ರಾಜ್ಯದಲ್ಲಿ ಪೊಲೀಸ್ ಕಿರುಕುಳವೇ? ಬಿಜೆಪಿಯಿಂದ ವಿಶೇಷ ಕಂಟ್ರೋಲ್ ರೂಂ..!

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ಕಾರ್ಯಕರ್ತರಿಗೆ ಪೊಲೀಸರಿಂದ ಕಿರುಕುಳ ಹೆಚ್ಚಾಗಿದೆ ಎಂದು ಆರೋಪಿಸುತ್ತಿರುವ ಪ್ರತಿಪಕ್ಷ ಬಿಜೆಪಿ, ಇದೀಗ ಪೊಲೀಸರ ಕಿರುಕುಳ ಎದುರಿಸುವವರಿಗಾಗಿ ಕಂಟ್ರೋಲ್ ರೂಂ ತೆರೆಯಲು ಮುಂದಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ಪೊಲೀಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ. ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜ ಬೇಕಿಲ್ಲ, ಎದೆಗುಂದ ಬೇಕಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಂವಿಧಾನ ನಮಗೆ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು, ಕಾನೂನು ಪೋಲಿಸರಿಗೆ ಅಧಿಕಾರ ನೀಡಿಲ್ಲ, ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ, ಕಿರುಕುಳಗಳು…

ಬೆಂಗಳೂರು ಕಂಬಳ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಅಪಘಾತ; ಮಂಗಳೂರಿನ ಇಬ್ಬರು ದುರ್ಮರಣ; ಮೂವರಿಗೆ ಗಂಭೀರ ಗಾಯ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಚಾರಿತ್ರಿಕ ಕಂಬಳ ವೀಕ್ಷಿಸಿ ಮಗಳೂರಿಗೆ ಮರಳುತ್ತಿದ್ದ ಯುವಕರು ಭೀಕರ ಅಪಘಾತದಲ್ಲಿ ಸಾವನ್ನಾಪಿದ್ದಾರೆ. ಕುಣಿಗಲ್ ತಾಲೂಕಿನ ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಬಳಿ ಭಾನುವಾರ ಬೋರ್ ವೆಲ್ ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಬಜ್ಪೆ ಮೂಲದ ಕಿಶೋರ್ ಶೆಟ್ಟಿ (35) ಮತ್ತು ಫಿಲೀಪ್ ಮೇರಿ ಲೋಬೋ (34) ಎಂದು ಗುರುತಿಸಲಾಗಿದೆ. ನಿತೀಶ್ ಭಡಾರಿ (35), ಪ್ರೀತಿ ಲೋಬೋ (29) ಮತ್ತು ಹರೀಶ್ (62) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು ಅವರು ಅದಿಚುಂಚನಗಿರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ‘ಬೆಂಗಳೂರು ಕಂಬಳ’ವನ್ನು ವೀಕ್ಷಿಸಿ ಮಂಗಳೂರಿಗೆ ಕಾರಿನಲ್ಲಿ ವಾಪಸ್ ಆಗುತ್ತಿದ್ದ ವೇಳೆ ತಡ ರಾತ್ರಿ 1:15ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ…

