ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಎಲ್ಲ ಅಭಿವೃದ್ಧಿ ಕಾರ್ಯಗಳೂ ಸ್ಥಗಿತಗೊಂಡಿವೆ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಕ್ಷೇಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ಸರಕಾರ ಮುಂದೆ ಹೋಗುತ್ತಿಲ್ಲ. ಚಕ್ರದಲ್ಲಿ ಗಾಳಿ ಇಲ್ಲದೆ ಮುಂದೆ ಹೋಗದ ವಾಹನದಂತಾಗಿದೆ ಸರಕಾರದ ಪರಿಸ್ಥಿತಿ ಎಂದು ಟೀಕಿಸಿದರು. ಅಪಾರ ಭರವಸೆ ನೀಡಿದ ನಂತರ ಅಧಿಕಾರಕ್ಕೆ ಬಂದ ಈ ಸರಕಾರವು ತಮ್ಮ ಆಶ್ವಾಸನೆ ಈಡೇರಿಸಲು ಪರದಾಡುತ್ತಿದೆ. ಸಿದ್ದರಾಮಯ್ಯನವರು ಎರಡನೇ ಅವಧಿಯಲ್ಲಿ ಪಕ್ಷದ ಮೇಲೆ ಹಿಡಿತ ಇಲ್ಲದ, ಸರಕಾರದ ಮೇಲೆ ನಿಯಂತ್ರಣ ಇಲ್ಲದ ವಿಚಿತ್ರ ಪರಿಸ್ಥಿತಿಯಲ್ಲಿ ಇದ್ದಾರೆ ಎಂದು ವಿಶ್ಲೇಷಿಸಿದರು. ಉಚಿತ ಬಸ್ ಪ್ರಯಾಣ ಯೋಜನೆ ಹೊರತುಪಡಿಸಿ ಗೃಹಲಕ್ಷ್ಮಿ ಯೋಜನೆಯು ಅರ್ಧದಷ್ಟು ಮಹಿಳೆಯರಿಗೆ ತಲುಪಿಲ್ಲ. ಬರಿಯ ಉಚಿತ ಕೊಡುಗೆಗಳ…
Year: 2023
ಮಹಾರಾಷ್ಟ್ರದಲ್ಲಿ ಮೀಸಲಾತಿ ಕಿಚ್ಚು; ಬೆಂಗಳೂರು-ಶಿರಡಿ KSRTC ಬಸ್ ಸೇವೆ ತಾತ್ಕಾಲಿಕ ಸ್ಥಗಿತ
ಬೆಂಗಳೂರು: ಮಹಾರಾಷ್ಟ್ರ ರಾಜ್ಯದಲ್ಲಿ ನಡೆಯುತ್ತಿರುವ ಮರಾಠ ಮೀಸಲಾತಿ ಚಳುವಳಿ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಮಹಾರಾಷ್ಟ್ರ ರಾಜ್ಯಕ್ಕೆ ಹೊರಡುವ ಮುಂಬೈ ಶಿರಡಿ ಮತ್ತು ಪುಣೆ ಅನುಸೂಚಿಗಳನ್ನು ರದ್ದುಗೊಳಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಪ್ರಕಟಣೆ ತಿಳಿಸಿದೆ. ಮಹಾರಾಷ್ಟ್ರ ರಾಜ್ಯದಲ್ಲಿ ನಡೆಯುತ್ತಿರುವ ಮರಾಠ ಮೀಸಲಾತಿ ಚಳುವಳಿ, ಹೋರಾಟ ನಡುವೆಯೂ ಪ್ರಯಾಣಿಕರ ಹಿತದೃಷ್ಟಿಯಿಂದ ಬೆಂಗಳೂರಿನಿಂದ ಹೊರಡುವ ಶಿರಡಿ (1301), ಮುಂಬೈ(1600) ಪುಣೆ (1804 & 1904) ಗೆ ನಿಲ್ಲಿಸಲಾಗಿದ್ದ ಅನುಸೂಚಿಗಳನ್ನು ಈ ದಿನದಿಂದ ಪರಿಸ್ಥಿತಿಯ ಮೇರೆಗೆ ಕಾರ್ಯಾಚರಣೆ ಮಾಡಲು ಉದ್ದೇಶಿಸಲಾಗಿತ್ತು. ಆದರೆ, ಮಹಾರಾಷ್ಟ್ರ ರಾಜ್ಯದಲ್ಲಿ ಈ ಸಂಬಂಧ ಚಳುವಳಿಯು ತೀವ್ರಗೊಂಡಿದ್ದು ಮಹಾರಾಷ್ಟ್ರ ರಸ್ತೆ ಸಾರಿಗೆ ಸಂಸ್ಥೆಯ ಹೆಚ್ಚು ಬಸ್‌ಗಳಿಗೆ ಜಕಂ ಮಾಡಲಾಗಿದೆ ಮತ್ತು ಕೆಲವೊಂದು ಬಸ್ಗಳನ್ನು ಸುಡಲಾಗಿದೆ ಎಂಬ ಮಾಹಿತಿಯ ಮೇರೆಗೆ ಬೆಂಗಳೂರು ಕೇಂದ್ರೀಯ ವಿಭಾಗದಿಂದ ಮಹಾರಾಷ್ಟ್ರ ರಾಜ್ಯಕ್ಕೆ ಹೊರಡುವ ಮುಂಬೈ ಶಿರಡಿ ಮತ್ತು ಪುಣೆ ಅನುಸೂಚಿಗಳನ್ನು ರದ್ದುಗೊಳಿಸಲಾಗಿದೆ…
