ಜಾತಿ ಗಣತಿ ವರದಿ ಸ್ವೀಕಾರ; ಸರ್ಕಾರದ ಸಹಮತ

‘ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ’ ಬೆಂಗಳೂರಿನಲ್ಲಿ ಕಾಳಿದಾಸ ಹೆಲ್ತ್ ಆಂಡ್ ಎಜುಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್ ಹಮ್ಮಿಕೊಂಡಿದ್ದ “ಪ್ರೇರಣಾ ಸಮಾರಂಭ” ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಜಾತಿಗಣತಿ ಮೊದಲು ಮಾಡಿದ್ದು ನಮ್ಮ ಸರ್ಕಾರ. ನಿಖರವಾಗಿ ಪ್ರತಿ ಜಾತಿಗಳ ಆರ್ಥಿಕ, ಸಾಮಾಜಿಕ, ಆರ್ಥಿಕ ಸ್ಥಿತಿ ತಿಳಿಯುವ ಉದ್ದೇಶದಿಂದ ಜಾತಿ ಜನಗಣತಿ ಮಾಡಿಸಿದ್ದೆ. ನಂತರ ಬಂದ ಸರ್ಕಾರಗಳು ಜಾತಿಗಣತಿ ವರದಿಯನ್ನು ಸ್ವೀಕರಿಸಲಿಲ್ಲ. ಈಗ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ್ ಹೆಗ್ಡೆ ಅವರು ಜಾತಿ ಗಣತಿ ವರದಿ ಕೊಡುತ್ತಾರೆ. ನಾವು ಸ್ವೀಕರಿಸುತ್ತೇವೆ ಎಂದರು. ಹಿಂದುಳಿದ ವರ್ಗಗಳ ವೈದ್ಯ ವಿದ್ಯಾರ್ಥಿಗಳಿಗೆ ಸನ್ಮಾನಿಸುವ ಹಾಗೂ ವಿದ್ಯಾರ್ಥಿ ವೇತನ ವಿತರಿಸುವ ಕಾರ್ಯಕ್ರಮ ಕನಕ ಗುರುಪೀಠದ ಸಿದ್ದರಾಮಾನಂದ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನೆರವೇರಿತು. ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಮಾಜಿ ಕಾರ್ಪೋರೇಟರ್…

ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ’

ಬೆಂಗಳೂರು: ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಕಾಳಿದಾಸ ಹೆಲ್ತ್ ಆಂಡ್ ಎಜುಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್ ಹಮ್ಮಿಕೊಂಡಿದ್ದ “ಪ್ರೇರಣಾ ಸಮಾರಂಭ” ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ. ಅವಕಾಶ ಸಿಕ್ಕರೆ, ಶಿಕ್ಷಣದ ಅನುಕೂಲಗಳು ಸಿಕ್ಕರೆ ಎಲ್ಲರ ಪ್ರತಿಭೆಗಳೂ ಹೊರಗೆ ಬರುತ್ತದೆ. ಆದ್ದರಿಂದ ಸ್ವಾಭಿಮಾನಿಗಳಾಗಿ, ಉತ್ತಮ ಪ್ರಜೆಗಳಾಗಿ ಬಾಳಲು ಶಿಕ್ಷಣ ಅತ್ಯಂತ ಅಗತ್ಯ. ಎಲ್ಲರೂ ಶಿಕ್ಷಣ ಪಡೆಯಿರಿ. ಶಿಕ್ಷಣದಿಂದ ವಂಚಿತರಾದವರಿಗೆ ಶಿಕ್ಷಣ ಪಡೆಯಲು ಸಹಕರಿಸಿ ಎಂದು ಕರೆ ನೀಡಿದರು. ನಮಗೆ ಸಹಕರಿಸಿದ ಸಮಾಜದ ಪರವಾಗಿ ನಾವುಗಳು ಶ್ರಮಿಸಬೇಕು. ಶ್ರಮ ಮತ್ತು ಗುರಿ ಇಲ್ಲದೇ ಹೋದರೆ ಯಾರೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದರು. ಬ್ರಿಟೀಷರು ಬರುವ ಮೊದಲು ಶೂದ್ರ ಸಮುದಾಯಗಳಿಗೆ ಶಿಕ್ಷಣ, ವಿದ್ಯೆ ನಿಷೇಧಿಸಲಾಗಿತ್ತು‌. ಮುಂದುವರೆದ ಜಾತಿಗಳ ಹೆಣ್ಣುಮಕ್ಕಳಿಗೂ ಮೊದಲು ವಿದ್ಯೆ ಕೊಡುವಂತಿರಲಿಲ್ಲ.…

