ಕಲಮಸ್ಸೆರಿ ಸರಣಿ ಸ್ಫೋಟ; ಮೃತರ ಸಂಖ್ಯೆ 3ಕ್ಕೆ ಏರಿಕೆ

ಎರ್ನಾಕುಲಂ: ಕೇರಳದ ಎರ್ನಾಕುಲಂನ ಕಲಮಸ್ಸೆರಿಯಲ್ಲಿ ಸಂಭವಿಸಿರುವ ಸರಣಿ ಬಾಂಬ್ ಸ್ಫೋಟದಲ್ಲಿ ಮೃತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಭಾನುವಾರ ಬೆಳಿಗ್ಗೆ ಕ್ರಿಶ್ಚಿಯನ್ ಸಮುದಾಯದ ಧಾರ್ಮಿಕ ಕಾರ್ಯಕ್ರಮ ಸಂದರ್ಭದಲ್ಲಿ ಸರಣಿ ಸ್ಫೋಟ ಸಂಭವಿಸಿತ್ತು. ಓರ್ವ ಮಹಿಳೆ ಸಾವನ್ನಪ್ಪಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದ ಗಾಯಾಳುಗಳ ಪೈಕಿ ಮತ್ತಿಬ್ಬರು ಚಿಜಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸರಣಿ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಈ ನಡುವೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಪೈಕಿ ಹಲವರ ಸ್ತಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ ಕಲಮಸ್ಸೆರಿಯ ಸರಣಿ ಸ್ಫೋಟದ ನಂತರ ಕೇರಳ ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಸಾಲಬಾಧೆ? ಬಡ ಕಾರ್ಮಿಕನ ಸಾವಿಗೆ ಕಾರಣವಾದ ಸಾಲದ ಶೂಲ..

ದೊಡ್ಡಬಳ್ಳಾಪುರ: ಸಾಲ ಬಾಧೆ ತಾಳಲಾರದೆ ವ್ಯಕ್ತಿಯೊಬ್ಬರು ನೇರಳೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂರುವ ಘಟನೆ ತಾಲ್ಲೂಕಿನ ರಘುನಾಥಪುರ ಬಳಿ ನಡೆದಿದೆ. ಮೃತಪಟ್ಟವರನ್ನು ರಘುನಾಥಪುರ ನಿವಾಸಿ ಗಂಗರಾಜು (40) ಎಂದು ಗುರುತಿಸಲಾಗಿದೆ. ಗಂಗರಾಜು ರಘುನಾಥಪುರ ಬಳಿಯ ಇಂಡೇನಾ ಇಂಡಿಯಾ ಪ್ರ್ಯವೇಟ್ ಕಂಪನಿಯಲ್ಲಿ ಕೆಲಸಕ್ಕೆ ಸೇರಿ ಸುಮಾರು 10 ವರ್ಷಗಳಿಂದ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ವರ್ಷದ ಹಿಂದೆ ಕೆಲಸ ಕಳೆದುಕೊಂಡಿದ್ದ ವಿಜಯ್ ಗೌಡ ಅವರು ಸಂಕಷ್ಟ ಪರಿಸ್ಥಿತಿಯಲ್ಲಿದ್ದರು ಎಂದು ಅವರ ಆಪ್ತರು ಹೇಳಿಕೊಂಡಿದ್ದಾರೆ. ಕೆಲಸ ಕಳೆದುಕೊಂಡ ಮೃತ ಗಂಗರಾಜ ಕೆಲಸ ಸಿಗದೆ ತನ್ನ ಸ್ವಂತ ಮನೆಯನ್ನು ಮಾರಿಕೊಂಡು, ಪತ್ನಿಯ ತವರು ನೆಲಮಂಗಲ ತಾಲ್ಲೂಕಿನ ತ್ಯಾಗದಹಳ್ಳಿಯಲ್ಲಿ ವಾಸವಿದ್ದರು, ಸಂಸಾರದ ನಿರ್ವಹಣೆಗಾಗಿ ಪರದಾಡುತ್ತಿದ್ದ ಅತಿಯಾದ ಸಾಲ ಮಾಡಿಕೊಂಡಿದ್ದು ಸಾಲ ಭಾದೆ ತಾಳಲಾರದೆ ಸೋಮವಾರ ಬೆಳಿನ ಜಾವ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಶಕ್ತಿ’ V/s ಜೇಬುಕಳ್ಳತನ’; ಬಿಜೆಪಿಗೆ ಧನ್ಯವಾದ ಎಂದ ಕಾಂಗ್ರೆಸ್

