‘ಕಮಲ ಮುಕ್ತ ದಕ್ಷಿಣ ಭಾರತ’; ಫಲಿಸಿದ ‘ಇಂಡಿಯಾ’ ಮೈತ್ರಿಕೂಟದ ತಂತ್ರ

ಹೈದರಾಬಾದ್: ಪಂಚರಾಜ್ಯಗಳ ಚುನಾವಣಾ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ಆಡಳಿತಾರೂಢ BRS ಪಕ್ಷದ ಜೊತೆ ತೀವ್ರ ಸೆಣಸಾಟ ನಡೆಸಿರುವ ಕಾಂಗ್ರೆಸ್ ಸರಳ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿದೆ. ಅಷ್ಟೇ ಅಲ್ಲ, ‘ಕಮಲ ಮುಕ್ತ ದಕ್ಷಿಣ ಭಾರತ’ ಮಾಡುವ ಕಾಂಗ್ರೆಸ್ ನೇತೃತ್ವದ ‘ಇಂಡಿಯಾ’ ಮೈತ್ರಿಕೂಟದ ತಂತ್ರ ಫಲಿಸಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸುವ ಮೂಲಕ ದಕ್ಷಿಣ ಭಾರತದಲ್ಲಿ ಪ್ರಾಬಲ್ಯವನ್ನು ಹೆಚ್ಚಿಸಿಕೊಂಡಿದೆ. ಕೆಲವು ತಿಂಗಳ ಹಿಂದಷ್ಟೇ ಕರ್ನಾಟಕದಲ್ಲಿ ಗೆದ್ದ ಕಾಂಗ್ರೆಸ್ ಇದೀಗ ತೆಲಂಗಾಣಕ್ಕೂ ತನ್ನ ಚಕ್ರಾಧಿಪತ್ಯವನ್ನು ವಿಸ್ತರಿಸಿದಂತಾಗಿದೆ. ಅಷ್ಟೇ ಅಲ್ಲ, ಗೋವಾವನ್ನು ಹೊರತುಪಡಿಸಿ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ‘I.A.N.D.I.A.’ ಮೈತ್ರಿಕೂಟ ಯಶಸ್ವಿಯಾಗಿದೆ. 119 ಸದಸ್ಯಬಲದ ತೆಲಂಗಾಣ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು 60 ಸ್ಥಾನಗಳ ಅಗತ್ಯವಿದ್ದು, ಆಡಳಿತಾರೂಢ ತೆಲಂಗಾಣದ ಕನಸು ನುಚ್ಚು ನೂರಾಗಿದೆ. ಕಾಂಗ್ರೆಸ್ ಪಕ್ಷ ಸರಳ ಬಹುಮತದೊಂದಿಗೆ ಗದ್ದುಗೆ ಏರಿದೆ.

ಮಿನಿ ಮಹಾಸಮರದಲ್ಲಿ ಬಿಜೆಪಿ ಪ್ರಾಬಲ್ಯ; ಕಾಂಗ್ರೆಸ್‌ಗೆ ‘ಕೈ’ ಕೊಟ್ಟ ‘ಗ್ಯಾರೆಂಟಿ’

