Year: 2023
ದೊಡ್ಡಬಳ್ಳಾಪುರ: ಆಟೋ ಚಾಲಕರು ಮಾಲೀಕರ ವತಿಯಿಂದ ವಿಶಿಷ್ಠ ಕನ್ನಡ ರಾಜ್ಯೋತ್ಸವ ಆಚರಣೆ
ಬೆಂಗಳೂರು (ಗ್ರಾ): ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಆಟೋ ಚಾಲಕರು ಮತ್ತು ಮಾಲೀಕರ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ದ್ವಜಾರೋಹಣ ಹಾಗೂ ಸರತಿ ಸಾಲಿನಲ್ಲಿ ಅಲಂಕರಿಸಿದ್ದ ಆಟೋಗಳಿಗೆ ಪೂಜೆ ಮತ್ತು ಗಾಯನ ಮಾಡಿ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಆಟೋ ಚಾಲಕ ರಾಮಣ್ಣ ಸುಮಾರು 20 ವರ್ಷಗಳಿಂದ ಊರಿನ ಗ್ರಾಮಸ್ಥರು ಹಾಗೂ ಆಟೋ ಚಾಲಕರು ಹಾಗೂ ಮಾಲೀಕರ ಎಲ್ಲರ ಸಹಕಾರದಿಂದ ಸತತವಾಗಿ ಕನ್ನಡ ರಾಜ್ಯೋತ್ಸವ ಆಚರಿಸಿಕೊಂಡು ಬರುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನು ವಿಜೃಂಭಣೆಯಿಂದ ಆಚರಿಸಲು ಕನ್ನಡ ತಾಯಿ ಭುವನೇಶ್ವರಿ ಹೆಚ್ಚಿನ ಶಕ್ತಿ ನೀಡಲಿ ಎಂದರು. ಈ ವೇಳೆ ಕೋನಘಟ್ಟ ಗ್ರಾಮ ಪಂಚಾಯಿತಿ ಸದಸ್ಯ ಮಂಜುನಾಥ, ಆರಾಧ್ಯ, ಆಟೋ ಚಾಲಕರು ಮತ್ತು ಮಾಲೀಕರು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.
ಕರ್ನಾಟಕ ರಸ್ತೆ ಸುರಕ್ಷತಾ ಪ್ರಾಧಿಕಾರ ವೇಗವನ್ನು ಕಡಿಮೆ ಮಾಡಲು ಸಮೂಹ ಮಾಧ್ಯಮ ಅಭಿಯಾನ
ಬೆಂಗಳೂರು: ರಾಜ್ಯ ಸಾರಿಗೆ ಕ್ಷೇತ್ರದಲ್ಲಿ ಹೊಸ ಮನ್ವಂತರಕ್ಕೆ ಮುನ್ನುಡಿ ಬರೆಯಲಾಗಿದೆ.ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಶುಕ್ರವಾರ ಉದ್ದೇಶಿತ ಸಾಕ್ಷ್ಯಾಧಾರಿತ ಸಮೂಹ ಮಾಧ್ಯಮ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ, ಇದು ವೇಗದ ಚಾಲನೆಯಿಂದ ಉಂಟಾಗುವ ಅಪಾಯಗಳ ಬಗ್ಗೆ ಜನರನ್ನು ಎಚ್ಚರಿಸುವ ಗುರಿಯನ್ನು ಹೊಂದಿದೆ ಎಂದೇ ಬಣ್ಣಿಸಲಾಗುತ್ತಿದೆ. ಪ್ರತೀ ವರ್ಷ ನವೆಂಬರ್ ಮೂರನೇ ಭಾನುವಾರದಂದು ರಸ್ತೆ ಸಂಚಾರ ಸಂತ್ರಸ್ತರಿಗಾಗಿ (WDoR) ವಿಶ್ವ ಸ್ಮಾರಕ ದಿನವನ್ನು ಆಚರಿಸಲಾಗುತ್ತದೆ. “ವೇಗದ ದುಬಾರಿ ಬೆಲೆ: ಪುರುಷೋತ್ತಮ, ಗೀತಮ್ಮ ಮತ್ತು ಕುಟುಂಬದ ಕಥೆ” ಎಂಬ ಶೀರ್ಷಿಕೆಯ ಪ್ರಶಂಸಾ-ಶೈಲಿಯ ಅಭಿಯಾನದ ಮೂಲಕ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ (KSRSA) ವೇಗದ ವಾಹನ ಚಾಲನೆಯಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಯೋಚಿಸಲು ಮತ್ತು ಚಾಲನೆ ಮಾಡುವಾಗ ವೇಗದ ಮಿತಿಗಳನ್ನು ಅನುಸರಿಸಲು ಜನರನ್ನು ಪ್ರೇರೇಪಿಸುತ್ತದೆ. ಅಕ್ಟೋಬರ್ 31, 2023 ರಂದು ಬಿಡುಗಡೆಯಾದ 2022ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ (MoRTH) ರಸ್ತೆ…
