ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್: ಪೊಲೀಸ್ ಆಯುಕ್ತರ ತಂಡ ಪ್ರಥಮ ಎಸ್ಪಿ ತಂಡ ದ್ವಿತೀಯ

ಮಂಗಳೂರು; ಅಡ್ಯಾರ್ ಸಹ್ಯಾದ್ರಿ ಮೈದಾನದಲ್ಲಿ ರವಿವಾರ ನಡೆದ ಬ್ರ್ಯಾಂಡ್ ಮಂಗಳೂ ರು ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯ ಅಂತಿಮ ಸುತ್ತಿನಲ್ಲಿ ಮಂಗಳೂರು ಪೊಲೀಸ್ ಆಯುಕ್ತರ ಮತ್ತು ದ.ಕ ಜಿಲ್ಲಾ ಎಸ್ಪಿ ನೇತೃತ್ವದ ತಂಡದ ನಡುವೆ ನಡೆದು.ಪೊಲೀಸ್ ಆಯುಕ್ತರ ನೇತೃತ್ವದ ತಂಡ ಪ್ರಥಮ ಸ್ಥಾನ ಗಳಿಸಿದೆ ದ.ಕ ಜಿಲ್ಲಾಎಸ್ಪಿ ನೇತೃತ್ವದ ತಂಡ ದ್ವಿತೀಯ ಬಹುಮಾನ ಪಡೆದಿದೆ. ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ,ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್ ಮಂಗಳೂರು ಪೊಲೀಸ್ ಅಯುಕ್ತಾಲಯ,ದ.ಕ‌ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಸಹ್ಯಾದ್ರಿ ತಾಂತ್ರಿಕ ಮಹಾ ವಿದ್ಯಾಲಯ, ರೋಹನ್ ಕಾರ್ಫೋರೇಷನ್ ಸಹಯೋಗದಲ್ಲಿ ಪಂದ್ಯ ಆಯೋಜಿಸಲಾಗಿತ್ತು. ಪಂದ್ಯ ಪುರುಷ ಪ್ರಶಸ್ತಿ ಯನ್ನು ಪೊಲೀಸ್ ಆಯುಕ್ತ ರ ತಂಡದ ಗಾಲಿಬ್ ಸರಣಿ ಶ್ರೇಷ್ಠ.ಪುರಸ್ಕಾರವನ್ನುಪೊಲೀಸ್ ಆಯುಕ್ತರ ತಂಡದ ಸಿದ್ದು ಪಡೆದಿದ್ದಾರೆ.ಉತ್ತಮ ಎಸೆತಗಾರ ಪುರಸ್ಕಾರ ಪೊಲೀಸ್ ಆಯುಕ್ತ ರ ತಂಡದ ರಂಜನ್,ಉತ್ತಮ ದಾಂಡಿಗ ಪುರಸ್ಕಾರ ದ.ಕ ಜಿಲ್ಲಾ…