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಇದೀಗ ;ಶಕ್ತಿ’ ಜಟಾಪಟಿ ಜೋರಾಗಿ ಸಾಗಿದೆ. ರಾಜ್ಯ ಸಾರಿಗೆ ಸಂಸ್ಥೆ (KSRTC) ಸಾಮಾನ್ಯ ಬಸ್‌ಗಳ ದರವನ್ನೂ ನಾಲ್ಕೇ ತಿಂಗಳಲ್ಲಿ ಶೇ.20ರಷ್ಟು ಏರಿಕೆ ಮಾಡಿರುವ ತೀರ್ಮಾನ ಬಗ್ಗೆ ಪ್ರತಿಪಕ್ಷ ಬಿಜೆಪಿ ವ್ಯಂಗ್ಯವಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ‘ಜೇಬುಗಳ್ಳರಿದ್ದಾರೆ, ಎಚ್ಚರಿಕೆ’ ಎಂದು ಬಸ್ಸುಗಳಲ್ಲಿ ಬರೆದಿರುವುದನ್ನು ‘ಕಾಂಗ್ರೆಸ್‌ ಸರ್ಕಾರ ಜೇಬುಗಳ್ಳತನಕ್ಕೆ ಇಳಿದಿದೆ, ಎಚ್ಚರಿಕೆ’ ಎಂದು ಬದಲಿಸಬೇಕು’ ಎಂದು ವ್ಯಂಗ್ಯವಾಡಿದೆ. ಸಾಮಾನ್ಯ ಬಸ್‌ಗಳ ದರವನ್ನೂ ನಾಲ್ಕೇ ತಿಂಗಳಲ್ಲಿ ಶೇ.20ರಷ್ಟು ಏರಿಕೆ ಮಾಡಿರುವ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದು ಹಗಲು ದರೋಡೆ ಎಂದು ಬಣ್ಣಿಸಿರುವ ಬಿಜೆಪಿ, ಮೊದಲು ₹160 ರಲ್ಲಿ ಮುಗಿಯುತ್ತಿದ್ದ ಪ್ರಯಾಣಕ್ಕೆ ಈಗ ₹200ಕ್ಕೆ ಕೈ ಸುಟ್ಟುಕೊಳ್ಳಬೇಕು ಎಂದಿದೆ. ಅಷ್ಟೇ ಅಲ್ಲ, ಇನ್ನು ಒಂದೇ ತಿಂಗಳಲ್ಲಿ ಸ್ಥಗಿತಗೊಳ್ಳಲಿರುವ ಶಕ್ತಿ ಯೋಜನೆಯ ಎಲ್ಲಾ ಹೊರೆಯನ್ನೂ ಕರ್ನಾಟಕದ ಜನ ಹೊರಬೇಕಿರುವುದು ನಿಶ್ಚಿತ ಎಂದು ಹೇಳಿದೆ. “ಜೇಬುಗಳ್ಳರಿದ್ದಾರೆ, ಎಚ್ಚರಿಕೆ” ಎಂದು…

