ಕಮೀಷನ್: 3ನೇ ಕಂತಿಗಾಗಿ ಸುರ್ಜೇವಾಲ ಮತ್ತೆ ಬಂದರೇ..?

ಬೆಂಗಳೂರು: ಇವತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ ಅವರು ಮತ್ತೆ ಬೆಂಗಳೂರಿಗೆ ಬಂದಿದ್ದಾರೆ. ಮೊದಲನೇ ಕಂತು ಬಂತು; 2ನೇ ಕಂತು ಬಂತು. 3ನೇ ಕಂತು ಬೇಕು; 3ನೇ ಕಂತಿನಲ್ಲಿ ಚೌಕಾಸಿ ಆಗಬಾರದೆಂದು 3ನೇ ಕಂತಿಗೋಸ್ಕರ ಮತ್ತೆ ಬೆಂಗಳೂರಿಗೆ ಬಂದಂತಿದೆ ಎಂದು ಮಾಜಿ ಸಚಿವ ಮತ್ತು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಯಾವಾಗಲೂ ಚುನಾವಣೆ ನಡೆಸುವುದೇ ಕಡೇ 3 ದಿನಗಳಲ್ಲಿ ಎಂದು ಟೀಕಿಸಿದರು. ತೆಲಂಗಾಣ ಚುನಾವಣಾ ಉಸ್ತುವಾರಿಯನ್ನು ಕರ್ನಾಟಕದ ಉಪ ಮುಖ್ಯಮಂತ್ರಿಗೇ ನೀಡಿದ್ದಾರೆ. ಹಾಗಾಗಿ 3ನೇ ಕಂತಿಗಾಗಿ ಬಂದಂತಿದೆ ಎಂದು ತಿಳಿಸಿದರು. ಕರ್ನಾಟಕ ಇನ್ನೆಷ್ಟು ಕಂತು ಕೊಡಬೇಕೋ? ಎಂದು ಕೇಳಿದ ಅವರು, ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಮಾಡುವ ಬಗ್ಗೆ ನಾವು ಮುಂಚೆಯೇ ತಿಳಿಸಿದ್ದೆವು. ಕಾಂಗ್ರೆಸ್ ಗೆಲ್ಲಿಸಬೇಡಿ…

ಬೋರ್‌ವೆಲ್‌ನಲ್ಲಿ ಹಾಲು..! ಇದು ಕಲಿಯುಗದ ಪವಾಡ ಅಂತಿದ್ದಾರೆ ಜನ..!

ಕೊಳವೆ ಬಾವಿಯಲ್ಲಿ ನೀರು ಬುರುವುದು ಸಾಮಾನ್ಯ.. ಆದರೆ, ಬೋರ್‌ವೆಲ್‌ನಲ್ಲಿ ಹಾಲು ಬರಲು ಸಾಧ್ಯವೇ? ಕೊಳವೆ ಬಾವಿಯಲ್ಲಿ ನೀರಿನ ಬದಲು ಹಾಲು ಬರುತ್ತಿದೆ ಎಂಬ ಸುದ್ದಿ ಕುತೂಹಲದ ಕೇಂದ್ರ ಬಿಂದುವಾಗಿದೆ. ಉತ್ತರ ಪ್ರದೇಶದ ಮೊರಾಬಾದ್‌ನಲ್ಲಿ ಬೋರ್‌ವೆಲ್‌ನಲ್ಲಿ ನೀರಿನ ಬದಲು ಬಿಳಿ ಬಣ್ಣದ ನೀರು ಬರಲು ಆರಂಭಿಸಿದೆ. ಇದನ್ನು ಕ್ಷೀರ ಕ್ರಾಂತಿ ಎನ್ನುತ್ತಿರುವ ಸ್ಥಳೀಯರು ‘ಕಲಿಯುಗದ ವಿಸ್ಮಯ’ ಎಂದು ಬಣ್ಣಿಸುತ್ತಿದ್ದಾರೆ. ಈ ಬೋರ್‌ವೆಲ್ ಬಗ್ಗೆ ಸುದ್ದಿ ಹರಡುತ್ತಿದ್ದಂತೆಯೇ ಇದನ್ನು ನೋಡಲೆಂದು ಭಾರೀ ಸಂಖ್ಯೆಯಲ್ಲಿ ಜನ ಸ್ಥಳಕ್ಕೆ ದೌಡಾಯಿಸುತ್ತಿದ್ದಾರೆ. ಅಷ್ಟೇ ಅಲ್ಲ, ಬೋರ್‌ವೆಲ್‌ನಲ್ಲಿ ಹಾಲು ಬರುತ್ತಿದೆ ಎಂಬ ಸುದ್ದಿ ಹರಡುತ್ತಿದ್ದಂತೆಯೇ ಸ್ಥಳೀಯರು ಕ್ಯಾನ್, ಪಾತ್ರೆಗಳೊಂದಿಗೆ ಧಾವಿಸಿ ಹಾಲು ರೂಪದ ನೀರನ್ನು ಹೊತ್ತೊಯ್ಯುವ ಪ್ರಸಂಗವೂ ಅಚ್ಚರಿಗೆ ಕಾರಣವಾಗಿದೆ. जैसे हर चमकती चीज सोना नहीं होती, वैसे सफ़ेद रंग केवल दूध का ही नहीं होता। मगर लोगों…