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ತಾಲೀಮಿನಲ್ಲಿ ತೊಡಗಿದೆ. ಈ ನಡುವೆಯೇ ಆಡಳಿತಾರೂಢ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿಧಾನ ಪರಿಷತ್‌ನ ಬೆಂಗಳೂರು ಪದವೀಧರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕ್ಷರ ಕ್ಷೇತ್ರ, ಆಗ್ನೇಯ ಶಿಕ್ಷಕ್ಷ ಮತ್ತು ಈಶಾನ್ಯ ಪದವೀಧರ ಕ್ಷೇತ್ರಗಳಿಗೆ ಚುನಾವಣಾ ನಡೆಯಲಿದ್ದು, ಕಳೆದ ವಿಧಾನಸಭೆಯಲ್ಲಿ ಸ್ಪರ್ಧಿಸಿ ಸುಂಡಿರುವ ಪುಟ್ಟಣ್ಣ ಅವರಿಗೆ ಕಾಂಗ್ರೆಸ್ ಈ ಬಾರಿಯ ಮೇಲ್ಮನೆ ಅಖಾಡಕ್ಕೆ ಇಳಿಸಿ ಸ್ಪರ್ಧೆಗೆ ರೋಚಕತೆ ತುಂಬಿದೆ.  ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ: ಬೆಂಗಳೂರು ಪದವೀಧರ ಕ್ಷೇತ್ರ- ರಾಮೋಜಿಗೌಡ  ಬೆಂಗಳೂರು ಶಿಕ್ಷಕರ ಕ್ಷೇತ್ರ- ಪುಟ್ಟಣ್ಣ  ನೈಋತ್ಯ ಶಿಕ್ಷಕರ ಕ್ಷೇತ್ರ-ಕೆ.ಕೆ.ಮಂಜುನಾಥ್  ಆಗ್ನೇಯ ಶಿಕ್ಷಕರ ಕ್ಷೇತ್ರ-ಟಿ.ಡಿ.ಶ್ರೀನಿವಾಸ್  ಈಶಾನ್ಯ ಪದವೀಧರ ಕ್ಷೇತ್ರ-ಡಾ.ಚಂದ್ರಶೇಖರ ಪಾಟೀಲ್  Congress President Mallikarjun Kharge has approved the following persons as party candidates for the…

FDA ನೇಮಕಾತಿ ಪರೀಕ್ಷೆಯಲ್ಲಿ PSI ಹಗರಣ ಆರೋಪಿಗಳ ಶಾಮೀಲು?

ಕಲಬುರಗಿ: PSI ನೇಮಕಾತಿ ಹಗರಣದ ಬೆನ್ನಲ್ಲೇ ರಾಜ್ಯ ಸರ್ಕಾರದ ಹುದ್ದೆಗಳಿಯೇ ನೇಮಕಾತಿಗಾಗಿ ಶನಿವಾರ ನಡೆದ ಪರೀಕ್ಷೆಯಲ್ಲೂ ನಕಲು ನಡೆದಿರುವ ಅಕ್ರಮವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಈ ಪ್ರಕರಣದಲ್ಲೂ PSI ಹಗರಣದ ಆರೋಪಿಯ ಹೆಸರು ಥಳುಕು ಹಾಕಿಕೊಂಡಿರುವುದು ಅಚ್ಚರಿಯ ಸಂಗತಿ. ವಿವಿಧ ನಿಗಮ ಮಂಡಳಿಗಳ FDA ಹುದ್ದೆಗಳಿಗೆ ಶನಿವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಎಫ್​​​​ಡಿಎ ಪರೀಕ್ಷೆ ನಡೆಸಿತ್ತು. ಈ ಪರೀಕ್ಷೆ ವೇಳೆ ಬ್ಲೂಟೂತ್ ಬಳಸಿ ನಕಲು ಮಾಡಲು ಯತ್ನಿಸಿದ್ದ ಆರೋಪದ ಮೇಲೆ ಅಫಜಲಪುರ ಪೊಲೀಸ್​ ಠಾಣೆಯಲ್ಲಿ 9 ಜನರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ವಿಶ್ವವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ನಡೆದ ಪರೀಕ್ಷೆಯಲ್ಲಿ ಅಭ್ಯರ್ಥಿಗಳಾದ ಬಾಬು ಚಾಂದ್ ಶೇಖ್, ಸಂತೋಷ ಯಾಳಗಿ, ಆಕಾಶ್ ಬ್ಲೂಟುತ್ ಡಿವೈಸ್ ಬಳಸಿ ನಕಲು ಮಾಡುತ್ತಿದ್ದರು ಎನ್ನಲಾಗಿದೆ. ಪರೀಕ್ಷಾ ಮೇಲ್ವಿಚಾರಕರು ಈ ಅಭ್ಯರ್ಥಿಗಳ ಅಕ್ರಮವನ್ನು ಪತ್ತೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿರುವ…

