ದೆಹಲಿ: 2023ರ ಏಕದಿನ ವಿಶ್ವಕಪ್ ಕ್ರಿಕೆಟ್ ಕ್ಲೈಮಾಕ್ಸ್ ಘಟ್ಟದಲ್ಲಿದ್ದು ಮೋದಿ ಕ್ರೀಡಾಂಗಣದತ್ತ ಎಲ್ಲರ ಚಿತ್ತ ನೆಟ್ಟಿದೆ. ಅದಾಗಲೇ ಸರಣಿ ಶ್ರೇಷ್ಠರು ಯಾರಾಗುತ್ತಾರೆ ಎಂಬ ಕುತೂಹಲವೂ ಎಲ್ಲರನ್ನು ಕಾಡುತ್ತಿದೆ. ಭಾನುವಾರ ಭಾರತ ಮತ್ತು ಆಸ್ಟ್ರೇಲಿಯಾ ತಂಡದ ಮಧ್ಯೆ ಗುಜರಾತ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಿಶ್ವಕಪ್‌ನ ಕೊನೆಯ ಪಂದ್ಯ ನಡೆಯಲಿದೆ. ಇದೇ ವೇಳೆ, ಸರಣಿ ಶ್ರೇಷ್ಠ ಪ್ರಶಸ್ತಿಗಾಗಿ 9 ಆಟಗಾರರನ್ನು ಐಸಿಸಿ ಪಟ್ಟಿ ಮಾಡಿದೆ. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಆಸೀಸ್ ತಂಡದ ಆಡಮ್ ಝಂಪಾ, ಮ್ಯಾಕ್ಸ್ವೆಲ್ , ನ್ಯೂಜಿಲೆಂಡ್‌ನ ಡೇರಿಲ್ ಮಿಚೆಲ್ ಮತ್ತು ರಚಿನ್ ರವೀಂದ್ರ ಹೆಸರುಗಳು ಈ ಪಟ್ಟಿಯಲ್ಲಿ ಇದೆ ಎನ್ನಲಾಗುತ್ತಿದೆ.
Year: 2023
‘ಸ್ಪೀಕರ್ ಸ್ಥಾನವನ್ನು ಜಾತಿ ಧರ್ಮ ಬಿಟ್ಟು ನೋಡಬೇಕು, ನಾನು ಎಲ್ಲರ ಸ್ಪೀಕರ್’; ಜಮೀರ್ ಹೇಳಿಕೆಗೆ ಯು.ಟಿ.ಖಾದರ್ ಆಕ್ಷೇಪ
ಮಂಗಳೂರು: ರಾಜ್ಯ ರಾಜಕಾರಣದಲ್ಲಿ ವಿವಾದದ ಬಿರುಗಾಳಿ ಎಬ್ಬಿಸಿರುವ ಸಚಿವ ಜಮೀರ್ ಅಹ್ಮದ್ ಅವರ ಮುಸ್ಲಿಂ ಸ್ಪೀಕರ್ ಬಗೆಗಿನ ಹೇಳಿಕೆಗೆ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಪ್ರತಿಕ್ರಿಯೆ ನೀಡಿರುವ ಅವರು, ಸ್ಪೀಕರ್ ಸ್ಥಾನವನ್ನು ರಾಜಕೀಯ, ಜಾತಿ ಧರ್ಮದಿಂದ ನೋಡುವಂತಿಲ್ಲ. ನಾನು ಎಲ್ಲರ ಸ್ಪೀಕರ್ ಎಂದು ಹೇಳಿದ್ದಾರೆ. ಇದು ಸಂವಿಧಾನ ಬದ್ಧವಾದ ಸ್ಥಾನವಾಗಿದ್ದು, ಗೌರವ ಸಲ್ಲುವುದಲ್ಲ, ಸಂವಿಧಾನ ಪೀಠಕ್ಕೆ ಮತ್ತು ಸಭಾಧ್ಯಕ್ಷ ಸ್ಥಾನಕ್ಕೆ ಸಲ್ಲುವುದು. ಅಲ್ಲಿ ಕೂರುವ ನಾವು ಗೌರವ ಉಳಿಸುವ ಕೆಲಸ ಮಾಡಬೇಕು ಎಂದು ಯು.ಟಿ.ಖಾದರ್ ಪ್ರತಿಪಾದಿಸಿದ್ದಾರೆ. ಯಾರ ಹೇಳಿಕೆಗೂ ಪ್ರತಿಕ್ರಿಯಿಸುವುದಿಲ್ಲ ಎಂದಿರುವ ಅವರು, ಸಂವಿಧಾನಕ್ಕೆ ಅನುಗುಣವಾಗಿ ಕೆಲಸ ಮಾಡುತ್ತೇನೆ. ನಾನು ಎಲ್ಲರಿಗೂ ಗೌರವ ಕೊಟ್ಟು ಗೌರವ ಪಡೆಯುತ್ತೇನೆ. ಎಲ್ಲರ ಸ್ಪೀಕರ್ ಆಗಿ ಕೆಲಸ ನಿರ್ವಹಿಸುತ್ತೇನೆ. ಸ್ಪೀಕರ್ ಸ್ಥಾನವನ್ನು ಜಾತಿ ಧರ್ಮ ಬಿಟ್ಟು ನೋಡಬೇಕು ಎಂದು ಹೇಳಿದ್ದಾರೆ.
