ಪಕ್ಷ, ಸರ್ಕಾರದ ಆಂತರಿಕ ವಿಚಾರ ಸಾರ್ವಜನಿಕವಾಗಿ ಮಾತಾಡಿದರೆ ಶಿಸ್ತು ಕ್ರಮ: ಕಾಂಗ್ರೆಸ್ ನಾಯಕರಿಗೆ ‘ಹೈ’ ಎಚ್ಚರಿಕೆ

ಬೆಂಗಳೂರು: “ಪಕ್ಷದ ಸಂಘಟನೆ, ಅಧಿಕಾರ ಹಾಗೂ ಸರ್ಕಾರದ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಸಾರ್ವಜನಿಕವಾಗಿ ಮಾತನಾಡುವಂತಿಲ್ಲ. ಪಕ್ಷದ ಶಿಸ್ತು ಮೀರಿ ಮಾತನಾಡಿದರೆ ಯಾರೇ ಆದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಸಚಿವರು ಹಾಗೂ ಪಕ್ಷದ ಶಾಸಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿ, ಮುಂಬರುವ ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ, ನಿಗಮ-ಮಂಡಳಿ ನೇಮಕ ಹಾಗೂ ಪಕ್ಷದ ನಾಯಕರ ಹೇಳಿಕೆಗಳ ವಿಚಾರವಾಗಿ ಬುಧವಾರ ಸುದೀರ್ಘ ಚರ್ಚೆ ನಡೆಸಿದರು. ಸಭೆ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ರಣದೀಪ್ ಸಿಂಗ್ ಸುರ್ಜೆವಾಲ, “ಪಕ್ಷದ ಶಾಸಕರು ತಮ್ಮ ಕ್ಷೇತ್ರ ಹಾಗೂ ಜಿಲ್ಲೆಗೆ ಸಂಬಂಧಿಸಿದ ಅಭಿವೃದ್ಧಿ, ರಾಜ್ಯದ ಜನರಿಗೆ…

‘ಪ್ರೀತಿ-ಬುದ್ಧಿವಂತಿಕೆ ಮಿಳಿತವಾಗಿರುವ ಕನ್ನಡಿಗರು’: ರಾಜ್ಯೋತ್ಸವ ಬಗ್ಗೆ ಶುಭ ಹಾರೈಸಿದ ರಾಷ್ಟ್ರದೊರೆ

ದೆಹಲಿ: ಕನ್ನಡ ರಾಜ್ಯೋತ್ಸವ ಅಂಗವಾಗಿ ನಾಡಿನೆಲ್ಲೆಡೆ ಭುವನೇಶ್ವರಿ ಕೈಂಕರ್ಯ ಸಾಗಿದೆ. ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರೂ ರಾಜ್ಯೋತ್ಸವ ಸಂಭ್ರಮದಲ್ಲಿ ಮಿಂದೆದ್ದಿದ್ದಾರೆ. ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ ಎಂದವರು ಹೇಳಿಕೊಂಡಿದ್ದಾರೆ‌. ಕರುನಾಡಿನ ಬಗ್ಗೆ ತಮ್ಮದೇ ಶೈಲಿಯಲ್ಲಿ ವರ್ಣನೆ ಮಾಡಿರುವ ಪ್ರಧಾನಿಯವರು, ‘ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ’ ಎಂದು ಹಾಡಿ ಹೊಗಳಿದ್ದಾರೆ. ‘ಕರ್ನಾಟಕ ಮತ್ತಷ್ಟು ಪ್ರವರ್ಧಮಾನಕ್ಕೆ ಬರಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ’ ಎಂದೂ ಅವರು ಶುಭ ಹಾರೈಸಿದ್ದಾರೆ. ಈ ಕನ್ನಡ ರಾಜ್ಯೋತ್ಸವದಂದು ನಾವು ಕರ್ನಾಟಕದ ಚೈತನ್ಯವನ್ನು ಸಂಭ್ರಮಿಸುತ್ತಿದ್ದೇವೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು…

