ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಡಿ.ಬಿ.ಚಂದ್ರೇಗೌಡರು ವಿಧಿವಶರಾಗಿದ್ದಾರೆ. ಹಿರಿಯ ನಾಯಕನ ನಿಧನಕ್ಕೆ ನಾಯಕರನೇಕರು ಶೋಕ ವ್ಯಕ್ತಪಡಿಸಿದ್ದಾರೆ. ಹಿರಿಯ ರಾಜಕಾರಣಿ, ಸಂಸದರಾಗಿ, ಸಚಿವರಾಗಿ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಡಿ.ಬಿ. ಚಂದ್ರೇಗೌಡ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಃಖವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಹಿರಿಯ ರಾಜಕಾರಣಿ, ಸಂಸದರಾಗಿ, ಸಚಿವರಾಗಿ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಶ್ರೀ ಡಿ.ಬಿ. ಚಂದ್ರೇಗೌಡ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಃಖವಾಗಿದೆ. ಭಗವಂತನು ಅವರ ಅಗಲುವಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ, ಶ್ರೀಯುತರಿಗೆ ಸದ್ಗತಿ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ pic.twitter.com/em6C1lsmQX — Nalinkumar Kateel (@nalinkateel) November 7, 2023 ಹಿರಿಯ ರಾಜಕೀಯ ಮುತ್ಸದ್ದಿ ದಾರದಹಳ್ಳಿ ಬೈರೇಗೌಡ ಚಂದ್ರೇಗೌಡ ಅವರ ನಿಧನ ಬಗ್ಗೆ ಸಚಿವ ಏನ್. ಎಸ್. ಬೋಸರಾಜ್…
Year: 2023
ಇಂದಿರಾಗೆ ರಾಜಕೀಯ ಪುನರ್ಜನ್ಮ ನೀಡಿದ್ದ ನಾಯಕ ಬಿಜೆಪಿ ಸೇರಿದ್ದೇ ಅಚ್ಚರಿ
ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಡಿ.ಬಿ.ಚಂದ್ರೇಗೌಡ ಅವರು ವಿಧಿವಶರಾಗಿದ್ದಾರೆ. ಡಿ.ಬಿ.ಚಂದ್ರೇಗೌಡ ಅವರ ನಿಧನದಿಂದಾಗಿ ಬಿಜೆಪಿ ಮಾತ್ರವಲ್ಲ ರಾಜಕೀಯದಲ್ಲಿ ಸೂತಕದ ಛಾಯೆ ಆವರಿಸಿದೆ. ಕಾಂಗ್ರೆಸ್ ಕಟ್ಟಾಳು ಆಗಿದ್ದ ಡಿ.ಬಿ.ಚಂದ್ರೇಗೌಡ ಅವರು ಶಾಸಕರಾಗಿ ಸಂಸದರಾಗಿ, ಸಚಿವರಾಗಿ, ಸ್ಪೀಕರ್ ಆಗಿ ರಾಜಕೀಯದಲ್ಲಿ ಪ್ರಬಲ ನಾಯಕರೆನಿಸಿದ್ದರು. ವಕೀಲರಾಗಿದ್ದ ಅವರು ಕಾನೂನು ಸಚಿವರಾಗಿ ಕೈಗೊಂಡ ತೀರ್ಮಾನಗಳೂ ಮೈಲಿಗಲ್ಲು. ಚಿಕ್ಕಮಗಳೂರಿನ ಮೂಡಿಗೆರೆ ಡಿ.ಬಿ.ಚಂದ್ರೇಗೌಡ ಅವರ ತವರು ಕ್ಷೇತ್ರ ಎಂಬಂತಿದ್ದರೂ ಬದಲಾದ ನಿರ್ಧಾರವೊಂದರಲ್ಲಿ ದಶಕದ ಹಿಂದೆ ಅವರು ಬಿಜೆಪಿ ಸೇರಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಸಂಸದರಾದರು. ಆಗಿನಿಂದ ಬಿಜೆಪಿ ಪಾಲಿಗೆ ಡಿ.ಬಿ.ಚಂದ್ರೇಗೌಡ ಅವರು ಶಕ್ತಿಯಂತಿದ್ದರು. ಅದಕ್ಕೂ ಮುನ್ನ ಕಾಂಗ್ರೆಸ್ ಸೇನಾನಿಯಾಗಿದ್ದ ಡಿ.ಬಿ.ಚಂದ್ರೇಗೌಡ ಅವರು ಒಂದೊಮ್ಮೆ ಕಾಂಗ್ರೆಸ್ ಅಧಿನಾಯಕಿಯಾಗಿದ್ದ ಇಂದಿರಾ ಗಾಂಧಿಯವರಿಗೆ ರಾಜಕೀಯ ಪುನರ್ಜನ್ಮ ನೀಡಿದ ಮುಖಂಡ ಎಂದೇ ಬಿಂಬಿತರಾದವರು. ಇಂದಿರಾ ಗಾಂಧಿಯವರು 1978ರಲ್ಲಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಯಾಸಲು ಬಯಸಿದಾಗ ಅವರಿಗಾಗಿ…
