ಈ ಬಾರಿ 68 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ; ಇಲ್ಲಿದೆ ಪುರಸ್ಕೃತರ ಪಟ್ಟಿ

ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ರಾಜ್ಯ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಿದೆ. ಈ ಬಾರಿ 68 ಮಂದಿಗೆ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿದೆ. 68 ಜನರಿಗೆ ವೈಯಕ್ತಿಕ ವಿಭಾಗದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದ್ದು, ಕನ್ನಡಕ್ಕಾಗಿ ಸೇವೆ ಸಲ್ಲಿಸಿದ 10 ಸಂಘ ಸಂಸ್ಥೆಗಳಿಗೆ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಈ ಬಾರಿ 50ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ‘ಕರ್ನಾಟಕ ಸಂಭ್ರಮ 50 ವರ್ಷ’ ಎಂಬ ಹೆಸರಿನಲ್ಲಿ 10 ಪ್ರಶಸ್ತಿಯನ್ನೂ ನೀಡಲಾಗುತ್ತಿದೆ. ಪ್ರಶಸ್ತಿಯು 5 ಲಕ್ಷ ರೂ. ನಗದು ಹಾಗೂ 25 ಗ್ರಾಂ ಚಿನ್ನದ ಪದಕವನ್ನು ಒಳಗೊಂಡಿದೆ. ಪ್ರಶಸ್ತಿ ಪಟ್ಟಿ ಹೀಗಿದೆ. ಸಂಗೀತ/ನೃತ್ಯ ಕ್ಷೇತ್ರ: ಡಾ. ನಯನ ಎಸ್ ಮೋರೆ, ನೀಲಾ ಎಂ ಕೊಡ್ಲಿ, ಶಬ್ಬೀರ್ ಅಹಮದ್, ಡಾ. ಎಸ್ ಬಾಳೇಶ ಭಜಂತ್ರಿ. ಚಲನಚಿತ್ರ ಕ್ಷೇತ್ರ: ಡಿಂಗ್ರಿ ನಾಗರಾಜ, ಬಿ. ಜನಾರ್ದನ (ಬ್ಯಾಂಕ್ ಜನಾರ್ದನ). ರಂಗಭೂಮಿ…

ಮಂಗಳೂರು-ಉಡುಪಿ ಜಿಲ್ಲೆಗಳಲ್ಲಿ ಐಟಿ ದಾಳಿ: ಆಭರಣ ಉದ್ಯಮಿಗಳಿಗೆ ಶಾಕ್

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಆಭರಣ ಉದ್ಯಮಿಗಳಿಗೆ ಆದಾಯ ತೆರಿಗೆ ಇಲಾಖೆ ಶಾಕ್ ನೀಡಿದೆ. ಮಂಗಳವಾರ ಬೆಳ್ಳಂಬೆಳಿಗ್ಗೆ ಹಲವು ಆಭರಣ ಮಳಿಗೆಗಳ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮಂಗಳೂರು ಶಿವಭಾಗ್ ನ ಆಭರಣ ಮಳಿಗೆಗಳ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಉಡುಪಿ, ಕುಂದಾಪುರ, ಬ್ರಹ್ಮಾವರ, ಪಡುಬಿದ್ರಿ, ಕಾರ್ಕಳ, ಪುತ್ತೂರು ಸೇರಿದಂತೆ ಹಲವೆಡೆ ಆಭರಣ ಮಳಿಗೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

KSRTC ಬಸ್ಸಿಗೆ ಬೆಂಕಿ ಹಚ್ಚಿ ಪುಂಡಾಟ; ಮಹಾರಾಷ್ಟ್ರ-ಕರ್ನಾಟಕ ನಡುವೆ ಬಸ್ ಸಂಚಾರ ತಾತ್ಕಾಲಿಕ ಸ್ಥಗಿತ

