ಸಚಿವರಿಂದ ಕಿರುಕುಳ ಆರೋಪ; ಬಿಜೆಪಿ ಕಾರ್ಯಕರ್ತ ಸಾವಿಗೆ ಶರಣು; ಮಂತ್ರಿ ತಲೆದಂಡಕ್ಕೆ ಬಿಜೆಪಿ ಆಗ್ರಹ

ಕಲಬುರಗಿ: ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಂದ ಕಿರುಕುಳಕ್ಕೊಳಗಾಗಿರುವುದಾಗಿ ಆರೋಪಿಸಿ ಶಿವಕುಮಾರ್ ಎಂಬ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ಸಮೀಪದ ಶಿರೋಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ರೈತ ಬಿಜೆಪಿ ಕಾರ್ಯಕರ್ತ ಎನ್ನಲಾಗಿದ್ದು, ಕೈ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ಆಡಿಯೋದಲ್ಲಿ ಹೇಳಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೂ ಮುನ್ನ ಮೂರು ಆಡಿಯೋ ರೆಕಾರ್ಡ್ ಮಾಡಿರುವ ಶಿವಕುಮಾರ್ ತನ್ನ ಸಾವಿಗೆ ಸಚಿವ ಶರಣಪ್ರಕಾಶ್ ಪಾಟೀಲ್ ನೇರ ಕಾರಣ ಎಂದೂ ಆರೋಪಿಸಿದ್ದಾರೆ ಎಂದು ಮಾಧ್ಯಮಗಳು ಬೆಳಕುಚೆಲ್ಲಿವೆ. ಕಲ್ಬುರ್ಗಿಯಲ್ಲಿ ಸಚಿವ @S_PrakashPatil ಅವರಿಂದ ಇನ್ನಿಲ್ಲದ ಕಿರುಕುಳಕ್ಕೊಳಗಾಗಿದ್ದ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಅವರು ಇಂದು ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಶಿವಕುಮಾರ್ ಅವರ ಸಾವಿಗೆ ನೇರ ಹೊಣೆ ಸಚಿವ ಶರಣ ಪ್ರಕಾಶ್ ಪಾಟೀಲ್. ಸಿಎಂ @siddaramaiah ಅವರು, ಕೂಡಲೇ ಸಚಿವ ಶರಣ ಪ್ರಕಾಶ್ ಪಾಟೀಲ್‌ರನ್ನು ಸಂಪುಟದಿಂದ ಕೈ……

KSRTCಗೆ ಗೋವಾ ನಾಯಕತ್ವ ‘Best Employer Brand’ ಪ್ರಶಸ್ತಿ

ಪಣಜಿ: ಉತ್ಕೃಷ್ಟ ಸೇವೆಗೆ ಹೆಸರಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಇದೀಗ ನೆರೆ ರಾಜ್ಯಗಳಲ್ಲೂ ಕಮಾಲ್ ಪ್ರದರ್ಶಿಸುತ್ತಿದೆ.  ಸಾಲು ಸಾಲು ಪ್ರಶಸ್ತಿಗಳನ್ನು ಪಡೆಯುತ್ತಿರುವ KSRTC ಇದೀಗ ಪ್ರತಿಷ್ಠಿತ ಗೋವಾ ನಾಯಕತ್ವ Best Employer Brand ಪ್ರಶಸ್ತಿ ಪಡೆದಿದೆ. ಪ್ರತಿಷ್ಠಿತ ಗೋವಾ ನಾಯಕತ್ವ Best Employer Brand ಪ್ರಶಸ್ತಿ ವಿಶ್ವ ಉತ್ಪಾದನಾ ಕಾಂಗ್ರೆಸ್ ಪ್ರತಿಷ್ಠಾಪಿಸಿರುವ ಗೋವಾ ಲೀಡರ್ ಶಿಪ್ ಪ್ರಶಸ್ತಿ-2023ರಡಿ, KSRTC ನಿಗಮಕ್ಕೆ ಮಾನವ ಸಂಪನ್ಮೂಲ ವರ್ಗದಲ್ಲಿ ವಿನೂತನ ಉಪಕ್ರಮಗಾಗಿ ಪ್ರಶಸ್ತಿಯು ಲಭಿಸಿದೆ. ಗೋವಾದ ತಾಜ್ ವಿವಾಂತದಲ್ಲಿ ವಿಶ್ವ ಉತ್ಪಾದನಾ ಕಾಂಗ್ರೆಸ್ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರೀನಾ ಬೇರಟೋ ಶಂಕರ್ (Personal & Business Brand Strategist, ಸಂಸ್ಥಾಪಕರು Cheree Tree Concepts) ಹಾಗೂ  ರಫೀನ ಶೇಕ್ (ಸಿಯಾ), (ಸಂಸ್ಥಾಪಕರು ಹಾಗೂ ನಿರ್ದೇಶಕರು ಗೌಮಾನಿಯಾ ಎಲ್.ಎಲ್.ಪಿ) ಮಾನವ ಸಂಪನ್ಮೂಲ ವರ್ಗದಲ್ಲಿ ವಿನೂತನ ಉಪಕ್ರಮಕ್ಕಾಗಿ KSRTCಗೆ…

