದ್ದಾರಿ ಸಚಿವಾಲಯ ಅನುಮೋದನೆ ನೀಡಿದೆ. ಆದರೆ ಕರ್ನಾಟಕದಲ್ಲಿ ಕೆಲವು ಮಾಫಿಯಾಗಳ ಒತ್ತಡಕ್ಕೊಳಗಾಗಿ ಕೇವಲ 4-5 ಕಂಪನಿಗಳ ಉತ್ಪನ್ನಗಳಿಗಷ್ಟೇ ಅನುಮತಿ ನೀಡಲು…
ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ
ಬೆಂಗಳೂರು: ಪ್ರತಿಷ್ಠಿತ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಶನಿವಾರ ದಾವಣಗೆರೆ ರೈಲು ನಿಲ್ದಾಣದ ಬಳಿ ಕೆಲವು ಕಿಡಿಗೇಡಿಗಳು ಚಲಿಸುತ್ತಿದ್ದ ರೈಲಿಗೆ ಕಲ್ಲು ತೂರಾಟ ನಡೆಸಿದ್ದಾರೆ. ರೈಲು ಧಾರವಾಡದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಪರಿಣಾಮವಾಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಕಿಟಕಿ ಗಾಜು ಜಖಂಗೊಂಡಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸಿ4 ಕೋಚ್‌ನ ಕಿಟಕಿಯ ಹಲಗೆಗೆ ಹಾನಿಯಾಗಿದೆ. ಯಾವುದೇ ಪ್ರಯಾಣಿಕರು ಗಾಯಗೊಂಡಿಲ್ಲ ಎಂದು ಎಂದು ನೈಋತ್ಯ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ್ ಹೆಗ್ಡೆ ತಿಳಿಸಿದ್ದಾರೆ.
ಮಂಗಳೂರು ಸಮೀಪ ಕಂಗೊಳಿಸಲಿದೆ ಸೃಷ್ಟಿಕರ್ತನ ಸನ್ನಿಧಿ; ಇದು ‘ಬ್ರಹ್ಮ’ನ ಅನನ್ಯ ಕ್ಷೇತ್ರ..
ಇಡೀ ವಿಶ್ವದಲ್ಲಿ 2 ಕಡೆಗಳಲ್ಲಿ ಮಾತ್ರ ಇರುವ ಇತಿಹಾಸ ಪ್ರಸಿದ್ಧ ಶ್ರೀ ಬ್ರಹ್ಮ ದೇವರ ಸನ್ನಿಧಿ ಮಂಗಳೂರು ಸಮೀಪದ ಕಳ್ಳಿಗೆ ಗ್ರಾಮದ ಪುಣ್ಯಭೂಮಿಯಲ್ಲೆ ಶೀಘ್ರದಲ್ಲೇ ನೂತನ ದೇವಾಲಯವಾಗಿ ಕಂಗೊಳಿಸಲಿದೆ. ಅಸ್ಸಾಂ ರಾಜ್ಯದ ನದಿಕಿನಾರೆಯಲ್ಲಿ ಹೊರತುಪಡಿಸಿ ಮತ್ತೊಂದು ಬ್ರಹ್ಮ ದೇವರ ಗುಡಿ ಇರುವುದು ಕರ್ನಾಟಕ ರಾಜ್ಯದ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಬ್ರಹ್ಮರಕೂಟ್ಲುವಿನಲ್ಲಿ ಮಾತ್ರ. ರಾಷ್ಟ್ರೀಯ ಹೆದ್ದಾರಿ 75ರ ಚತುಷ್ಪಥ ಕಾಮಗಾರಿ ಆರಂಭವಾದಾಗ ಬ್ರಹ್ಮ ಸನ್ನಿಧಿ ತೆರವುಗೊಳಿಸಲು ಹೆದ್ದಾರಿ ಇಲಾಖೆ ಅಧಿಕಾರಿಗಳು ಮುಂದಾದ ಸಂದರ್ಭದಲ್ಲಿ ಗುತ್ತಿಗೆ ವಹಿಸಿಕೊಂಡಿದ್ದ ಇರ್ಕಾನ್ ಸಂಸ್ಥೆ ಗ್ರಾಮಸ್ಥರಿಗೆ ಮುನ್ಸೂಚನೆ ನೀಡದೆ, ಸನ್ನಿಧಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಏಕಾಏಕಿ ಜೆಸಿಬಿ ನುಗ್ಗಿಸಿ ಸನ್ನಿಧಿ ಕೆಡವಲು ಮುಂದಾಗಿತ್ತು ಎಂಬ ಅಸಮಾಧಾನ ಸ್ಥಳೀಯರದ್ದು. ಆ ವೇಳೆ, ಪವಾಡವೊಂದು ನಡೆದಿತ್ತು. ಸನ್ನಿಧಿ ಕೆಡವಲು ಪ್ರಯತ್ನ ನಡೆದ ಸಂದರ್ಭದಲ್ಲಿ ಯಂತ್ರವು ಹಠತ್ತಾಗಿ ಕೆಟ್ಟುಹೋಗಿ ಕಾಮಗಾರಿಗೆ ತಡೆಯಾಯಿತು. ಮರುದಿನ 2009 ನವೆಂಬರ್ 8ರಂದು…
‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಈಗ ಬಿಡುಗಡೆಗೆ ಸಿದ್ಧ
ಕನ್ನಡ ಚಿತ್ರರಂಗದಲ್ಲಿ ನಿರೀಕ್ಷೆ ಹುಟ್ಟಿಸಿರುವ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾ ಈಗ ಬಿಡುಗಡೆಗೆ ಸಿದ್ಧವಾಗಿದೆ. ಡಾರ್ಲಿಂಗ್ ಕೃಷ್ಣ ನಟಿಸಿರುವ ಈ ಸಿನಿಮಾ ಜುಲೈ 28ರಂದು ಈ ಚಿತ್ರ ತೆರೆಕಾಣಲಿದೆ ಎಂದು ನಿರ್ದೇಶಕ ಶಶಾಂಕ್ ಪ್ರಕಟಿಸಿದ್ದಾರೆ. ಈ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ಅವರಿಗೆ ಜೋಡಿಯಾಗಿ ಬೃಂದಾ ಆಚಾರ್ಯ ನಟಿಸಿದ್ದಾರೆ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ಲೈಕ್ಸ್ ಗಿಟ್ಟಿಸಿಕೊಂಡಿರುವ ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದ ಹಾಡುಗಳು ಈ ಸಿನಿಮಾ ಬಗ್ಗೆ ನಿರೀಕ್ಷೆ ಹುಟ್ಟಿಸಿರುವುದು.