ಮೇಕೆದಾಟು ಯೋಜನೆ: ತಪ್ಪು ಮಾಹಿತಿ ಹರಿಬಿಟ್ಟರೇ ಸಿಎಂ? ಸಿದ್ದರಾಮಯ್ಯರಿಗೆ ಕೇಂದ್ರದ ತರಾಟೆ

ಬೆಂಗಳೂರು: ಮೇಕೆದಾಟು ಯೋಜನೆಯ ಸ್ಥಿತಿ-ಗತಿ ಹಾಗೂ ವಾಸ್ತವಾಂಶ ಏನೆಂಬುದು ತಿಳಿದಿದ್ದರೂ ಬ್ರೀಫೀಂಗ್ ತಂಡ ನೀಡಿದ ಅರ್ಧಂಬರ್ದ ಮಾಹಿತಿ ಆಧರಿಸಿತಪ್ಪು ಮಾಹಿತಿಗಳ ಸರಣಿಯನ್ನೇ ಸಿಎಂ ಸಿದ್ದರಾಮಯ್ಯ ಹರಿಬಿಟ್ಟಂತೆ ತೋರುತ್ತದೆ ಎಂದು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ. ಈ ಕುರಿತಂತೆ ಟ್ವಿಟ್ಟರ್’ನಲ್ಲಿ ಪೋಸ್ಟ್ ಹಾಕಿರುವ ಗಜೇಂದ್ರ ಸಿಂಗ್ ಶೇಖಾವತ್, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ ಎಂದು ಅವರು ಹೇಳಿದ್ದಾರೆ. ಮೇಕೆದಾಟು ಯೋಜನೆಯ ಸ್ಥಿತಿ-ಗತಿ ಹಾಗೂ ವಾಸ್ತವಾಂಶ ಏನೆಂಬುದು ನಿಮಗೆ ಚೆನ್ನಾಗಿ ತಿಳಿದಿದೆ. ನಿಮಗೆ ಬ್ರೀಫೀಂಗ್ ತಂಡ ನೀಡಿದ ಅರ್ಧಂಬರ್ದ ಮಾಹಿತಿ ಆಧರಿಸಿ ನೀವು ತಪ್ಪು ಮಾಹಿತಿಗಳ ಸರಣಿಯನ್ನೇ ಹರಿಬಿಟ್ಟಂತೆ…

ಭ್ರಷ್ಟರ ವಿರುದ್ಧ ಬ್ರಹ್ಮಾಸ್ತ್ರ: ರಾಜ್ಯದ 70ಕ್ಕೂ ಹೆಚ್ಚು ಕಡೆ ​ಲೋಕಾಯುಕ್ತ ದಾಳಿ

ಬೆಂಗಳೂರು: ಭ್ರಷ್ಟರ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸುತ್ತಿರುವ ಲೋಕಾಯುಕ್ತ ಪೊಲೀಸರು ಇಂದು ಬೆಳ್ಳಂಬೆಳಿಗ್ಗೆಯೇ ಕಾರ್ಯಾಚರಣೆಯ ಅಖಾಡಕ್ಕೆ ಧುಮುಕಿದ್ದಾರೆ. ರಾಜ್ಯಾದ್ಯಂತ ಏಕಕಾಲದಲ್ಲಿ 70ಕ್ಕೂ ಹೆಚ್ಚು ಕಡೆ ​ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆದಿದ್ದು, ಬೆಳ್ಳಂಬೆಳಗ್ಗೆ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ಕೈಗೊಂಡಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಮಾಹಿತಿ ಹಿನ್ನೆಲೆ ಕ್ಕಾರ್ಯಾಚರಣೆ ಕೈಗೊಂಡಿರುವ ಲಿಕಾಯುಕ್ತ ಅಧಿಕಾರಿಗಳು ಬೆಂಗಳೂರಿನ ಮೂರು ಕಡೆ ಕೆ.ಆರ್.​ಪುರಂ ಬಳಿ ಎಆರ್​ಒಗೆ ಸೇರಿದ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ ಏಕಕಾಲಕ್ಕೆ 9 ಕಡೆಗಳಲ್ಲಿ ದಾಳಿ ನಡೆದಿದೆ. ಶಿವಾಜಿನಗರ, ದಾನೇಶ್ವರಿ ಪಾರ್ಕ್, ದಾನಮ್ಮ ದೇವಿ ದೇವಸ್ಥಾನ ಬಳಿ ಇರುವ ಅಧಿಕಾರಿಗಳ ಮನೆಗಳಲ್ಲಿ ಶೋಧ ನಡೆಸಲಾಗಿದೆ. ಹಾವೇರಿ RFO ಪರಮೇಶಪ್ಪ ಪೇರಲನವರ್ ಹಾಗೂ ನ್ಯಾಮತಿ RFO ಮಾಲತೇಶ್​ ಮನೆ, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗದಲ್ಲಿಇಬ್ಬರು…