ಚಂದ್ರ ಗ್ರಹಣ ಮಾತ್ರವಲ್ಲ, ರಾಜ್ಯದ ಜನರಿಗೆ ವಿದ್ಯುತ್ ಗ್ರಹಣ, ಅನ್ನಭಾಗ್ಯ ಗ್ರಹಣ.. ಕೃಷಿ ಗ್ರಹಣ.. ಇತ್ಯಾದಿ

ಬೆಂಗಳೂರು: ರಾಜ್ಯದ ಜನರಿಗೆ ಚಂದ್ರ ಗ್ರಹಣವಷ್ಟೇ ಅಲ್ಲ, ಕಾವೇರಿ ಗ್ರಹಣ, ವಿದ್ಯುತ್ ಗ್ರಹಣ.. ಹೀಗೆ ಅನೇಕ ಗ್ರಹಣಗಳು ಕಾಡುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಟೀಕಿಸಿದೆ. ಬರಗಾಲದಿಂದ ರಾಜ್ಯದ ರೈತರ ಬಗ್ಗೆ ಸಿದ್ದರಾಮಯ್ಯ ಸರ್ಕಾರ ನಿರ್ಲಕ್ಷ್ಯ ತಾಳಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಬಿಜೆಪಿಯ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮಾಡಲಾಗಿರುವ ಪೋಸ್ಟ್ ಗಮನಸೆಳೆದಿದೆ. ಕಾಂಗ್ರೆಸ್ ಆಳ್ವಿಕೆಯಲ್ಲಿ ಇಡೀ ಕರ್ನಾಟಕಕ್ಕೆ ಗ್ರಹಣ ಹಿಡಿದಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಸಿಎಂ ಸಿದ್ದರಾಮಯ್ಯ ಅವರ ನೆರಳಿನ ಫೋಟೋವನ್ನು ಬಳಸಿ ಮಾಡಲಾಗಿರುವ ಈ ಪೋಸ್ಟ್’ನಲ್ಲಿ ರಾಜ್ಯದ ಜನರನ್ನು ಕಾಡುತ್ತಿರುವ ಗ್ರಹಣಗಳ ಪಟ್ಟಿಯನ್ನು ಬಿಜೆಪಿ ನೀಡಿದೆ. ವಿದ್ಯುತ್‌ಗೆ ಗ್ರಹಣ, ಅಭಿವೃದ್ಧಿಗೆ ಗ್ರಹಣ, ಅನ್ನಭಾಗ್ಯಕ್ಕೆ ಗ್ರಹಣ, ಕೈಗಾರಿಕೆಗಳಿಗೆ ಗ್ರಹಣ, ಕುಡಿಯುವ ನೀರಿಗೆ ಗ್ರಹಣ, ಕೃಷಿ ಉತ್ಪನ್ನಗಳಿಗೆ ಗ್ರಹಣ, ಬ್ರ್ಯಾಂಡ್‌ ಬೆಂಗಳೂರಿಗೆ ಗ್ರಹಣ ಎಂಬ ಪಟ್ಟಿಯನ್ನು ಪ್ರಕಟಿಸಿರುವ ಬಿಜೆಪಿ, 30 ವರ್ಷಗಳ ಹಿಂದಿನ ‘ಆ ದಿನಗಳ…

