ನವದೆಹಲಿ: ಕೇಂದ್ರದ CAPC ಸಭೆಯಲ್ಲಿ ಕಬ್ಬಿನ FRP ದರ ನಿಗದಿ ಮಾನದಂಡ ಬದಲಾಯಿಸುವಂತೆ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರ್ ಶಾಂತಕುಮಾರ್ ಒತ್ತಾಯಿಸಿದ್ದಾರೆ. ಕಬ್ಬಿನ ಎಫ್ ಆರ್ ಪಿ ದರ ನಿಗದಿಯು ರೈತರಿಗೆ ಅನ್ಯಾಯವಾಗುತ್ತಿದೆ ಕಬ್ಬಿನ ಉತ್ಪಾದನೆ ವೆಚ್ಚಕ್ಕಿಂತ ಕಡಿಮೆ ದರ ನಿಗದಿಯಾಗುತ್ತಿದೆ ಸಕ್ಕರೆ ಇಳುವರಿ 8.5ರಿಂದ 10.25 ವರಗೆ ಏರಿಕೆ ಮಾಡಿರುವುದು ರೈತರಿಗೆ ಅನ್ಯಾಯವಾಗುತ್ತಿದೆ, ರಾಜ್ಯದಲ್ಲಿ 1-2 ಎಕರೆ ಕಬ್ಬು ಬೆಳೆಯುವ ರೈತರೆ ಹೆಚ್ಚು ಇರುವ ಕಾರಣ ಕಬ್ಬು ಉತ್ಪಾದನಾ ವೆಚ್ಚವನ್ನು ಪರಿಗಣಿಸುವಾಗ ಪ್ರತಿ ಹೆಕ್ಟರ್ ಗೆ ಬದಲಾಗಿ ಎಕ್ಕರೆಗೆ ಲೆಕ್ಕ ಹಾಕಬೇಕು ,ಈಗ FRP ದರ ಏರಿಕೆ ಮಾಡಿದ ಹೆಚ್ಚುವರಿ ಹಣ ರೈತರಿಗೆ ಸಿಗುತ್ತಿಲ್ಲ, ಕಬ್ಬಿನ ಕಟಾವು ಸಾಗಾಣಿಕೆ ರೈತರಿಗೆ ಸಂಕಷ್ಟವಾಗಿದೆ ಕಬ್ಬಿನ ದರವನ್ನು ರೈತರ ಹೊಲದಲ್ಲಿನ ದರ ಎಂದು ನಿಗದಿಗೊಳಿಸಿ ಪ್ರತಿ ಟನ್ ಕಬ್ಬು ಬೆಳೆಯಲು ಕನಿಷ್ಠ 3600 ಉತ್ಪಾದನಾ…
Year: 2023
‘ಸರ್ಕಾರಿ ಅಧಿಕಾರಿಗಳು ಜನರಲ್ಲಿ ಸ್ನೇಹದಿಂದ ವರ್ತಿಸಬೇಕು’; ಹುತಾತ್ಮ PSI ಜಗದೀಶ್ ಪುಣ್ಯಸ್ಮರಣೆಯಲ್ಲಿ DYSP ರವಿ ಮಾತು
ದೊಡ್ಡಬಳ್ಳಾಪುರ: ನಾವು ಎಷ್ಟು ದಿನ, ಎಷ್ಟು ಕೆಲಸ ಮಾಡಿದ್ದೇವೆ ಎಂಬುದು ಮುಖ್ಯವಲ್ಲ ಅಧಿಕಾರ ಇದ್ದಾಗ ಬಡವರ ಪರ ಮಾಡುವ ಕೆಲಸವೇ ಅತಿ ಮುಖ್ಯ ಅಂತಹವರನ್ನು ಸಾವಿನ ನಂತರವೂ ಸಮಾಜ ಸ್ಮರಿಸುತ್ತದೆ ಎಂದು ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ರವಿ ಪಿ. ಹೇಳಿದರು. ದೊಡ್ಡಬಳ್ಳಾಪುರ ಪಿಎಸ್‌ಐ ಜಗದೀಶ್ ವೃತ್ತದಲ್ಲಿ ದಿ. ಜಗದೀಶ್ ಅವರ 8ನೇ ವರ್ಷದ ಪುಣ್ಯಸ್ಮರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಪೊಲೀಸ್ ಇಲಾಖೆ ಮೇಲೆ ಅಪನಂಬಿಕೆ ಹೆಚ್ಚು ಆದರೆ, ಪೊಲೀಸ್ ಇಲಾಖೆಯ ಕುರಿತು ಇಲ್ಲಿನ ಸಾರ್ವಜನಿಕರಲ್ಲಿ ಒಳ್ಳೆಯ ಅಭಿಪ್ರಾಯವಿದೆ. ನನ್ನ 25 ವರ್ಷಗಳ ಸೇವಾವಧಿಯಲ್ಲಿ ಆದ ಅನುಭವಗಳಿಗಿಂತ ದೊಡ್ಡಬಳ್ಳಾಪುರದ ಈ ಎರಡು ತಿಂಗಳ ಅನುಭವ ಸಂಪೂರ್ಣ ವ್ಯತಿರಿಕ್ತವಾಗಿದೆ. ಒಬ್ಬ ದಕ್ಷ ಪೊಲೀಸ್ ಅಧಿಕಾರಿಯ ಸಾವಿನ ಬಳಿಕವೂ ಎಂಟು ವರ್ಷಗಳಿಂದ ಅವರ ಸೇವೆ ಸ್ಮರಿಸುತ್ತಾ ಘಟನೆಯನ್ನು ಜೀವಂತವಾಗಿಡಲಾಗಿದೆ. ದಿ.ಜಗದೀಶ್ ಅವರ ಹುಟ್ಟುಹಬ್ಬ ಮತ್ತು ಪುಣ್ಯಸ್ಮರಣೆ ಮಾಡುತ್ತಿರುವುದಕ್ಕೆ ವೈಯಕ್ತಿಕವಾಗಿ ಚಿರ ಋಣಿಯಾಗಿದ್ದೇನೆ ಎಂದರು.…
