ಬೆಂಗಳೂರು: ಅಂದು ಬಿಜೆಪಿ ಮೇಲೆ ಕಾಂಗ್ರೆಸ್ ನಾಯಕರು 40 ಪರ್ಸೆಂಟ್ ಕಮೀಷನ್ ಆರೋಪ ಮಾಡಿದ್ದರು. ಇದೀಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಕಾಂಗ್ರೆಸ್ ನಾಯಕರ ಆಪ್ತನ ಮನೆಯಲ್ಲಿ ಬರೋಬ್ಬರಿ 40 ಕೋಟಿ ರೂಪಾಯಿ ಹಣ ಸಿಕ್ಕಿದೆ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಹೇಳಿದ್ದಾರೆ. ಗುರುವಾರ ಐಟಿ ದಾಳಿ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರ ಆಪ್ತನ ಮನೆಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿ.ಟಿ.ರವಿ, ಕಾಂಗ್ರೆಸ್ ನಾಯಕರ ವಿರುದ್ದ ತಮ್ಮದೇ ಶೈಲಿಯಲ್ಲಿ ಟೀಕಾಸ್ತ್ರ ಪ್ರಯೋಗಿಸಿದ್ದಾರೆ. ಸಮಾಜಿಕ ಜಾಲತಾಣಗಳಲ್ಲಿ ಈ ಪ್ರತಿಕ್ರಿಯೆ ನೀಡಿರುವ ಅವರು, ಹಿಂದಿನ ಬಿಜೆಪಿ ಸರಕಾರದ ಮೇಲೆ 40% ಸರಕಾರ ಎಂದು ಸುಳ್ಳು ಆರೋಪ ಮಾಡಿದ, ಕಾಂಗ್ರೆಸ್ಸಿನ ಹಿರಿಯ ನಾಯಕರ ಆಪ್ತ, ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಹಾಗೂ ಆತನ ಪತ್ನಿ ಕಾಂಗ್ರೆಸ್ಸಿನ ಮಾಜಿ ಕಾರ್ಪೊರೇಟರ್ ದಂಪತಿಯ ಮನೆಯಲ್ಲಿ ಐಟಿ ಅಧಿಕಾರಿಗಳು ವಶಪಡಿಸಿಕೊಂಡ 42 ಕೋಟಿ…
Year: 2023
ಕಾವೇರಿ ಕಿಚ್ಚು: ದಸರಾ ಹಬ್ಬದ ದಿನ ಎಲ್ಲ ರಸ್ತೆಗಳು ಬಂದ್
ವೆಂಗಳೂರು: ರಾಜ್ಯ ಸರ್ಕಾರ ಕೂಡಲೇ ಅಧಿವೇಶನ ಕರೆದು ನೀರು ನಿಲ್ಲಿಸುವ ನಿರ್ಣಯ ಮಂಡಿಸದಿದ್ದರೆ. ದಸರಾ ಹಬ್ಬದ ದಿನ ಎಲ್ಲ ರಸ್ತೆಗಳ ಬಂದ್ ಚಳುವಳಿ ನಡೆಸುವುದಾಗಿ.ಕರ್ನಾಟಕ ಜಲಸಂರಕ್ಷಣಾ ಸಮಿತಿ ಎಚ್ಚರಿಕೆ ನೀಡಿದೆ. ಕರ್ನಾಟಕ ಜಲ ಸಂರಕ್ಷಣಾ ಸಮಿತಿ ವತಿಯಿಂದ ನಡೆಯುತ್ತಿರುವ 12ನೇ ದಿನದ ಕಾವೇರಿ ನೀರಿನ ಅನ್ಯಾಯದ ಕುರಿತು ನಿರಂತರ ಧರಣಿಯನ್ನು ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಗುರುದೇವ್ ನಾರಾಯಣ ಕುಮಾರ್ ,ವೆಂಕಟಸ್ವಾಮಿ, ಕೆ ಕೆ ಮೋಹನ್, ರಾಜಪ್ಪ ಕಿರುಗಸೂರು ಶಂಕರ್ ಮುಖಂಡರುಗಳು ಫ್ರೀಡಂ ಪಾರ್ಕ್ ನಿಂದ ವಿಧಾನಸೌಧದವರೆಗೆ ಉರುಳುಸೇವೆ ಮಾಡಿದರು. ಈ ಸಂದರ್ಭದಲ್ಲಿ ಪೊಲೀಸರು ಉರುಳುಸೇವೆಗೆ ತಡೆಯೊಡ್ಡಿದರು. ಈ ವೇಳೆ ಪೊಲೀಸರು ಮತ್ತು ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆಯಿತು. ಸಂಘಟನೆಗಳ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದರು. ರಾಜ್ಯ ಸರ್ಕಾರಕ್ಕೆ ಕುರುಬೂರು ಎಚ್ಚರಿಕೆ: ಈ ಸಂದರ್ಭದಲ್ಲಿ ಮಾತನಾಡಿದ ಎಂದು ಸಮಿತಿಯ ಪ್ರಮುಖರಾದ ಕುರುಬೂರು ಶಾಂತಕುಮಾರ್, ರಾಜ್ಯ ಸರ್ಕಾರ ಜನರನ್ನು…
ಪಕ್ಷಾಂತರ ಪರ್ವ: ಕಾಂಗ್ರೆಸ್ ಗರಡಿಯತ್ತ ಕಮಲ ನಾಯಕರ ಪರೇಡ್..
