ದೆಹಲಿ: ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದ್ದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಸಾಧಿಸಿದೆ. ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಣ್ಣಿಸಲಾಗುತ್ತಿರುವ ಈ ಚುನಾವಣಾ ಪೈಕಿ ಮಧ್ಯಪ್ರದೇಶದಲ್ಲಿ ಬಿಜೆಪಿ ತನ್ನ ಪ್ರಾಬಲ್ಯವನ್ನು ಮುಂದುವರಿಸಿಕೊಂಡಿದೆ. 230 ಸದಸ್ಯಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ ಜಭೇರಿ ಭಾರಿಸಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಮಧ್ಯಪ್ರದೇಶ ವಿಧಾನಸಭೆಯಲ್ಲಿ 116 ಸ್ಥಾನಗಳನ್ನು ಗೆದ್ದ ಪಕ್ಷ ಸರ್ಕಾರ ರಚನೆ ಮಾಡಬಹುದಾಗಿದ್ದು, ಬಿಜೆಪಿ ಅದಕ್ಕಿಂತಲೂ ಹೆಚ್ಚಿನ ಬಹುಮತದೊಂದಿಗೆ ಜಯಭೇರಿ ಭಾರಿಸಿದೆ. ಬಲಾಬಲ ಹೀಗಿದೆ. ಒಟ್ಟು ಸ್ಥಾನಗಳು: 230 ಮ್ಯಾಜಿಕ್ ನಂಬರ್: 116 ಬಿಜೆಪಿ – 164 ಕಾಂಗ್ರೆಸ್ – 65 ಇತರರು- 01
Year: 2023
ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ; ಅಖಾಡದಲ್ಲಿ ಫಲಿಸಿದ ‘ಕೈ’ ಗ್ಯಾರೆಂಟಿ
ಹೈದರಾಬಾದ್: ಪಂಚರಾಜ್ಯಗಳ ಚುನಾವಣಾ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ಆಡಳಿತಾರೂಢ BRS ಪಕ್ಷದ ಜೊತೆ ತೀವ್ರ ಸೆಣಸಾಟ ನಡೆಸಿರುವ ಕಾಂಗ್ರೆಸ್ ಸರಳ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸುವ ಮೂಲಕ ದಕ್ಷಿಣ ಭಾರತದಲ್ಲಿ ಪ್ರಾಬಲ್ಯವನ್ನು ಹೆಚ್ಚಿಸಿಕೊಂಡಿದೆ. ಕೆಲವು ತಿಂಗಳ ಹಿಂದಷ್ಟೇ ಕರ್ನಾಟಕದಲ್ಲಿ ಗೆದ್ದ ಕಾಂಗ್ರೆಸ್ ಇದೀಗ ತೆಲಂಗಾಣಕ್ಕೂ ತನ್ನ ಚಕ್ರಾಧಿಪತ್ಯವನ್ನು ವಿಸ್ತರಿಸಿದಂತಾಗಿದೆ. ಅಷ್ಟೇ ಅಲ್ಲ, ಗೋವಾವನ್ನು ಹೊರತುಪಡಿಸಿ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ I.A.N.D.I.A. ಮೈತ್ರಿಕೂಟ ಯಶಸ್ವಿಯಾಗಿದೆ. 119 ಸದಸ್ಯಬಲದ ತೆಲಂಗಾಣ ವಿಧಾನಸಭೆಯಲ್ಲಿ ಸರ್ಕಾರ ರಚಿಸಲು 60 ಸ್ಥಾನಗಳ ಅಗತ್ಯವಿದ್ದು, ಆಡಳಿತಾರೂಢ ತೆಲಂಗಾಣದ ಕನಸು ನುಚ್ಚು ನೂರಾಗಿದೆ. ಕಾಂಗ್ರೆಸ್ ಪಕ್ಷ ಸರಳ ಬಹುಮತದೊಂದಿಗೆ ಗದ್ದುಗೆ ಏರಿದೆ. ತೆಲಂಗಾಣದಲ್ಲಿ ಬಲಾಬಲ ಹೀಗಿದೆ: ಒಟ್ಟು ಸ್ಥಾನಗಳು : 119 ಮ್ಯಾಜಿಕ್ ನಂಬರ್: 60 ಕಾಂಗ್ರೆಸ್ – 64 ಬಿ.ಆರ್.ಎಸ್ – 39 ಬಿಜೆಪಿ…
