ಬೆಂಗಳೂರು: ರಾಜ್ಯದ ಮುಜರಾಯಿ ದೇವಾಲಯಗಳ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತೊಂದು ಚಾರಿತ್ರಿಕ ಆದೇಶ ಪ್ರಕಟಿಸಿದೆ. ಈ ಮೂಲಕ ಅರ್ಚಕರ ಸಮೂಹದ ಕೋರಿಕೆ ಈಡೇರಿದೆ. ರಾಜ್ಯದ ‘ಸಿ’ ವರ್ಗದ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅನುವಂಶಿಕ ಅರ್ಚಕರು ಮರಣ ಹೊಂದಿದ ಸಂದರ್ಭದಲ್ಲಿ/ ಗಂಭೀರವಾಗಿ ಅಸ್ವಸ್ಥರಾದಲ್ಲಿ / ಅಶಕ್ತರಾದಲ್ಲಿ ಅನುವಂಶಿಕ ಹಕ್ಕನ್ನು ವರ್ಗಾಯಿಸುವ ಸರಳ ಕ್ರಮ ಕೈಗೊಳ್ಳಬೇಕೆಂಬ ಬಹುಕಾಲದ ಬೇಡಿಕೆಗೆ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಅವರು ಅಸ್ತು ಎಂದಿದ್ದಾರೆ. ಈ ಸಂಬಂಧ ಸರಕಾರ ಮಹತ್ವದ ಆದೇಶ ಹೊರಡಿಸಿದೆ. ಸಚಿವರ ಆದೇಶದ ಹಿನ್ನೆಲೆಯಲ್ಲಿ ಸರ್ಕಾರ ಕೂಡಾ ಈ ಕುರಿತು ಆದೇಶ ಹೊರಡಿಸಿದ್ದು ಅರ್ಚಕರ ವಲಯದಲ್ಲಿ ಸಂತಸಕ್ಕೆ ಕಾರಣವಾಗಿದೆ. ಸರ್ಕಾರದ ಆದೇಶ ಸಂಖ್ಯೆ: ಕಂಇ 31 ಮುಸೇವಿ 2021 ದಿನಾಂಕ 21.08.2021ರಂತೆ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ‘ಸಿ’ ವರ್ಗದ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅನುವಂಶಿಕ ಅರ್ಚಕರು ಮರಣ ಹೊಂದಿದ ಸಂದರ್ಭದಲ್ಲಿ,…
Year: 2023
ಸಿಎಂ ರಾಜೀನಾಮೆ, ಡಾ.ಯತೀಂದ್ರ ಬಂಧನಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ನಿಲ್ಲಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ಕೊಡಬೇಕು ಹಾಗೂ ವರ್ಗಾವಣೆ ದಂಧೆ ಮಾಡುತ್ತಿರುವ ಡಾ.ಯತೀಂದ್ರರನ್ನು ತಕ್ಷಣ ಬಂಧಿಸಬೇಕು ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಒತ್ತಾಯಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಜನರಲ್ ಪವರ್ ಆಫ್ ಅಟಾರ್ನಿ (ಜಿಪಿಎ) ಸರಕಾರ ಇದೆ. ರಾಜ್ಯದಲ್ಲಿ ಸಿದ್ದರಾಮಯ್ಯರು ಅಧಿಕಾರ ಮಾಡುತ್ತಿಲ್ಲ. ಜಿಪಿಎ ಹೊಂದಿದ ಡಾ. ಯತೀಂದ್ರರು ಅಧಿಕಾರ ಮಾಡುತ್ತಿದ್ದಾರೆ. ಎಲ್ಲ ತೀರ್ಮಾನಗಳನ್ನು ಯತೀಂದ್ರರೇ ತೆಗೆದುಕೊಳ್ಳುತ್ತಾರೆ. ಕಾನೂನಿನಲ್ಲಿ ಹೀಗೆ ಮಾಡಲು ಬರುವುದಿಲ್ಲ ಎಂದು ನುಡಿದರು. ಇಂದು ನಿಮ್ಮ ಪ್ರಮಾಣವಚನಕ್ಕೆ ವಿರುದ್ಧವಾಗಿ ಡಾ.ಯತೀಂದ್ರರಿಂದ ಅಧಿಕಾರ ನಡೆದಿದೆ. ಸಿದ್ದರಾಮಯ್ಯನವರು 25 ವರ್ಷಗಳ ಹಿಂದಿನ ವ್ಯಕ್ತಿ ಆಗಿದ್ದರೆ ಇವತ್ತೇ ರಾಜೀನಾಮೆ ಕೊಡುತ್ತಾರೆ. ಪರಿವರ್ತಿತ ಸಿದ್ದರಾಮಯ್ಯ ಆಗಿದ್ದರೆ ಭಂಡತನದಿಂದ ಹೀಗೇ…
