ಹೊಸಪೇಟೆ: ಹೊಸಪೇಟೆ ಬಳಿ ಲಾರಿ ಹಾಗೂ ಕ್ರೂಸರ್ ಮುಖಾ ಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ. ಹೊಸಪೇಟೆಯ ವ್ಯಾಸನ ಕೆರೆ ಬಳಿ ಈ ಅಪಘಾತ ಸಂಭವಿಸಿದೆ. ಮರಿಯಮ್ಮನಹಳ್ಳಿಯತ್ತ ತೆರೆಳುತ್ತಿದ್ದ ಕ್ರೂಸರ್ ವಾಹನಕ್ಕೆ ಲಾರಿ ಡಿಕ್ಕಿಯಾಗಿದೆ ಎನ್ನಲಾಗಿದೆ. ಹರಪನಹಳ್ಳಿ ಬಳಿ ಗೋಣಿ ಬಸವೇಶ್ವರ ದೇವಸ್ಥಾನ ಕ್ಕೆ ಹೋಗಿ ವಾಪಸ್ಸಾಗುತ್ತಿದ್ದ ಮಂದಿ ಈ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಮರಿಯಮ್ಮನಹಳ್ಳಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
Year: 2023
ಹೊಸಪೇಟೆ ಬಳಿ ಭೀಕರ ರಸ್ತೆ ಅಪಘಾತ. ಏಳು ಮಂದಿ ದುರ್ಮರಣ
ಪಂಚ ರಾಜ್ಯಗಳ ಚುನಾವಣೆ; ನ.7ರಿಂದ ಮತದಾನ, ಡಿ.5ರಂದು ಫಲಿತಾಂಶ
ದೆಹಲಿ: ತೀವ್ತ ಕುತೂಹಲ ಕೆರಳಿಸಿರುವ ಹಾಗೂ ಮುಂಬರುವ ಲೋಕಸಭಾ ಚುನಾವಣೆ ಬಗ್ಗೆ ನಿರ್ಣಾಯಕ ಹೋರಾಟದ ದಿಕ್ಸೂಚಿ ಎಂದೇ ಪರಿಗಣಿಸಲಾಗಿರುವ ಪಂಚ ರಾಜ್ಯಗಳ ಚುನಾವಣೆ ಘೋಷಣೆಯಾಗಿದೆ. ದೇಶದ ಮತ್ತೊಂದು ಮಿನಿ ಮಹಾಸಮರ ಎಂದೇ ಬಿಂಬಿತವಾಗಿರುವ ಛತ್ತೀಸ್‌ಗಢ, ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳ ವಿಧಾನಸಭಾ ಮತಸಮರಕ್ಕೆ ಕೇಂದ್ರ ಚುನಾವಣಾ ಆಯೋಗ ಮುಹೂರ್ತ ನಿಗದಿ ಮಾಡಿದೆ. ಈ 5 ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ದಿನಾಂಕ ಪ್ರಕಟಿಸಿದರು. ಮಿಜೋರಾಂ, ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ನಕ್ಸಲ್ ಸಂಘರ್ಷ ಪೀಡಿತ ಛತ್ತೀಸ್ ಘಡದಲ್ಲಿ 2 ಹಂತದಲ್ಲಿ ಮತದಾನ ನಡೆಯಲಿದೆ. ಎಂದವರು ಮಾಹಿತಿ ಒದಗಿಸಿದರು. ಮಿಜೋರಾಂ ನಲ್ಲಿ ನವೆಂಬರ್ 7 ರಂದು ಮತದಾನ ನಡೆಯಲಿದೆ. ಛತ್ತೀಸ್ ಘಡದಲ್ಲಿ…
ಗಾಜಾ ಪಟ್ಟಿ ಕದನ; ಇಸ್ರೇಲ್’ನಲ್ಲಿರುವ ಕನ್ನಡಿಗರ ರಕ್ಷಣೆಗೆ ಸಹಾಯವಾಣಿ
