ಹಾಸನ: ರಾಜ್ಯದಲ್ಲಿ ಗುತ್ತಿಗೆದಾರರ ಸಾವಿನ ಸರಣಿ ಮುಂದುವರಿದಿದ್ದು ಹಾಸನ ಜಿಲ್ಲೆ ಹೊಳೆನರಸೀಪುರ ಬಳಿ ಶುಕ್ರವಾರ ಸಿವಿಲ್ ಗುತ್ತಿಗೆದಾರರೊಬ್ಬರು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 79 ವರ್ಷದ ಕೆ ಸತ್ತಾರ್ ಎಂಬವರು ಹಣಕಾಸು ವ್ಯವಹಾರದಿಂದಾಗಿ ಸಂಕಸ್ತಾತಕ್ಕೆ ಸಿಲುಕಿದ್ದರೆನ್ನಲಾಗಿದೆ. ಜೊತೆಗೆ ವೈಯಕ್ತಿಕ ಸಮಸ್ಯೆ ಹಾಗೂ ಆರೋಗ್ಯ ಸಮಸ್ಯೆಗಳಿಂದಾಗಿ ನಲುಗಿದ್ದರೆನ್ನಲಾಗಿದೆ. ಈ ಕಾರಣದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
Year: 2023
ರಾಜ್ಯದಲ್ಲಿ ನೆಲೆಕಳೆದುಕೊಂಡ ಬಿಜೆಪಿ; ಅನೇಕ ಹಿರಿಯರಿಗೆ ವಿಶ್ರಾಂತಿ? ಕಾಂಗ್ರೆಸ್ ವ್ಯಂಗ್ಯ
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ತನ್ನ ನೆಲೆಯನ್ನು ಕಳೆದುಕೊಂಡಿದೆ. ಆದ ಕಾರಣಕ್ಕೆ ತನ್ನ ಪಕ್ಷದ ಅನೇಕ ಹಿರಿಯ ನಾಯಕರಿಗೆ ವಿಶ್ರಾಂತಿ ನೀಡುವುದರ ಮೂಲಕ ಹೈಕಮಾಂಡ್ ಮನೆಗೆ ಕಳುಹಿಸಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ರತ್ನಗಂಬಳಿ ಸ್ವಾಗತ ನೀಡಿ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಈಶ್ವರಪ್ಪ, ನಳೀನ್ ಕುಮಾರ್ ಕಟೀಲ್ ಸೇರಿದಂತೆ ಅನೇಕ ನಾಯಕರುಗಳಿಗೆ ವಿಶ್ರಾಂತಿಯ ಸೂಚನೆ ನೀಡಿದೆ ಎಂದು ವಿಶ್ಲೇಷಿಸಿದರು. ಅಭೂತಪೂರ್ವ ಜೋಡಿಗಳಾಗಿ ಕುಮಾರಸ್ವಾಮಿ ಅವರು ಮತ್ತು ಸಿ.ಪಿ.ಯೋಗಿಶ್ವರ್ ಇಬ್ಬರೂ ಸೇರಿಕೊಂಡು ಕೀಳು ಹಾಗೂ ವೈಯಕ್ತಿಕ ಮಟ್ಟದ ಹೇಳಿಕೆ ನೀಡುತ್ತಿದ್ದಾರೆ. ರಾಜಕೀಯ ಅನಿವಾರ್ಯತೆ ಈ ಇಬ್ಬರಿಗೂ ಹೆಚ್ಚಾಗಿ ಕಾಡುತ್ತಿದೆ. ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಅವರನ್ನು ಟೀಕೆ ಮಾಡಿದರೆ ಮಾತ್ರ ತಮ್ಮ ರಾಜಕೀಯ ಅಸ್ತಿತ್ವ ಉಳಿಯುತ್ತದೆ ಎಂದು ನಂಬಿದ್ದಾರೆ. ಯೋಗೇಶ್ವರ್ ಅವರು ಬಿಜೆಪಿಯಿಂದ ಒಂದು…
