54ನೇ ಐಎಫ್ಎಫ್ಐಗೆ ತನ್ನ 10 ಶಿಫಾರಸು ಚಲನಚಿತ್ರಗಳನ್ನು ಪ್ರಕಟಿಸಿದ ಫಿಲ್ಮ್ ಬಜಾರ್.. ಈ ವರ್ಷ 6 ಭಾಷೆಗಳಲ್ಲಿನ ಬಹು ಪ್ರಕಾರಗಳ ಚಲನಚಿತ್ರಗಳ ಆಯ್ಕೆ.. ಫಿಲ್ಮ್ ಬಜಾರ್ ಶಿಫಾರಸು ಮಾಡಿದ ಚಲನಚಿತ್ರಗಳ ಬಹುನಿರೀಕ್ಷಿತ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ವರ್ಷದ ಆಯ್ಕೆಯು ಕಾಲ್ಪನಿಕ, ಡಾಕ್ಯುಮೆಂಟರಿ ಕಿರುಚಿತ್ರಗಳು, ಸಾಕ್ಷ್ಯಚಿತ್ರಗಳು, ಹಾರರ್(ಭಯಾನಕ) ಚಲನಚಿತ್ರ ಮತ್ತು ಅನಿಮೇಟೆಡ್ ವೈಶಿಷ್ಟ್ಯಗಳ ವೈವಿಧ್ಯಮಯ ಮಿಶ್ರಣ ಹೊಂದಿದೆ. ಇದು ಭಾರತ ಮತ್ತು ವಿದೇಶಗಳಲ್ಲಿನ ಸಮುದಾಯಗಳಿಗೆ ಸಂಬಂಧಿಸಿದ ವಿಷಯಗಳು ಒಳಗೊಂಡಿವೆ. ಪಿತೃಪ್ರಭುತ್ವ(ಪುರುಷ ಪ್ರಧಾನ), ನಗರ ತಲ್ಲಣ, ತೀವ್ರ ಬಡತನ, ಹವಾಮಾನ ಬಿಕ್ಕಟ್ಟುಗಳು, ರಾಷ್ಟ್ರೀಯತೆ ಮತ್ತು ಕ್ರೀಡೆ, ಫಿಟ್ನೆಸ್ ಮತ್ತಿತರ ವಿಷಯ ವಸ್ತುಗಳಿಗೆ ಸಂಬಧಿಸಿವೆ. ಚಲನಚಿತ್ರಗಳು ಇಂಗ್ಲಿಷ್, ಹಿಂದಿ, ಬೆಂಗಾಲಿ, ಮಾರ್ವಾಡಿ, ಕನ್ನಡ ಮತ್ತು ಮಾವೋರಿ (ನ್ಯೂಜಿಲೆಂಡ್ ಭಾಷೆ) ಮತ್ತು ವಿಷಯಗಳ ಸಾರಸಂಗ್ರಹಿ ಮಿಶ್ರಣವನ್ನು ಒಟ್ಟಿಗೆ ತರುತ್ತವೆ. ಚಲನಚಿತ್ರಗಳ ಸ್ಥಿರಚಿತ್ರ(ಸ್ಟಿಲ್)ಗಳನ್ನು ಈ ಲಿಂಕ್‌ನಲ್ಲಿ ಕಾಣಬಹುದು: ಪಟ್ಟಿಯು ಈ ಕೆಳಗಿನ ಚಲನಚಿತ್ರಗಳನ್ನು ಒಳಗೊಂಡಿದೆ:ಕಾಲ್ಪನಿಕ…
Year: 2023
ರಶ್ಮಿಕಾ ಫೇಕ್ ಡೀಪ್ ವೀಡಿಯೋ; ದೆಹಲಿ ಪೊಲೀಸರಿಂದ ಎಫ್‌ಐಆರ್
ದೆಹಲಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಆಕ್ಷೇಪಾರ್ಹ ವೀಡಿಯೋ ಬಗ್ಗೆ ಪೊಲೀಸ್ ತನಿಖೆ ಆರಂಭಗೊಂಡಿದೆ. ಡೀಪ್‌ಫೇಕ್ ವಿಡಿಯೋ ವಿವಾದ ಬಗ್ಗೆ ದೆಹಲಿಯ ವಿಶೇಷ ಸೆಲ್ ಪೊಲೀಸ್ ಠಾಣೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಈ ವಿವಾದ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತಿದೆ. ಎಂದು ಪೊಲೀಸರು ತಿಳೊಸಿದ್ದಾರೆ.
