ನವ ದೆಹಲಿ: ಭಾರತವು 6G ತಂತ್ರಜ್ಞಾನದಲ್ಲಿ ಪ್ರವರ್ತಕನಾಗಿ ಹೊರಹೊಮ್ಮುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜಧಾನಿ ದೆಹಲಿಯಲ್ಲಿ ಭಾರತೀಯ ಮೊಬೈಲ್ ಕಾಂಗ್ರೆಸ್ (IMC) ನಲ್ಲಿ ಮಾತನಾಡಿದ ನರೇಂದ್ರ ಮೋದಿ ಅವರು 6G ತಂತ್ರಜ್ಞಾನದ ಕ್ಷೇತ್ರದಲ್ಲಿ ಭಾರತವು ನಾಯಕತ್ವದತ್ತ ವೇಗವಾಗಿ ಮುನ್ನಡೆಯುತ್ತಿದೆ. ರಾಷ್ಟ್ರದಾದ್ಯಂತ 5G ತಂತ್ರಜ್ಞಾನವನ್ನು ವಿಸ್ತರಿಸುವಲ್ಲಿ ಭಾರತದ ಪ್ರಗತಿಯನ್ನು ಸಾಧಿಸುತ್ತಿದೆ ಎಂದರು. 6G ತಂತ್ರಜ್ಞಾನದಲ್ಲಿ ಜಗತ್ತನ್ನು ಮುನ್ನಡೆಸುವ ಭಾರತದ ಸಾಮರ್ಥ್ಯದ ಬಗ್ಗೆ ಅವರು ವಿಶ್ವಾಸ ವ್ಯಕ್ತಪಡಿಸಿದರು. ಭಾರತದ ಬೆಳವಣಿಗೆ ದೂರಸಂಪರ್ಕ ಮತ್ತು ತಂತ್ರಜ್ಞಾನವನ್ನು ಮೀರಿ ವಿಸ್ತರಿಸಿದೆ, 6G, ಕೃತಕ ಬುದ್ಧಿಮತ್ತೆ, ಸೈಬರ್ ಭದ್ರತೆ, ಸೆಮಿಕಂಡಕ್ಟರ್ ತಂತ್ರಜ್ಞಾನ, ಡ್ರೋನ್‌ಗಳು ಮತ್ತು ಬಾಹ್ಯಾಕಾಶ ಕ್ಷೇತ್ರವನ್ನು ಒಳಗೊಳ್ಳುವ ಭವಿಷ್ಯವನ್ನು ಕಲ್ಪಿಸುತ್ತದೆ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು. 5G ಬಿಡುಗಡೆಯಾದ ಒಂದು ವರ್ಷದೊಳಗೆ, ಸುಮಾರು ನಾಲ್ಕು ಲಕ್ಷ 5G ಬೇಸ್ ಸ್ಟೇಷನ್‌ಗಳು ಕಾರ್ಯನಿರ್ವಹಿಸುತ್ತಿವೆ, 97% ನಗರಗಳು ಮತ್ತು 80% ಕ್ಕಿಂತ…
Year: 2023
ತೆಲಂಗಾಣ ಕದನ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧ
ನವದೆಹಲಿ: ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿ ಆಯ್ಕೆಯನ್ನು ಅಂತಿಮಗೊಳಿಸಿದ್ದು, ಶೀಘ್ರದಲ್ಲೇ ಪಟ್ಟಿಯನ್ನು ಬಿಡುಗಡೆ ಮಾಡಲು ಪಕ್ಷ ಕಸರತ್ತು ನಡೆಸುತ್ತಿದೆ. ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಿಪಿಪಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಪ್ರಮುಖರು, ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್, ರಾಜ್ಯ ಘಟಕದ ಮುಖ್ಯಸ್ಥ ಎ.ರೇವಂತ್ ರೆಡ್ಡಿ, ಉತ್ತಮ್ ರೆಡ್ಡಿ, ರಾಜ್ಯ ಉಸ್ತುವಾರಿ ಮಾಣಿಕ್ ರಾವ್ ಠಾಕ್ರೆ ಮತ್ತು ಸಿಎಲ್‌ಪಿ ನಾಯಕ ಭಟ್ಟಿ ವಿಕ್ರಮಾರ್ಕ ಮಲ್ಲು ಅವರೊಂದಿಗೆ ಚರ್ಚೆ ನಡೆಯಿತು. ಸಭೆಯಲ್ಲಿ ಪ್ರತಿ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕುರಿತು ಚರ್ಚೆ ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ. ಬುಧವಾರ ನಡೆದ ಹಿಂದಿನ ಅಧಿವೇಶನದಲ್ಲಿ 35 ಸ್ಥಾನಗಳನ್ನು ಉದ್ದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡ BRS (ಭಾರತೀಯ ರಾಷ್ಟ್ರವಾದಿ…
ಚಂದ್ರಗ್ರಹಣ.. ಈ ರಾಶಿಯವರಿಗೆ ಶುಭ..!