ಚಿತ್ರರಂಗದಲ್ಲಿ ಪ್ರಜ್ವಲ್ ದೇವರಾಜ್-ಅದಿತಿ ‘ಮಾಫಿಯಾ’
ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿ; ಕಮಲ ಪಾಳಯದಲ್ಲಿ ಸಂಚಲನ ಸೃಷ್ಟಿಸಿದ ವಿಜಯೇಂದ್ರ ನಡೆ
ಬೆಂಗಳೂರು: ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸಿದ ತರುವಾಯ ಬಿ.ವೈ.ವಿಜಯೇಂದ್ರ ಅವರು ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ. ನಡ್ಡಾ ಅವರ ಜನ್ಮದಿನದಂದೇ ಅವರನ್ನು ಭೇಟಿಯಾಗಿ ಕೃತಜ್ಞತೆ ಸಮರ್ಪಿಸಿದ ವಿಜಯೇಂದ್ರ ನಡೆ ತೀವ್ರ ಕುತೂಹಲ ಮೂಡಿಸಿದೆ. ಕೆಲವು ದಿನಗಳ ಹಿಂದಷ್ಟೇ ಬಿ.ವೈ.ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರವಹಿಸಿಕೊಂಡಿದ್ದಾರೆ. ಅದೇ ಹೊತ್ತಿಗೆ ರಾಜ್ಯ ಬಿಜೆಪಿಯ ಅನೇಕನಾಯಕರು ಅತೃಪ್ತಿಯನ್ನೂ ಹೊರಹಾಕಿದ್ದಾರೆ. ಈ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದ್ದಂತೆಯೇ ಬಿಎಸ್‌ವೈ ಪುತ್ರ ವಿಜಯೇಂದ್ರ ಅವರು ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಇಯಾಗಿ ಮಾರುಕತೆ ನಡೆಸಿದ್ದು, ಈ ಬೆಳವಣಿಗೆ ಕಮಲ ಪಾಳಯದಲ್ಲಿ ಸಂಚಲನ ಸೃಷ್ಟಿಸಿದೆ. ಆದರೆ ಈ ಭೇಟಿಗೆ ರಾಜಕೀಯ ಮಹತ್ವ ನೀಡಬೇಕಿಲ್ಲ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ವರಿಷ್ಠ ನಾಯಕನ ಭೇಟಿ ಬಗ್ಗೆ ಮಾಹಿತಿ ಹಂಚಿಕೊಂಡಿರುವ ವಿಜಯೇಂದ್ರ, ಭಾರತೀಯ ಜನತಾ ಪಾರ್ಟಿಗೆ ಹೊಸ ಚೈತನ್ಯ ತುಂಬಲು…
ವಿ.ಪಿ.ಸಿಂಗ್ ಪ್ರಶಸ್ತಿ: ಕೊಪ್ಪಳ ವಿವಿ ಕುಲಪತಿ ಪ್ರೊ.ಬಿ.ಕೆ.ರವಿಗೆ ಪ್ರತಿಷ್ಠಿತ ಪುರಸ್ಕಾರ
ಬೆಂಗಳೂರು: ಶುಕ್ರವಾರ ಸಂಜೆ ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೃಷಿ ತಂತ್ರಜ್ಞಾನ ಸಂಸ್ಥೆಯ ಅರಕೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಹಾಗೂ ಐಎಚ್‌ಎಸ್ ಪ್ರಕಾಶನ ಸಹಯೋಗದಲ್ಲಿ ‘ಮಂಡಲ್ ವರದಿ ಆಗಿದ್ದೇನು?’ ವಿಷಯ ಕುರಿತು ವಿಚಾರ ಸಂಕಿರಣ ಅಂಗವಾಗಿ ಕರ್ನಾಟಕ ರಾಜ್ಯ ಕುರುಬರ ಸಂಘದ ನಿಕಟಪೂರ್ವ ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯರಾಗಿ, ಹಿಂದುಳಿದ ಜಾತಿಗಳ ಒಕ್ಕೂಟದ ಮಾಜಿ ಗೌರವಾಧ್ಯಕ್ಷರಾಗಿ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ ಪ್ರಸ್ತುತ ಕೊಪ್ಪಳ ವಿಶ್ವವಿದ್ಯಾಲಯದ ನೂತನ ಕುಲಪತಿ ಪ್ರೊ.ಬಿ.ಕೆ.ರವಿ ಅವರಿಗೆ ವಿ ಪಿ ಸಿಂಗ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಮಾಜಿ ಸಚಿವ ಎಚ್.ಎಂ.ರೇವಣ್ಣ, ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವಿ.ಆರ್. ಸುದರ್ಶನ್, ಮಾಜಿ ಸಚಿವ ಎಚ್.ಆಂಜನೇಯ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಆದಿಜಾಂಬವ…
ಬರಗಾಲ ಇದ್ದರೂ ಸಂಸದರ ಕ್ಷೇತ್ರಾಭಿವೃದ್ಧಿ ಹಣ ಬಿಡುಗಡೆ ಮಾಡದ ಕೇಂದ್ರ ಸರ್ಕಾರ; ಕಾಂಗ್ರೆಸ್ ಆಕ್ರೋಶ
ಬೆಂಗಳೂರು: ಕರ್ನಾಟಕದಲ್ಲಿ ಬರಗಾಲದ ಪರಿಸ್ಥಿತಿಯ ಅರಿವಿದ್ದರೂ ಕೇಂದ್ರ ಸರ್ಕಾರ ಲೋಕಸಭಾ ಸದಸ್ಯರಿಗೆ ನೀಡಬೇಕಾದ ಲೋಕಸಭಾ ಸ್ಥಳೀಯ ಕ್ಷೇತ್ರಾಭಿವೃದ್ಧಿ ಯೋಜನೆಯ ವಾರ್ಷಿಕ 5 ಕೋಟಿ ಹಣವನ್ನು ಪ್ರಸಕ್ತ ಸಾಲಿನಲ್ಲಿ ಕರ್ನಾಟಕದ ಲೋಕಸಭಾ ಸದಸ್ಯರಿಗೆ ಮತ್ತು ರಾಜ್ಯಸಭಾ ಸದಸ್ಯರಿಗೆ ಬಿಡುಗಡೆ ಮಾಡದೇ ದಿವಾಳಿತನವನ್ನು ಪ್ರದರ್ಶಿಸಿದೆ ಎಂದು ಪ್ರದೇಶ ಕಾಂಗ್ರೆಸ್ ಆರೋಪಿಸಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಕೆಪಿಸಿಸಿ ವಕ್ತಾರ ರಮೇಶ್ ಬಾಬು, ಕೇಂದ್ರದ ಬಿಜೆಪಿ ಸರ್ಕಾರವು ರಾಜ್ಯದ ಲೋಕಸಭಾ ಸದಸ್ಯರಿಗೆ ನೀಡಬೇಕಾದ ಲೋಕಸಭಾ ಸ್ಥಳೀಯ ಕ್ಷೇತ್ರಾಭಿವೃದ್ಧಿ ಯೋಜನೆಯ ವಾರ್ಷಿಕ 5 ಕೋಟಿ ಹಣವನ್ನು ಪ್ರಸಕ್ತ ಸಾಲಿನಲ್ಲಿ ಕರ್ನಾಟಕದ ಲೋಕಸಭಾ ಸದಸ್ಯರಿಗೆ ಮತ್ತು ರಾಜ್ಯಸಭಾ ಸದಸ್ಯರಿಗೆ ಬಿಡುಗಡೆ ಮಾಡಿಲ್ಲ. ಪ್ರಸಕ್ತ ಸಾಲಿನಲ್ಲಿ ಒಟ್ಟು ಕರ್ನಾಟಕದ ಸದಸ್ಯರಿಗೆ 205 ಕೋಟಿ ಹಣವನ್ನು ಬಿಡುಗಡೆ ಮಾಡಬೇಕಾಗಿದ್ದು, ಕರ್ನಾಟಕದ ಬರಗಾಲದ ಪರಿಸ್ಥಿತಿಯ ಅರಿವಿದ್ದರೂ, ಹಣ ಬಿಡುಗಡೆ ಮಾಡದೇ ಕೇಂದ್ರದ ಮೋದಿ ಸರ್ಕಾರ ದಿವಾಳಿತನವನ್ನು ತೋರಿರುತ್ತದೆ. ಕರ್ನಾಟಕದ…
