‘ಗ್ಯಾರೆಂಟಿ’ ಪರಿಪೂರ್ಣ ; ಸಿದ್ದು ಸರ್ಕಾರವನ್ನು ಕಟ್ಟಿ ಹಾಕಲು ಬಿಜೆಪಿ ಸಿದ್ಧತೆ

ಬೆಂಗಳೂರು: ಕಾಂಗ್ರೆಸ್ ಪಕ್ಷ ನೀಡಿದ್ದ ಗ್ಯಾರಂಟಿಗಳ ಸಮರ್ಪಕ ಅನುಷ್ಠಾನಗೊಳಿಸಲೇಬೇಕೆಂಬ ಸವಾಲೊಂಡ್ಡಿರುವ ಬಿಜೆಪಿ ವಿಧಾನಸೌಧದ ಮುಂದೆ ಗಾಂಧಿ ಪ್ರತಿಮೆ ಬಳಿಯಲ್ಲಿ ಜುಲೈ 4ರಂದು ನೂರಾರು ಕಾರ್ಯಕರ್ತರು ಬೆಳಿಗ್ಗೆಯಿಂದ ಸಂಜೆವರೆಗೆ ಒಂದು ದಿನ ಧರಣಿ ಸತ್ಯಾಗ್ರಹ ಮಾಡಲಿದೆ. ಬಿಜೆಪಿ ಚುನಾಯಿತ ಪ್ರತಿನಿಧಿಗಳು ಸದನದ ಒಳಗೂ ಹೋರಾಟ ಮಾಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ ‌. ಹೋರಾಟ ಕುರಿತಂತೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾಹಿತಿ ಹಂಚಿಕೊಂಡಿರುವ ಅವರು, ಕಾಂಗ್ರೆಸ್ ಪಕ್ಷವು ಮನೆಮನೆಗೆ ಹೋಗಿ ಸಿದ್ದರಾಮಯ್ಯ, ಶಿವಕುಮಾರ್ ಅವರು ಸಹಿ ಮಾಡಿ ಕೊಟ್ಟ ಗ್ಯಾರಂಟಿ ಕಾರ್ಡಿನ ಅಂಶಗಳನ್ನು ಚಾಚೂತಪ್ಪದೆ ಅನುಷ್ಠಾನಕ್ಕೆ ತರಲು ಅವರು ಆಗ್ರಹಿಸಿದರು. ಈ ಕುರಿತು ಪಕ್ಷದ ಮುಖಂಡರ ಸಭೆಯಲ್ಲಿ ಚರ್ಚಿಸಿದ್ದಾಗಿ ವಿವರಿಸಿದರು. ಭರವಸೆ ಕೊಟ್ಟಂತೆ 10 ಕೆಜಿ ಅಕ್ಕಿ ಕೊಡಬೇಕು; ಎಲ್ಲ ಪದವೀಧರ ನಿರುದ್ಯೋಗಿಗಳಿಗೆ 3 ಸಾವಿರ ಭತ್ಯೆ, ಡಿಪ್ಲೊಮಾ…