KSRTC ಕಿರೀಟಕ್ಕೆ ಮತ್ತಷ್ಟು ಗರಿ.. Global Marketing Excellence ಪ್ರಶಸ್ತಿ ಪಡೆದ ಸಾರಿಗೆ ಸಂಸ್ಥೆ.. 

ಬೆಂಗಳೂರು: ಅತ್ಯುತ್ತಮ ಸಾರಿಗೆ ಸೇವೆ ಮೂಲಕ ದೇಶದಲ್ಲೇ ಗಮನಸೆಳೆದಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಸಾಧನೆಯ ಕಿರೀಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. Global Marketing Excellenceಯ ಒಂದು ಪ್ರಶಸ್ತಿ ಪಡೆದ ಸಾರಿಗೆ ಸಂಸ್ಥೆಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಕೆಎಸ್ಸಾರ್ಟಿಸಿ’ಗೆ National Media Conclaveನ ಎರಡು ಪ್ರಶಸ್ತಿ ಹಾಗೂ World Marketing Congressನ Global Marketing Excellence ಒಂದು ಪ್ರಶಸ್ತಿ ಲಭಿಸಿದೆ. National Media Conclave Awards 23.11.2023ರಂದು ಭುವನೇಶ್ವರದ ಕೆ.ಐ.ಐ.ಟಿ ವಿಶ್ವವಿದ್ಯಾನಿಲಯ ಸಭಾಂಗಣದಲ್ಲಿ National Media Conclave  ಆಯೋಜಿಸಿದ 07ನೇ National Media Conclave Award ಕಾರ್ಯಕ್ರಮ ಗಮನಸೆಳೆಯಿತು, ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಮಾಹಿತಿ ಸಾರ್ವಜನಿಕ ಸಂಪರ್ಕ,ಪಂಚಾಯತ್ ರಾಜ್, ಕುಡಿಯುವ ನೀರು ಹಾಗೂ ಅರಣ್ಯ ಮತ್ತು ಪರಿಸರ ಸಚಿವ ಪ್ರದೀಪ್ ಕುಮಾರ್ ಅಮತ್, ಉನ್ನತ ಶಿಕ್ಷಣ ಹಾಗೂ ಸಹಕಾರ ಸಚಿವ ಅತನು ಸವ್ಯಸಾಚಿ ನಾಯಕ್…

ಕಾವೇರಿ ವಿವಾದ: ತಮಿಳುನಾಡಿಗೆ ನಿತ್ಯ 2700 ಕ್ಯೂಸೆಕ್ ನೀರು ಹರಿಸಲು ಕರ್ನಾಟಕಕ್ಕೆ CWRC ಮತ್ತೊಮ್ಮೆ ಆದೇಶ

ದೆಹಲಿ: ತಮಿಳುನಾಡಿಗೆ ಮರ್ತಷ್ಟು ನೀರು ಹರಿಸಬೇಕೆಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWRC) ಕರ್ನಾಟಕಕ್ಕೆ ಇಂದು ಮತ್ತೆ ನಿರ್ದೇಶನ ನೀಡಿದೆ. ತಮಿಳುನಾಡಿಗೆ ನೀರು ಹರಿಸಬೇಕೆಂದು ಈ ಹಿಂದೆ ನೀಡಿದ್ದ ಆದೇಶದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು ಮತ್ತೆ ಸಭೆ ನಡೆಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ನ್ಯಾಯಾಧಿಕರಣ ಹಾಗೂ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪಾಲಿಸುವಂತೆ ಆದೇಶಿಸಿದೆ‌. ನವೆಂಬರ್ 23ರಿಂದ ಡಿಸೆಂಬರ್ 23ರವರಗೆ ಪ್ರತಿನಿತ್ಯ 2700 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ. ಡಿಸೆಂಬರ್​ ಅವಧಿಯಲ್ಲಿ 6 ಟಿಎಂಸಿ ನೀರು ಹರಿಸಬೇಕಿದೆ. ಜೊತೆಗೆ ಬಾಕಿ ಉಳಿಸಿಕೊಂಡಿರುವ 11 ಟಿಎಂಸಿ ನೀರು ಹರಿಸಬೇಕೆಂದು ತಮಿಳುನಾಡು ಸರ್ಕಾರ ಬೇಡಿಕೆ ಇ್ಟಿದೆ. ಆದರೆ, ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವೇ ಇಲ್ಲ ಎಂದು ಕರ್ನಾಟಕ ಸರ್ಕಾರ ವಾದ ಮಂಡಿಸಿದೆ. ವಾದವನ್ನು ಆಲಿಸಿದ ಪ್ರಾಧಿಕಾರ, ಕರ್ನಾಟಕಕ್ಕೆ ನವೆಂಬರ್ 23ರಿಂದ ಡಿಸೆಂಬರ್…