‘ಕರ್ನಾಟಕ ನೆಲ, ಜಲ, ಭಾಷೆ ವಿಚಾರದಲ್ಲಿ ನಾವೆಲ್ಲರೂ ಒಟ್ಟಾಗಿ ಕೇಂದ್ರಕ್ಕೆ ಮನವಿ ಮಾಡುತ್ತೇವೆ’: BJP ನಾಯಕರ ಶಪಥ

ಬೆಂಗಳೂರು: ಹೊರರಾಜ್ಯ, ಹೊರದೇಶಗಳಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿರುವ ಪರಭಾಷೆ ಮಾತನಾಡುವವರಿಗೆ ನಾವು ಕನ್ನಡ ಕಲಿಸಬೇಕು ಎಂದು ಬೆಂಗಳೂರು ಕೇಂದ್ರ ಸಂಸದ ಪಿ.ಸಿ. ಮೋಹನ್ ಅವರು ವಿನಂತಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ “ಕನ್ನಡ ರಾಜ್ಯೋತ್ಸವ”ದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ದಿನದಿನವೂ ನಾವು ಕನ್ನಡದ ಒಂದಷ್ಟು ಪದಗಳನ್ನು ಕಳಕೊಳ್ಳುವ ಪರಿಸ್ಥಿತಿ ಇದೆ. ಬೆಂಗಳೂರಿನ ಕನ್ನಡಿಗರು ವಿಶಾಲ ಹೃದಯಿಗಳು. ಯಾರಾದರೂ ಕನ್ನಡ ಅಲ್ಪಸ್ವಲ್ಪ ಕಲಿತು ಮಾತನಾಡುತ್ತಿದ್ದರೂ ಅವರು ಕನ್ನಡದಲ್ಲಿ ಮಾತನಾಡಲು ಅವಕಾಶ ಕೊಡದೆ ಅವರ ಭಾಷೆಯಲ್ಲೇ ಮಾತನಾಡುತ್ತೇವೆ. ಅದನ್ನು ನಿಲ್ಲಿಸಿ ಕನ್ನಡದಲ್ಲೇ ಮಾತನಾಡಿ ಎಂದು ಮನವಿ ಮಾಡಿದರು. ಕಳೆದ ವರ್ಷ ಯಥೇಚ್ಛವಾಗಿ ಮಳೆ ಬಂದಿತ್ತು. ಈ ವರ್ಷ ಮಳೆಯ ಕೊರತೆ ಆಗಿದೆ. ಕೊರತೆಯ ಸಂದರ್ಭದಲ್ಲೂ ಕಾವೇರಿ ನದಿಯಲ್ಲಿ ನೀರಿಲ್ಲ. ನೀರಿನ ಪ್ರಮಾಣ ಅರ್ಧಕ್ಕೂ ಕಡಿಮೆಯಾಗಿದೆ. ಈ ನಡುವೆ ಸುಪ್ರೀಂ ಕೋರ್ಟಿನ ಸೂಚನೆಯಂತೆ ನಾವು 2600 ಕ್ಯೂಸೆಕ್ಸ್ ನೀರನ್ನು…