BJPಯಲ್ಲಿ ವಿದ್ಯಮಾನ ಬಿರುಸು; ಇದೀಗ ಪ್ರತಿಪಕ್ಷ ನಾಯಕರ ಆಯ್ಕೆ ಕಸರತ್ತು
ಬೆಂಗಳೂರು: ನೆನೆಗುದಿಗೆ ಬಿದ್ದಿದ್ದ ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕವಾಗಿದೆ. ಇದೀಗ ಪ್ರತಿಪಕ್ಷ ನಾಯಕರ ಆಯ್ಕೆ ಬಗ್ಗೆ ಜನರ ಚಿತ್ತ ಕೇಂದ್ರೀಕೃತವಾಗಿದೆ. ರಾಜ್ಯದಲ್ಲಿ ಮುಂದಿನ ವಾರ ವಿರೋಧ ಪಕ್ಷದ ನಾಯಕನನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವೈ. ವಿಜಯೇಂದ್ರ ಅವರು ವಿಪಕ್ಷ ನಾಯಕರ ಆಯ್ಕೆ ಸಾಧ್ಯತೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ನವೆಂಬರ್ 17ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗುವುದು. ಆ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕರ ಆಯ್ಕೆ ನಡೆಯಲಿದೆ ಎಂದವರು ತಿಳಿಸಿದ್ದಾರೆ. ಶಾಸಕಾಂಗ ಪಕ್ಷ ಸಭೆಯಲ್ಲಿ ಹೈಕಮಾಂಡ್ ಪರವಾಗಿ ವೀಕ್ಷಕರು ಭಾಗವಹಿಸಲಿದ್ದು, ಶಾಸಕರು ತಮ್ಮ ಅಭಿಪ್ರಾಯಗಳನ್ನು ನೀಡಲಿದ್ದಾರೆ ಎಂದು ವಿಜಯೇಂದ್ರ ತಿಳಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ; ಇದು ‘ವಿಜಯದ ಹಾದಿ’ ಎಂದ ಸಂತೋಷ್
ಬೆಂಗಳೂರು: ರಾಜ್ಯ ಬಿಜೆಪಿಗೆ ನೂತನ ಸಾರಥಿಯಾಗಿ ಮಾಜಿ ಸಿಎಂ ಬಿಎಸ್‌ವೈ ಪುತ್ರ ವಿಜಯೇಂದ್ರ ನೇಮಕವಾಗಿದ್ದು ಕಮಲ ಪಾಳಯದಲ್ಲಿ ರಣೋತ್ಸಾಹ ಹೆಚ್ಚಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರು ಈ ವರೆಗೂ ರಾಜ್ಯ ಬಿಜೆಪಿಯ ಉಪಾಧ್ಯಕ್ಷರಾಗಿ ಪಕ್ಷ ಸಂಘಟನೆ ಮಾಡುತ್ತಿದ್ದರು. ತಮ್ಮದೇ ಆದ ಅಭಿಮಾನಿಗಳ ಹಾಗೂ ಬೆಂಬಲಿಗರ ಸಮೂಹವನ್ನು ಹೊಂದಿರುವ ಬಿ.ವೈ.ವಿಜಯೇಂದ್ರ ಅವರು ಇದೀಗ ರಾಜ್ಯ ಬಿಜೆಪಿಯ ದಂಡನಾಯಕನಾಗುತ್ತಿದ್ದಾರೆ. ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ನಡೆದಿರುವ ಈ ಬೆಳವಣಿಗೆ ಕಮಲ ಪಾಳಯದಲ್ಲಿ ಕಾರ್ಯಕರ್ತರ ಉತ್ಸಾಹವನ್ನು ಹೆಚ್ಚಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ವಿಜಯೇಂದ್ರ ಅವರಿಗೆ ಅಭಿನಂದನೆಗಳ ಮಹಾಮಳೆಯಾಗುತ್ತಿದೆ. ವಿಜಯೇಂದ್ರ ಅವರ ನೇಮಕವು ಬಿಜೆಪಿ ಪಾಲಿಗೆ ‘ವಿಜಯದ ಹಾದಿ’ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಬಣ್ಣಿಸಿದ್ದಾರೆ. ಟ್ವಿಟರ್‌ನಲ್ಲಿ ಅಭಿನಂದನೆಯ ಪೋಸ್ಟ್ ಹಾಕಿರುವ ಅವರು, ‘ಪಕ್ಷವನ್ನು ವಿಜಯದ ಹಾದಿಯಲ್ಲಿ ನಡೆಸುವಲ್ಲಿ ಯಶಸ್ಸು ನಿಮ್ಮದಾಗಲಿ’ ಎಂದು ಶುಭ ಹಾರೈಸಿದ್ದಾರೆ. ಅಭಿನಂದನೆಗಳು…
ಬಿಎಸ್‌ವೈ ಪುತ್ರ ‘ವಿಜಯೀಭವ’: ಬಿಜೆಪಿಯಲ್ಲಿ ರಣೋತ್ಸಾಹ..