‘ಸಿಎಸ್ಆರ್ ಬಗ್ಗೆ ಮಾತನಾಡಿರೋದು..’ ಮಗನನ್ನು ಸಮರ್ಥಿಸಿಕೊಂಡ ಸಿಎಂ
ಬೆಂಗಳೂರು: ಯತೀಂದ್ರ ಅವರ ವೀಡಿಯೋ ವೈರಲ್ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ, ವರುಣ ಕ್ಷೇತ್ರದ ಶಾಲೆಗಳ ಅಭಿವೃದ್ದಿಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ನಡೆದಿರುವ ನನ್ನ ಮತ್ತು ನನ್ನಮಗನ ನಡುವಿನ ಪೋನ್ ಸಂಭಾಷಣೆಗೆ ವರ್ಗವಾವಣೆಯಲ್ಲಿ ವಸೂಲಿಯ ಕತೆ ಕಟ್ಟಿ ಕುಮಾರಸ್ವಾಮಿ ಕುಣಿದಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು ಮುಳುಗೇಳುತ್ತಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಕಾಮಾಲೆ ಕಣ್ಣಿಗೆ ನೋಡಿದ್ದು, ಕೇಳಿದ್ದೆಲ್ಲದರಲ್ಲಿಯೂ ಲಂಚದ ವ್ಯವಹಾರಗಳೇ ಕಾಣಿಸುತ್ತಿದೆ ಎಂದು ಎದಿರೇಟು ಕೊಟ್ಟಿದ್ದಾರೆ. ವರುಣ ಕ್ಷೇತ್ರದ ಶಾಲೆಗಳ ಅಭಿವೃದ್ದಿಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ನಡೆದಿರುವ ನನ್ನ ಮತ್ತು ನನ್ನಮಗನ ನಡುವಿನ ಪೋನ್ ಸಂಭಾಷಣೆಗೆ ವರ್ಗವಾವಣೆಯಲ್ಲಿ ವಸೂಲಿಯ ಕತೆ ಕಟ್ಟಿ ಕುಮಾರಸ್ವಾಮಿ ಕುಣಿದಾಡುತ್ತಿದ್ದಾರೆ. ಕುಮಾರಸ್ವಾಮಿಯವರ ಈ ಕ್ಷುಲಕ ನಡವಳಿಕೆ ಬಗ್ಗೆ ನಾನು ಕನಿಕರವನ್ನಷ್ಟೇ ವ್ಯಕ್ತಪಡಿಸಬಲ್ಲೆ ಎಂದಿದ್ದಾರೆ. ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ…
ವಿಜಯೇಂದ್ರ ನೇಮಕ ಬಹಳ ವರ್ಷ ಇರಲ್ಲ..! ‘ಕೈ’ ನಾಯಕರ ವಿಶ್ಲೇಷಣೆ
ವಿಜಯುಪುರ : ಯಡಿಯೂರಪ್ಪ ಅವರನ್ನು ಕಡೆಗಣಿಸಿದ್ದರಿಂದ ಬಿಜೆಪಿ ಹೀನಾಯ ಸೋಲು ಕಂಡಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಲಿಂಗಾಯತರನ್ನು ಸೆಳೆಯಲು ಬಿಜೆಪಿ ನಾಯಕರು ತಂತ್ರಗಾರಿಕೆ ನಡೆಸುತ್ತಿದ್ದಾರೆ. ಯಡಿಯೂರಪ್ಪ ಅವರನ್ನು ಬಳಕೆ ಮಾಡಿಕೊಂಡು ಬಿಸಾಡಲು ವಿಜಯೇಂದ್ರ ಅವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗಷ್ಟೇ ವಿಜಯೇಂದ್ರ ಅವರ ನೇಮಕ ಎಂಬಂತೆ ಬಿಜೆಪಿ ನಾಯಕರೇ ಹೇಳುತ್ತಿದ್ದಾರೆ ಎಂದು ಬೊಒಟ್ಟು ಮಾಡಿದರು. ವಿಜಯೇಂದ್ರ ನೇಮಕ ಬಹಳ ವರ್ಷ ಇರಲ್ಲ ಎಂಬ ಪರೋಕ್ಷ ಸಂದೇಶವನ್ನು ಬಿಜೆಪಿ ನಾಯಕರೇ ನೀಡಿದ್ದಾರೆ ಎಂದ ಎಂ.ಬಿ.ಪಾಟೀಲ್, ಬಿಜೆಪಿಯವರು ಯಡಿಯೂರಪ್ಪ ಅವರನ್ನು ಯಾವಾಗ ಬೇಕಾದರೂ ಬಳಸಿ, ಬಿಸಾಡಬಹುದು. ಹಾಗಾಗಿ ಬಿಜೆಪಿ ನಾಯಕರ ಹುನ್ನಾರಕ್ಕೆ ಲಿಂಗಾಯತರು ಬಲಿಯಾಗುವುದಿಲ್ಲ ಎಂದರು. ಕಳೆದ ವಿಧಾನಸಭೆ ಚುನಾವಣೆಯಲ್ಲೇ ಲಿಂಗಾಯತರು ಬಿಜೆಪಿ ಪಕ್ಷದಿಂದ ವಿಮುಖರಾಗಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಯಡಿಯೂರಪ್ಪ ಅವರನ್ನು ಬಳಸಿಕೊಂಡು…