“ತೆರಿಗೆ ಹಣ ಕರುನಾಡಿನವರದ್ದು, ಕೊಡುಗೆ ತೆಲಂಗಾಣದ ಕಾಂಗ್ರೆಸ್ಸಿಗೆ? ಸಿದ್ದು ಸರ್ಕಾರದ ನಡೆಗೆ ಆಕ್ರೋಶ

ಬೆಂಗಳೂರು: ತೆರಿಗೆ ಹಣ ಕರುನಾಡಿನವರದ್ದು, ಕೊಡುಗೆ ತೆಲಂಗಾಣದ ಕಾಂಗ್ರೆಸ್ಸಿಗೆ? ಇದು ಸಿದ್ದರಾಮಯ್ಯ ಸರ್ಕಾರದ ನಡೆ ಎಂಬಂತಿದೆ. ಚುನಾವಣೆ ನಡೆಯುತ್ತಿರುವ ತೆಲಂಗಾಣ ಜನರ ಮೇಲೆ ಕರ್ನಾಟಕದ ಸಾಧನೆಯನ್ನು ತೋರಿಸುವ ಜಾಹೀರಾತು ಮೂಲಕ ಪ್ರಭಾವ ಬೀರುವ ಪ್ರಯತ್ನ ಕಾಂಗ್ರೆಸ್ ಪಕ್ಷದಿಂದ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ನವೆಂಬರ್ 30 ರಂದು ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿನ ಪತ್ರಿಕೆಗಳಲ್ಲಿ ‘ಗ್ಯಾರಂಟಿ’ ಕುರಿತು ಜಾಹಿರಾತು ಪ್ರಕಟಿಸಲಾಗುತ್ತಿದೆ. ಈ ಜಾಹೀರಾತು ಮೂಲಕ ಕಾಂಗ್ರೆಸ್ ಪಕ್ಷ ಪರೋಕ್ಷ ಪ್ರಚಾರ ನಡೆಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಆರೋಪದ ಬೆನ್ನಲ್ಲೇ ಚುನಾವಣಾ ಆಯೋಗ ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ನೊಟೀಸ್ ನೀಡಿದೆ. ತೆಲಂಗಾಣದ ಪತ್ರಿಕೆಗಳಿಗೆ ಜಾಹೀರಾತು ನೀಡುವುದನ್ನು ನಿಲ್ಲಿಸುವಂತೆ ಆಯೋಗ ಸೂಚಿಸಿದೆ. ಚುನಾವಣಾ ನೀತಿ ಸಂಹಿತೆಯ ಅಡಿಯಲ್ಲಿ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯದ ಬಗ್ಗೆ ವಿವರಣೆಯನ್ನೂ ಕೇಳಿದೆ. ಬಿಜೆಪಿ ಆಕ್ರೋಶ.. ತೆಲಂಗಾಣ ಪತ್ರಿಕೆಗಳಲ್ಲಿ ಜಾಹೀರಾತು ನೀಡಿರುವ ಸಿದ್ದರಾಮಯ್ಯ ಸರ್ಕಾರದ ಕ್ರಮದ ಬಗ್ಗೆ…