ದೆಹಲಿ: ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದ್ದ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಬಹಿರಂಗಗೊಂಡಿದ್ದು, ಈ ಮಹಾಸಮರದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಡ, ತೆಲಂಗಾಣ, ಮಿಜೋರಾಂ ರಾಜ್ಯಗಳಲ್ಲಿ ನಡೆದ ಚುನಾವಣೆಯ ಮತ ಎಣಿಕೆ ಭಾನುವಾರ ನಡೆದಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಭದ್ರವಾಗಿವೆ. ಮಧ್ಯಪ್ರದೇಶ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿ ಬಿಜೆಪಿ ಪಾರುಪಥ್ಯ ಮೆರೆದರೆ, ಛತ್ತೀಸ್‌ಗಡದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪ್ರಬಲ ಹೋರಾಟ ನೀಡಿದೆ. ತೆಲಂಗಾಣ ಕಾಂಗ್ರೆಸ್ ಪಾಲಾದರೆ ಮಿಜೋರಾಂ‌ನಲ್ಲಿ ಪ್ರಾದೇಶಿಕ ಪಕ್ಷವೇ ಕಿಂಗ್. ಈ ಮಿನಿ ಮಹಾಸಮರವು ಮು.ಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿಸಲಾಗುತ್ತಿದೆ. ಹಾಗಾಗಿ ಬಿಜೆಪಿ-ಕಾಂಗ್ರೆಸ್ ಪಕ್ಷಗಳ ಭವಿಷ್ಯ ಈ ಫಲಿತಾಂಶದಲ್ಲಿ ಅಡಗಿದೆ ಎಂದು ಪಂಡಿತರು ವಿಶ್ಲೇಷಣೆ ಮಾಡುತ್ತಿದ್ದಾರೆ. ಈ ನಡುವೆ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಡ ರಾಜ್ಯಗಳಲ್ಲಿನ ಪ್ರತೀ ಚುನಾವಣೆಗಳಲ್ಲಿ ಬೇರೆ ಪಕ್ಷ ಅಧಿಕಾರಕ್ಕೆ ಬರುವುದು ಸಾಮಾನ್ಯ. ಅದೇ ರೀತಿ, ಈ ಬಾರಿ…

ಛತ್ತೀಸ್‌ಗಡ ಎಲೆಕ್ಷನ್ : ಹಾವು ಏಣಿಯಾಟದಲ್ಲಿ ‘ಕೈ’ ಎದುರು ಮೇಲುಗೈ ಸಾಧಿಸಿದ್ದು ಬಿಜೆಪಿ

ದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿದ್ದ ಪಂಚ ರಾಜ್ಯಗಳ ಮಿನಿ ಮಹಾಸಮರದಲ್ಲಿ ಬಿಜೆಪಿ ತನ್ನ ಪ್ರಾಬಲ್ಯ ತೋರಿಸಿದೆ. ಮಧ್ಯಪ್ರದೇಶ, ರಾಜಸ್ಥಾನದ ರೀತಿಯಲ್ಲೇ ಛತ್ತೀಸ್‌ಗಡ ರಾಜ್ಯದಲ್ಲೂ ಕಮಲ ಪಕ್ಷ ಪ್ರಾಬಲ್ಯ ಮೆರೆದಿದೆ. ಮತ ಎಣಿಕೆಯುದ್ದಕ್ಕೂ ಕಾಂಗ್ರೆಸ್-ಬಿಜೆಪಿ ನಡುವೆ ಹಾವು ಏಣಿಯಾಟ ಮಾದರಿಯಲ್ಲೇ ಕಾಂಗ್ರೆಸ್-ಬಿಜೆಪಿ ನಡುವೆ ಬಲಾಬಲ ವ್ಯಕ್ತವಾಗುತ್ತಿತ್ತು. 90 ಸದಸ್ಯ ಬಲದ ಛತ್ತೀಸ್‌ಗಡದಲ್ಲಿ ಒಂದೊಮ್ಮೆ ಕಾಂಗ್ರೆಸ್ ಪಕ್ಷ ಬಹುಮತ ಗಾಳಿಸುವಷ್ಟು ಸ್ಥಾನಗಳಲ್ಲಿ ಮುಂದೆ ಇದ್ದರೆ, ಮತ್ತೊಂದು ಸುತ್ತಿನಲ್ಲಿ ಬಿಜೆಪಿ ಪಕ್ಷವು ಬಹುಮತ ಸಾಧಿಸುವಷ್ಟು ಮುನ್ನಡೆ ಸಾಧಿಸಿತು. ಹೀಗೆ ಮತಎಣಿಕೆಯುದ್ದಕ್ಕೂ ಕುತೂಹಲಕಾರಿ ಬೆಳವಣಿಗೆ ಸಾಗುತ್ತಾ ಹೋಯಿತು. 90 ಸದಸ್ಯಬಲದ ಛತ್ತೀಸ್‌ಗಡ ವಿಧಾನಸಭೆಯಲ್ಲಿ ಬಿಜೆಪಿ ಜಯಭೇರಿ ಭಾರಿಸಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಛತ್ತೀಸ್‌ಗಡ ವಿಧಾನಸಭೆಯಲ್ಲಿ 46 ಸ್ಥಾನಗಳನ್ನು ಗೆದ್ದ ಪಕ್ಷ ಸರ್ಕಾರ ರಚನೆ ಮಾಡಬಹುದಾಗಿದ್ದು, ಬಿಜೆಪಿ ಅದಕ್ಕಿಂತಲೂ ಹೆಚ್ಚಿನ ಬಹುಮತದೊಂದಿಗೆ ಜಯಭೇರಿ ಭಾರಿಸಿದೆ. ಅಂತಿಮ ಫಲಿತಾಂಶ ಹೀಗಿದೆ. ಒಟ್ಟು…