ಮಳೆ ಹೊಡೆತ; ಬೆಂಗಳೂರಿನ ರಸ್ತೆ ಸ್ಥಿತಿ ಅಯೋಮಯ
2/nGunjur, East Bengaluru#BengaluruRains pic.twitter.com/Qha0OyNftQ — Citizens Movement, East Bengaluru (@east_bengaluru) November 7, 2023
ಭಾರೀ ಮಳೆಗೆ ಜನ ತತ್ತರ; ಇನ್ನೂ ಮೂರು ದಿನ ಮಳೆ ಸಾಧ್ಯತೆ
ಬೆಂಗಳೂರು : :ಭಾರೀ ನಗರಿ ಬೆಂಗಳೂರು ಸೋಮವಾರ ತತ್ತರಗೊಂಡಿತ್ತು. ಇಡೀ ರಾಜಧಾನಿ ನಗರದಲ್ಲಿ ಮಳೆ ಆರ್ಭಟ ಜೋರಾಗಿತ್ತು. ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಹಲವು ಬಡಾವಣೆಗಳು ಜಲಾವೃತವಾಗಿ ಜನರು ಪರದಾಡುವಂತಾಯಿತು. C V Raman Nagar Kaggadasapura Road pic.twitter.com/p4JCwEqv31 — R Prasad (@prasad_abc) November 7, 2023 ಈ ನಡುವೆ ಬೆಂಗಳೂರು ಮತ್ತು ಸುತ್ತಮುತ್ತಲ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಮಲೆನಾಡಿನಲ್ಲೂ ಬಿರುಗಾಳಿ ಸಹಿತ ಮಳೆಯಾಗುವ ಆತಂಕ ಇದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. Record-breaking rain of 7th November has flooded many areas in #Bengaluru.Compiling videos from different locations. #BengaluruRains 🧵1/nBayapanhalli pic.twitter.com/auWD14JKor —…
ಮಾಜಿ ಸಚಿವ ಡಿ.ಬಿ.ಚಂದ್ರೇಗೌಡ ವಿಧಿವಶ; ಗಣ್ಯರ ಶೋಕ
ಬೆಂಗಳೂರು: ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ.ಚಂದ್ರೇಗೌಡ ವಿಧಿವಶರಾಗಿದ್ದಾರೆ. 87 ವರ್ಷ ವಯಸ್ಸಿನ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಡಿ.ಬಿ.ಚಂದ್ರೇಗೌಡ ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಮೂಡಿಗೆರೆ ತಾಲೂಕಿನ ದಾರದಹಳ್ಳಿಯಯಲ್ಲಿ ವಾಸವಿದ್ದ ಡಿ.ಬಿ.ಚಂದ್ರೇಗೌಡ ಅವರು ಅಲ್ಲಿನ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿದ್ದಾಗ ಶಾಸಕರಾಗಿ ಆಯ್ಕೆಯಾಗಿದ್ದ ಡಿ.ಬಿ.ಚಂದ್ರೇಗೌಡ ಅವ್ರು ಸಚಿವರಾಗಿದ್ದರು. ಕಾನೂನು ಸಚಿವರು ಹಾಗೂ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. ಬದಲಾದ ಪರಿಸ್ಥಿತಿಯಲ್ಲಿ ಬಿಜೆಪಿ ಸೇರಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು. ಮೂರು ಬಾರಿ ಶಾಸಕರಾಗಿ, 3 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಚಂದ್ರೇಗೌಡ, ರಾಜ್ಯಸಭಾ ಸದಸ್ಯರಾಗಿಯೂ ಕಾರ್ಯನಿರ್ವಹಿಸಿದ್ದರು.