ಹಿಂದುಳಿದ ವರ್ಗಗಳ ಆಯೋಗದ ಅವಧಿ ವಿಸ್ತರಣೆ ಬೇಡ; ಸಿದ್ದರಾಮಯ್ಯ ಸರ್ಕಾರಕ್ಕೆ ಕೆಪಿಸಿಸಿ ಸಲಹೆ

ಬೆಂಗಳೂರು: ಜಾತಿ ಸಮೀಕ್ಷೆ ವಿಚಾರದಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿದ್ದು ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲೇ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಇದೇ ವೇಳೆ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಆದರೆ, ಸಿಎಂ ತೀರ್ಮಾನಕ್ಕೆ ಕಾಂಗ್ರೆಸ್ ಚಾಣಾಕ್ಷರು ವಿರೋಧ ವ್ಯಕ್ತಪಡಿಸುವ ಮೂಲಕ ರಾಜ್ಯ ರಾಜಕೀಯದಲ್ಲಿ ಕೋಲಾಹಲಕ್ಕೆ ಕಾರಣರಾಗಿದ್ದಾರೆ. ಸಿಎಂ ಅವರುವೀ ವಿಚಾರದಲ್ಲಿ ಆತುರದ ನಿರ್ಧಾರ ಬೇಡ ಎಂದು ಕಾಂಗ್ರೆಸ್ ಹಿರಿಯ ನಾಯಕರೇ ಸಲಹೆ ಮುಂದಿಟ್ಟಿದ್ದಾರೆ. ಅದರಲ್ಲೂ ಮಾಜಿ ಶಾಸಕರೂ ಆದ ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ಕುತೂಹಲದ ಕೇಂದ್ರಬಿಂದುವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅವಧಿ ವಿಸ್ತರಣೆ ಬೇಡ ಎಂದು ರಾಜಕೀಯ ವಿಶ್ಲೇಷಕರೂ ಆದ ರಮೇಶ್ ಬಾಬು ಸಿಎಂ ಅವರಿಗೆ ಪತ್ರ ಬರೆದಿದ್ದಾರೆ. ರಮೇಶ್ ಬಾಬು ಅವರ ಪತ್ರದಲ್ಲೇನಿದೆ..? ಕರ್ನಾಟಕ ರಾಜ್ಯ…