ಕರ್ನಾಟಕ ಆಡಳಿತ ಸುಧಾರಣಾ ಆಯೋಗದಿಂದ ಸರ್ಕಾರಕ್ಕೆ 6ನೇ ವರದಿ; ನೇಮಕಾತಿ ಕಡಿತಕ್ಕೆ

ಬೆಂಗಳೂರು: ನಿವೃತ್ತ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್‌ ನೇತೃತ್ವದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ಸರ್ಕಾರಕ್ಕೆ 6ನೇ ವರದಿಯನ್ನು ಸಲ್ಲಿಸಿದೆ. ಎರಡನೇ ಆಡಳಿತ ಸುಧಾರಣಾ ಆಯೋಗವು ಶನಿವಾರ ಸಿಎಂ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸಿದ್ದು ಹಲವು ಪ್ರಮುಖ ಶಿಫಾರಸುಗಳನ್ನು ಮಾಡಿದೆ. ಪ್ರಮುಖವಾಗಿ ಹೆಚ್ಚಿನ ಪ್ರಥಮ ದರ್ಜೆ, ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ಮುಂದುವರಿಸುವ ಅಗತ್ಯವಿಲ್ಲ ಎಂದು ಶಿಫಾರಸು ಮಾಡಿದೆ ಎನ್ನಲಾಗಿದೆ. ಬಹುತೇಕ ಇಲಾಖೆಗಳಲ್ಲಿ HRMS, ಖಜಾನೆ-2, e-office, e-PAR ಮತ್ತು ಇ-ಸೇವಾವಹಿಗಳನ್ನು ಅಳವಡಿಸಿರುವುದರಿಂದ ಲಿಪಿಕ ಕೆಲಸವು ಗಣನೀಯವಾಗಿ ಕಡಿಮೆಯಾಗಿದೆ. ಹಾಗಾಗಿ ನೇಮಕಾತಿ ಕಡಿತದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದೆ. ಹೆಚ್ಚಿನ ಪ್ರಥಮ ದರ್ಜೆ, ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳನ್ನು ಮುಂದುವರಿಸುವ ಅಗತ್ಯವಿಲ್ಲ. ಪ್ರತಿ ಇಲಾಖೆಯಲ್ಲಿ ಈ ಹುದ್ದೆಗಳನ್ನು ಪರಿಶೀಲಿಸಿ ಮರುವ್ಯವಸ್ಥೆ ಮಾಡಬಹುದು ಅಥವಾ ತಾಂತ್ರಿಕ ಹುದ್ದೆಗಳನ್ನಾಗಿ ಪರಿವರ್ತಿಸಬಹುದು ಎಂದು ಆಯೋಗ ಹೇಳಿದೆ.

CUSAT ವಿವಿ ವಾರ್ಷಿಕ ಟೆಕ್ ಫೆಸ್ಟ್‌ ಕಾರ್ಯಕ್ರಮದಲ್ಲಿ ಕಾಲ್ತುಳಿತ: ನಾಲ್ವರು ವಿದ್ಯಾರ್ಥಿಗಳ ಸಾವು

ಕೊಚ್ಚಿ: ಕೇರಳದ ಕೊಚ್ಚಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯ (CUSAT) ಸಂಗೀತ ಕಚೇರಿಯಲ್ಲಿ ನೂಕುನುಗ್ಗಲು ಸಂಭವಿಸಿ ಕಾಲ್ತುಳಿತಕ್ಕೆ ನಾಲ್ವರು ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. 60 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಖ್ಯಾತ ಹಿನ್ನಲೆ ಗಾಯಕಿ ನಿಖಿತಾ ಗಾಂಧಿ ಅವರ ಕಾರ್ಯಕ್ರಮವು ವಿಶ್ವವಿದ್ಯಾನಿಲಯದ ವಾರ್ಷಿಕ ಟೆಕ್ ಫೆಸ್ಟ್‌ನ ಕೇಂದ್ರಬಿಂದುವಾಗಿತ್ತು. ಬಯಲು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಭಾರೀ ಸಂಖ್ಯೆಯಲ್ಲಿ ಪ್ರೇಕ್ಷಕರು ಜಮಾಯಿಸಿದ್ದರು. ಅನಿರೀಕ್ಷಿತ ಮಳೆಯಿಂದಾಗಿ ಪ್ರೇಕ್ಷಕರು ತರಾತುರಿಯಲ್ಲಿ ಆಶ್ರಯ ಪಡೆಯಲು ಧಾವಿಸಿದಾಗ ನೂಕುನುಗ್ಗಲು ಉಂಟಾಯಿತು. ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಗಾಯಾಳುಗಳನ್ನು ಕಲಮಸ್ಸೆರಿ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಇತರ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. #WATCH | Kerala | Bodies of three of the deceased kept at CUSAT for students to pay tribute. Four students died and several others…