ಬೆಂಗಳೂರು: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಇರುವಂತೆಯೇ ರಾಜಕೀಯ ವಲಯದಲ್ಲಿ ವಿದ್ಯಮಾನಗಳು ಗರಿಗೆದರಿವೆ. ಇದೇ ವೇಳೆ, ಪ್ರತಿಪಕ್ಷ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿರುವುದು ಅಚ್ಚರಿ ಹಾಗೂ ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ NDA ಜೊತೆ ಗುರುತಿಸಿಕೊಂಡ ಜೆಡಿಎಸ್ ಪಕ್ಷ ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಮೈತ್ರಿ ಘೋಷಿಸಿದೆ. ಈ ಮೈತ್ರಿ ಬೆಳವಣಿಗೆ ಬಗ್ಗೆ ಬಿಜೆಪಿಯ ಹಲವು ಮುಖಂಡರು ಅಸಮಾಧಾನಗೊಂಡಿದ್ದಾರೆ. ಈ ಬೆಳವಣಿಗೆಯ ನಡುವೆಯೇ ಬಿಜೆಪಿಯ ನಾಯಕರು ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಪಕ್ಷಾಂತರದ ಇಂಗಿತ ವ್ಯಕ್ತಪಡಿದ್ದಾರೆ ಎನ್ನಲಾಗಿದೆ. ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಅಕ್ಟೋಬರ್ 20ರಂದು ಕಾಂಗ್ರೆಸ್ ಸೇರುವ ತೀರ್ಮಾನ ಪ್ರಕಟಿಸಿರುವ ಬೆನ್ನಲೇ, ಮಾಜಿ ಶಾಸಕರಾದ ರಾಮಪ್ಪ ಲಮಾಣಿ ಹಾಗೂ ಎಂ.ಪಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಸೇರುವ ಮೂಲಕ ರಾಜ್ಯ ರಾಕೀಯದ ಬೆಳವಣಿಗೆ ಬಗ್ಗೆ ಅನೇಕಾನೇಕ ಲೆಕ್ಕಾಚಾರಗಳಿಗೆ ನಾಂದಿಹಾಡಿದ್ದಾರೆ.ಬಿಜೆಪಿ ಮುಖಂಡರಾದ ಮಾಜಿ ಶಾಸಕ ರಾಮಪ್ಪ…
ಈರುಳ್ಳಿ ಬೆಲೆ ಕುಂಠಿತ; ಮತ್ತೆ ಬೆಲೆ ಏರಿಕೆಯಾ ಆತಂಕ
ಬೆಂಗಳೂರು: ಕೆಲವು ತಿಂಗಳ ಹಿಂದಷ್ಟೇ ಗಗನಕ್ಕೇರಿದ್ದ ಈರುಳ್ಳಿ ಬೆಲೆ ಇತ್ತೀಚೆಗಷ್ಟೇ ಸಹಜ ಸ್ಥಿತಿಗೆ ಮರಳಿತ್ತು. ಇದೀಗ ಮತ್ತೆ ಈರುಳ್ಳಿ ದರ ಹೆಚ್ಚಳದ ಆತಂಕ ಎದುರಾಗಿದೆ. ದೇಶದ ಈರುಳ್ಳಿ ಬೆಳೆಯುವ ಪ್ರದೇಶಗಳಲ್ಲಿ ಮಳೆ ಅಭಾವದಿಂದಾಗಿ ಬೆಳೆ ಇಳುವರಿ ಕಡಿಮೆಯಾಗಿದ್ದು, ಇದರಿಂದಾಗಿ ಮುಂದಿನ ದಿನಗಳಲ್ಲಿ ಈರುಳ್ಳಿ ಬೆಲೆ ಗಗನಕ್ಕೇರುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ. ಈರುಳ್ಳಿ ಬೆಳೆಯುವ ಚಿತ್ರದುರ್ಗ, ಚಿಕ್ಕಬಳ್ಳಾಪುರ, ಗದಗ, ವಿಜಯಪುರ ಸಹಿತ ಬಹುತೇಕ ಜಿಲ್ಲೆಗಳು ಬರದ ಭೀಕರತೆಯಿಂದ ತತ್ತರಿಸಿದೆ. ಈ ಬಾರಿ ಈರುಳ್ಳಿ ಇಳುವರಿ ಕೇವಲ ಶೇ 40ಕ್ಕೆ ಇಳಿದಿದ್ದು ಬೇಡಿಕೆ ಪ್ರಮಾಣ ಹೆಚ್ಸಿದೆ. ಹಾಗಾಗಿ ಮುಂದಿನ 15 ದಿನಗಳಲ್ಲಿ ಈರುಳ್ಳಿ ದರ ಹೆಚ್ಚಳವಾಗುವ ಸಾಧ್ಯತೆಗಳಿವೆ.