ಉತ್ತರಕಾಶಿ ಸುರಂಗದಲ್ಲಿ ಸಿಲುಕಿದವರ ರಕ್ಷಣೆ: ಯಶಸ್ವೀ ಹಂತದಲ್ಲಿ ಕಾರ್ಯಾಚರಣೆ

ಉತ್ತರಕಾಶಿ: ಭೂಕುಸಿತಕ್ಕೊಳಗಾಗಿ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯ ಯಶಸ್ಸಿನ ಹಂತದಲ್ಲಿದ್ದು, ಶುಕ್ರವಾರದೊಳಗೆ ಎಲ್ಲರನ್ನೂ ಸುರಂಗದಿಂದ ಹೊರತರಬಹುದೆಂದು ಅಧಿಕಾರಿಗಳು ಹೇಳಿದ್ದಾರೆ. ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆ ಬಿರುಸಿನಿಂದ ಸಾಗಿದ್ದು, ಗುರುವಾರ ಮುಂಜಾನೆ ಕಾರ್ಮಿಕರಿರು ಇರುವ ಸ್ಥಳಕ್ಕೆ ಸಮೀಪವೆಂಬಂತೆ ತಲುಪಲಾಗಿದೆ. ಕೊನೆಯ ಪೈಪ್ ನ್ನು ಪ್ರವೇಶಿಸಿ ಸಿಕ್ಕಿಬಿದ್ದ ಕಾರ್ಮಿಕರನ್ನು ಅವಶೇಷಗಳ ಮೂಲಕ ತಳ್ಳುವ ಮಾರ್ಗವನ್ನು ಸಿದ್ಧಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.‌ ಕಾರ್ಮಿಕರನ್ನು ಸ್ಥಳಾಂತರಿಸಿದ ನಂತರ ತಕ್ಷಣವೇ ವೈದ್ಯಕೀಯ ಚಿಕಿತ್ಸೆಗೂ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಸುರಂಗದಿಂದ ಹೊರತರುವ ಕಾರ್ಮಿಕರನ್ನು ತಕ್ಷಣಕ್ಕೆ ಚಿಕಿತ್ಸೆಗೆ ಕರೆದೊಯ್ಯಲು 41 ಆಂಬ್ಯುಲೆನ್ಸ್‌ಗಳನ್ನು ಸಜ್ಜುಗೊಳಿಸಲಾಗಿದೆ. ಹಾಗೂ ಅಗತ್ಯ ಸಂದರ್ಭದಲ್ಲಿ ಹೆಲಿಕಾಪ್ಟರ್‌ ಬಳಕೆಗೂ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಚಿನ್ಯಾಲಿಸೌರ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ 41 ಹಾಸಿಗೆಗಳ ಪ್ರತ್ಯೇಕ ವಾರ್ಡನ್ನು ಸಿದ್ಧಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವೆಂಬರ್ 28 ರವರೆಗೆ ರಾಜ್ಯದಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿ ಮಲೆನಾಡಿನಲ್ಲಿ ನವೆಂಬರ್ 28ರವರೆಗೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 23.11.2023 ರಿಂದ 01.12.2023 ರವರೆಗೆ ಮಳೆಯ ಮುನ್ಸೂಚನೆ: ನವೆಂಬರ್ 28 ರವರೆಗೆ ರಾಜ್ಯದಾದ್ಯಂತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. KSNDMC Rainfall forecast as of 23.11.2023 till 01.12.2023: Isolated to scattered with very light to moderate rains likely over the State till 28th Nov. pic.twitter.com/fPWgLZUwbD — Karnataka State Natural Disaster Monitoring Centre (@KarnatakaSNDMC) November 23, 2023 ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ…

