ವಿಧಾನಸೌಧ ಇದೀಗ ‘ಗುರುವಾರದ ಬಜಾರ್’..?

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕಾಂಗ್ರೆಸ್ ಅಸಂಬದ್ಧ ಟೀಕೆ ಮಾಡಿದೆ ಜೆಡಿಎಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಜೆಡಿಎಸ್; ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಹರಿಹಾಯ್ದಿದೆ. 4 ವರ್ಷದ ಹಿಂದೆ ಸರ್ಕಾರ ಮಾಡಲು ಸಿದ್ದರಾಮಯ್ಯ, ಡಿಕೆಶಿ ಅವರ ಮನೆಗೆ ಕುಮಾರಸ್ವಾಮಿ ಅವರು ಬಂದಿದ್ದರಾ? ಸುಳ್ಳು ಹೇಳುವುದಕ್ಕೆ ಸಾಸಿವೆ ಕಾಳಿನಷ್ಟಾದರೂ ಸಂಕೋಚ ಬೇಡವೇ? ಎಂದು ಜೆಡಿಎಸ್ ತರಾಟೆಗೆ ತೆಗೆದುಕೊಂಡಿದೆ. 135 ಸೀಟು ಗೆದ್ದಿದ್ದೇವೆ ಎನ್ನುವ ಧಿಮಾಕಿನಲ್ಲಿ ಏನು ಹೇಳಿದರೂ ಜನ ನಂಬುತ್ತಾರೆಂಬ ಅಹಂಕಾರವೇ? ಆಗ ದೇವೇಗೌಡರ ಮನೆ ಅಂಗಳದಲ್ಲಿ ಅಂಗಿ ಮಡಚಿ ಮುಖ ಒಣಗಿಸಿಕೊಂಡು ನಿಂತ ಧೀರರು ಯಾರೆಂದು ಗೊತ್ತಿಲ್ಲವೇ? ಎಲ್ಲೋ ಇದ್ದ ಕುಮಾರಸ್ವಾಮಿ ಅವರನ್ನು ಪಾಪರಾಜ್ಜಿಗಳಂತೆ ಬೆನ್ಹತ್ತಿ, ಆಮೇಲೆ ಕಾಡಿ ಬೇಡಿ ದೇವೇಗೌಡರ ಪದತಲಕ್ಕೆ ಬಿದ್ದವರ ಪುರಾಣ ಬಿಚ್ಚಿಡಬೇಕೆ? ಎಂದು ಕಾಂಗ್ರೆಸ್ಸಿಗೆ ಜೆಡಿಸ್ ಎಚ್ಚರಿಕೆ…

ಹಮಾಸ್ ಉಗ್ರರ ಪೈಶಾಚಿಕತೆ; ಶಿಶುಗಳ ಶಿರಚ್ಛೇದನ

ಟೆಲ್ ಅವೀವ್: ಇಸ್ರೇಲ್- ಹಮಾಸ್ ಉಗ್ರರ ನಡುವಿನ ಸಂಘರ್ಷದಿಂದಾಗಿ ಮಧ್ಯಪ್ರಾಚ್ಯ ಉದ್ವಿಗ್ನವಾಗಿದೆ. ಇಸ್ರೇಲ್-ಪ್ಯಾಲೆಸ್ತೀನ್ ನಡುವಿನ ದಾಳಿ ಪ್ರತಿದಾಳಿ ತೀವ್ರಗೊಳ್ಳುತ್ತಿದ್ದಂತೆಯೇ ಪ್ಯಾಲೆಸ್ತೀನ್ ಬೆಂಬಲಿತ ಹಮಾಸ್ ಉಗ್ರರು ಪೈಶಾಚಿಕತೆ ಮೆರೆದಿದ್ದಾರೆ. ಇಸ್ರೇಲ್ ವಿರುದ್ಧ ಸಿಟ್ಟು ವ್ಯಕ್ತಪಡಿಸುವ ಆತುರದಲ್ಲಿ ಹಮಾಸ್ ಉಗ್ರರು ಸುಮಾರು 40 ಶಿಶುಗಳ ಹತ್ಯೆ ಮಾಡಿದ್ದಾರೆ. ಹಮಾಸ್ ನಡೆಸಿರುವ ಈ ನರಮೇಧ ವ್ಯಾಪಕ ಖಂಡನೆಗೂ ಗುರಿಯಾಗಿದೆ.