ಕಲಮಸ್ಸೆರಿ ಸ್ಫೋಟದ ಪ್ರತಿಧ್ವನಿ; ಕರ್ನಾಟಕದಲ್ಲಿ ಹೈ ಅಲರ್ಟ್

ಮಂಗಳೂರು: ಕೇರಳದ ಕಲಮಸ್ಸೆರಿ ಕನ್ವೆನ್ಷನ್ ಸೆಂಟರ್‌ನಲ್ಲಿ ಭಾನುವಾರ ಸಂಭವಿಸಿದ ಸರಣಿ ಸ್ಫೋಟದ ನಂತರ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಭಾನುವಾರ ಬೆಳಿಗ್ಗೆ ಕ್ರೈಸ್ತ ಸಮುದಾಯದ ಧಾರ್ಮಿಕ ಕಾರ್ಯಕ್ರಮದ ವೇಳೆ ಸರಣಿ ಸ್ಫೋಟ ಸಂಭವಿಸಿದ್ದು ಓರ್ವ ಸಾವನ್ನಪ್ಪಿ, 37 ಮಂದಿ ಗಾಯಗೊಂಡಿದ್ದಾರೆ. ಈ ಸರಣಿ ಸ್ಫೋಟದ ಹಿಂದೆ ಉಗ್ರರ ಕೈವಾಡದ ಶಂಕೆ ವ್ಯಕ್ತವಾಗಿದ್ದು ಈ ಬಗ್ಗೆ ಎನ್ಐಎ ತನಿಖೆ ನಡೆಸುತ್ತಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದ ಗಡಿ ಜಿಲ್ಲೆಗಳಲ್ಲೂ ಕಟ್ಟೆಚ್ಚರಕ್ಕೆ ಸರ್ಕಾರ ಸೂಚಿಸಿದೆ. ಈ ಕುರಿತು ಹೇಳಿಕೆ ನೀಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕರಾವಳಿ ಭಾಗ ಮತ್ತು ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಇಂತಹ ಘಟನೆ ನಡೆಯಲು ಅವಕಾಶ ನೀಡಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.

ವಿಜಿಯನಗರಂ ರೈಲು ದುರಂತ; ಸಾವಿನ ಸಂಖ್ಯೆ 13ಕ್ಕೆ ಏರಿಕೆ

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಜಿಯನಗರಂ ಬಳಿ ಎರಡು ರೈಲುಗಳ ನಡುವೆ ಅಪಘಾತ ಸಂಭವಿಸಿದ ಭೀಕರ ಅಪಘಾತದಲ್ಲಿ ಸತ್ತವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಭಾನುವಾರ ಸಂಭವಿಸಿದ ಈ ದುರಂತದಲ್ಲಿ 50 ಕ್ಕೂ ಹೆಚ್ಚು ಮಂದಿ ಗಾಯಗಗೊಂಡಿದ್ದಾರೆ. ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ತಾಂತ್ರಿಕ ದೋಷದಿಂದಾಗಿ ಸಿಗ್ನಲ್ ಸಂಬಂಧ ಕಾಯುತ್ತಿದ್ದ ವಿಶಾಖಪಟ್ಟಣಂ-ಪಲಸಾ ವಿಶೇಷ ಪ್ಯಾಸೆಂಜರ್ ರೈಲು ನಿಂತಿತ್ತು. ಅದಾಗಲೇ ಬಂದ ವಿಶಾಖಪಟ್ಟಣಂ-ರಾಯಗಢ ಪ್ಯಾಸೆಂಜರ್ ರೈಲು ನಿಂತಿದ್ದ ರೈಲಿಗೆ ಅಪ್ಪಳಿಸಿದೆ. ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಮೂರು ಬೋಗಿಗಳು ಹಳಿತಪ್ಪಿದ್ದು ಅದರಲ್ಲಿದ್ದ 13 ಮಂದಿ ಮೃತಪಟ್ಟಿದ್ದು 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಶಾಖಪಟ್ಟಣಂ ಹಾಗೂ ವಿಜಿಯನಗರಂ ಜಿಲ್ಲೆಗಳ ಆಸ್ಪತ್ರೆಗಳಿಗೆ ದಾಖಲಾಗಿದೆಎಂದು ಅಧಿಕಾರಿಗಳು ತಿಳಿಸಿದ್ದಾರೆ. Andhra Pradesh Train accident! 5th Train accident !pic.twitter.com/CkQhn0XYtM — Ashish Singh (@AshishSinghKiJi) October 29, 2023