ದೊಡ್ಡಬಳ್ಳಾಪುರ ನಗರಸಭೆಯ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರ ಸಭೆಯ ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆಯಾಗಿದ್ದು, ಆದಿಲಕ್ಷ್ಮೀ ರವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಅಯ್ಕೆ ಪ್ರಕ್ರಿಯೆ ನಡೆಸಲಾಗಿದ್ದು ವಿ ಎಸ್ ರವಿಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ರವಿಕುಮಾರ್ ಅವರನ್ನು ಜೆಡಿಎಸ್ ಮುಖಂಡರಾದ ಹೆಚ್. ಅಪ್ಪಯ್ಯಣ್ಣ, ಎ.ನರಸಿಂಹಯ್ಯ, ಹರೀಶ್ ಗೌಡ, ಕುಂಟನಹಳ್ಳಿ ಮಂಜುನಾಥ್, ಸದಸ್ಯರಾದ ಮಲ್ಲೇಶ್, ಆನಂದ್ ಮತ್ತಿತರರು ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ನೂತನ ಸ್ಥಾಯಿ ಸಮಿತಿ ಅಧ್ಯಕ್ಷ ವಿ ಎಸ್ ರವಿಕುಮಾರ್ ಮಾತನಾಡಿ ನಗರ ಭಾಗದ ಅಭಿವೃದ್ಧಿಗಾಗಿ ಶ್ರಮಿಸುವ ಅವಕಾಶ ಕಲ್ಪಿಸಲಾಗಿದೆ ನಗರದ ಅಭಿವೃದ್ಧಿಗೆ ಸರ್ವ ಸದಸ್ಯರ ಸಹಕಾರದೊಂದಿಗೆ ಶ್ರಮಿಸಲಾಗುವುದು ಎಂದರು. ಸಹಕಾರ ಕೊಟ್ಟಿರುವ ಪಕ್ಷದ ಮುಖಂಡರು ಹಾಗು ನಗರಸಭೆ ಸರ್ವ ಸದಸ್ಯರಿಗೂ ಅವರು ಕೃತಜ್ಞತೆ ಸಲ್ಲಿಸಿದರು. ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್…
ಬೆಂಗಳೂರಿನಲ್ಲಿ ಬಾಂಬ್ ಗುಮ್ಮಾ; 15ಕ್ಕೂ ಹೆಚ್ಚು ಶಾಲೆಗಳಿಗೆ ಇ-ಮೇಲ್ ಬೆದರಿಕೆ
ಬೆಂಗಳೂರು: ರಾಜಧಾನಿ ಶಾಲೆಗಳಿಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆಯ ಸಂದೇಶ ರವಾನಿಸಿದ್ದು ಈ ಸುದ್ದಿಯಿಂದಾಗಿ ಜನತೆ ಬೆಚ್ಚಿ ಬಿದ್ದಿದ್ದಾರೆ. ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆಯ ಇ- ಮೇಲ್ ಬಂದಿವೆ ಎನ್ನಲಾಗಿದೆ. ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಪೊಲೀಸರು ಶಾಲೆಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಶಾಲೆಗಳ ಮಕ್ಕಳನ್ನು ಮನೆಗೆ ವಾಪಸ್ ಕಳುಹಿಸಿದ್ದಾರೆ. ಮಹದೇವಪುರದ ಗೋಪಾಲನ್ ಇಂಟನ್ರ್ಯಾಷನಲ್ ಶಾಲೆ, ವರ್ತೂರು ಠಾಣಾ ವ್ಯಾಪ್ತಿಯ ಡೆಲ್ಲಿ ಪಬ್ಲಿಕ್ ಸ್ಕೂಲ್, ಮಾರತ್ತಹಳ್ಳಿ ಠಾಣಾ ವ್ಯಾಪ್ತಿಯ ನ್ಯೂ ಅಕಾಡೆಮಿ ಸ್ಕೂಲ್, ಹೆಣ್ಣೂರು ಠಾಣಾ ವ್ಯಾಪ್ತಿಯ ಸೇಂಟ್ ವಿನ್ಸೆಂಟ್ ಪೌಲ್ ಶಾಲೆ, ಗೋವಿಂದಪುರ ಠಾಣಾ ವ್ಯಾಪ್ತಿಯ ಇಂಡಿಯನ್ ಪಬ್ಲಿಕ್ ಸ್ಕೂಲ್‍ನಲ್ಲಿ ಬಾಂಬ್ ಇಟ್ಟಿರುವುದಾಗಿ ದುಷ್ಕರ್ಮಿಗಳು ಬೆದರಿಸಿದ್ದರು. ಕೂಡಲೇ ಶಾಲೆಗೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರೀಯ ದಳದ ಸಿಬ್ಬಂದಿ ದೌಡಾಯಿಸಿ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯಿಂದ ಪೋಷಕರು ಬೆಚ್ಚಿ ಬಿದ್ದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ…
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ನಾಲ್ಕು ದಿನ ಮಳೆ ಸಾಧ್ಯತೆ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿ ತೀರದಲ್ಲಿ ಭಾರೀ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನಲ್ಲೂ ನಾಲ್ಕು ದಿನಗಳ ಕಾಲ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಾಂಗ್ರೆಸ್, ಬಿಜೆಪಿಯಿಂದ ಸೋಲು-ಗೆಲುವಿನ ಲೆಕ್ಕಾಚಾರ..
ದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತದಾನ ಮುಕ್ತಾಯವಾಗಿದ್ದು, ಇದೀಗ ಸೋಲು-ಗೆಲುವುಗಳ ಲೆಕ್ಕಾಚಾರ ಸಾಗಿದೆ. ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಈ ಮಿನಿ ಮಹಾಸಮರದ ಮತದಾನ ಮುಕ್ತಾಯವಾಗುತ್ತಿದ್ದಂತೆಯೇ ಬಹಿರಂಗವಾಗಿರುವ ಎಕ್ಸಿಟ್ ಪೋಲ್ ಸಮೀಕ್ಷೆಯು ತೀವ್ರ ಕುತೂಹಲ ಸೃಷ್ಟಿಸಿದೆ. ಎಕ್ಸಿಟ್ ಪೋಲ್ ಫಲಿತಾಂಶ ಪ್ರಕಾರ 2018ರ ವಿಧಾನಸಭಾ ಚುನಾವಣಾ ಫಲಿತಾಂಶಕ್ಕಿಂತ ಈ ಬಾರಿ ಬಿಜೆಪಿ ಚೇತರಿಕೆ ಕಂಡಿದೆ. ಮಧ್ಯಪ್ರದೇಶ, ಛತ್ತೀಸ್ ಘಡದಲ್ಲಿ ಹಿಂದಿಗಿಂತ ಹೆಚ್ಚು ಸೀಟುಗಳನ್ನು ಗೆಲ್ಲುವ ಸಾಧ್ಯತೆಗಳು ವ್ಯಕ್ತವಾಗಿವೆ ಎಂದು ವಿಶ್ಲೇಷಕರು ಬಣ್ಣಿಸಿದ್ದಾರೆ. ಇನ್ನೊಂದೆಡೆ, ಮಲ್ಲಿಕಾರ್ಜುನ ಖರ್ಗೆಯವರು ಎಐಸಿಸಿ ಅಧ್ಯಕ್ಷರಾದ ನಂತರದ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವಿನ ಅಭಿಯಾನ ಆರಂಭಿಸಿದೆ. ಅದರಂತೆ ಈ ಬಾರಿ ಹೆಚ್ಚು ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ‘ಕೈ’ ಧುರೀಣರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚುನಾವಣೋತ್ತರ ಸಮೀಕ್ಷೆಗಳು ರಾಜಸ್ಥಾನದಲ್ಲಿ ಬಿಜೆಪಿ ಗೆಲ್ಲಲಿದೆ ಎಂಬ ಸುಳಿವು ನೀಡಿದೆ. ಬಹುತೇಕ ಸಮೀಕ್ಷೆಗಳು ಬಿಜೆಪಿ…
