ಸಚಿವ ಕೃಷ್ಣಭೈರೇಗೌಡ ವಿರುದ್ಧ ಶಾಸಕ ಬಿ.ಆರ್.ಪಾಟೀಲ್ ಆಕ್ರೋಶ; ಬೆಳಗಾವಿ ಅಧಿವೇಶನದಲ್ಲೂ ಭಾಗಿಯಾಗುವುದಿಲ್ಲ ಎಂದು ಪುನರುಚ್ಚಾರ

ಕಲಬುರಗಿ: ಸಚಿವ ಕೃಷ್ಣಭೈರೇಗೌಡ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಆಳಂದ ಶಾಸಕ ಬಿ.ಆರ್.ಪಾಟೀಲ್ ತಾವು ರಾಜೀನಾಮೆ ನಿರ್ಧಾರ ಪ್ರಕಟಿಸಿರುವ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಸಿಎಂ ಗೆ ಬರೆದಿರುವ ಪತ್ರದ ಬಗ್ಗೆ ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬಿ.ಆರ್.ಪಾಟೀಲ್, ಸಚಿವ ಕೃಷ್ಣಭೈರೇಗೌಡ ವಿರುದ್ಧಅಸಮಾಧಾನ ಹೊರಹಾಕಿದರು. ಸಚಿವರು ನನ್ನ ವಿರುದ್ಧ ಆರೋಪದ ರೀತಿ ಮಾತನಾಡಿದ್ದಾರೆ. ಈ ಆರೋಪದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಉನ್ನತಮಟ್ಟದ ತನಿಖೆಯಾಗಬೇಕು ಎಂದು ಆಗ್ರಹಿಸಿದರು. ತನಿಖೆ ಮುಗಿಯುವರೆಗೂ ಸದನಕ್ಕೆ ಹೋಗುವುದಿಲ್ಲ ಎಂದ ಅವರು, ಬೆಳಗಾವಿ ಅಧಿವೇಶನದಲ್ಲೂ ಭಾಗಿಯಾಗುವುದಿಲ್ಲ ಎಂದು ಪುನರುಚ್ಚರಿಸಿದರು.

ಮುಂಬೈನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ಐದು ಮನೆಗಳು ಧ್ವಂಸ

ಮುಂಬೈ: ವಾಣಿಜ್ಯ ರಾಜಧಾನಿ ಮುಂಬೈ ಇಂದು ಬೆಳ್ಳಬೆಳಿಗ್ಗೆ ಭೀಕರ ಘಟನೆಗೆ ಸಾಕ್ಷಿಯಾಯಿತು. ಮುಂಬೈನ ಚೆಂಬೂರ್ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಐದು ಮನೆಗಳು ಕುಸಿದು ಬಿದ್ದಿವೆ. ಚೆಂಬೂರಿನ ಗಾಲ್ಫ್ ಕ್ಲಬ್ ಬಳಿಯ ಓಲ್ಡ್ ಬ್ಯಾರಕ್ ನ ಮನೆಯೊಂದರಲ್ಲಿ ಈ ಘಟನೆ ಸಂಭವಿಸಿದ್ದು, ೧೦ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ, ಈ ಪೈಕಿ ಹಲವಾರು ಆಸ್ಪತ್ರೆಗೆ ದಾಖಳಾಗಿದ್ದಾರೆ. STORY | 5 houses collapse after gas cylinder explosion in Mumbai; 11 people rescued READ: https://t.co/67teCXb4Kz VIDEO: (Source: Third Party) pic.twitter.com/oIwSg2Nz2i — Press Trust of India (@PTI_News) November 29, 2023