ಎರ್ನಾಕುಲಂ ಬಳಿ ಸರಣಿ ಸ್ಫೋಟ; ಒಬ್ಬರ ಸಾವು, ಅನೇಕರಿಗೆ ಗಾಯ

ಎರ್ನಾಕುಲಂ: ಕೇರಳದ ಎರ್ನಾಕುಲಂ ಬಳಿ ಕ್ರೈಸ್ತ ಸಮುದಾಯದ ಧಾರ್ಮಿಕ ಸಮಾರಂಭದಲ್ಲಿ ಸರಣಿ ಬಾಂಬ್ ಸ್ಫೋಟಗಳು ಸಂಭವಿಸಿದೆ. ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು ಸುಮಾರು 24 ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಎರ್ನಾಕುಲಂ ಜಿಲ್ಲೆಯ ಕಲಮಸ್ಸೆರಿಯಲ್ಲಿ ಸಮಾವೇಶ ಕೇಂದ್ರದಲ್ಲಿ ಭಾನುವಾರ ಕ್ರೈಸ್ತ ಸಮಾರಂಭ ನೆರವೇರಿತ್ತು. ಸುಮಾರು 2000 ಮಂದಿ ಈ ಸಮಾವೇಶದಲ್ಲಿ ಭಾಗಿಯಾಗಿದ್ದರು. ಸಮಾವೇಶ ಆರಂಭವಾಗುತ್ತಿದ್ದಂತೆಯೇ ನಿಗೂಢ ಸ್ಫೋಟ ಸಂಭವಿಸಿದೆ. ಬೆಳಿಗ್ಗೆ 9 ಗಂಟೆ ಸುಮಾರಿಗೆ ಈ ಸ್ಫೋಟ ಸಂಭವಿಸಿದ್ದು ಜನರು ದಿಕ್ಕಾಪಾಲಾಗಿ ಓದಿದ್ದಾರೆ. ಅಷ್ಟರಲ್ಲೇ ಮತ್ತೊಂದು ಸ್ಫೋಟ ನಡೆದಿದೆ. ಹೀಗೆ ಸರಣಿ ಸ್ಫೋಟ ಸಂಭವಿಸಿದ್ದು ಸಮಾವೇಶ ಸ್ಥಳ ಭೀಕರ ಘಟನೆಗೆ ಸಾಕ್ಷಿಯಾಯಿತು. ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಪರಿಹಾರ ಕಾರ್ಯಾಚರಣೆ ಕೈಗೊಂಡಿತು. Scene just after a massive blast took place inside a Christian Convention Centre in…

ಹಾಲಿವುಡ್​ ಖ್ಯಾತ ನಟ ಥ್ಯೂ ಪೆರ್ರಿ ನಿಗೂಢ ಸಾವು

ಲಾಸ್​ ಏಂಜಲೀಸ್ : ಹಾಲಿವುಡ್​ ಖ್ಯಾತ ನಟ ಥ್ಯೂ ಪೆರ್ರಿ ವಿಧಿವಶರಾಗಿದ್ದಾರೆ. ಕಾಮಿಡಿ ಶೋ ಒಂದರಲ್ಲಿ ತನ್ನ ಚಾಂಡ್ಲರ್ ಬಿಂಗ್ ಪಾತ್ರದಿಂದ ಖ್ಯಾತರಾಗಿದ್ದ ಮ್ಯಾಥ್ಯೂ ಪೆರ್ರಿ ಅವರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಲಾಸ್​ ಏಂಜಲೀಸ್​ನಲ್ಲಿರುವ ಅವರ ನಿವಾಸದಲ್ಲಿ ಶನಿವಾರ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಹೃದಯಾಘಾತಕ್ಕೊಳಗಾಯಿರುವ ಸಾಧ್ಯತೆಗಳಿವೆ ಎಂದೂ ಹೇಳಲಾಗುತ್ತಿದೆ.

ಚಂದ್ರ ಗ್ರಹಣ ದಿನದಂದು ಭೀಕರ ಅಪಘಾತ: ಒಂದೇ ಕುಟುಂಬದ 7 ಮಂದಿ ಸಾವು

ರಾಜಸ್ಥಾನ: ಚಂದ್ರ ಗ್ರಹಣ ದಿನದಂದು ರಾಜಸ್ಥಾನದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿದ್ದಾರೆ. ಶನಿವಾರ ತಡರಾತ್ರಿ ಟ್ರಕ್‌ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ಘೋರ ಅಪಘಾತ ಘಟಿಸಿದೆ. ರಾಜಸ್ಥಾನದ ನೌರಂಗದೇಸರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿದ್ದಾರೆ. ಬೇರೊಂದು ವಾಹನವನ್ನು ಓವರ್‌ಟೇಕ್ ಮಾಡುವ ಸಂದರ್ಭದಲ್ಲಿ ನತದೃಷ್ಟ ಕಾರು ಲಾರಿಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಈ ಕಾರಿನಲ್ಲಿ ಒಂಬತ್ತು ಮಂದಿ ಪ್ರಯಾಣಿಸುತ್ತಿದ್ದರು ಎಂದು ಎನ್ನಲಾಗಿದೆ.