‘ಕೈ’ ಸರ್ಕಾರದಿಂದಲೂ ಪಾರದರ್ಶಕ ಆಡಳಿತ ಮರೀಚಿಕೆ..! RTI ಕಾರ್ಯಕರ್ತರ ಆಕ್ರೋಶ ಸ್ಫೋಟ
ಬೆಂಗಳೂರು: ಹಿಂದಿನ ಬೊಮ್ಮಾಯಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುತ್ತಾ ಆಡಳಿತಕ್ಕೆ ಬಂದಿರುವ ಸಿದ್ದರಾಮಯ್ಯ ಸರ್ಕಾರದ ವಿರುದ್ದವೂ ರಾಜ್ಯದ ಜನರಲ್ಲಿ ಅನುಮಾನ ಮೂಡುವಂತಾಗಿದೆ. ಪಾರದರ್ಶಕ ಆಡಳಿತಕ್ಕೆ ಸಾಕ್ಷಿಯಾಗುವಂತಹಾ ಮಾಹಿತಿ ಹಕ್ಕು ಕಾಯಿದೆ ವಿಚಾರದಲ್ಲಿ ಸಿದ್ದರಾಮಯ್ಯ ಸರ್ಕಾರ ಕಣ್ಣಾ-ಮುಚ್ಚಾಳೆ ಆಡುತ್ತಿದ್ದು ‘ಸಿಟಿಜನ್ಸ್’ ವಿಶ್ವಾಸ ಕಳೆದುಕೊಳ್ಳುವಂತಿದೆ. ಇದಕ್ಕೆ ಸಾಕ್ಷೀಯಾಗಿದೆ ಈ ಬೆಳವಣಿಗೆ. ಮಾಹಿತಿ ಹಕ್ಕು ವಿಚಾರದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕಚೇರಿಯೇ ಎಡವಟ್ಟು ಮಾಡುತ್ತಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬಂದಾಗ ಮಾಹಿತಿ ಹಕ್ಕು ಕಾಯ್ದೆಯಡಿ ಸಾರ್ವಜನಿಕರು ದಾಖಲೆಗಳನ್ನು ಕೋರಿ ಅರ್ಜಿ ಸಲ್ಲಿಸುವುದು ಸಾಮಾನ್ಯ. ಆದರೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಕಚೇರಿ ಈ ಹೊಣೆಗಾರಿಕೆಯಿಂದ ಪಾರಾಗಲು RTI ನಿಯಮವನ್ನೇ ಉಲ್ಲಂಘಿಸುತ್ತಿದೆ. RTI ಅರ್ಜಿಗಳಿಗೆ ”ಕೋರಿರುವ ಮಾಹಿತಿ ಈ ಕಚೇರಿಯಲ್ಲಿ ಲಬ್ಯವಿರುವುದಿಲ್ಲ’ ಎಂಬ ರೆಡಿಮೇಡ್ ಉತ್ತರ ನೀಡುತ್ತಿದೆ. ಸಿದ್ದು ಸರ್ಕಾರಕ್ಕೆ RTI ಕಾರ್ಯಕರ್ತರ…
ರಾಜ್ಯದ 28 ಲೋಕಸಭಾ ಸ್ಥಾನಗಳಲ್ಲೂ ಬಿಜೆಪಿ ಗೆಲುವು: ಆರ್.ಅಶೋಕ್ ಪಣ
ಬೆಂಗಳೂರು: ರಾಜ್ಯದ ಎಲ್ಲ 28 ಲೋಕಸಭಾ ಸ್ಥಾನಗಳಲ್ಲೂ ಬಿಜೆಪಿ ಗೆಲುವು ಸಾಧಿಸಲು ಶ್ರಮಿಸುವುದಾಗಿ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ಮಾಜಿ ಸಚಿವ ಆರ್.ಅಶೋಕ್ ಹೇಳಿದ್ದಾರೆ.. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ನಮಗಿಂದು ಮೋದಿಜೀ, ನಡ್ಡಾಜೀ, ಅಮಿತ್ ಶಾಜೀ ಅವರಂಥ ಪ್ರಬಲ ನಾಯಕತ್ವ ಸಿಕ್ಕಿದೆ. ಕಳೆದ 6 ತಿಂಗಳ ಕಾಂಗ್ರೆಸ್ ದುರಾಡಳಿತ, ಭ್ರಷ್ಟಾಚಾರ, ಸ್ವತಃ ಮುಖ್ಯಮಂತ್ರಿಗಳ ಮಗ ವರ್ಗಾವಣೆ ದಂಧೆಯಲ್ಲಿ ಪಾಲ್ಗೊಂಡಿದ್ದನ್ನು ಕಂಡು ಜನರೂ ಬೇಸತ್ತಿದ್ದಾರೆ. ಬೆಂಗಳೂರು