14 ತಿಂಗಳ ಸೆರೆವಾಸ ಅಂತ್ಯ: ಜೈಲಿನಿಂದ ಮುರುಘಾ ಶ್ರೀ ಬಿಡುಗಡೆ
ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಕಳೆದ 14 ತಿಂಗಳಿಂದ ಚಿತ್ರದುರ್ಗ ಕಾರಾಗೃಹದಲ್ಲಿದ್ದ ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಇಂದು ಜೈಲಿನಿಂದ ಬಿಡುಗಡೆಗೊಂಡರು. ಚಿತ್ರದುರ್ಗದ ಜೈಲಿನಿಂದ ಹೊರಬಂದ ಶ್ರೀಗಳನ್ನು ಭಕ್ತರು ಸ್ವಾಗತಿಸಿದರು. ಮೊದಲನೇ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಈ ಆದೇಶದಂತೆ ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಸಂಬಂಧದ ಪ್ರಕ್ರಿಯೆ ಮುಗಿಸಿ ಶ್ರೀಗಳ ಬಿಡುಗಡೆಗಾಗಿ ಬುಧವಾರ ಮಧ್ಯಾಹ್ನ ಆದೇಶ ಮಾಡಿತ್ತು. ಆದರೆ ಆದೇಶ ಪ್ರತಿ ಕಾರಾಗ್ರಹ ಅಧಿಕಾರಿಗಳಿಗೆ ತಲುಪುವಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಗುರುವಾರ ಮುರುಘಾ ಶರಣರು ಜೈಲಿನಿಂದ ಬಿಡುಗಡೆಯಾದರು.
‘ಪವರ್ ಫುಲ್ ಈ ಶ್ಯಾಡೋ ಸಿಎಂ..!’; ಸಿದ್ದರಾಮಯ್ಯ ಬಗ್ಗೆಯೂ ಪ್ರತಿಪಕ್ಷಗಳ ಟೀಕೆ..!
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಅವರ ವೀಡಿಯೋವೊಂದು ವೈರಲ್ ಆಗಿದ್ದು, ಈ ಬಗ್ಗೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ವೀಡಿಯೋ ವಿವಾದವನ್ನು ಮುಂದಿಟ್ಟು ಪ್ರತಿಪಕ್ಷಗಳು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಮುಗಿಬಿದ್ದಿವೆ. ಈ ವೀಡಿಯೋ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರೆ, ಬಿಜೆಪಿ ಪಕ್ಷವು ‘ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇದೆ’ ಎಂದು ವ್ಯಂಗ್ಯವಾಡಿದೆ. ಇದೇ ವೇಳೆ, ಯತೀಂದ್ರ ಅವರನ್ನು ‘ಶ್ಯಾಡೋ ಸಿಎಂ’ ಎಂದು ಬಣ್ಣಿಸಿದೆ. ಹಲೋ ಅಪ್ಪಾ…!#ShadowCM#CongressFailsKarnataka pic.twitter.com/oBzfDbJ6tD — BJP Karnataka (@BJP4Karnataka) November 16, 2023 ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಸಿಎಂ ಗಿಂತಲೂ ಪವರ್ ಫುಲ್ ಈ ಶ್ಯಾಡೋ ಸಿಎಂ..!’ ಎಂದು ಹೇಳಿದೆ. ‘ಅಪ್ಪ ನಾನು ಕೊಟ್ಟಿರೋದನ್ನು ಮಾತ್ರ ಮಾಡಬೇಕು ಅದಕ್ಕಿಂತ ಹೆಚ್ಚು ಮಾಡುವಂತಿಲ್ಲ ಎನ್ನುವ ಕಟ್ಟಾಜ್ಞೆಯನ್ನು ಮಾಜಿ ಶಾಸಕ ಡಾ.ಯತೀಂದ್ರ ಅವರು…