ಚೈತ್ರಾ ಪ್ರಕರಣ; ವಜ್ರದೇಹಿ ಮಠದ ಸ್ವಾಮೀಜಿಗೆ ಸಿಸಿಬಿ ನೊಟೀಸ್

ಬೆಂಗಳೂರು: ಬಿಜೆಪಿ ಟಿಕೆಟ್‌ ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಗ್ಯಾಂಗ್ ಬಂಧನದಲ್ಲಿರುವಂತೆಯೇ ಮತ್ತಷ್ಟು ಮಂದಿಯ ಪಾತ್ರಗಳ ಬಗ್ಗೆ ಸಿಸಿಬಿ ಪೊಲೀಸರು ಜಾಲಾಡುತ್ತಿದ್ದಾರೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಮಂಗಳೂರಿನ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ನೋಟಿಸ್ ಜಾರಿ ಮಾಡಿರುವ ಬೆಳವಣಿಗೆ ಕುತೂಹಲಕ್ಕೆ ಕಾರಣವಾಗಿದೆ. ಬೆಂಗಳೂರಿನ ಉದ್ಯಮಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಕೊಡಿಸುವುದಾಗಿ ವಂಚಿಸಲಾಗಿದೆ ಎಂಬ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಹಿಂದೂ ಕಾರ್ಯಕರ್ತೆ ಎಂದು ಘೋಷಿಸಿಕೊಂಡಿರುವ ಚೈತ್ರಾ ಕುಂದಾಪುರ, ಬಿಜೆಪಿ ನಾಯಕರಾಗಿದ್ದ ಗಗನ್ ಕಡೂರು, ಅಭಿನವ ಹಲಶ್ರೀ ಸ್ವಾಮೀಜಿ ಸೇರಿದಂತೆ ಆರು ಮಂದಿ ಇದೀಗ ಬಂಧನಕ್ಕೊಳಗಾಗಿ ಜೈಲಿನಲ್ಲಿದ್ದಾರೆ. ಇದೇ ಪ್ರಕರಣದಲ್ಲಿ ಹಿಂದುತ್ವವಾದಿ ಸ್ವಾಮೀಜಿ ಎಂದೇ ಬಿಂಬಿತವಾಗಿರುವ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೂ ಕೂಡಾ ಸಿಸಿಬಿ ನೋಟಿಸ್ ನೀಡಿದೆ. ಈ ನಡುವೆ, ಈ ಪ್ರಕರಣಕ್ಕೂ ಸ್ವಾಮೀಜಿಗೂ ಯಾವುದೇ ಸಂಬಂಧವಿಲ್ಲ ಎಂಬ ವಿಚಾರ ಪೊಲೀಸರಿಗೂ ತಿಳಿದಿದೆ ಎನ್ನಲಾಗಿದ್ದು, ಆದರೂ…

ಅತ್ತಿಬೆಲೆ ಪಟಾಕಿ ದುರಂತದ ಪ್ರತಿಧ್ವನಿ; ಇನ್ಸ್‌ಪೆಕ್ಟರ್‌, ತಹಸೀಲ್ದಾರ್‌, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿಗಳ ಅಮಾನತು