ಗದಗ್: ರಾಜ್ಯ ಬಿಜೆಪಿಗೆ ನೂತನ ಸಾರಥಿಯಾಗಿ ಮಾಜಿ ಸಿಎಂ ಬಿಎಸ್‌ವೈ ಪುತ್ರ ವಿಜಯೇಂದ್ರ ನೇಮಕವಾಗಿದ್ದು ಕಮಲ ಪಾಳಯದಲ್ಲಿ ರಣೋತ್ಸಾಹ ಹೆಚ್ಚಿದೆ. ಛಲಗಾರ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಈ ವರೆಗೂ ರಾಜ್ಯ ಬಿಜೆಪಿಯ ಉಪಾಧ್ಯಕ್ಷರಾಗಿ ಪಕ್ಷ ಸಂಘಟನೆ ಮಾಡುತ್ತಿದ್ದರು. ತಮ್ಮದೇ ಆದ ಅಭಿಮಾನಿಗಳ ಹಾಗೂ ಬೆಂಬಲಿಗರ ಸಮೂಹವನ್ನು ಹೊಂದಿರುವ ಬಿ.ವೈ.ವಿಜಯೇಂದ್ರ ಅವರು ಇದೀಗ ರಾಜ್ಯ ಬಿಜೆಪಿಯ ದಂಡನಾಯಕನಾಗುತ್ತಿದ್ದಾರೆ. ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ನಡೆದಿರುವ ಈ ಬೆಳವಣಿಗೆ ಕಮಲ ಪಾಳಯದಲ್ಲಿ ಕಾರ್ಯಕರ್ತರ ಉತ್ಸಾಹವನ್ನು ಹೆಚ್ಚಿಸಿದೆ. ಭಾರತೀಯ ಜನತಾ ಪಾರ್ಟಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರು ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಗದಗ್‌ನ ಹುಯಿಲಗೋಳ ನಾರಾಯಣ್ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ನಗರಸಭಾ ಸದಸ್ಯರುಗಳಾದ ಸಾಯಿ ಸಮಿತಿ ಅಧ್ಯಕ್ಷರಾದ ಅನಿಲ ಅಬ್ಬಿಗೇರಿ.ಮಧುಸಾ ಮೆಹರ್ವಾಡಿ. ವಿನಾಯಕ ಮಾನ್ವಿ.ನಾಗರಾಜ್ ತಲ್ವಾರ್. ಮಾಂತೇಶ್ ನೆಲವಡಿ. ಎಂ ಎಂ ಹಿರೇಮಠ. ಕಾಂತಿಲಾಲ್ ಬಂಸಾಲಿ. ಸುಧೀರ್ ತಾಟಿಗರ್.…
ಅಪಘಾತ ರಹಿತ ಸೇವೆಗೈದ KSRTC ಚಾಲಕರಿಗೆ ಬೆಳ್ಳಿ ಪದಕ
ದೊಡ್ಡಬಳ್ಳಾಪುರ: ಐದು ವರ್ಷಗಳ ಕಾಲ ಅಪಘಾತ ರಹಿತ ಚಾಲನೆ ಮತ್ತು ಅಪರಾಧ ರಹಿತ ಸೇವೆ ಸಲ್ಲಿಸಿದ ಚಿಕ್ಕಬಳ್ಳಾಪುರ ವಿಭಾಗದ ವ್ಯಾಪ್ತಿಯ ದೊಡ್ಡಬಳ್ಳಾಪುರ ಘಟಕದ 10 ಮಂದಿ ಚಾಲಕರಿಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದದಿಂದ ನಿಡಲಾಗುವ ಬೆಳ್ಳಿ ಪದಕ ಪ್ರದಾನ ಮಾಡಿದರು. ದೊಡ್ಡಬಳ್ಳಾಪುರ ನಗರದ ಅಂಬೇಡ್ಕರ್ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅವರು ಪದಕ ಪ್ರದಾನ ಮಾಡಿ ಚಾಲಕರನ್ನು ಅಭಿನಂದಿಸಿದರು. ಈ ಬೆಳ್ಳಿ ಪದಕವು ಚಿನ್ನದ ಲೇಪನದೊಂದಿಗೆ 32 ಗ್ರಾಂ ಇದೆ. ವಿಜೇತ ಚಾಲಕರಿಗೆ 2,000 ರೂ. ನಗದು ಪುರಸ್ಕಾರ ಹಾಗೂ ಮಾಸಿಕ 250 ರೂ. ಭತ್ಯೆ ನೀಡಲಾಗುತ್ತದೆ. KSRTC ದೊಡ್ಡಬಳ್ಳಾಪುರ ಘಟಕದ ಬೆಳ್ಳಿ ಪದಕ ವಿಜೇತ ಚಾಲಕರು: ಕೃಷ್ಣಪ್ಪ ಕೆ.ಎನ್ನಿಂಗಪ್ಪ ಗುಡ್ಡದಕೇರಿ ರಾಮಕೃಷ್ಣ ಜೆ ಬಸವರಾಜು ನಾರಾಯಣಸ್ವಾಮಿ ಎಂ ಎನ್ ರಂಜಿತ್ ಕುಮಾರ್ ರಾಮಾಂಜಿನಪ್ಪ ಕೆ ಶ್ರೀನಿವಾಸ ಎಂ. ವಿಜಯ ಕುಮಾರ್…