JDSನಲ್ಲಿ ಕ್ಷಿಪ್ರ ಬೆಳವಣಿಗೆ; ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ವಜಾ

ಬೆಂಗಳೂರು: ಬಿಜೆಪಿ ನೇತೃತ್ವದ NDA ಜೊತೆ ಜೆಡಿಎಸ್ ಮೈತ್ರಿ ಕುರಿತ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಿರ್ಧಾರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಿ.ಎಂ.ಇಬ್ರಾಹಿಂ ಅವರಿಗೆ ಪಕ್ಷದ ವರಿಷ್ಠ ಹೆಚ್.ಡಿ.ದೇವೇಗೌಡರು ಶಾಕ್ ನೀಡಿದ್ದಾರೆ. ಅಚ್ಚರಿಯ ತೀರ್ಮಾನವೊಂದರಲ್ಲಿ ಸಿ.ಎಂ.ಇಬ್ರಾಹಿಂ ಅವರನ್ನು ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಲಾಗಿದೆ. ಕೆಲವು ದಿನಗಳಿಂದ ಮಾಜಿ ಸಿಎಂ ಬಗ್ಗೆ ಟೀಕೆ ಮಾಡುತ್ತಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ನಡೆ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿತ್ತು. ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವಿಚಾರದಲ್ಲಿ ನಮ್ಮದೇ ಒರಿಜಿನಲ್ ಜೆಡಿಎಸ್ ಎಂದು ಸ್ವಪಕ್ಷದ ವರಿಷ್ಠರ ವಿರುದ್ಧವೇ ಇಬ್ರಾಹಿಂ ಗುಡುಗಿದ್ದರು. ಈ ಸಂದರ್ಭದಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರನ್ನು ವಜಾ ಮಾಡಿ, ಅವರ ಸಾರಥ್ಯದ ಸಮಿತಿಯನ್ನು ವಿಸರ್ಜಿಸುವ ತೀರ್ಮಾನವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಆದ ಹೆಚ್.ಡಿ.ದೇವೇಗೌಡರು ಪ್ರಕಟಿಸಿದ್ದಾರೆ. ಬೆಂಗಳೂರಿನ ಜೆಪಿ ಭವನದಲ್ಲಿ ಗುರುವಾರ ಜೆಡಿಎಸ್…

ಡಿ.ಕೆ.ಶಿವಕುಮಾರ್ ರಾಜೀನಾಮೆಗೆ ಬಿಜೆಪಿ ಆಗ್ರಹ

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ತಕ್ಷಣ ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸಿಬಿಐ ತನಿಖೆ ಮುಂದುವರೆಯುವ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಅವರು ತಡಮಾಡದೆ ರಾಜೀನಾಮೆ ಸಲ್ಲಿಸಬೇಕು. ಸಿಬಿಐ ತನಿಖೆ ನಡೆಯಲಿದೆ. ಉನ್ನತ ಹುದ್ದೆಯಲ್ಲಿರುವ ಡಿ.ಕೆ.ಶಿವಕುಮಾರರು ಸಾಕ್ಷ್ಯಾಧಾರಗಳನ್ನು ಮುಚ್ಚಿ ಹಾಕುವ ಎಲ್ಲ ಸಾಧ್ಯತೆ- ಸಂದರ್ಭಗಳಿವೆ. ಅವರು ಪ್ರಭಾವಿ ವ್ಯಕ್ತಿಯಾದ ಕಾರಣ ಸಾಕ್ಷಿ ನಾಶ ಮಾಡುವ ಸಾಧ್ಯತೆ ಎದ್ದು ಕಾಣುತ್ತದೆ ಎಂದರು. ಶಿವಕುಮಾರ್ ಅವರು ರಾಜೀನಾಮೆ ಕೊಡದಿದ್ದರೆ ಸಿಎಂ ಅವರ ರಾಜೀನಾಮೆ ಪಡೆಯಲಿ. ಇಲ್ಲವಾದರೆ ನಾವು ರಾಜ್ಯಪಾಲರನ್ನೂ ಭೇಟಿ ಮಾಡುತ್ತೇವೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಕೊಡದಿದ್ದರೆ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಕೊಟ್ಟು ಒತ್ತಾಯಿಸಲಿದ್ದೇವೆ ಎಂದು ವಿವರಿಸಿದರು.…