‘ಕನಸಿನ ಕಥೆ’ಗೆ ಜೀವ ತುಂಬಿದ ಮುಸ್ಲಿಂ ವ್ಯಕ್ತಿ; ದೇಗುಲ ನಿರ್ಮಿಸಲು ಜಮೀನನ್ನೇ ಬಿಟ್ಟುಕೊಟ್ಟ ಈ ಬಾವ ಯಾರು ಗೊತ್ತಾ?
ಬೆಂಗ್ಳೂರು ವ್ಯಕ್ತಿಯ ಕನಸಿನಲ್ಲಿ ದೇವಾಲಯ ಪತ್ತೆ.. ಕನಸಿಗೆ ಜೀವ ತುಂಬಿದ ಮುಸ್ಲಿಂ ಅಸ್ತಿಕ.. ‘ಸ್ವಪ್ನದ ಕಥೆ’ ಕೇಳಿ ಧಾವಿಸಿದ ಜ್ಯೋತಿಷಿಗಳು.. ಭೂಮಿ ಅಗೆದಾಗ ಸಿಕ್ತು ದೇವರ ವಿಗ್ರಹ.. ಮಂಗಳೂರು: ಸದಾ ಒಂದಿಲ್ಲೊಂದು ದೈವಪವಾಡಕ್ಕೆ ಸಾಕ್ಷಿಯಾಗುತ್ತಿರುವ ತುಳುನಾಡು ಇದೀಗ ಮತ್ತೊಂದು ಅಚ್ಚರಿಯ ಕೇಂದ್ರ ಬಿಂದುವಾಗಿದೆ. ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬರು ‘ಕನಸಿನ ಕಥೆ’ಯಿಂದ ಬೆರಗಾಗಿ ಎಲ್ಲರ ಗಮನಸೆಳೆದಿದ್ದಾರೆ. ಬೆಂಗಳೂರು ಮೂಲದ ಲಕ್ಷ್ಮಣ್ ಎಂಬವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ಜಮೀನು ಖರೀದಿಸಿದ್ದರು. ಇತ್ತೀಚಿಗೆ ಇವರಿಗೆ ರಾತ್ರಿ ಮಲಗಿದ್ದಾಗ ಕನಸು ಬಿದ್ದಿದ್ದು, ತಾನು ಖರೀದಿಸಿದ ಜಮೀನಿನ ಪಕ್ಕದಲ್ಲಿರುವ ಮುಸ್ಲಿಂ ವ್ಯಕ್ತಿ ಅಹಮದ್ ಬಾವ ಎಂಬವರ ಜಮೀನಿನಲ್ಲಿ ದೇವಾಲಯ ಇದೆ’ ಎಂಬ ಕನಸು ಅದಾಗಿತ್ತಂತೆ. ತೆಕ್ಕಾರು ಗ್ರಾಮದ ಬಟ್ರಬೈಲಿನ ಮುಸ್ಲಿಂ ವ್ಯಕ್ತಿ ಅಹಮದ್ ಬಾವ ಎಂಬವರು ನೆರೆಮನೆಯವರ ಕನಸಿನ ಕತೆಗೆ ನೀರೆರೆದಿದ್ದಾರೆ. ಕನಸಿನಲ್ಲಿ ದೇವಾಲಯದ ಚಿತ್ರಣ ಸಿಕ್ಕಿದ…
ಪೇಜಾವರ ಶ್ರೀಗಳಿಗೆ ಪಿತೃ ವಿಯೋಗ: ನಳಿನ್‍ಕುಮಾರ್ ಕಟೀಲ್ ಸಂತಾಪ
ಬೆಂಗಳೂರು: ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ತಂದೆ, ಅಂಗಡಿಮಾರ್ ಕೃಷ್ಣ ಭಟ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಸಂತಾಪ ಸೂಚಿಸಿದ್ದಾರೆ. ಸಾಂಪ್ರದಾಯಿಕ ಕೃಷಿಕರೂ, ವೈದಿಕ ವಿದ್ವಾಂಸರೂ ಆಗಿದ್ದ ಅವರು, ತುಳು ಲಿಪಿಕಾರರಾಗಿ, ಪಂಚಾಂಗ ಕರ್ತರಾಗಿ ಕೆಲಸ ಮಾಡಿದವರು ಎಂದು ತಿಳಿಸಿದ್ದಾರೆ. ವೇದಾಧ್ಯಯನ, ಸಂಹಿತಾ ಯಾಗಗಳ ವಿಚಾರದಲ್ಲಿ ಸಾಧಕರಾಗಿದ್ದರು. ಇವರ ಸಾಧನೆಗಾಗಿ ಹಲವು ಪ್ರಶಸ್ತಿ, ಪುರಸ್ಕಾರಗಳು ಪ್ರಾಪ್ತವಾಗಿದ್ದವು ಎಂದು ನಳಿನ್ ಕುಮಾರ್ ಹೇಳಿದ್ದಾರೆ.
ಕರ್ನಾಟಕ ಮಾದರಿ ಎಂದರೆ ತಾಯಂದಿರ ಮುತ್ತೈದೆತನಕ್ಕೇ ಕುತ್ತು ತರುವುದಾ? KPSC ಪರೀಕ್ಷಾ ರಾದ್ದಾಂತಕ್ಕೆ ಆಕ್ರೋಶ
ಬೆಂಗಳೂರು: ಕಲಬುರಗಿಯಲ್ಲಿ ಭಾನುವಾರ ನಡೆದ ಕೆಪಿಎಸ್ಸಿಯ ಗ್ರೂಪ್ ಸಿ ಹುದ್ದೆಗಳ ಪ್ರವೇಶ ಪರೀಕ್ಷೆಯ ವೇಳೆ ವಿವಾಹಿತ ಮಹಿಳಾ ಅಭ್ಯರ್ಥಿಗಳ ಮಂಗಳಸೂತ್ರ, ಕಾಲುಂಗುರ ತೆಗೆದಿದ್ದು ದುರ್ನಡತೆ ಪರಮಾವಧಿ ಎಂದು ಜಾತ್ಯತೀತ ಜನತಾದಳ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಜೆಡಿಎಸ್; ಗ್ರೂಪ್ ಸಿ ಹುದ್ದೆಗಳ ಪ್ರವೇಶ ಪರೀಕ್ಷೆಯ ವೇಳೆ ಮಹಿಳೆಯರ ಮಂಗಳಸೂತ್ರ, ಕಾಲುಂಗುರ ತೆಗೆಸಿರುವ ಘಟನೆ ಅಕ್ಷಮ್ಯ. ಇದು ಸ್ತ್ರೀಯರ ಹಕ್ಕುಗಳನ್ನು ಹತ್ತಿಕ್ಕುವ ಪ್ರಯತ್ನ. ನಾವು ಕರ್ನಾಟಕದಲ್ಲಿ ಇದ್ದೇವೆಯೋ? ಅಥವಾ ಇನ್ನೆಲ್ಲಾದರೂ ಇದ್ದೇವೆಯೋ? ಎಂದು ಕಿಡಿಕಾರಿದೆ. ಕಲಬುರಗಿಯಲ್ಲಿ ಭಾನುವಾರ ನಡೆದ ಕೆಪಿಎಸ್ಸಿ ಪರೀಕ್ಷೆಯಲ್ಲಿ ಸ್ತ್ರೀಯರಿಗೆ ಘೋರ ಅಪಮಾನ ಎಸಗಿದ್ದು ಅತ್ಯಂತ ಖಂಡನೀಯ. ಇಂಡಿಯಾ ಎಂದು ಜಪಿಸುವ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಭಾರತದ ಸಂಸ್ಕೃತಿಗೆ ಸಿಕ್ಕ ಗೌರವ ಇದು. ನಮ್ಮ ಸಂಸ್ಕೃತಿ, ಪರಂಪರೆಯನ್ನು ನಿರ್ನಾಮ ಮಾಡುವ ಕುಕೃತ್ಯ ಅವರಿಂದ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಜೆಡಿಎಸ್ ಕಟುವಾಗಿ…
‘ಬರ’ಕ್ಕಿಂತ JDS-BJP ಮೈತ್ರಿಯೇ ಕಾಂಗ್ರೆಸ್‌ಗೆ ದೊಡ್ಡ ಸಂಕಷ್ಟ?
