ಬೆಂಗಳೂರು: ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ತಮ್ಮ ಮನೆಯ ದೀಪಾಲಂಕಾರಕ್ಕೆ ವಿದ್ಯುತ್ ಕಂಬದಿಂದಲೇ ವಿದ್ಯುತ್ ಸಂಪರ್ಕ ಮಾಡಲಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಹೆಚ್ಡಿಕೆ, ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್…
Year: 2023
ಪಠ್ಯಪುಸ್ತಕ ಪರಿಷ್ಕರಣೆಗೆ ಸರ್ಕಾರ ಬದ್ಧ: ಡಿಕೆಶಿ.
ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕವಚೇರಿಯಲ್ಲಿ ನೆರವೇರಿದ ನೆಹರೂ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಮಕ್ಕಳ ಶಾಲಾ ಪಠ್ಯ ಪುಸ್ತಕದಲ್ಲಿ ಇತಿಹಾಸ ತಿರುಚುವ ಸಂಚು ಮಾಡಿದ್ದು, ನಮ್ಮ ಸರ್ಕಾರ ಇದನ್ನು ಸರಿಪಡಿಸುವ ಕೆಲಸ ಮಾಡಲಿದೆ. ಇದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ. ಅವರು ನಮ್ಮ ಕರ್ನಾಟಕದ ಇತಿಹಾಸವನ್ನು ತಿರುಚಲು ಹೇಗಿದ್ದಾರೆ. ನಾವು ಈ ವಿಚಾರದಲ್ಲಿ ಕೊಟ್ಟ ಮಾತಿನಂತೆ ನಡೆಯುತ್ತೇವೆ ಎಂದರು. ನಾವು ಗ್ಯಾರಂಟಿ ಯೋಜನೆ ಜಾರಿ ಮಾಡಿದ್ದು, ನಮ್ಮ ಕಾರ್ಯಕರ್ತರು ನಿಗದಿತ ಸಮಯದಲ್ಲಿ ಪ್ರತಿ ಮನೆಗೆ ನಮ್ಮ ಯೋಜನೆಗಳು ತಲುಪಿದೆಯಾ ಇಲ್ಲವೇ ಎಂದು ಪರಿಶೀಲನೆ ಮಾಡಿ ಅದನ್ನು ಜಿಲ್ಲಾಧಿಕಾರಿಗಳಿಗೆ ತಿಳಿಸಿ. ಶಕ್ತಿ ಯೋಜನೆಯಲ್ಲಿ 100 ಕೋಟಿ ಮಹಿಳೆಯರು ಪ್ರಯಾಣ ಮಾಡಿದ್ದಾರೆ ಎಂದು ತಿಳಿಸಿದರು. ಕಳೆದ ವರ್ಷ ನಾವು ಭಾರತ ಜೋಡೋ ಯಾತ್ರೆ ಮಾಡಿ ತಾಯಿ ಚಾಮುಂಡೇಶ್ವರಿ…
‘ನೆಹರೂ ಅವರ ಪ್ರತಿಯೊಂದು ನಿಲುವು ನೀತಿಗಳು ದೇಶದ ಅಭಿವೃದ್ಧಿಗೆ ಭದ್ರ ಬುನಾದಿಯಾಗಿತ್ತು”
ಬೆಂಗಳೂರು: ‘ನೆಹರೂ ಅವರ ಪ್ರತಿಯೊಂದು ನಿಲುವು ನೀತಿಗಳು ದೇಶದ ಅಭಿವೃದ್ಧಿಗೆ ಭದ್ರ ಬುನಾದಿಯಾಗಿತ್ತು” ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಜವಾಹರಲಾಲ್ ನೆಹರೂ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಸಾಮಾಜಿಕ, ಆರ್ಥಿಕ ಶಕ್ತಿಗೆ ಅಡಿಪಾಯ ಹಾಕಿದವರು. ಬೆಂಗಳೂರಿನಲ್ಲಿನ ಮಾನವ ಶಕ್ತಿಯನ್ನು ಗಮನದಲ್ಲಿಟ್ಟುಕೊಂಡು ನೆಹರೂ ಅವರು ಆ ಕಾಲದಲ್ಲೇ ಎಚ್ಎಎಲ್, ಹೆಚ್ಎಂಟಿ, ಬಿಇಎಲ್, ಬಿಎಚ್ಇಎಲ್, ಇಸ್ರೋ ಸೇರಿದಂತೆ ಅನೇಕ ಸಂಸ್ಥೆಗಳನ್ನು ಇಲ್ಲಿ ಸ್ಥಾಪಿಸಿದರು ಎಂದರು. ಈ ಸಂಸ್ಥೆಗಳಿಂದ ನಮ್ಮ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯಕ್ಕೆ ಶಕ್ತಿ ಬಂದಿದೆ. ಅವರ ಕಾಲದಲ್ಲಿನ ಪಂಚವಾರ್ಷಿಕ ಯೋಜನೆ, ಅಂಬೇಡ್ಕರ್ ಅವರಿಗೆ ಕೊಟ್ಟ ಜವಾಬ್ದಾರಿ ಮಹತ್ವದ್ದಾಗಿದೆ. ಅವರ ಪ್ರತಿಯೊಂದು ನಿಲುವು ನೀತಿಗಳು ದೇಶದ ಅಭಿವೃದ್ಧಿಗೆ ಭದ್ರ ಬುನಾದಿಯಾಗಿತ್ತು.…
ಮನೆ ದೀಪಾಲಂಕಾರಕ್ಕೆ ಕಂಬದಿಂದಲೇ ಕರೆಂಟ್ ಕದ್ದರೇ ಹೆಚ್ಡಿಕೆ? ಕಾಂಗ್ರೆಸ್ ಲೇವಡಿ
ಬೆಂಗಳೂರು; ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರ ಜೆ ಪಿ ನಗರದ ನಿವಾಸದ ದೀಪಾವಳಿಯ ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಕಂಬದಿಂದ ಅಕ್ರಮ ವಿದ್ಯುತ್ ಸಂಪರ್ಕ ಪಡೆಯುವ ಮೂಲಕ ವಿದ್ಯುತ್ ಕಳ್ಳತನ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಕುರಿತಂತೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಒಬ್ಬ ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ! ಎಂದಿದೆ. ನಮ್ಮ ಸರ್ಕಾರ ಗೃಹಜ್ಯೋತಿಯಲ್ಲಿ 200 ಯೂನಿಟ್ ಉಚಿತ ಕೊಡುತ್ತಿದೆಯೇ ಹೊರತು 2000 ಯೂನಿಟ್ ಅಲ್ಲ! ತಮಗೆ ಅಷ್ಟೊಂದು ದಾರಿದ್ರ್ಯ ಬಂದಿದ್ದರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ ಎಂದು ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಕೆಣಕಿದೆ. ಒಹ್, ತಿಳಿದಿರಲಿಲ್ಲ ಗೃಹಜ್ಯೋತಿಯಲ್ಲಿ ಒಬ್ಬರಿಗೆ ಒಂದೇ ಮೀಟರ್ ಗೆ ಅವಕಾಶವಿದೆ, ತಮ್ಮ ಹೆಸರಲ್ಲಿ ಹಲವು ಮೀಟರ್ ಗಳಿವೆಯಲ್ಲವೇ! ಎಂದು ಪ್ರಶ್ನಿಸಿರುವ ಕಾಂಗ್ರೆಸ್, ರಾಜ್ಯದ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ 7 ಗಂಟೆ ವಿದ್ಯುತ್…
ಮಣಿಪುರ ಹಿಂಸಾಚಾರದ ಪ್ರತಿಧ್ವನಿ; 9 ಮೈತೇಯಿ ಸಂಘಟನೆಗಳ ನಿಷೇಧ