ವಿಧಾನಸೌಧದಲ್ಲಿ ಅರಿಶಿನ-ಕುಂಕುಮ ನಿರ್ಬಂಧ ವಿಚಾರ; ಸಿಎಂ ಸಿದ್ದರಾಮಯ್ಯ ಸಮರ್ಥನೆ

ಬೆಂಗಳೂರು: ವಿಧಾನಸೌಧ ಸಹಿತ ಸರ್ಕಾರಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಬಳಕೆ ಕುರಿತಂತೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ರಾಸಾಯನಿಕಯುಕ್ತ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಇದು ಹೊಸತೇನಲ್ಲ ಎಂದಿದ್ದಾರೆ. ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ’ ಎಂದು ಸ್ಪಷ್ಟಪಡಿಸಿರುವ ಅವರು, ಈ ಬಗ್ಗೆ ಸರ್ಕಾರದ ಜನರಲ್ಲಿ ಮನವಿ ಮಾಡಿದ್ದಾರೆ. ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ರಾಸಾಯನಿಕಯುಕ್ತ ಅರಿಶಿನ-ಕುಂಕುಮ ಮತ್ತು ಇತರೆ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ…

ಡಿಕೆಶಿಗೆ ಸಂಕಷ್ಟ; ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕಾನೂನು ಹೋರಾಟದಲ್ಲಿ ಹಿನ್ನಡೆಯಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದ‌ ವಿಚಾರಣೆ ಕುರಿತಂತೆ ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ತಮ್ಮ ವಿರುದ್ಧದ ಅಕ್ರಮ ಆಸ್ತಿ ಕುರಿತಂತೆ ಸಿಬಿಐ ದಾಖಲಿಸಿರುವ ಪ್ರಕರಣ ರದ್ದು ಕೋರಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಡಿಕೆಶಿಯವರು ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದಾರೆ ಎಂಬ ಆರೋಪ ಸಂಬಂಧ ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ಶಿಫಾರಸ್ಸು ಮಾಡಿತ್ತು. ಸರ್ಕಾರದ ಈ ಅಧಿಸೂಚನೆ ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೈಕೋರ್ಟ್ ಮೊರೆಹೋಗಿದ್ದು ವಿಚಾರಣೆ ನಡೆಸಿರುವ ಪೀಠ ಆದೇಶವನ್ನು ಕಾಯ್ದಿರಿಸಿತ್ತು. ಇಂದು ಆದೇಶ ಪ್ರಕಟಿಸಿರುವ ಹೈಕೋರ್ಟ್, ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿದ್ದು ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ನೀಡುವಂತೆ ನಿರ್ದೇಶಿಸಿದೆ.