ಸುರಂಗದಿಂದ ಕಾರ್ಮಿಕರ ರಕ್ಷಣೆ; ಮುರ್ಮು, ಮೋದಿ ಅಭಿನಂದನೆ

ದೆಹಲಿ: ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿದ್ದ 41 ಕಾರ್ಮಿಕರನ್ನು ರಕ್ಷಿಸಲಾಗಿದೆ. ಸುಮಾರು 17 ದಿನಗಳಿಂದ ಸಿಕ್ಕಿಬಿದ್ದ 41 ಕಾರ್ಮಿಕರನ್ನು ಸುರಂಗದಿಂದ ಮಂಗಳವಾರ ಸಂಜೆ ಯಶಸ್ವಿಯಾಗಿ ಹೊರತರಲಾಗಿದೆ. ಈ ಯಶಸ್ವೀ ರಕ್ಷಣಾ ಕಾರ್ಯಾಚರಣೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಅತ್ಯಂತ ಕಷ್ಟಕರ ರಕ್ಷಣಾ ಕಾರ್ಯಾಚರಣೆಗಳಲ್ಲಿ ಒಂದನ್ನು ಅದ್ಭುತ ನಿರ್ವಹಿಸಿದ ತಂಡಗಳು ಮತ್ತು ಎಲ್ಲಾ ತಜ್ಞರನ್ನು ನಾನು ಅಭಿನಂದಿಸುತ್ತೇನೆ ಎಂದು ಮುರ್ಮು ಅವರು ಹೇಳಿದ್ದಾರೆ. ಕಾರ್ಮಿಕರನ್ನು ಸುರಂಗದಿಂದ ಹೊರತಂದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ತಂಡದ ಧೈರ್ಯ ಮತ್ತು ಸಂಕಲ್ಪವು ಕಾರ್ಮಿಕರರಿಗೆ ಹೊಸ ಬದುಕನ್ನು ಕರುಣಿಸಿದೆ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ಕಾರ್ಯಾಚರಣೆಯಲ್ಲಿ ತೊಡಗಿದ ಪ್ರತಿಯೊಬ್ಬರೂ ಮಾನವೀಯತೆ ಪ್ರದರ್ಶಿಸಿದ್ದಾರೆ ಎಂದಿದ್ದಾರೆ.‌

ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವ: ‘ಕಾಂತಾರ’ಕ್ಜೆ ತೀರ್ಪುಗಾರರ ವಿಶೇಷ ಪ್ರಶಸ್ತಿ

ಭಾರತೀಯ ಚಿತ್ರರಂಗದಲ್ಲಿ ದಾಖಲೆಗಳನ್ನು ಬರೆದಿರುವ ‘ಕಾಂತಾರ’ ಚಿತ್ರ ಇದೀಗ ಅಂತಾರಾಷ್ಟ್ರೀಯ ಮಟ್ಟದಲ್ಲೂ ಮೆಚ್ಚುಗೆ ಗಳಿಸಿದೆ‌. ರಿಷಬ್ ಶೆಟ್ಟಿ ಅಭಿನಯದ ‘ಕಾಂತಾರ’ ಗೋವಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ತೀರ್ಪುಗಾರರ ವಿಶೇಷ ಪ್ರಶಸ್ತಿ ಪಡೆದಿದೆ. ತೀರ್ಪುಗಾರರ ವಿಶೇಷ ಪ್ರಶಸ್ತಿ ಅಥವಾ ‘ಸಿಲ್ವರ್ ಪೀಕಾಕ್’ ಪ್ರಶಸ್ತಿ ಪಡೆದ ಮೊದಲ ಕನ್ನಡ ಸಿನಿಮಾ ಎಂಬ ಖ್ಯಾತಿಗೆ ‘ಕಾಂತಾರ’ ಪಾತ್ರವಾಗಿದೆ. ಕಾಂತಾರ’ ಸಿನಿಮಾದಲ್ಲಿ ಅದ್ಭುತ ನಟನೆಗೆ ಹಾಗೂ ಅದ್ಭುತವಾಗಿ ಕತೆ ಹೇಳಿರುವ ರೀತಿಗೆ ರಿಷಬ್ ಶೆಟ್ಟಿ ಅವರಿಗೆ ತೀರ್ಪುಗಾರರ ವಿಶೇಷ ಪ್ರಶಸ್ತಿ ನೀಡಲಾಗಿದೆ. Earning a mention from the Jury is always significant, and this year the brilliant @shetty_rishab has claimed the honour!🏆🎬🎉 📽️Indian Actor @shetty_rishab takes home the 'Special Jury Award' at #IFFI54 for his captivating performance and masterful storytelling…

ಕಮೀಷನ್: 3ನೇ ಕಂತಿಗಾಗಿ ಸುರ್ಜೇವಾಲ ಮತ್ತೆ ಬಂದರೇ..?