ಬೆಂಗಳೂರು: ಗಾಜಾ ಪಟ್ಟಿಯಲ್ಲಿ ಇಸ್ರೇಲ್-ಪ್ಯಾಲೆಸ್ತೀನ್ ನಡುವಿನ ಸಮರದಲ್ಲಿ ವಿದೇಶಿ ನಾಗರಿಕರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇಸ್ರೇಲ್’ನಲ್ಲಿ ಕರ್ನಾಟಕದ ಹಲವಾರು ಇದ್ದು ಅವರಲ್ಲೂ ಆತಂಕ ಮನೆಮಾಡಿದೆ. ಈ ನಡುವೆ, ಇಸ್ರೇಲ್’ನಲ್ಲಿರುವ ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಂಡಿರುವ ಕರ್ನಾಟಕ ಸರ್ಕಾರ ಸಹಾಯವಾಣಿಯನ್ನು ಆರಂಭಿಸಿದೆ. ಈ ಸಹಾಯವಾಣಿ ಕುರಿತಂತೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಸ್ರೇಲ್ ನಲ್ಲಿ ಸಂಕಷ್ಟದಲ್ಲಿರುವ ಕನ್ನಡಿಗರು ಕೂಡಲೇ ಹೆಲ್ಪ್‌ಲೈನ್ ಗೆ ಸಂಪರ್ಕಿಸುವಂತೆ ಸಲಹೆ ಮಾಡಿದ್ದಾರೆ. In cases of any citizens of India hailing from Karnataka in Israel requiring assistance, reach out to Karnataka State Emergency Operation Centre Helpline numbers: 08022340676, 08022253707. Also @MEAIndia Helpline number: +97235226748. pic.twitter.com/6c3thphjGq — CM of Karnataka (@CMofKarnataka) October 8, 2023
ಗಾಜಾ ಕದನ: ಇಸ್ರೇಲ್ ನೆರವಿಗೆ ಧಾವಿಸಿದ ಅಮೆರಿಕಾ; ಯುದ್ಧ ನೌಕೆಗಳ ರವಾನೆ
ಗಾಜಾ: ಇಸ್ರೇಲ್-ಪ್ಯಾಲೆಸ್ತೀನ್ ನಡುವಿನ ಸಮರದಿಂದಾಗಿ ಗಾಜಾ ಪಟ್ಟಿ ಪ್ರಕ್ಷುಬ್ಧಗೊಂಡಿದೆ. ಗಾಜಾ ಪಟ್ಟಿ ಬಳಿ ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಸಾವಿರಕ್ಕೆ ಏರಿಕೆಯಾಗಿದೆ. ಇದೇ ವೇಳೆ ಉಗ್ರರ ನಡೆ ಬಗ್ಗೆ ಕುಪಿತವಾಗಿರುವ ಅಮೆರಿಕಾ ರಾಷ್ಟ್ರವು ಇಸ್ರೇಲ್’ನ ನೆರವಿಗೆ ಧಾವಿಸಿದ್ದು ಸಮರ ನೌಕೆಗಳನ್ನು ಕಳುಹಿಸಿಕೊಟ್ಟಿದೆ. ಗಾಜಾ ಪಟ್ಟಿ ಬಳಿ ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ದಾಳಿಯಲ್ಲಿ ಹಲವು ಸೈನಿಕರು ಮತ್ತು ಪೊಲೀಸರು ಸೇರಿದಂತೆ 2,000ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಗಾಜಾ ಪಟ್ಟಿಯಲ್ಲಿ ಇದೀಗ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಕಾಳಗ ನಡೆಯುತ್ತಿದ್ದು, ಅಮೆರಿಕವು ಇಸ್ರೇಲ್ ಸೈನಿಕರಿಗೆ ನೆರವಾಗುವ ನಿಟ್ಟಿನಲ್ಲಿ ಯುದ್ಧ ನೌಕೆಯನ್ನು ಕಳುಹಿಸಿದೆ. ಮೆಡಿಟರೇನಿಯನ್ ಸಮುದ್ರಕ್ಕೆ ಯುದ್ಧ ಹಡಗುಗಳನ್ನು ಕಳುಹಿಸಿದೆ.