ಬೆಳಗಾವಿ: ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಕರಾಳ ದಿನ ಆಚರಿಸಲು ಎಂಇಎಸ್ (MES) ಸಂಘಟನೆ ತಯಾರಿ ನಡೆಸಿರುವಂತೆಯೇ, ಮಹಾರಾಷ್ಟ್ರದಲ್ಲಿ ಕರ್ನಾಟಕ ಸರ್ಕಾರಿ ಬಸ್ಸಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪುಂಡಾಟ ಪ್ರದರ್ಶಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ನಡೆಯುತ್ತಿದ್ದು, ಉಸ್ಮಾನಾಬಾದ್​ ಜಿಲ್ಲೆಯ ಉಮರಗಾ ಸಮೀಪದ ತುರೋರಿ ಗ್ರಾಮದಲ್ಲಿ ಸೋಮವಾರ ಕಿಡಿಗೇಡಿಗಳು KSRTC ಬಸ್‌ಗೆ ಬೆಂಕಿ ಹಚ್ಚಿದ್ದಾರೆ. ಬೀದರ್‌ ಜಿಲ್ಲೆ ಭಾಲ್ಕಿಯಿಂದ ಪುಣೆಗೆ ತೆರಳುತ್ತಿದ್ದ ಬಸ್​ಗೆ ಬೆಂಕಿ ಹಚ್ಚಲಾಗಿದ್ದು ಬಸ್‌ನಲ್ಲಿದ್ದ 48 ಜನರು ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ನಂತರ ಸೋಮವಾರ ರಾತ್ರಿಯಿಂದ ಕರ್ನಾಟಕ-ಮಹಾರಾಷ್ಟ್ರ ಮಧ್ಯೆ‌ ಬಸ್ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು KSRTC ಮೂಲಗಳು ತಿಳಿಸಿವೆ.

ತೀವ್ರ ಬರ ಪರಿಸ್ಥಿತಿ ಇದ್ದರೂ ಕಲೆಕ್ಷನ್ ನಿಂತಿಲ್ಲ; ಸರ್ಕಾರದ ವಿರುದ್ದ ಬಿಜೆಪಿ ಟೀಕಾಸ್ತ್ರ

ಬೆಂಗಳೂರು: ತೀವ್ರ ಬರ ಪರಿಸ್ಥಿತಿ ಇದ್ದರೂ ಕಲೆಕ್ಷನ್ ಮಾಡುವುದನ್ನು ಸರ್ಕಾರ ನಿಲ್ಲಿಸಿಲ್ಲ. ಇದೊಂದು ಎಟಿಎಂ ಸರಕಾರ; ಇದೊಂದು ಲೂಟಿ ಸರಕಾರ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, .ವರ್ಗಾವಣೆ ದಂಧೆ ನಿರಂತರವಾಗಿ ನಡೆಯುತ್ತಿದೆ ಎಂದು ಆಕ್ಷೇಪಿಸಿದರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ನಡೆಸಿದ ಎಫ್‍ಡಿಎ ಪರೀಕ್ಷೆಯಲ್ಲಿ 20 ಜನರಿಗೆ ನಿಗದಿತ ಅವಧಿಗೆ ಬದಲಿಗೆ ಒಂದು ಗಂಟೆ ಹೆಚ್ಚುವರಿ ಅವಧಿಯನ್ನು ನೀಡಿದ್ದು ಯಾಕೆ? ಎಂದು ಕೇಳಿದ ಅವರು, ಈ ಸಂಬಂಧ 9 ಜನರನ್ನು ಮಾತ್ರ ಬಂಧಿಸಲಾಗಿದೆ. ಯಾಕೆ ಆರ್.ಡಿ.ಪಾಟೀಲ್ ಬಂಧಿಸಿಲ್ಲ? ನಿಮ್ಮ ಕಾರ್ಯಕರ್ತನೆಂದು ಬಂಧಿಸಿಲ್ಲವೇ ಎಂದು ಕೇಳಿದರು. ಈ ವಿಷಯವನ್ನು ಬಿಜೆಪಿ ಗಂಭೀರವಾಗಿ ತೆಗೆದುಕೊಳ್ಳಲಿದೆ. ಕೂಡಲೇ ಆರೋಪಿಗಳೆಲ್ಲರನ್ನು ಬಂಧಿಸಿ ಎಂದು ಅವರು ಆಗ್ರಹಿಸಿದರು. ಕಲಬುರ್ಗಿ, ಯಾದಗಿರಿಯಲ್ಲಿ ಪ್ರತಿಭಟನೆ ಮಾಡಲಾಗುತ್ತದೆ ಎಂದ ಅವರು, ಅಧಿಕಾರಿಗಳು, ಸಚಿವರ ಸಹಕಾರ ಇಲ್ಲದೆ ಹೀಗಾಗಲು ಸಾಧ್ಯವಿಲ್ಲ ಎಂದು…