ರೈತರಿಗೆ 5 ಗಂಟೆಗಳ ಕಾಲ ಸತತ ವಿದ್ಯುತ್ ಸರಬರಾಜು; ಸಿಎಂ ಭರವಸೆ
ಬೆಂಗಳೂರು: ರೈತರಿಗೆ 5 ಗಂಟೆಗಳ ಕಾಲ ಸತತ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಭಾಗಕ್ಕೆ ವಿದ್ಯುತ್ ಸಮರ್ಪಕವಾಗಿ ಸರಬರಾಜಾಗುತ್ತಿಲ್ಲವೆಂಬ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ನಮ್ಮ ಹಿಂದಿನ ಸರ್ಕಾರದ ಅವಧಿಯಲ್ಲಿ ವಿದ್ಯುತ್ ಉತ್ಪಾದನೆ ಹೊರತುಪಡಿಸಿದರೆ, ನಂತರದ ಬಿಜೆಪಿ ಅಥವಾ ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಒಂದು ಮೆ.ವ್ಯಾಟ್ ವಿದ್ಯುತ್ತನ್ನೂ ಉತ್ಪಾದನೆ ಮಾಡಿಲ್ಲ. ಮಳೆ ಅಭಾವದಿಂದಾಗಿ ಪಂಪಸೆಟ್ ಗಳಿಗೆ ವಿದ್ಯುತ್ ವ್ಯತ್ಯಯವಾಗಿದೆ. ಸಾಧಾರಣವಾಗಿ, ಅಕ್ಟೋಬರ್ ಮಾಹೆಯವರೆಗೆ 10,000 ಮೆ.ವ್ಯಾ ವಿದ್ಯುತ್ ಖರ್ಚಾಗುತ್ತಿತ್ತು. ಆದರೆ ಈ ಬಾರಿ 16,000 ಮೆ.ವ್ಯಾಟ್ ಖರ್ಚಾಗುತ್ತಿದೆ. ಸುಮಾರು 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ. ಆದ್ದರಿಂದ ವಿದ್ಯುತ್ ಸಮಸ್ಯೆ ತಲೆದೋರಿರುವುದು ನಿಜ. ಈ ಬಗ್ಗೆ ಸಭೆ ನಡೆಸಿ, ರೈತರಿಗೆ ಮೂರು ಫೇಸ್ ಗಳಲ್ಲಿ 5 ಗಂಟೆಗಳ ಕಾಲ ಸತತ ವಿದ್ಯುತ್ ನೀಡಬೇಕು. ಹೊರಗಿನಿಂದ…
ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತ : ಸಿಎಂ ಸಿದ್ದರಾಮಯ್ಯ
ಮೈಸೂರು: ಬಿಜೆಪಿಯ ಆರೋಪ ರಾಜಕೀಯ ಪ್ರೇರಿತ ಹಾಗೂ ಆಧಾರರಹಿತವಾಗಿದ್ದು, ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರ ಮನೆಯಲ್ಲಿ ಹಣಪತ್ತೆಯಾಗಿರುವ ಹಿನ್ನೆಲೆ ಕಾಂಗ್ರೆಸ್ ಸರ್ಕಾರ ದುಡ್ಡು ವಸೂಲಿ ಮಾಡುತ್ತಿದೆ ಎಂಬ ಬಿಜೆಪಿಯ ಆರೋಪಕ್ಕೆ ಮುಖ್ಯಮಂತ್ರಿತಗಳು ಉತ್ತರ ನೀಡುತ್ತಾ, ಆದಾಯ ತೆರಿಗೆ ಇಲಾಖೆ ತನ್ನ ಕೆಲಸ ಮಾಡಿದೆ. ಯಾರದೋ ಮನೆಯಲ್ಲಿ ಹಣ ಪತ್ತೆಯಾಗಿದ್ದು, ಇದಕ್ಕೆ ರಾಜಕೀಯ ನಂಟು ಹಾಕುವುದು ಸರಿಯಲ್ಲ. ಬಿಜೆಪಿಯವರು ಯಾವುದೇ ಪ್ರತಿಭಟನೆ ಕೈಗೊಂಡರೂ ಜನ ಅವರನ್ನು ನಂಬುವುದಿಲ್ಲ. ಲೋಕಸಭೆ ಚುನಾವಣೆ ಹಾಗೂ ರಾಜಕೀಯ ಉದ್ದೇಶದಿಂದ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಯಾವುದೇ ತನಿಖೆಯ ಅವಶ್ಯಕತೆಯಿಲ್ಲ. ಪಂಚರಾಜ್ಯಗಳ ಚುನಾವಣೆಯ ಇರುವುದರಿಂದ ಕಾಂಗ್ರೆಸ್‍ನ ಮೇಲೆ ಆಧಾರರಹಿತ ಆರೋಪ ಮಾಡುತ್ತಿದ್ದಾರೆ. ಬೇರೆ ರಾಜ್ಯದಲ್ಲಿ ಚುನಾವಣೆ ನಡೆಯುವುದಕ್ಕೂ ನಮ್ಮ ರಾಜ್ಯಕ್ಕೂ ಯಾವುದೇ…