ಅಸಹಾಯಕರ ಪಾಲಿಗೆ ‘ವೀರಕೇಸರಿ’ ಯುವಕರೇ ಶಕ್ತಿ

ಬೆಳ್ತಂಗಡಿ ‘ವೀರಕೇಸರಿ’ ಯುವಕರ ಸಾಧನೆ.. 175ನೇ ಯೋಜನೆಯ 7ನೇ ಆಸರೆ ಮನೆ ನಿರ್ಮಾಣ.. ಅಸಹಾಯಕರ ಪಾಲಿಗೆ ಈ ಯುವಕರೇ ಶಕ್ತಿ.. ಮಂಗಳೂರು: ಸಾಮಾಜಿಕ ಕಳಕಳಿ ಮೂಲಕ ಸೇವಾ ಕೈಂಕರ್ಯ ನಡೆಸುತ್ತಿರುವ ಬೆಳ್ತಂಗಡಿಯ ‘ವೀರಕೇಸರಿ’ ತಂಡ ಇದೀಗ ಮತ್ತೊಂದು ಕೆಲಸದ ಮೂಲಕ ನಾಡಿನ ಗಮನಸೆಳೆದಿದೆ. ಬೆಳ್ತಂಗಡಿ ಸಮೀಪದ ಶಿರ್ತಾಡಿ ವಿದ್ಯಾನಗರ ಮಕ್ಕಿಯಲ್ಲಿ ಅಸಹಾಯಕ ಕುಟುಂಬಕ್ಕೆ ಮನೆ ನಿರ್ಮಿಸಿಕೊಡುವ ಕಾರ್ಯಕ್ಕೆ ಮುನ್ನುಡಿ ಬರೆದಿದೆ. ತಾಯಿ ಮಗ. ಇಬ್ಬರೇ ಇರುವ ಹರೀಶ್ ಎಂಬವರ ಕುಟುಂಬಕ್ಕೆ 15.10.2023 ಭಾನುವಾರ ಈ ಮನೆ ನಿರ್ಮಾಣದ ಭೂಮಿ ಪೂಜೆ ನೆರವೇರಿಸಿರುವ ವೀರ ಕೇಸರಿ ಹುಡುಗರು, ತಮ್ಮ ಸಂಘಟನೆಯ 175ನೇ ಯೋಜನೆಯ 7ನೇ ಆಸರೆ ಮನೆ ನಿರ್ಮಿಸಿಕೊಡುವ ಸಾಧನೆಯ ಹುಮ್ಮಸ್ಸಿನಲ್ಲಿದ್ದಾರೆ. ಭಾನುವಾರ ಬೆಳಿಗ್ಗೆ ನೆರವೇರಿದ ಈ ಸಮಾರಂಭದಲ್ಲಿ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಭಾರತೀಯ ಜನತಾ ಪಕ್ಷ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಮಾಜಿ ಸೈನಿಕರಾದ…

ರಾಜ್ಯದಲ್ಲಿ ಪಟಾಕಿ ನಿಷೇಧಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದ ಬಳಿಕ ಎಚ್ಛೆತ್ತುಕೊಂಡಿರುವ ರಾಜ್ಯ ಸರ್ಕಾರ ರಾಜ್ಯದಲ್ಲಿ ಪಟಾಕಿ ನಿಷೇಧ ಜಾರಿ ಬಗ್ಗೆ ಚಿಂತನೆ ನಡೆಸುತ್ತಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಗೃಹ ಸಚಿವ ಜಿ.ಪರಮೇಶ್ವರ್, ಮೊದಲ ಬಾರಿಗೆ ಬೆಂಗಳೂರಿನಲ್ಲಿ ಪಟಾಕಿ ನಿಷೇಧ ಪ್ರಾಯೋಗಿಕ ಜಾರಿಗೊಳಿಸುವ ಸುಳಿವು ನೀಡಿದ್ದಾರೆ. ಅತ್ತಿಬೆಲೆ ಪಟಾಕಿ ದುರಂತ ಸ್ಥಳಕ್ಕೆ ಬುಧವಾರ ಭೇಟಿ ಪರಿಶೀಲನೆ ನಡೆಸಿದ ಜಿ.ಪರಮೇಶ್ವರ್, ಮೊದಲ ಬಾರಿಗೆ ಬೆಂಗಳೂರಿನಲ್ಲಿ ಪಟಾಕಿ ನಿಷೇಧ ಪ್ರಾಯೋಗಿಕ ಜಾರಿಗೊಳಿಸಿ ಯಶಸ್ವಿಯಾದರೆ ಇಡೀ ರಾಜ್ಯಕ್ಕೆ ವಿಸ್ತರಿಸಲಾಗುವುದು ಎಂದು ಹೇಳಿದರು. ದೆಹಲಿಯಲ್ಲಿ ಈಗಾಗಲೇ ಪಟಾಕಿ ನಿಷೇಧಿಸಲಾಗಿದೆ. ರಾಜ್ಯದಲ್ಲೂ ಯಾವುದೇ ಪಕ್ಷದ ಕಾರ್ಯಕ್ರಮಗಳಲ್ಲಿ ಪಟಾಕಿ ಬಳಸುವುದನ್ನು ನಿಷೇಧಿಸಲಾಗಿದೆ. ಹಬ್ಬಗಳ ಸಂದರ್ಭಗಳಲ್ಲೂ ದುರಂತಗಳಿಂದ ಜೀವಗಳು ಬಲಿಯಾಗಬಾರದೆಂಬುದು ಸರ್ಕಾರದ ಉದ್ದೇಶವಾಗಿದೆ ಎಂದವರು ತಿಳಿಸಿದ್ದಾರೆ. ದೀಪಾವಳಿ ಸಮೀಪಿಸುತ್ತಿದ್ದು, ಅನಾಹುತ ತಡೆಗಟ್ಟಲು ಪಟಾಕಿ ನಿಷೇಧಕ್ಕೆ ಸಾಧಕ ಬಾಧಕ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರದ ಗಿಫ್ಟ್; ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಂಪುಟ ಸಭೆ ಅಸ್ತು