5 ಸ್ಟೇಟ್ಸ್ ಎಲೆಕ್ಷನ್ : ರಾಜಸ್ಥಾನದಲ್ಲಿ ‘ಬಿಜೆಪಿ’ಯೇ ರಾಜ

ದೆಹಲಿ: ಮಿನಿ ಮಹಾಸಮರದಲ್ಲಿ ಬಿಜೆಪಿ ತನ್ನ ಪ್ರಾಬಲ್ಯ ತೋರಿಸಿದ್ದು, ರಾಜಸ್ಥಾನದಲ್ಲೂ ಕಮಲ ಪಕ್ಷವೇ ‘ರಾಜ’ ಎನಿಸಿದೆ. ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದ್ದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷೆಯಂತೆಯೇ ಜಯಭೇರಿ ಭಾರಿಸಿದೆ. ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಣ್ಣಿಸಲಾಗುತ್ತಿರುವ ಈ ಚುನಾವಣಾ ಪೈಕಿ ರಾಜಸ್ಥಾನದಲ್ಲೂ ಬಿಜೆಪಿ ತನ್ನ ಪ್ರಾಬಲ್ಯವನ್ನು ಮುಂದುವರಿಸಿಕೊಂಡಿದೆ. 199 ಸದಸ್ಯಬಲದ ರಾಜಸ್ಥಾನ ವಿಧಾನಸಭೆಯಲ್ಲಿ ಬಿಜೆಪಿ ಜಯಭೇರಿ ಭಾರಿಸಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮಧ್ಯಪ್ರದೇಶ ವಿಧಾನಸಭೆಯಲ್ಲಿ 100 ಸ್ಥಾನಗಳನ್ನು ಗೆದ್ದ ಪಕ್ಷ ಸರ್ಕಾರ ರಚನೆ ಮಾಡಬಹುದಾಗಿದ್ದು, ಬಿಜೆಪಿ ಅದಕ್ಕಿಂತಲೂ ಹೆಚ್ಚಿನ ಬಹುಮತದೊಂದಿಗೆ ಜಯಭೇರಿ ಭಾರಿಸಿದೆ. ಬಲಾಬಲ ಹೀಗಿದೆ. ಒಟ್ಟು ಸ್ಥಾನಗಳು: 199 ಮ್ಯಾಜಿಕ್ ನಂಬರ್: 100  ಬಿಜೆಪಿ – 115 ಕಾಂಗ್ರೆಸ್ – 70 ಇತರರು – 14