ಬೆಂಗಳೂರು: ರೈತ ಸಾಂತ್ವನ ಯಾತ್ರೆ ಬಗ್ಗೆ ಲಘುವಾಗಿ ಹೇಳಿಕೆ ಕೊಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಹೆಚ್ಡಿಕೆ, ‘ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಜೆಡಿಎಸ್ – ಬಿಜೆಪಿ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ’ ಎಂದು ಕಾಲೆಳೆದಿದ್ದಾರೆ. ಅಲ್ಲದೆ; ವಿಶ್ವ ವಿಖ್ಯಾತ ವಿತ್ತತಜ್ಞ ಎಂದು ಹಾಲಿ ಸಿಎಂಗೆ ಮಾಜಿ ಮುಖ್ಯಮಂತ್ರಿ ಟಾಂಗ್ ನೀಡಿದ್ದಾರೆ. ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ʼದೊಡ್ಡʼ ಗುಣವನ್ನು ಮನಸಾರೆ ಕೊಂಡಾಡುತ್ತೇನೆ. ಜೆಡಿಎಸ್ ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ ಎಂದು ಅವರು ಹೇಳಿದ್ದಾರೆ. ‘ರೈತ ಸಾಂತ್ವನ ಯಾತ್ರೆ’ಯ ಅನುಭವವನ್ನು ಕೇಂದ್ರದ ಜತೆಗೂ ಹಂಚಿಕೊಳ್ಳುತ್ತೇವೆ. ನಿಮಗೆ…
ಪಂಪ್‍ಸೆಟ್‍ಗೆ ರೈತರ ಸ್ವಂತ ಖರ್ಚಿನಲ್ಲಿ ಟ್ರಾನ್ಸ್ ಫಾರ್ಮರ್, ಸಲಕರಣೆ; ಸರ್ಕಾರದ ಆದೇಶಕ್ಕೆ ಬಿಜೆಪಿ ಖಂಡನೆ
ಬೆಂಗಳೂರು: ರೈತರ ಪಂಪ್ ಸೆಟ್‍ಗಳಿಗೆ ವಿದ್ಯುತ್ ಪಡೆಯಬೇಕಾದರೆ ಸ್ವಂತ ಖರ್ಚಿನಲ್ಲಿ ಟ್ರಾನ್ಸ್‍ಫಾರ್ಮರ್, ಕಂಬ ಮತ್ತು ತಂತಿ ಸೇರಿದಂತೆ ವಿದ್ಯುತ್ ಗೆ ಸಂಬಂಧಪಟ್ಟ ವಸ್ತುಗಳನ್ನು ರೈತರೇ ಖರೀದಿಸಬೇಕೆಂದು ಸರ್ಕಾರ ಆದೇಶ ಮಾಡಿದ್ದು ಅತ್ಯಂತ ಖಂಡನೀಯವಾಗಿದೆ. ಬರಗಾಲ, ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಿಂಗ್ ನಿಂದ ಕಂಗಾಲಾದ ರೈತರ ಗಾಯದ ಮೇಲೆ ಬರೆ ಎಳೆದಂತಿದೆ. ಅಲ್ಲದೆ, ಇದು ಬಿಸಿ ಕಾವಲಿಯಲ್ಲಿದ್ದ ರೈತರನ್ನು ಸರಕಾರ ಬೆಂಕಿಗೆ ದೂಡಿದಂತಾಗಿದೆ ಎಂದು ರೈತ ಮೋರ್ಚಾದ ರಾಜ್ಯ ಅಧ್ಯಕ್ಷ ಈರಣ್ಣ ಕಡಾಡಿ ತಿಳಿಸಿದ್ದಾರೆ. ಒಂದು ವೇಳೆ ಈ ಆದೇಶವನ್ನು ಹಿಂಪಡೆಯದಿದ್ದರೆ ರಾಜ್ಯದ ಸುಮಾರು 35 ಲಕ್ಷ ಪಂಪ್‍ಸೆಟ್‍ಗಳ ರೈತ ಬಳಕೆದಾರರೊಂದಿಗೆ ಬಿಜೆಪಿ ರೈತ ಮೋರ್ಚಾವು ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದ್ದಾರೆ. ಈ ಹಿಂದೆ ಪ್ರತಿ ನೀರಾವರಿ ಪಂಪ್‍ಸೆಟ್‍ಗಳಿಗೆ ಕೇವಲ 24 ಸಾವಿರ ರೂಪಾಯಿ ಶುಲ್ಕ ನಿಗದಿಯಾಗಿತ್ತು. ಸರ್ಕಾರದ ಈ ಆದೇಶದಿಂದ ಕನಿಷ್ಠ 2 ಲಕ್ಷ…