ಆನ್‌ಲೈನ್‌ ಗೇಮಿಂಗ್‌ ಚಟ; ಕಳೆದುಕೊಂಡ ಹಣ ಸರಿದೂಗಿಸಲು ಎಳನೀರು ಕದಿಯುತ್ತಿದ್ದ ಭೂಪ ಅರೆಸ್ಟ್

ಟ್ಯಾಕ್ಸಿ ಚಾಲಕನೊಬ್ಬ ತನ್ನ ಆನ್‌ಲೈನ್‌ ಗೇಮಿಂಗ್‌ ಚಟಕ್ಕಾಗಿ ರಸ್ತೆ ಬದಿ ಎಳ ನೀರು ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರಿನ ಗಿರಿನಗರ ಪೊಲೀಸರು ಈತನನ್ನು ಬಂಧಿಸಿದ್ದು, ಈತ ತಮಿಳುನಾಡು ಮೂಲದ ಮೋಹನ್‌ ಎಂಬ ಹೆಸರಿನಲ್ಲಿ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ. ಈತ ಸಿಕ್ಕಿಬಿದ್ದಿದ್ದು ಹೀಗೆ.. ಬೆಂಗಳೂರಿನ ಗಿರಿನಗರದ ಮಂಕುತಿಮ್ಮ ಪಾರ್ಕ್‌ ಬಳಿ ಫ‌ುಟ್‌ಪಾತ್‌ ಮೇಲೆ ಎಳನೀರು ವ್ಯಾಪಾರ ಮಾಡುತ್ತಿದ್ದ ರಾಜಣ್ಣ ಎಂಬುವರು ನ.6ರಂದು ಸುಮಾರು 1,150 ಎಳನೀರು ತರಿಸಿದ್ದರು. ರಾತ್ರಿ ಟಾರ್ಪಲ್‌‌ನಿಂದ ಮುಚ್ಚಿ ಮನೆಗೆ ತೆರಳಿದ್ದರು. ಮರು ದಿನ ನೋಡಿದಾಗ ಸಾವಿರಾರು ಎಳನೀರುಗಳು ಕಳುವಾಗಿದ್ದವು. ಈ ಬಗ್ಗೆ ರಾಜಣ್ಣ ಅವರು ಗಿರಿನಗರ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಕಾರ್ಯಾಚರಣೆಗಿಳಿದ ಪೊಲೀಸರು ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಹಲವು ತಿಂಗಳಿನಿಂದ ಈತ ಎಳನೀರು ಕಳ್ಳತನ ಮಾಡುತ್ತಿದ್ದ ಸಂಗತಿಯನ್ನು ಬೆಳಕಿಗೆ ತಂದಿರುವ ಪೊಲೀಸರು, ಈತ ತನ್ನ ಆನ್‌ಲೈನ್…

ವಿದ್ಯುತ್ ಅವಘಡಕ್ಕೆ ತಾಯಿ, ಮಗು ಸಾವು ಪ್ರಕರಣ; ಸಚಿವ ಜಾರ್ಜ್ ರಾಜೀನಾಮೆಗೆ ಬಿಜೆಪಿ ಪಟ್ಟು 

ಬೆಂಗಳೂರು : ತಾಯಿ, ಮಗು ಬಲಿ ಪಡೆದ ವಿದ್ಯುತ್ ಅವಘಡ ಪ್ರಕರಣದ ಬಗ್ಗೆ ಸಬೂಬುಗಳನ್ನು ಹೇಳುವುದನ್ನು ಬಿಟ್ಟು ನೈತಿಕ ಹೊಣೆ ಹೊತ್ತು ಇಂಧನ ಸಚಿವ ಕೆ.ಜೆ. ಜಾಜ್೯ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ವೈರ್ ಗಳಿಗೆ ಇಲಿ ಕಚ್ಚಿ ಘಟನೆ ಸಂಭವಿಸಿದೆ ಎಂಬ ನೆಪ ಹೇಳಿ ತಿಪ್ಪೆ ಸಾರಿಸುವ ಮಟ್ಟಕ್ಕೆ ಸಚಿವರು ಇಳಿದಿರುವುದು ನೀಚತನದ ಪರಮಾವಧಿ ಎಂದು ಅವರು ಕಿಡಿ ಕಾರಿದ್ದಾರೆ. ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಕೊರತೆಯೇ ದುರಂತಕ್ಕೆ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಆದರೂ, ಹೊಣೆಗಾರಿಕೆಯಿಂದ ನುಣುಚಿಕೊಂಡು ಸಂವೇದನಾ ರಹಿತರಾಗಿ ಸಚಿವ ಜಾಜ್೯ ವರ್ತಿಸುತ್ತಿರುವುದು ಸರಕಾರಕ್ಕೆ ಶೋಭೆ ತರುವುದಿಲ್ಲ ಎಂದು ಲೇವಡಿ ಮಾಡಿದ್ದಾರೆ. ತನಿಖೆಗೆ ನಾಲ್ಕು ಸಮಿತಿ ರಚಿಸಿರುವುದಾಗಿ ಜಾರ್ಜ್ ಅವರೇ ಹೇಳಿದ್ದಾರೆ. ತನಿಖೆ ಮುಗಿದು ವರದಿ ಕೈ ಸೇರುವ ಮೊದಲೇ ಇಲಿ ಮೇಲೆ ಎತ್ತಿಹಾಕುತ್ತಿರುವ…