ಸಿಎಂ ಪುತ್ರನ ವೀಡಿಯೋ ವೈರಲ್.. ಸಿದ್ದರಾಮಯ್ಯ ರಾಜೀನಾಮೆಗೆ ಪ್ರತಿಪಕ್ಷ ಆಗ್ರಹ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರ ವೀಡಿಯೋ ವೈರಲ್ ಪ್ರಕರಣ ಬಗ್ಗೆ ಕಟು ಟೀಕೆ ಮಾಡಿರುವ ಪ್ರತಿಪಕ್ಷ ಜೆಡಿಎಸ್, ಮುಖ್ಯಮಂತ್ರಿ ರಾಜೀನಾಮೆಗೆ ಆಗ್ರಹಿಸಿದೆ. ಕಾಸಿಗಾಗಿ ಹುದ್ದೆ (CashForPosting) ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ ಎಂದಿರಿವ ಜೆಡಿಎಸ್ ರಾಜ್ಯಾಧ್ಯಕ್ಷರೂ ಆದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸರ್ಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ ಹರಾಜಾಗಿದೆ ಎಂದು ಟೀಕಿಸಿದ್ದಾರೆ. ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಪುರಾವೆ ಬೇಕಿಲ್ಲ? ಸಾರ್ವಜನಿಕ ಸಭೆಯಲ್ಲೇ ಎಗ್ಗಿಲ್ಲದೆ, ನಾಚಿಕೆ ಮಾನ ಮರ್ಯಾದೆ ಬಿಟ್ಟು ವರ್ಗಾವಣೆ ದಂಧೆ ನಡೆಸುವ ಮುಖ್ಯಮಂತ್ರಿ,…
‘ನಾನು ಕೊಟ್ಟಿದ್ದೇ ಐದು…’ ಸಿಎಂ ಪುತ್ರ ಯತೀಂದ್ರರ ವೀಡಿಯೋ ವೈರಲ್..
ಮೈಸೂರು: ಸಿಎಂ ಸಿದ್ದರಾಮಯ್ಯ ಪುತ್ರ, ಡಾ.ಯತೀಂದ್ರ ಅವರ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್ ಸರ್ಕಾರದ ನಡೆ ಬಗ್ಗೆ ಈ ವೀಡಿಯೋ ಅನೇಕಾಕಾನೇಕ ಚರ್ಚೆಗಳಿಗೆ ಎಡೆಮಾಡಿಕೊಟ್ಟಿದೆ. ಅಪ್ಪನ ಸರ್ಕಾರದ ಆಡಳಿತದಲ್ಲಿ ಪುತ್ರನ ಹಸ್ತಕ್ಷೇಪ ನಡೆಯುತ್ತಿದೆ ಎಂಬ ಪ್ರತಿಪಕ್ಷಗಳ ಆರೋಪಗಳು ಆರೋಪಿಸುತ್ತಿದ್ದಂತೆಯೇ ಈ ವೈರಲ್ ವೀಡಿಯೋ ಗಮನಕೇಂದ್ರೀಕರಿಸಿದೆ. ಕಾಸಿಗಾಗಿ ಹುದ್ದೆ ಉರುಫ್ #CashForPosting ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ. @INCKarnataka ಸರಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ… pic.twitter.com/T1366ek2iS — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 16, 2023 ವಿಡಿಯೊದಲ್ಲಿ ಏನಿದೆ?: ಮೈಸೂರು ಸಮೀಪದ ಗ್ರಾಮವೊಂದರಲ್ಲಿ ಜನಸಂಪರ್ಕ ಸಭೆ ವೇಳೆ, ಆಶ್ರಯ ಸಮಿತಿ ಅಧ್ಯಕ್ಷರಾಗಿರುವ ಯತೀಂದ್ರ ಅವರು ಮೊಬೈಲ್…
ಲೋಕಸಭಾ ಚುನಾವಣೆಯಲ್ಲಿ ಎಲ್ಲ ಸ್ಥಾನ ಗೆದ್ದು ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಉತ್ತರ ಕೊಡೋಣ: ವಿಜಯೇಂದ್ರ