ನೇಮಕಾತಿ ಪರೀಕ್ಷಾ ಅಕ್ರಮ; ವಸೂಲಿ ಹಣದಲ್ಲಿ ‘ಕೈ’ ಹೈಕಮಾಂಡ್ ಪಾಲೆಷ್ಟು? ಬಿಜೆಪಿ ಪ್ರಶ್ನೆ

ಬೆಂಗಳೂರು: ನಿಗಮ ಮಂಡಳಿಗಳ ನೇಮಕಾತಿ ಪರೀಕ್ಷಾ ಅಕ್ರಮ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಈ ಪ್ರಕರಣ ಇದೀಗ ಆಡಳಿತ ಹಾಗೂ ಪ್ರತಿಪಕ್ಷಗಳ ನಡುವೆ ಜಟಾಪಟಿಗೂ ಕಾರಣವಾಗಿದೆ. ಈ ಪ್ರಕರಣವನ್ನು ಮುಂದಿಟ್ಟು ಸಿದ್ದರಾಮಯ್ಯ ಸರ್ಕಾರವನ್ನು ಹಾಗೂ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿರುವ ಬಿಜೆಪಿ, ರಾಜ್ಯದ ATM ಸರ್ಕಾರವು ನೇಮಕಾತಿ ಪರೀಕ್ಷೆಗಳಲ್ಲಿಯೂ ಸಹ ಕಲೆಕ್ಷನ್‌ಗೆ ಇಳಿದಿದ್ದು, ಪ್ರತಿ ಅಭ್ಯರ್ಥಿಗಳಿಂದ ವಸೂಲಿ ಮಾಡಿರುವ 5-8 ಲಕ್ಷ ರರೊಪಾಯಿಗಳಲ್ಲಿ ಕಾಂಗ್ರೆಸ್ ಹೈಕಮಾಂಡ್ ಪಾಲೆಷ್ಟು ಎಂದು ಪ್ರಶ್ನಿಸಿದೆ. ಈ ಕುರಿತಂತೆ ಟ್ವಿಟ್ಟರ್’ನಲ್ಲಿ ಪೋಸ್ಟ್ ಹಾಕಿರುವ ಬಿಜೆಪಿ, ರಾಜ್ಯದ ATM ಸರ್ಕಾರ ನೇಮಕಾತಿ ಪರೀಕ್ಷೆಗಳಲ್ಲಿಯೂ ಸಹ ಕಲೆಕ್ಷನ್‌ಗೆ ಇಳಿದಿದೆ. ಕಾಂಗ್ರೆಸ್ ಮುಖಂಡ ಆರ್. ಡಿ.ಪಾಟೀಲ್ ಬೆಂಬಲಿಗರೇ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವುದನ್ನು ಗಮನಿಸಿದರೆ, ಕಾಂಗ್ರೆಸ್ ಸರ್ಕಾರವೇ ಪರೀಕ್ಷಾ ಅಕ್ರಮಕ್ಕೆ ಕುಮ್ಮಕ್ಕು ನೀಡಿದೆ ಎಂಬುದು ಸಾಬೀತಾಗುತ್ತದೆ ಎಂದಿದೆ. ಈ ಪರೀಕ್ಷಾ ಅಕ್ರಮದ ಬಗ್ಗೆ ತನಿಖೆ ನಡೆಸುತ್ತಿರೋ ಅಥವಾ…

ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

ಲಖನೌ: ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧ ಜಯಭೇರಿ ಭಾರಿಸಿರುವ ಭಾರತ ತಂಡ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೆ ಏರಿದೆ. ಭಾನುವಾರ ಇಂಗ್ಲೆಂಡ್ ವಿರುದ್ಧ ಜಯಗಳಿಸಿರುವ ಟೀಮ್ ಇಂಡಿಯಾ ಸೆಮಿಫೈನಲ್ಸ್ ಪ್ರವೇಶಿಸಿದ ಮೊದಲ ತಂಡವಾಗಿ ಗಮನಸೆಳೆದಿದೆ. ಭಾನುವಾರ ಲಖನೌದಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ 100 ರನ್ ಗಳ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ ನಡೆಸಿದ ಭಾರತ ತಂಡ ನಿಗಧಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 229ರನ್ ಗಳಿಸಿತ್ತು. 230 ರನ್ ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಟೀಮ್ ಇಂಡಿಯಾದ ಬೌಲಿಂಗ್ ದಾಳಿಗೆ ತತ್ತರಿಸಿ, 129 ರನ್ ಗಳಿಸುವಷ್ಟರಲ್ಲೇ ಸರ್ವಪತನ ಕಂಡಿತು. ಈ ಮೂಲಕ ವಿಶ್ವಕಪ್ ಟೂರ್ನಿಯಲ್ಲಿ ಈ ಗೆಲುವಿನ ಮೂಲಕ 100 ರನ್ ಗಳ ಜಯ ಗಳಿಸಿದ ಭಾರತ ತಂಡ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ಸ್ ಪ್ರವೇಶಿಸಿದ ಮೊದಲ ತಂಡವಾಗಿದೆ. ಇಂಗ್ಲೆಂಡ್ 10…