ಸರ್ಕಾರದ ಪತನ ಸನ್ನಿಹಿತ, ಅವರು ತಿಹಾರ್ ಗೆ ಓಡುವುದು ಖಚಿತ: ಹೆಚ್ಡಿಕೆ

ರಾಮನಗರ: ಪಬ್ಲಿಕ್ ನಲ್ಲಿ ನನ್ನ ಕೈ ಮೇಲೆ ಎತ್ತಿ ಜೋಡೆತ್ತು ಎಂದು ಹೇಳಿದ ನಯವಂಚಕ ಮಾತುಗಳನ್ನು ನಂಬಿ ಮೋಸ ಹೋದೆ. ಆಮೇಲೆ ಅವರು ನನ್ನನ್ನು ನಡು ರಸ್ತೆಯಲ್ಲಿ ಕೈ ಬಿಟ್ಟು ಎತ್ತು, ಗಾಡಿಯೊಂದಿಗೆ ಪಲಾಯನ ಮಾಡಿದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪರೋಕ್ಷವಾಗಿ ಡಿ.ಕೆ.ಶಿವಕುಮಾರ್ ವಿರುದ್ಧ ಹರಿಹಾಯ್ದಿದ್ದಾರೆ ಬಿಡದಿಯ ತಮ್ಮ ತೋಟದಲ್ಲಿ ನಡೆದ ರಾಮನಗರ ಜಿಲ್ಲಾ ಜೆಡಿಎಸ್ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. 2018 ಸರ್ಕಾರ ಹೋಗಿದ್ದು ಡಿ.ಕೆ.ಶಿವಕುಮಾರ್ ಅವರಿಂದಲೇ ಹೊರತು ನನ್ನಿಂದ ಅಲ್ಲ. ನನಗೂ ರಮೇಶ್ ಜಾರಕಿಹೊಳಿ ಅವರಿಗೂ ವೈಷಮ್ಯ ಇತ್ತಾ? ಬೆಳಗಾವಿ ಡಿಸಿಸಿ ಬ್ಯಾಂಕ್ ರಾಜಕೀಯಕ್ಕೆ ನಾನು ಬಲಿಪಶುವಾದೆ. ಅವರು ಬೆಳಗಾವಿ ರಾಜಕೀಯಕ್ಕೆ ಕೈಹಾಕಿದ್ದು ಯಾಕೆ? ನಾನು ಕುಮಾರಣ್ಣನ ಸರ್ಕಾರ ಉಳಿಸೋಕೆ ಪ್ರಾಮಾಣಿಕ ಪ್ರಯತ್ನ ಮಾಡಿದೆ ಎಂದು ಮೊಸಳೆ ಕಣ್ಣೀರು ಹಾಕಿ ಪ್ರಚಾರ ತೆಗೆದುಕೊಂಡರು. ಆಮೇಲೆ ನೋಡಿದರೆ ಒಳಗೊಳಗೇ ಮಾಡುವುದೆಲ್ಲವನ್ನು ಮಾಡಿದರು ಎಂದು…

ಮನೆಯ ಬಳಿ ಫಲಭರಿತ ಗಾಂಜಾ ಗಿಡಗಳು; ಅಬಕಾರಿ ಇಲಾಖೆ ದಾಳಿ 55 ಸಾವಿರ ಮೌಲ್ಯದ ಗಾಂಜಾ ಜಪ್ತಿ

ದೊಡ್ಡಬಳ್ಳಾಪುರ; ಮನೆಯ ಬಳಿಯ ಜಾಗದಲ್ಲಿ ಗಾಂಜಾ ಗಿಡವನ್ನು ಬೆಳೆಯಲಾಗಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು 55 ಸಾವಿರ ಮೌಲ್ಯದ ಗಾಂಜಾವನ್ನ ಜಪ್ತಿ ಮಾಡಿ ಆರೋಪಿಯನ್ನ ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಸೂಲಕುಂಟೆ ಗ್ರಾಮದ ಆದಿನಾರಾಯಣ ಎಂಬುವರ ಮನೆ ಬಳಿಯ ಜಾಗದಲ್ಲಿ ಗಾಂಜಾ ಗಿಡ ಬೆಳೆದಿರುವ ಬಗ್ಗೆ ಮಾಹಿತಿ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಜಂಟಿ ಆಯುಕ್ತರು ಹಾಗೂ ಉಪ ಆಯುಕ್ತರ ಮಾರ್ಗದರ್ಶನದಲ್ಲಿ, ನೆಲಮಂಗಲ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ವಲಯ ಹಾಗೂ ಉಪ ವಿಭಾಗದ ಸಿಬ್ಬಂದಿ ದಾಳಿ ಮಾಡಿದ್ದಾರೆ. ಈ ವೇಳೆ 3 ಫಲಭರಿತ ಗಾಂಜಾ ಗಿಡಗಳು (1.200 ಕೆಜಿ) ಹಾಗೂ ಮಾರಾಟಕ್ಕಾಗಿ ಸಂಗ್ರಹಿಸಿದ 1.300 ಕೆಜಿ ಒಣ ಗಾಂಜಾ ಜಪ್ತಿ ಮಾಡಿದ್ದಾರೆ, NDPS ಕಾಯ್ದೆ 1985ರಡಿ ಪ್ರಕರಣ ದಾಖಲಿಸಿ ಆರೋಪಿ ಆದಿನಾರಾಯಣ್ ಅವರನ್ನು ಬಂಧಿಸಿ ನ್ಯಾಯಾಂಗ…