ಬೆಂಗಳೂರು: ಬರಗಾಲದ ಪರಿಸ್ಥಿತಿಯಲ್ಲೂ ಉಸ್ತುವಾರಿ ಸಚಿವರು ಪ್ರವಾಸ ಮಾಡುತ್ತಿಲ್ಲ. ರೈತರ ಸಮಸ್ಯೆಗೆ ಸ್ಪಂದಿಸುವುದನ್ನು ಮರೆತು, ಅಧಿಕಾರದ ದರ್ಪ, ಉದ್ಧಟತನದಿಂದ ವರ್ತಿಸುತ್ತಿದ್ದಾರೆ. ಭ್ರಷ್ಟ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಉತ್ತರವನ್ನು ಲೋಕಸಭಾ ಚುನಾವಣೆಯಲ್ಲಿ ನೀಡೋಣ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಹೊಸ ಸರಕಾರ ಬಂದಿದೆ. ಶೇ 40 ಸರ್ಕಾರ ಎಂದು ಟೀಕಿಸಿದ್ದರು. ಮತದಾರರೂ ಅದನ್ನು ನಂಬಿದರು. ಹೊಸ ಕಾಂಗ್ರೆಸ್ ಸರಕಾರ ಬಂದು 6 ತಿಂಗಳಾಗಿದೆ. ಹಗಲುದರೋಡೆ, ಭ್ರಷ್ಟಾಚಾರ ಮೇರೆ ಮೀರಿದೆ. ಶೇ 40 ಕಮಿಷನ್, ಭ್ರಷ್ಟಾಚಾರದ ಅನುಷ್ಠಾನ ಕಾಂಗ್ರೆಸ್ ಸರಕಾರದಿಂದ ಆಗುತ್ತಿದೆ ಎಂದು ಆಕ್ಷೇಪಿಸಿದರು. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನೂ ಮರೆಯದಿರೋಣ ಎಂದು ಕಿವಿಮಾತು ಹೇಳಿದ ಅವರು, ಅವನ್ನೂ ಗಂಭೀರವಾಗಿ ಪರಿಗಣಿಸಬೇಕು ಎಂದು ಸಲಹೆ ನೀಡಿದರು. ಚುನಾವಣೆ ಗೆದ್ದ ಬಳಿಕ ನಾನು ಯಾವುದೇ…
ಮೈತ್ರಿ ಶಾಸಕರು ನನ್ನನ್ನು ಸಿಎಂ ಮಾಡಿ ಅಂದಾಗ ಕುಮಾರಸ್ವಾಮಿ ಹೂ ಅನ್ನಲಿಲ್ಲ, ಅವರ ಮಾತು ನಂಬಲು ನಾನೇನೂ ದಡ್ಡನೇ? ಡಿಕೆಶಿ ಪ್ರಶ್ನೆ
ಬೆಂಗಳೂರು: ಮೈತ್ರಿ ಶಾಸಕರು ನನ್ನನ್ನು ಸಿಎಂ ಮಾಡಿ ಅಂದಾಗ ಕುಮಾರಸ್ವಾಮಿ ಹೂ ಅನ್ನಲಿಲ್ಲ, ಅವರ ಮಾತು ನಂಬಲು ನಾನೇನೂ ದಡ್ಡನೇ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. “ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಎಂದು ಘೋಷಣೆ ಮಾಡಿದರೆ, ಮುಂಬೈಯಿಂದ ಮರಳಿ ಬರುವುದಾಗಿ ಗೋಪಾಲಯ್ಯ ಮತ್ತು ಎಸ್.ಟಿ.ಸೋಮಶೇಖರ್ ಫೋನ್ ಮಾಡಿ ಹೇಳಿದ್ದರು. ಆದರೆ ಕುಮಾರಸ್ವಾಮಿ ಅವರು ನನ್ನ ಹೆಸರು ಹೇಳಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪರೋಕ್ಷವಾಗಿ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು. ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಜೆಡಿಎಸ್ ಪಕ್ಷದ ಮಾಜಿ ಶಾಸಕರಾದ ಗೌರಿಶಂಕರ್ ಮತ್ತು ಮಂಜುನಾಥ್ ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷದ 40 ಜನ ಬಿಜೆಪಿ ಸಂಪರ್ಕದಲ್ಲಿ ಇದ್ದಾರೆ ಅನ್ನುವ ಕುಮಾರಸ್ವಾಮಿ ಇನ್ನೊಂದೆಡೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದಾದರೆ ಜೆಡಿಎಸ್ ಪಕ್ಷದ 19 ಶಾಸಕರ ಬೆಂಬಲ ನೀಡುತ್ತೇವೆ ಅನ್ನುತ್ತಾರೆ. ಅವರ ಮಾತು ಕೇಳಲು…