ಬೆಂಗಳೂರು ವಿವಿ: ತತ್ವಶಾಸ್ತ್ರ ವಿಭಾಗದಿಂದ ರಾಷ್ಟ್ರ ಮಟ್ಟದ ವಿಚಾರ ಸಂಕಿರಣ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ತತ್ವಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದಿಂದ ಆಯೋಜಿಸಿರುವ ಒಂದು ದಿನದ ರಾಷ್ಟ್ರ ಮಟ್ಟದ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದೆಂದು ಕಾರ್ಯಕ್ರಮದ ನಿರ್ದೇಶಕ ಡಾ.ಎಂ. ಗೋವಿಂದರಾಜು ರವರು ತಿಳಿಸಿದ್ದಾರೆ. “ಬೌದ್ಧ ಧರ್ಮ ಮತ್ತು ಮಹಿಳಾ ಸಬಲೀಕರಣದ ಕುರಿತು ಬಾಬಾಸಾಹೇಬ್ ಅಂಬೇಡ್ಕರ್ ರವರ ತಾತ್ವಿಕ ಚಿಂತನೆಗಳು” ಎಂಬ ವಿಷಯದ ಮೇಲೆ ಈ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ. ಜ್ಞಾನಭಾರತಿ ಆವರಣದಲ್ಲಿರುವ ತತ್ವಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸೆಮಿನಾರ್ ಹಾಲ್ ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಸಂಪನ್ಮೂಲ ವ್ಯಕ್ತಿಗಳಾಗಿ ಬೆಂವಿವಿಯ ಸೆಂಟರ್ ಫಾರ್ ರೂರಲ್ ಡೆವಲಪ್ಮೆಂಟ್ ಸ್ಟಡೀಸ್ ನ ನಿರ್ದೇಶಕ ಪ್ರೊ.ಟಿ.ಎಚ್.ಮೂರ್ತಿ ಹಾಗೂ ಕರ್ನಾಟಕ ಸರ್ಕಾರದ ಮಾಜಿ ಕೃಷಿ ಎಂಜಿನಿಯರ್ ಶ್ರೀ ಎಸ್. ಸಿದ್ದಯ್ಯ ಅವರಿಂದ ವಿಚಾರ ಮಂಡನೆ ಮಾಡಲಿದ್ದಾರೆ. ಸದರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ.ಟಿ.ರಾಜೇಂದ್ರ ಪ್ರಸಾದ್ ರವರು ವಹಿಸಿಲಿದ್ದಾರೆ. ಈ ವಿಚಾರ ಸಂಕಿರಣದಲ್ಲಿ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು ಮತ್ತಿತರರು ಭಾಗವಹಿಸಲಿದ್ದಾರೆ.…
ಪ್ರಯಾಣಿಕರನ್ನು ಹೊತ್ತು ಸಾಗಲಿದೆ KARTC ‘ಪಲ್ಲಕ್ಕಿ’: ಇನ್ನು ಮುಂದೆ ನಿತ್ಯವೂ ‘ಪಲ್ಲಕ್ಕಿ ಉತ್ಸವ’
ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ರಾಜ್ಯದ ಜನರನ್ನು ಇನ್ನು ಮುಂದೆ ಪಲ್ಲಕಿಯಲ್ಲಿ ಹೊತ್ತು ಸಾಗಲಿದೆ. ಐರಾವತ, ಅಂಬಾರಿ ಇತ್ಯಾದ ಪೌರಾಣಿಕ ಹೆಸರುಗಳ ಸ್ಪರ್ಶದೊಂದಿಗೆ ಇಡೀ ದೇಶದ ಗಮನ ಕೇಂದ್ರೀಕರಿರುವ KSRTC ಇದೀಗ ಪ್ರಯಾಣಿಕರಿಗೆ ದೇವರ ಸ್ಥಾನ ನೀಡಿದೆಯೇ? ಎಂದು ಪ್ರಶ್ನಿಸಬಹುದು. ಒಂಥರಾ ಅದೇ ರೀತಿಯ ನಡೆ ರಾಜ್ಯದ ಹೆಮ್ಮೆಯ ಸಾರಿಗೆ ಸಂಸ್ಥೆಯದ್ದು. ‘ಪಲ್ಲಕಿ’ ಎಂದರೆ ದೇವರನ್ನು ಹೊತ್ತು ಸಾಗುವಂಥದ್ದು. ರಾಜ್ಯದ ಸಾರಿಗೆ ಇತಿಹಾಸದಲ್ಲಿ ಕೆಎಸ್ಸಾರ್ಟಿಸಿ ತನ್ನ ಪ್ರಯಾಣಿಕರಿಗೆ ಹೆಚ್ಚಿನ ಗೌರವ ನೀಡುವ ವ್ಯವಸ್ಥೆ ರೂಪಿಸಿದೆ. ಹೊಸದಾಗಿ ಐಷಾರಾಮಿ ಬಸ್ ಸೇವೆ ಆರಂಭಿಸಿರುವ ನಿಗಮವು ಇದೀಗ ‘ಪಲ್ಲಕಿ’ ಎಂಬ ಹೊಸ ಬ್ರಾಂಡ್ ಮೂಲಕ ಸೇವೆಯನ್ನು ಹೊಸ ಮಜಲಿಗೆ ಕೊಂಡೊಯ್ಯಲು ಸಜ್ಜಾಗಿದೆ. ಏನಿದು ‘ಪಲ್ಲಕ್ಕಿ’? ಈವರೆಗೂ ರಾಜಹಂಸ. ಐರಾವತ, ಅಂಬಾರಿ, ಅಂಬಾರಿ ಉತ್ಸವ, ಇತ್ಯಾದಿ ಪುರಾಣ ಕಥೆಗಳಲ್ಲಿ ಕಂಡುಬರುವ ಹೆಸರುಗಳಲ್ಲಿ ಸಾರಿಗೆ ಸೇವೆ ನೀಡಲಾಗುತ್ತಿತ್ತು. ಈ ನಡುವೆ…
ಕಾವೇರಿ ಸಂಕಷ್ಟ: ಜಲ ಸಂರಕ್ಷಣ ಸಮಿತಿಯಿಂದ ರಾಷ್ಟ್ರಪತಿಗೆ ಮೊರೆ
ಬೆಂಗಳೂರು: ಕಾವೇರಿಗಾಗಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಶುಕ್ರವಾರ ೫ನೇ ದಿನವೂ ಧರಣಿ ಮುಂದುವರಿಸಿದ ಕರ್ನಾಟಕ ಜಲ ಸಂರಕ್ಷಣ ಸಮಿತಿ ಕಾರ್ಯಕರ್ತರು, ಈ ವಿವಾದ ಬಗೆಹರಿಸುವ ಸಂಬಂಧ ರಾಷ್ಟ್ರಪತಿ ಭೇಟಿಗೆ ಜಲ ಸಂರಕ್ಷಣ ಸಮಿತಿ ತಯಾರಿ ನಡೆಸಿದೆ. ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಈ ಧರಣಿ ಸತ್ಯಾಗ್ರಹ ನಡೆಯುತ್ತಿದ್ದು, ಹೋರಾಟದ ನೇತೃತ್ವ ವಹಿಸಿರುವ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್, ರಾಜ್ಯ ಸರ್ಕಾರದ ನಡೆ ಬಗ್ಗೆ ಆಕ್ರೋಶ ಹೊರಹಾಕಿದರು. ಧರಣಿ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯದ ರೈತರಿಗೆ ಗಿಳಿಪಾಠ ಹೇಳುವ ಡಿ.ಕೆ..ಶಿವಕುಮಾರ್, ತಮಿಳುನಾಡು ರಾಜ್ಯದಲ್ಲಿ ಮೂರು ಬೆಳೆ ಬೆಳೆಯುವುದಕ್ಕೆ ಕಡಿವಾಣ ಹಾಕುವ ಕೆಲಸಕ್ಕೆ ಮುಂದಾಗಲಿ ನೋಡೋಣ ಎಂದು ಸವಾಲು ಹಾಕಿದರು. ನೀರಾವರಿ ಮಂತ್ರಿಯಾಗಿ ಅವರು ‘ಇಂಡಿಯಾ’ ಒಕ್ಕೂಟ ಬಲಪಡಿಸುವ ಚಿಂತೆಯಲ್ಲಿದ್ದಾರೆ, ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಓಲೈಸುವ ಕಾರಣದಿಂದಲೇ ರಾಜ್ಯದ ನೀರು ಬಿಟ್ಟು ರೈತರನ್ನ ಬಲಿಕೊಟ್ಟಿದ್ದಾರೆ. ಅವರ ಸ್ನೇಹ…