ವಿವಿಧ ಕ್ಷೇತ್ರಗಳ ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2023ನೇ ಸಾಲಿನ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಸಾಧಕರಿಗೆ ನೀಡಿ ಗೌರವಿಸಿದರು. ವಿವಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 8 ಮಂದಿ ಸಾಧಕರಿಗೆ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಯವರು ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಪಡೆದ ಗಣ್ಯರು: ನ್ಯಾಯಾಂಗ ಕ್ಷೇತ್ರ – ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎನ್.ವೈ.ಹನುಮಂತಪ್ಪ, ಧಾರ್ಮಿಕ ಕ್ಷೇತ್ರ- ಮಹಾದೇವಮ್ಮ, ಶಿಕ್ಷಣ ಕ್ಷೇತ್ರ- ರಾಮಣ್ಣ ಮಹಾದೇವ ಗಸಿ, ಸಮಾಜ ಸೇವೆ ಕ್ಷೇತ್ರ- ಜಿ.ಓ.ಮಹಾಂತಪ್ಪ, ಸಾಮಾಜಿಕ ಸಂಘಟನೆ- ಸೋಮಣ್ಣ, ವೈದ್ಯಕೀಯ ಕ್ಷೇತ್ರ- ಶಾರದ ಪ್ರಭು ಹುಲಿ ನಾಯಕ, ಸಾಹಿತ್ಯ ಕ್ಷೇತ್ರ-ಸುಕನ್ಯಾ ಮಾರುತಿ ರಂಗಭೂಮಿ – ಸುಜಾತಮ್ಮ ಮುಖ್ಯಮಂತ್ರಿ @siddaramaiah ಅವರು ಇಂದು ವಾಲ್ಮೀಕಿಯವರ ಜನ್ಮದಿನದ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ…

ಕೃಷಿ ಪಂಪ್‌ಸೆಟ್ ವಿಚಾರದಲ್ಲಿ ವಿದ್ಯುತ್ ಕಣ್ಣುಮುಚ್ಚಾಲೆ: ಬರಗಾಲದಿಂದ ನರಳುತ್ತಿರುವ ರೈತರಿಗೆ ಮತ್ತೊಂದು ಆಘಾತ

ಬೆಂಗಳೂರು: ರಾಜ್ಯದಲ್ಲಿ ಕೃಷಿ ಪಂಪ್‌ಸೆಟ್‌ಗಳ ವಿಚಾರದಲ್ಲಿ ವಿದ್ಯುತ್ ಕಣ್ಣುಮುಚ್ಚಾಲೆ ಮುಂದುವರಿದಿದ್ದು, ಬರಗಾಲದಿಂದ ನರಳುತ್ತಿರುವ ರೈತರಿಗೆ ಮತ್ತೊಂದು ಆಘಾತ ಎಂಬಂತಾಗಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ಬರಗಾಲ, ಮಳೆ ಕಡಿಮೆ ವಿದ್ಯುತ್ ಉತ್ಪಾದನೆ ಕುಂಠಿತ ಕಾರಣ ರೈತರಿಗೆ 5 ಗಂಟೆ ವಿದ್ಯುತ್ ಎನ್ನುತ್ತಾರೆ ,ಇದೇ ಸರ್ಕಾರ ಕೈಗಾರಿಕೆಗಳಿಗೆ ಉದ್ಯಮಿಗಳಿಗೆ ಸಮರ್ಪಕ 24 ಗಂಟೆ ವಿದ್ಯುತ್ ಪೂರೈಕೆ ಮಾಡುತ್ತೆವೆ ಎನ್ನುತ್ತಾರೆ ಸರ್ಕಾರದ ಇಬ್ಬಗೆ ನೀತಿ ಸರಿಅಲ್ಲ, ಒಂದು ಕಣ್ಣಿಗೆ ಸುಣ್ಣ ಇನ್ನೊಂದು ಕಣ್ಣಿಗೆ ಬೆಣ್ಣೆ ಯಾವ ನ್ಯಾಯ ಎಂದು ಪ್ರಶ್ನಿಸಿರುವ ಕುರುಬೂರು ಶಾಂತಕುಮಾರ್, ಸರ್ಕಾರ ಎಚ್ಚೆತ್ತುಕೊಂಡು 10 ಗಂಟೆಗಳ ವಿದ್ಯುತ್ ನೀಡದಿದ್ದರೆ 45 ಲಕ್ಷ ಕೃಷಿ ಪಂಪ್ ಶೆಟ್ ರೈತರ ಜೊತೆಗೂಡಿ ವಿಧಾನಸೌಧ ಮುತ್ತಿಗೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಅವರು ಬೆಂಗಳೂರಿನಲ್ಲಿ…