ಬೆಂಗಳೂರು: ಇವತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ ಅವರು ಮತ್ತೆ ಬೆಂಗಳೂರಿಗೆ ಬಂದಿದ್ದಾರೆ. ಮೊದಲನೇ ಕಂತು ಬಂತು; 2ನೇ ಕಂತು ಬಂತು. 3ನೇ ಕಂತು ಬೇಕು; 3ನೇ ಕಂತಿನಲ್ಲಿ ಚೌಕಾಸಿ ಆಗಬಾರದೆಂದು 3ನೇ ಕಂತಿಗೋಸ್ಕರ ಮತ್ತೆ ಬೆಂಗಳೂರಿಗೆ ಬಂದಂತಿದೆ ಎಂದು ಮಾಜಿ ಸಚಿವ ಮತ್ತು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಯಾವಾಗಲೂ ಚುನಾವಣೆ ನಡೆಸುವುದೇ ಕಡೇ 3 ದಿನಗಳಲ್ಲಿ ಎಂದು ಟೀಕಿಸಿದರು. ತೆಲಂಗಾಣ ಚುನಾವಣಾ ಉಸ್ತುವಾರಿಯನ್ನು ಕರ್ನಾಟಕದ ಉಪ ಮುಖ್ಯಮಂತ್ರಿಗೇ ನೀಡಿದ್ದಾರೆ. ಹಾಗಾಗಿ 3ನೇ ಕಂತಿಗಾಗಿ ಬಂದಂತಿದೆ ಎಂದು ತಿಳಿಸಿದರು. ಕರ್ನಾಟಕ ಇನ್ನೆಷ್ಟು ಕಂತು ಕೊಡಬೇಕೋ? ಎಂದು ಕೇಳಿದ ಅವರು, ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಮಾಡುವ ಬಗ್ಗೆ ನಾವು ಮುಂಚೆಯೇ ತಿಳಿಸಿದ್ದೆವು. ಕಾಂಗ್ರೆಸ್ ಗೆಲ್ಲಿಸಬೇಡಿ…

ಬೋರ್‌ವೆಲ್‌ನಲ್ಲಿ ಹಾಲು..! ಇದು ಕಲಿಯುಗದ ಪವಾಡ ಅಂತಿದ್ದಾರೆ ಜನ..!

ಕೊಳವೆ ಬಾವಿಯಲ್ಲಿ ನೀರು ಬುರುವುದು ಸಾಮಾನ್ಯ.. ಆದರೆ, ಬೋರ್‌ವೆಲ್‌ನಲ್ಲಿ ಹಾಲು ಬರಲು ಸಾಧ್ಯವೇ? ಕೊಳವೆ ಬಾವಿಯಲ್ಲಿ ನೀರಿನ ಬದಲು ಹಾಲು ಬರುತ್ತಿದೆ ಎಂಬ ಸುದ್ದಿ ಕುತೂಹಲದ ಕೇಂದ್ರ ಬಿಂದುವಾಗಿದೆ. ಉತ್ತರ ಪ್ರದೇಶದ ಮೊರಾಬಾದ್‌ನಲ್ಲಿ ಬೋರ್‌ವೆಲ್‌ನಲ್ಲಿ ನೀರಿನ ಬದಲು ಬಿಳಿ ಬಣ್ಣದ ನೀರು ಬರಲು ಆರಂಭಿಸಿದೆ. ಇದನ್ನು ಕ್ಷೀರ ಕ್ರಾಂತಿ ಎನ್ನುತ್ತಿರುವ ಸ್ಥಳೀಯರು ‘ಕಲಿಯುಗದ ವಿಸ್ಮಯ’ ಎಂದು ಬಣ್ಣಿಸುತ್ತಿದ್ದಾರೆ. ಈ ಬೋರ್‌ವೆಲ್ ಬಗ್ಗೆ ಸುದ್ದಿ ಹರಡುತ್ತಿದ್ದಂತೆಯೇ ಇದನ್ನು ನೋಡಲೆಂದು ಭಾರೀ ಸಂಖ್ಯೆಯಲ್ಲಿ ಜನ ಸ್ಥಳಕ್ಕೆ ದೌಡಾಯಿಸುತ್ತಿದ್ದಾರೆ. ಅಷ್ಟೇ ಅಲ್ಲ, ಬೋರ್‌ವೆಲ್‌ನಲ್ಲಿ ಹಾಲು ಬರುತ್ತಿದೆ ಎಂಬ ಸುದ್ದಿ ಹರಡುತ್ತಿದ್ದಂತೆಯೇ ಸ್ಥಳೀಯರು ಕ್ಯಾನ್, ಪಾತ್ರೆಗಳೊಂದಿಗೆ ಧಾವಿಸಿ ಹಾಲು ರೂಪದ ನೀರನ್ನು ಹೊತ್ತೊಯ್ಯುವ ಪ್ರಸಂಗವೂ ಅಚ್ಚರಿಗೆ ಕಾರಣವಾಗಿದೆ. जैसे हर चमकती चीज सोना नहीं होती, वैसे सफ़ेद रंग केवल दूध का ही नहीं होता। मगर लोगों…