ಬೆಂಗಳೂರು: ಈ ವರ್ಷದ ಕೊನೆಯ ಗ್ರಹಣ ಶನಿವಾರ (ಅಕ್ಟೋಬರ್ 28) ಸಂಭವಿಸಲಿದೆ. ಚಂದ್ರ ಗ್ರಹಣವು ಭಾರತ ಸೇರಿದಂತೆ ಕೆಲವು ದೇಶಗಳಲ್ಲಿ ಗೋಚರಿಸಲಿದೆ. ಭಾರತದಲ್ಲಿ ಭಾಗಶಃ ಚಂದ್ರಗ್ರಹಣ ಗೋಚರಿಸಲಿದೆ ಎಂದು ಖಗೋಳ ಶಾಸ್ತ್ರಜ್ಞರು ತಿಳಿಸಿದ್ದಾರೆ. ಈ ಚಂದ್ರಗ್ರಹಣದ ಒಟ್ಟು ಅವಧಿ 03 ಗಂಟೆ 07 ನಿಮಿಷಗಳು. ವಿಜ್ಞಾನ ಸಚಿವಾಲಯದ ಪ್ರಕಾರ, ಭಾಗಶಃ ಚಂದ್ರಗ್ರಹಣವು ಅಕ್ಟೋಬರ್ 28-29 ರಂದು ಸಂಭವಿಸಲಿದೆ. ಗ್ರಹಣ ಅಕ್ಟೋಬರ್ 29 ರಂದು ಭಾರತೀಯ ಕಾಲಮಾನ 01 ಗಂಟೆ 05 ನಿಮಿಷಕ್ಕೆ ಪ್ರಾರಂಭ. 02 ಗಂಟೆ 24 ನಿಮಿಷಕ್ಕೆ ಗ್ರಹಣ ಕೊನೆಗೊಳ್ಳುತ್ತದೆ. ಇದೇ ವೇಳೆ, ಈ ಗ್ರಹಣದ ಫಲಾಫಲಗಳ ಬಗ್ಗೆಯೂ ಚರ್ಚೆ ನಡೆದಿದೆ. ಕೆಲವು ರಾಶಿಗಳಿಗೆ ಗ್ರಹಣ ದೋಷ ಇರಲಿದೆ ಎನ್ನುತ್ತಿರುವ ಜ್ಯೋತಿಷಿಗಳು, ಮಿಥುನ, ಸಿಂಹ, ತುಲಾ ಮತ್ತು ಮಕರ ರಾಶಿ ಸೇರಿದಂತೆ ಕೆಲವು ರಾಶಿಯವರಿಗೆ ಅನುಕೂಲವಾಗಲಿದೆ ಎಂದು ವಿಶ್ಲೇಷಿಸಿದ್ದಾರೆ. ಚಂದ್ರಗ್ರಹಣದ ಸೂತಕ ಸಮಯ: ಅಕ್ಟೋಬರ್ 28…
‘ಅರ್ಜುನ್ ಚಕ್ರವರ್ತಿ: ಜರ್ನಿ ಆಫ್ ಅನ್‌ಸಂಗ್ ಚಾಂಪಿಯನ್’ ಚಿತ್ರದ ಫಸ್ಟ್ ಲುಕ್ ಅನಾವರಣ
1980 ರ ದಶಕದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ಕಬಡ್ಡಿ ಆಟಗಾರನ ನೈಜ ಕಥೆಯನ್ನು ಆಧರಿಸಿದ ಬಹು ನಿರೀಕ್ಷಿತ ಚಲನಚಿತ್ರದ ಒಂದು ನೋಟವನ್ನು ಒದಗಿಸುವ ‘ಅರ್ಜುನ್ ಚಕ್ರವರ್ತಿ: ಜರ್ನಿ ಆಫ್ ಅನ್‌ಸಂಗ್ ಚಾಂಪಿಯನ್’ ಚಿತ್ರದ ಮೊದಲ ನೋಟವನ್ನು ಅನಾವರಣಗೊಳಿಸಲಾಗಿದೆ. ಸಮರ್ಪಿತ ಕ್ರೀಡಾಪಟುವಿನ ಜೀವನದಲ್ಲಿ ಪ್ರಯೋಗಗಳು ಮತ್ತು ವಿಜಯಗಳನ್ನು ಪ್ರದರ್ಶಿಸುವಾಗ ಕಚ್ಚಾ ಮತ್ತು ಹಳ್ಳಿಗಾಡಿನ ಚಿತ್ರಣವನ್ನು ಚಿತ್ರಿಸಲು ಚಿತ್ರ ತಂಡ ಒಳ ಹೊಂದಿದೆ. ಫಸ್ಟ್ ಲುಕ್ ಪೋಸ್ಟರ್‌ನಲ್ಲಿ “ಭಾರತೀಯ ಕಬಡ್ಡಿಯಲ್ಲಿ ಅರ್ಜುನ್ ಚಕ್ರವರ್ತಿಯ ಪ್ರಭಾವವು 1980 ರ ದಶಕದಲ್ಲಿ ಭಾರತೀಯ ಕ್ರಿಕೆಟ್‌ನಲ್ಲಿ ಕಪಿಲ್ ದೇವ್ ಅವರ ಪ್ರಭಾವಕ್ಕೆ ಸಮಾನಾಂತರವಾಗಿದೆ” ಎಂದು ಓದುವ ಬಲವಾದ ಪಠ್ಯವನ್ನು ಒಳಗೊಂಡಿದೆ. ಈ ಹೇಳಿಕೆಯು ಅರ್ಜುನ್‌ನ ಸ್ಪೂರ್ತಿದಾಯಕ ಕಥೆಯ ಬಗ್ಗೆ ನಿರೀಕ್ಷೆಗಳನ್ನು ಮತ್ತು ಜಿಜ್ಞಾಸೆಯನ್ನು ಹುಟ್ಟುಹಾಕುತ್ತದೆ, ಅದು ಶೀಘ್ರದಲ್ಲೇ ದೊಡ್ಡ ಪರದೆಯ ಮೇಲೆ ತೆರೆದುಕೋನಂತಿದೆ. ಶ್ರೀನಿ ಗುಬ್ಬಾಳ ನಿರ್ಮಿಸಿದ ಮತ್ತು ವಿಕ್ರಾಂತ್ ರುದ್ರ ಬರೆದು ನಿರ್ದೇಶಿಸಿದ ಈ…
ಕಣಿವೆ ರಾಜ್ಯದಲ್ಲಿ ಪಾಕ್ ಕಿತಾಪತಿ; ಭಾರತೀಯ ಯೋಧರಿಂದ ಗುಂಡಿನ ಪ್ರತ್ಯುತ್ತರ
ಶ್ರೀನಗರ: ಕಣಿವೆ ರಾಜ್ಯದಲ್ಲಿ ಪಾಕ್ ಕಿತಾಪತಿ ಮತ್ತೆ ಮುಂದುವರಿದಿದೆ. ಜಮ್ಮುವಿನ ಅರ್ನಿಯಾ ಮತ್ತು ಆರ್.ಎಸ್.ಪುರ ಸೆಕ್ಟರ್ಗಳ ಅಂತಾರಾಷ್ಟ್ರೀಯ ಗಡಿಯಲ್ಲಿ ಬಿಎಸ್‌ಎಫ್ ಪೋಸ್ಟ್ಗಳ ಮೇಲೆ ಪಾಕಿಸ್ತಾನ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದಾರೆ. ಸುಮಾರು 5 ಬಿಎಸ್‌ಎಫ್ ಫೋಸ್ಟ್‌ಗಳ ಮೇಲೆ ದಾಳಿ ನಡೆದಿದ್ದು ಇಬ್ಬರು ಭಾರತೀಯ ಯೋಧರು ಹಾಗೂ ಮೂವರು ನಾಗರೀಕರು ಗಾಯಗೊಂಡಿದ್ದಾರೆ. . ಕಳೆದ ರಾತ್ರಿ 8 ಗಂಟೆ ಸುಮಾರಿಗೆ ಪಾಕಿಸ್ತಾನ ಪಡೆಗಳು ಗುಂಡಿನ ದಾಳಿ ಆರಂಭಿಸಿತ್ತು. ಈ ಅಪ್ರಚೋದಿತ ದಾಳಿಗೆ ಪ್ರತಿಯಾಗಿ ಭಾರತೀಯ ಯೋಧರು ಗುಂಡಿನ ಉತ್ತರ ನೀಡಿದ್ದಾರೆ. ಈ ನಡುವೆ ಗಾಯಾಳು ಯೋಧರನ್ನು ಚಿಕಿತ್ಸೆಗಾಗಿ ಜಮ್ಮುವಿನ ಜಿಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ನವಿಲು ಗರಿ ಬಳಸುವ ಮೌಲ್ವಿಗಳ ವಿರುದ್ದವೂ ಕ್ರಮ ಕೈಗೊಳ್ಳಿ; ಬಿಜೆಪಿ ಶಾಸಕರ ಆಗ್ರಹ