KSRTC ಸಿಬ್ಬಂದಿಗೆ GOOD NEWS.. ಹೃದ್ರೋಗ ಚಿಕಿತ್ಸೆಗೆ ಕ್ರಮ.. ಜಯದೇವ ಆಸ್ಪತ್ರೆ ಜೊತೆ ಮಹತ್ವದ ಒಪ್ಪಂದ..
ಬೆಂಗಳೂರ : KSRTCಯ ಸಮಸ್ತ ಸಿಬ್ಬಂದಿಗೆ ಹತ್ತು ಮಾದರಿಯ ಹೃದಯ ಸಂಬಂಧಿ ವೈದ್ಯಕೀಯ ತಪಾಸಣೆಗಳನ್ನು ಮಾಡಿಸಲು ಐದು ವರ್ಷಗಳ ಅವಧಿಗೆ ಶ್ರೀ.ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯವರೊಂದಿಗೆ ಒಡಂಬಡಿಕೆಗೆ ಸಹಿ ಮಾಡಲಾಗಿದೆ. ನಿಗಮವು “ಆರೋಗ್ಯವಂತ ನೌಕರರೇ ಸಂಸ್ಥೆಯ ಆಸ್ತಿ” ಎಂದು ಪರಿಗಣಿಸಿದೆ. ನಿಗಮದಲ್ಲಿ ಒಟ್ಟು 34000 ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಆ ಪೈಕಿ 24686 ಮಂದಿ ಚಾಲಕ ಮತ್ತು ನಿರ್ವಾಹಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ನಿಗಮದ ನೌಕರರ ಕಾರ್ಯಸ್ವರೂಪ, ಜೀವನಶೈಲಿ ಮತ್ತು ಇತರೆ ಕಾರಣಗಳಿಂದಾಗಿ ನೌಕರರಲ್ಲಿ ಹೃದಯಾಘಾತ/ ಹೃದಯ ಸಂಬಂಧಿ ಕಾಯಿಲೆಗಳು ಇತ್ತೀಚಿನ ದಿನಗಳಲ್ಲಿ ತೀರಾ ಸಾಮಾನ್ಯವಾಗಿದೆ. ಅದರಲ್ಲೂ, 40 ವರ್ಷ ಮೇಲ್ಪಟ್ಟ ಚಾಲಕರು, ನಿರ್ವಾಹಕರು ಹಾಗೂ ಇತರೆ ಸಿಬ್ಬಂದಿಗಳಲ್ಲಿ ಹೃದಯ ಸಂಬಂಧಿ ಖಾಯಿಲೆಗಳು ಹೆಚ್ಚಾಗಿ ಕಂಡುಬರುತ್ತಿವೆ. ಈ ಸಂಬಂಧ, ನಿಗಮದ ಸಮಸ್ತ ಸಿಬ್ಬಂದಿಗಳನ್ನು ಹೃದಯ ಸಂಬಂಧಿಸಿದ ನಿರ್ಧಿಷ್ಟವಾದ ಪರೀಕ್ಷೆ/ ತಪಾಸಣೆಗಳಿಗೆ ಒಳಪಡಿಸುವ ಅವಶ್ಯಕತೆ ಮನಗಂಡು, ನೌಕರರಲ್ಲಿ…
‘ಇಡಿ ಸಮನ್ಸ್ ಅಕ್ರಮ ಮತ್ತು ರಾಜಕೀಯ ಪ್ರೇರಿತ’ ; “ಕೇಜ್ರಿವಾಲ್ ಆರೋಪ
ದೆಹಲಿ: ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಹೊರಡಿಸಿದ ಸಮನ್ಸ್ “ಅಕ್ರಮ ಮತ್ತು ರಾಜಕೀಯ ಪ್ರೇರಿತ” ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಇದನ್ನು ಬಿಜೆಪಿಯ ಒತ್ತಡದ ಮೇರೆಗೆ ಕಳುಹಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ನಾಲ್ಕು ರಾಜ್ಯಗಳಲ್ಲಿ ತಮ್ಮ ಚುನಾವಣಾ ಪ್ರಚಾರಕ್ಕೆ ಅಡ್ಡಿಪಡಿಸುವ ಉದ್ದೇಶ ಇದರ ಹಿಂದಿದೆ ಎಂದು ಆರೋಪಿಸಿರುವ ಕೇಜ್ರಿವಾಲ್, ಸಮನ್ಸನ್ನು ತಕ್ಷಣವೇ ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಈಗ ರದ್ದಾದ ಅಬಕಾರಿ ನೀತಿಯ ಬಗ್ಗೆ ವಿಚಾರಣೆಗಾಗಿ ಇಡಿ ಮುಂದೆ ಹಾಜರಾಗಲು ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಲಾಗಿದೆ. ಈ ಪ್ರಕರಣದಲ್ಲಿ ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್ ಸೇರಿದಂತೆ ಹಲವು ಆಪ್ ನಾಯಕರು ಈಗಾಗಲೇ ಬಂಧನಕ್ಕೊಳಗಾಗಿದ್ದಾರೆ.
ಕೇವಲ ‘ಪಾನಿ-ಪೂರಿ’ಗೋಸ್ಕರ ನಾವು ಹಿಂದಿ ಕಲಿಯಬೇಕಾ? ಮಗುವಿನ ಮಾತಿಗೆ ಸಕತ್ ಲೈಕ್ಸ್
ನನ್ನ ಮಗಳಿಂದ ಹಿಂದಿಹೇರಿಕೆಯ ಬಗ್ಗೆ ಎರಡು ಮಾತು..#StopHindiImposition pic.twitter.com/RGkQIgwS3v — ಜಹೊಮ ತಿಪ್ಪೇಸ್ವಾಮಿ | JHM Thippeswamy (@jahomathi) November 1, 2023
15 ತಿಂಗಳ ಮಗುವಿಗೆ ಅಪರೂಪದ ಕಾಯಿಲೆ; ಬೇಕಿದೆ 17.5 ಕೋಟಿ ರೂ ಬೆಲೆಯ ಔಷಧಿ; ಪ್ರಧಾನಿಗೆ ಸಿಎಂ ಪತ್ರ
ಬೆಂಗಳೂರು: ಕರ್ನಾಟಕದ 15 ತಿಂಗಳ ಮೌರ್ಯ ಎಂಬ ಪುಟ್ಟ ಕಂದ ‘ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈ ಮಗುವಿನ ಚಿಕಿತ್ಸೆಗೆ ಅಗತ್ಯವಿರುವ ಔಷಧಿ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರ ಗಮನಸೆಳೆದಿದ್ದಾರೆ. https://twitter.com/MauryaFightsSMA/status/1719718446479622399?t=iAVoydAIlSRuxTY0NvmyUg&s=19 ಪ್ರಧಾನಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ, ಈ ಮಗುವಿನ ಖಾಯಿಲೆಯನ್ನು ಗುಣಪಡಿಸಬಹುದಾದ ಝೋಲ್ಗೆನ್‌ಸ್ಮ ಎಂಬ ಚುಚ್ಚುಮದ್ದನ್ನು ವಿದೇಶದಿಂದ ಆಮದು ಮಾಡಿಕೊಳ್ಳಬೇಕಾಗಿದ್ದು, ಅದರ ಬೆಲೆ ರೂ.17.5 ಕೋಟಿ ಇದೆ. ಕೇಂದ್ರ ಸರ್ಕಾರವು ಇದನ್ನು ಮಾನವೀಯ ನೆಲೆಗಟ್ಟಿನಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಆಮದು ಸುಂಕದಿಂದ ವಿನಾಯಿತಿ ನೀಡುವ ಮೂಲಕ ಕರುನಾಡಿನ ಪುಟ್ಟ ಕಂದನ ಪ್ರಾಣ ಉಳಿಸಲು ನೆರವಾಗಬೇಕು ಎಂದು ಮನವಿ ಮಾಡಿದ್ದಾರೆ. ಈ ಪತ್ರವನ್ನು ಸಿಎಂ ಅವರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 68 ಮಂದಿ ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