ಎಚ್ಚರ..! ರಾಜ್ಯದಲ್ಲಿ ಮಾರಾಟವಾಗುತ್ತಿದೆ ಅವಧಿ ಮೀರಿದ ಮಕ್ಕಳ ತಿಂಡಿ
ಬೆಂಗಳೂರು: ರಾಜ್ಯದ ಹಲವೆಡೆ ಮಾರಾಟವಾಗುವ ಆಹಾರೋತ್ಪನ್ನಗಳು ಎಷ್ಟು ಸುರಕ್ಷೆ ಎಂಬ ಪ್ರಶ್ನೆ ಉದ್ಭವವಾಗಿದೆ. ಬೆಂಗಳೂರು-ಮಂಗಳೂರು ಸಹಿತ ರಾಜ್ಯದ ಹಲವೆಡೆ ನಿಷೇಧಿತ ಚೈನೀಸ್ ಸಾಲ್ಟ್ ಬಳಕೆ ಮಾಡಿರುವ ಆಹಾರ ಮಾರಾಟ ದಂಧೆ ಎಗ್ಗಿಲ್ಲದೆ ಸಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಬಹುತೇಕ ಹೊಟೇಲು ವ್ಯವಹಾರದ ಹೆಸರಲ್ಲಿ ನಡೆಯುತ್ತಿರುವ ಈ ಅಕ್ರಮದ ಬಗ್ಗೆ ಆಹಾರ ಇಲಾಖೆಯ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ನಿರ್ಲಕ್ಷ್ಯ ತಾಳಿದ್ದಾರೆ ಎಂಬ ಆಕ್ರೋಶ ಪ್ರಜ್ಞಾವಂತ ನಾಗರೀಕರದ್ದು. ಇದೇ ವೇಳೆ, ಮಕ್ಕಳ ತಿಂಡಿಗಳ ಮಾರಾಟದಲ್ಲೂ ಅಕ್ರಮಗಳು ನಡೆಯುತ್ತಿವೆ. ಇದಕ್ಕೆ ಉದಾಹರಣೆ ಎಂಬಂತಿದೆ ನೆಲಮಂಗಲ ಸಮೀಪದ ಪ್ರಕರಣ. ನಿಗೂಢ ಮಾಫಿಯಾವು ಅವಧಿ ಮೀರಿದ ಮಕ್ಕಳ ತಿಂಡಿ ಪ್ಯಾಕೇಟ್ಗಳಿಗೆ ಹೊಸ ಅವಧಿ ದಿನಾಂಕ ಮುದ್ರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಮಾದನಾಯಕನಹಳ್ಳಿ ಠಾಣಾ ಇನ್‌ಸ್ಪೆಕ್ಟರ್ ಮುರಳೀಧರ್ ನೇತೃತ್ವದ ಪೊಲೀಸರು ಬೇಧಿಸಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಗೋಪಾಲಪುರ ವೇರ್ಹೌಸ್ನಲ್ಲಿ ಈ ದಂಧೆಯನ್ನು ಪತ್ತೆ ಮಾಡಿರುವ…
ಕದನ ವಿರಾಮ ಅಂತ್ಯ; ಗಾಜಾದಲ್ಲಿ ಸಂಘರ್ಷಕ್ಕೆ 175 ಮಂದಿ ಬಲಿ
ಗಾಜಾ: ಇಸ್ರೇಲ್-ಪ್ಯಾಲೆಸ್ತೀನ್ ನಡುವಿನ ಸಮರ ತಣ್ಣಗಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ. ಕದನ ವಿರಾಮದ ಪ್ರಕ್ರಿಯೆಯ ನಡುವೆಯೇ ಹಮಾಸ್ ಉಗ್ರರ ಕಿತಾಪತಿ ಕೊನೆಗಾಣಿಸಲು ಇಸ್ರೇಲ್ ಸೇನೆ ಮತ್ತೆ ಸಮರದ ಅಖಾಡಕ್ಕೆ ಧುಮುಕಿದೆ. ಇಸ್ರೇಲ್-ಪ್ಯಾಲೆಸ್ತೀನ್ ನಡುವಿನ ಒಂದು ವಾರಗಳ ತಾತ್ಕಾಲಿಕ ಕದನ ವಿರಾಮ ಅಂತ್ಯಗೊಳ್ಳುತ್ತಿದ್ದಂತೆಯೇ ಗಾಜಾದಲ್ಲಿ ಮತ್ತೆ ಘರ್ಷಣೆ ಭುಗಿಲೆದ್ದಿದೆ. ಹಮಾಸ್ ಉಗ್ರರ ಹಾವಳಿ ತಡೆಯಲು