ಬೆಂಗಳೂರು: ಹುಲಿ ಉಗುರು ಪ್ರಕರಣದಲ್ಲಿ ಬಿಗ್‌ಬಾಸ್ ರಿಯಾಲಿಟಿ ಶೋ ಸ್ಪರ್ಧಿ ವರ್ತೂರು ಸಂತೋಷ್ ಬಂಧನವಾದ ನಂತರ, ಹುಲಿ ಉಗುರು ಹೊಂದಿದ್ದಾರೆಂಬ ಆರೋಪದಲ್ಲಿ ಗಣ್ಯರನೇಕರು ಅರಣ್ಯ ಇಲಾಖೆಯ ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದೇ ವೇಳೆ, ಏಕಾಏಕಿ ವಣ್ಯ ಜೀವಿ ಸಂರಕ್ಷಣಾ ಕಾಯ್ದೆಯ ಪ್ರಯೋಗಕ್ಕಿಳಿದಿರುವ ಅರಣ್ಯಾಧಿಕಾರಿಗಳ ನಡೆಗೆ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಲೆನಾಡು, ಕರಾವಳಿ ಭಾಗದ ಅನೇಕ ಮನೆಗಳಲ್ಲಿ ಹುಲಿ ಉಗುರು ಸೇರಿದಂತೆ ವನ್ಯಜೀವಿಗಳ ಉತ್ಪನ್ನಗಳನ್ನು ಇಟ್ಟುಕೊಳ್ಳುವುದು ಬಹಳ ವರ್ಷಗಳಿಂದ ನಡೆಯುತ್ತಿದೆ. ಈ ಕಾರಣಕ್ಕಾಗಿ ಜನರನ್ನು ಏಕಾಏಕಿ ಬಂಧಿಸುವುದು ಸರಿಯಲ್ಲ. ಈ ಕುರಿತು ಸರ್ಕಾರ ಮಧ್ಯಪ್ರವೇಶಿಸುವುದು ಅವಶ್ಯ ಎಂದವರು ಹೇಳಿದ್ದಾರೆ. ಕೆಲವೊಂದು ದರ್ಗಾಗಳಲ್ಲಿ ನವಿಲು ಗರಿಯನ್ನು ಬಳಸುವ ಪದ್ದತಿ ಇದೆ. ನವಿಲು ಗರಿಯನ್ನು ಇಟ್ಟುಕೊಳ್ಳುವಂತಿಲ್ಲ ಎಂದಾದರೆ ನವಿಲು ಗರಿ ಬಳಕೆ ಮಾಡುವವರನ್ನು ಬಂಧಿಸಲಿ ಎಂದು ಅರಗ ಜ್ಞಾನೇಂದ್ರ ಅವರು ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.…
ಸಿಎಂಗೆ ನಾನೇ ವಿಲನ್’; ಸಿದ್ದುಗೆ ಹೆಚ್ಡಿಕೆ ಗುದ್ದು
ಬೆಂಗಳೂರು: ಹೌದು, ನಾನು ಸಿದ್ದರಾಮಯ್ಯಗೆ ರಾಜಕೀಯವಾಗಿ ವಿಲನ್. ಇಲ್ಲ ಎಂದವರು ಯಾರು? ಅವರಿಗೆ ನಾನು ವಿಲನ್ ಆಗದೇ ಸ್ನೇಹಿತ ಆಗಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ತಾಜ್‌ನಲ್ಲಿ ಇದ್ದೆ ಅಂತ ಪದೇ ಪದೇ ಹೇಳ್ತಾರೆ. ತಾಜ್ ನಲ್ಲಿ ನಾನು ಮೋಜು ಮಸ್ತಿ ಮಾಡ್ತಿರಲಿಲ್ಲ. ಅಭಿವೃದ್ಧಿ ಕೆಲಸದ ಚರ್ಚೆ ಮಾಡ್ತಿದ್ದೆ. ನನ್ನ ಬಳಿ ಎಲ್ಲಾ ದಾಖಲಾತಿ ಇದೆ ಎಂದು ಅವರು ಟಾಂಗ್ ನೀಡಿದರು. ನನ್ನನ್ನು ಕಾಂಗ್ರೆಸ್ ನಾಯಕರು ಸಿಎಂ ಎನ್ನುವ ಗೌರವ ಇಲ್ಲದೆ ಪಪೇಟ್ ರೀತಿಯಲ್ಲಿ ನಡೆಸಿಕೊಂಡು ಅಪಮಾನ ಮಾಡಿದರು. ನಾನು ಸಿಎಂ ಆದಾಗ ಕಾಂಗ್ರೆಸ್ ಶಾಸಕರು ಇಸ್ಪೀಟ್ ಎಲೆ ಎಸೆದ ಹಾಗೆ ಅವರ ಅಹವಾಲುಗಳನ್ನು ನನ್ನ ಟೇಬಲ್ ಮೇಲೆ ಎಸೆಯುತ್ತಿದ್ದರು. ಅಂತಹವರು ನನ್ನ ಬಗ್ಗೆ ವಿಲನ್ ಎಂದು ಹೇಳುತ್ತಿದ್ದಾರೆ ಎಂದು…
ಚಿಕ್ಕಬಳ್ಳಾಪುರ ಅಫಘಾತ; ಮೃತರ ಬಂಧುಗಳಿಗೆ ತಲಾ 2 ಲಕ್ಷ ರೂ ಪರಿಹಾರ
ಬೆಂಗಳೂರು: ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ರಾಜ್ಯ ಸರ್ಕಾರ ಪರಿಹಾರ ಪ್ರಕಟಿಸಿದೆ. ಈ ಕುರಿತಂತೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಮೃತ ದುರ್ದೈವಿಗಳ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದ ಚಿತ್ರಾವತಿ ಸಮೀಪ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ಅತೀವ ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಮೃತ ದುರ್ದೈವಿಗಳ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು. – ಮುಖ್ಯಮಂತ್ರಿ @siddaramaiah #Chikballapura #Accident pic.twitter.com/GLLPlUAQiu — CM of Karnataka (@CMofKarnataka) October 26, 2023
ಯಡಿಯೂರಪ್ಪ ಅವರಿಗೆ ಝಡ್ ಕೆಟಗರಿ ಭದ್ರತೆ: ಯಾಕೆ ಗೊತ್ತಾ?