ಅತ್ತಿಬೆಲೆ ಪಟಾಕಿ ದುರಂತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹಿರಿಯ ಅಧಿಕಾರಿಗೊಳೊಂದಿಗೆ ಸಭೆ ನಡೆಸಿದರು: ರಾಜ್ಯದಾದ್ಯಂತ ಪ್ರತಿಯೊಂದು ಲೈಸೆನ್ಸ್‌ದಾರರ ಸ್ಥಳ ಪರಿಶೀಲನೆ ನಡೆಸಿ, ಲೋಪಗಳಿದ್ದರೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಅತ್ತಿಬೆಲೆ ಪ್ರಕರಣದಲ್ಲಿ ತಹಶೀಲ್ದಾರ್, ಇನ್ಸ್ ಪೆಕ್ಟರ್ ಮತ್ತು ರೀಜನಲ್ ಫೈರ್ ಆಫೀಸರ್‌ಗಳನ್ನು ಅಮಾನತು ಮಾಡಬೇಕು. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳು ಎಲ್ಲ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ನಿರ್ದೇಶನ‌ ನೀಡಿದರು. ಎಕ್ಸ್‌ಪ್ಲೋಸಿವ್‌ ಆಕ್ಟ್‌ ನಲ್ಲಿ ಲೈಸೆನ್ಸ್‌ ಕೊಡುವಾಗ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಹದಿನಾಲ್ಕು ಜನರ ಜೀವ ಕಳೆದುಕೊಂಡಿದ್ದಕ್ಕೆ ಯಾರು ಹೊಣೆಗಾರರು? ಕಾಯ್ದೆ ಓದಿದ್ದೀರಾ? ಅವರು ಅದರಲ್ಲಿರುವ ಎಲ್ಲ ಮಾನದಂಡಗಳನ್ನು ಪೂರೈಸಿದ್ದಾರೆಯೇ ಎಂದು ನೋಡಬೇಕು. ತಳಹಂತದ ಅಧಿಕಾರಿಗಳು ಸಲ್ಲಿಸಿದ ವರದಿ ಸರಿಯಿದೆಯೇ ಎಂದು ಜಿಲ್ಲಾಧಿಕಾರಿಗಳು ಪರಿಶೀಲಿಸಬೇಕು ಎಂದರು. ಎಲ್ಲ ಪಟಾಕಿ ಮಳಿಗೆಗಳ ಸುರಕ್ಷತೆಯನ್ನೂ ತಪಾಸಣೆ ಮಾಡಬೇಕು. ಇನ್ನು…

ಕರ್ನಾಟಕದ ಕಾವೇರಿ ನೀರಿನ ಸಂಕಷ್ಟ: ಕೇಂದ್ರದ ಗಮನಸೆಳೆಯುವಲ್ಲಿ ಯಶಸ್ವಿಯಾದ ಜಲ ಸಂರಕ್ಷಣಾ ಸಮಿತಿ

ದೆಹಲಿ: ಕರ್ನಾಟಕದ ಕಾವೇರಿ ನೀರಿನ ಸಂಕಷ್ಟದ ಬಗ್ಗೆ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನಿಯೋಗ ದೆಹಲಿಯಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. 9ರಂದು ಬೆಳಿಗ್ಗೆ ದೆಹಲಿಯ ಅಕ್ಬರ್ ರಸ್ತೆಯಲ್ಲಿರುವ ಕೇಂದ್ರ ಸಚಿವರ ಗೃಹ ಕಚೇರಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಜಲ ಸಂರಕ್ಷಣಾ ಸಮಿತಿ ನಿಯೋಗ ಭೇಟಿ ಮಾಡಿದೆ. ಸಚಿವರ ಜೊತೆ ಸುಮಾರು 20 ನಿಮಿಷಗಳ ಕಾಲ ವಿಸೃತ ಚರ್ಚೆ ನಡೆಸಿ ಕರ್ನಾಟಕದ ಸಂಕಷ್ಟದ ಪರಿಸ್ಥಿತಿಯನ್ನು ವಿವರಿಸಲಾಯಿತು ನಿಯೋಗದಲ್ಲಿದ್ದ ಕರ್ನಾಟಕ ಜಲಸಂರಕ್ಷಣಾ ಸಮಿತಿಯ ಮುಖ್ಯಸ್ಥ, ಕುರುಬೂರ್ ಶಾಂತಕುಮಾರ್ ತಿಳಿಸಿದ್ದಾರೆ . ಕರ್ನಾಟಕದ ಜನರು 25 ಜನ ಬಿಜೆಪಿ ಎಂ ಪಿ ಗಳನ್ನ ಆಯ್ಕೆ ಮಾಡಿ ಕಳಿಸಿದ್ದಾರೆ ಈ ಸರ್ಕಾರದಿಂದಲೇ ನಮಗೆ ಅನ್ಯಾಯವಾಗುತ್ತಿದೆ ರಾಜ್ಯದ ರೈತರ ಬಲಿಕೊಡುವಂತಾಗಿದೆ ರೈತರು ಕೃಷಿ ತೊರೆದು ವಲಸೆ ಹೋಗುತ್ತಿದ್ದಾರೆ ,ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ, ಎಂಟು ತಿಂಗಳು ಯಾವುದೇ ಬೆಳೆ…