ಇಸ್ರೇಲ್ ಸೇನೆ ಶುಕ್ರವಾರ ನಡೆಸಿದ ಕಾರ್ಯಾಚರಣೆಯಲ್ಲಿ 175ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಬಿಡುಗಡೆ ಮಾಡಲಿರುವ ಒತ್ತೆಯಾಳುಗಳ ಮಾಹಿತಿಯನ್ನು ಹಂಚಿಕೊಳ್ಳದೇ ಹಮಾಸ್ ಉಗ್ರರು ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿರುವ ಇಸ್ರೇಲ್ ಪಡೆ ಕಾರ್ಯಾಚರಣೆಗಿಳಿದೆ. ಇಸ್ರೇಲ್ ಮೇಲೆ ರಾಕೆಟ್ ಹಾರಿಸಿದೆ ಎಂದು ಆರೋಪಿಸಿ ಈ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ರಕ್ಷಣಾ ಪಡೆ ತಿಳಿಸಿದೆ. Scenes from the Israeli occupation's bombing on Gaza City this night. pic.twitter.com/Ua4fxOIs7y — TIMES…
ಇ-ಮೇಲ್ ಬಾಂಬ್ ತಲ್ಲಣ.. ಕಿಡಿಗೇಡಿಗಳ ಮೂಲೋಚ್ಚಾಟನೆಗೆ ಕಮೀಷನರ್ ದಯಾನಂದ್ ರಣತಂತ್ರ..
ಬೆಂಗಳೂರು: ಇಡೀ ರಾಜ್ಯವನ್ನು ತಲ್ಲಣಗೊಳಿಸಿದ್ದ ಬಾಂಬ್ ಬೆದರಿಕೆಯ ಇ-ಮೇಲ್ ಪೊಲೀಸರು ತನಿಖೆಯನ್ನು ಬಿರುಸುಗೊಳಿಸಿದ್ದಾರೆ. ಬೆಂಗಳೂರು ಮತ್ತು ಸುತ್ತಮುತ್ತಲ ಹಲವು ಶಾಲೆಗಳಿಗೆ ಶುಕ್ರವಾರ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ಪೊಲೀಸರು ಬರೋಬ್ಬರಿ 48 ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರ ಸೂಚನೆಯಂತೆ ಆಯಾ ಠಾಣಾ ವ್ಯಾಪ್ತಿಯಲ್ಲಿ ಎಫ್ಐಆರ್ಗಳು ದಾಖಲಾಗಿವೆ. ಈ ಎಫ್ಐಆರ್ಗಳನ್ನು ಕ್ರೂಡೀಕರಿಸಿ ತನಿಖೆ ನಡೆಸುವ ಸಾಧ್ಯತೆಗಳಿವೆ ಎಂದು ಆಯುಕ್ತರ ಕಚೇರಿ ಮೂಲಗಳು ತಿಳಿಸಿವೆ. ಶುಕ್ರವಾರ ಬೆಳಿಗ್ಗೆ 15 ಶಾಲೆಗಳಿಗೆ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ರವಾನೆಯಾಗಿತ್ತೆಂದು ಹೇಳಲಾಗುತ್ತಿತ್ತು. ನಂತರ ಪರಿಶೀಲನೆ ಸಂದರ್ಭದಲ್ಲಿ ಸುಮಾರು 48 ಶಾಲೆಗಳಿಗೆ ಈ ರೀತಿಯ ಬೆದರಿಕೆಯ ಸಂದೇಶ ಬಂದಿರುವುದು ಬೆಳಕಿಗೆ ಬಂದಿದೆ. ಈ ಬಾಂಬ್ ಬೆದರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಆಯುಕ್ತ ಬಿ.ದಯಾನಂದ್, ಈ ಬಗ್ಗೆ ಆಳವಾದ ತನಿಖೆಗೆ ಸೂಚನೆ ನೀಡಿದ್ದಾರೆ. ಇ-ಮೇಲ್…
ಪ್ರಭಾಸ್ ಅಭಿನಯದ ‘ಸಲಾರ್’ ಕಮಾಲ್