ಬ್ರಾಂಡ್ ಬೆಂಗಳೂರು: ಡಿಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ಬ್ರಾಂಡ್ ಬೆಂಗಳೂರು ಸಂಬಂಧಿಸಿದಂತೆ ಸೋಮವಾರ ಮಹತ್ವದ ಸಭೆ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಈ ಕುರಿರು ಮಾಹಿತಿ ನೀಡಿದ ಅವರು, ಬ್ರಾಂಡ್ ಬೆಂಗಳೂರು ವಿಚಾರದಲ್ಲಿ 70,000 ಸಲಹೆಗಳು ಬಂದಿದ್ದು,‌ ಅವುಗಳನ್ನು ಒಂದು ಕಡೆ ಕ್ರೂಡಿಕರಿಸಿ ವಿಂಗಡಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು. ಬ್ರಾಂಡ್ ಬೆಂಗಳೂರು ವಿಚಾರಕ್ಕೆ ಏಳು ತಂಡಗಳನ್ನು ಮಾಡಿದ್ದು, ಈ ತಂಡಗಳು ಉತ್ತಮ ಸಲಹೆಗಳನ್ನು ಆಯ್ಕೆ ಮಾಡುತ್ತದೆ. Voice of the citizens, should be voice of the karnataka ಮಾತಿನಂತೆ ಜನಸಾಮಾನ್ಯರ ಮಾತುಗಳಿಗೆ ಮನ್ನಣೆ ನೀಡಲು ಸರ್ಕಾರ ಮುಂದಾಗಿದೆ. ಸೋಮವಾರ ಬೆಳಿಗ್ಗೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸಭೆ ಸೇರಿ ಚರ್ಚೆ ನಡೆಸಲಾಗುವುದು ಎಂದು ಹೇಳಿದರು. ಬೊಮ್ಮಾಯಿ ಅವರ ಹೇಳಿಕೆಯಂತೆ ನಡೆಯುತ್ತಿದ್ದೇವೆ ಇದೇ ವೇಳೆ, ಕ್ಷೇತ್ರಗಳಿಗೆ ಅನುದಾನದ ವಿಚಾರದಲ್ಲಿ ಕಾಂಗ್ರೆಸ್ ತಾರತಮ್ಯ ಮಾಡುತ್ತಿದ್ದು ಬಿಜೆಪಿ ಈ ರೀತಿ ಮಾಡಿರಲಿಲ್ಲ ಎನ್ನುವ…

ರಾಜ್ಯದಾದ್ಯಂತ ಪಟಾಕಿ ಗೋದಾಮುಗಳ ಸುರಕ್ಷತಾ ಸಮೀಕ್ಷೆ: ಡಿಸಿಎಂ ಶಿವಕುಮಾರ್

  ಬೆಂಗಳೂರು: ರಾಜ್ಯದಾದ್ಯಂತ ಇರುವ ಪಟಾಕಿ ಗೋದಾಮುಗಳ ಸರ್ವೆ ನಡೆಸಿ, ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಡಿಸಿಎಂ ಡಿ‌.ಕೆ.ಶಿವಕುಮಾರ್ ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಭಾನುವಾರ ಬೆಳಿಗ್ಗೆ ಪ್ರತಿಕ್ರಿಯೆ ನೀಡಿದ ಅವರು “ಇನ್ನು ಮುಂದೆ ಯಾವುದೇ ಅವಘಡ ಆಗದಂತೆ ಎಚ್ಚರವಹಿಸಲಾಗುವುದು. ರಾಜ್ಯದಲ್ಲಿ ಇರುವ ಪಟಾಕಿ ಗೋದಾಮುಗಳಿಗೆ ಪೊಲೀಸ್ ಇಲಾಖೆ, ಜಿಲ್ಲಾಧಿಕಾರಿಗಳಿಗೆ ನೋಟೀಸ್ ನೀಡಿ ಸುರಕ್ಷತೆ ಪರಿಶೀಲನೆ ಮಾಡಲು ಸೂಚನೆ ನೀಡಿರುವುದಾಗಿ ಹೇಳಿದರು. ತಮಿಳುನಾಡಿನ ಕಾರ್ಮಿಕರು ದುರಂತದಲ್ಲಿ ಸಾವನ್ನಪ್ಪಿದ್ದಾರೆ, ಯುವಕರ ಸಾವು ದುಃಖಕರ ಸಂಗತಿ. ರಾಜ್ಯ ಸರ್ಕಾರದಿಂದ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದು, ತಮಿಳುನಾಡಿನವರು 3 ಲಕ್ಷ ಮೊತ್ತದ ಚೆಕ್ ಈಗಾಗಲೇ ವಿತರಣೆ ಮಾಡಿದ್ದಾರೆ. ಅವಘಡಕ್ಕೆ ಏನು ಕಾರಣ ಎಂದು ಶೀಘ್ರ ತನಿಖೆ ನಡೆಸಲಾಗುವುದು ಎಂದರು. ಒಳಗೆ ಹೋಗಲು ಆಗದ ಕಾರಣ ಕಟ್ಟಡದ ಹಿಂದಿನ ಗೋಡೆ ಒಡೆದು ಹಾಕುವಂತೆ ಸೂಚನೆ ನೀಡಿದ್ದೆ. ಇನ್ನು ಮುಂದೆ…