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ.. ಬಿಎಸ್‌ವೈ ಪುತ್ರನಿಗೆ ಗದ್ದುಗೆ..
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಹೈಕಮಾಂಡ್ ನೇಮಕ ಮಾಡಿದೆ. ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಘೋಷಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ವಿಜಯೇಂದ್ರ ಅವರನ್ನು ನೇಮಕಗೊಳಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲುಂಡ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಬದಲಾಯಿಸಬೇಕೆಂಬ ಒತ್ತಡ ಕೇಳಿಬಂದಿತ್ತು. ಕೆಲವು ದಿನಗಳ ಹೊಂದಷ್ಟೇ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ವಿಜಯೇಂದ್ರ ಅವರ ಹೆಸರು ಅಧ್ಯಕ್ಷ ಸ್ಥಾನಕ್ಕೆ ಕೇಳಿಬಂದಿತ್ತು. ಇದೀಗ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿಯ ಸಾರಥ್ಯವನ್ನು ಬಿ.ವೈ.ವಿಜಯೇಂದ್ರ ಅವರಿಗೆ ವಹಿಸಿದೆ. ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಯುವ ನಾಯಕ ಶ್ರೀ ಬಿ. ವೈ. ವಿಜಯೇಂದ್ರ…
ಪೌರಾಡಳಿತ ಇಲಾಖೆ: 5 ಸಾವಿರ ಕೋಟಿಗೂ ಹೆಚ್ಚು ವೆಚ್ಚದ ಕಾಮಗಾರಿಗೆ ಕ್ರಮ
ಬೆಂಗಳೂರು: ಪೌರಾಡಳಿತ ಇಲಾಖೆಯಿಂದ ಸುಮಾರು 5 ಸಾವಿರ ಕೋಟಿಗೂ ಹೆಚ್ಚು ಕಾಮಗಾರಿಗಳನ್ನು ನಡೆಸಲು ತೀರ್ಮಾನಿಸಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಪೌರಾಡಳಿತ ಸಚಿವರಾದ ರಹೀಂ ಖಾನ್ ತಿಳಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ರಹೀಂ ಖಾನ್, ಬರಗಾಲದಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂದು ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಅವರ ಜೊತೆಗೂಡಿ ಸಾಕಷ್ಟು ಸಭೆಗಳನ್ನು ನಡೆಸಿ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದ ಮೇರೆಗೆ ಸದಾ ಜನರ ಜೊತೆ ಸಂಪರ್ಕದಲ್ಲಿ ಇರಬೇಕು ಎಂದು ಜನರ ನಡುವೆಯೇ ಕೆಲಸ ಮಾಡುತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರ ನಿರ್ದೇಶನದ ಮೇರೆಗೆ ಸಾರ್ವಜನಿಕರ ಅಹವಾಲುಗಳನ್ನು ಪಡೆದುಕೊಳ್ಳಲು ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ್ದೇನೆ ಎಂದರು. ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಪದೇ, ಪದೇ…