ಬರ ಪರಿಸ್ಥಿತಿ ಅಧ್ಯಯನ ಹೆಸರಲ್ಲಿ BJPಯ 17 ತಂಡಗಳಿಂದ 33 ಜಿಲ್ಲೆಗಳಲ್ಲಿ ಪ್ರವಾಸ 

ಬೆಂಗಳೂರು: ಬರ ಪರಿಸ್ಥಿತಿ ಅಧ್ಯಯನಕ್ಕೆ ಬಿಜೆಪಿಯ 17 ತಂಡಗಳು ರಾಜ್ಯದ ಎಲ್ಲ 33 ಜಿಲ್ಲೆಗಳಿಗೆ ಪ್ರವಾಸ ಮಾಡಲಿವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರತಿಯೊಂದು ತಂಡ 2 ಜಿಲ್ಲೆಗಳಿಗೆ ಭೇಟಿ ಕೊಡಲಿದೆ. ಯಡಿಯೂರಪ್ಪ ನೇತೃತ್ವದ ತಂಡ ತುಮಕೂರು, ಮಧುಗಿರಿ, ಬೆಂಗಳೂರಿನ ಪ್ರವಾಸ ಮಾಡಲಿದೆ. ನಳಿನ್‍ ಕುಮಾರ್ ಕಟೀಲ್ ಅವರ ತಂಡವು ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೆ ಭೇಟಿ ಕೊಡಲಿದೆ. ಸಿ.ಟಿ.ರವಿಯವರ ತಂಡವು ಕೋಲಾರ ಮತ್ತು ಚಿಕ್ಕಬಳ್ಳಾಪುರಕ್ಕೆ ತೆರಳುತ್ತಿದೆ ಎಂದರು. ಈಶ್ವರಪ್ಪ- ಬಳ್ಳಾರಿ, ಕೊಪ್ಪಳ, ಸದಾನಂದಗೌಡರ ತಂಡ- ಮಂಡ್ಯ, ಹಾಸನ, ಗೋವಿಂದ ಕಾರಜೋಳ ಅವರು ಧಾರವಾಡ ಮತ್ತು ವಿಜಯನಗರ, ಬಸನಗೌಡ ಪಾಟೀಲ ಯತ್ನಾಳರು ಮೈಸೂರು, ಚಾಮರಾಜನಗರ- ಹೀಗೆ ವಿವಿಧ ತಂಡಗಳು ವಿವಿಧ ಜಿಲ್ಲೆಗಳಿಗೆ ತೆರಳುತ್ತಿವೆ ಎಂದು…

ಕಾಂಗ್ರೆಸ್ ಪಾಳಯದಲ್ಲಿ ಜಾರಕಿಹೊಳಿ ಹೇಳಿಕೆಯ ಕೋಲಾಹಲ

ಬೆಂಗಳೂರು: ಬಿಜೆಪಿ ನಾಯಕರು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಹೇಳಿಕೆ ನೀಡುತ್ತಿರುವುದನ್ನು ಖಂಡಿಸಿ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಬಳಸಿರುವ ಪದವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಬಿಜೆಪಿ ಪಕ್ಷದ ಕೆಲವು ನಾಯಕರು ಮತ್ತೆ ಆಪರೇಷನ್ ಕಮಲಕ್ಕೆ ಮುಂದಾಗಿ ಬ್ಲಾಕ್ ಮೇಲ್ ಹೇಳಿಕೆ ನೀಡುತ್ತಿದ್ದಾರೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಆರ್, ಅಶೋಕ್, ಅಶ್ವಥ್ ನಾರಾಯಣ, ಸಿ.ಪಿ.ಯೋಗೇಶ್ವರ್, ಹಾಗೂ ಜೆಡಿಎಸ್ ಪಕ್ಷದ ಎಚ್.ಡಿ. ಕುಮಾರಸ್ವಾಮಿ ರವರ ಬ್ಲಾಕ್ ಮೇಲ್ ತಂತ್ರವನ್ನು ಕಾಂಗ್ರೆಸ್ ನಾಯಕರು ಖಂಡಿಸಿದರು. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕೆಲವು ನಾಯಕರು ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಕುತಂತ್ರ ರಾಜಕೀಯ ಮಾಡುವ ಮೂಲಕ ಅವರ ವಿರುದ್ಧ ಷಡ್ಯಂತರವನ್ನು ಮಾಡುತ್ತಿದ್ದಾರೆ ಅದನ್ನ ಎದುರಿಸುವ ಶಕ್ತಿ ಡಿ.ಕೆ ಶಿವಕುಮಾರ್ ಅವರಿಗೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಇದೆ, ಜನಪರ ಆಡಳಿತ…