ತೆರಿಗೆ ವಂಚಕರ ಬೆನ್ನತ್ತಿದ ಐಟಿ; ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ದಾಳಿ
ಬೆಂಗಳೂರು: ತೆರಿಗೆ ವಂಚಕರ ಬೆನ್ನತ್ತಿರುವ ಆದಾಯ ತೆರಿಗೆ ಇಲಾಖಾಧಿಕಾರಿಗಳು ಬೆಂಗಳೂರಿನಲ್ಲಿ ಇಂದು ಮತ್ತೊಮ್ಮೆ ಅಖಾಡಕ್ಕಿಳಿದಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸುತ್ತಿದ್ದಾರೆ. ಉದ್ಯಮಿಗಳು ಸೇರಿದಂತೆ ಪ್ರಮುಖರಿಗೆ ಸೇರಿದ ಸಂಸ್ಥೆ, ಕಚೇರಿ, ಹಾಗೂ ನಿವಾಸಗಳ ಮೇಲೆ ಬೆಳ್ಳಂ ಬೆಳಿಗ್ಗೆಯೇ ಲಗ್ಗೆ ಹಾಕಿದ ಐಟಿ ತಂಡ ದಾಖಲೆಗಳಿಗಾಗಿ ಜಾಲಾಡಿದೆ. ಸದಾಶಿವನಗರ, ಮಲ್ಲೇಶ್ವರಂ, ಡಾಲರ್ಸ್ ಕಾಲೋನಿ, ಸರ್ಜಾಪುರ ರಸ್ತೆ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಚಿನ್ನದ ವ್ಯಾಪಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಪ್ರೀತಿ ಪಾಶಕ್ಕೆ ಬಿದ್ದ ಪುತ್ರಿ, ರೊಚ್ಚಿಗೆದ್ದ ತಂದೆ: ಮಗಳ ಕತ್ತು ಸೀಳಿ ಕೊಂದ
ತನ್ನ ಮಗಳು ಯುವಕನೊಬ್ಬನನ್ನು ಪ್ರೀತಿಸುತ್ತಿರುವ ವಿಷಯ ತಿಳಿದು ಅಕ್ರೋಶಗೊಂಡ ತಂದೆ, ಆಕೆಯ ಕತ್ತು ಸೀಳಿ ಹತ್ಯೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ಬುಧವಾರ ರಾತ್ರಿ ಘಟನೆ ನಡೆದಿದ್ದು, ಕವನ (20) ತಂದೆಯಿಂದಲೇ ಹತ್ಯೆಯಾಗಿದ್ದಾಳೆ, ಮಗಳನ್ನು ಕೊಂದ ಮಂಜುನಾಥ್ (47) ಘಟನೆ ನಂತರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ವಿಶ್ವನಾಥಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ವಾಸುದೇವನಹಳ್ಳಿ ಬಳಿ ಚೆಕ್ ಡ್ಯಾಂ ನಿರ್ಮಾಣ: ಗುದ್ದಲಿ ಪೂಜೆ
ದೊಡ್ಡಬಳ್ಳಾಪುರ: ತಾಲ್ಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ ದಂಡುದಾಸನಕೊಡಿಗೆಹಳ್ಳಿ, ವಾಸುದೇವನಹಳ್ಳಿ ಗ್ರಾಮದ ಬಳಿ 50 ಲಕ್ಷ ರೂಪಾಯಿ ಅನುದಾನದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಗುರುವಾರ ಗುದ್ದಲಿ ಪೂಜೆ ಮಾಡಲಾಯಿತು. ಕಾಂಗ್ರೆಸ್ ಜಿಲ್ಲಾ ಪರಿಶಿಷ್ಟ ಪಂಗಡ ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ ಮಾತನಾಡಿ, ಈ ಭಾಗದ ಹಲವು ಗ್ರಾಮಗಳಲ್ಲಿ ನೀರಿನ ಅಭಾವ ಬಹಳಷ್ಟು ಇದ್ದು, ಈ ಸಮಸ್ಯೆಯನ್ನು ನೀಗಿಸಲು ಹಲವು ವರ್ಷಗಳಿಂದ ಪಂಚಾಯತಿ ಅಧಿಕಾರಿಗಳು ಹಾಗೂ ಸದಸ್ಯರು ಸಾಕಷ್ಟು ಪ್ರಯತ್ನ ಪಡುತ್ತಿದ್ದರು. ಈ ವಿಚಾರವಾಗಿ ಈಗಾಗಲೇ ಅನೇಕ ಬಾರಿ ಚರ್ಚೆಗಳಾಗಿದ್ದರೂ, ಸಹ ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸಲು ಸಾಧ್ಯವಾಗಿರಲಿಲ್ಲ. ಇಂದು ಸಣ್ಣ ನಿರಾವರಿ ಇಲಾಖಾ ವತಿಯಿಂದ ೫೦ ಲಕ್ಷ ರೂಪಾಯಿಯಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡುತ್ತಿರುವುದು ಈ ಭಾಗದ ರೈತರಿಗೆ ಕೃಷಿಯ ನಿರಾವರಿಗೆ ಅನುಕೂಲವಾಗಲಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಅಂತರ್ಜಲವು ವೃದ್ಧಿಯಾಗುತ್ತದೆ ಎಂದರು. ಸಣ್ಣ ನಿರಾವರಿ ಇಂಜಿನಿಯರ್ ನವೀನ್ ಕುಮಾರ್, ಪಿಡಿಓ ಸೌಮ್ಯ,…
‘ವೋಟ್ ಕೊಟ್ರೆ ಮಾತ್ರ ಕೆಲಸ ಮಾಡ್ತೀವಿ ಇಲ್ಲ ಅಂದರೆ ಕೆಲಸ ಮಾಡೋದೇ ಇಲ್ಲ’
ಬೆಂಗಳೂರು: ವೋಟ್ ಕೊಟ್ರೆ ಮಾತ್ರ ಕೆಲಸ ಮಾಡ್ತೀವಿ ಇಲ್ಲ ಅಂದರೆ ಕೆಲಸ ಮಾಡೋದೇ ಇಲ್ಲ ಎಂದು ಮಾಗಡಿಯ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಅವರು ಹೇಳಿದ್ದಾರೆಂಬ ವೇಳೆ ವೀಡಿಯೋ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಇದು ಕಾಂಗ್ರೆಸ್ಸಿನ ಅಂತರಾಳದ ಧಿಮಾಕು, ದರ್ಪವನ್ನು ತೋರಿಸುತ್ತದೆ ಎಂದು ಬಿಜೆಪಿ ಪ್ರತಿಕ್ರಿಯಿಸಿದೆ. ಈ ವೀಡಿಯೋವನ್ನು ಟ್ವೀಟ್ ಮಾಡಿರುವ ಬಿಜೆಪಿ, ರಾಜ್ಯದ ಜನತೆ ಈಗಾಗಲೇ ಕಾಂಗ್ರೆಸ್ ಪಕ್ಷಕ್ಕೆ 135 ಸ್ಥಾನಕೊಟ್ಟು ಮಾಡಿದ ತಪ್ಪಿಗೆ ಪ್ರಾಯಶ್ಚಿತ್ತ ಪಡುತ್ತಿರುವುದು ಅಲ್ಲದೆ, ಸಿದ್ದರಾಮಯ್ಯರವರ ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಬೊಟ್ಟುಮಾಡಿದೆ. ಜನರಿಗೆ ಗ್ಯಾರಂಟಿಗಳು ಸರಿಯಾಗಿ ಸಿಗುತ್ತಿಲ್ಲ, ಅಭಿವೃದ್ಧಿಯೂ ಇಲ್ಲ. ನೆಮ್ಮದಿಯ ಬದುಕು ಅಂತೂ ಇಲ್ಲವೇ ಇಲ್ಲ ಎಂದು ಬಿಜೆಪಿ ಹೇಳಿದೆ. ವೋಟ್ ಕೊಟ್ರೆ ಮಾತ್ರ ಕೆಲಸ ಮಾಡ್ತೀವಿ ಇಲ್ಲ ಅಂದರೆ ಕೆಲಸ ಮಾಡೋದೇ ಇಲ್ಲ ಎಂದು ಮಾಗಡಿಯ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಅವರು ಕಾಂಗ್ರೆಸ್ಸಿನ ಅಂತರಾಳದ ಧಿಮಾಕು,…