ಬೆಂಗಳೂರು: ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ರಾಜ್ಯ ಸರ್ಕಾರ ನೀಡುವ ಪ್ರತಿಷ್ಠಿತ ‘ರಾಜ್ಯೋತ್ಸವ ಪ್ರಶಸ್ತಿಯನ್ನು ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರದಾನ ಮಾಡಲಾಯಿತು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 68 ಮಂದಿ ಗಣ್ಯರಿಗೆ ಹಾಗೂ 10 ಸಂಘ ಸಂಸ್ಥೆಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿದರು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು. ಮುಖ್ಯಮಂತ್ರಿ @siddaramaiah ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. pic.twitter.com/MKsus1TJJ9 — CM of Karnataka (@CMofKarnataka) November 1, 2023
102 ಕೋಟಿ ಹಣ ಪತ್ತೆ ಪ್ರಕರಣ: ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ
ಬೆಂಗಳೂರು: ಗುತ್ತಿಗೆದಾರರ ಬಳಿ ಈಚೆಗೆ ಸಿಕ್ಕಿದ 102 ಕೋಟಿ ಹಣಕ್ಕೆ ಸಂಬಂಧಿಸಿ ನೈತಿಕ ಹೊಣೆ ಹೊತ್ತು ಸಿಎಂ ಮತ್ತು ಡಿಸಿಎಂ ರಾಜೀನಾಮೆ ನೀಡಬೇಕು. ಈ ಹಣ ಯಾರದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಬಹಿರಂಗಪಡಿಸಲಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ವೇಣುಗೋಪಾಲ್ ಮತ್ತು ಸುರ್ಜೇವಾಲಾ ಬಂದಿದ್ದಾರೆ. ಇವರಿಬ್ಬರು ಬಂದ ತಕ್ಷಣ ಕರ್ನಾಟಕದ ಜನರು ಕಾಂಗ್ರೆಸ್ ಪಕ್ಷಕ್ಕೆ ಗುರಿ ನಿಶ್ಚಯ ಮಾಡಲು ಬಂದಿದ್ದಾರೆಂದು ಮಾತನಾಡುತ್ತಾರೆ. ಪಂಚ ರಾಜ್ಯಗಳಿಗೆ ಚುನಾವಣೆ ನಡೆಯುತ್ತಿದೆ. ಆ ಹಿನ್ನೆಲೆಯಲ್ಲಿ ಗುರಿ ನಿಗದಿಪಡಿಸಲು ಬಂದಿದ್ದಾರೆ ಎಂದು ಜನರು ಮಾತನಾಡುತ್ತಿದ್ದು, ಇದಕ್ಕೆ ಕಾಂಗ್ರೆಸ್ಸಿಗರು ಉತ್ತರ ಕೊಡಬೇಕೆಂದು ಆಗ್ರಹಿಸಿದರು. ಅವರು ಬಂದು ಹೋಗಿ ಕೆಲವೇ ದಿನಗಳಲ್ಲಿ ಇಬ್ಬರು ಗುತ್ತಿಗೆದಾರರ ಮನೆಗಳಲ್ಲಿ 102…
ಲೋಕಸಭೆ ಚುನಾವಣೆ: 15 ದಿನಗಳಲ್ಲಿ ಸಂಭಾವ್ಯ ಕೈ ಅಭ್ಯರ್ಥಿಗಳ ಹೆಸರು ತಯಾರಿ