ಅತ್ತಿಬೆಲೆ ಪಟಾಕಿ ದುರಂತ: ಸಮಗ್ರ ತನಿಖೆಗೆ ಸಿಎಂ ಸೂಚನೆ

ಮೈಸೂರು:  ಬೆಂಗಳೂರಿನ ಆನೇಕಲ್‌ನ ಅತ್ತಿಬೆಲೆ ಬಳಿಯ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಪಟಾಕಿ ದುರಂತ ಬಗ್ಗೆ ಸಮಗ್ರ ತನಿಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಈ ಕುರಿತಂತೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯಸಂಭವಿಸಿದ ದುರಂತದಲ್ಲಿ 14 ಮಂದಿ ಕಾರ್ಮಿಕರು ಮೃತಪಟ್ಟ ದುರ್ಘಟನೆ ಸಂಬಂಧ ಗೋದಾಮು ಮಾಲೀಕನ ಮೇಲೆ ಕ್ರಮ ತೆಗೆದುಕೊಳ್ಳಲು ಸೂಚಿಸಿದ್ದೇನೆ ಎಂದು ತಿಳಿಸಿದರು. ಲೈಸೆನ್ಸ್ ಪಡೆದು ಪಟಾಕಿಗಳನ್ನು ತಯಾರಿಸಲಾಗಿದೆಯೇ, ನಿಯಮ ಮೀರಿ ಪಟಾಕಿ ಪೂರೈಸಲಾಗಿದೆಯೇ ಎಂಬ ಬಗ್ಗೆ ಪರಿಶೀಲಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಸ್ರೇಲ್-ಪ್ಯಾಲೆಸ್ತೀನ್ ಸಮರ; ಯಹೂದಿಗಳ ಶತ್ರು ರಾಷ್ಟ್ರ ಇರಾನ್ ಸಂಭ್ರಮಾಚರಣೆ