KSRTC ನೌಕರರಿಗೆ ಬಂಪರ್.. ನೌಕರರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತ 10 ಲಕ್ಷ ರೂಪಾಯಿಗೆ ಹೆಚ್ಚಳ

ಬೆಂಗಳೂರು: ದೇಶದ ರಸ್ತೆ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC)ಯ ನೌಕರರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಮೊತ್ತವನ್ನು ರೂ. 3.00 ಲಕ್ಷಗಳಿಂದ ರೂ.10.00 ಲಕ್ಷಗಳಿಗೆ ಏರಿಕೆ ಮಾಡಲಾಗಿದೆ. KSRTCಯಲ್ಲಿ ಈಗಾಗಲೇ ಸೇವೆಯಲ್ಲಿರುವಾಗ ಸಿಬ್ಬಂದಿಗಳು ಖಾಸಗಿ ಅಥವಾ ಕರ್ತವ್ಯ ನಿರತ ಅಪಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ ಅಪಘಾತ ವಿಮಾ ಪರಿಹಾರ ಯೋಜನೆಯಡಿ, ರೂ 1 ಕೋಟಿ ಮೊತ್ತದ ಆರ್ಥಿಕ ಪರಿಹಾರ ಒದಗಿಸುತ್ತಿದ್ದು, ಇಲ್ಲಿಯವರೆಗೆ 7 ಪ್ರಕರಣಗಳಲ್ಲಿ ಅಪಘಾತದಿಂದ ಮರಣ ಹೊಂದಿದ ನೌಕರರ ಅವಲಂಬಿತರಿಗೆ ತಲಾ ರೂ.1 ಕೋಟಿ ನೀಡಲಾಗಿದೆ. ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ ನೌಕರರ ಕುಟುಂಬದವರಿಗೆ ಅಂದರೆ ಕ್ಯಾನ್ಸರ್, ಸ್ಟ್ರೋಕ್, ಹೃದಯಾಘಾತ, ಕಿಡ್ನಿ ವೈಫಲ್ಯ ಸೇರಿದಂತೆ ಇತರೆ ಖಾಯಿಲೆಗಳಿಂದ ಪ್ರತಿ ವರ್ಷ 100 ನೌಕರರು ಮರಣ ಹೊಂದುತ್ತಿದ್ದಾರೆ. ಈ ರೀತಿ ತಮ್ಮ ಸೇವಾವಧಿಯಲ್ಲಿ ಮರಣ ಹೊಂದುತ್ತಿರುವ…

ಪ್ಯಾರಾ ಏಷ್ಯನ್‌ ಗೇಮ್ಸ್‌ 2023: ಬೆಂಗಳೂರಿನ ವಿದ್ಯಾರ್ಥಿನಿಯರಿಗೆ ಚಿನ್ನದ ಸಾಧನೆ

ಬೆಂಗಳೂರು: ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ 2023 ಪ್ಯಾರಾ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿಯೂ ಭಾರತೀಯ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಅದರಂತೆ ಬೆಂಗಳೂರಿನ ಕೆ.ಆರ್.ಪುರಂ ಪ್ರಥಮ ದರ್ಜೆ ಕಾಲೇಜಿನ ದ್ವಿತೀಯ ವರ್ಷದ ಬಿ.ಎ.ವಿದ್ಯಾರ್ಥಿನಿ ರಕ್ಷಿತಾ ರಾಜು, ತೃತೀಯ ವರ್ಷದ ಬಿ.ಎ.ವಿದ್ಯಾರ್ಥಿನಿ ರಾಧಾ ವೆಂಕಟೇಶ್ ಕೂಡ ಇದೀಗ ಈ ಪ್ರತಿಷ್ಠಿತ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ದೇಶವೇ ಹೆಮ್ಮೆ ಪಡುವಂತಹ ಸಾಧನೆ ಮಾಡಿದ್ದಾರೆ. ಅಂಧ ಓಟಗಾರ್ತಿಯಾಗಿರುವ ರಕ್ಷಿತಾ ರಾಜು 1500 ಮೀಟರ್ ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕವನ್ನು ಗೆದ್ದುಕೊಂಡಿದ್ದಾರೆ. ಬುಧವಾರ ನಡೆದ ಟಿ-11 ವಿಭಾಗದ 1500 ಮೀಟರ್ ಓಟದ ಸ್ಪರ್ಧೆಯಲ್ಲಿ 5 ನಿಮಿಷ 21.45 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಚಿನ್ನದ ಪದಕವನ್ನು ಕೊರಳಿಗೇರಿಸಿಕೊಂಡಿದ್ದಾರೆ. ಇನ್ನು ಮತ್ತೋರ್ವ ವಿದ್ಯಾರ್ಥಿನಿ ರಾಧಾ ವೆಂಕಟೇಶ್ ಟಿ-15 ವಿಭಾಗದ 1500 ಮೀಟರ್ ಓಟದ ಸ್ಪರ್ಧೆಯಲ್ಲಿ 5 ನಿಮಿಷ 19.35 ಸೆಕೆಂಡುಗಳಲ್ಲಿ ಗುರಿ ಮುಟ್ಟಿರುತ್ತಾರೆ. ಏಷ್ಯನ್‌…