ಬೆಂಗಳೂರು: ಲೋಕಸಭೆ ಚುನಾವಣೆಗೆ ತಯಾರಿಯಲ್ಲಿ ತೊಡಗಿರುವ ಕಾಂಗ್ರೆಸ್ 15 ದಿನಗಳಲ್ಲಿ ಸಂಭಾವ್ಯ ಕೈ ಅಭ್ಯರ್ಥಿಗಳ ಹೆಸರು ಸಿದ್ಧಪಡಿಸಲು ಕಸರತ್ತು ನಡೆಸುತ್ತಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಬುಧವಾರ ನಡೆದ ಹಿರಿಯ ನಾಯಕರ ಸಭೆ ಗಮನಸೆಳೆಯಿತು. ಕಚೇರಿಯಲ್ಲಿ ನಡೆದ ಸುದೀರ್ಘ ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆ ತಯಾರಿ ಕುರಿತು ಚರ್ಚೆ ಮಾಡಲಾಯಿತು. ಕರ್ನಾಟಕ ರಾಜ್ಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ತಂತ್ರಗಾರಿಕೆಯ ಕೇಂದ್ರವಾಗಿದೆ. ಸಂಸತ್ ಚುನಾವಣೆಯಲ್ಲಿ ರಾಜ್ಯದ ಜನ 20ಕ್ಕೂ ಹೆಚ್ಚು ಸಂಸದರನ್ನು ಆಯ್ಕೆ ಮಾಡುವ ವಿಶ್ವಾಸ ನಮಗಿದೆ. ನಾವು 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಶ್ರಮಿಸುವುದಾಗಿ ಮುಖ್ಯಮಂತ್ರಿಗಳು ಹಾಗೂ ಅಧ್ಯಕ್ಷರು ನಮಗೆ ಭರವಸೆ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ತಿಳಿಸಿದ್ದಾರೆ. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಜನರು ಸಂತೋಷವಾಗಿದ್ದಾರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ…
ಪ್ರಜಾಪ್ರಭುತ್ವ ದ ಬೆಳವಣಿಗೆಯಲ್ಲಿ ಮಾಧ್ಯಮ ಗಳ ಪಾತ್ರ ಮುಖ್ಯ: ದಿನೇಶ್ ಗುಂಡೂರಾವ್
ಮಂಗಳೂರು: ಪ್ರಜಾಪ್ರಭುತ್ವ ದ ಬೆಳವಣಿಗೆಯಲ್ಲಿ ಮಾಧ್ಯಮ ಗಳ ಪಾತ್ರ ಮುಖ್ಯ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಇದರ ಸಹಭಾಗಿತ್ವದಲ್ಲಿ ಆರಂಭಿಸಲಾಗಿರುವ ಮಾಧ್ಯಮ ಆರೋಗ್ಯ ಚಿಕಿತ್ಸಾ ಕೇಂದ್ರದಲ್ಲಿ 50ನೇ ಉಚಿತ ವೈದ್ಯಕಿಯ ತಪಾಸಣಾ ಶಿಬಿರ ಆರೋಗ್ಯ ಸಂಭ್ರಮ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಾಧ್ಯಮ ಗಳು ಭಯ ಮುಕ್ತ ವಾಗಿ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಬೇಕು ಎಂದರು. ಈ ರೀತಿಯ ವಾತವರಣ ನಿರ್ಮಿಸಲು ಸಹಕಾರ ಅಗತ್ಯ. ಹೆಚ್ಚು ತ್ತಿರುವ ಸಾಮಾಜಿಕ ಜಾಲತಾಣಗಳ ನಡುವೆ ಪತ್ರಿಕೆ ಗಳು ಜನರಿಗೆ ನೈಜ ಸುದ್ದಿ ಗಳನ್ನು ನೀಡುವಲ್ಲಿ ಇಂದಿಗೂ ವಿಶ್ವಾಸವನ್ನು ಉಳಿಸಿ ಕೊಂಡಿದೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ…