ದೆಹಲಿ: ಮಣಿಪುರ ಹಿಂಸಾಚಾರ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಜನಾಂಗೀಯ ಹಿಂಸಾಚಾರದಿಂದ ತತ್ತರಿಸಿರುವ ಮಣಿಪುರದಲ್ಲಿ ರಾಷ್ಟ್ರವಿರೋಧಿ ಕೃತ್ಯಗಳಲ್ಲಿ ತೊಡಗಿರುವ ಆರೋಪದಲ್ಲಿ ಹಲವು ಸಂಘಟನೆಗಳ ಮೇಲೆ ಕೇಂದ್ರ ಸರ್ಕಾರ ಕಾನೂನು ಪ್ರಹಾರ ಮಾಡಿದೆ. ಭದ್ರತಾ ಪಡೆಗಳ ಮೇಲೆ ಮಾರಣಾಂತಿಕ ದಾಳಿ ನಡೆಸುತ್ತಿರುವ 9 ಮೈತೇಯಿ ಉಗ್ರಗಾಮಿ ಸಂಘಟನೆಗಳನ್ನು ಹಾಗೂ ಅವುಗಳ ಸಹ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ಸೋಮವಾರ ಅಧಿಸೂಚನೆ ಹೊರಡಿಸಿದೆ. ಪೀಪಲ್ಸ್ ಲಿಬರೇಶನ್ ಆರ್ಮ, ಅದರ ರಾಜಕೀಯ ವಿಭಾಗವಾದ ಕ್ರಾಂತಿಕಾರಿ ಪೀಪಲ್ಸ್ ಫ್ರಂಟ್ (RPF), ಯುನೈಟೆಡ್ ನ್ಯಾಷನಲ್ ಲಿಬರೇಶನ್ ಫ್ರಂಟ್, ಮಣಿಪುರ ಪೀಪಲ್ಸ್ ಆರ್ಮಿ ಸಹಿತ ಪ್ರಮುಖ ಸಂಘಟನೆಗಳನ್ನು ಐದು ವರ್ಷಗಳ ಕಾಲ ಸರ್ಕಾರ ನಿಷೇಧಿಸಿದೆ.
ರಾಮಲಿಂಗ ರೆಡ್ಡಿಯವರಿಗೆ ಉನ್ನತ ಅಧಿಕಾರ ಸಿಗಲಿ.. ದೀಪಾವಳಿ ಸಂದರ್ಭದಲ್ಲಿ ಪೇಜಾವರ ಶ್ರೀ ಆಶೀರ್ವಚನ..
ಸಚಿವ ರಾಮಲಿಂಗ ರೆಡ್ಡಿಯವರಿಗೆ ಉನ್ನತ ಅಧಿಕಾರ ಸಿಗಲಿ.. ದೀಪಾವಳಿ ಸಂದರ್ಭದಲ್ಲಿ ಪೇಜಾವರ ಶ್ರೀ ಆಶೀರ್ವಚನ.. ದೇಗುಲಗಳ ವಿಚಾರದಲ್ಲಿ ಅಪೂರ್ವ ಸುಧಾರಣಾ ಕ್ರಮಗಳಿಗೆ ಮುನ್ನುಡಿ ಬರೆದ ಸಚಿವರಿಗೆ ಧಾರ್ಮಿಕ ಪ್ರಮುಖರ ಶ್ಲಾಘನೆ.. ಬೆಂಗಳೂರು: ನಾಡಿನಾದ್ಯಂತ ದೀಪಾವಳಿ ಸಂಭ್ರಮ ಸಡಗರದ ನಡುವೆ ಧಾರ್ಮಿಕ ಮಂದಿರಗಳಲ್ಲಿ, ಪುಣ್ಯ ಕ್ಷೇತ್ರಗಳಲ್ಲೂ ವಿವಿಧ ಕೈಕರ್ಯಗಳು ನೆರವೇರಿದವು. ಬೆಂಗಳೂರಿನ ಪೇಜಾವರ ಮಠದಲ್ಲಿ ಬೆಳಕಿನ ಹಬ್ಬ ಸಂದರ್ಭದ ಕೈಂಕರ್ಯ ಆಸ್ತಿಕವಲಯದ ಕೇಂದ್ರಬಿಂದುವಾಯಿತು. ಸಾರಿಗೆ ಸಚಿವ ರಾಮಲಿ೦ಗಾರೆಡ್ಡಿ ಸಹಿತ ಗಣ್ಯರ ಭಾಗವಹಿಸುವಿಕೆ ಕೂಡಾ ಗಮನಸೆಳೆಯಿತು. ಮುಜರಾಯಿ ಖಾತೆಯನ್ನೂ ಹೊಂದಿರುವ ರಾಮಲಿಂಗಾರೆಡ್ಡಿಯವರು ಬೆ೦ಗಳೂರಿನ ಬಸವನಗುಡಿ ಸಮೀಪದ ವಿದ್ಯಾಪೀಠ ಸರ್ಕಲ್ ಬಳಿಯ ಪೇಜಾವರ ಮಠಕ್ಕೆ ಭೇಟಿ ನೀಡಿ ಗೋಪೂಜೆ ಮತ್ತು ಗೋವಿನ ಬೆಳ್ಳಿ ತುಲಾಭಾರ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಮಂತ್ರಿ ರಾಮಲಿಂಗಾರೆಡ್ಡಿ ಅವರನ್ನು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಗೌರವಿಸಿದ ಸನ್ನಿವೇಶವೂ ಗಮನಸೆಳೆಯಿತು. ರಾಜ್ಯದ ದೇಗುಲಗಳ ಅಭಿವೃದ್ಧಿ ವಿಚಾರದಲ್ಲಿ ಅಪೂರ್ವ ಸುಧಾರಣಾ…
‘ದಪ್ಪ ಇದ್ದೀನಿ’ ಎಂಬ ನೋವು: ಹತಾಷೆಯಿಂದ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.
ಮಂಗಳೂರು: ದಪ್ಪ ಇದ್ದೀನಿ ಎಂದು ನೊಂದುಕೊಂಡ ವೈದ್ಯಕೀಯ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಸಾವಿಗೆ ಶರಣಾದ ದಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ. ಎ.ಜೆ.ಮೆಡಿಕಲ್ ಕಾಲೇಜು ಆಸ್ಪತ್ರೆ ಬಳಿಯ ಹಾಸ್ಟೆಲ್ ಆವರಣದಲ್ಲಿ ಈ ಘಟನೆ ನಡೆದಿದೆ. ಮುಂಜಾನೆ 3 ಗಂಟೆ ಸುಮಾರಿಗೆ MBBS ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಮೃತಳನ್ನು ಪ್ರಕೃತಿ (20) ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಿಸಿರುವ ಕದ್ರಿ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ನಾಯಕರತ್ತ ‘ವಿಜಯೀ’ ನಡೆ; ಎಸ್.ಎಂ.ಕೃಷ್ಣರನ್ನು ಭೇಟಿ ಮಾಡಿದ ಯುವ ನಾಯಕ;
ಬೆಂಗಳೂರು: ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಮತ್ತು ಮಾರ್ಗದರ್ಶನ ಪಡೆದರು. ದಕ್ಷ ಆಡಳಿತಕ್ಕೆ ಹೆಸರಾದ ನಾಡುಕಂಡ ಶ್ರೇಷ್ಠ ರಾಜಕಾರಣಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಸ್ ಎಂ ಕೃಷ್ಣ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಾಯಿತು. ಅಪಾರ ಅನುಭವವುಳ್ಳ ಹಿರಿಯ ಮುತ್ಸದ್ದಿಗಳಾಗಿರುವ ತಾವು ಮಾರ್ಗದರ್ಶನ ಮಾಡಬೇಕೆಂದು ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಎಂ.ಕೃಷ್ಣಪ್ಪನವರು, ಶ್ರೀ ಸಿ.ಕೆ.ರಾಮಮೂರ್ತಿ ಅವರು… pic.twitter.com/xpYMWqixpp — Vijayendra Yediyurappa (Modi Ka Parivar) (@BYVijayendra) November 13, 2023 ಇದೇವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಎಸ್.ಎಂ.ಕೃಷ್ಣ ಅವರು, ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯೇಂದ್ರರನ್ನು ಹಾರ್ದಿಕವಾಗಿ ಅಭಿನಂದಿಸುತ್ತೇನೆ. ಹತ್ತಾರು ವರ್ಷಗಳಿಂದ ಬಿಜೆಪಿಯನ್ನು ಕರ್ನಾಟಕದಲ್ಲಿ ಭದ್ರವಾದ ಬುನಾದಿಯ ಮೇಲೆ ಕಟ್ಟಲು ಯಡಿಯೂರಪ್ಪನವರು ಶ್ರಮಿಸಿದ್ದಾರೆ ಎಂದು ತಿಳಿಸಿದರು. ಅವರು ಕಟ್ಟಿದ…
ಕುರ್ಚಿ ಏರುವ ಮುನ್ನವೇ ಮೈತ್ರಿ ಸರ್ಕಸ್.. ಬಿಜೆಪಿ ನಿಯೋಜಿತ ಅಧ್ಯಕ್ಷರಿಂದ ದೇವೇಗೌಡ ಭೇಟಿ