ಗ್ರಾಮಾಂತರ, ಕನಕಪುರ ಸೇರಿ ರಾಜ್ಯದ 28ಕ್ಕೆ 28 Àಸ್ಥಾನಗಳಲ್ಲಿ ನಾವು ಗೆಲ್ಲುತ್ತೇವೆ. ಕಳೆದ ಬಾರಿಯ 25 ಸ್ಥಾನಗಳ ಬದಲು 28 ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಳೆದ ವಿಧಾನಸಭೆಯಲ್ಲಿ 66 ಶಾಸಕರು ಕೂಡ ವಿರೋಧ ಪಕ್ಷದ ನಾಯಕರಿಲ್ಲದೆ ಸಮರ್ಥ ವಿಪಕ್ಷವಾಗಿ ಕೆಲಸ ಮಾಡಿದ್ದೇವೆ. ಪ್ರಬಲವಾದ ಹೋರಾಟವನ್ನು ಬಿಜೆಪಿ…
ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಅಶೋಕ್‌ಗೆ ವಿಜಯೇಂದ್ರ ಅಭಿನಂದನೆ
ಬೆಂಗಳೂರು: ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗುವ ಮೂಲಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಹೊರ ಹೊಮ್ಮಿರುವ ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಆರ್.ಅಶೋಕ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿನಂದಿಸಿಸ್ದಾರೆ. ತಮ್ಮ ಹಿರಿತನ, ಸುದೀರ್ಘ ಅನುಭವ ಹಾಗೂ ಹೋರಾಟದ ಹಿನ್ನಲೆಯಲ್ಲಿ ಜನರ ದನಿಯಾಗಿ ಸರ್ಕಾರದ ಜನ ವಿರೋಧಿ ನಿಲುವುಗಳ ವಿರುದ್ಧ ಸದನದ ಒಳಗೆ, ಹಾಗೂ ಹೊರಗೆ ಸಮರ್ಥವಾಗಿ ಹೋರಾಡುವ ಶಕ್ತಿ ನಿಮಗೆ ಲಭಿಸಲೆಂದು ಹೃದಯ ತುಂಬಿ ಹಾರೈಸುತ್ತೇನೆ. ರಾಜ್ಯ ಬಿಜೆಪಿ ಸದಾ ನಿಮ್ಮೊಂದಿಗಿರಲಿದೆ ಎಙದವರು ಹೇಳಿದ್ದಾರೆ. ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಸುಸೂತ್ರವಾಗಿ ನಡೆಯಲು ವೀಕ್ಷಕರಾಗಿ ಆಗಮಿಸಿ ಮಾರ್ಗದರ್ಶನ ನೀಡಿದ ಕೇಂದ್ರ ಹಣಕಾಸು ಸಚಿವರಾದ ನಿರ್ಮಲ ಸೀತಾರಾಮ್, ಕೇಂದ್ರೀಯ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯ ಯಡಿಯೂರಪ್ಪ,, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಹಿತ ಬಿಜೆಪಿ…
ವಿಧಾನಸಭೆಯ ಪ್ರತಿಪಕ್ಷ ನಾಯಕನಾಗಿ ಆರ್.ಅಶೋಕ್ ಆಯ್ಕೆ