‘ಗೃಹಲಕ್ಷ್ಮಿ’: 1 ಕೋಟಿ 17 ಲಕ್ಷ ಯಜಮಾನಿಯರಿಂದ ನೋಂದಣಿ

ಬೆಂಗಳೂರು: ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಗೃಹಲಕ್ಷ್ಮೀ ಯೋಜನೆಯು ದೇಶದಲ್ಲಿ, ಅಥವಾ ವಿಶ್ವದಲ್ಲಿ ಜಾರಿಯಾದ ಅತಿ ವಿಶಿಷ್ಟ ಹಾಗೂ ಜನಪ್ರಿಯ ಯೋಜನೆಯಾಗಿದೆ. ಇದುವರೆಗೆ ರಾಜ್ಯಾದ್ಯಂತ 1 ಕೋಟಿ 17 ಲಕ್ಷ ಯಜಮಾನಿಯರು ಗೃಹಲಕ್ಷ್ಮಿ ಯೋಜನೆ ಮೂಲಕ ಹಣ ಪಡೆಯಲು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ಒದಗಿಸಿರುವ ಅವರು, ಗೃಹಲಕ್ಷ್ಮಿ ಯೋಜನೆಗಾಗಿ ಹೆಸರು ನೋಂದಾಯಿಸಿರುವವರ ಪೈಕಿ 1 ಕೋಟಿ 10 ಲಕ್ಷ ಯಜಮಾನಿಯರ ಖಾತೆಗಳಿಗೆ ನೇರವಾಗಿ ಹಣ ಜಮಾ ಆಗುತ್ತಿದೆ. ಯೋಜನೆಗಾಗಿ ನಮ್ಮ ಸರ್ಕಾರ 11,200 ಕೋಟಿ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಸುಮಾರು 2,100 ಕೋಟಿ ರೂ.ಗಳನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತಿದೆ. ಇದುವರೆಗೆ ಸುಮಾರು 6 ಸಾವಿರ ಕೋಟಿ ರೂಪಾಯಿ ಜಮಾ ಆಗಿದೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್…

ತಾಯಿ ಚಾಮುಂಡೇಶ್ವರಿಗೆ 5 ವರ್ಷಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಯ ಭರ್ತಿ ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ ಅವರು ತಾಯಿ ಚಾಮುಂಡೇಶ್ವರಿಗೆ ಸಮರ್ಪಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಹಣವನ್ನು ಅರ್ಪಿಸುವ ಮೂಲಕ ಸರ್ಕಾರದ ಹರಕೆ ತೀರಿಸಿದರು. ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ 59 ತಿಂಗಳ ಕಂತಿನ ಹಣ ಒಟ್ಟು 1.18 ಲಕ್ಷ ರೂ.ಗಳನ್ನು ಸಚಿವೆ ಹೆಬ್ಬಾಳ್ಕರ್ ವೈಯಕ್ತಿಕವಾಗಿ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನಸಭಾ ಚುನಾವಣೆಗೂ ಪೂರ್ವ ಮೇ 9 ರಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ದಿನೇಶ್ ಗೂಳಿಗೌಡ ಹಾಗೂ ಇತರ ಕಾಂಗ್ರೆಸ್ ನಾಯಕರು ಚಾಮುಂಡಿ ದೇವಿ ಸನ್ನಿಧಿಯಲ್ಲಿ…

ಸಿಎಂ ಜನಸ್ಪಂದನ; ಯೋಜನೆಗಳ ಪರಿಪೂರ್ಣ ಲಾಭ ಫಲಾನುಭವಿಗಳಿಗೆ ಸಲ್ಲಬೇಕು

ಬೆಂಗಳೂರು : ಸರ್ಕಾರದ ಆಡಳಿತವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಜನಸ್ಪಂದನ ಕಾರ್ಯಕ್ರಮವು ಮಹತ್ವದ ಹೆಜ್ಜೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣ್ಣಿಸಿದ್ದಾರೆ. ಬಿಜೆಪಿ ಅವಧಿಯಲ್ಲಿ ನಿಂತ ನೀರಿನಂತಾಗಿ ಆಡಳಿತ ಯಂತ್ರ ಜಿಡ್ಡುಗಟ್ಟಿತ್ತು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಚುರುಕು ನೀಡಲಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಹಿಂದಿನ ಬಿಜೆಪಿ ಸರಕಾರದ ದುರಾಡಳಿತದಿಂದ ಜನರು ತತ್ತರಿಸಿ ಹೋಗಿದ್ದರು. ಅವರ ಸಮಸ್ಯೆಗಳಿಗೆ ಪರಿಹಾರ ಸಿಗದೆ ಹೈರಾಣ ಆಗಿದ್ದರು. ಇದೀಗ ಆ ಪರಿಸ್ಥಿತಿ ಬದಲಾಗಿದೆ. ಅದರ ಮುಂದಿನ ಹೆಜ್ಜೆಯಾಗಿ ಜನ ಸ್ಪಂದನ ಕಾರ್ಯಕ್ರಮವು ಆಡಳಿತದಲ್ಲಿ ಬಹು ದೊಡ್ಡ ಬದಲಾವಣೆಗೆ ಕಾರಣವಾಗಲಿದೆ ಎಂದಿದ್ದಾರೆ. ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಜನಸ್ಪಂದನ ಕಾರ್ಯಕ್ರಮವು ಅಭೂತಪೂರ್ವ ಯಶಸ್ಸನ್ನು ಕಂಡಿದೆ. ಸಮಸ್ಯೆಯನ್ನು ಹೊತ್ತು ಬಂದಿದ್ದ ನೂರಾರು ಜನರಿಗೆ ಸ್ಥಳದಲ್ಲೇ ಪರಿಹಾರ ಸಿಕ್ಕಿದೆ. ಉಳಿದ ಸಮಸ್ಯೆಗಳನ್ನು ಆಯಾ…