ಒಂದೇ ತಿಂಗಳಲ್ಲಿ ಎರಡು ಗ್ರಹಣಗಳು; ಸೂರ್ಯ-ಚಂದ್ರಗ್ರಹಣ ಬಗ್ಗೆ ಇಲ್ಲಿದೆ ಮಾಹಿತಿ

ದೆಹಲಿ: ಈ ತಿಂಗಳಲ್ಲಿ ಸೂರ್ಯ ಗ್ರಹಣ ಮತ್ತು ಚಂದ್ರ ಗ್ರಹಣ ಸನ್ನಿವೇಶ ಕಾಣಸಿಗಳಿವೆ. ಒಂದೇ ತಿಂಗಳಲ್ಲಿ ಎರಡು ಗ್ರಹಣಗಳು ಸಂಭವಿಸಲಿದ್ದು ಜ್ಯೋತಿಷಿಗಳಿಂದ ಬಗೆ ಬಗೆಯ ವಿಶ್ಲೇಷಣೆಗಳು ಸಾಗಿವೆ. ಅಕ್ಟೊಬರ್ 4ರಂದು ಸೂರ್ಯಗ್ರಹಣ ಸಂಭವಿಸಲಿದೆ. ಅಕ್ಟೋಬರ್ 14ರ ಶನಿವಾರ ರಾತ್ರಿ 8:34 ಗ್ರಹಣದ ಸ್ಪರ್ಷಕಾಲವಾಗಿದ್ದು ರಾತ್ರಿ 2:25ರ ಸುಮಾರಿಗೆ ಮೋಕ್ಷವಾಗಲಿದೆ. ಆದರೆ ಈ ಸೂರ್ಯ ಗ್ರಹಣವು ಅಮೆರಿಕದ ಪಶ್ಚಿಮ ಭಾಗ ಹಾಗೂ ಪೆಸಿಫಿಕ್ ಸಮುದ್ರದವರೆಗೆ ಸೇರಿದಂತೆ ಉತ್ತರ ಅಮೆರಿಕದಲ್ಲಿ ಸೂರ್ಯ ಗ್ರಹಣ ಗೋಚರಿಸಲಿದ್ದು, ಭಾರತದಲ್ಲಿ ಗೋಚರವಾಗುವುದಿಲ್ಲ. ಹೀಗಾಗಿ ಯಾವುದೇ ಸೂತಕದ ಅವಧಿ ಇರುವುದಿಲ್ಲ ಎಂದು ಜ್ಯೋತಿಷಿಗಳು ಹೇಳಿದ್ದಾರೆ. ಇದಾದ ಎರಡು ವಾರಗಳಲ್ಲಿ ಚಂದ್ರ ಗ್ರಹಣಕ್ಕೆ ನಭೋಮಂಡಲ ಸಾಕ್ಷಿಯಾಗಲಿದೆ. ಅಕ್ಟೊಬರ್ 28ರ ಮಧ್ಯರಾತ್ರಿ ಅಮೆರಿಕ, ಆಫ್ರಿಕಾ, ಪಶ್ಚಿಮ ಯುರೋಪ್ ಸೇರಿದಂತೆ ಜಗತ್ತಿನ ಹಲವೆಡೆ ಚಂದ್ರಗ್ರಹಣ ಗೋಚರಿಸಲಿದ್ದು, ಈ ಚಂದ್ರ ಗ್ರಹಣವು ಭಾರತದಲ್ಲಿ ಭಾಗಶಃ ಗೋಚರಿಸಲಿದೆ ಎನ್ನಲಾಗುತ್ತಿದೆ. ಅಕ್ಟೋಬರ್ 28ರ ಶನಿವಾರ…