ಬೆಂಗಳೂರು: ವಿಧಾನಸಭೆಯ ಪ್ರತಿಪಕ್ಷ ನಾಯಕನಾಗಿ ಆರ್.ಅಶೋಕ್ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಪದ್ಮನಾಭನಗರದ ಶಾಸಕ ಆರ್.ಅಶೋಕ್ ಅವರನ್ನು ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಲಾಯಿತು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯ ನಂತರ ಆರ್.ಅಶೋಕ್ ಹೆಸರು ಘೋಷಣೆ ಮಾಡಲಾಯಿತು. ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅಶೋಕ್ ಹೆಸರನ್ನು ಸೂಚಿಸಿದರೆ, ಮಾಜಿ ಸಚಿವ ಸುನಿಲ್ ಕುಮಾರ್ ಅವರು ಅನುಮೋದಿಸಿದರು.
ಕಣಿವೆ ರಾಜ್ಯದಲ್ಲಿ ಗುಂಡಿನ ಕಾಳಗ: ಸೇನಾ ಕಾರ್ಯಾಚರಣೆಯಲ್ಲಿ ಐವರು ಉಗ್ರರ ಹತ್ಯೆ
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದದಲ್ಲಿ ಉಗ್ರರ ವಿರುದ್ದ ಸೇನೆ ಭರ್ಜರಿ ಕಾದಾಟ ನಡೆಸಿದೆ. ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಹಾಗೂ ಭದ್ರತಾ ಪಡೆ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಐವರು ಲಷ್ಕರ್ ಭಯೋತ್ಪಾದಕರನ್ನು ಯೋಧರು ಹತ್ಯೆ ಮಾಡಿದ್ದಾರೆ. ಕಣಿವೆ ರಾಜ್ಯದಲ್ಲಿ ಉಗ್ರರು ಅವಿತು ಭಾರೀ ವಿಧ್ವಂಸಕ್ಕೆ ಸಂಚು ರೂಪಿಸಿರುವ ಬಗ್ಗೆ ಮಾಹಿತಿ ಕಳೆಹಾಕಿರುವ ಭದ್ರತಾ ಪಡೆ ಬೆಳ್ಳಂಬೆಳಿಗ್ಗೆಯೇ ಕಾರ್ಯಾಚರಣೆಗಿಳಿದಿದೆ. ಕುಲ್ಗಾಮ್‌ನಲ್ಲಿ ಉಗ್ರರು ಅವಿತಿದ್ದ ಸ್ಥಳಕ್ಕೆ ಲಗ್ಗೆ ಹಾಕಿದ ಯೋಧರತ್ತ ಶಂಕಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ ಈ ವೇಳೆ ನಡೆದ ಗುಂಡಿನ ಕಾಳಗದಲ್ಲಿ ಐವರು ಉಗ್ರರು ಭದ್ರತಾ ಪಡೆಯ ಗುಂಡಿಗೆ ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿದ್ದಾರೆ.
ಕರಾವಳಿಯ ಖ್ಯಾತ ವೈದ್ಯ ಡಾ.ಜಿ.ಜಿ.ಲಕ್ಷ್ಮಣ ಪ್ರಭು ವಿಧಿವಶ; ಗಣ್ಯರ ಕಂಬನಿ
ಮಂಗಳೂರು: ಕರಾವಳಿಯ ಖ್ಯಾತ ವೈದ್ಯ ಡಾ.ಜಿ.ಜಿ.ಲಕ್ಷ್ಮಣ ಪ್ರಭು ಅವರು ಇಂದು ನಿಧನ ಹೊಂದಿದ್ದಾರೆ. 61 ವರ್ಷ ವಯಸ್ಸಿನ ಡಾ.ಜಿ.ಜಿ.ಲಕ್ಷ್ಮಣ ಪ್ರಭು, ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದರು ವಾರದ ಹಿಂದೆ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿರುವಾಗ ಹೃದಯಾಘಾತಕ್ಕೆ ಒಳಗಾಗಿದ್ದ ಅವರು ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಅವರು ಶುಕ್ರವಾರ ಬೆಳಿಗ್ಗೆ ವಿಧಿವಶರಾದರು ಎಂದು ಮೂಲಗಳು ತಿಳಿಸಿವೆ.