ಬೆಂಗಳೂರು: ಬಿಜೆಪಿ ರಾಜ್ಯಾದ್ಯಕ್ಷರಾಗಿ ನೇಮಕವಾಗಿರುವ ಬಿ.ವೈ.ವಿಜಯೇಂದ್ರ ಅವರು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ವಿಜಯೇಂದ್ರ ಅವರು, ಮಾಜಿ ಪ್ರಧಾನಿಯವರ ಆಶೀರ್ವಾದ ಪಡೆದರು. ದೇವೇಗೌಡರ ಜೊತೆ ಮಾತುಕತೆ ನಡೆಸಿದರು. ಈ ವೇಳೆ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಉಪಸ್ಥಿತರಿದ್ದರು. ಎನ್‌ಡಿಎ ಸೇರಿರುವ ಜೆಡಿಎಸ್, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಸೀಟು ಹೊಂದಾಣಿಕೆ ಮಾಡಿಕೊಳ್ಳುವ ಸಂಬಂಧ ಚರ್ಚೆ ನಡೆದಿದ್ದು, ಇದೀಗ ಬಿ.ವೈ.ವಿಜಯೇಂದ್ರ ಅವರು ತಾವು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಆಲಂಕರಿಸುವ ಮುನ್ನ ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿರುವ ಬೆಳವಣಿಗೆ ರಾಜಕೀಯವಾಗಿ ಭಾರೀ ಮಹತ್ವ ಪಡೆದುಕೊಂಡಿದೆ. ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರು ಇಂದು ಮಾಜಿ ಪ್ರಧಾನಮಂತ್ರಿಗಳು ಹಾಗೂ ಜನತಾದಳ ಜಾತ್ಯತೀತ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @H_D_Devegowda ರನ್ನು ಅವರ…
ದೀಪಾವಳಿಯಂದೇ ಘೋರ ದುರಂತ; ಮುತ್ತಿನ ನಗರಿಯಲ್ಲಿ 9 ಮಂದಿ ಸಜೀವ ದಹನ
ಹೈದರಾಬಾದ್: ತೆಲಂಗಾಣದಲ್ಲಿ ದೀಪಾವಳಿ ದಿನದಂದು ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 9 ಮಂದಿ ಸಜೀವ ದಹನವಾಗಿದ್ದಾರೆ. ಹೈದರಾಬಾದ್ ಸಮೀಪದ ನಾಂಪಲ್ಲಿ ಬಜಾರ್ ಘಾಟ್‌ನಲ್ಲಿ ಈ ದುರಂತ ಘಟಿಸಿದೆ. ನಾಲ್ಕು ಅಂತಸ್ತಿನ ಕಟ್ಟಡದಲ್ಲಿರುವ ರಾಸಾಯನಿಕ ಸಂಗ್ರಹಣಾ ಕೊಠಡಿಯಲ್ಲಿ ಹಠಾತ್ತನೆ ಬೆಂಕಿ ಕಾಣಿಸಿಕೊಂಡು ಭೀಕರ ಅನಾಹುತ ಸಂಭವಿಸಿದೆ. ಬೆಳಿಗ್ಗೆ 9.30ರ ಸುಮಾರಿಗೆ ಕಟ್ಟಡದ ನೆಲಮಹಡಿಯಲ್ಲಿ ಕಾರು ದುರಸ್ತಿ ನಡೆಯುತ್ತಿದ್ದಾಗ ಸ್ಥಳದಲ್ಲಿದ್ದ ರಾಸಾಯನಿಕ ಡ್ರಮ್‌ಗಳಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ. ಬೆಂಕಿ ಇಡೋಕಟ್ಟಡವನ್ನು ಆವರಿಸಿ ಭೀಕರ ದುರಂತಕ್ಕೆ ಕಾರಣವಾಯಿತು ಎನ್ನಲಾಗಿದೆ. ಈ ಸಂದರ್ಭದಲ್ಲಿ 16 ಮಂದಿಯನ್ನು ರಕ್ಷಣೆ ಮಾಡಲಾಯಿತಾದರೂ ಹಲವರು ಜೀವಂತ ದಹನಗೊಂಡರೆಂದು ಮೂಲಗಳು ತಿಳಿಸಿವೆ. #WATCH | Daring rescue of a child and woman amid massive fire in a storage godown located in an apartment complex in Bazarghat, Nampally of Hyderabad…