EXIT POLL: ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಪಕ್ಷ ಸರಳ ಬಹುಮತ ಸಾಧ್ಯತೆ
ದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತದಾನ ಮುಕ್ತಾಯವಾಗಿದ್ದು, ಇದೀಗ ಸೋಲು-ಗೆಲುವುಗಳ ಲೆಕ್ಕಾಚಾರ ಸಾಗಿದೆ. ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಈ ಮಿನಿ ಮಹಾಸಮರದ ಮತದಾನ ಮುಕ್ತಾಯವಾಗುತ್ತಿದ್ದಂತೆಯೇ ಬಹಿರಂಗವಾಗಿರುವ ಎಕ್ಸಿಟ್ ಪೋಲ್ ಸಮೀಕ್ಷೆಯು ತೀವ್ರ ಕುತೂಹಲ ಸೃಷ್ಟಿಸಿದೆ. ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಪಕ್ಷ ಸರಳ ಬಹುಮತ ಪಡೆಯುವ ಸಾಧ್ಯತೆಯಿದೆ ಎಂದು ಬಹುತೇಕ ಮಾಧ್ಯಮಗಳ ಸಮೀಕ್ಷೆ ಹೇಳಿವೆ. 90 ಸದಸ್ಯಬಲದ ಛತ್ತೀಸ್‌ಗಢ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಿಗಲಿದೆ ಎಂದು ಸಮೀಕ್ಷೆಗಳು ಸುಳಿವು ನೀಡಿದೆ.. ಎಬಿಪಿ ನ್ಯೂಸ್ ಸಮೀಕ್ಷೆ ಪ್ರಕಾರ ಬಿಜೆಪಿ 36-48 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ 41-53 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ. ದೈನಿಕ್ ಭಾಸ್ಕರ್ ಸಮೀಕ್ಷೆ ಪ್ರಕಾರ ಬಿಜೆಪಿ 35-45 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ 46-55 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ. ಇಂಡಿಯಾ ಟುಡೇ ಸಮೀಕ್ಷೆ ಪ್ರಕಾರ ಬಿಜೆಪಿ 36-46 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ 40-50 ಸ್ಥಾನಗಳನ್ನು…
EXIT POLL: ತೆಲಂಗಾಣದಲ್ಲಿ ಕಾಂಗ್ರೆಸ್ ‘ಕೈ’ಗೆ ಅಧಿಕಾರ ಸಾಧ್ಯತೆ
ದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತದಾನ ಮುಕ್ತಾಯವಾಗಿದ್ದು, ಇದೀಗ ಸೋಲು-ಗೆಲುವುಗಳ ಲೆಕ್ಕಾಚಾರ ಸಾಗಿದೆ. ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಈ ಮಿನಿ ಮಹಾಸಮರದ ಮತದಾನ ಮುಕ್ತಾಯವಾಗುತ್ತಿದ್ದಂತೆಯೇ ಬಹಿರಂಗವಾಗಿರುವ ಎಕ್ಸಿಟ್ ಪೋಲ್ ಸಮೀಕ್ಷೆಯು ತೀವ್ರ ಕುತೂಹಲ ಸೃಷ್ಟಿಸಿದೆ. ಚುನಾವಣೋತ್ತರ ಸಮೀಕ್ಷೆಗಳು ತೆಲಂಗಾಣ ವಿಧಾನಸಭೆಯಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದೆ ಎಂದು ಬಹುತೇಕ ಸಮೀಕ್ಷೆಗಳು ತಿಳಿಸಿವೆ. 