‘ಕರ್ನಾಟಕವೇ ಹೆಸರು, ಕನ್ನಡವೇ ಉಸಿರು’: KSRTCಯಲ್ಲಿ ‘ರಾಜ್ಯೋತ್ಸವ ರಂಗು’ ಹೀಗಿದೆ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಬಂತೆಂದರೆ ಸಾಕು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ:(KSRTC) ಪಾಳಯದಲ್ಲಿ ಎಲ್ಲಿಲ್ಲದ ಸಡಗರ. ಕನ್ನಡಾಂಬೆಯ ಉತ್ಸವದಿಂದಾಗಿ ಕೆಎಸ್ಸಾರ್ಟಿಸಿ ಬಳಗದಲ್ಲಿ ಎಲ್ಲಿಲ್ಲದ ಸಡಗರ. ಅದರಲ್ಲೂ ಬೆಂಗಳೂರಿನಲ್ಲಿರುವ ನಿಗಮದ ಕೇಂದ್ರ ಕಚೇರಿಯಲ್ಲಿ ನಡೆದ ರಾಜ್ಯೋತ್ಸವ ಆಚರಣೆ ನಾಡಿನ ಗಮನಸೆಳೆಯಿತು. ‘ಕರ್ನಾಟಕ ಸಂಭ್ರಮ–50’ (ಹೆಸರಾಯಿತು ಕರ್ನಾಟಕ – ಉಸಿರಾಗಲೀ ಕನ್ನಡ) ಘೋಷಣೆಯೊಂದಿಗೆ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಗೀತ ಗಾಯನ ಕಾರ್ಯಕ್ರಮ ಈ ಬಾರಿಯ ಕನ್ನಡ ಅಭಿಮಾನಿಗಳ ಉತ್ಸಾಹವನ್ನು ಇಮ್ಮಡಿಗೊಳಿಸಿತು. ತಾಯಿ ಭುವನೇಶ್ವರಿ ದೇವಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ವಿ.ಅನ್ಬುಕುಮಾರ್ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಮುನ್ನುಡಿ ಬರೆದರು. ಕಾರ್ಯಕ್ರಮವನ್ನು ನಿಗಮದ ಎಲ್ಲಾ ಘಟಕಗಳು, ವಿಭಾಗಗಳು, ಕಾರ್ಯಾಗಾರಗಳು ಮತ್ತು ಬಸ್ ನಿಲ್ದಾಣಗಳಲ್ಲಿ ಕನ್ನಡ ಗೀತೆಗಳನ್ನು ಹಾಡುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು. ಸಮಾರಂಭದಲ್ಲಿ ಕೆಎಸ್ಸಾರ್ಟಿಸಿ ಸಿಬ್ಬಂದಿ ಮತ್ತು ಜಾಗೃತ ವಿಭಾಗದ ನಿರ್ದೇಶಕರಾದ ಡಾ.ನಂದಿನಿದೇವಿ ಕೆ…

68ನೇ ಕನ್ನಡ ರಾಜ್ಯೋತ್ಸವ; ಗರಿಗೆದರಿದ ಭುವನೇಶ್ವರಿ ಮಹಾವೈಭವ

ಬೆಂಗಳೂರು: ನಾಡಿನೆಲ್ಲೆಡೆ 68ನೇ ಕನ್ನಡ ರಾಜ್ಯೋತ್ಸವದ ರಂಗು ಆವರಿಸಿದೆ. ವಿವಿಧ ಸಂಘಟನೆಗಳು ಕನ್ನಡ ರಾಜ್ಯೋತ್ಸವ ಆಚರಣೆ ಮೂಲಕ ಸಂಭ್ರಮಿಸುತ್ತಿದೆ. ರಾಜ್ಯ ಸರ್ಕಾರದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ವೇಳೆ, ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ ಸಾಂಸ್ಕೃತಿಕ ಮಹಾವೈಭವಕ್ಕೆ ಮುನ್ನುಡಿ ಬರೆಯಲಾಯಿತು. ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಈ ಸಮಾರಂಭಕ್ಕೆ ಆಕರ್ಷಣೆ ತುಂಬಿದವು. ವಿವಿಧ ಶಾಲೆಗಳ ಮಕ್ಕಳು ನೃತ್ಯ ರೂಪಕ ಮೂಲಕ ಗಮನ ಸೆಳೆದರು. ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಸಚಿವರಾದ ಮಧು ಬಂಗಾರಪ್ಪ, ಎನ್.ಚಲುವರಾಯಸ್ವಾಮಿ, ಹಾಗೂ ರಿಜ್ವಾನ್ ಅರ್ಷದ್ ಸೇರಿದಂತೆ ಶಾಸಕರು, ಗಣ್ಯಾತಿಗಣ್ಯರು ಸಮಾರಂಭದಲ್ಲಿ ಭಾಗವಹಿಸಿದರು. ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ, ಜ್ಞಾನ ಸಂಪಾದನೆ ಸಾಧ್ಯವಿಲ್ಲ ಎನ್ನುವ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ…

ನಾಡಧ್ವಜಕ್ಕೆ ಸಿಗದ ಅನುಮತಿ; ಮೋದಿ ಸರ್ಕಾರದ ವಿರುದ್ದ ಸಿಎಂ ಕೆಂಡ; ನೆಟ್ಟಿಗರಿಂದ ಸಿಎಂಗೆ ತರಾಟೆ