ದೆಹಲಿ: ದೀಪಾವಳಿ ಸಂದರ್ಭದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಮಹತ್ವದ ನಿರ್ಧಾರವೊಂದರಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಮತ್ತು ಪಿಂಚಣಿದಾರರಿಗೆ ತುಟ್ಟಿ ಭತ್ಯೆ ಹೆಚ್ಚಳ ಮಾಡುವ ಬಗ್ಗೆ . ಕೇಂದ್ರ ಸಚಿವ ಸಂಪುಟ ತೀರ್ಮಾನ ಕೈಗೊಂಡಿದೆ. ಶೇಕಡಾ ನಾಲ್ಕರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಂಪುಟ ಅನುಮೋದನೆ ನೀಡಿದೆ. ಭತ್ಯೆ ಹೆಚ್ಚಳದ ನಂತರ ನೌಕರರ ಡಿಎ ಶೇ 42ರಿಂದ 46ಕ್ಕೆ ಏರಿಕೆಯಾಗಲಿದೆ.

ಕಾಂಗ್ರೆಸ್ ಸರಕಾರದಿಂದ ಒಂದು ಸಾವಿರ ಕೋಟಿ ಲಂಚ ಸಂಗ್ರಹ: ಎನ್.ರವಿಕುಮಾರ್

ಬೆಂಗಳೂರು: ರಾಜ್ಯದಲ್ಲಿ ಶಿವಾನಂದ ಪಾಟೀಲ, ಡಿ.ಕೆ.ಶಿವಕುಮಾರ್, ಬೈರತಿ ಸುರೇಶ್, ಯತೀಂದ್ರ, ಇತರ ಸಚಿವರು ಹಣ ಸಂಗ್ರಹಿಸಿದ್ದಾರೆ. ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಹಣದ ವಹಿವಾಟು ನಡೆಯುತ್ತಿದೆ. ಇದೆಲ್ಲದರ ಕುರಿತು ಸಿಬಿಐ- ಇಡಿ ತನಿಖೆ ಮಾಡಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿರುವ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಕರ್ನಾಟಕದಲ್ಲಿ ನಡೆದ ಐಟಿ ದಾಳಿ ಸಂದರ್ಭದಲ್ಲಿ ಸಿಕ್ಕಿದ 94 ಕೋಟಿ ನಗದು ಮತ್ತು 8 ಕೋಟಿ ಮೌಲ್ಯದ ಚಿನ್ನ ಸಿಕ್ಕಿದ್ದು, 102 ಕೋಟಿ ರೂ. ಸ್ವತ್ತನ್ನು ವಶ ಪಡಿಸಿಕೊಂಡಿದ್ದಾರೆ. 1 ಸಾವಿರ ಕೋಟಿ ರೂ. ಸಂಗ್ರಹಿಸಿದ ಮಾಹಿತಿ ಇದೆ ಎಂದು ತಿಳಿಸಿದರು. ಅಬಕಾರಿ, ಕೈಗಾರಿಕಾ ವಲಯ, ಎಲ್ಲ ಪೊಲೀಸ್ ಠಾಣೆಗಳಿಗೆ ಕಲೆಕ್ಷನ್ ಗುರಿ ಕೊಟ್ಟಿದ್ದಾರೆ. ಐಎಎಸ್, ಐಪಿಎಸ್, ಐಎಫ್‍ಎಸ್, ಕೆಎಎಸ್…