“ತೆರಿಗೆ ಹಣ ಕರುನಾಡಿನವರದ್ದು, ಕೊಡುಗೆ ತೆಲಂಗಾಣದ ಕಾಂಗ್ರೆಸ್ಸಿಗೆ? ಸಿದ್ದು ಸರ್ಕಾರದ ನಡೆಗೆ ಆಕ್ರೋಶ

ಬೆಂಗಳೂರು: ತೆರಿಗೆ ಹಣ ಕರುನಾಡಿನವರದ್ದು, ಕೊಡುಗೆ ತೆಲಂಗಾಣದ ಕಾಂಗ್ರೆಸ್ಸಿಗೆ? ಇದು ಸಿದ್ದರಾಮಯ್ಯ ಸರ್ಕಾರದ ನಡೆ ಎಂಬಂತಿದೆ. ಚುನಾವಣೆ ನಡೆಯುತ್ತಿರುವ ತೆಲಂಗಾಣ ಜನರ ಮೇಲೆ ಕರ್ನಾಟಕದ ಸಾಧನೆಯನ್ನು ತೋರಿಸುವ ಜಾಹೀರಾತು ಮೂಲಕ ಪ್ರಭಾವ ಬೀರುವ ಪ್ರಯತ್ನ ಕಾಂಗ್ರೆಸ್ ಪಕ್ಷದಿಂದ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ನವೆಂಬರ್ 30 ರಂದು ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿನ ಪತ್ರಿಕೆಗಳಲ್ಲಿ ‘ಗ್ಯಾರಂಟಿ’ ಕುರಿತು ಜಾಹಿರಾತು ಪ್ರಕಟಿಸಲಾಗುತ್ತಿದೆ. ಈ ಜಾಹೀರಾತು ಮೂಲಕ ಕಾಂಗ್ರೆಸ್ ಪಕ್ಷ ಪರೋಕ್ಷ ಪ್ರಚಾರ ನಡೆಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಆರೋಪದ ಬೆನ್ನಲ್ಲೇ ಚುನಾವಣಾ ಆಯೋಗ ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ನೊಟೀಸ್ ನೀಡಿದೆ. ತೆಲಂಗಾಣದ ಪತ್ರಿಕೆಗಳಿಗೆ ಜಾಹೀರಾತು ನೀಡುವುದನ್ನು ನಿಲ್ಲಿಸುವಂತೆ ಆಯೋಗ ಸೂಚಿಸಿದೆ. ಚುನಾವಣಾ ನೀತಿ ಸಂಹಿತೆಯ ಅಡಿಯಲ್ಲಿ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯದ ಬಗ್ಗೆ ವಿವರಣೆಯನ್ನೂ ಕೇಳಿದೆ. ಬಿಜೆಪಿ ಆಕ್ರೋಶ.. ತೆಲಂಗಾಣ ಪತ್ರಿಕೆಗಳಲ್ಲಿ ಜಾಹೀರಾತು ನೀಡಿರುವ ಸಿದ್ದರಾಮಯ್ಯ ಸರ್ಕಾರದ ಕ್ರಮದ ಬಗ್ಗೆ…