ಮೇಘ ಸ್ಫೋಟದ ಹೊಡೆತ; ಸಿಕ್ಕಿಂನಲ್ಲಿ ಮರಣ ಮೃದಂಗ
ಗ್ಯಾಂಗ್‌ಟಕ್: ಪ್ರವಾಹದ ಹೊಡೆತಕ್ಕೆ ಸಿಲುಕಿರುವ ಸಿಕ್ಕಿಂ ಅಕ್ಷರಶಃ ನಲುಗಿದೆ. ಮೇಘ ಸ್ಫೋಟದಿಂದ ಸಂಭವಿಸಿದ ದಿಢೀರ್ ಪ್ರವಾಹ ನೋವಿಗೆ ಕಾರಣವಾಗಿದೆ. ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಪ್ರವಾಸಿಗರೂ ಸಂಕಷ್ಟದಲ್ಲಿ ಸಿಲುಕಿದ್ದು ಸೇನೆಯ ಆಶ್ರಯ ಪಡೆಯುವಂತಾಗಿದೆ. ಹಲವೆಡೆ ಸರಣಿ ಅವಘಡಗಳು ಸಂಭವಿಸಿದ್ದು, ಅವಶೇಷಗಳಿಂದ ಶವಗಳನ್ನು ಹೊರತೆಗೆಯುವ ಕಾರ್ಯಾಚರಣೆ ಮುಂದುವರಿದಿದೆ. ಈವರೆಗೂ 2,563 ಜನರನ್ನು ರಕ್ಷಿಸಲಾಗಿದೆ ಎಂದು ವಿಪತ್ತು ನಿರ್ವಹಣಾ ತಂಡ ಹೇಳಿದೆ. ಈ ನಡುವೆ, ಭೀಕರ ಪ್ರವಾಹದಿಂದಾಗಿ 41870 ಜನ ಬಾಧಿತರಾಗಿದ್ದಾರೆ. ೩೨ ಮಣಿ ಸಾವನ್ನಪ್ಪಿದ್ದಾರೆ, ಇನ್ನೂ 122 ಮಂದಿ ಕಾಣೆಯಾಗಿದ್ದಾರೆ. ಸುಮಾರು 1500 ಮನೆಗಳು ಹಾನಿಗೊಳಗಾಗಿವೆ ಎಂದು ಅಂದಾಜಿಸಲಾಗಿದೆ. ಸಿಕ್ಕಿಂನ 6 ಜಿಲ್ಲೆಗಳಲ್ಲಿ ಇಲ್ಲಿಯವರೆಗೆ ಒಟ್ಟು 14 ಸೇತುವೆಗಳು ಕೊಚ್ಚಿ ಹೋಗಿವೆ ಎಂದು ಮೂಲಗಳು ತಿಳಿಸಿವೆ. https://twitter.com/snehasismiku/status/1711066127563162110
ರಾಜಕೀಯ ಗುರುವಿನ ಅಚಾನಕ್ ಭೇಟಿ.. ಸಿಎಂ ಹೇಳಿದ್ದು ಹೀಗೆ
ಬೆಂಗಳೂರು: ಒಂದೆಡೆ ಆಡಳಿತಾರೂಢ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ರಾಜಕೀಯ ಸಮಾರಾ ನಡೆಯುತ್ತಿದ್ದರೆ ಮತ್ತೊಂದೆಡೆ ಹಿರಿಯ ನಾಯಕರಿಗೆ ಅಚ್ಚರಿಯ ಸನ್ನಿವೇಶಗಳು ಎದುರಾಗುತ್ತಿವೆ. ಕಾಂಗ್ರೆಸ್ ಪಕ್ಷಕ್ಕೆ ಸವಾಲೊಡ್ಡುವ ರೀತಿ ಬಿಜೆಪಿ- ಜೆಡಿಎಸ್ ಮೈತ್ರಿ ಬೆಳವಣಿಗೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಿರೀಕ್ಷಿತವಾಗಿ ಭೇಟಿಯಾಗಿ ಅಚ್ಚರಿಗೆ ಕಾರಣರಾದರು. ಭಾನುವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳುತ್ತಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಎದುರಾದರು. ಪತ್ನಿ ಜೊತೆ ಮಂಗಳೂರಿಗೆ ತೆರಳುತ್ತಿದ್ದ ಮಾಜಿ ಪ್ರಧಾನಿ ದೇವೇಗೌಡರನ್ನು ಕಂಡ ಸಿಎಂ ಸಿದ್ದರಾಮಯ್ಯ ತನ್ನ ರಾಜಕೀಯ ಗುರುವಿನತ್ತ ತೆರಳಿ ಮಾತನಾಡಿದರು. ಕೆಲಹೊತ್ತು ಜೊತೆಗಿದ್ದ ಈ ನಾಯಕರು ಕುಶಲೋಪರಿ ಮಾತನಾಡುತ್ತಾ ಗಮನಸೆಳೆದರು. ಈ ಕುರಿತಂತೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತಾವು ದೇವೇಗೌಡರು ಮತ್ತು ಚನ್ನಮ್ಮ…