ರೈತರಿಗೆ ಮತ್ತೊಮ್ಮೆ ಕಾವೇರಿ ಆಘಾತ; ತಮಿಳುನಾಡಿಗೆ ಮತ್ತಷ್ಟು ನೀರು ಹರಿಸಲು ಆದೇಶ
ಬೆಂಗಳೂರು: ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ನಿತ್ಯ 3000 ಕ್ಯೂಸೆಕ್ ನೀರು ಹರಿಸಲು ಕಾವೇರಿ ಜಲ ನಿಯಂತ್ರಣ ಸಮಿತಿ ರಾಜ್ಯಕ್ಕೆ ಆದೇಶ ನೀಡಿದೆ. ಈ ಆದೇಶದಿಂದ ರಾಜ್ಯದ ರೈತರು ಮತ್ತೊಮ್ಮೆ ಆಘಾತಕ್ಕೊಳಗಾಗಿದ್ದಾರೆ. ಈ ಆದೇಶವು ರಾಜ್ಯದ ರೈತರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಕರ್ನಾಟಕ ಜಲಸಂರಕ್ಷಣಾ ಸಮಿತಿ ಮುಖಂಡರೂ ಆಗಿರುವ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದ್ದಾರೆ. ಕಾವೇರಿ ಜಲ ನಿಯಂತ್ರಣ ಸಮಿತಿಯ ಆದೇಶ ಕುರಿತಂತೆ ಪ್ರತಿಕ್ರಿಯಿಸಿರುವ ಕುರುಬೂರು ಶಾಂತಕುಮಾರ್, ರೈತರಿಗೆ ಮತ್ತೊಮ್ಮೆ ಕಾವೇರಿ ಆಘಾತ, ಇನ್ನೊಂದೆಡೆ ವಿದ್ಯುತ್ ಸಂಕಷ್ಟ ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ ಎನ್ನುವ ಎದೆಗಾರಿಕೆ ಸರ್ಕಾರಕ್ಕೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮಿಳುನಾಡಿಗೆ ಮತ್ತೆ ಮುಂದಿನ 15 ದಿನಗಳ ಕಾಲ ನಿತ್ಯ 3000 ಕ್ಯೂಸೆಕ್ ನೀರು ಹರಿಸಲು ಕಾವೇರಿ ಜಲ ನಿಯಂತ್ರಣ ಸಮಿತಿ ರಾಜ್ಯಕ್ಕೆ…
ಐಆರ್ಆರ್ ಪ್ರಕರಣ; ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಬಿಡುಗಡೆ ಭಾಗ್ಯ
ಹೈದರಾಬಾದ್: ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಆಂದ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಬಿಡುಗಡೆ ಭಾಗ್ಯ ಸಿಕ್ಕಿದರ. ಚಂದ್ರಬಾಬು ನಾಯ್ಡು ಅವರಿಗೆ ವಿಜಯವಾಡದ ಎಸಿಬಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ . ಐಆರ್ಆರ್ ಪ್ರಕರಣದಲ್ಲಿ ಚಂದ್ರಬಾಬು ನಾಯ್ಡು ಬಂಧಿತರಾಗಿದ್ದಾರೆ. ಚಂದ್ರಬಾಬು ನಾಯ್ಡು ಬಂಧನ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಸುದೀರ್ಘ ಕಾನೂನು ಸಮರದ ಬಳಿಕ ಮಾಜಿ ಸಿಎಂಗೆ ಕೋರ್ಟ್‌ನಿಂದ ಜಾಮೀನು ಸಿಕ್ಕಿದೆ ಎಂದು ಪಕ್ಷದ ಕಾರ್ಯಕರ್ತರು ಸಂತಸ ವ್ಯಕ್ತಪಡಿಸಿದ್ದಾರೆ.