ಅಂದು ವೈರಿಗಳು, ಇಂದು ಸಮ್ಮಿತ್ರರು; ಹೆಚ್ಡಿಕೆ-ಯೋಗೇಶ್ವರ್ ಬಗ್ಗೆ ಕೈ ನಾಯಕರ ಟೀಕಾಸ್ತ್ರ
ಬೆಂಗಳೂರು: ಬಿಜೆಪಿ -ಜೆಡಿಎಸ್ ಮೈತ್ರಿಯನ್ನು ಕಟುವಾಗಿ ಟೀಕಿಸಿರುವ ಕಾಂಗ್ರೆಸ್ ನಾಯಕರು, ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ಅವರನ್ನು ಕಟ್ಟಿಹಾಕಲು ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಿ.ಪಿ.ಯೋಗೀಶ್ವರ್ ಅವರ ನಡೆ ಬಗ್ಗೆ ಲೇವಡಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರಾದ ರಾಮಚಂದ್ರಪ್ಪ ಮತ್ತು ಜಿ.ಸಿ.ರಾಜು ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ವಕ್ತಾರ ರಮೇಶ್ ಬಾಬು, ರಾಮನಗರ ಜಿಲ್ಲೆಯ ರಾಜಕಾರಣದಲ್ಲಿ ಅವಕಾಶವಾದ ರಾಜಕಾರಣದ ಅಪ್ಪುಗೆಯನ್ನು ಮಾಡಿರುವ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಮತ್ತು ಸ್ವಯಂಘೋಷಿತ ಬಿಜೆಪಿ ನಾಯಕ ಸಿ.ಪಿ.ಯೋಗೀಶ್ವರ್ ಜನರಿಗೆ ಪುಕ್ಕಟೆ ಮನರಂಜನೆಯನ್ನು ನೀಡುತ್ತಿದ್ದಾರೆ ಎಂದು ಟೀಕಿಸಿದರು. ತಮ್ಮ ರಾಜಕೀಯದ ಅಸ್ತಿತ್ವಕ್ಕಾಗಿ ಒಬ್ಬರ ಹೆಗಲ ಮೇಲೆ ಇನ್ನೊಬ್ಬರು ಕೈ ಹಾಕಿ ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್ ಮತ್ತು ಡಿ.ಕೆ.ಸುರೇಶ್ ರವರನ್ನು ಟೀಕಿಸುತ್ತಿದ್ದಾರೆ ಎಂದು ತಿರುಗೇಟು ಕೊಟ್ಟರು. . ೧೯೯೯ ರಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಸ್ವತಂತ್ರವಾಗಿ ಕಾಂಗ್ರೆಸ್ ವಿರುದ್ಧ ಆಯ್ಕೆಯಾದ ಸಿ.ಪಿ.ಯೋಗೀಶ್ವರ್ ಅದೇ…
ಬಿಜೆಪಿ- ಜೆಡಿಎಸ್ ಅಪವಿತ್ರ ಮೈತ್ರಿ: ಸಿಎಂ ಸಿದ್ದರಾಮಯ್ಯ ವಾಗ್ಬಾಣ
ಚಿತ್ರದರ್ಗ: ಬಿಜೆಪಿ- ಜೆಡಿಎಸ್ ಯದ್ದು ಅಪವಿತ್ರ ಮೈತ್ರಿ ಎಂದು ಟೀಕಿಸಿರುವ ಸಿಎಂ ಸಿದ್ದರಾಮಯ್ಯ ಜನತಾ ದಳ (ಜಾತ್ಯಾತೀತ) ಕೋಮುವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿದೆ ಎಂಡಿದ್ದಾರೆ. ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈತ್ರಿ ಬಗ್ಗೆ ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ಸಿಗೆ ಬರು ವ ಬಗ್ಗೆ ಮುಖ್ಯಮಂತ್ರಿ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯೆ ನೀಡಿದರು. ಬಿಜೆಪಿ- ಜೆಡಿಎಸ್ ಯದ್ದು ಅಪವಿತ್ರ ಮೈತ್ರಿ ಎಂದು ಪುನರುಚ್ಚರಿಸಿದರು. ಮದ್ಯದಂಗಡಿ ತೆರೆಯುವುದಿಲ್ಲ ಒಂದು ಸಾವಿರ ಮದ್ಯದಂಗಡಿಗಳನ್ನು ತೆರೆಯುವುದಾಗಿ ಚಿಂತನೆ ನಡೆಸುತ್ತಿರುವುದಾಗಿ ಸಚಿವರು ಹೇಳಿಕೆ ನೀಡಿದ್ದಾರೆ, ಆದರೆ ನಾವು ತೆರೆಯುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು. ಗ್ಯಾರಂಟಿಗಳಿಗಾಗಿ ರಾಜ್ಯದ ಅಭಿವೃದ್ಧಿಗೆ ಸರ್ಕಾರ ಬ್ರೇಕ್ ಹಾಕಿದೆ ಎಂದು ಬಿಜೆಪಿ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿಡಾ ಅವರು, ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡಿದವರೇ ಹಾಳು ಮಾಡಿದವರೇ ಬಿಜೆಪಿಯವರು. ಅವರಿಗೆ ಯಾವ ನೈತಿಕತೆ ಇದೆ. ನಮ್ಮ ಕಾಲದಲ್ಲಿ ಯಾವತ್ತೂ ಇಷ್ಟೊಂದು…
ಬೆಳೆ ಹಾನಿ: 4860 ಕೋಟಿ ರೂ. ಪರಿಹಾರಕ್ಕಾಗಿ ಕೇಂದ್ರಕ್ಕೆ ರಾಜ್ಯದ ಮನವಿ
ಚಿತ್ರದುರ್ಗ: ರಾಜ್ಯದಲ್ಲಿ ಬರಪರಿಸ್ಥಿತಿಯಿಂದ ವಾಸ್ತವಿಕವಾಗಿ ಸುಮಾರು 30 ಸಾವಿರ ಕೋಟಿ ರೂ. ಬೆಳೆಹಾನಿಯಾಗಿದೆ. NDRF ಮಾರ್ಗಸೂಚಿಯಂತೆ 4860 ಕೋಟಿ ರೂ. ಪರಿಹಾರವನ್ನು ಕೋರಲಾಗಿದ್ದು, ಈ ಮೊತ್ತವನ್ನು ಬಿಡುಗಡೆ ಮಾಡಬೇಕೆಂದು ಕೇಂದ್ರವನ್ನು ಒತ್ತಾಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಚಿತ್ರದುರ್ಗದ ಮುರುಘಾಮಠದ ಆವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಬರಪರಿಸ್ಥಿತಿಯ ಅಧ್ಯಯನಕ್ಕಾಗಿ ಕೇಂದ್ರ ಬರ ಅಧ್ಯಯನ ತಂಡ ಆಗಮಿಸಿರುವ ಬಗ್ಗೆಪ್ರತಿಕ್ರಿಯೆ ನೀಡುತ್ತಾ, ಕೇಂದ್ರದ ಅಧ್ಯಯನ ತಂಡಕ್ಕೆ ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯ ವಸ್ತುಸ್ಥಿತಿಯನ್ನು ಈಗಾಗಲೇ ವಿವರಿಸಲಾಗಿದೆ. ಒಟ್ಟು 236 ತಾಲ್ಲೂಕುಗಳಲ್ಲಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಸುಮಾರು 30 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಬೆಳೆಹಾನಿ ಸಂಭವಿಸಿದೆ. 