ಬೆಂಗಳೂರು: ನಾಡ ಧ್ವಜಕ್ಕೆ ಅನುಮತಿ ನೀಡದೆ ಕೇಂದ್ರದ ಮೋದಿ ಸರ್ಕಾರ ಆರೂವರೆ ಕೋಟಿ ಕನ್ನಡಿಗರಿಗೆ ಅನ್ಯಾಯ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ನೆಟ್ಟಿಗರು, ಈ ಹಿಂದೆ 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ ಈ ಕೆಲಸವನ್ನು ಮಾಡಿಲ್ಲವೇಕೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಏನಿದು ಬೆಳವಣಿಗೆ? ಸಿಎಂ ಸಿದ್ದರಾಮಯ್ಯ ಅವರು ಟ್ವಿಟರ್‌ನಲ್ಲಿ ಹಾಕಿರುವ ಪೋಸ್ಟ್ ಗಮನಸೆಳೆದಿದೆ. ‘ಕನ್ನಡಕ್ಕೊಂದು ನಾಡಗೀತೆಯಂತೆ ನಾಡಧ್ವಜ ಇರಬೇಕೆಂಬುದು ಆರೂವರೆ ಕೋಟಿ ಕನ್ನಡಿಗರ ಒಕ್ಕೊರಲ ಒತ್ತಾಯ. ಕನ್ನಡಿಗರ ಎದೆಯ ದನಿಗೆ ಓಗೊಟ್ಟು ನಾಡದ್ವಜವೊಂದನ್ನು ವಿನ್ಯಾಸಗೊಳಿಸಿ, ಮನ್ನಣೆಗಾಗಿ ಐದು ವರ್ಷಗಳ ಹಿಂದೆಯೇ ನಾವು ಕೇಂದ್ರ ಸರ್ಕಾರಕ್ಕೆ ಕಳಿಸಿದ್ದೆವು. ಆದರೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈ ಬೇಡಿಕೆಯನ್ನು ತಿರಸ್ಕರಿಸಿ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅನ್ಯಾಯ ಎಸಗಿದೆ’ ಎಂದು ಸಿಎಂ ದೂರಿದ್ದಾರೆ. ‘ರಾಜ್ಯಗಳು ತಮ್ಮದೇ ಧ್ವಜ ಹೊಂದಲು ಸಂವಿಧಾನ ಇಲ್ಲವೇ ಕಾನೂನಿನಲ್ಲಿ ಯಾವ ಅಡ್ಡಿಯೂ ಇಲ್ಲ.…

‘ಬ್ಯಾಡ್ ಮ್ಯಾನರ್ಸ್’ ಡೈಲಾಗ್ ಪ್ರೋಮೋಗೆ ನೆಟ್ಟಿಗರಿಂದ ಸಕತ್ ಲೈಕ್ಸ್

ಅಭಿಷೇಕ್ ಅಂಬರೀಶ್ ಅಭಿನಯದ ಚಿತ್ರ ‘ಬ್ಯಾಡ್ ಮ್ಯಾನರ್ಸ್’ ಬಿಡುಗಡೆಗೆ ಸಜ್ಜಾಗಿದ್ದು, ಅಭಿಮಾನಿಗಳಲ್ಲಿ ತೀವ್ರ ನಿರೀಕ್ಷೆ ಹುಟ್ಟಿಸಿದೆ. ಸೂರಿ ನಿರ್ದೇಶನದ ‘ಬ್ಯಾಡ್ ಮ್ಯಾನರ್ಸ್’ ನವೆಂಬರ್ 24 ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಭರ್ಜರಿ ಪ್ರಚಾರದಲ್ಲಿ ತೊಡಗಿರುವ ಚಿತ್ರತಂಡ ಇದೀಗ ಡೈಲಾಗ್ ಪ್ರೋಮೋ ಬಿಡುಗಡೆ ಮಾಡಿದೆ. ಈ ಪ್ರೊಮೋ ಬಗ್ಗೆ ನೆಟ್ಟಿಗರಿಂದ ಸಕತ್ ಲೈಕ್ಸ್ ಸಿಕ್ಕಿದೆ. If it's #Suri's direction and #Maasti's penned dialogues, get ready for some fiery lines! Here's an intense dialogue promo from the upvoming film, #BadManners * @AbishekAmbareesh#ಬ್ಯಾಡ್ಮ್ಯಾನರ್ಸ is set to hit the screens on #NOV24. 🔥🎬📅 #BadManners in 25 days @RachitaRamDQ… pic.twitter.com/OR6n6Oeh8p — A Sharadhaa (@sharadasrinidhi) October 31, 2023