ಗಾಜಾಪಟ್ಟಿ ಮತ್ತೊಮ್ಮೆ ಉದ್ವಿಗ್ನಗೊಂಡಿದ್ದು ಹಮಾಸ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಇಸ್ರೇಲ್ ನಡೆಸಿರುವ ಪ್ರತಿಕಾರ್ಯಾಚರಣೆಯಲ್ಲಿ ಪ್ಯಾಲೆಸ್ತೀನ್ ತತ್ತರಗೊಂಡಿದೆ. ಶನಿವಾರದಿಂದ ಇಸ್ರೇಲ್ ಸತತ ಮಿಲಿಟರಿ ಕಾರ್ಯಾಚರಣೆ ನಡೆಸಿದೆ. ಇದೇ ವೇಳೆ, ಪ್ಯಾಲೆಸ್ತೀನ್ ಬಂಡೂಕೋರರು ನಡೆಸಿದ ದಾಳಿಯಲ್ಲಿ ಸುಮಾರು ೩೦೦ ಮಂದಿ ಇಸ್ರೇಲಿಯನ್ನರು ಸಾವನ್ನಪ್ಪಿದ್ದಾರೆ. ಹಮಾಸ್ ದಾಳಿ ಬಳಿಕ ಇಸ್ರೇಲ್ ಹಾಗೂ ಪ್ಯಾಲೆಸ್ತೀನ್ ನಡುವಿನ ಸಂಘರ್ಷ ರಾತ್ರಿಯಿಡೀ ನಡೆದಿದೆ. ಇಸ್ರೇಲ್ ಮೇಲೆ ಪ್ಯಾಲೆಸ್ತೀನ್ ಸುಮಾರು 20 ನಿಮಿಷಗಳಲ್ಲಿ 5000 ರಾಕೆಟ್​ಗಳನ್ನು ಹಾರಿಸಿದೆ. ಈ ದಾಳಿ ಭಾರೀ ಸಾವು-ನೋವಿಗೆ ಕಾರಣವಾಗಿದೆ. ಈ ನಡುವೆ, ಹಮಾಸ್ ಉಗ್ರಗ್ರಾಮಿ ಸಂಘಟನೆ ನಡೆಸಿದ ದಾಳಿಗೆ ಇಸ್ರೇಲ್​ನ ಶತ್ರು ರಾಷ್ಟ್ರ ಇರಾನ್ ಸಂಭ್ರಮಿಸಿದೆ. ಇರಾನ್ ಸೇನೆ ಹಾಗೂ ಬೆಂಬಲಿಗರು ತಮ್ಮ ನಾಡಿನಲ್ಲಿ ಸಂಭ್ರಮಿಸಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. This is not Gaza or Palestine, this is Toronto Canada #Israel #hamas #Lebanon#IsraelPalestineWar pic.twitter.com/GNoKFVfdHD…

ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷ: ಗಾಜಾ ಪಟ್ಟಿ ಉದ್ವಿಗ್ನ

ಗಾಜಾಪಟ್ಟಿ ಮತ್ತೊಮ್ಮೆ ಉದ್ವಿಗ್ನಗೊಂಡಿದ್ದು ಹಮಾಸ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಇಸ್ರೇಲ್ ನಡೆಸಿರುವ ಪ್ರತಿಕಾರ್ಯಾಚರಣೆಯಲ್ಲಿ ಪ್ಯಾಲೆಸ್ತೀನ್ ತತ್ತರಗೊಂಡಿದೆ. ಶನಿವಾರದಿಂದ ಇಸ್ರೇಲ್ ಸತತ ಮಿಲಿಟರಿ ಕಾರ್ಯಾಚರಣೆ ನಡೆಸಿದೆ. ಇದೇ ವೇಳೆ, ಪ್ಯಾಲೆಸ್ತೀನ್ ಬಂಡೂಕೋರರು ನಡೆಸಿದ ದಾಳಿಯಲ್ಲಿ ಸುಮಾರು 300 ಮಂದಿ ಇಸ್ರೇಲಿಯನ್ನರು ಸಾವನ್ನಪ್ಪಿದ್ದಾರೆ. https://twitter.com/Rj_Updates_07/status/1710845210245333189 ಹಮಾಸ್ ದಾಳಿ ಬಳಿಕ ಇಸ್ರೇಲ್ ಹಾಗೂ ಪ್ಯಾಲೆಸ್ತೀನ್ ನಡುವಿನ ಸಂಘರ್ಷ ರಾತ್ರಿಯಿಡೀ ನಡೆದಿದೆ. ಇಸ್ರೇಲ್ ಹಾಗೂ ಹಮಾಸ್ ನಡುವೆ ನಡೆಯುತ್ತಿರುವ ಈ ಸಮರದಲ್ಲಿ 1750 ಇಸ್ರೇಲಿ ಜನರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಇಸ್ರೇಲ್ ಮೇಲೆ ಸುಮಾರು 20 ನಿಮಿಷಗಳಲ್ಲಿ 5000 ರಾಕೆಟ್​ಗಳನ್ನು ಪ್ಯಾಲೆಸ್ತೀನ್ ಹಾರಿಸಿದೆ. ಈ ದಾಳಿ ಭಾರೀ ಸಾವು-ನೋವಿಗೆ ಕಾರಣವಾಗಿದೆ. Rockets fired from Gaza Towards Israel#Gaza #IsraelPalestineWar pic.twitter.com/TNwIrIZMqj — Ex Bhakt (नेशनलिस्ट) (@Ex_Bhakts) October 8, 2023  