ಕರ್ನಾಟಕ ಪ್ರದೇಶ ಕಮಿಷನ್ ಕಾಂಗ್ರೆಸ್ ಆಗಿ ಬದಲಾದ KPCC: ಸಿ.ಟಿ.ರವಿ ವಾಗ್ದಾಳಿ
ಬೆಂಗಳೂರು: ನಾಡಹಬ್ಬಕ್ಕೆ ಕಳಂಕ ತರುವ ರೀತಿಯಲ್ಲಿ ಈ ಸರಕಾರದ ಹಗರಣಗಳು, ಭ್ರಷ್ಟಾಚಾರದ ಅಸ್ಥಿಪಂಜರಗಳು ಪ್ರತಿನಿತ್ಯ ಹೊರಕ್ಕೆ ಬರುತ್ತಿವೆ. ದಸರಾ ಉತ್ಸವದಲ್ಲಿ ಖ್ಯಾತ ಸರೋದ್ ವಾದಕ, ಪದ್ಮಶ್ರೀ ಪುರಸ್ಕøತ ರಾಜೀವ್ ತಾರಾನಾಥ್ ಅವರ ಕಾರ್ಯಕ್ರಮ ಆಯೋಜಿಸಲು 5 ಲಕ್ಷ ಕಾರ್ಯಕ್ರಮದ ಆಯೋಜನೆಗೆ 3 ಲಕ್ಷ ಲಂಚ ಎಂದಾದರೆ, ಶೇ 60 ಲಂಚ ಕೇಳಿದಂತಾಗಿದೆ ಎಂದು ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸಿ.ಟಿ.ರವಿ ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮುಖಂಡ ಭಾಸ್ಕರ ರಾವ್ ಉಪಸ್ಥಿತಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಹಿರಿಯ ಸಂಸ್ಕøತಿ ಪುತ್ರನ ಬಳಿ ಶೇ 60 ಲಂಚ ಕೇಳುವುದಾದರೆ ನಾಡಹಬ್ಬಕ್ಕೆ ಇದಕ್ಕಿಂತ ಕಳಂಕ ಬೇರೊಂದಿಲ್ಲ. ಇಷ್ಟು ಮಾತ್ರವಲ್ಲ; ಈ ಸರಕಾರದಡಿ ಕಲಾವಿದರನ್ನೂ ಬಿಡುತ್ತಿಲ್ಲ; ಇನ್ನು ಬೇರೆಯವರನ್ನು ಬಿಡುವರೇ ಎಂದು ಸಿ.ಟಿ.ರವಿ…
ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೃಹತ್ ಹೋರಾಟ- ನಳಿನ್‍ಕುಮಾರ್ ಕಟೀಲ್
ಬೆಂಗಳೂರು: ಕೆಟ್ಟ ಸರಕಾರ ರಾಜ್ಯದಲ್ಲಿದೆ. ಈ ಸರಕಾರದ ವಿರುದ್ಧ ನಾಳೆ ಮತ್ತು ನಾಡಿದ್ದು ಬಿಜೆಪಿಯು ಎಲ್ಲ ಜಿಲ್ಲೆ ಮತ್ತು ಮಂಡಲಗಳಲ್ಲಿ ದೊಡ್ಡದಾದ ಹೋರಾಟ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದರಾದ ನಳಿನ್‍ಕುಮಾರ್ ಕಟೀಲ್ ಪ್ರಕಟಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇವತ್ತು ನಾನು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಸೇರಿ ಸಭೆ ನಡೆಸಿದ್ದೇವೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾಧ್ಯಕ್ಷರು ನಾಳೆ ಜಿಲ್ಲೆಗಳಲ್ಲಿ ಮತ್ತು ಮಂಡಲ ಅಧ್ಯಕ್ಷರು ನಾಡಿದ್ದು ಮಂಡಲಗಳಲ್ಲಿ ಹೋರಾಟ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು. ಅಧಿಕಾರಿಗಳಿಗೇ ರೇಟ್ ಫಿಕ್ಸ್ ಮಾಡಿದ ಸರಕಾರವಿದು. ಅಧಿಕಾರಿಗಳಿಂದ ಭ್ರಷ್ಟಾಚಾರ ಆರಂಭಿಸಿದ ಈ ಸರಕಾರದ ಕಾರ್ಯವು ಕಲಾವಿದರನ್ನೂ ಬಿಟ್ಟಿಲ್ಲ ಎಂದು ತೀವ್ರವಾಗಿ ಆಕ್ಷೇಪಿಸಿದರು. ತಮ್ಮಲ್ಲಿ ಲಂಚ…
ಕಾವೇರಿ ಹೋರಾಟ: 14 ದಿನಗಳ ನಿರಂತರ ಧರಣಿ ತಾತ್ಕಾಲಿಕ ಕೈಬಿಟ್ಟ ಕರ್ನಾಟಕ ಜಲ ಸಂರಕ್ಷಣಾ ಸಮಿತಿ
ಬೆಂಗಳೂರು: ಕಾವೇರಿ ನೀರು ನಿಲ್ಲಿಸುವ , ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯುವ ಬಗ್ಗೆ ರಾಜ್ಯಪಾಲರು ಸರ್ಕಾರದ ಮುಖ್ಯಸ್ಥರನ್ನು ಆಹ್ವಾನಿಸಿ ಮಾತುಕತೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿ ನಿರಂತರ ಧರಣಿ ಕೈಬಿಡುವಂತೆ ರಾಜ್ಯಪಾಲರು ಕೋರಿದ ಹಿನ್ನೆಲೆಯಲ್ಲಿ ಇಂದಿನಿಂದ ತಾತ್ಕಾಲಿಕವಾಗಿ ಚಳುವಳಿಯನ್ನು ಕೈಬಿಡಲು ಸಮಿತಿ ತೀರ್ಮಾನಿಸಿದೆ ಎಂದು ಸಮಿತಿಯ ಸಂಚಾಲಕ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ. ಮುಂದೇನು..? ಬೆಂಗಳೂರು ನಗರ ಕಾವೇರಿ ಅಚ್ಚು ಕಟ್ಟು ಭಾಗದಲ್ಲಿ ಕರ್ನಾಟಕ ಜಲ ಸಂರಕ್ಷಣ ಸಮಿತಿ 60 ದಿನಗಳಿಂದ ಚಳುವಳಿ ನಡೆಸುತ್ತಿದ್ದರು. ಬೆಂಗಳೂರು ನಗರದ ಶಾಸಕರು ವಿಚಾರದಲ್ಲಿ ಮೌನ ವಹಿಸಿದ್ದು, ಅವರಿಗೆ ಜನರ ಸಂಕಷ್ಟ ಅರಿವಾಗಿಲ್ಲ. ಅದಕ್ಕಾಗಿ ಅವರನ್ನು ಎಚ್ಚರಿಸಲು, ಐದು ದಿನದ ಒಳಗಾಗಿ ರಾಜ್ಯಪಾಲರ ಭರವಸೆಯಂತೆ ಸರ್ಕಾರ ನಿರ್ಧಾರ ಕೈಗೊಳ್ಳದಿದ್ದರೆ ಚಳುವಳಿಯನ್ನ ಬೆಂಗಳೂರಿನ ನಗರಾಧ್ಯಂತ ವಿಸ್ತರಿಸಿ MLA,MP ಮನೆ ಮುಂದೆ ಬಾಯಿ ಬಡಿದುಕೊಳ್ಳುವ ಚಳುವಳಿ ನಡೆಸಲಾಗುವುದು ಎಂದು ಕುರುಬೂರು ಶಾಂತಕುಮಾರ್ ತಿಳಿಸಿದರು.…
ಮೈಸೂರು ದಸರಾ: ಜಗದ್ವಿಖ್ಯಾತ ಮಹೋತ್ಸವಕ್ಕೆ ಚಾಲನೆ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರ ಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು. ಡಿಸಿಎಂ ಡಿ.ಕೆ.ಶಿವಕುಮಾರ್ ಜತೆಗಿದ್ದರು. ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಸಾಂಪ್ರದಾಯಕವಾಗಿ, ಅರ್ಥಪೂರ್ಣವಾಗಿ ಉದ್ಘಾಟಿಸಿದರು. ಪಲ್ಲಕ್ಕಿಯಲ್ಲಿ ಅಲಂಕೃತ ಗೊಂಡಿದ್ದ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಚಾಮುಂಡಿ ಬೆಟ್ಟದ ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ಸಂಪ್ರದಾಯದಂತೆ ಪೂಜೆ ಸಲ್ಲಿಸಿ ನಾಡಿನಲ್ಲಿ ಉತ್ತಮ ಮಳೆ ಬೆಳೆಯಾಗಲಿ ಎಂದು ಪ್ರಾರ್ಥಿಸಿದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಜಿ.ಟಿ.ದೇವೇಗೌಡ, ಅಧ್ಯಕ್ಷತೆ ವಹಿಸಿದ್ದರು. ಮೈಸೂರು ಮೇಯರ್ ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾಜ್೯, ಪಶುಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಆಹಾರ ನಾಗರೀಕ ಫೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಸಂಸದ ಪ್ರತಾಪ್ ಸಿಂಹ,…
ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ; 12 ಮಂದಿ ಸಾವು
ಮುಂಬಯಿ: ಮಹಾರಾಷ್ಟ್ರದ ಔರಂಗಾಬಾದ್ ಬಳಿ ಹೆದ್ದಾರಿಯಲ್ಲಿ ಮಿನಿ ಬಸ್ ಹಾಗೂ ಕಂಟೈನರ್‌ಗೆ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. 20 ಕ್ಕೂ ಹೆಚ್ಚು ಮಂದಿ ಗಾಯಗೊಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಛತ್ರಪತಿ ಸಂಭಾಜಿನಗರ ಜಿಲ್ಲೆಯ ಸಮೃದ್ಧಿ ಎಕ್ಸ್‌ಪ್ರೆಸ್‌ವೇಯಲ್ಲಿ ಭಾನುವಾರ ನಸುಕಿನ ಜಾವ ಈ ಅಪಘಾತ ಸಂಭವಿಸಿದೆ. ಪ್ರಾಯಾಣಿಕರನ್ನು ಹೊತ್ತೊಯ್ಯುದ್ದಿದ್ದ ಮಿನಿ ಬಸ್ ಕಂಟೈನರ್‌ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಬಸ್‌ನಲ್ಲಿದ್ದ 35 ಮಂದಿ 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರಾವಳಿ ಸಹಿತ ರಾಜ್ಯದಲ್ಲಿ ಅ.16 ರಿಂದ 4 ದಿನ ಮಳೆ ಸಾಧ್ಯತೆ
ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 16 ರಿಂದ 4 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ 19ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ. ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಯೆಲ್ಲೊಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲೂ ಅಲ್ಲಲ್ಲಿ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