ಐ ಫೋನ್ ಕದ್ದಾಲಿಕೆ ಗುಮ್ಮಾ: ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ

ದೆಹಲಿ: ಕೆಲ ಸಮಯದ ಹಿಂದೆ ಫೇಗಾಸಿಸ್ ಹಗರಣ ರಾಷ್ಟ್ರ ರಾಜಕಾರಣದಲ್ಲಿ ತಲ್ಲಣ ಸೃಷ್ಟಿಸಿತ್ತು. ಇದೀಗ ಐ ಫೋನ್ ಕದ್ದಾಲಿಕೆ ಗುಮ್ಮಾ ಮತ್ತೊಮ್ಮೆ ರಾದಾಂತಕ್ಕೆ ಕಾರಣವಾಗಿದೆ. ‘ಸರ್ಕಾರಿ ಪ್ರಾಯೋಜಿತ ದಾಳಿಕೋರರು ತಮ್ಮ ಐಫೋನ್‌ಗಳಿಂದ ಮಾಹಿತಿಯನ್ನು ಕದಿಯಲು ಪ್ರಯತ್ನಿಸುತ್ತಿದ್ದಾರೆ’ ಎಂದು ಸೂಚಿಸುವ ಎಚ್ಚರಿಕೆ ಸಂದೇಶಗಳನ್ನು ಆ್ಯಪಲ್‌ ಕಂಪನಿಯಿಂದ ಸ್ವೀಕರಿಸಿರುವ ಬಗ್ಗೆ ವಿಪಕ್ಷಗಳ ಸಂಸದರು ಹೇಳಿಕೊಂಡಿದ್ದಾರೆ. ಈ ವಿಚಾರ ವಿವಾದದ ಸ್ವರೂಪ ತಾಳುತ್ತಿದ್ದಂತೆಯೇ ಕೇಂದ್ರ ಸರ್ಕಾರ ತನಿಖೆಗೆ ಆದೇಶಿಸಿದೆ. ಸರ್ಕಾರಿ ಪ್ರಾಯೋಜಿತ ದಾಳಿಕೋರರು ನಿಮ್ಮ ಐಫೋನ್‌ಗಳನ್ನು ಹ್ಯಾಕ್ ಮಾಡಬಹುದು ಎಂದು ಆ್ಯಪಲ್ ಕಂಪನಿ ಮಂಗಳವಾರ ಪ್ರತಿಪಕ್ಷಗಳ ಐವರು ಸಂಸದರಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ ಎನ್ನಲಾಗಿದೆ. ಈ ಬಗ್ಗೆ ಕೆಲವಯು ಸಾಮಾಜಿಕ ಮಾಧ್ಯಮಗಳಲ್ಲಿ ಮಾಹಿತಿ ಹಂಚಿಕೊಂಡಿದ್ದೆ ತಡ ದೇಶವ್ಯಾಪಿ ಆರೋಪ ಪ್ರತ್ಯಾರೋಪಗಳು ಕೇಳಿಬರಲಾರಂಭಿಸಿದೆ. ಈ ಪ್ರಕರಣ ಕೇಂದ್ರ ಸರ್ಕಾರಕ್ಕೂ ಸವಾಲೆಂಬಂತಾಗಿದ್ದು, ಆರೋಪ ಕುರಿತಂತೆ ಸರ್ಕಾರ ತನಿಖೆಗೆ ಆದೇಶಿಸಿದೆ. ಈ ಕುರಿತು ಟ್ವೀಟ್ ಮಾಡಿರುವ…