ನಾಡಿನ ಅಧಿದೇವತೆ ಚಾಮುಂಡೇಶ್ವರಿಗೂ ‘ಗೃಹಲಕ್ಷ್ಮೀ’ ಯೋಜನೆಯ 2000 ರೂ
ಬೆಂಗಳೂರು: ನಾಡಿನ ಅಧಿದೇವರೆ ಚಾಮುಂಡೇಶ್ವರಿಗೂ ‘ಗೃಹಲಕ್ಷ್ಮೀ’ ಯೋಜನೆಯ 2000 ರೂ ನೀಡಲಾಗುತ್ತೆ. ಈ ಕುರಿತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸೂಚನೆ ನೀಡಿದ್ದಾರೆ. ಏನೇ ಕಾರ್ಯಕ್ರಮ ನಡೆಯುವುದಿದ್ದರೂ ಆರಂಭದಲ್ಲಿ ದೇವರಿಗೆ ಹರಕೆ ಸಮರ್ಪಣೆಯು ಅನಾದಿ ಕಾಲದಿಂದಲೂ ಆಸ್ತಿಕರು ಅನುಸರಿಸಿಕೊಂಡು ಬಂದಿರುವ ಸಂಪ್ರದಾಯ. ಅದರಂತೆ, ಮಹತ್ವಾಕಾಂಕ್ಷೆಯ ಗ್ಯಾರೆಂಟಿ ಯೋಜನೆಗಳಲ್ಲೊಂದಾದ ‘ಗೃಹಲಕ್ಷ್ಮಿ’ ಯೋಜನೆ ಸುಸೂತ್ರ ಜಾರಿಯ ಸಂಬಂಧ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ಹರಿಕೆ ಸಲ್ಲಿಸುವಂತೆ ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷರೂ ಆದ ಶಾಸಕ ದಿನೇಶ್ ಗೂಳಿಗೌಡ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಲಹೆ ನೀಡಿದ್ದರು. ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದು ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡುವ ಮುನ್ನ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಎರಡು ಸಾವಿರ ರೂಪಾಯಿಗಳನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ…
FIRಗೆ ಹೈಕೋರ್ಟ್ ತಡೆ: ಸೂಲಿಬೆಲೆ ನಿರಾಳ
ಧಾರವಾಡ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದದಲ್ಲಿ ಸಿಲುಕಿರುವ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ನಿರಾಳರಾಗಿದ್ದಾರೆ. ಅವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಧಾರವಾಡದ ಹೈಕೋರ್ಟ್ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅಕ್ಟೋಬರ್ 3 ರಂದು ಅವರು ಚಕ್ರವರ್ತಿ ಸೂಲಿಬೆಲೆ ಸಿಎಂ ಸಿದ್ದರಾಮಯ್ಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದಾಗಲೆಲ್ಲಾ ಹಿಂದೂಗಳು ತೊಂದರೆ ಎದುರಿಸುತ್ತಿದ್ದಾರೆ. ಮುಸ್ಲಿಮರನ್ನು ಬೆಂಬಲಿಸುವವರೆಗೂ ಇಂಥ ಘಟನೆಗಳು ನಡೆಯುತ್ತಲೇ ಇರುತ್ತವೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕಾರವಾರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಎಫ್‌ಐಆರ್ ರದ್ದುಪಡಿಸುವಂತೆ ಸೂಲಿಬೆಲೆ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಎಫ್‌ಐಆರ್‌ಗೆ ಮಧ್ಯಂತರ ತಡೆಯಾಜ್ಞೆ ಸಿಕ್ಕಿದ್ದು ಚಕ್ರವರ್ತಿ ಸೂಲಿಬೆಲೆ ಅವರು ನಿರಾಳರಾಗಿದ್ದಾರೆ.