199 ಸದಸ್ಯಬಲದ ತೆಲಂಗಾಣದಲ್ಲಿ ಆಡಳಿತಾರೂಢ ಬಿಆರ್‌ಎಸ್‌ಗೆ ಕಾಂಗ್ರೆಸ್ ತೀವ್ರ ಪೈಪೋಟಿ ನೀಡಿ ಗೆಲುವು ಸಾಧಿಸುವ ಸಾಧ್ಯತೆಗಳಿವೆ ಎಂದು ಮತದಾನೋತ್ತರ ಸಮೀಕ್ಷೆ ತಿಳಿಸಿದೆ. ಜನ್‌ಕೀಬಾತ್ ಸಮೀಕ್ಷೆ ಪ್ರಕಾರ ಕಾಂಗ್ರೆಸ್ 48-64 ಸ್ಥಾನಗಳನ್ನು ಗೆಲ್ಲಲಿದೆ. ಬಿಆರ್‌ಎಸ್ 40-55, ಬಿಜಪಿ 7-13 ಸ್ಥಾನಗಳನ್ನು ಗೆಲ್ಲಲಿದೆ. ಪೋಲ್ ಸ್ಟ್ರಾಟಜಿ ಗ್ರೂಪ್ ಸಮೀಕ್ಷೆ ಪ್ರಕಾರ ಕಾಂಗ್ರೆಸ್ 49-54 ಸ್ಥಾನಗಳನ್ನು ಗೆಲ್ಲಲಿದೆ. ಬಿಆರ್‌ಎಸ್ 53-58, ಬಿಜೆಪಿ 4-6 ಸ್ಥಾನಗಳನ್ನು ಗೆಲ್ಲಲಿದೆ. ರಿಪಬ್ಲಿಕ್ ಟಿವಿ-ಸಿ ವೋಟರ್ ಸಮೀಕ್ಷೆ ಪ್ರಕಾರ ಕಾಂಗ್ರೆಸ್…
EXIT POLL: ಮಧ್ಯಪ್ರದೇಶದಲ್ಲಿ ಟೈಟ್ ಫೈಟ್- ಕಾಂಗ್ರೆಸ್ ಪಕ್ಷಕ್ಕೆ ಅವಕಾಶ ಸಾಧ್ಯತೆ
ದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತದಾನ ಮುಕ್ತಾಯವಾಗಿದ್ದು, ಇದೀಗ ಸೋಲು-ಗೆಲುವುಗಳ ಲೆಕ್ಕಾಚಾರ ಸಾಗಿದೆ. ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಈ ಮಿನಿ ಮಹಾಸಮರದ ಮತದಾನ ಮುಕ್ತಾಯವಾಗುತ್ತಿದ್ದಂತೆಯೇ ಬಹಿರಂಗವಾಗಿರುವ ಎಕ್ಸಿಟ್ ಪೋಲ್ ಸಮೀಕ್ಷೆಯು ತೀವ್ರ ಕುತೂಹಲ ಸೃಷ್ಟಿಸಿದೆ. ಚುನಾವಣೋತ್ತರ ಸಮೀಕ್ಷೆಗಳು ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಏರುವ ಸಾಧ್ಯತೆಯಿದೆ ಎಂದು ಹೇಳಿದೆ. ಒಟ್ಟು 230 ಸದಸ್ಯಬಲದ ಮಧ್ಯಪ್ರದೇಶದಲ್ಲಿ ವಿಧಾನಸಭೆಯಲ್ಲಿ ಬಹುಮತಕ್ಕೆ 116 ಸ್ಥಾನಗಳ ಅಗತ್ಯವಿದೆ. ಈ ರಾಜ್ಯದಲ್ಲಿ ಕಾಂಗ್ರೆಸ್-ಬಿಜೆಪಿ ಪಕ್ಷಗಳು ಭರ್ಜರಿ ಪೈಪೋಟಿ ನೀಡಿದ್ದರೂ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಸಮೀಕ್ಷೆ ಸುಳಿವು ನೀಡಿದೆ. ಜನ್‌ಕೀಬಾತ್ ಸಮೀಕ್ಷೆ ಪ್ರಕಾರ ಬಿಜೆಪಿ 100 -123 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ 102-125 ಸ್ಥಾನಗಳನ್ನು ಪಡೆಯುವ ಸಾಧ್ಯತೆಗಳಿವೆ. ರಿಪಬ್ಲಿಕ್ ಟಿವಿ ಸಮೀಕ್ಷೆ ಪ್ರಕಾರ ಬಿಜೆಪಿ 118 -130 ಸ್ಥಾನಗಳನ್ನು ಗೆಲ್ಲಲಿದೆ. ಕಾಂಗ್ರೆಸ್ 97-107 ಸ್ಥಾನಗಳನ್ನು ಪಡೆಯುವ…