ಮಿನಿಮಹಾ ಸಮರ: ಮಧ್ಯಪ್ರದೇಶದಲ್ಲಿ ಬಿಜೆಪಿ ಜಯಭೇರಿ

ದೆಹಲಿ: ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದ್ದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಸಾಧಿಸಿದೆ. ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಣ್ಣಿಸಲಾಗುತ್ತಿರುವ ಈ ಚುನಾವಣಾ ಪೈಕಿ ಮಧ್ಯಪ್ರದೇಶದಲ್ಲಿ ಬಿಜೆಪಿ ತನ್ನ ಪ್ರಾಬಲ್ಯವನ್ನು ಮುಂದುವರಿಸಿಕೊಂಡಿದೆ. 230 ಸದಸ್ಯಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ ಜಭೇರಿ ಭಾರಿಸಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮಧ್ಯಪ್ರದೇಶ ವಿಧಾನಸಭೆಯಲ್ಲಿ 116 ಸ್ಥಾನಗಳನ್ನು ಗೆದ್ದ ಪಕ್ಷ ಸರ್ಕಾರ ರಚನೆ ಮಾಡಬಹುದಾಗಿದ್ದು, ಬಿಜೆಪಿ ಅದಕ್ಕಿಂತಲೂ ಹೆಚ್ಚಿನ ಬಹುಮತದೊಂದಿಗೆ ಜಯಭೇರಿ ಭಾರಿಸಿದೆ. ಬಲಾಬಲ ಹೀಗಿದೆ. ಒಟ್ಟು ಸ್ಥಾನಗಳು: 230 ಮ್ಯಾಜಿಕ್ ನಂಬರ್: 116 ಬಿಜೆಪಿ – 164 ಕಾಂಗ್ರೆಸ್ – 65 ಇತರರು- 01

ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ; ಅಖಾಡದಲ್ಲಿ ಫಲಿಸಿದ ‘ಕೈ’ ಗ್ಯಾರೆಂಟಿ

ಹೈದರಾಬಾದ್: ಪಂಚರಾಜ್ಯಗಳ ಚುನಾವಣಾ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ಆಡಳಿತಾರೂಢ BRS ಪಕ್ಷದ ಜೊತೆ ತೀವ್ರ ಸೆಣಸಾಟ ನಡೆಸಿರುವ ಕಾಂಗ್ರೆಸ್ ಸರಳ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸುವ ಮೂಲಕ ದಕ್ಷಿಣ ಭಾರತದಲ್ಲಿ ಪ್ರಾಬಲ್ಯವನ್ನು ಹೆಚ್ಚಿಸಿಕೊಂಡಿದೆ. ಕೆಲವು ತಿಂಗಳ ಹಿಂದಷ್ಟೇ ಕರ್ನಾಟಕದಲ್ಲಿ ಗೆದ್ದ ಕಾಂಗ್ರೆಸ್ ಇದೀಗ ತೆಲಂಗಾಣಕ್ಕೂ ತನ್ನ ಚಕ್ರಾಧಿಪತ್ಯವನ್ನು ವಿಸ್ತರಿಸಿದಂತಾಗಿದೆ. ಅಷ್ಟೇ ಅಲ್ಲ, ಗೋವಾವನ್ನು ಹೊರತುಪಡಿಸಿ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ I.A.N.D.I.A. ಮೈತ್ರಿಕೂಟ ಯಶಸ್ವಿಯಾಗಿದೆ. 119 ಸದಸ್ಯಬಲದ ತೆಲಂಗಾಣ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು 60 ಸ್ಥಾನಗಳ ಅಗತ್ಯವಿದ್ದು, ಆಡಳಿತಾರೂಢ ತೆಲಂಗಾಣದ ಕನಸು ನುಚ್ಚು ನೂರಾಗಿದೆ. ಕಾಂಗ್ರೆಸ್ ಪಕ್ಷ ಸರಳ ಬಹುಮತದೊಂದಿಗೆ ಗದ್ದುಗೆ ಏರಿದೆ. ತೆಲಂಗಾಣದಲ್ಲಿ ಬಲಾಬಲ ಹೀಗಿದೆ: ಒಟ್ಟು ಸ್ಥಾನಗಳು : 119 ಮ್ಯಾಜಿಕ್ ನಂಬರ್: 60 ಕಾಂಗ್ರೆಸ್ – 64 ಬಿ.ಆರ್.ಎಸ್ – 39  ಬಿಜೆಪಿ…