ತೀರ್ಥಹಳ್ಳಿ ಬಳಿ ಭೀಕರ ಘಟನೆ; ಒಂದೇ ಕುಟುಂಬದ ಮೂವರು ಸಜೀವ ದಹನ

ಶಿವಮೊಗ್ಗ: ಮಲೆನಾಡಿನಲ್ಲಿ ನಡೆದ ಸಾವಿನ ಘಟನೆ ಜನರನ್ನು ಬೆಚ್ಚಿ ಬೀಳಿಸಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಸಮೀಪದ ಕೆಕೋಡ್ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ಒಂದೇ ಕುಟುಂಬದ ಮೂವರು ಶವವಾಗಿ ಪತ್ತೆಯಾಗಿದ್ದಾರೆ. ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿವೆ. ಮನೆಯ ಕೋಣೆಯಲ್ಲಿ ಕಟ್ಟಿಗೆ ಇತ್ತು ಬೆಂಕಿ ಹಚ್ಚಿರುವ ರೀತಿ ಕುರುಹು ಪತ್ತೆಯಾಗಿದ್ದು, ಆತ್ಮಹತ್ಯೆಯ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಅರ್ಚಕರಾಗಿ ಕೆಲಸ ಮಾಡುತ್ತಿದ್ದ 65 ವರ್ಷ ಹರೆಯದ ರಾಘವೇಂದ್ರ ಕೆಕೋಡ್, ಅವರ ಪತ್ನಿ 55 ವರ್ಷದ ನಾಗರತ್ನ, ಪುತ್ರ 30 ವರ್ಷದ ಶ್ರೀರಾಮ್ ಸಾವಿಗೀಡಾಗಿದ್ದಾರೆ. ಮತ್ತೊಬ್ಬ ಪುತ್ರ 28 ವರ್ಷದ ಭರತ್ ಗಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಭೀತಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಅಪ್ಘಾನಿಸ್ತಾನದಲ್ಲಿ ಸರಣಿ ಭೂಕಂಪ: 2000ಕ್ಕೂ ಹೆಚ್ಚು ಮಂದಿ ಸಾವು

ಕಾಬೂಲ್ : ಪಶ್ಚಿಮ ಅಪ್ಘಾನಿಸ್ತಾನದಲ್ಲಿ ಸಂಭವಿಸಿದ ಸರಣಿ ಭೂಕಂಪದಲ್ಲಿ ಕನಿಷ್ಠ 2000 ಮಂದಿ ಸಾವನ್ನಪ್ಪಿದ್ದಾರೆ. ಹೆರಾತ್‌ನಲ್ಲಿ ಭೂಕಂಪನ ಕೇಂದ್ರಬಿಂದು ಪತ್ತೆಯಾಗಿದೆ. ಜಿಂದಾ ಜಾನ್ ಮತ್ತು ಘೋರಿಯನ್ ಜಿಲ್ಲೆಗಳ 12 ಹಳ್ಳಿಗಳು ಸಂಪೂರ್ಣವಾಗಿ ನಾಶವಾಗಿವೆ. ಭೂಕಂಪದಿಂದಾಗಿ ಸಾವಿರಾರು ಕಟ್ಟಡಗಳು ಧರೆಗುರುಳಿದ್ದು. ನೂರಾರು ಜನ ಕಟ್ಟಡಗಳ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದು, ಅವರ ರಕ್ಷಣೆಗೆ ಕಾರ್ಯಾಚರಣೆ ಸಾಗಿದೆ. ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. https://twitter.com/TalibanPRD__/status/1710877617828565234 ಈ ಕುರಿತಂತೆ ವಿಶ್ವಸಂಸ್ಥೆ ಮಾಹಿತಿ ನೀಡಿದ್ದು, ಕಟ್ಟಡಗಳ ಅವಶೇಷಗಳಡಿ ಹಲವರು ಸಿಲುಕಿರುವುದರಿಂದ ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. The death tool from earthquakes of Herat goes past 215. The officials of Herat Provincial Hospital say over 215 people have been killed in Herat, while more than…