ದಸರಾ ಅವಧಿಯಲ್ಲಷ್ಟೇ ವಿಶೇಷ ಬಸ್ ಟಿಕೆಟ್ ದರ ಹೆಚ್ಚಳ; ಸೀಮಿತ ಅವಧಿ ನಂತರ ಯಥಾಸ್ಥಿತಿ.. ಟಿಕೆಟ್ ದರ ವ್ಯತ್ಯಾಸದ ಟ್ವೀಟಾಸ್ತ್ರಕ್ಕೆ KSRTC ಸ್ಪಷ್ಟನೆ

ರಾಜಧಾನಿ-ಸಾಂಸ್ಜೃತಿಕ ನಗರಿ ನಡುವೆ ದಸರಾ ಸಂದರ್ಭ ಸೀಮಿತ ಅವಧಿಗಷ್ಟೇ KSRTC ಪ್ರಯಾಣ ದರ ಏರಿಕೆ ಮಾಡಲಾಗಿದೆ ಎಂದು ನಿಗಮ ಸ್ಪಷ್ಟಪಡಿಸಿದೆ‌.  ಬೆಂಗಳೂರು: KSRTC ದರ ಹೆಚ್ಚಳ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ನಡೆಸಿರುವ ಚರ್ಚೆ ಹಿನ್ನೆಲೆಯಲ್ಲಿ ವಿದ್ಯಮಾನಗಳ ಕುರಿತಂತೆ ಸ್ಪಷ್ಟನೆ ನೀಡಿರುವ ನಿಗಮ, ವಿಶೇಷ ಸಂದರ್ಭಗಳಲ್ಲಿ ವಿಶೇಷ ಸೌಲಭ್ಯಕ್ಕನುಗುಣವಾಗಿ ಕೈಗೊಳ್ಳುವ ನಿರ್ಧಾರ ದಸರಾ ವಿಶೇಷ ಸಂದರ್ಭದಲ್ಲಿ ಅನ್ವಯವಾಗಿದೆ. ಇದು ಸೀಮಿತ ಅವಧಿಯ ಕ್ರಮವಾಗಿದೆ ಎಂದು ಹೇಳಿದೆ.‌ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಕಳೆದ 4 ದಶಕಗಳಿಂದಲೂ ಪ್ರತಿ ವರುಷ ದಸರಾ ನಿಮಿತ್ತ 10 ದಿನಗಳ ಅಥವಾ ಸೀಮಿತ ಅವಧಿಗೆ ಅನ್ವಯವಾಗುವಂತೆ , ಮೈಸೂರು-ಬೆಂಗಳೂರು ನಡುವೆ ಕಾರ್ಯಾಚರಣೆಯಾಗುವ ದಸರಾ ವಿಶೇಷ ತಡೆರಹಿತ ಬಸ್ಸುಗಳಿಗೆ ನಿಯಮಾವಳಿಗಳನ್ವಯ ಶೇ.20 ಪ್ರಯಾಣ ದರ ಹೆಚ್ಚಿಸಿಗುತ್ತಿದೆ. ಸದರಿ ಪ್ರಯಾಣ ದರವು ಸೀಮಿತ ಅವಧಿ ಮುಗಿದ…