ಒಡಿಶಾದಲ್ಲಿ ಭೀಕರ ಅಪಘಾತ: ಟ್ರಕ್ ಪಲ್ಟಿ, ಆರು ಕಾರ್ಮಿಕರ ದುರ್ಮರಣ

ಮಲ್ಕನಗಿರಿ: ಒಡಿಶಾದ ಮಲ್ಕನಗಿರಿ ಜಿಲ್ಲೆಯಲ್ಲಿ 13 ಮಂದಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಸಿಮೆಂಟ್ ತುಂಬಿದ ಟ್ರಕ್ ಘಾಟ್ ರಸ್ತೆಯಲ್ಲಿ ಪಲ್ಟಿಯಾಗಿ ಆರು ಕಾರ್ಮಿಕರು ಸಾವನ್ನಪ್ಪಿ ದ್ದಾರೆ. ಭೀಕರ ಅಪಘಾತದಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ. ಸ್ವಾಭಿಮಾನ್ ಅಂಚಲಾದ ಜೋಡಂಬಾ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ ಎಂದು ಮಲ್ಕಾನ್‌ಗಿರಿ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ನಿತೇಶ್ ವಾಧ್ವಾನಿ ತಿಳಿಸಿದ್ದಾರೆ. ಸಿಮೆಂಟ್ ಮತ್ತು ಕಬ್ಬಿಣದ ಸರಳುಗಳನ್ನು ತುಂಬಿದ್ದ ಲಾರಿ ಹಂತಲಗೂಡ ಎಂಬಲ್ಲಿ ಅಪಘಾತಕ್ಕೀಡಾಗಿದ್ದು, ಹಲವು ಕಾರ್ಮಿಕರನ್ನು ಸಿಮೆಂಟ್ ಚೀಲಗಳ ಅಡಿಯಲ್ಲಿ ಸಿಲುಕಿದ್ದರು. ಈ ಕಾರ್ಮಿಕರನ್ನು ಹೊರತೆಗೆಯಲು ಪೊಲೀಸರು ಮತ್ತು ಸ್ಥಳೀಯರು ಶತಪ್ರಯತ್ನ ಮಾಡಿದ್ದಾರೆ. ಐವರು ಕಾರ್ಮಿಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದು, ಗಾಯಗೊಂಡಿದ್ದ ಮತ್ತೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ದಿಗ್ಭ್ರಮೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ನವೀನ್ ಪಟ್ನಾಯಕ್, ಮೃತ ಕಾರ್ಮಿಕರ ಕುಟುಂಬಕ್ಕೆ ರೂ.3 ಲಕ್ಷ ಪರಿಹಾರವನ್ನು ಘೋಷಿಸಿದದ್ದಾರೆ.

ಜನಪ್ರಿಯ ಕ್ರೀಡೆ ಕಂಬಳವನ್ನು ಬೆಂಗಳೂರಿನಲ್ಲಿ ಪ್ರತಿ ವರ್ಷ ಮುಂದುವರೆಸುವಂತಾಗಬೇಕು

ಬೆಂಗಳೂರು: ಜನಪ್ರಿಯ ಕ್ರೀಡೆ ಕಂಬಳವನ್ನು ಬೆಂಗಳೂರಿನಲ್ಲಿ ಪ್ರತಿ ವರ್ಷ ಮುಂದುವರೆಸುವಂತಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ.  ಬೆಂಗಳೂರಿನಲ್ಲಿ ಕಂಬಳ ಉತ್ಸವ ಹಾಗೂ ತುಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕದಲ್ಲಿ ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ದೊರಕಬೇಕೆಂದು ಕೋರಿಕೆಯಿದ್ದು ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸುತ್ತೇವೆ. ಕಂಬಳ ಕರಾವಳಿ ಭಾಗದ ಜನಪ್ರಿಯ ಕ್ರೀಡೆ. ಮಂಗಳೂರು, ಉಡುಪಿ ಜಿಲ್ಲೆಗಳ ಜಾನಪದ ಕ್ರೀಡೆ. ಅಶೋಕ್ ರೈ ಅವರ ನೇತೃತ್ವದಲ್ಲಿ ಕರಾವಳಿ ಪ್ರದೇಶದ ಜಾನಪದ ಕ್ರೀಡೆಯನ್ನು ಬೆಂಗಳೂರು ನಗರಕ್ಕೆ ಪರಿಚಯಿಸುವುದು ನಿಜಕ್ಕೂ ಶ್ಲಾಘನೀಯ ಎಂದರು.‌ ಕಂಬಳ ನೋಡಲು ಇಷ್ಟು ಜನರು ಆಗಮಿಸುವ ನಿರೀಕ್ಷೆ ಇರಲಿಲ್ಲ. ಕಂಬಳ ಕರಾವಳಿ ಪ್ರದೇಶದ ಕ್ರೀಡೆಯಾದಾರೂ ಬೆಂಗಳೂರಿನಲ್ಲಿ ಲಕ್ಷಾಂತರ ಜನ ಕರಾವಳಿ ಪ್ರದೇಶದವರು ವಾಸಿಸುತ್ತಿದ್ದು ಅವರಿಗೆ ಮಾತ್ರವಲ್ಲದೇ ಬೆಂಗಳೂರಿನ ಜನ ಸೇರಿದಂತೆ ರಾಜ್ಯದ ಮೂಲೆ ಮೂಲೆಯಿಂದ ಬಂದು…