‘ಗೃಹಲಕ್ಷ್ಮಿ’: 1 ಕೋಟಿ 17 ಲಕ್ಷ ಯಜಮಾನಿಯರಿಂದ ನೋಂದಣಿ

ಬೆಂಗಳೂರು: ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಗೃಹಲಕ್ಷ್ಮೀ ಯೋಜನೆಯು ದೇಶದಲ್ಲಿ, ಅಥವಾ ವಿಶ್ವದಲ್ಲಿ ಜಾರಿಯಾದ ಅತಿ ವಿಶಿಷ್ಟ ಹಾಗೂ ಜನಪ್ರಿಯ ಯೋಜನೆಯಾಗಿದೆ. ಇದುವರೆಗೆ ರಾಜ್ಯಾದ್ಯಂತ 1 ಕೋಟಿ 17 ಲಕ್ಷ ಯಜಮಾನಿಯರು ಗೃಹಲಕ್ಷ್ಮಿ ಯೋಜನೆ ಮೂಲಕ ಹಣ ಪಡೆಯಲು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ಒದಗಿಸಿರುವ ಅವರು, ಗೃಹಲಕ್ಷ್ಮಿ ಯೋಜನೆಗಾಗಿ ಹೆಸರು ನೋಂದಾಯಿಸಿರುವವರ ಪೈಕಿ 1 ಕೋಟಿ 10 ಲಕ್ಷ ಯಜಮಾನಿಯರ ಖಾತೆಗಳಿಗೆ ನೇರವಾಗಿ ಹಣ ಜಮಾ ಆಗುತ್ತಿದೆ. ಯೋಜನೆಗಾಗಿ ನಮ್ಮ ಸರ್ಕಾರ 11,200 ಕೋಟಿ ರೂ.ಗಳನ್ನು ಈಗಾಗಲೇ ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಸುಮಾರು 2,100 ಕೋಟಿ ರೂ.ಗಳನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗುತ್ತಿದೆ. ಇದುವರೆಗೆ ಸುಮಾರು 6 ಸಾವಿರ ಕೋಟಿ ರೂಪಾಯಿ ಜಮಾ ಆಗಿದೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್…

ತಾಯಿ ಚಾಮುಂಡೇಶ್ವರಿಗೆ 5 ವರ್ಷಗಳ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹ ಲಕ್ಷ್ಮಿ ಯೋಜನೆಯ ಭರ್ತಿ ಐದು ವರ್ಷಗಳ ಕಂತನ್ನು ಶಾಸಕ ದಿನೇಶ್ ಗೂಳಿಗೌಡ ಅವರು ತಾಯಿ ಚಾಮುಂಡೇಶ್ವರಿಗೆ ಸಮರ್ಪಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪರವಾಗಿ ಶಾಸಕ ದಿನೇಶ್ ಗೂಳಿಗೌಡ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಹಣವನ್ನು ಅರ್ಪಿಸುವ ಮೂಲಕ ಸರ್ಕಾರದ ಹರಕೆ ತೀರಿಸಿದರು. ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ 59 ತಿಂಗಳ ಕಂತಿನ ಹಣ ಒಟ್ಟು 1.18 ಲಕ್ಷ ರೂ.ಗಳನ್ನು ಸಚಿವೆ ಹೆಬ್ಬಾಳ್ಕರ್ ವೈಯಕ್ತಿಕವಾಗಿ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನಸಭಾ ಚುನಾವಣೆಗೂ ಪೂರ್ವ ಮೇ 9 ರಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ದಿನೇಶ್ ಗೂಳಿಗೌಡ ಹಾಗೂ ಇತರ ಕಾಂಗ್ರೆಸ್ ನಾಯಕರು ಚಾಮುಂಡಿ ದೇವಿ ಸನ್ನಿಧಿಯಲ್ಲಿ…