ಬೆಂಗಳೂರು: ಜೀವಬೆದರಿಕೆ ಹಿನ್ನಲೆಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಪ್ರಮುಖರೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೇಂದ್ರ ಗೃಹ ಇಲಾಖೆ ಝಡ್ ಕೆಟಗರಿ ಭದ್ರತೆ ಒದಗಿಸಿದೆ. ಕೆಲವು ದುಷ್ಕರ್ಮಿಗಳಿಂದ ಪ್ರಾಣ ಬೆದರಿಕೆ ಇದೆ ಎಂಬ ಕೇಂದ್ರ ಗುಪ್ತಚರ ವಿಭಾಗದ ಮಾಹಿತಿ ಆಧಾರದಲ್ಲಿ ಯಡಿಯೂರಪ್ಪ ಅವರಿಗೆ ಝೆಡ್ ಕೆಟಗರಿ ಭದ್ರತೆಯನ್ನು ಒದಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.. ಒಟ್ಟು 33 ಝಡ್ ಕೆಟಗರಿ ಭದ್ರತಾ ಸಿಬ್ಬಂದಿಯನ್ನು ಬಿ.ಎಸ.ವೈ. ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಹುಲಿ ಉಗುರು ಪ್ರಕರಣ: ಚಿಕ್ಕಮಗಳೂರಿನ ಇಬ್ಬರು ಅರ್ಚಕರ ಬಂಧನ
ಚಿಕ್ಕಮಗಳೂರು: ಹುಲಿ ಉಗುರು ಹೊಂದಿದ ಆರೋಪದಲ್ಲಿ ಬಿಗ್ ಬಾಸ್ ರಿಯಾಲಿಟಿ ಷೋ ಸ್ಪರ್ಧಿ ಸಂತೋಷ್ ಬಂಧನವಾಗುತ್ತಿದ್ದಂತೆಯೇ ರಾಜ್ಯದಲ್ಲಿ ತಲ್ಲಣ ಸೃಷ್ಟಿಯಾಗಿದೆ. ಹಲವು ಗಣ್ಯರು ಹುಲಿ ಉಗುರಿನ ಆಕಾರದ ಲಾಕೆಟ್ ಧರಿಸಿದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಅರಣ್ಯ ಇಲಾಖಾಧಿಕಾರಿಗಳು ತನಿಖೆಯ ಅಖಾಡಕ್ಕೆ ಧುಮುಕಿದ್ದಾರೆ. ಈ ನಡುವೆ ಚಿಕ್ಕಮಗಳೂರಿನಲ್ಲಿ ಹುಲಿ ಉಗುರು ಪ್ರಕರಣದಲ್ಲಿ ಇಬ್ಬರು ಅರ್ಚಕರನ್ನು ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಚಕರಾದ ಕೃಷ್ಣಾನಂದ ಹೊಳ್ಳ ಹಾಗೂ ನಾಗೇಂದ್ರ ಜೋಯಿಸ ಎಂಬವರು ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದರೆಂಬ ಮಾಹಿತಿ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿರುವ ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು, ಒಟ್ಟು ಮೂರು ಹುಲಿ ಉಗುರನ್ನು ವಶಕ್ಕೆ ಪಡೆಡಿದ್ದಾರೆ.