ಪ್ರಕೃತಿಯ ಹೊಡೆತಕ್ಕೆ ನಲುಗಿದ ಸಿಕ್ಕಿಂ; ಸಾವಿನ ಸಂಖ್ಯೆ 32ಕ್ಕೆ ಏರಿಕೆ
ಗ್ಯಾಂಗ್‌ಟಕ್: ಪ್ರವಾಹದ ಹೊಡೆತಕ್ಕೆ ಸಿಲುಕಿರುವ ಸಿಕ್ಕಿಂ ಅಕ್ಷರಶಃ ನಲುಗಿದೆ. ಮೇಘ ಸ್ಫೋಟದಿಂದ ಸಂಭವಿಸಿದ ದಿಢೀರ್ ಪ್ರವಾಹ ಹಲವಾರು ಅನಾಹುತಗಳಿಗೆ ಕಾರಣವಾಗಿದ್ದು, ಮೃತಪಟ್ಟವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಹಲವೆಡೆ ಸರಣಿ ಅವಘಡಗಳು ಸಂಭವಿಸಿದ್ದು, ಅವಶೇಷಗಳಿಂದ ಒಂಬತ್ತು ಸೈನಿಕರು ಸೇರಿದಂತೆ ಮೂವತ್ತೆರಡು ಶವಗಳನ್ನು ಪತ್ತೆಮಾಡಲಾಗಿದೆ. ಈವರೆಗೂ 2,563 ಜನರನ್ನು ರಕ್ಷಿಸಲಾಗಿದೆ ಎಂದು ವಿಪತ್ತು ನಿರ್ವಹಣಾ ತಂಡ ಹೇಳಿದೆ. ನಾಪತ್ತೆಯಾಗಿರುವ 100ಕ್ಕೂ ಹೆಚ್ಚು ಜನರಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಕ್ಕಿಂ ರಾಜ್ಯದ ಪಾಕ್ಯೊಂಗ್ ಜಿಲ್ಲೆಯಲ್ಲಿ 78, ಗ್ಯಾಂಗ್ಟಾಕ್ ಜಿಲ್ಲೆಯ 23, ಮಂಗನ್ ನಲ್ಲಿ 15 ಮತ್ತು ನಾಮ್ಚಿಯಲ್ಲಿ ಆರು ಮಂದಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದ್ದು ನಾಪತ್ತೆಯಾಗಿರುವ ನೂರಕ್ಕೂ ಹೆಚ್ಚು ಮಂದಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. Indian Army is taking care of a large number of tourists stranded in Lachung,…
ಒತ್ತುವರಿ ಆರೋಪ ನೆಪದಲ್ಲಿ ಮನೆ ತೆರವಿಗೆ ಕ್ರಮ; ಅರಣ್ಯಾಧಿಕಾರಿಗಳ ವಿರುದ್ಧ ಬಿಜೆಪಿ ಶಾಸಕರ ಆಕ್ರೋಶ
ಮಂಗಳೂರು: ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮ ಮನೆ ನಿರ್ಮಾಣ ಮಾಡಲಾಗಿದೆ ಎಂಬ ಆರೋಪದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮನೆಯನ್ನು ಧ್ವಂಸಗೊಳಿಸಲು ಕಾರ್ಯಾಚರಣೆ ಕೈಗೊಂಡರು. ಅರಣ್ಯ ಅಧಿಕಾರಿಗಳ ಈ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ನೋಟಿಸ್ ಇಲ್ಲದೆ ಕ್ರಮ ಕೈಗೊಂಡಿದ್ದೀರಾ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಹಲವಾರು ವರ್ಷಗಳಿಂದ ಬೆಳ್ತಂಗಡಿ ಗ್ರಾಮದ ಕಳೆಂಜ ಗ್ರಾಮದಲ್ಲಿ ವಾಸವಾಗಿದ್ದು ಧರ್ಮಣ್ಣ ಗೌಡ ಎಂಬವರು ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಈ ಕೃಷಿಕನ ಮನೆಯನ್ನು ಏಕಾಏಕಿ ತೆರವು ಗೊಳಿಸಲು ಅರಣ್ಯ ಇಲಾಖೆಗೆ ಅರಣ್ಯ ಸಚಿವರು ಮೌಖಿಕ ಆದೇಶ ನೀಡಿದ್ದಾರೆಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ. ಈ ಬಗ್ಗೆ ಮಾಹಿತಿ ತಿಳಿದ ಶಾಸಕ ಹರೀಶ್ ಪೂಂಜಾ ಅವರು ಇತ್ತೀಚೆಗಷ್ಟೇ ಅರಣ್ಯ ಸಚಿವರ ಜೊತೆ ಮಾತುಕತೆ ನಡೆಸಿದ್ದಾರೆ. ಆದರೂ ಅರಣ್ಯ ಇಲಾಖೆಯ ಅಧಿಕಾರಿಗಳು ಮನೆ ತೆರವಿಗೆ ದೌಡಾಯಿದ್ದರೂ. ಇದರಿಂದ ಕೆರಳಿದ ಶಾಸಕ ಹರೀಶ್…
ಆನೇಕಲ್ ಪಟಾಕಿ ದುರಂತ ಬಗ್ಗೆ ಉನ್ನತಮಟ್ಟದ ತನಿಖೆಗೆ ಹೆಚ್ಡಿಕೆ ಆಗ್ರಹ
ಬೆಂಗಳೂರು: ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಸಂಗ್ರಹಗಾರದಲ್ಲಿ ಸಂಭವಿಸಿರುವ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ದುರಂತ ಸಾವು ಕಂಡಿರುವ ಘಟನೆಯ ಬಗ್ಗೆ ತಿ ದಿಗ್ಭ್ರಮೆ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ದುರಂತದ ಬಗ್ಗೆ ರಾಜ್ಯ ಸರಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು, ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ದೀಪಾವಳಿಗೆ ಬದುಕು ಕಟ್ಟಿಕೊಳ್ಳಲು ಹೊರಟಿದ್ದ ಈ ಮುಗ್ಧ ಜೀವಗಳು ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಬಲಿಯಾಗಿರುವ ಘಟನೆ ಮನ ಕಲಕುವಂತಿದೆ ಎಂದಿರುವ ಅವರು, ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಈ ಘಟನೆ ಅನೇಕ ಪ್ರಶ್ನೆಗಳಿಗೆ ದಾರಿ ಮಾಡಿಕೊಟ್ಟಿದೆ. ಸುರಕ್ಷತೆ ಬಗ್ಗೆ ಮುನ್ನೆಚ್ಚರಿಕೆ ವಹಿಸದೆ ಇದ್ದಿದ್ದೇ ದುರಂತಕ್ಕೆ ಕಾರಣ ಎಂಬುದರಲ್ಲಿ ಎರಡು ಮಾತಿಲ್ಲ ಎಂದಿದ್ದಾರೆ. ಈ ದುರ್ಘಟನೆ ಬಗ್ಗೆ ರಾಜ್ಯ ಸರಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು, ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