ದೊಡ್ಡಬಳ್ಳಾಪುರ: ಹಿಟ್ ಅಂಡ್ ರನ್’ಗೆ ಓರ್ವ ಬಲಿ
ಬೆಂಗಳೂರು: ದೊಡ್ಡಬಳ್ಳಾಪುರ ನಗರದ ರೈಲ್ವೆ ನಿಲ್ದಾಣದ ಬಳಿ ಹಿಟ್ ಅಂಡ್ ರನ್ ಗೆ ಯುವಕನೊಬ್ಬ ಬಲಿಯಾಗಿದ್ದಾನೆ. ರೈಲ್ವೆ ನಿಲ್ದಾಣದಲ್ಲಿ ಮೂಟೆ ಹೊತ್ತು ಕೂಲಿ ಕೆಲಸ ಮಾಡಿಕೊಳ್ಳುತ್ತಿದ್ದ ಮುತ್ತೂರು ನಿವಾಸಿ ಖಾದರ್ ಪಾಷ (26) ಎಂಬ ಯುವಕ ಸಾವನ್ನಪ್ಪಿದ್ದಾನೆ. ಎಂದಿನಂತೆ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಬರುವಾಗ ರಸ್ತೆ ದಾಟುವ ವೇಳೆ ಅಪರಿಚಿತ ವಾಹನ ಢಿಕ್ಕಿ ಹೊಡೆದಿದೆ. ಅಪಘಾತಕ್ಕೆ ಕಾರಣವಾದ ವಾಹನ ಚಾಲಕ ವಾಹನದೊಂದಿಗೆ ಪರಾರಿಯಾಗಿದ್ದಾನೆ. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
KIADB ಭೂಸ್ವಾಧೀನಕ್ಕೆ ರೈತರ ವಿರೋಧ. ಬಾಗಾಯ್ತು ದರದಂತೆ 1:4ಅನುಪಾತದಲ್ಲಿ ಪರಿಹಾರಕ್ಕೆ ಬೇಡಿಕೆ
ಬೆಂಗಳೂರು: ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೈತರ ಕೃಷಿ ಜಮೀನುಗಳನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವ ಕೆಐಎಡಿಬಿ ಕ್ರಮ ಅವೈಜ್ಞಾನಿಕವಾಗಿದೆ. ರೈತರ ಒಪ್ಪಿಗೆ ಪಡೆಯದೇ ಭೂಸ್ವಾಧೀನದ ನೊಟೀಸ್ ನೀಡಿ ಈಗ ರೈತರ ಗಮನಕ್ಕೆ ತರದೇ ಬೆಲೆ ನಿಗದಿಪಡಿಸಲಾಗಿದೆ. ನಿಯಮಾನುಸಾರ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ನೀಡಬೇಕಾದ ಪರಿಹಾರದ ಮೊತ್ತವನ್ನು ನೀಡದ ಹೊರತು ಅಕಾರಿಗಳ ಯಾವುದೇ ವಾಹನ ಇಲ್ಲಿಗೆ ಬರಲು ಬಿಡುವುದಿಲ್ಲ. ರೈತರ ಹಿತಕ್ಕಾಗಿ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಕೊನಘಟ್ಟ ಗ್ರಾಮದ ಭೂಸ್ವಾಧೀನಕ್ಕೊಳಪಡುವ ಜಮೀನಿನ ರೈತರು ಹೇಳಿದ್ದಾರೆ. ಕೊನಘಟ್ಟ ಗ್ರಾಮದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಟಿಎಪಿಎಂಸಿಎಸ್ ನಿರ್ದೇಶಕ ಆನಂದ್, ರೈತ ಮುಖಂಡ ರಾಮಾಂಜಿನಪ್ಪ ತಾಲೂಕಿನ ಕೊನಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿ, ಆದಿನಾರಾಯಣ ಹೊಸಹಳ್ಳಿ, ನಾಗದೇನಹಳ್ಳಿಗಳಿಗೆ ಒಳಪಡುವ ಪ್ರದೇಶಗಳ ಸುಮಾರು 970 ಎಕರೆ ಜಮೀನನ್ನು ಕೆಐಎಡಿಬಿ ಕೈಗಾರಿಕಾ ಪ್ರದೇಶದ ವಿಸ್ತೀರ್ಣಕ್ಕಾಗಿ ಸ್ವಾಧೀನ ಪಡಿಸಿಕೊಳ್ಳಲು ರೈತರಿಗೆ ನೊಟೀಸ್ ನೀಡಿದೆ. ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ನಡೆದ…