ದೊಡ್ಡಬಳ್ಳಾಪುರದಲ್ಲಿ ಟಫ್ ರೂಲ್ಸ್; ಸಂಚಾರ ನಿಯಮ ಉಲ್ಲಂಘಿಸಿದರೆ ಕೇಸ್

ದೊಡ್ಡಬಳ್ಳಾಪುರ ನಗರದಲ್ಲಿ ಕಡ್ಡಾಯ ಏಕಮುಖ ಸಂಚಾರ ನಿಯಮ ಜಾರಿ.. ಮನಸೋಇಚ್ಛೆ ರಸ್ತೆಗಳಲ್ಲಿ ಮಾಡುವಂತಿಲ್ಲ ಪಾರ್ಕಿಂಗ್.‌. ಸಂಚಾರಿ ನಿಯಮಗಳ ಪಾಲನೆ ಕಡ್ಡಾಯ.. ಸಂಚಾರ ದಟ್ಟಣೆ ತಪ್ಪಿಸಲು ಸಿಪಿಐ ಪಣ.. ದೊಡ್ಡಬಳ್ಳಾಪುರ: ಎಲ್ಲೆಂದರಲ್ಲಿ ನಿಲ್ಲಿಸುತ್ತಿದ್ದ ವಾಹನಗಳಿಗೆ ಕಡಿವಾಣ, ಮನಸೋಇಚ್ಛೆ ರಸ್ತೆಗಳಲ್ಲಿ ನುಗ್ಗುತ್ತಿದ್ದ ಚಾಲಕರು ಹಾಗೂ ಬೈಕ್ ಸವಾರರಿಗೆ ಮೂಗುದಾರ ಹೀಗೆ ಕಠಿಣ ಕ್ರಮಗಳ ಮೂಲಕ ನಗರದಲ್ಲಿ ಸಂಚಾರ ದಟ್ಟಣೆ ತಪ್ಪಿಸಿ ಪಟ್ಟಣದ ಸೌಂದರ್ಯ ಹೆಚ್ಚಿಸಲು ಮುಂದಾಗಿರುವ ನಗರ ಠಾಣಾ ಪೊಲೀಸರು ಸಂಚಾರ ಹಾಗೂ ಪಟ್ಟಣದಲ್ಲಿ ಹಲವಾರು ಬದಲಾವಣೆಗಳನ್ನು ಜಾರಿಗೆ ತಂದಿದ್ದಾರೆ. ಸುಗಮ ಸಂಚಾರಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ. ನಿಯಮಗಳ ಪಾಲನೆ ಮಾಡದಿದ್ದಲ್ಲಿ ದಂಡಂ, ದಶಗುಣಂ ಕಟ್ಟಿಟ್ಟಬುತ್ತಿ ಎನ್ನುತ್ತಾರೆ ಪೊಲೀಸರು. ಹೆಲ್ಮೆಟ್, ಸೀಟ್ ಬೆಲ್ಟ್, ಧರಿಸದೇ ಚಾಲನೆ, ಮಿತಿಮೀರಿದ ವೇಗ, ಅಡ್ಡಾದಿಡ್ಡಿ ಚಾಲನೆ, ಸಿಗ್ನಲ್ ಜಂಪ್‌, ಎಲ್ಲೆಂದರಲ್ಲಿ ವಾಹನ ನಿಲುಗಡೆ, ದಾಖಲೆಗಳಿಲ್ಲದೇ ವಾಹನ ಚಾಲನೆ, ವಾಹನಗಳಿಗೆ ವಿಮೆ ಇಲ್ಲದೆ ಚಾಲನೆ ಹೀಗೆ…

ಸೋನಿಯಾ-ರಾಹುಲ್ ಕುಟುಂಬಕ್ಕೆ ಶಾಕ್.. EDಯಿಂದ 752 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲು

ದೆಹಲಿ: ಸೋನಿಯಾ-ರಾಹುಲ್ ಕುಟುಂಬಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ.) ಶಾಕ್ ನೀಡಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯವು ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಸಂಬಂಧಿಸಿದ ಕಂಪನಿಗಳ 752 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಸೋನಿಯಾ, ರಾಹುಲ್ ಗಾಂಧಿ ಸಹಿತ ಪ್ರಮುಖರನ್ನು ಕೆಲ ಸಮಯದ ಹಿಂದೆಯೇ ವಿಚಾರಣೆಗೆ ಗುರಿಪಡಿಸಿತ್ತು. ಇದೀಗ ಅವರಿಗೆ ಸಂಬಂಧಿಸಿದ್ದೆನ್ನಲಾದ ದೆಹಲಿ ಮತ್ತು ಮುಂಬೈನಲ್ಲಿರುವ ನ್ಯಾಷನಲ್ ಹೆರಾಲ್ಡ್ ಹೌಸ್ ಮತ್ತು ಲಕ್ನೋದ ನೆಹರು ಭವನ ಸಹಿತ ಪ್ರಮುಖ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಈ ಪ್ರಕರಣದ ತನಿಖೆ ಕೈಗೊಂಡಿದ್ದು, ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ದೆಹಲಿ, ಮುಂಬೈ , ಲಖನೌ ಸೇರಿದಂತೆ ಹಲವೆಡೆಯ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.

RSS ಮುಟ್ಟಿದರೆ ಸರ್ವನಾಶ ಆಗ್ತೀರಿ.. ತಾಕತ್ತಿದ್ದರೆ ಮುಟ್ಟಿ ನೋಡಿ.. ಕಾಂಗ್ರೆಸ್ ವಿರುದ್ದ ತೊಡೆ ತಟ್ಟಿದ ಆರ್.ಅಶೋಕ್

ಕಲಬುರಗಿ : ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಗೂಂಡಾ ಸಂಸ್ಕೃತಿ ತಲೆ ಎತ್ತುತ್ತದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿ ಕಾರಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುದ ಅವರು, ಬಿಜೆಪಿ ಕಾರ್ಯಕರ್ತನ ಮೇಲೆ ಕಲಬುರಗಿಯಲ್ಲಿ ವಿನಾ ಕಾರಣ ಹಲ್ಲೆ ನಡೆಸಿರುವ ಘಟನೆ ಇದಕ್ಕೆ ಸಾಕ್ಷಿ. ಉಡುಪಿಯಲ್ಲಿ ಇಬ್ಬರು ಭಜರಂಗದಳ ಕಾರ್ಯಕರ್ತರನ್ನು ಗಡಿಪಾರು ಮಾಡಲಾಗಿದೆ. ಹಿಂದೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 23 ಹಿಂದೂಗಳ ಹತ್ಯೆ ಮಾಡಲಾಯಿತು. ಎಲ್ಲೆಡೆ ಹಿಂದೂಗಳನ್ನು ಗುರಿಯಾಗಿಸಿ ಹಲ್ಲೆ, ಹತ್ಯೆ ಯತ್ನಗಳು ಹೆಚ್ಚುತ್ತಿವೆ. ಇದು ಗೂಂಡಾ ರಾಜ್ಯವಾಗಿ ಪರಿವರ್ತನೆ ಆಗಿದೆ ಎಂದು ದೂರಿದರು. RSS ಸಂಘಟನೆಯನ್ನು ಮುಟ್ಟಿದ್ರೆ ಕಾಂಗ್ರೆಸ್ ಸರ್ವನಾಶ ಆಗುತ್ತೆ ಎಂದು ಅಶೋಕ್ ಎಚ್ಚರಿಕೆ ನೀಡಿದರು. ಸರ್ಕಾರದ ಇಲಾಖೆಗಳು ಬಿಜೆಪಿ ಅವಧಿಯಲ್ಲಿ RSS ಶಾಖೆಗಳಾಗಿದ್ದವು, ಈಗ ಅವುಗಳನ್ನು ಕ್ಲೀನ್ ಮಾಡಲಾಗುತ್ತಿದೆ ಎಂಬ ಕಾಂಗ್ರೆಸ್ ಮುಖಂಡರ ಹೇಳಿಕೆ ಬಗ್ಗೆ ಕಿಡಿ ಕಾರಿದ ಅಶೋಕ್, ಧಮ್ಮು ತಾಕತ್ತು ಇದ್ದರೆ…