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು ಶೇ. 52 ರಷ್ಟು ಬೆಳೆಹಾನಿಯಾಗಿದೆ. ಕೃಷ್ಣಾ ಮೇಲ್ದಂಡೆ ಹಾಗೂ ನಾರಾಯಣಪುರ ಜಲಾಶಯಗಳನ್ನು ಹೊರತುಪಡಿಸಿ , ಕಾವೇರಿ ಸೇರಿದಂತೆ ಇನ್ನುಳಿದ ಜಲಾನಯನ ಪ್ರದೇಶದಗಳಲ್ಲಿ ನೀರಿರುವುದಿಲ್ಲ.…
ಬಿಜೆಪಿ ಸಮಾಜ ಒಡೆವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಅದನ್ನು ಹೊಲಿಯುತ್ತಿದೆ: ಡಿಕೆಶಿ
ಬೆಂಗಳೂರು: ಕಬ್ಬಿಣದಿಂದ ಸೂಜಿ ಮತ್ತು ಕತ್ತರಿ ತಯಾರಿಸಬಹುದು. ಕಾಂಗ್ರೆಸ್ ಸೂಜಿಯಿಂದ ಹೊಲಿಯುವ ಕೆಲಸ ಮಾಡುತ್ತಿದ್ದರೆ, ಬಿಜೆಪಿಯವರು ಕತ್ತರಿಯಿಂದ ಕತ್ತರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಛೇಡಿಸಿದ್ದಾರೆ ಶಿವಮೊಗ್ಗದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿ ಭಯದ ವಾತಾವರಣ ಉಂಟು ಮಾಡಲಾಗಿದೆ ಎನ್ನುವ ಬಿಜೆಪಿ ಆರೋಪಕ್ಕೆ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶುಕ್ರವಾರ ಉತ್ತರಿಸಿದ ಅವರು, “ಎಸ್.ಎಂ. ಕೃಷ್ಣ ಅವರ ಕಾಲದಲ್ಲಿ ಕುವೆಂಪು ಅವರ ಜಯ ಭಾರತ ಜನನಿಯ ತನುಜಾತೆ ಹಾಡನ್ನು ನಾಡಗೀತೆಯಾಗಿ ಘೋಷಣೆ ಮಾಡಿದೆವು. ಈ ಹಾಡೇ ಕಾಂಗ್ರೆಸ್ ಪಕ್ಷ ಕರ್ನಾಟಕಕ್ಕೆ ನೀಡಿರುವ ಸಂದೇಶ” ಎಂದವರು ಹೇಳಿದರು. “ಕುವೆಂಪು ಅವರ ಸರ್ವಜನಾಂಗದ ಶಾಂತಿಯ ತೋಟ ನಿರ್ಮಾಣ ಮಾಡುವುದೇ ನಮ್ಮ ಗುರಿ ಹಾಗೂ ಉದ್ದೇಶ. ಬಿಜೆಪಿಯವರು ಸತ್ಯಶೋಧನ ಸಮಿತಿಯ ಮೂಲಕ ಅವರಿಗೆ ಏನು ಬೇಕೋ ಅದನ್ನು ಹೇಳುತ್ತಿದ್ದಾರೆ. ನಾವು ಸಮಾಜ ಜೋಡಿಸುತ್ತಿದ್ದರೆ, ಅವರು ಒಡೆಯುತ್ತಿದ್ದಾರೆ. ಇದೇ ಕಾಂಗ್ರೆಸ್ ಹಾಗೂ ಬಿಜೆಪಿಗೆ ಇರುವ…
BIG BOSS; ‘ರಿಯಾಲಿಟಿ ಶೋ’ಗೆಂದೇ ನಿರ್ಮಾಣವಾಗಿರುವ ಭವ್ಯ ಬಂಗಲೆ ಹೇಗಿದೆ ಗೊತ್ತಾ?
View this post on Instagram A post shared by Colors Kannada Official (@colorskannadaofficial)