ಮಧ್ಯಪ್ರಾಚ್ಯ ಸಂಘರ್ಷ; ಹಮಾಸ್’ನಿಂದ ಇಸ್ರೇಲ್ ಒತ್ತೆಯಾಳುಗಳ ನರಮೇಧದ ಬೆದರಿಕೆ

ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದಿಂದಾಗಿ ಮಧ್ಯ ಪ್ರಾಚ್ಯ ಪ್ರಕ್ಷುಬ್ಧಗೊಂಡಿದೆ. ಪ್ಯಾಲೆಸ್ತೀನ್ ಬೆಂಬಲಿತ ಹಮಾಸ್ ಉಗ್ರರ ಪೈಶಾಚಿಕ ದಾಳಿಗೆ ಪ್ರತಿಯಾಗಿ ಮಿಲಿಟರಿ ಕಾರ್ಯಾಚರಣೆಗೆ ಇಸ್ರೇಲ್ ತಯಾರಿ ನಡೆಸಿದೆ. ಸುಮಾರು ಮೂರು ಲಕ್ಷ ಸೈನಿಕರ ಪದೇ ಇಸ್ರೇಲ್ ಬೆಂಬಲಿಸಿ ಸಮರದ ಅಖಾಡಕ್ಕೆ ಇಳಿಯಲು ಸಜ್ಜಾಗಿದೆ. ಇದೇ ವೇಳೆ, ಇಸ್ರೇಲ್ ದಾಳಿ ನಡೆಸಿದರೆ ತಮ್ಮ ಮೊಟ್ಟೆಯಲ್ಲಿರುವ ಮಂದಿಯ ನರಮೇಧ ನಡೆಸುವ ಎಚ್ಚರಿಕೆಯನ್ನು ಹಮಾಸ್ ನೀಡಿದೆ. ಗಾಜಾ ಪಟ್ಟಿಯಲ್ಲಿ ನಾಗರಿಕರ ಮೇಲೆ ದಾಳಿ ನಡೆದರೆ ತಮ್ಮ ವಶದಲ್ಲಿರುವ ಇಸ್ರೇಲಿ ನಾಗರಿಕರನ್ನು ಕೊಲ್ಲುತ್ತೇವೆ ಎಂದು ಹಮಾಸ್ ಉಗ್ರರು ಬೆದರಿಕೆ ಹಾಕಿದ್ದಾರೆ. ಈ ನಡುವೆ, ಮಧ್ಯಪ್ರಾಚ್ಯ ಸಮರದಲ್ಲಿ ಈವರೆಗೆ 1,600ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. 143 ಮಕ್ಕಳು ಮತ್ತು 105 ಮಹಿಳೆಯರು ಸೇರಿದಂತೆ 704 ಜನರು ಸಾವನ್ನಪ್ಪಿದ್ದಾರೆ. ಇದೇ ವೇಳೆ, ಹಮಾಸ್ ಉಗ್ರರ ದಾಳಿಯಿಂದಾಗಿ ಇಸ್ರೇಲ್‌ನಲ್ಲಿ ಸುಮಾರು 900 ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ರಾಜಸ್ತಾನ: 41 ಅಭ್ಯರ್ಥಿಗಳ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ

ದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆಯೇ ರಾಜಕೀಯ ಪಕ್ಷಗಳಲ್ಲಿ ವಿದ್ಯಮಾನಗಳು ಗರಿಗೆದರಿವೆ. ಕೇಂದ್ರ ಚುನಾವಣಾ ಆಯೋಗ ರಾಜಸ್ಥಾನ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಸೋಮವಾರ ವೇಳಾಪಟ್ಟಿ ಪ್ರಕಟಿಸಿದೆ. ಈ ಘೋಷಣೆಯಾಗುತ್ತಿದ್ದಂತೆಯೇ ಬಿಜೆಪಿ ತನ್ನ 41 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ರಾಜಸಮಂದ್ ಸಂಸದೆ ದಿಯಾ ಕುಮಾರಿ ಮತ್ತು ಜೈಪುರ ಗ್ರಾಮಾಂತರ ಸಂಸದ ರಾಜ್ಯವರ್ಧನ್ ಸಿಂಗ್ ರಾಥೋಡ್ ಸೇರಿದಂತೆ 41 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇಬ್ಬರು ಸಂಸದರನ್ನು ಬಿಜೆಪಿ ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಪ್ರಕಟಿಸಿರುವುದು ಕುತೂಹಲಕಾರಿ ಸಂಗತಿ

ಜಾಗತಿಕ ಶ್ರೇಷ್ಠ ವಿಜ್ಞಾನಿಗಳ ಪಟ್ಟಿ: ಬೆಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಬಿ. ಈರಯ್ಯ ಆಯ್ಕೆ

ಬೆಂಗಳೂರು: 2023 ನೇ ವರ್ಷದ ಜಾಗತಿಕ ಉನ್ನತ ಶೇ. 2 ವಿಜ್ಞಾನಿಗಳ ಪಟ್ಟಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಬಿ. ಈರಯ್ಯ ಅವರು ಆಯ್ಕೆಯಾಗಿದ್ದಾರೆ. ಅಮೇರಿಕಾದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಮತ್ತು ನೆದರ್ ಲ್ಯಾಂಡಿನ ಎಲ್ಸೆವಿಯರ್ ಪ್ರಕಾಶನ ಸಂಸ್ಥೆಯ 2023 ನೇ ಜಾಗತಿಕ ಮಟ್ಟದ ಉನ್ನತ ಶೇ. 2ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ Glass Science and Technology (ಗಾಜಿನ ವಿಜ್ಞಾನ ಮತ್ತು ತಂತ್ರಜ್ಞಾನ)ದ ಕ್ಷೇತ್ರದಲ್ಲಿನ ಸಂಶೋಧನೆಗಾಗಿ 2023 ನೇ ವರ್ಷದ ವಿಶ್ವದ ಉನ್ನತ ಶೇ. 2 ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಲಭಿಸಿದೆ. ಪ್ರತಿವರ್ಷ ಸೈಟೇಷನ್ ಇಂಡೆಕ್ಸ್‌ ಆಧಾರದ ಮೇಲೆ ಒಂದು ಲಕ್ಷಕ್ಕೂ ಹೆಚ್ಚು ವಿಜ್ಞಾನಿಗಳನ್ನು ಗುರುತಿಸಿ, ಶ್ರೇಷ್ಠ ಶೇ. 2 ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಕಲ್ಪಿಸುತ್ತದೆ. ಈ ಭಾರಿ ಬೆಂಗಳೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಬಿ. ಈರಯ್ಯ ಅವರು ಅಂತರಾಷ್ಟ್ರೀಯವಾಗಿ ಪ್ರಕಟವಾದ 145…

ಲೋಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಚಿವ ರಾಜಣ್ಣ ಇಂಗಿತ?

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಹೇಳಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದು ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸಚಿವ ಸ್ಥಾನಕ್ಕೆ ಅಂಟಿಕೊಂಡು ಕೂತಿಲ್ಲ. ಹೈಕಮಾಂಡ್ ಹೇಳಿದರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವೆ ಎಂದಿದ್ದಾರೆ. ಯಾರು ಏನೇ ಹೇಳಿದರೂ ತೀರ್ಮಾನ ಮಾಡುವುದು ಹೈಕಮಾಂಡ್. ನಾನು ಕೂಡ ಹೈಕಮಾಂಡ್ ಹೇಳಿದಂತೆ ಮಾಡುತ್ತೇನೆ ಎಂದು ಹೇಳಿದರು.